Site icon Vistara News

World Blood Donors Day: ವಿಶ್ವ ರಕ್ತದಾನಿಗಳ ದಿನ; ಜಾಗೃತಿ ಜಾಥಾಕ್ಕೆ ದಿನೇಶ್ ಗುಂಡೂರಾವ್‌ ಚಾಲನೆ

World Blood Donor Day Awareness Jatha in Bengaluru

ಬೆಂಗಳೂರು: ರಕ್ತದಾನ ಮಾಡುವ ಮೂಲಕ ಒಬ್ಬರ ಜೀವ ಉಳಿಸಬಹುದು. ರಕ್ತದಾನದಿಂದ (World Blood Donors Day) ಹಲವರ ಜೀವನದಲ್ಲಿ ಬದಲಾವಣೆ ತರಬಹುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ವಿಶ್ವ ರಕ್ತದಾನಿಗಳ ದಿನಾಚರಣೆಯ ಅಂಗವಾಗಿ ಬೆಂಗಳೂರಿನಲ್ಲಿ‌ ಶುಕ್ರವಾರ ವಿಧಾನಸೌಧದಿಂದ ಕಂಠೀರವ ಕ್ರೀಡಾಂಗಣದವರೆಗೆ ರಕ್ತದಾನದ ಕುರಿತು ಹಮ್ಮಿಕೊಳ್ಳಲಾಗಿದ್ದ ಜಾಗೃತಿ ಜಾಥಾಗೆ ಚಾಲನೆ ನೀಡಿ, ಮಾತನಾಡಿದ ಸಚಿವರು, ದೇಶದಲ್ಲಿ ರಕ್ತಕ್ಕಿರುವ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ರಕ್ತದಾನಕ್ಕೆ ನಾವೆಲ್ಲರು ಮುಂದಾಗಬೇಕಿದೆ. ಹೆಚ್ಚು ರಕ್ತದಾನದ ಅಗತ್ಯತೆ ಇದೆ ಎಂದು ಹೇಳಿದರು.

ರಕ್ತದಾನದ ಕುರಿತು ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವತ್ತ ಆರೋಗ್ಯ ಇಲಾಖೆ ಹಾಗೂ ಕರ್ನಾಟಕ ಸ್ಟೇಟ್ ಏಡ್ಸ್ ಪ್ರಿವೆನ್ಷನ್ ಸೊಸೈಟಿ ಅವರು ಹಮ್ಮಿಕೊಂಡಿದ್ದ ಈ ರೀತಿಯ ಜಾಥಾ ಕಾರ್ಯಕ್ರಮಗಳು ಉತ್ತಮವಾದವು ಎಂದು ತಿಳಿಸಿದರು.

ಇದನ್ನೂ ಓದಿ: Bengaluru News: ಬೆಂಗಳೂರಿನಲ್ಲಿ ಜೂ.15ರಂದು ʼನಾರಿ ಸಮ್ಮಾನ್‌ʼ ಪ್ರಶಸ್ತಿ ಪ್ರದಾನ

ವಿಶ್ವ ರಕ್ತದಾನಿಗಳ ದಿನಾಚರಣೆಯನ್ನು ಪ್ರತಿ ವರ್ಷ ಜೂನ್ 14ರಂದು ಜಗತ್ತಿನಾದ್ಯಂತ 2004ರಿಂದ ಆಚರಿಸಿಕೊಂಡು ಬರಲಾಗಿತ್ತಿದೆ. ಪ್ರತಿವರ್ಷದಂತೆ ಈ ವರ್ಷವೂ ಸಹ ವಿಶ್ವರಕ್ತದಾನಿಗಳ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಜಾಥಾ ಮೂಲಕ ಆಚರಿಸಿ, ಸಾರ್ವಜನಿಕರಲ್ಲಿ ರಕ್ತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲಾಯಿತು. ರಕ್ತವನ್ನು ಸಕಾಲದಲ್ಲಿ ಪೂರೈಕೆ ಮಾಡುವ ಮುಖಾಂತರ ಜೀವಗಳನ್ನು ಉಳಿಸಬಹುದು.‌ ಈ ನಿಟ್ಟಿನಲ್ಲಿ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವ ದಾನಿಗಳನ್ನು ಗೌರವಿಸಿ ಇತರರನ್ನು ರಕ್ತದಾನ ಮಾಡುವಂತೆ ಪ್ರೇರೇಪಿಸುವ ನಿಟ್ಟಿನಲ್ಲಿ ಶುಕ್ರವಾರ ಆರೋಗ್ಯ ಇಲಾಖೆ ಹಾಗೂ ಕೆಎಸ್‌ಎಪಿಎಸ್‌ ಸಂಸ್ಥೆಯಿಂದ ಜಾಥಾ ಹಮ್ಮಿಕೊಳ್ಳಲಾಗಿತ್ತು.‌

“20 ವರ್ಷಗಳ ರಕ್ತದಾನದ ಸಂಭ್ರಮಾಚರಣೆ ಸಂದರ್ಭದಲ್ಲಿ ಧನ್ಯವಾದ ರಕ್ತದಾನಿಗಳೆ “Your Gift of Life is Priceless” ಎಂಬ ಘೋಷವಾಖ್ಯದೊಂದಿಗೆ ಈ ಬಾರಿಯ ರಕ್ತದಾನಿಗಳ ದಿನಾಚರಣೆಯನ್ನು ಆಚರಿಸಲಾಯಿತು.

ಇದನ್ನೂ ಓದಿ: Tata Motors: ಪಂಚ್. ಇವಿ, ನೆಕ್ಸಾನ್.ಇವಿಗೆ ಭಾರತ್-ಎನ್‌ಸಿಎಪಿಯಿಂದ 5 ಸ್ಟಾರ್ ರೇಟಿಂಗ್

ಜಾಥಾದಲ್ಲಿ ಪಾಲ್ಗೊಂಡಿದ್ದ ಸಾವಿರಾರು ಸ್ವಯಂ ಸೇವಕರು ರಕ್ತದಾನ ಮಾಡುವ ಕುರಿತು ಪ್ರತಿಜ್ಞೆ ಸ್ವೀಕರಿದರು.

Exit mobile version