Site icon Vistara News

BS Yediyurappa: ಪೋಕ್ಸೊ ಕೇಸ್;‌ ಜುಲೈ 17ರಂದು ವಿಚಾರಣೆಗೆ ಹಾಜರಾಗುವಂತೆ ಬಿಎಸ್‌ವೈಗೆ ಕೋರ್ಟ್‌ ಸಮನ್ಸ್!

BS Yediyurappa

Bengaluru POCSO Court Issues Summons To BS Yediyurappa In POCSO Case

ಬೆಂಗಳೂರು: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಪೋಕ್ಸೊ ಕೇಸ್‌ (POCSO Case) ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (BS Yediyurappa) ಅವರಿಗೆ ನ್ಯಾಯಾಲಯಕ್ಕೆ ಖುದ್ದು ವಿಚಾರಣೆಗೆ ಹಾಜರಾಗಬೇಕು ಎಂಬುದಾಗಿ ಪೋಕ್ಸೊ ವಿಶೇಷ ಕೋರ್ಟ್‌ ಸಮನ್ಸ್‌ ಜಾರಿಗೊಳಿಸಿದೆ. ಜುಲೈ 17ರಂದು ಬಿ.ಎಸ್.ಯಡಿಯೂರಪ್ಪ ಸೇರಿ ಮೂವರು ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಬೇಖು ಎಂದು ಸಮನ್ಸ್‌ ಜಾರಿ ಮಾಡಿದೆ.

ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್‌ 27ರಂದು ಸಿಐಡಿ ಅಧಿಕಾರಿಗಳು ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ. 75 ಸಾಕ್ಷಿಗಳ ಹೇಳಿಕೆ ಸೇರಿದಂತೆ 750 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಲಾಗಿದೆ. ಬಿ.ಎಸ್‌.ಯಡಿಯೂರಪ್ಪ ವಿರುದ್ಧ ಪೋಕ್ಸೊ ಕಾಯ್ದೆ ಸೆಕ್ಷನ್‌ 8, ಐಪಿಸಿ ಸೆಕ್ಷನ್‌ಗಳಾದ 354(ಎ), 204, 214 ಅಡಿ, 2ನೇ ಆರೋಪಿ ಅರುಣ್‌ ಎಂ.ವೈ, 3ನೇ ಆರೋಪಿ ಎಂ.ರುದ್ರೇಶ್‌ ಮತ್ತು 4ನೇ ಆರೋಪಿ ಜಿ.ಮರಿಸ್ವಾಮಿ ಅವರ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 204, 214ರ ಅಡಿ ಆರೋಪ ಪಟ್ಟಿ ಸಲ್ಲಿಕೆ ಮಾಡಲಾಗಿದೆ.

ಯಡಿಯೂರಪ್ಪ ನಿರ್ದೇಶನದಂತೆ ಆರೋಪಿ ರುದ್ರೇಶ್‌ ಅವರಿಂದ 2 ಲಕ್ಷ ರೂ. ಪಡೆದು ಅದನ್ನು ಸಂತ್ರಸ್ತ ಮಹಿಳೆಗೆ ನೀಡಿ, ಆಕೆಯ ಫೋನ್‌ನಲ್ಲಿನ ಬಿಎಸ್‌ವೈಗೆ ಸಂಬಂಧಿಸಿದ ವಿಡಿಯೊವನ್ನು ಡಿಲೀಟ್‌ ಮಾಡಿಸಿರುವುದು ಮತ್ತು ಅದನ್ನು ಸಾಮಾಜಿಕ ಜಾಲತಾಣದಿಂದ ತೆಗೆಸಿದ ಆರೋಪ ಅರುಣ್ ಮತ್ತು ಮರಿಸ್ವಾಮಿ ಅವರ ಮೇಲಿದೆ. ಇನ್ನು ಯಡಿಯೂರಪ್ಪ ಅವರು ಎಫ್‌ಐಆರ್‌ ರದ್ದತಿ ಕೋರಿ ಹಾಗೂ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಕೆ ಮಾಡಿರುವ ಅರ್ಜಿಗಳು ಹೈಕೋರ್ಟ್‌ನಲ್ಲಿ ವಿಚಾರಣೆಗೆ ಬರಲಿವೆ.

ಏನಿದು ಪ್ರಕರಣ?

2024ರ ಫೆಬ್ರವರಿ 2ರಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಾರ್ಚ್‌ 14ರಂದು ಪೋಕ್ಸೊ ಕಾಯ್ದೆ ಅಡಿಯಲ್ಲಿ ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಇದಾದ ಬಳಿಕ ಬಿ.ಎಸ್.ಯಡಿಯೂರಪ್ಪ ಅವರು ಸಿಐಡಿ ಅಧಿಕಾರಿಗಳ ವಿಚಾರಣೆಗೂ ಹಾಜರಾಗಿದ್ದರು. ಆದರೆ, ಎಫ್‌ಐಆರ್‌ ದಾಖಲಾದ ಮೂರು ತಿಂಗಳ ಬಳಿಕ ಪ್ರಕರಣವೀಗ ಮತ್ತೆ ಮುನ್ನೆಲೆಗೆ ಬಂದಿದೆ. ಜೂನ್‌ 12ರಂದೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಬೇಕು ಎಂಬುದಾಗಿ ಜೂನ್‌ 11ರಂದೇ ಸಿಐಡಿ ಅಧಿಕಾರಿಗಳು ನೋಟಿಸ್‌ ನೀಡಿದ್ದರು.

ಇದನ್ನೂ ಓದಿ: Actress Ramya: ದರ್ಶನ್, ಪ್ರಜ್ವಲ್‌, ಸೂರಜ್, ಯಡಿಯೂರಪ್ಪ ಹೆಸರು ಉಲ್ಲೇಖಿಸಿ ಮತ್ತೆ ಕಿಡಿ ಕಾರಿದ ರಮ್ಯಾ; ಪೋಸ್ಟ್‌ನಲ್ಲಿ ಏನಿದೆ?

Exit mobile version