ಬೆಂಗಳೂರು: ಕುಡಿಯುವ ನೀರಿಗೆ ಕಲುಷಿತ ನೀರು ಬೆರೆಯುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಬೆಂಗಳೂರು (Bengaluru News) ಸೇರಿದಂತೆ ಎಲ್ಲೆಡೆ ಕುಡಿಯುವ ನೀರನ್ನು ಪರೀಕ್ಷೆ ಒಳಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ವೈಯಾಲಿಕಾವಲ್‌ನ ಐಪಿಪಿ ಕಚೇರಿಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳ ಸಭೆಗೂ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.
ಮುಖ್ಯಮಂತ್ರಿಗಳು ನಿನ್ನೆ ನಗರ ಪ್ರದಕ್ಷಿಣೆ ಮಾಡಿ ವಿವಿಧ ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದ್ದಾರೆ. ಶೀಘ್ರದಲ್ಲೇ ಕಾರ್ಯಪಡೆ ರಚನೆಗೆ ಸೂಚನೆ ನೀಡಿದ್ದು, ಎಲ್ಲೆಲ್ಲಿ ಯಾವ ಕಾರ್ಯಗಳು ಸಾಗಬೇಕು ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಕೆಲವು ಕಡೆ ಕುಡಿಯುವ ನೀರು ಕಲುಷಿತವಾಗಿ ಕಾಲರ ಸಂಭವಿಸಿರುವ ಪ್ರಕರಣಗಳು ಗಮನಕ್ಕೆ ಬಂದಿವೆ. ಹೀಗಾಗಿ ಬೆಂಗಳೂರಿನ ಎಲ್ಲೆಡೆ ಕುಡಿಯುವ ನೀರಿನ ಪರಿಶೀಲನೆ ನಡೆಸಲು ವ್ಯವಸ್ಥೆ ಮಾಡಬೇಕಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡಲಾಗಿದೆ ಎಂದರು.
ಇದನ್ನೂ ಓದಿ: Koppala News: ವಿಜಯನಗರ ಅರಸರ ಕಾಲದಲ್ಲಿ ನಿರ್ಮಿಸಿದ್ದ ಹುಲಗಿ ಕಟ್ಟೆಯ ಶಾಸನ ಪತ್ತೆ
ಬೆಂಗಳೂರು ಹಾಗೂ ಬೇರೆ ಭಾಗಗಳಲ್ಲಿ ಜನರಿಗೆ ಕುಡಿಯಲು ಗುಣಮಟ್ಟದ ನೀರು ನೀಡಬೇಕು ಎಂದು ಅಧಿಕಾರಿಗಳಿಗೆ ಮುಂಜಾಗ್ರತೆಯಿಂದ ಎಚ್ಚರಿಕೆ ನೀಡಿದ್ದೇವೆ. ಇನ್ನು ಬೆಂಗಳೂರಿನಲ್ಲಿರುವ ಎಲ್ಲಾ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ರಿಪೇರಿ ಮಾಡಲು ಮಾರ್ಗದರ್ಶನ ನೀಡಲಾಗಿದೆ. ಇನ್ನು ಮಳೆ ಆರಂಭಕ್ಕೂ ಮುನ್ನ ಮುಂಜಾಗ್ರತಾ ಕ್ರಮಗಳನ್ನು ಮಾಡುತ್ತೇವೆ ಎಂದು ತಿಳಿಸಿದರು.
ಒತ್ತುವರಿ ತೆರವು ವಿಚಾರವಾಗಿ ಬಿಎಂಟಿಎಫ್ ಅವರ ಸಹಾಯ ಪಡೆಯುತ್ತೀರಾ ಎಂದು ಕೇಳಿದಾಗ, “ಬಿಎಂಟಿಎಫ್ ಜತೆ ಚರ್ಚೆ ನಡೆಸಲಾಗಿದ್ದು. ಎಲ್ಲೆಲ್ಲಿ ಬಾಕಿ ಇದೆ ಅವುಗಳನ್ನು ತೆರವುಗೊಳಿಸಲು ಸಿಎಂ ಸೂಚಿಸಿದ್ದಾರೆ”ಎಂದರು.
ರಾಜಕಾಲುವೆ, ಕೆರೆ ಒತ್ತುವರಿದಾರರು ತಡೆಯಾಜ್ಞೆ ತರುತ್ತಿರುವ ವಿಚಾರವಾಗಿ ಕೇಳಿದಾಗ, “ಕೆರೆ, ಸರ್ಕಾರಿ ಉದ್ಯಾನವನ ಜಾಗ ಸೇರಿದಂತೆ ಅನೇಕ ಕಡೆಗಳಲ್ಲಿ ಒತ್ತುವರಿ ಮಾಡಿಕೊಂಡು ಮನೆ ಕಟ್ಟಿಕೊಂಡಿದ್ದಾರೆ. ಇದು ನಮ್ಮ ಗಮನದಲ್ಲಿದ್ದು. ಈ ವಿಚಾರದಲ್ಲಿ ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಬೇಕು. ಅದಕ್ಕೆ ಕಾನೂನು ಅವಕಾಶಗಳನ್ನು ಕಂಡುಕೊಳ್ಳುತ್ತೇವೆ ಎಂದು ತಿಳಿಸಿದರು.
ಬೆಂಗಳೂರಿನ ಮೂಲಸೌಕರ್ಯ ಸಮಸ್ಯೆಗಳ ನಿವಾರಣೆಗೆ 5 ಅಂಶಗಳ ಕಾರ್ಯಕ್ರಮ
ಶುದ್ಧ ಕುಡಿಯುವ ನೀರು, ರಸ್ತೆಗುಂಡಿ ಸಮಸ್ಯೆ ಸೇರಿದಂತೆ ಬೆಂಗಳೂರಿನ ಪ್ರಮುಖ ಮೂಲಸೌಕರ್ಯ ಸಮಸ್ಯೆಗಳ ನಿವಾರಣೆಗೆ ಐದು ಅಂಶಗಳ ಕಾರ್ಯಕ್ರಮ ರೂಪಿಸಲಾಗಿದೆ” ಎಂದು ತಿಳಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್, ಬಿಬಿಎಂಪಿ ಆಸ್ತಿಗಳ ಗುರುತಿಸುವಿಕೆ ಹಾಗೂ ಸಂರಕ್ಷಣೆ, ಆಸ್ತಿ ತೆರಿಗೆ, ರಾಜಕಾಲುವೆ, ಕೆರೆ ಒತ್ತುವರಿ ತೆರವು ಕಾರ್ಯಾಚರಣೆ ಈ ಐದು ಅಂಶಗಳ ಕಾರ್ಯಕ್ರಮದಲ್ಲಿ ಸೇರಿವೆ ಎಂದರು.
ಇದನ್ನೂ ಓದಿ: Shivamogga News: ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಿಯ ದರ್ಶನ ಪಡೆದ ಸಾವಿರಾರು ಭಕ್ತರು
ಮುಖ್ಯಮಂತ್ರಿಗಳ ಜತೆಗೂಡಿ ಬುಧವಾರ ಬೆಂಗಳೂರು ನಗರದ ಒಂದಷ್ಟು ಭಾಗಗಳಲ್ಲಿ ಪರಿಶೀಲನೆ ನಡೆಸಲಾಯಿತು. ಈ ವೇಳೆ ಅನೇಕ ಸಮಸ್ಯೆಗಳು ಕಂಡು ಬಂದ ಕಾರಣ ಬಿಬಿಎಂಪಿ ವಲಯ ಅಧಿಕಾರಿಗಳು ಸೇರಿದಂತೆ ಬೆಂಗಳೂರಿಗೆ ಸಂಬಂಧಿಸಿದ ಎಲ್ಲಾ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿ ಸಮಸ್ಯೆ ಪರಿಹಾರಕ್ಕೆ ಚರ್ಚೆ ನಡೆಸಲಾಯಿತು ಎಂದರು.
ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿ ಹಾಗೂ ನಗರದ ಎಲ್ಲಾ ಭಾಗಗಳಲ್ಲಿ ಸರಬರಾಜಾಗುವ ನೀರಿನ ಗುಣಮಟ್ಟದ ಪರೀಕ್ಷೆಯನ್ನು ಬಿಬಿಎಂಪಿ ನಡೆಸಬೇಕು ಹಾಗೂ ಗುಣಮಟ್ಟದ ಫಲಿತಾಂಶವನ್ನು ಬಿಡ್ಬ್ಲೂಎಸ್‌ಎಸ್‌ಬಿಗೆ ನೀಡಬೇಕು ಎಂದು ಸೂಚಿಸಲಾಗಿದೆ ಎಂದರು.
ರಾಜಕಾಲುವೆ ಒತ್ತುವರಿ ತೆರವಿಗೆ ನ್ಯಾಯಾಲಯ ಈ ಹಿಂದೆ ನಿರ್ದೇಶನ ನೀಡಿತ್ತು. ಅದರಂತೆ 2016-17 ರಲ್ಲಿ 2,626 ಒತ್ತುವರಿಗಳನ್ನು ಗುರುತಿಸಲಾಗಿತ್ತು. 2022- 23 ಹೊತ್ತಿಗೆ 556 ಒತ್ತುವರಿ ತೆರವು ಮಾಡಲಾಗಿತ್ತು. ಈಗ 1136 ಹೊಸದಾಗಿ ಒತ್ತುವರಿಗಳನ್ನು ಗುರುತಿಸಲಾಗಿದ್ದು, ಒಟ್ಟು 4,316 ಒತ್ತುವರಿಗಳನ್ನು ಗುರುತಿಸಲಾಗಿದೆ. ಸ್ಯಾಟ್‌ಲೈಟ್, ಗೂಗಲ್ ಇಮೇಜ್ ಮತ್ತು ಸರ್ವೇ ಇಲಾಖೆ ಈ ಒತ್ತುವರಿ ಮಾಹಿತಿ ಸಂಗ್ರಹಿಸಿದೆ. ಒತ್ತುವರಿ ತೆರವುಗೊಳಿಸಲು ಬಿಎಂಟಿಎಫ್‌ಗೆ ಕಾನೂನಾತ್ಮಕವಾಗಿ ಮತ್ತು ಎಲ್ಲಾ ರೀತಿಯ ಬೆಂಬಲ ನೀಡಬೇಕು ಎಂದು ಮಾರ್ಗದರ್ಶನ ನೀಡಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ: Golden Star Ganesh: ಮೈಸೂರಿನಲ್ಲಿ ಮೇ 25ರಂದು ʼಕೃಷ್ಣಂ ಪ್ರಣಯ ಸಖಿʼ ಚಿತ್ರದ ಫಸ್ಟ್ ಸಾಂಗ್ ರಿಲೀಸ್
ಬಾಗಿಲಿಗೆ ಬಂತು ಸರ್ಕಾರ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಒತ್ತುವರಿ ವಿಚಾರವಾಗಿ ಬಂದಿರುವ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಬೇಕು ಎಂದು ಸೂಚನೆ ನೀಡಿದ್ದೇನೆ ಎಂದ ಅವರು, 182 ಕೆರೆಗಳಲ್ಲಿ 116 ಕೆರೆಗಳ ಒತ್ತುವರಿ ಬಗ್ಗೆ ಸರ್ವೇ ನಡೆಸಬೇಕಾಗಿದೆ. ಬಾಕಿ ಉಳಿದ ಕೆರೆಗಳನ್ನು ಸರ್ವೇ ನಡೆಸಬೇಕು. ಹಾಗೂ ಬಿಬಿಎಂಪಿ ಆಸ್ತಿಗಳನ್ನು ಗುರುತು ಮಾಡಬೇಕು. ಪಾಲಿಕೆ ಆಸ್ತಿ ಸಂರಕ್ಷಣೆ ಸೇರಿದಂತೆ ಒತ್ತುವರಿ ತೆರವಿಗೆ ಶೀಘ್ರ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಲಾಗಿದೆ. ಸಂಸ್ಕರಿಸಿದ ನೀರನ್ನು ಕೆರೆಗಳಿಗೆ ತುಂಬಿಸುವ ಜವಾಬ್ದಾರಿಯನ್ನು ಬಿಡ್ಬ್ಲೂಎಸ್‌ಎಸ್‌ಬಿ ಗೆ ವಹಿಸಲಾಗಿದೆ. ಕೆರೆಗಳಲ್ಲಿ ನೀರಿದ್ದರೆ ಒತ್ತುವರಿ ತಪ್ಪುತ್ತದೆ, ಅಂತರ್ಜಲ ಹೆಚ್ಚುತ್ತದೆ. ಆದ ಕಾರಣ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.
ಇದನ್ನೂ ಓದಿ: COMEDK UGET 2024: ನಾಳೆ ಮಧ್ಯಾಹ್ನ ಕಾಮೆಡ್ – ಕೆ ಫಲಿತಾಂಶ ಪ್ರಕಟ; ವೀಕ್ಷಣೆ, ಡೌನ್‌ಲೋಡ್ ಮಾಡಿಕೊಳ್ಳೋದು ಹೇಗೆ?
ನಗರದಲ್ಲಿ ಸುಮಾರು 5 ಸಾವಿರಕ್ಕೂ ಹೆಚ್ಚು ರಸ್ತೆ ಗುಂಡಿಗಳು ಇವೆ ಎಂದು ಸಿಎಂ ಮಾಹಿತಿ ನೀಡಿದ್ದರು. ಲೋಕಸಭಾ ಚುನಾವಣಾ ಫಲಿತಾಂಶ ಬಂದ ನಂತರ ಸಾರ್ವಜನಿಕರೇ ರಸ್ತೆಗುಂಡಿಗಳ ಫೋಟೋ ತೆಗೆದು ಮಾಹಿತಿ ನೀಡುವ ಆ್ಯಪ್ ಬಿಡುಗಡೆ ಮಾಡಲಾಗುವುದು. ಮುಂದಿನ 15 ದಿನಗಳಲ್ಲಿ ಎಲ್ಲಾ ರಸ್ತೆಗುಂಡಿಗಳನ್ನು ಮುಚ್ಚಬೇಕು ಎಂದು ತಿಳಿಸಲಾಗಿದೆ ಎಂದರು.