ಬೆಂಗಳೂರು: ಬೆಂಗಳೂರಲ್ಲಿ ವರದಕ್ಷಿಣೆ ಕಾಟಕ್ಕೆ (Dowry Case) ಗೃಹಿಣಿಯೊಬ್ಬರು ನೇಣಿಗೆ ಶರಣಾಗಿದ್ದಾರೆ. ರಂಜಿತಾ (29) ಮೃತ ದುರ್ದೈವಿ. ದೊಡ್ಡ ಬಸ್ತಿ ರಸ್ತೆ ಬಳಿಯ ಬಸವೇಶ್ವರನಗರದ ಮನೆಯಲ್ಲಿ (Bengaluru News) ಘಟನೆ ನಡೆದಿದೆ.
ರಂಜಿತಾ ಮಧು ಎಂಬುವವರ ಜತೆ ವಿವಾಹವಾಗಿದ್ದರು. ಮೊದಮೊದಲು ಇವರಿಬ್ಬರು ಅನ್ಯೋನ್ಯವಾಗಿದ್ದರು. ಆದರೆ ದಿನ ಕಳೆದಂತೆ ಪತಿ ಮಧು ವರದಕ್ಷಿಣೆ ತರುವಂತೆ ಕಿರುಕುಳ ನೀಡುತ್ತಿದ್ದ. ವರದಕ್ಷಿಣೆ ಜತೆಗೆ ಮಾನಸಿಕ ಹಾಗೂ ದೈಹಿಕವಾಗಿ ಕಿರುಕುಳ ನೀಡುತ್ತಿದ್ದ ಬಗ್ಗೆ ಪೋಷಕರೊಟ್ಟಿಗೆ ಆಗಾಗ ರಂಜಿತಾ ಹೇಳಿಕೊಳ್ಳುತ್ತಿದ್ದಳು.
ಪತಿ ಮಧು ಮನೆಯಲ್ಲಿ ಇರುವಾಗಲೇ ಈ ಘಟನೆ ನಡೆದಿದೆ. ಆತನೇ ಹತ್ಯೆ ಮಾಡಿ ನಂತರ ಆತ್ಮಹತ್ಯೆ ಎಂದು ಬಿಂಬಿಸುತ್ತಿದ್ದಾನೆ ಎಂದು ಗಂಭೀರ ಆರೋಪವನ್ನು ಮಾಡಿದ್ದಾರೆ. ರಂಜಿತಾ ಇಎಸ್‌ಎಸ್ ಶಾಲೆಯಲ್ಲಿ ಟೀಚರ್ ಆಗಿ ಕೆಲಸ ಮಾಡುತ್ತಿದ್ದಳು.
ಸದ್ಯ ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ. ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಸಂಬಂಧ ದೂರು ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.
ದೇವಾಲಯದ ಬೆಟ್ಟದ ಬುಡದಲ್ಲೇ ಪತ್ತೆಯಾಯ್ತು ಹೂತಿಟ್ಟ ಗೃಹಿಣಿ ಶವ
ಮಂಡ್ಯ: ವಿವಾಹಿತಯೊಬ್ಬಳ ಶವ ಮಣ್ಣಿನಲ್ಲಿ ಹೂತಿಟ್ಟ ರೀತಿ (body found) ಪತ್ತೆಯಾಗಿದೆ. ಮೇಲುಕೋಟೆಯ ಯೋಗಾ ನರಸಿಂಹ ಸ್ವಾಮಿ ದೇವಾಲಯ ಇರುವ ಬೆಟ್ಟದ ತಪ್ಪಲಿನಲ್ಲಿಯೇ ಶಿಕ್ಷಕಿಯ ಮೃತ ದೇಹ ಪತ್ತೆಯಾಗಿದ್ದು, ಕೊಲೆಯಾದ (murder case) ರೀತಿ ಹಾಗೂ ಕಾರಣಗಳ ಬಗ್ಗೆ ಕುತೂಹಲ ಕೆರಳಿಸಿದೆ.
ಮಂಡ್ಯ ಜಿಲ್ಲೆ (mandya news) ಪಾಂಡವಪುರ ತಾಲೂಕಿನ ಮೇಲುಕೋಟೆಯಲ್ಲಿ ಘಟನೆ ನಡೆದಿದೆ. ಮಾಣಿಕ್ಯನಹಳ್ಳಿಯ ದೀಪಿಕಾ (28) ಕೊಲೆಯಾದವಳು. ಈಕೆ ಮೇಲುಕೋಟೆಯ ಖಾಸಗಿ ಶಾಲೆಯಲ್ಲಿ ಅತಿಥಿ ಶಿಕ್ಷಕಿಯಾಗಿದ್ದರು. ಮಾಣಿಕ್ಯನಹಳ್ಳಿಯ ವೆಂಕಟೇಶ್ ಎಂಬವರ ಮಗಳಾಗಿರುವ ದೀಪಿಕಾ ಅವರನ್ನು ಅದೇ ಗ್ರಾಮದ ಲೋಕೇಶ್ ಎಂಬವರ ಜತೆ ಮದುವೆ ಮಾಡಿಸಲಾಗಿತ್ತು. ದಂಪತಿಗಳಿಗೆ 8 ವರ್ಷದ ಮಗು ಸಹ ಇದೆ.
ಶಿಕ್ಷಕಿ ಶನಿವಾರ ಮಧ್ಯಾಹ್ನ ತರಗತಿ ಮುಗಿಸಿ ಸ್ಕೂಟರ್‌ನಲ್ಲಿ ವಾಪಸ್ ಮನೆಗೆ ಹೊರಟಿದ್ದರು. ಆದರೆ ಶನಿವಾರ ಸಂಜೆ ವೇಳೆ ಸ್ಕೂಟರ್ ಬೆಟ್ಟದ ತಪ್ಪಲಿನಲ್ಲಿ ನಿಂತಿರುವುದು ಪತ್ತೆಯಾಗಿತ್ತು. ಬೆಟ್ಟದ ತಪ್ಪಲಿನಲ್ಲಿ ಸ್ಕೂಟರ್ ನಿಂತಿರುವುದನ್ನು ಗಮನಿಸಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು.
ಪೊಲೀಸರು ಸ್ಕೂಟರ್ ವಶಕ್ಕೆ ಪಡೆದು ಅದರ ನಂಬರ್ ನೆರವಿನಿಂದ ಶಿಕ್ಷಕಿಯ ಊರು ಪತ್ತೆ ಹಚ್ಚಿ ಮನೆಗೆ ಮಾಹಿತಿ ನೀಡಿದ್ದರು. ಇಂದು ಅದೇ ಬೆಟ್ಟದ ತಪ್ಪಲಿನಲ್ಲಿ ಹೂತಿಟ್ಟ ರೀತಿಯಲ್ಲಿ ಶವ ಪತ್ತೆಯಾಗಿದೆ. ದುಷ್ಕರ್ಮಿಗಳು ಕೊಲೆ ಮಾಡಿ ಶವವನ್ನು ಹೂತಿಟ್ಟಿರುವುದು ಪತ್ತೆಯಾಗಿದೆ. ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೈಯಕ್ತಿಕ ದ್ವೇಷ, ಸುಲಿಗೆ, ಅತ್ಯಾಚಾರ ಮತ್ತಿತರ ಕೋನಗಳಲ್ಲಿ ತನಿಖೆ ನಡೆಯುತ್ತಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ