Site icon Vistara News

Bengaluru News: ಎಲ್ಲ ಕಾಮಗಾರಿಗಳಿಗೂ ಟೆಂಡರ್‌; ಸಿದ್ದರಾಮಯ್ಯ ಸೂಚನೆ

Youth Empowerment and Sports Department Progress Review Meeting by CM Siddaramaiah

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಮಂಗಳವಾರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ (Bengaluru News) ನಡೆಸಿದರು. ಹೊಸಪೇಟೆ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಹಾಗೂ 120 ತಾಲೂಕುಗಳಲ್ಲಿ ತಾಲೂಕು ಕ್ರೀಡಾಂಗಣಗಳಿಲ್ಲ. ಕಳೆದ ಐದು ವರ್ಷಗಳಲ್ಲಿ ಶೇ.95 ರಷ್ಟು ಕಾಮಗಾರಿಗಳನ್ನು ಕೆ.ಆರ್.ಐ.ಡಿ.ಎಲ್. ಮೂಲಕ ಮಾಡುತ್ತಿದ್ದಾರೆ. ಟೆಂಡರ್‌ ಕರೆಯದೇ ಮಾಡುತ್ತಿದ್ದಾರೆ. ಎರಡು ಕೋಟಿ ಮಿತಿಯಲ್ಲಿ ಕಾಮಗಾರಿಗಳನ್ನು ಸೀಮಿತಗೊಳಿಸಿ, ಅಪೂರ್ಣವಾಗಿರುವಂತಹ ಸ್ಥಿತಿ ಒದಗಿಸಿದೆ ಎಂದು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು ತಿಳಿಸಿದರು.

ಇಲಾಖೆಯ ಕಾಮಗಾರಿಗಳ ಯೋಜನೆ ರೂಪಿಸಲು, ಮೇಲ್ವಿಚಾರಣೆಗೆ ಲೋಕೋಪಯೋಗಿ ಇಲಾಖೆಯಿಂದ ಇಬ್ಬರು ಎಂಜಿನಿಯರುಗಳ ಸೇವೆ ಪಡೆಯುವಂತೆ ಸೂಚಿಸಿದರು. ಎಲ್ಲ ಕಾಮಗಾರಿಗಳನ್ನು ಟೆಂಡರ್‌ ಆಹ್ವಾನಿಸಿಯೇ ಅನುಷ್ಠಾನಗೊಳಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಇದನ್ನೂ ಓದಿ: Karnataka Weather : ಗುಡುಗು, ಸಿಡಿಲಿನ ಮಳೆಗೆ ಮನೆಯ ಗೋಡೆ ಕುಸಿತ; ನಾಳೆಗೂ ಇದೆ ಅಲರ್ಟ್‌

174 ಕೋಚ್‌ಗಳ ನೇಮಕಕ್ಕೆ ಸರ್ಕಾರ ಅನುಮೋದನೆ ನೀಡಿದ್ದು, ವೃಂದ ಮತ್ತು ನೇಮಕಾತಿ ನಿಯಮ ಅಂತಿಮಗೊಳಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ತಿಳಿಸಿದರು. 1486 ಕ್ರೀಡಾಪಟುಗಳಿಗೆ ಕ್ರೀಡಾ ಪ್ರೋತ್ಸಾಹಧನ ನೀಡಲಾಗಿದೆ ಎಂದು ಆಯುಕ್ತರು ತಿಳಿಸಿದರು.

ಬೆಂಗಳೂರಿನಲ್ಲಿ ಬಾಸ್ಕೆಟ್‌ ಬಾಲ್‌ ಹಾಗೂ ಮೈಸೂರಿನಲ್ಲಿ ಸೈಕ್ಲಿಂಗ್‌ ವೆಲೋಡ್ರೋಂ ಘೋಷಣೆ ಬಗ್ಗೆ ಭೂಮಿ ಗುರುತಿಸಲಾಗುತ್ತಿದೆ ಎಂದು ತಿಳಿಸಿದರು. ಕಂಠೀರವ ಕ್ರೀಡಾಂಗಣದಲ್ಲಿ ವಸ್ತು ಸಂಗ್ರಹಾಲಯ ನಿರ್ಮಾಣ ಕುರಿತಂತೆ ಯಾವುದೇ ಕ್ರಮ ಆಗದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಮುಖ್ಯಮಂತ್ರಿಯವರು, ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಆಯುಕ್ತರಿಗೆ ಸೂಚಿಸಿದರು.

ಆಯವ್ಯಯದ ಘೋಷಣೆಗಳ ಕುರಿತಂತೆ ಕೂಡಲೇ ಆದೇಶ ಹೊರಡಿಸುವಂತೆ ಸೂಚಿಸಿದರು. ಪ್ರಸಕ್ತ ಆಯವ್ಯಯದ ಘೋಷಣೆಗಳಿಗೆ ಸಂಬಂಧಿಸಿದಂತೆ ಒಂಬತ್ತು ಘೋಷಣೆಗಳ ಪೈಕಿ ಎಂಟು ಘೋಷಣೆಗಳ ಕುರಿತು ಸರ್ಕಾರಿ ಆದೇಶವಾಗಿದ್ದು, ಒಂದು ಆದೇಶ ಮುಖ್ಯಮಂತ್ರಿಯವರ ಅನುಮೋದನೆಗೆ ಕಡತ ಸಲ್ಲಿಸಲಾಗಿದೆ ಎಂದರು.

ಇದನ್ನೂ ಓದಿ: Migraine Problem: ಮೈಗ್ರೇನ್‌ ಉಪಶಮನಕ್ಕೆ ರೋಸ್‌ಮೆರಿ ಸುಗಂಧ ತೈಲ ಮದ್ದು!

ಸಭೆಯಲ್ಲಿ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಕೆ. ಗೋವಿಂದರಾಜು, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಕಾರ್ಯದರ್ಶಿ ಡಾ. ಕೆ.ವಿ. ತ್ರಿಲೋಕಚಂದ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್‌, ಆಯುಕ್ತ ಶಶಿಕುಮಾರ್‌ ಮತ್ತು ಇತರ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

Exit mobile version