Site icon Vistara News

Bengaluru News: ಬೆಂಗಳೂರಿನಲ್ಲಿ ಜು. 6,7ರಂದು ʼನಟನ ತರಂಗಿಣಿʼ 20ನೇ ವರ್ಷೋತ್ಸವ

natana Tarangini 20th anniversary celebration on July 6 and 7 in Bengaluru

ಬೆಂಗಳೂರು: ನಗರದ ಕುಮಾರಸ್ವಾಮಿ ಬಡಾವಣೆಯ ನಟನ ತರಂಗಿಣಿ ಸ್ಕೂಲ್ ಆಫ್ ಮ್ಯೂಸಿಕ್ ಆ್ಯಂಡ್ ಡಾನ್ಸ್ ಸಂಸ್ಥೆಯ 20ನೇ ವರ್ಷದ ಸಂಭ್ರಮೋತ್ಸವದ ಅಂಗವಾಗಿ ಜುಲೈ 6 ಮತ್ತು 7 ರಂದು ‘ನಾದ ನೃತ್ಯಾನುಭವʼ ವಿಶೇಷ ಗಾಯನ, ವಾದನ ಮತ್ತು ನೃತ್ಯ ಕಾರ್ಯಕ್ರಮ (Bengaluru News) ಆಯೋಜಿಸಿದೆ.

ಬೆಂಗಳೂರಿನ ಜಯನಗರ 8ನೇ ಬಡಾವಣೆಯ ಶ್ರೀ ಜಯರಾಮ ಸೇವಾ ಮಂಡಳಿ ಸಭಾಂಗಣದಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ಕಾರ್ಯಕ್ರಮದಲ್ಲಿ ನಟನ ತರಂಗಿಣಿ ಅಕಾಡೆಮಿಯ 5ನೇ ವಾರ್ಷಿಕೋತ್ಸವವೂ ಸಂಗಮಗೊಂಡಿದೆ. ಜು. 6ರ ಶನಿವಾರ ಮಧ್ಯಾಹ್ನ 2.30ಕ್ಕೆ ನಟನ ತರಂಗಣಿ ವಿದ್ಯಾರ್ಥಿಗಳಿಂದ ಗಾಯನ ಮತ್ತು ವಾದ್ಯ ಸಂಗೀತ ಕಾರ್ಯಕ್ರಮದ ಮೂಲಕ ವಾರ್ಷಿಕೋತ್ಸವ ಆರಂಭವಾಗಲಿದೆ.

ಇದನ್ನೂ ಓದಿ: Kalki 2898 AD: “ಕಲ್ಕಿ 2898 ಎಡಿ” ಸಿನಿಮಾ ನೋಡಲು ಜಪಾನ್‌ನಿಂದ ಹೈದರಾಬಾದ್‌ಗೆ ಬಂದ ಫ್ಯಾನ್ಸ್‌!

ಸಂಜೆ 5ಕ್ಕೆ ನಡೆಯುವ ಸಭಾ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಉಡುಪಿಯ ರಂಜನಿ ಮೆಮೋರಿಯಲ್ ಟ್ರಸ್ಟ್ ಅಧ್ಯಕ್ಷ ಪ್ರೊ. ಅರವಿಂದ ಹೆಬ್ಬಾರ್, ಶಿವಮೊಗ್ಗದ ಸಂಗೀತ ಕಾರ್ಯಕ್ರಮಗಳ ಸಂಘಟಕ ಸುಬ್ರಹ್ಮಣ್ಯ ಶಾಸ್ತ್ರಿ, ಚೆನ್ನೈನ ದಾಸಪ್ರಕಾಶ್ ಕುಟುಂಬದ ಕೆ. ಗಂಗಾ ಪ್ರಸಾದ್, ಪುತ್ತೂರಿನ ಕರ್ನಾಟಕ ಬ್ಯಾಂಕ್ ಮುಖ್ಯ ವ್ಯವಸ್ಥಾಪಕ ಶ್ರೀಹರಿ ಭಾಗವಹಿಸಲಿದ್ದಾರೆ.

ಶ್ರೀನಿವಾಸ್‌ಗೆ ನಾದಶ್ರೀ ಪ್ರಶಸ್ತಿ ಪ್ರದಾನ

ಬೆಂಗಳೂರಿನ ಮೃದಂಗ ಮತ್ತು ತಬಲಾ ತಯಾರಕ ವಿದ್ವಾನ್ ಶ್ರೀನಿವಾಸ ಅನಂತ ರಾಮಯ್ಯ ಅವರಿಗೆ ‘ನಾದ ಶ್ರೀʼ ಪ್ರಶಸ್ತಿ ನೀಡಿ, ಸನ್ಮಾನಿಸಲಾಗುವುದು. ಸಂಜೆ 5:30ಕ್ಕೆ ನಟನ ತರಂಗಣಿ ಸಂಸ್ಥೆಯ ವಿದ್ಯಾರ್ಥಿಗಳಿಂದ ವಿಶೇಷ ನೃತ್ಯ ಪ್ರದರ್ಶನವಿದೆ. ಮೃದಂಗ ಪಕ್ಕವಾದ್ಯದಲ್ಲಿ ವಿದ್ವಾನ್ ಕೆ.ಕೆ. ಭಾನುಪ್ರಕಾಶ್ ಸಹಕಾರ ನೀಡಲಿದ್ದಾರೆ. ಸಂಜೆ 7.30 ಕ್ಕೆ ವಿಶೇಷ ನೃತ್ಯ ಪ್ರಸ್ತುತಿಯಲ್ಲಿ ಚೆನ್ನೈನ ಖ್ಯಾತ ಕಲಾವಿದೆ ವಿದುಷಿ ದಿವ್ಯಾ ವೇಣುಗೋಪಾಲ್ ಭರತನಾಟ್ಯ ಜರುಗಲಿದೆ.

ವಿದ್ಯಾರ್ಥಿಗಳಿಂದ ವಾದ್ಯ ವೈಭವ

ಜುಲೈ 7 ರ ಮಧ್ಯಾಹ್ನ 2 ಗಂಟೆಗೆ ನಟನ ತರಂಗಿಣಿ ಸಂಸ್ಥೆ ವಿದ್ಯಾರ್ಥಿಗಳಿಂದ ಗಾಯನ ಮತ್ತು ವಾದ್ಯ ನೆರವೇರಲಿದೆ. ಸಂಜೆ 6ಕ್ಕೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಹಿರಿಯ ಜ್ಯೋತಿಷ್ಯ ಶಾಸ್ತ್ರಜ್ಞ, ಬೇಕಲ್ ಗೋಕುಲಂ ಗೋಶಾಲೆ ಸಂಸ್ಥಾಪಕ ವಿಷ್ಣು ಪ್ರಸಾದ ಹೆಬ್ಬಾರ್ ಮತ್ತು ನಾಗರತ್ನಾ ಹೆಬ್ಬಾರ್, ಬೆಂಗಳೂರಿನ ರಾಮಸೇವಾ ಮಂಡಳಿ ಕಾರ್ಯನಿರ್ವಾಹಕ ಅಭಿಜಿತ್ ವಾದಿರಾಜ್, ಉಡುಪಿಯ ಹಿರಿಯ ಸಂಗೀತ ತಜ್ಞ, ಸಂಯೋಜಕ, ರಂಜನಿ ಮೆಮೋರಿಯಲ್ ಟ್ರಸ್ಟ್ ಅಧ್ಯಕ್ಷ ಅರವಿಂದ ಹೆಬ್ಬಾರ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ನಟನ ತರಂಗಿಣಿ ಸಂಸ್ಥಾಪಕ ಅಧ್ಯಕ್ಷೆ ಡಾ. ವೈ.ಜಿ. ಪರಿಮಳಾ, ಕಾರ್ಯದರ್ಶಿಗಳಾದ ವಿದ್ವಾನ್ ನಿಕ್ಷಿತ್ ಪುತ್ತೂರು ಮತ್ತು ವಿದುಷಿ ವೈ. ಜಿ. ಶ್ರೀ ಲತಾ ಉಪಸ್ಥಿತರಿರಲಿದ್ದಾರೆ.

ಸುಬ್ರಹ್ಮಣ್ಯ ಶಾಸ್ತ್ರಿಗೆ ಕಲಾಶ್ರಯ ಪ್ರಶಸ್ತಿ

ಶಿವಮೊಗ್ಗದ ಹಿರಿಯ ಸಂಗೀತ ಸಂಘಟಕ, ಕಲಾ ಪ್ರೇಮಿ ಸುಬ್ರಹ್ಮಣ್ಯ ಶಾಸ್ತ್ರಿ ಅವರಿಗೆ ಇದೇ ವೇದಿಕೆಯಲ್ಲಿ ‘ಕಲಾಶ್ರಯʼ ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು. ನಂತರ ನಡೆಯಲಿರುವ ದ್ವಂದ್ವ ಗಾಯನದಲ್ಲಿ ಲತಾಂಗಿ ಸಹೋದರಿಯರು ಎಂದೇ ಖ್ಯಾತರಾದ ಅರ್ಚನಾ ಮತ್ತು ಸಮನ್ವಿ ಕರ್ನಾಟಕ ಶಾಸ್ತ್ರೀಯ ಸಂಗೀತ ಸುಧೆ ಹರಿಸಲಿದ್ದಾರೆ. ಪಕ್ಕವಾದ್ಯದಲ್ಲಿ ವಿದುಷಿ ಸಿ.ವಿ. ಶ್ರುತಿ (ಪಿಟೀಲು), ವಿದ್ವಾನ್ ಆನೂರು ಅನಂತ ಕೃಷ್ಣ ಶರ್ಮ(ಮೃದಂಗ), ವಿದುಷಿ ಸುಕನ್ಯಾ ರಾಮಗೋಪಾಲ್ (ಘಟಂ) ಮತ್ತು ವಿದ್ವಾನ್ ಪಯ್ಯನೂರ್ ಗೋವಿಂದ ಪ್ರಸಾದ್ (ಮೋರ್ಸಿಂಗ್) ಸಾಥ್ ನೀಡಲಿರುವುದು ವಿಶೇಷ. ಕಲಾರಸಿಕರು ಭಾಗವಹಿಸುವಂತೆ ಸಂಗೀತ ಮತ್ತು ನೃತ್ಯ ‘ಉಭಯ ಕಲಾ ವಿದುಷಿʼ ವೈ.ಜಿ. ಶ್ರೀಲತಾ ಕೋರಿದ್ದಾದ್ದಾರೆ.

ಇದನ್ನೂ ಓದಿ: Edu Guide: ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌: IDFC FIRST ಬ್ಯಾಂಕ್‌ನಿಂದ 2 ಲಕ್ಷ ರೂ. ಸ್ಕಾಲರ್‌ಶಿಪ್‌; ಹೀಗೆ ಅಪ್ಲೈ ಮಾಡಿ

ಸಂಗೀತ ಶಿಕ್ಷಣ ವ್ಯಕ್ತಿತ್ವಕ್ಕೆ ಸಂಸ್ಕಾರ ರೂಢಿಸಿ ಬದುಕನ್ನು ಎತ್ತರಕ್ಕೆ ಕೊಂಡೊಯ್ಯುತ್ತದೆ. ಮನಸ್ಸಿನ ಕಲಾತ್ಮಕ ಭಾಗವನ್ನು ವ್ಯಕ್ತಪಡಿಸಲು ಅನುವು ಮಾಡಿಕೊಡುತ್ತದೆ. ವ್ಯಕ್ತಿಯ ಭಾವನಾತ್ಮಕ, ಬೌದ್ಧಿಕ ಮತ್ತು ಆಧ್ಯಾತ್ಮಿಕ ಯೋಗಕ್ಷೇಮದ ನಡುವೆ ಸಮತೋಲನವನ್ನು ತರುತ್ತದೆ. ಸಂಗೀತ ಕಲಿಕೆ ಒಂದು ಸೌಹಾರ್ದ ಮತ್ತು ಸುಂದರ ಸಮಾಜದ ಬೆಳವಣಿಗೆಗೆ ಅತ್ಯಗತ್ಯ. ನಾನು ನಟನ ತರಂಗಿಣಿ-ಕಲಾ ಶಾಲೆಯನ್ನು ಪ್ರಾರಂಭಿಸಲು ಇದೇ ಸ್ಫೂರ್ತಿ. 20 ವರ್ಷದಿಂದ ಭಗವಂತನ ಸೇವೆ ಎಂದೇ ಭಾವಿಸಿ ಸಾವಿರಾರು ಮಕ್ಕಳಿಗೆ ಬೋಧನೆ ಮಾಡಿದ್ದೇನೆ. ಈ ಕೈಂಕರ್ಯ ನನಗೆ ಧನ್ಯತೆ ನೀಡಿದೆ.

-ವಿದುಷಿ ವೈ.ಜಿ. ಪರಿಮಳ, ನಟನ ತರಂಗಿಣಿ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷೆ.

Exit mobile version