Site icon Vistara News

Bengaluru Police: ಪೊಲೀಸರು ಇನ್ಮುಂದೆ ರೀಲ್ಸ್‌ ಮಾಡುವಂತಿಲ್ಲ: ಕಮಿಷನರ್ ಖಡಕ್‌ ಎಚ್ಚರಿಕೆ

Bengaluru Police

ಬೆಂಗಳೂರು: ಸಮವಸ್ತ್ರದಲ್ಲಿ ರೀಲ್ಸ್ ಮಾಡುವ ಪೊಲೀಸರಿಗೆ (Bengaluru Police) ಬೆಂಗಳೂರು ನಗರ ಕಮಿಷನರ್ ಬಿ.ದಯಾನಂದ ಅವರು ಬಿಸಿ ಮುಟ್ಟಿಸಿದ್ದಾರೆ. ಪೊಲೀಸ್ ರೀಲ್ಸ್ ಸ್ಟಾರ್‌ಗಳಿಗೆ ಎಚ್ಚರಿಕೆ ನೀಡಿರುವ ಅವರು, ಇಲಾಖೆಗೆ ಸಂಬಂಧಪಡದ ವಿಷಯದಲ್ಲಿ ಸಮವಸ್ತ್ರದಲ್ಲಿ ಅಶಿಸ್ತು ತೋರಿಸುವ ಸಿಬ್ಬಂದಿಗಳ ಮೇಲೆ ನಿಗಾ ಇಡಲು ಸೂಚಿಸಿರುವ ಅವರು, ಪೊಲೀಸ್ ಕರ್ತವ್ಯಗಳಿಗೆ ಸಂಬಂಧಿಸದ ವಿಷಯಗಳಲ್ಲಿ ಪೊಟೋ, ರೀಲ್ಸ್ ಅಪ್ಲೋಡ್ ಮಾಡುವಂತಿಲ್ಲ ಎಂದು ಖಡಕ್‌ ಎಚ್ಚರಿಕೆ ನೀಡಿದ್ದಾರೆ.

ಸಮವಸ್ತ್ರದಲ್ಲಿ ರೀಲ್ಸ್ ಮಾಡುವ ಪೊಲೀಸರಿಗೆ ಶಿಸ್ತು ಕ್ರಮದ ಎಚ್ಚರಿಕೆ ನೀಡಿರುವ ಅವರು, ಇಲಾಖೆಗೆ ಸಂಬಂಧಪಡದೇ ಇರುವ ವಿಷಯಗಳು ಇಲಾಖೆಯ ಘನತೆ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತವೆ. ಪೊಲೀಸ್ ಸಮವಸ್ತ್ರವು ಪೊಲೀಸರ ಬದ್ಧತೆ, ಸಮರ್ಪಣೆ ಮತ್ತು ಹೊಣೆಗಾರಿಕೆಯ ಸಂಕೇತವಾಗಿದೆ. ಡಿಜಿಟಲ್ ಫೋರಮ್‌ ನಲ್ಲಿ ಇದರ ಬಳಕೆಯು ಈ ಮೌಲ್ಯಗಳನ್ನು ಪ್ರತಿಬಿಂಬಿಸುವಂತಿರಬೇಕಾಗುತ್ತದೆ. ಹಾಗಾಗಿ ಸಮವಸ್ತ್ರದಲ್ಲಿ ರೀಲ್ಸ್ ಮಾಡುವವರಿಗೆ ಶಿಸ್ತು ಕ್ರಮದ ಎಚ್ಚರಿಕೆ ನೀಡಲಾಗಿದೆ.

ಬೆಂಗಳೂರು ನಗರ ಕಮಿಷನರ್ ಬಿ.ದಯಾನಂದ

ಸಾಮಾಜಿಕ ಜಾಲತಾಣಗಳಲ್ಲಿ ಇಲಾಖೆ ಹಾಗೂ ಪೊಲೀಸ್ ಕರ್ತವ್ಯಗಳಿಗೆ ಸಂಬಂಧಿಸದ ಯಾವುದೇ ವಿಷಯಗಳ ಕುರಿತು ಸಮವಸ್ತ್ರದಲ್ಲಿರುವ ಫೋಟೊ, ವಿಡಿಯೊ, ರೀಲ್ಸ್‌ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವಂತಿಲ್ಲ. ಕರ್ನಾಟಕ ರಾಜ್ಯ ನಾಗರಿಕ ಸೇವಾ ನಿಯಮ (ನಡತೆ) ಪ್ರಕಾರ ಯಾವುದೇ ಸರ್ಕಾರಿ ನೌಕರನು ಅಧಿಕೃತವಾದ ಯಾವುದೇ ದಾಖಲೆ ಅಥವಾ ಮಾಹಿತಿಯನ್ನು ಮಾದ್ಯಮಗಳು ಅಥವಾ ಸಾಮಾಜಿಕ‌ ಜಾಲತಾಣಗಳಲ್ಲಿ ಹಂಚಿಕೊಳ್ಳುವಂತಿಲ್ಲ. ಸಕ್ಷಮ ಪ್ರಾಧಿಕಾರದಿಂದ ಅಧಿಕೃತ ಮಾನ್ಯತೆ ಪಡೆದ ಅಧಿಕೃತ ಅಧಿಕಾರಿ ಮಾತ್ರವೇ ಸಾಮಾಜಿಕ ಮಾಧ್ಯಮ ಖಾತೆಗಳ ಮೂಲಕ ಅಧಿಕೃತ ಮಾಹಿತಿ ಹಂಚಿಕೊಳ್ಳಲು ಅವಕಾಶವಿದೆ‌. ಆದರೆ, ಪೊಲೀಸ್ ವೃತ್ತಿಗೆ ಸಂಬಂಧ ಪಡದ ವಿಷಯಗಳ ಕುರಿತು ಪೊಲೀಸ್ ಸಮವಸ್ತ್ರದಲ್ಲಿ ಫೋಟೊಗಳು, ವಿಡಿಯೊ, ರೀಲ್ಸ್ ಇತ್ಯಾದಿಗಳನ್ನು ಹರಿಬಿಡದಂತೆ ಜಾಗೃತಗೊಳಿಸುವಂತೆ ಹಾಗೂ ಯಾವುದೆ ಲೋಪ ಕಂಡುಬಂದಲ್ಲಿ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಎಲ್ಲಾ ವಿಭಾಗಗಳ ಡಿಸಿಪಿಗಳಿಗೆ ಸೂಚಿಸಿದ್ದಾರೆ.

ಇದನ್ನೂ ಓದಿ | Attempt Murder case : ಬೆಂಗಳೂರಿನ ಕೋರ್ಟ್‌ ಆವರಣದಲ್ಲೇ ಹರಿದ ನೆತ್ತರು; ವಕೀಲೆಗೆ ಚಾಕು ಹಾಕಿದ ದುಷ್ಟ

ಈ ಬಗ್ಗೆ ಪ್ರತಿಕ್ರಿಯಿಸಿರುವ ಪೊಲೀಸ್ ಆಯುಕ್ತ ಬಿ. ದಯಾನಂದ್ ಅವರು, ಇತ್ತೀಚಿನ ದಿನಗಳಲ್ಲಿ ಪೊಲೀಸ್ ಸಿಬ್ಬಂದಿ ರೀಲ್ಸ್‌ಗಳನ್ನು ಮಾಡುತ್ತಿದ್ದಾರೆ. ಇದು ಹವ್ಯಾಸ, ಚಟವೋ ಗೊತ್ತಿಲ್ಲ, ಇಂತಹವುಗಳು ಇಲಾಖೆಗೆ ಶೋಭೆ ತರುವಂತದಲ್ಲ. ಸಮವಸ್ತ್ರಕ್ಕೆ ಸಮಾಜದಲ್ಲಿ ಅದರದ್ದೇ ಆದಂತಹ ಗೌರವ ಇದೆ. ಕೆಲವರು ತಮ್ಮ ಅಪಾರವಾದ ಪ್ರತಿಭೆಯನ್ನು ತೋರಿಸುತ್ತಿದ್ದಾರೆ. ಹೀಗಾಗಿ ಸಮವಸ್ತ್ರಗಳನ್ನ ಧರಿಸಿ ಆ ರೀಲ್ಸ್ ಗಳನ್ನ ಮಾಡೋದು ಇಲಾಖೆಗೆ ಸರಿಯಾಗೋದಿಲ್ಲ. ಹೀಗಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊ, ರೀಲ್ಸ್‌ಗಳನ್ನ ಹಾಕುವಂತಿಲ್ಲ ಎಂದು ಸೂಚಿಸಲಾಗಿದೆ ಎಂದು ತಿಳಿಸಿದರು.

Exit mobile version