Site icon Vistara News

Bengaluru News: ಬೆಂಗಳೂರಲ್ಲಿ ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆ; ಕೊಲೆ ಶಂಕೆ

ಕುಮಾರಸ್ವಾಮಿ ಲೇಔಟ್‌ ಪೊಲೀಸರು

#image_title

ಬೆಂಗಳೂರು: ಇಲ್ಲಿನ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ (Kumarswamy layout police station) ವಸಂತನಗರ ಸಮೀಪದ ಖಾಲಿ ಜಾಗದಲ್ಲಿ ಸುಟ್ಟು ಸ್ಥಿತಿಯಲ್ಲಿ ವ್ಯಕ್ತಿಯೊಬ್ಬನ ಶವವೊಂದು ಪತ್ತೆಯಾಗಿದೆ. ಎರಡು ಅಥವಾ ಮೂರು ದಿನದ ಹಿಂದೆ ಸುಟ್ಟಿರಬಹುದೆಂದು ಶಂಕಿಸಲಾಗಿದೆ.

ಸ್ಥಳಕ್ಕೆ ಕುಮಾರಸ್ವಾಮಿ ಲೇಔಟ್‌ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವ್ಯಕ್ತಿಯ ಹತ್ಯೆ ಮಾಡಿ ಮೃತದೇಹವನ್ನು ಸುಟ್ಟಿರಬಹುದೆಂದು ಅಂದಾಜಿಸಲಾಗಿದೆ. ಸದ್ಯ ಮೃತ ವ್ಯಕ್ತಿಯ ಗುರುತು ಪತ್ತೆ ಆಗಿಲ್ಲ. ಸುಟ್ಟು ಕರಕಲಾಗಿರುವ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಸಂಬಂಧ ಕುಮಾರಸ್ವಾಮಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ‌

ಪುಟ್ಟೇನಹಳ್ಳಿಯಲ್ಲಿ ಅಪಾರ್ಟ್‌ಮೆಂಟ್‌ನ 4ನೇ ಮಹಡಿಯಿಂದ ಜಿಗಿದು ಗೃಹಿಣಿ ಆತ್ಮಹತ್ಯೆ

ಬೆಂಗಳೂರಿನ ಪುಟ್ಟೇನಹಳ್ಳಿ ಪೊಲೀಸ್ (Puttenahalli Police) ಠಾಣಾ ವ್ಯಾಪ್ತಿಯಲ್ಲಿರುವ ಅಪಾರ್ಟ್‌ಮೆಂಟ್‌ನ (Apartment) 4ನೇ ಮಹಡಿಯಿಂದ ಜಿಗಿದು ಮಹಿಳೆಯೊಬ್ಬರು ಆತ್ಮಹತ್ಯೆ (Suicide Case) ಮಾಡಿಕೊಂಡಿರುವ ಘಟನೆ ಮಂಗಳವಾರ (ಏ.18) ನಡೆದಿದೆ. ಸೋನು ಪೂಜಾರಿ ಎಂಬುವವರು ಆತ್ಮಹತ್ಯೆ ಮಾಡಿಕೊಂಡವರು.

ಸೋನು ಪೂಜಾರಿ ಮಂಗಳವಾರ ಬೆಳಗ್ಗೆ 8 ಗಂಟೆ ಸುಮಾರಿಗೆ ಅಪಾರ್ಟೆಮೆಂಟ್‌ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಕಾರಣವೇನು ಎಂಬುದು ತಿಳಿದು ಬಂದಿಲ್ಲ. ಸೋನು ಪೂಜಾರಿ ಅವರ ಪತಿ ನಿರಂಜನ್ ಕೆಲಸದ ನಿಮಿತ್ತ ಮುಂಬೈಗೆ ಹೋಗಿದ್ದರು. ಹೀಗಾಗಿ ಮನೆಯಲ್ಲಿ ಅವರು ಒಬ್ಬಂಟಿಯಾಗಿ ಇದ್ದರು ಎನ್ನಲಾಗಿದೆ.

ಇತ್ತ ತಡರಾತ್ರಿವರೆಗೂ ಸೋನು ಮೊಬೈಲ್‌ನಲ್ಲಿ ಯಾರೊಟ್ಟಿಗೋ ಮಾತನಾಡುತ್ತಾ ಜಗಳವಾಡುತ್ತಿದ್ದರು ಎಂದು ಅಕ್ಕ ಪಕ್ಕದ ಮನೆಯವರು ತಿಳಿಸಿದ್ದಾರೆ. ರಾತ್ರಿ 1 ಗಂಟೆಗೆ ಫೋನ್‌ನಲ್ಲಿ ಜೋರಾಗಿ ಕಿರುಚಾಡುತ್ತಿದ್ದರು ಎಂದು ಪೊಲೀಸರಿಗೂ ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಸದ್ಯ ಮುಂಬೈನಲ್ಲಿರುವ ಪತಿ ನಿರಂಜನ್‌ಗೆ ಈ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದು, ಯಾರ ಜತೆ ಫೋನ್ ಮಾತನಾಡುತ್ತಿದ್ದರು ಎಂದು ಪರಿಶೀಲನೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಪುಟ್ಟೇನಹಳ್ಳಿ ಪೊಲೀಸರು (puttenahalli police station) ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್‌ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.

ನದಿಯಲ್ಲಿ ಈಜಲು ಹೋಗಿ ನಾಪತ್ತೆಯಾದವರು ಶವವಾಗಿ ಪತ್ತೆ

ಬಾಗಲಕೋಟೆ: ನದಿಯಲ್ಲಿ ಈಜಲು ಹೋಗಿ ನಾಪತ್ತೆಯಾದ ಇಬ್ಬರು ಯುವಕರು ಶವವಾಗಿ ಪತ್ತೆಯಾಗಿದ್ದಾರೆ. ಕಮತಗಿ ಕ್ರಾಸ್ ಬಳಿಯ ಮಲಪ್ರಭಾ ‌ನದಿಯಲ್ಲಿ ಘಟನೆ ನಡೆದಿದೆ.

ಅಕ್ಷಯ್ ಕಂಠಿಮಠ (24) ಹಾಗೂ ವಿಜಯ್ ಅರುಟಗಿಮಠ (25) ಮೃತ ಯುವಕರು. ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಕಮತಗಿ ಕ್ರಾಸ್‌ ಬಳಿ, ಮಲಪ್ರಭಾ ನದಿಯಲ್ಲಿ ಇವರು ನಿನ್ನೆ ಈಜಲು ಹೋಗಿದ್ದರು. ತಿರುಗಿ ಬಂದಿರಲಿಲ್ಲ. ಹುನಗುಂದ ಅಗ್ನಿಶಾಮಕ ದಳ ಸಿಬ್ಬಂದಿ ಶೋಧ ನಡೆಸಿದ್ದು, ರಾತ್ರಿ ಶವವನ್ನು ಹೊರತೆಗೆದಿದ್ದಾರೆ.

ಇದನ್ನೂ ಓದಿ:Karnataka Election Live Updates: ತಮಗೆ ಟಿಕೆಟ್‌ ತಪ್ಪಲು ಬಿ ಎಲ್‌ ಸಂತೋಷ್‌ ಕಾರಣ ಎಂದ ಜಗದೀಶ್‌ ಶೆಟ್ಟರ್‌, ಚುನಾವಣೆಯ ಕ್ಷಣಕ್ಷಣದ ಸುದ್ದಿಗಳು ಇಲ್ಲಿವೆ

ಇವರಲ್ಲಿ ಅಕ್ಷಯ್ ಬಾಗಲಕೋಟೆ ನಿವಾಸಿ ಹಾಗೂ ವಿಜಯ್ ಕಮತಗಿ ನಿವಾಸಿಯಾಗಿದ್ದಾರೆ. ಅಮೀನಗಢ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Exit mobile version