Bengaluru News: ಬೆಂಗಳೂರು ಸೇರಿದಂತೆ ಎಲ್ಲೆಡೆ ಕುಡಿಯುವ ನೀರಿನ ಪರೀಕ್ಷೆಗೆ ಸೂಚನೆ ನೀಡಿದ ಡಿ.ಕೆ.ಶಿವಕುಮಾರ್ - Vistara News

ಕರ್ನಾಟಕ

Bengaluru News: ಬೆಂಗಳೂರು ಸೇರಿದಂತೆ ಎಲ್ಲೆಡೆ ಕುಡಿಯುವ ನೀರಿನ ಪರೀಕ್ಷೆಗೆ ಸೂಚನೆ ನೀಡಿದ ಡಿ.ಕೆ.ಶಿವಕುಮಾರ್

Bengaluru News: ಕುಡಿಯುವ ನೀರಿಗೆ ಕಲುಷಿತ ನೀರು ಬೆರೆಯುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಎಲ್ಲೆಡೆ ಕುಡಿಯುವ ನೀರನ್ನು ಪರೀಕ್ಷೆ ಒಳಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

VISTARANEWS.COM


on

DCM D K Shivakumar instructed to test drinking water everywhere including Bengaluru
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಕುಡಿಯುವ ನೀರಿಗೆ ಕಲುಷಿತ ನೀರು ಬೆರೆಯುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಬೆಂಗಳೂರು (Bengaluru News) ಸೇರಿದಂತೆ ಎಲ್ಲೆಡೆ ಕುಡಿಯುವ ನೀರನ್ನು ಪರೀಕ್ಷೆ ಒಳಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ವೈಯಾಲಿಕಾವಲ್‌ನ ಐಪಿಪಿ ಕಚೇರಿಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳ ಸಭೆಗೂ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

ಮುಖ್ಯಮಂತ್ರಿಗಳು ನಿನ್ನೆ ನಗರ ಪ್ರದಕ್ಷಿಣೆ ಮಾಡಿ ವಿವಿಧ ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದ್ದಾರೆ. ಶೀಘ್ರದಲ್ಲೇ ಕಾರ್ಯಪಡೆ ರಚನೆಗೆ ಸೂಚನೆ ನೀಡಿದ್ದು, ಎಲ್ಲೆಲ್ಲಿ ಯಾವ ಕಾರ್ಯಗಳು ಸಾಗಬೇಕು ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಕೆಲವು ಕಡೆ ಕುಡಿಯುವ ನೀರು ಕಲುಷಿತವಾಗಿ ಕಾಲರ ಸಂಭವಿಸಿರುವ ಪ್ರಕರಣಗಳು ಗಮನಕ್ಕೆ ಬಂದಿವೆ. ಹೀಗಾಗಿ ಬೆಂಗಳೂರಿನ ಎಲ್ಲೆಡೆ ಕುಡಿಯುವ ನೀರಿನ ಪರಿಶೀಲನೆ ನಡೆಸಲು ವ್ಯವಸ್ಥೆ ಮಾಡಬೇಕಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡಲಾಗಿದೆ ಎಂದರು.

ಇದನ್ನೂ ಓದಿ: Koppala News: ವಿಜಯನಗರ ಅರಸರ ಕಾಲದಲ್ಲಿ ನಿರ್ಮಿಸಿದ್ದ ಹುಲಗಿ ಕಟ್ಟೆಯ ಶಾಸನ ಪತ್ತೆ

ಬೆಂಗಳೂರು ಹಾಗೂ ಬೇರೆ ಭಾಗಗಳಲ್ಲಿ ಜನರಿಗೆ ಕುಡಿಯಲು ಗುಣಮಟ್ಟದ ನೀರು ನೀಡಬೇಕು ಎಂದು ಅಧಿಕಾರಿಗಳಿಗೆ ಮುಂಜಾಗ್ರತೆಯಿಂದ ಎಚ್ಚರಿಕೆ ನೀಡಿದ್ದೇವೆ. ಇನ್ನು ಬೆಂಗಳೂರಿನಲ್ಲಿರುವ ಎಲ್ಲಾ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ರಿಪೇರಿ ಮಾಡಲು ಮಾರ್ಗದರ್ಶನ ನೀಡಲಾಗಿದೆ. ಇನ್ನು ಮಳೆ ಆರಂಭಕ್ಕೂ ಮುನ್ನ ಮುಂಜಾಗ್ರತಾ ಕ್ರಮಗಳನ್ನು ಮಾಡುತ್ತೇವೆ ಎಂದು ತಿಳಿಸಿದರು.

ಒತ್ತುವರಿ ತೆರವು ವಿಚಾರವಾಗಿ ಬಿಎಂಟಿಎಫ್‌ ಅವರ ಸಹಾಯ ಪಡೆಯುತ್ತೀರಾ ಎಂದು ಕೇಳಿದಾಗ, “ಬಿಎಂಟಿಎಫ್‌ ಜತೆ ಚರ್ಚೆ ನಡೆಸಲಾಗಿದ್ದು. ಎಲ್ಲೆಲ್ಲಿ ಬಾಕಿ ಇದೆ ಅವುಗಳನ್ನು ತೆರವುಗೊಳಿಸಲು ಸಿಎಂ ಸೂಚಿಸಿದ್ದಾರೆ”ಎಂದರು.

ರಾಜಕಾಲುವೆ, ಕೆರೆ ಒತ್ತುವರಿದಾರರು ತಡೆಯಾಜ್ಞೆ ತರುತ್ತಿರುವ ವಿಚಾರವಾಗಿ ಕೇಳಿದಾಗ, “ಕೆರೆ, ಸರ್ಕಾರಿ ಉದ್ಯಾನವನ ಜಾಗ ಸೇರಿದಂತೆ ಅನೇಕ ಕಡೆಗಳಲ್ಲಿ ಒತ್ತುವರಿ ಮಾಡಿಕೊಂಡು ಮನೆ ಕಟ್ಟಿಕೊಂಡಿದ್ದಾರೆ. ಇದು ನಮ್ಮ ಗಮನದಲ್ಲಿದ್ದು. ಈ ವಿಚಾರದಲ್ಲಿ ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಬೇಕು. ಅದಕ್ಕೆ ಕಾನೂನು ಅವಕಾಶಗಳನ್ನು ಕಂಡುಕೊಳ್ಳುತ್ತೇವೆ ಎಂದು ತಿಳಿಸಿದರು.

ಬೆಂಗಳೂರಿನ ಮೂಲಸೌಕರ್ಯ ಸಮಸ್ಯೆಗಳ ನಿವಾರಣೆಗೆ 5 ಅಂಶಗಳ ಕಾರ್ಯಕ್ರಮ

ಶುದ್ಧ ಕುಡಿಯುವ ನೀರು, ರಸ್ತೆಗುಂಡಿ ಸಮಸ್ಯೆ ಸೇರಿದಂತೆ ಬೆಂಗಳೂರಿನ ಪ್ರಮುಖ ಮೂಲಸೌಕರ್ಯ ಸಮಸ್ಯೆಗಳ ನಿವಾರಣೆಗೆ ಐದು ಅಂಶಗಳ ಕಾರ್ಯಕ್ರಮ ರೂಪಿಸಲಾಗಿದೆ” ಎಂದು ತಿಳಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್, ಬಿಬಿಎಂಪಿ ಆಸ್ತಿಗಳ ಗುರುತಿಸುವಿಕೆ ಹಾಗೂ ಸಂರಕ್ಷಣೆ, ಆಸ್ತಿ ತೆರಿಗೆ, ರಾಜಕಾಲುವೆ, ಕೆರೆ ಒತ್ತುವರಿ ತೆರವು ಕಾರ್ಯಾಚರಣೆ ಈ ಐದು ಅಂಶಗಳ ಕಾರ್ಯಕ್ರಮದಲ್ಲಿ ಸೇರಿವೆ ಎಂದರು.

ಇದನ್ನೂ ಓದಿ: Shivamogga News: ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಿಯ ದರ್ಶನ ಪಡೆದ ಸಾವಿರಾರು ಭಕ್ತರು

ಮುಖ್ಯಮಂತ್ರಿಗಳ ಜತೆಗೂಡಿ ಬುಧವಾರ ಬೆಂಗಳೂರು ನಗರದ ಒಂದಷ್ಟು ಭಾಗಗಳಲ್ಲಿ ಪರಿಶೀಲನೆ ನಡೆಸಲಾಯಿತು. ಈ ವೇಳೆ ಅನೇಕ ಸಮಸ್ಯೆಗಳು ಕಂಡು ಬಂದ ಕಾರಣ ಬಿಬಿಎಂಪಿ ವಲಯ ಅಧಿಕಾರಿಗಳು ಸೇರಿದಂತೆ ಬೆಂಗಳೂರಿಗೆ ಸಂಬಂಧಿಸಿದ ಎಲ್ಲಾ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿ ಸಮಸ್ಯೆ ಪರಿಹಾರಕ್ಕೆ ಚರ್ಚೆ ನಡೆಸಲಾಯಿತು ಎಂದರು.

ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿ ಹಾಗೂ ನಗರದ ಎಲ್ಲಾ ಭಾಗಗಳಲ್ಲಿ ಸರಬರಾಜಾಗುವ ನೀರಿನ ಗುಣಮಟ್ಟದ ಪರೀಕ್ಷೆಯನ್ನು ಬಿಬಿಎಂಪಿ ನಡೆಸಬೇಕು ಹಾಗೂ ಗುಣಮಟ್ಟದ ಫಲಿತಾಂಶವನ್ನು ಬಿಡ್ಬ್ಲೂಎಸ್‌ಎಸ್‌ಬಿಗೆ ನೀಡಬೇಕು ಎಂದು ಸೂಚಿಸಲಾಗಿದೆ ಎಂದರು.

ರಾಜಕಾಲುವೆ ಒತ್ತುವರಿ ತೆರವಿಗೆ ನ್ಯಾಯಾಲಯ ಈ ಹಿಂದೆ ನಿರ್ದೇಶನ ನೀಡಿತ್ತು. ಅದರಂತೆ 2016-17 ರಲ್ಲಿ 2,626 ಒತ್ತುವರಿಗಳನ್ನು ಗುರುತಿಸಲಾಗಿತ್ತು. 2022- 23 ಹೊತ್ತಿಗೆ 556 ಒತ್ತುವರಿ ತೆರವು ಮಾಡಲಾಗಿತ್ತು. ಈಗ 1136 ಹೊಸದಾಗಿ ಒತ್ತುವರಿಗಳನ್ನು ಗುರುತಿಸಲಾಗಿದ್ದು, ಒಟ್ಟು 4,316 ಒತ್ತುವರಿಗಳನ್ನು ಗುರುತಿಸಲಾಗಿದೆ. ಸ್ಯಾಟ್‌ಲೈಟ್, ಗೂಗಲ್ ಇಮೇಜ್ ಮತ್ತು ಸರ್ವೇ ಇಲಾಖೆ ಈ ಒತ್ತುವರಿ ಮಾಹಿತಿ ಸಂಗ್ರಹಿಸಿದೆ. ಒತ್ತುವರಿ ತೆರವುಗೊಳಿಸಲು ಬಿಎಂಟಿಎಫ್‌ಗೆ ಕಾನೂನಾತ್ಮಕವಾಗಿ ಮತ್ತು ಎಲ್ಲಾ ರೀತಿಯ ಬೆಂಬಲ ನೀಡಬೇಕು ಎಂದು ಮಾರ್ಗದರ್ಶನ ನೀಡಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: Golden Star Ganesh: ಮೈಸೂರಿನಲ್ಲಿ ಮೇ 25ರಂದು ʼಕೃಷ್ಣಂ ಪ್ರಣಯ ಸಖಿʼ ಚಿತ್ರದ ಫಸ್ಟ್‌ ಸಾಂಗ್‌ ರಿಲೀಸ್‌

ಬಾಗಿಲಿಗೆ ಬಂತು ಸರ್ಕಾರ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಒತ್ತುವರಿ ವಿಚಾರವಾಗಿ ಬಂದಿರುವ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಬೇಕು ಎಂದು ಸೂಚನೆ ನೀಡಿದ್ದೇನೆ ಎಂದ ಅವರು, 182 ಕೆರೆಗಳಲ್ಲಿ 116 ಕೆರೆಗಳ ಒತ್ತುವರಿ ಬಗ್ಗೆ ಸರ್ವೇ ನಡೆಸಬೇಕಾಗಿದೆ. ಬಾಕಿ ಉಳಿದ ಕೆರೆಗಳನ್ನು ಸರ್ವೇ ನಡೆಸಬೇಕು. ಹಾಗೂ ಬಿಬಿಎಂಪಿ ಆಸ್ತಿಗಳನ್ನು ಗುರುತು ಮಾಡಬೇಕು. ಪಾಲಿಕೆ ಆಸ್ತಿ ಸಂರಕ್ಷಣೆ ಸೇರಿದಂತೆ ಒತ್ತುವರಿ ತೆರವಿಗೆ ಶೀಘ್ರ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಲಾಗಿದೆ. ಸಂಸ್ಕರಿಸಿದ ನೀರನ್ನು ಕೆರೆಗಳಿಗೆ ತುಂಬಿಸುವ ಜವಾಬ್ದಾರಿಯನ್ನು ಬಿಡ್ಬ್ಲೂಎಸ್‌ಎಸ್‌ಬಿ ಗೆ ವಹಿಸಲಾಗಿದೆ. ಕೆರೆಗಳಲ್ಲಿ ನೀರಿದ್ದರೆ ಒತ್ತುವರಿ ತಪ್ಪುತ್ತದೆ, ಅಂತರ್ಜಲ ಹೆಚ್ಚುತ್ತದೆ. ಆದ ಕಾರಣ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: COMEDK UGET 2024: ನಾಳೆ ಮಧ್ಯಾಹ್ನ ಕಾಮೆಡ್‌ – ಕೆ ಫಲಿತಾಂಶ ಪ್ರಕಟ; ವೀಕ್ಷಣೆ, ಡೌನ್‌ಲೋಡ್‌ ಮಾಡಿಕೊಳ್ಳೋದು ಹೇಗೆ?

ನಗರದಲ್ಲಿ ಸುಮಾರು 5 ಸಾವಿರಕ್ಕೂ ಹೆಚ್ಚು ರಸ್ತೆ ಗುಂಡಿಗಳು ಇವೆ ಎಂದು ಸಿಎಂ ಮಾಹಿತಿ ನೀಡಿದ್ದರು. ಲೋಕಸಭಾ ಚುನಾವಣಾ ಫಲಿತಾಂಶ ಬಂದ ನಂತರ ಸಾರ್ವಜನಿಕರೇ ರಸ್ತೆಗುಂಡಿಗಳ ಫೋಟೋ ತೆಗೆದು ಮಾಹಿತಿ ನೀಡುವ ಆ್ಯಪ್ ಬಿಡುಗಡೆ ಮಾಡಲಾಗುವುದು. ಮುಂದಿನ 15 ದಿನಗಳಲ್ಲಿ ಎಲ್ಲಾ ರಸ್ತೆಗುಂಡಿಗಳನ್ನು ಮುಚ್ಚಬೇಕು ಎಂದು ತಿಳಿಸಲಾಗಿದೆ ಎಂದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ದಾವಣಗೆರೆ ದಕ್ಷಿಣ ʼಕೈʼ ವಶ, ಸಮರ್ಥ್‌ಗೆ ವಿಜಯಮಾಲೆ

VISTARANEWS.COM


on

ಕಾಂಗ್ರೆಸ್‌ ಪಕ್ಷಕ್ಕೆ ಪ್ರತಿಷ್ಠೆಯ ಕಣವಾಗಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌‌‌ ಅಭ್ಯರ್ಥಿ ಸಮರ್ಥ್​ ಮಲ್ಲಿಕಾರ್ಜುನ್‌‌‌‌‌‌ ವಿಜಯ ಪತಾಕೆ ಹಾರಿಸಿದ್ದಾರೆ. ದಿವಂಗತ ಶಾಮನೂರು ಶಿವಶಂಕರಪ್ಪ ಮೊಮ್ಮಗ ಹಾಗೂ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌, ಸಂಸದೆ ಪ್ರಭಾ ಮಲ್ಲಿಕಾರ್ಜುನ್‌ ಅವರ ಪುತ್ರ ಸಮರ್ಥ್‌ ಉಪಸಮರದಲ್ಲಿ ಗೆದ್ದು ಬೀಗಿದ್ದಾರೆ. ಇವರಿಗೆ ಪ್ರಬಲ ಪೈಪೋಟಿ ನೀಡಿದ್ದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸ ಕರಿಯಪ್ಪ ಸೋಲನುಭವಿಸಿದ್ದಾರೆ. ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಕ್ಷೇತ್ರಕ್ಕೆ ಏ.9ರಂದು ಉಪಚುನಾವಣೆ ನಡೆದಿತ್ತು.

Continue Reading

Latest

ಬಾಗಲಕೋಟೆಯಲ್ಲಿ ಕಾಂಗ್ರೆಸ್‌‌‌ನ ಉಮೇಶ್‌ ಮೇಟಿ ಭರ್ಜರಿ ಗೆಲುವು

VISTARANEWS.COM


on

ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್‌‌ ಮೇಟಿ ಗೆಲುವು ಸಾಧಿಸಿದ್ದಾರೆ. 21,866 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಮಠ ವಿರುದ್ಧ ಕಾಂಗ್ರೆಸ್‌‌ನ ಉಮೇಶ್‌ ಮೇಟಿ ಗೆಲುವು ಪಡೆದಿದ್ದಾರೆ. ಉಮೇಶ್‌ ಮೇಟಿ 97,941 ಮತಗಳನ್ನು ಪಡೆದಿದ್ರೆ, ವೀರಣ್ಣ ಚರಂತಿಮಠ 76,075 ಮತಗಳನ್ನು ಪಡೆದುಕೊಂಡಿದ್ದರು. ಬಾಗಲಕೋಟೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ. ಉಮೇಶ್‌‌ ಮೇಟಿಯವರ ತಂದೆ ಹೆಚ್‌.ವೈ.ಮೇಟಿ ಯವರ ನಿಧನದಿಂದ ತೆರವಾಗಿದ್ದ ಕ್ಷೇತ್ರವನ್ನು ತನ್ನಲ್ಲೇ ಉಳಿಸಿಕೊಳ್ಳುವಲ್ಲಿ ಕಾಂಗ್ರೆಸ್‌ ಪಕ್ಷ ಯಶಸ್ವಿಯಾಗಿದೆ.

Continue Reading

Latest

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

VISTARANEWS.COM


on

ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ‘ಡಾಲಿ’ ಧನಂಜಯ್ ಹಾಗೂ ಧನ್ಯತಾ ದಂಪತಿಗೆ ಗಂಡು ಮಗುವಿನ ಜನನವಾಗಿದೆ. ಗಂಡು ಮಗು ಜನಿಸಿದ ವಿಚಾರವನ್ನು ಧನಂಜಯ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಗುವಿನ ಪುಟ್ಟ ಕೈಗಳ ಫೋಟೋ ಶೇರ್‌ ಮಾಡಿದ್ದಾರೆ. ನಟ ಧನಂಜಯ್ ಹಾಗೂ ವೈದ್ಯೆ ಧನ್ಯತಾ 2025ರ ಫೆಬ್ರವರಿ 16ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾದ ಒಂದು ವರ್ಷದ ಸಂಭ್ರಮದ ಬೆನ್ನಲ್ಲೇ ಈ ಜೋಡಿ ಈಗ ಗಂಡು ಮಗುವನ್ನು ಸ್ವಾಗತಿಸಿದೆ.

Continue Reading

Latest

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

VISTARANEWS.COM


on

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 993 ರೂಪಾಯಿಯಷ್ಟು ಏರಿಕೆ ಮಾಡಲಾಗಿದೆ. ಇಂದಿನಿಂದ (ಮೇ.1) ರಿಂದ ಹೊಸ ದರ ಅನ್ವಯವಾಗಲಿದ್ದು, ಹೋಟೆಲ್‌, ರೆಸ್ಟೋರೆಂಟ್‌, ವಾಣಿಜ್ಯ ಬಳಕೆಯ 19 ಕೆಜಿ ತೂಕದ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು 993 ರೂಪಾಯಿ ಹೆಚ್ಚಿಸಲಾಗಿದೆ. ಬೆಂಗಳೂರಿನಲ್ಲಿ ಈ ಹಿಂದೆ 2161 ರೂ ಇದ್ದ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಈಗ 3154 ರೂಪಾಯಿಗೆ ಏರಿದೆ. ಒಂದೇ ಬಾರಿ ಇಷ್ಟೊಂದು ಪ್ರಮಾಣದಲ್ಲಿ ಬೆಲೆ ಹೆಚ್ಚಳವಾಗಿರುವುದು ವ್ಯಾಪಾರ ವಲಯದಲ್ಲಿ ಆತಂಕ ಮೂಡಿಸಿದೆ. ಈ ಬೆಲೆ ಏರಿಕೆಯಿಂದಾಗಿ ಹೋಟೆಲ್‌ ಮತ್ತು ರೆಸ್ಟೋರೆಂಟ್‌ ಉದ್ಯಮಿಗಳಿಗೆ ಹೆಚ್ಚುವರಿ ವೆಚ್ಚದ ಒತ್ತಡ ಎದುರಾಗಲಿದೆ. ಈಗಾಗಲೇ ಹೆಚ್ಚುತ್ತಿರುವ ಇತರೆ ಖರ್ಚುಗಳ ನಡುವೆ ಈ ಏರಿಕೆ ಮತ್ತಷ್ಟು ಭಾರವಾಗಲಿದೆ ಎಂದು ವ್ಯಾಪಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಾಣಿಜ್ಯ ಸಿಲಿಂಡರ್‌ ಬೆಲೆ ಏರಿಕೆಯಿಂದ ಆಹಾರ ಪದಾರ್ಥಗಳ ಬೆಲೆಯಲ್ಲಿ ಏರಿಕೆ ಸಂಭವಿಸುವ ಸಾಧ್ಯತೆ ಇದೆ.

Continue Reading
Advertisement
ದೇಶ10 hours ago

ಬಂಗಾಳದಲ್ಲಿ ಬಿಜೆಪಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ, ಯಾರ ಪಾಲಾಗಲಿದೆ ಮುಖ್ಯಮಂತ್ರಿ ಗದ್ದುಗೆ?

ರಾಜಕೀಯ10 hours ago

ವಿಜಯ್‌ ಪ್ರಮಾಣವಚನಕ್ಕೆ ಬ್ರೇಕ್‌, ರಾಷ್ಟ್ರಪತಿಗೆ ಟಿವಿಕೆ ಪತ್ರಚೆನ್ನೈ

ರಾಜಕೀಯ13 hours ago

ತಮಿಳುನಾಡು ರಾಜಕೀಯಕ್ಕೆ ರೋಚಕ ಟ್ವಿಸ್ಟ್‌, ದಳಪತಿ ಪ್ರಮಾಣವಚನಕ್ಕೆ ಬ್ರೇಕ್‌, ಡಿಎಂಕೆ-ಎಐಎಡಿಎಂಕೆ ಮೈತ್ರಿ ಸಾಧ್ಯತೆ

ಕ್ರೈಂ13 hours ago

ಪ.ಬಂಗಾಳ ಶೂಟೌಟ್‌ಗೆ ಟ್ವಿಸ್ಟ್‌, ಅಸಲಿಗೆ ಸುವೇಂದು ಟಾರ್ಗೆಟ್‌ ಆಗಿದ್ರಾ?

ಕ್ರೈಂ13 hours ago

ಪಶ್ಚಿಮ ಬಂಗಾಳದಲ್ಲಿ ರಕ್ತದೋಕುಳಿ, ಸುವೇಂದು ಅಧಿಕಾರಿ ಪಿಎ ಚಂದ್ರನಾಥ್‌ ಶೂಟೌಟ್‌‌..!

Latest2 days ago

ಪಶ್ಚಿಮ ಬಂಗಾಳದಲ್ಲಿ ಕೇಸರಿ ಪರ್ವ: ಯಾರಾಗಲಿದ್ದಾರೆ ʼಸಿಎಂʼ?

Latest2 days ago

ದಳಪತಿʼ ಪಟ್ಟಾಭಿಷೇಕಕ್ಕೆ ಕ್ಷಣಗಣನೆ : ತಮಿಳುನಾಡು ರಾಜಕಾರಣದಲ್ಲಿ ಬಿರುಗಾಳಿ

Latest2 days ago

ಸಿಎಂ ಸ್ಥಾನಕ್ಕೆ ನಾನು ರಾಜೀನಾಮೆ ನೀಡುವುದಿಲ್ಲ ಎಂದಿದ್ದೇಕೆ ಮಮತಾ ಬ್ಯಾನರ್ಜಿ?

Latest2 days ago

ಬಿಜೆಪಿ ಬಂಗಾಳ ಗೆದ್ದಾಯ್ತು, ಸಿಎಂ ರೇಸ್‌ನಲ್ಲಿ ಯಾರು?

Latest3 days ago

ತಮಿಳುನಾಡು: ಬಹುಮತ ಪಡೆಯಲು ದಳಪತಿ ಮುಂದಿರುವ ತಂತ್ರಗಳೇನು?

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌