Site icon Vistara News

Bengaluru News: ಮಕ್ಕಳು ಪ್ರಶ್ನೆ ಮಾಡುವ ಸಾಮರ್ಥ್ಯ ಬೆಳಸಿಕೊಳ್ಳಿ: ಐಶ್ವರ್ಯ ಡಿಕೆಎಸ್ ಹೆಗ್ಡೆ

Children should develop the ability to question says Aishwarya DKS Hegde

ಬೆಂಗಳೂರು: ವಿದ್ಯಾರ್ಥಿಗಳು ಪ್ರಶ್ನೆ ಮಾಡಿ ಕಲಿಯುವ ಮತ್ತು ತಿಳಿಯುವ ಸಾಮರ್ಥ್ಯವನ್ನು ಬೆಳಸಿಕೊಳ್ಳಬೇಕು ಎಂದು ಖ್ಯಾತ ಶಿಕ್ಷಣ ತಜ್ಞೆ ಐಶ್ವರ್ಯ ಡಿ.ಕೆ.ಎಸ್. ಹೆಗ್ಡೆ (Bengaluru News) ಹೇಳಿದರು.

ನಗರದ ಬಾಲ್ಡ್‌ವಿನ್‌ ಬಾಲಕಿಯರ ಪ್ರೌಢಶಾಲೆಯ ವಾರ್ಷಿಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ವಿದ್ಯಾರ್ಥಿಗಳು ಪ್ರಶ್ನೆ ಕೇಳುವ ಶಕ್ತಿಯನ್ನು ಬೆಳಸಿಕೊಳ್ಳಬೇಕು. ಈ ಕೌಶಲ್ಯವು ವಿದ್ಯಾರ್ಥಿಗಳ ಬೆಳವಣಿಗೆ ಮತ್ತು ಯಶಸ್ಸಿಗೆ ನಿರ್ಣಾಯಕವಾಗಿದೆ ಎಂದು ಸಲಹೆ ನೀಡಿದರು.

ಆಧುನಿಕ ತಂತ್ರಜ್ಞಾನ ಕುರಿತು ಮಾತನಾಡಿದ ಅವರು, ಇಂದು ಜಗತ್ತನ್ನು ನೋಡಿ ಪರಿವರ್ತನೆ ಹೊಂದುತ್ತಿದೆ. ವಿದ್ಯಾರ್ಥಿಗಳು ಪಠ್ಯಪುಸ್ತಕಗಳಿಂದ ಚಾಟ್‌ ಜಿಪಿಟಿ (ChatGPT) ಯಂತಹ ಸಾಧನಗಳ ಮೊರೆ ಹೋಗುತ್ತಿದ್ದಾರೆ. ಚಾಟ್‌ ಜಿಪಿಟಿಯ ಸಾರವು ಸರಿಯಾದ ಪ್ರಶ್ನೆಗಳನ್ನು ಕೇಳಿದಾಗ ಉತ್ತರ ಸಿಗುವುದು. ಅದೇ ರೀತಿ ನೀವು ಸರಿಯಾದ ಪ್ರಶ್ನೆಗಳನ್ನು ಕೇಳುವ ಮೂಲಕ ಮಾತ್ರ ಪ್ರಶ್ನೆಗಳಿಗೆ ಸರಿಯಾದ ಉತ್ತರವನ್ನು ಪಡೆಯುವಿರಿ. ನೀವು ಪ್ರಶ್ನೆ ಕೇಳುವ ಧೈರ್ಯವನ್ನು ಹೊಂದಿದಾಗ ಮಾತ್ರ ನೀವು ನಿಮ್ಮ ಜೀವನದಲ್ಲಿ ಉತ್ತರ ಕಂಡುಕೊಳ್ಳಲು ಸಾಧ್ಯ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಇದನ್ನೂ ಓದಿ: Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಇಂದಿನ ಬೆಲೆ ಚೆಕ್‌ ಮಾಡಿ

ಪ್ರಾಂಶುಪಾಲೆ ಆಶಾ ಮಾರ್ಗರೇಟ್ ಮಾತನಾಡಿ, ಶತಮಾನಗಳಿಂದ ಬಾಲ್ಡ್‌ವಿನ್ ವಿದ್ಯಾಸಂಸ್ಥೆ ಗುಣಮಟ್ಟದ ಶಿಕ್ಷಣ ನೀಡುತ್ತಿದೆ. ಬಾಲ್ಡ್‌ವಿನ್ ಸಂಸ್ಥೆಗಳ ಅಧ್ಯಕ್ಷ ಬಿಷಪ್ ಎನ್.ಎಲ್. ಕರ್ಕರೆ ಅವರ ನೇತೃತ್ವದಲ್ಲಿ ಮಕ್ಮಳಿಗೆ ಸಮಗ್ರ ಜ್ಞಾನ ನೀಡುವುದನ್ನು ತನ್ನ ಧ್ಯೇಯವಾಗಿಸಿಕೊಂಡು ಆ ನಿಟ್ಟಿನಲ್ಲಿ ನಿರಂತರವಾಗಿ ಶ್ರಮಿಸುತ್ತಿದೆ ಎಂದರು.

ಮ್ಯಾನೇಜರ್ ಫೆಬೆ ಶೀಲಾ ರಾಣಿ ಮಾತನಾಡಿ, ಬಾಲ್ಡ್‌ವಿನ್ ಮಕ್ಕಳ ಶೈಕ್ಷಣಿಕ ಪ್ರಗತಿಯ ಜತೆಗೆ ಶೈಕ್ಷಣಿಕೇತರ ಚಟುವಟಿಕೆಗಳಲ್ಲಿಯೂ ಕ್ರಿಯಾಶೀಲವಾಗಿ ತೊಡಗಿಕೊಳ್ಳಲು ನೆರವಾಗುತ್ತಿದೆ. ಸಮಾಜಕ್ಕೆ ಜವಾಬ್ದಾರಿಯುತ ಮಕ್ಕಳನ್ನು ನೀಡುವುದು ನಮ್ಮ ಉದ್ದೇಶವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಗಳಾಗಿ ಮೀಡಿಯಾ ಕನೆಕ್ಟ್ ಸಂಸ್ಥೆಯ ಸಂಸ್ಥಾಪಕಿ ಹಾಗೂ ಸಿಇಒ ದಿವ್ಯಾ ರಂಗೇನಹಳ್ಳಿ ಮತ್ತು ಶೀತಲ್ ಖುಲ್ಲಾರ್ ಪಾಲ್ಗೊಂಡಿದ್ದರು.

ಇದನ್ನೂ ಓದಿ: Karnataka Rain : ಭಾರಿ ಮಳೆಗೆ ಕಳಚಿ ಬಿದ್ದ ಚಾವಣೆ; ರಸ್ತೆಗೆ ಅಡ್ಡಲಾಗಿ ಉರುಳಿದ ಬೃಹತ್‌ ಮರ

ಈ ಸಂದರ್ಭದಲ್ಲಿ ಬಾಲ್ಡ್ ವಿನ್ ಸಂಸ್ಥೆಗಳ ಅಧ್ಯಕ್ಷೆ ಕಮಲ್ ಕರ್ಕರೆ, ಕಾರ್ಯದರ್ಶಿ ಡಾ. ಜೋಶುವಾ ಸ್ಯಾಮ್ಯುಯೆಲ್, ಅನಿತಾ ಐಸಾಕ್, ಉಪ ಪ್ರಾಂಶುಪಾಲೆ ಸುಜಾತಾ ಕ್ಯಾಥರೀನ್ ಉಪಸ್ಥಿತರಿದ್ದರು.

Exit mobile version