Bengaluru Power Cut: ಬೆಂಗಳೂರಿನಲ್ಲಿ ಇಂದು ಪವರ್‌ ಕಟ್‌- ಈ ಪ್ರದೇಶಗಳಲ್ಲಿ ಕರೆಂಟ್‌ ಇರೋದಿಲ್ಲ - Vistara News

ಕರ್ನಾಟಕ

Bengaluru Power Cut: ಬೆಂಗಳೂರಿನಲ್ಲಿ ಇಂದು ಪವರ್‌ ಕಟ್‌- ಈ ಪ್ರದೇಶಗಳಲ್ಲಿ ಕರೆಂಟ್‌ ಇರೋದಿಲ್ಲ

Bengaluru Power Cut: ಬೆಂಗಳೂರು ನಗರದ ಹಲವೆಡೆ ಇಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಇನ್ನು ಈ ಬಗ್ಗೆ ಬೆಸ್ಕಾಂ ಬೆಂಗಳೂರು ಪೂರ್ವ ವೃತ್ತದ ಅಧೀಕ್ಷಕ ಎಂಜಿನಿಯರ್‌ ಮಾಹಿತಿ ನೀಡಿದ್ದಾರೆ.

VISTARANEWS.COM


on

Bengaluru Power Cut
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಗರದ 66/11 ಕೆ.ವಿ ‘ಬಾಣಸವಾಡಿ’ ಸ್ಟೇಷನ್‌ನಲ್ಲಿ ತುರ್ತು ನಿರ್ವಹಣಾ ಕಾರ್ಯ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು (Bengaluru Power Cut) ನಗರದ ಹಲವೆಡೆ ಇಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಇನ್ನು ಈ ಬಗ್ಗೆ ಬೆಸ್ಕಾಂ(BESCOM) ಬೆಂಗಳೂರು ಪೂರ್ವ ವೃತ್ತದ ಅಧೀಕ್ಷಕ ಎಂಜಿನಿಯರ್‌ ಮಾಹಿತಿ ನೀಡಿದ್ದಾರೆ.

ಯಾವ್ಯಾವ ಸ್ಥಳಗಳಲ್ಲಿ ವಿದ್ಯುತ್‌ ವ್ಯತ್ಯಯ?

ಯಾವ ಯಾವ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ ಎಂಬುದನ್ನು ನೋಡೋದಾದರೆ, ನಗರದ ಹೊರಮಾವು ಪಿ & ಟಿ ಲೇಔಟ್, ನಿಸರ್ಗ ಕಾಲೋನಿ, ನಂದನಂ ಕಾಲೋನಿ, ಆಶೀರ್ವಾದ್ ಕಾಲೋನಿ, ಜ್ಯೋತಿನಗರ, ಆಗರ, ಬಾಲಾಜಿ ಲೇಔಟ್, ಚಿನ್ನಸ್ವಾಮಪ್ಪ ಲೇಔಟ್, ಕೋಕೋನಟ್‌ಗ್ರೋವ್, ದೇವಮತ ಶಾಲೆ, ಅಮರ್‌ ರೀಜೆನ್ಸಿ, ವಿಜಯ ಬ್ಯಾಂಕ್ ಕಾಲೋನಿ, ಎಚ್.ಆರ್.ಬಿ.ಆರ್. ಲೇಔಟ್, 1ನೇ ಬ್ಲಾಕ್, 2ನೇ ಬ್ಲಾಕ್, 3ನೇ ಬ್ಲಾಕ್, ಕಮ್ಮನಹಳ್ಳಿ ಮುಖ್ಯರಸ್ತೆ, ಕಲ್ಯಾಣನಗರ, ಬಿ.ಡಬ್ಲ್ಯು.ಎಸ್. ಎಸ್.ಬಿ ವಾಟರ್‌ ಟ್ಯಾಂಕ್, ಹೆಣ್ಣೂರು ಗ್ರಾಮ, ಚೆಳ್ಳಿಕೆರೆ, ಮೇಘನ ಪಾಳ್ಯ, ಗೆದ್ದಲಹಳ್ಳಿ, ಕೊತ್ತನೂರು, ವಡ್ಡರ ಪಾಳ್ಯ, ಜಾನಕೀರಾಮ್ ಲೇಔಟ್, ಬಿ.ಡಿ.ಎಸ್. ಗಾರ್ಡನ್, ಸತ್ಯ ಎನ್‌ಕ್ಲೇವ್,

ಪ್ರಕೃತಿ ಲೇಔಟ್ ಹೊಯ್ಸಳನಗರ, ಬೃಂದಾವನ ಲೇಔಟ್, ವಿನಾಯಕ ಲೇಔಟ್, ವಿವೇಕಾನಂದ ಲೇಔಟ್, ಮಂಜುನಾಥ ನಗರ ರಸ್ತೆ, ಎನ್.ಆರ್.ಐ ಲೇಔಟ್, ರಿಚಸ್‌ಗಾರ್ಡನ್, ಸುಂದರಾಂಜನೇಯ ದೇವಸ್ಥಾನ, ಡಬಲ್ ರಸ್ತೆ, ಪುಣ್ಯಭೂಮಿ ಲೇಔಟ್, ಸಮದ್ ಲೇಔಟ್, ಯಾಸಿನ್‌ನಗರ, ಪಿ.ಎನ್.ಎಸ್. ಲೇಔಟ್, ಕುಳ್ಳಪ್ಪ ಸರ್ಕಲ್, 5ನೇ ಮುಖ್ಯರಸ್ತೆ, ಎಚ್.ಬಿ.ಆರ್. 2ನೇ ಬ್ಲಾಕ್, ರಾಜ್‌ಕುಮಾರ್ ಪಾರ್ಕ್, ಸಂಗೊಳ್ಳಿ ರಾಯಣ್ಣ ರಸ್ತೆ, ನೆಹರು ರಸ್ತೆ, 80 ಅಡಿ ರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ಮರಿಯಪ್ಪ ಸರ್ಕಲ್, ಕೆ.ಕೆ.ಹಳ್ಳಿ ಡಿಪೋ, ಸಿ.ಎಂ.ಆರ್. ರಸ್ತೆ, ನಂಜುಂಡಪ್ಪ ರಸ್ತೆ, ಕರಾವಳ್ಳಿ ರಸ್ತೆ, ರಾಮಯ್ಯ ಲೇಔಟ್, ಅಜಮಲ್ಲಪ್ಪ ಲೇಔಟ್, ದೊಡ್ಡ ಬಾಣಸವಾಡಿ, ರಾಮಮೂರ್ತಿ ನಗರ ಮುಖ್ಯ ರಸ್ತೆ, ಕೃಷ್ಣರೆಡ್ಡಿ ಲೇಔಟ್, ಗೋಪಾಲರೆಡ್ಡಿ ಲೇಔಟ್, ಚಿಕ್ಕ ಬಾಣಸವಾಡಿ, ಸುಬ್ಬಯ್ಯನಪಾಳ್ಯ, ಓ.ಎಂ.ಬಿ.ಆರ್. 2ನೇ, 5ನೇ, 6ನೇ ಕ್ರಾಸ್, 100 ಅಡಿರಸ್ತೆ ಬಾಣಸವಾಡಿ, ಗ್ರೀನ್ ಪಾರ್ಕ್ ಲೇಔಟ್ ಫ್ಲವರ್‌ ಗಾರ್ಡನ್, ಎಂ.ಎಂ.ಗಾರ್ಡನ್, ದಿವ್ಯಉನ್ನತಿ ಲೇಔಟ್, ಪ್ರಕೃತಿ ಟೌನ್‌ಶಿಪ್, ಮಲ್ಲಪ್ಪ ಲೇಔಟ್ ಮತ್ತು ಸುತ್ತಲಿನ ಪ್ರದೇಶ, ಬೈರತಿ, ಕ್ಯಾಲಸನಹಳ್ಳಿ ಗ್ರಾಮ, ನಕ್ಷತ್ರ ಲೇಔಟ್, ಬೈರತಿ ಬಂಡೆ, ಸಂಗಂ ಎನ್‌ಕ್ಲೇವ್, ಅಥಂ ವಿದ್ಯಾನಗರ, ಬೈರತಿಹಳ್ಳಿ, ಕನಕಶ್ರೀ ಲೇಔಟ್, ಗುಬ್ಬಿ ಕ್ರಾಸ್, ಬಾಬೂಸಾ ಪಾಳ್ಯ, ಬ್ಯಾಂಕ್‌ ಅವೆನ್ಯೂ ಲೇಔಟ್, ನಂಜಪ್ಪ ಗಾರ್ಡನ್, ಸಿ.ಎನ್.ಆರ್. ಲೇಔಟ್, ಆರ್.ಎಸ್.ಪಾಳ್ಯ, ಮುನಿಕಲ್ಲಪ್ಪ ಗಾರ್ಡನ್, ಹನುಮಂತಪ್ಪ ರಸ್ತೆ, ಮುನೆಗೌಡ ರಸ್ತೆ, ಸತ್ಯಮೂರ್ತಿ ರಸ್ತೆ, ಜೆ.ವಿ.ಶೆಟ್ಟಿ ರಸ್ತೆ, ಕುವೆಂಪು ರಸ್ತೆ, ಸದಾಶಿವ ದೇವಸ್ಥಾನದ ರಸ್ತೆ, ಗುರುಮೂರ್ತಿ ರಸ್ತೆ, ಗುಳ್ಳಪ್ಪ ರಸ್ತೆ, ಕಮ್ಮನಹಳ್ಳಿ, ಸಂಪಣ್ಣ ರಸ್ತೆ ಎ.ಡಿ.ಎಂ.ಸಿ. ಮಿಲಿಟರಿ, ಬಂಜಾರ ಲೇಔಟ್, ಎನ್.ಪಿ.ಎಸ್., ಬೆಥೆಲ್‌ ಲೇಔಟ್, ಸಮೃದ್ಧಿ ಲೇಔಟ್, ವಾಟರ್‌ ಟ್ಯಾಂಕ್, ಕಲ್ಕೆರೆ, ಜಯಂತಿನಗರ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ.

ವಿದ್ಯುತ್ ಸಂಬಂಧಿತ ದೂರುಗಳಿಗಾಗಿ ಬೆ.ವಿ.ಕಂ ಸಹಾಯವಾಣಿ ಸಂಖ್ಯೆ ‘1912’ ಸಂಪರ್ಕಿಸಬಹುದಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Karnataka Rain : ಧಾರಾಕಾರ ಮಳೆಗೆ ಕೆರೆಯಂತಾದ ಬೆಂಗಳೂರು-ಹೊಸೂರು ಹೈವೆ; ಡ್ಯಾಡಿಸ್ ಗಾರ್ಡನ್ ಲೇಔಟ್‌ಗೆ ಜಲದಿಗ್ಬಂದನ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Fraud Case: ಅಸಲಿ ಮದುವೆ, ನಕಲಿ ಹೆಣ್ಣು! 3 ವರ್ಷದಲ್ಲಿ 5 ಮದುವೆಯಾಗಿ ವಂಚನೆ; ಮದುಮಗಳು ಮತ್ತು ಗ್ಯಾಂಗ್‌ ಆರೆಸ್ಟ್

fraud case tumkur: ತುಮಕೂರು ಜಿಲ್ಲೆ ಗುಬ್ಬಿ ಪೊಲೀಸರ ಭರ್ಜರಿ ಕಾರ್ಯಾಚರಣೆಯಲ್ಲಿ ತುಮಕೂರು ಸೇರಿದಂತೆ ರಾಜ್ಯದ ಹಲವೆಡೆ ಹಲವರನ್ನು ಯಾಮಾರಿಸಿದ್ದ ತಂಡ ಅಂದರ್ ಆಗಿದೆ. 3 ವರ್ಷದಲ್ಲಿ ಐದು ಮದುವೆ ಮಾಡಿಕೊಂಡಿದ್ದ ಐನಾತಿ ಮದುಮಗಳು ಕೂಡ ಆರೆಸ್ಟ್ ಆಗಿದ್ದಾಳೆ.

VISTARANEWS.COM


on

fraud case tumkur
Koo

ತುಮಕೂರು: ಇದು ಮದುವೆ ಆಲೋಚನೆಯಲ್ಲಿರುವ ಅವಿವಾಹಿತರು ನೋಡಲೇಬೇಕಾದ ಸ್ಟೋರಿ. ಸಿಕ್ಕಿದ್ದೇ ಸೀರುಂಡೆ ಅಂತ ಕಣ್ಮುಚ್ಚಿಕೊಂಡು ಹೆಣ್ಣು ಒಪ್ಪಿಕೊಳ್ಳುವುದಕ್ಕೆ ಮುನ್ನ ಹುಷಾರಾಗಿರಿ. ವಯಸ್ಸು ಮೀರಿ ಹೋಗ್ತಿದೆ ಅಂತ ಆತುರಪಟ್ಟರೆ ಡಿಸೈನ್‌ ಡಿಸೈನ್‌ ಮಕ್ಮಲ್‌ ಟೋಪಿ ಹಾಕಿಸಿಕೊಳ್ಳುವುದು ಗ್ಯಾರಂಟಿ. ಇದು ಅಸಲಿ ಮದುವೆಯಾಗಿ ವಂಚಿಸುವ ನಕಲಿ ಹೆಣ್ಣು ಹಾಗೂ ಗ್ಯಾಂಗ್‌ನ ಕಥೆ.

ಇಲ್ಲಿ ಎಂಟು ಜನ ಹುಡುಗಿ ಕಡೆಯವರು ಬರುತ್ತಾರೆ. ಹೆಣ್ಣು ತೋರಿಸುತ್ತಾರೆ. ಮದುವೆಯನ್ನೂ ಮಾಡಿಸುತ್ತಾರೆ. ಮದುವೆಯಾದ ನಾಲ್ಕೇ ದಿನಕ್ಕೆ ಮದುಮಗಳು ವರನ ಮನೆಯಲ್ಲಿದ್ದ ಹಣ, ಒಡವೆಯನ್ನೆಲ್ಲ ಎತ್ತಿಕೊಂಡು ಪರಾರಿಯಾಗ್ತಾಳೆ. ತುಮಕೂರಿನಲ್ಲಿ ಇಂಥ ದೋಖಾ ಮ್ಯಾರೇಜ್ ಕಂಪನಿ ಪತ್ತೆಯಾಗಿದೆ. ಮದುವೆ ವಯಸ್ಸು ಮೀರಿದ ಯುವಕರೇ ಈ ದೋಖಾ ಗ್ಯಾಂಗಿನ ಟಾರ್ಗೆಟ್ ಆಗಿದ್ದು, ಮದುವೆ ಹೆಸರಲ್ಲಿ ವಂಚನೆ ಮಾಡುತ್ತಿದ್ದ ತಂಡವನ್ನು ಪೊಲೀಸರು ಜೈಲಿಗಟ್ಟಿದ್ದಾರೆ.

ತುಮಕೂರು ಜಿಲ್ಲೆ ಗುಬ್ಬಿ ಪೊಲೀಸರ ಭರ್ಜರಿ ಕಾರ್ಯಾಚರಣೆಯಲ್ಲಿ ತುಮಕೂರು ಸೇರಿದಂತೆ ರಾಜ್ಯದ ಹಲವೆಡೆ ಹಲವರನ್ನು ಯಾಮಾರಿಸಿದ್ದ ತಂಡ ಅಂದರ್ ಆಗಿದೆ. 3 ವರ್ಷದಲ್ಲಿ ಐದು ಮದುವೆ ಮಾಡಿಕೊಂಡಿದ್ದ ಐನಾತಿ ಮದುಮಗಳು ಕೂಡ ಆರೆಸ್ಟ್ ಆಗಿದ್ದಾಳೆ.

ಏನಿದು ಪ್ರಕರಣ?

ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಅತ್ತಿಗಟ್ಟೆ ಗ್ರಾಮದಲ್ಲಿ ಇಂಥದೊಂದು ವಂಚನೆಯ ಮದುವೆ ನಡೆದಿತ್ತು. ಗ್ರಾಮದ ಪಾಲಾಕ್ಷಯ್ಯ ಎಂಬವರು ತಮ್ಮ ಮಗ ದಯಾನಂದಮೂರ್ತಿಗೆ 37 ವರ್ಷ ದಾಟಿದರೂ ಹೆಣ್ಣು ಸಿಗದೇ ನೊಂದಿದ್ದರು. ಕುಷ್ಟಗಿ ಮೂಲದ ಬಸವರಾಜು ಎಂಬಾತನ ಮೂಲಕ ಹುಬ್ಬಳ್ಳಿಯ ಲಕ್ಷ್ಮಿ ಎಂಬಾಕೆಯ ಪರಿಚಯವಾಗಿತ್ತು. ಮದುವೆ ಬ್ರೋಕರ್‌ ಕೆಲಸ ಮಾಡುತ್ತಿದ್ದ ಲಕ್ಷ್ಮಿ ಬಳಿ ಮಗನಿಗೆ ಹೆಣ್ಣು ತೋರಿಸುವಂತೆ ಪಾಲಾಕ್ಷಯ್ಯ ಕೇಳಿಕೊಂಡಿದ್ದರು.

ಇವರ ಪರಿಸ್ಥಿತಿ ನೋಡಿ ಮೋಸ ಮಾಡುವ ತೀರ್ಮಾನ ಮಾಡಿದ ಲಕ್ಷ್ಮೀ, ಹುಬ್ಬಳ್ಳಿಯಲ್ಲಿ ಒಬ್ಬಳು ಒಳ್ಳೆ ಹುಡುಗಿ ಇದ್ದಾಳೆ. ಆಕೆಗೆ ತಂದೆ-ತಾಯಿ ಇಲ್ಲ. ನೀವೇ ಮದುವೆ ಮಾಡಿಕೊಳ್ಳಬೇಕೆಂದು ಸುಳ್ಳು ಹೇಳಿದ್ದಳು. ಕೋಮಲಾ ಎಂಬ ಹೆಸರಿನಲ್ಲಿ ಹುಡುಗಿಯ ಫೋಟೋ ಕಳುಹಿಸಿದ್ದಳು. ಬಳಿಕ ಹುಡುಗಿಯನ್ನು ಗಂಡಿನ ಮನೆಗೆ ಕರೆದುಕೊಂಡು ಬಂದಿದ್ದಳು. ಆಕೆಯ ಸಂಬಂಧಿಕರು ಎಂದು ಇನ್ನೂ ಐದಾರು ಜನರನ್ನು ಕರೆತಂದಿದ್ದಳು.

ಕಳೆದ ವರ್ಷ ನವೆಂಬರ್‌ 11ರಂದು ಅತ್ತಿಗಟ್ಟೆಗೆ ಬಂದಿದ್ದ ನಕಲಿ ಕುಟುಂಬ ಅಂದೇ ಮದುವೆ ಮಾತುಕತೆ ನಡೆಸಿತ್ತು. ಮರುದಿನ ಮುಂಜಾನೆಯೇ ಮದುವೆಯನ್ನೂ ಮಾಡಿ ಮುಗಿಸಿದ್ದರು. ಮಗನಿಗೆ ಹೆಣ್ಣು ಸಿಗದೇ ಹೈರಾಣಾಗಿದ್ದ ದಯಾನಂದಮೂರ್ತಿ ಕುಟುಂಬ ದಿಢೀರ್‌ ಮದುವೆಗೆ ಒಪ್ಪಿಕೊಂಡು ಗ್ರಾಮದಲ್ಲಿ ಮದುವೆ ಮಾಡಿದ್ದರು. ಹೆಣ್ಣು ಸಿಕ್ಕ ಖುಷಿಯಲ್ಲಿ ಹಿಂದೆಮುಂದೆ ಯೋಚಿಸದೆ ಮದುವೆ ಮಾಡಿಸಿದ್ದರು. ಮದುವೆಗೆ ಸುಮಾರು 200ಕ್ಕೂ ಹೆಚ್ಚು ಜನ ಸೇರಿದ್ದು, ಹೆಣ್ಣಿಗೆ ಚಿನ್ನದ ಸರ, ತಾಳಿ, ಕಿವಿಗೆ ಓಲೆ ನೀಡಿದ್ದರು.

ವಧುವಿಗೆ 25 ಗ್ರಾಂ ಚಿನ್ನಾಭರಣ ಹಾಕಲಾಗಿತ್ತು. ಹೆಣ್ಣು ತೋರಿಸಿದ ಬ್ರೋಕರ್‌ ಲಕ್ಷ್ಮಿಗೆ 1.5 ಲಕ್ಷ ಹಣ ನೀಡಿದ್ದರು. ಹೆಣ್ಣಿನ ಕಡೆಯವರು ಅಂತ 8 ಜನರನ್ನು ಬ್ರೋಕರ್‌ ಲಕ್ಷ್ಮಿ ಕರೆ ತಂದಿದ್ದಳು. ಮದುವೆ ಮುಗಿದ ಎರಡು ದಿನದ ನಂತರ ಸಂಪ್ರದಾಯದ ನೆಪ ಹೇಳಿ ಹಣ-ಚಿನ್ನದ ಒಡವೆ ಸಹಿತ ಮದುಮಗಳನ್ನ ಕರೆದುಕೊಂಡು ಹೋಗಿದ್ದರು. ವಾರ ಕಳೆದರೂ ಸೊಸೆ ವಾಪಸ್‌ ಬಂದಿರಲಿಲ್ಲ.

ಆತಂಕಗೊಂಡ ಪಾಲಾಕ್ಷಯ್ಯ ಹುಬ್ಬಳ್ಳಿಗೆ ಹೋಗಿ ವಿಚಾರಿಸಿದಾಗ, ನಡೆದದ್ದು ನಕಲಿ ಮದುವೆ, ಬಂದವರು ದೋಖಾ ಗಿರಾಕಿಗಳು ಎಂಬ ಸತ್ಯ ಬಯಲಾಗಿದೆ. ವಾಪಸ್‌ ಗುಬ್ಬಿಗೆ ಬಂದ ಪಾಲಾಕ್ಷಯ್ಯ ಎಲ್ಲರ ವಿರುದ್ಧ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಗುಬ್ಬಿ ಪೊಲೀಸರು ತನಿಖೆ ನಡೆಸಿದ್ದರು. ಒಂದು ವರ್ಷದಿಂದ ದೋಖಾ ಕುಟುಂಬ ತಲೆ ಮರೆಸಿಕೊಂಡಿತ್ತು. ಮಹಾರಾಷ್ಟ್ರ, ಹುಬ್ಬಳ್ಳಿ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಮದುಮಗಳು ಕೋಮಲಾ @ ಲಕ್ಷ್ಮೀ ಬಾಳಸಾಬ್ ಜನಕರ, ಚಿಕ್ಕಪ್ಪ ಪಾತ್ರಧಾರಿ ಸಿದ್ದಪ್ಪ, ಚಿಕ್ಕಮ್ಮ ಪಾತ್ರಧಾರಿ ಲಕ್ಷ್ಮೀಬಾಯಿ, ಬ್ರೋಕರ್ ಲಕ್ಷ್ಮಿ ಬಂಧಿತರು.

ಮದುವೆ ಹೆಸರಲ್ಲಿ ವಂಚಿಸಲು ನಕಲಿ ಆಧಾರ್‌ ಕಾರ್ಡ್‌ ಅನ್ನೂ ಈ ತಂಡ ಸೃಷ್ಟಿ ಮಾಡಿಕೊಂಡಿತ್ತು. ಮದುವೆ ಹೆಸರಲ್ಲಿ ವಂಚನೆ ಮಾಡುವುದನ್ನೇ ವೃತ್ತಿ ಮಾಡಿಕೊಂಡಿದ್ದ ತಂಡ, ಆಧಾರ್ ಕಾರ್ಡ್ ತೋರಿಸಿ ಗಂಡಿನ‌ ಮನೆಯವರನ್ನ ನಂಬಿಸುತ್ತಿದ್ದರು. ಮೂರು ವರ್ಷದಲ್ಲಿ ನಾಲ್ಕು ಮಂದಿ ಪುರುಷರಿಗೆ ಮದುವೆ ಹೆಸರಿನಲ್ಲಿ ಹೀಗೆ ವಂಚಿಸಿದೆ. ಸಂಪ್ರದಾಯದಂತೆ ಮದುವೆ ಮಾಡಿಸಿ, ನಂಬಿಸಿ ಮೋಸ ಮಾಡುವ ಈ ಪ್ರಕರಣದಲ್ಲಿ ಬ್ರೋಕರ್‌ ಲಕ್ಷ್ಮೀ ಇಡೀ ಪ್ರಕರಣದ ಸೂತ್ರಧಾರಿ. ಮದುಮಗಳಿಗೆ ಈಗಾಗಲೇ ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ. ಚಿಕ್ಕಪ್ಪ-ಚಿಕ್ಕಮ್ಮನ ಹೆಸರಿನಲ್ಲಿ ಬಂದಿದ್ದವರು ಕೂಡ ನಕಲಿಗಳು. ಸದ್ಯ ನಾಲ್ವರನ್ನೂ ಬಂಧಿಸಿ ಗುಬ್ಬಿ ಪೊಲೀಸರು ಜೈಲಿಗಟ್ಟಿದ್ದಾರೆ.

ಇದನ್ನೂ ಓದಿ: Raichur News: ಶಿಕ್ಷಕಿಗೆ ಅಶ್ಲೀಲ ಮೆಸೇಜ್‌ ಕಳಿಸಿದ ಪ್ರಭಾರಿ ಪ್ರಾಚಾರ್ಯನಿಗೆ ಧರ್ಮದೇಟು

Continue Reading

ಕ್ರೈಂ

Raichur News: ಶಿಕ್ಷಕಿಗೆ ಅಶ್ಲೀಲ ಮೆಸೇಜ್‌ ಕಳಿಸಿದ ಪ್ರಭಾರಿ ಪ್ರಾಚಾರ್ಯನಿಗೆ ಧರ್ಮದೇಟು

Raichur News: ಮೆಹಬೂಬ್ ಅಲಿ ಎಂಬಾತನೇ ಏಟು ತಿಂದ ಪ್ರಭಾರಿ ಪ್ರಾಚಾರ್ಯ. ಈತ ಶಿಕ್ಷಕಿಯ ಮೊಬೈಲ್‌ಗೆ ಅಶ್ಲೀಲ ಮೆಸೇಜ್‌ಗಳನ್ನು ಕಳಿಸುತ್ತಿದ್ದನಲ್ಲದೆ, ರಾತ್ರಿ ಮಲಗಲು ಬಾ ಎಂದೂ ಕರೆದಿದ್ದ.

VISTARANEWS.COM


on

raichur news misbehave
Koo

ರಾಯಚೂರು: ರಾಯಚೂರು ನಗರ (Raichur news) ಸಮೀಪದ ಯರಮರಸ್ ಬಳಿಯ ಆದರ್ಶ ವಿದ್ಯಾಲಯದ ಪ್ರಭಾರಿ ಪ್ರಾಚಾರ್ಯನೊಬ್ಬ (Principal in charge) ತರಬೇತಿಗೆ ಬಂದಿದ್ದ ಶಿಕ್ಷಕಿ ಜತೆ ಅನುಚಿತವಾಗಿ (Misbehave) ವರ್ತಿಸಿದ್ದರಿಂದ ಥಳಿತಕ್ಕೊಳಗಾದ (Beaten) ಘಟನೆ ಸೋಮವಾರ ನಡೆದಿದೆ.

ಮೆಹಬೂಬ್ ಅಲಿ ಎಂಬಾತನೇ ಏಟು ತಿಂದ ಪ್ರಭಾರಿ ಪ್ರಾಚಾರ್ಯ. ಈತ ಶಿಕ್ಷಕಿಯ ಮೊಬೈಲ್‌ಗೆ ಅಶ್ಲೀಲ ಮೆಸೇಜ್‌ಗಳನ್ನು ಕಳಿಸುತ್ತಿದ್ದನಲ್ಲದೆ, ರಾತ್ರಿ ಮಲಗಲು ಬಾ ಎಂದೂ ಕರೆದಿದ್ದ. ಇದರಿಂದ ನೊಂದ ಶಿಕ್ಷಕಿ ತಮ್ಮವರಿಗೆ ಮಾಹಿತಿ ತಿಳಿಸಿದ್ದರು. ಶಾಲೆಗೆ ಬಂದ ಶಿಕ್ಷಕಿಯ ಬಂಧುಗಳು, ಸಾರ್ವಜನಿಕರು ಪ್ರಭಾರ ಪ್ರಾಚಾರ್ಯನಿಗೆ ಚೆನ್ನಾಗಿ ಥಳಿಸಿ ಬುದ್ಧಿ ಕಲಿಸಿದ್ದಾರೆ.

ಪ್ರಭಾರಿ ಪ್ರಾಚಾರ್ಯ ಮೆಹಬೂಬ್ ಅಲಿ, ತಾನು ಮಾಡಿದ್ದು ತಪ್ಪಾಗಿದೆ. ಇನ್ನು ಮುಂದೆ ಹಾಗೆ ಮಾಡುವುದಿಲ್ಲ ಎಂದು ಮುಚ್ಚಳಿಕೆ ಬರೆದುಕೊಟ್ಟಿದ್ದಾನೆ. ಶಿಕ್ಷಕಿಯ ಕಾಲಿಗೆ ಬಿದ್ದು ಕ್ಷಮೆ ಕೇಳಿದ್ದಾನೆ. ಈ ಕುರಿತು ಗ್ರಾಮೀಣ ಠಾಣೆ ಅಥವಾ ಮಹಿಳಾ ಠಾಣೆಯಲ್ಲಾಗಲಿ ಯಾವುದೇ ಪ್ರಕರಣ ದಾಖಲಾಗಿಲ್ಲ.

ಬೆಂಗಳೂರಿನಲ್ಲಿ ಮತ್ತೊಬ್ಬ ಟೆಕ್ಕಿ ಮಿಸ್ಸಿಂಗ್‌! ಪತಿಯನ್ನು ಹುಡುಕಿಕೊಡಿ ಎಂದು ಅಂಗಲಾಚಿದ ಪತ್ನಿ

ಬೆಂಗಳೂರು: ಈ ಹಿಂದೆ ಕೂಡ ಟೆಕ್ಕಿಯೊಬ್ಬರು (Techie Missingನಿಗೂಢವಾಗಿ ನಾಪತ್ತೆಯಾಗಿದ್ದರು. ಇದರ ಬೆನ್ನಲ್ಲೇ ಎಟಿಎಂನಲ್ಲಿ ಹಣ ಡ್ರಾ ಮಾಡಲು ಹೋದ ಮತ್ತೊಬ್ಬ ಟೆಕ್ಕಿ ನಾಪತ್ತೆಯಾಗಿದ್ದಾರೆ. ಪತಿಯನ್ನು ಹುಡುಕಿ ಕೊಡಿ ಪ್ಲೀಸ್‌ ಅಂತ ಪತ್ನಿ ಬೇಡಿಕೊಳ್ಳುತ್ತಿದ್ದಾರೆ.

ವಿಪುಲ್ ಗುಪ್ತಾ ಎಂಬ ಟೆಕ್ಕಿ ಕಾಣೆಯಾದವರು. ಆತ ಹೊರಗೆ ಹೋಗಿದ್ದಕ್ಕೆ ಸುಳಿವು ಎಂಬಂತೆ ಒಂದು ಸಿಸಿಟಿವಿ ವಿಡಿಯೋ ಬಿಟ್ಟರೆ, ಎಲ್ಲಿ ಹೋದ ಎಂಬ ಮಾಹಿತಿ ಮಾತ್ರ ಕಿಂಚಿತ್ತು ಕುಟುಂಬಸ್ಥರಿಗಿಲ್ಲ. ಪತಿಯನ್ನು ಹುಡುಕಿಕೊಡಿ ಎಂದು ಪತ್ನಿ ಶ್ರೀಪರ್ಣದತ್ತ ಗೋಗರೆಯುತ್ತಿದ್ದಾರೆ.

ಸೋಲೋ ರೈಡ್‌ಗೆ ಹೋಗುತ್ತಿದ್ದವನ ಸುಳಿವೇ ಇಲ್ಲ!

ಈ ಹಿಂದೆ ಅಮಿತಾಬ್ ಎಂಬ ಟೆಕ್ಕಿ ಕೂಡ ಇದೇ ರೀತಿ ನಿಗೂಢವಾಗಿ ನಾಪತ್ತೆಯಾಗಿದ್ದ . ಆದರೆ ಆತನ ಸುಳಿವು ಇಂದಿಗೂ ಸಿಕ್ಕಿಲ್ಲ. ಇನ್ನು ಕೊಡಿಗೇಹಳ್ಳಿಯ ಟಾಟಾ ನಗರ ನಿವಾಸಿಯಾಗಿರುವ ವಿಪುಲ್‌ಗೆ ಇಬ್ಬರು ಮಕ್ಕಳಿದ್ದಾರೆ. ಪತಿ -ಪತ್ನಿ ಇಬ್ಬರಿಗೂ ಪೋಷಕರಿಲ್ಲ. ಆದರೂ ದುಡಿದು ತಮ್ಮ ಸಂಸಾರ ಸಾಗಿಸುತ್ತಿದ್ದರು. ಶ್ರೀಮಂತಿಕೆ ಇಲ್ಲದಿದ್ದರೂ ಜೀವನಕ್ಕಾಗುವಷ್ಟು ಸಿರಿವಂತರೇ ಆಗಿದ್ದರು. ಅಂತಹ ಕುಟುಂಬದಲ್ಲಿ ಏಕಾಏಕಿ ಪತಿ ಕಾಣೆಯಾಗಿರುವುದು ಪತ್ನಿ ಶ್ರೀಪರ್ಣ ದತ್ತಾಳಿಗೆ ನಿಜಕ್ಕೂ ಆತಂಕ ಮೂಡಿಸಿದೆ.

ವಿಪುಲ್‌ ಕಾಣೆಯಾಗಿ ಹೆಚ್ವು ಕಮ್ಮಿ ಎಂಟು ದಿನಗಳಾಗಿದೆ. ಆಗಸ್ಟ್ 4ರಂದು ಮನೆ ಪಕ್ಕದಲ್ಲಿರುವ ಹೆಚ್ ಡಿ ಎಫ್ ಸಿ ಬ್ಯಾಂಕ್‌ನಲ್ಲಿ ಒಟ್ಟು 1,80,000 ರೂ. ಹಣ ಡ್ರಾ ಮಾಡಿದ್ದಾರೆ. ನಂತರ ನಿಂಜಾ ಬೈಕ್ ತೆಗೆದುಕೊಂಡು ಹೊರ ಹೋದವನ ಸುಳಿವೂ ಕೂಡ ಇರಲಿಲ್ಲ. ಎಲ್ಲಿಗಾದರೂ ಹೋಗುವಾಗ ಪತ್ನಿಗೆ ಹೇಳಿ ಹೋಗಿದ್ದರಂತೆ. ಆದರೆ ಈ ಬಾರಿ ಯಾರಿಗೂ ವಿಚಾರ ತಿಳಿಸದೆ ಮನೆಯಿಂದ ಹೊರ ಹೋಗಿದ್ದಾರೆ. ರಾತ್ರಿಯಾದರೂ ಬಾರದ ಹಿನ್ನೆಲೆ ಮೊಬೈಲ್‌ ನಂಬರ್‌ಗೆ ಕರೆ ಮಾಡಿದಾಗ ಸ್ವಿಚ್ ಆಫ್ ಬಂದಿದೆ. ಆತನ ಸ್ನೇಹಿತರಿಗೂ ಕರೆ ಮಾಡಿ ಕೇಳಿದಾಗ ಅವರ್ಯಾರಿಗೂ ವಿಪುಲ್ ಬಗ್ಗೆ ಮಾಹಿತಿಯೇ ಇರಲಿಲ್ಲ.

ಇದನ್ನೂ ಓದಿ: Murder Case : ಶೆಡ್ಡಿಗೆ ಬಾರೋ ಎಂದ ಸ್ನೇಹಿತ; ಮಲಗಿದ್ದವನ ತಲೆ ಮೇಲೆ ಕಲ್ಲು ಎತ್ತಿಹಾಕಿ ಭೀಕರ ಕೊಲೆ

Continue Reading

ಪ್ರಮುಖ ಸುದ್ದಿ

Tungabhadra Dam: ತುಂಗಭದ್ರಾ ಜಲಾಶಯದಿಂದ 15 ಟಿಎಂಸಿ ನೀರು ವ್ಯರ್ಥ; ಇಂದು ಸಿಎಂ ಸಿದ್ದರಾಮಯ್ಯ ಭೇಟಿ

Tungabhadra Dam: ಆಡಂಬರದಿಂದ ಇರಬೇಕಾದ ಜಲಾಶಯದಲ್ಲೀಗ ನೀರವ ಮೌನ ಕವಿದಿದ್ದು, ಇಂದು ನಡೆಯಬೇಕಿದ್ದ ಸಿಎಂ ಬಾಗಿನ ಕಾರ್ಯಕ್ರಮ ರದ್ದಾಗಿದೆ. ಆದರೆ ಸಿಎಂ ಭೇಟಿ ನೀಡಿ ಕ್ರೆಸ್ಟ್‌ ಗೇಟ್‌ ಅನಾಹುತ ಪರಿಶೀಲನೆ ನಡೆಸಲಿದ್ದಾರೆ.

VISTARANEWS.COM


on

tungabhadra dam 19 crest gate
Koo

ವಿಜಯನಗರ: ತುಂಗಭದ್ರಾ ಅಣೆಕಟ್ಟಿನ ಕ್ರೆಸ್ಟ್‌ ಗೇಟ್ (Tungabhadra Dam Crest gate) ಕಿತ್ತು ಹೋದ (Crest gate crash) ಪರಿಣಾಮ ಅನ್ಯಾಯವಾಗಿ 15 ಟಿಎಂಸಿ (TMC) ನೀರು ಯಾವ ಉಪಯೋಗಕ್ಕೂ ಬಾರದೆ ನದಿಪಾಲಾಗಿದೆ. ಇಂದು ನಡೆಯಬೇಕಿದ್ದ ಸಿಎಂ ಬಾಗಿನ ಕಾರ್ಯಕ್ರಮ ರದ್ದುಪಡಿಸಲಾಗಿದೆ. ಆದರೆ ಸಿಎಂ ಸಿದ್ದರಾಮಯ್ಯ (CM Siddaramaiah) ಭೇಟಿ ನೀಡಿ ವಸ್ತುಸ್ಥಿತಿ ಪರಿಶೀಲಿಸಲಿದ್ದಾರೆ.

ತುಂಗಭದ್ರಾ ಜಲಾಶಯ 105.788 ಟಿಎಂಸಿ ಸಂಗ್ರಹಣಾ ಸಾಮರ್ಥ್ಯ ಹೊಂದಿದೆ. ಭರಪೂರ ಮಳೆಯ ಪರಿಣಾಮ ಡ್ಯಾಮ್‌ ಪೂರ್ತಿಯಾಗಿ ತುಂಬಿತ್ತು. ಗೇಟ್ ಕೊಚ್ಚಿಹೋದ ದಿನ 105.788 ಟಿಎಂಸಿ ನೀರು ಸಂಗ್ರಹ ಇತ್ತು. ಅಂದಿನಿಂದ ಸದ್ಯದವರೆಗೆ 14ರಿಂದ 15 ಟಿಎಂಸಿಗೂ ಅಧಿಕ ನೀರು ನದಿ ಪಾಲಾಗಿದೆ. ಗೇಟ್ ಕಿತ್ತುಹೋಗಿದ್ದರಿಂದ ಯಾವುದೇ ಉಪಯೋಗಕ್ಕೆ ಬಾರದೇ ಜಲಾಶಯದ ನೀರು ಹರಿದುಹೋಗಿದೆ.

ತುಂಗಭದ್ರಾ ಜಲಾಶಯಕ್ಕೆ ಒಳಹರಿವು 35 ಸಾವಿರ ಕ್ಯೂಸೆಕ್ ಇದ್ದರೆ, ಹೊರಹರಿವು 1.09 ಲಕ್ಷ ಇದೆ. 105788 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲೀಗ 91 ಟಿಎಂಸಿ ನೀರು ಸಂಗ್ರಹವಾಗಿದೆ.

ಚೈನ್ ಲಿಂಕ್ ಕಟ್ ಆದಾಗಿನಿಂದ ಇಲ್ಲಿಯವರೆಗೆ ಟಿಬಿ ಬೋರ್ಡ್ ಯಾವುದೇ ದುರಸ್ತಿಗೆ ಮುಂದಾಗಿಲ್ಲ. 19ನೇ ಗೇಟ್‌ ಪೂರ್ತಿ ಹಾಳಾಗಿದ್ದು, ಹೊಸ ಗೇಟ್ ಕೂರಿಸಬೇಕು ಅಂದರೆ ಜಲಾಶಯದ ಅರ್ಧ ನೀರು ಖಾಲಿ ಆಗಲೇಬೇಕು. ಆಗ ಮಾತ್ರ ಗೇಟ್ ದುರಸ್ತಿ ಮಾಡೋದಕ್ಕೆ ಸಾಧ್ಯ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಅಂದರೆ ಮುಂದಿನ ಮೇ ತಿಂಗಳವರೆಗೂ ಇದರ ದುರಸ್ತಿ ಮಾಡಲು ಸಾದ್ಯವಿಲ್ಲದಾಗಿದೆ.

2022ರಲ್ಲೂ 19ನೇ ಗೇಟ್‌ಗೆ ಬಂದಿತ್ತು ಕಂಟಕ

2022ರಲ್ಲೂ 19ನೇ ಗೇಟ್‌ನಲ್ಲಿ ದೋಷ ಕಂಡುಬಂದಿತ್ತು. ತಾಂತ್ರಿಕ ದೋಷ ಕಂಡುಬಂದದ್ದರಿಂದ ಆ ಗೇಟ್ ಮೂಲಕ ನೀರು ಬಿಡುವುದನ್ನು ಸ್ಥಗಿತಗೊಳಿಸಲಾಗಿತ್ತು. ದೋಷ ನಿವಾರಿಸಿ, ಗೇಟ್ ಉಪಯೋಗಿಸಬೇಡಿ ಎಂದು ತಂತ್ರಜ್ಞರು ಸೂಚನೆ ಕೊಟ್ಟಿದ್ದರು. ಕಳೆದ ವರ್ಷ ಬರಗಾಲದಿಂದ ತುಂಗಭದ್ರಾ ಜಲಾಶಯ ತುಂಬಲೇ ಇಲ್ಲ. ಆಗ ಗೇಟ್‌ ಸರಿಪಡಿಸಲು ಸೂಕ್ತವಾದ ಕಾಲವಾಗಿತ್ತು. ಆದರೆ ತೊಂದರೆ ಬಗ್ಗೆ ಎಚ್ಚೆತ್ತುಕೊಂಡು ಸೂಕ್ತ ನಿರ್ವಹಣೆ ಮಾಡಿ ಕ್ರಮ ಕೈಗೊಳ್ಳಬೇಕಿದ್ದ ಅಧಿಕಾರಿಗಳು ಏನೂ ಮಾಡಿರಲಿಲ್ಲ.

ಮುಂಜಾಗ್ರತೆ ಕೈಗೊಂದು ಗೇಟ್ ಸರಿಯಾಗಿ ದುರಸ್ತಿ ಮಾಡಿಸಿದ್ದರೆ ಈ ದುರಂತ ಸಂಭವಿಸುತ್ತಿರಲಿಲ್ಲ. ಇದು ಅಧಿಕಾರಿಗಳ ಬೇಜವಾಬ್ದಾರಿ ಮತ್ತು ಹೊಣಿಗೇಡಿತನದ ಪರಿಣಾಮ. ದಿವ್ಯ ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ತಲೆದಂಡ ಆಗಬೇಕು ಎಂದು ರೈತ ಸಂಘಟನೆಗಳು, ಅನ್ನದಾತರು, ಸಾರ್ವಜನಿಕರು ಆಗ್ರಹಿಸಿದ್ದಾರೆ.

ಇಂದು ಸಿಎಂ ತುಂಗಭದ್ರಾ ಜಲಾಶಯ ವೀಕ್ಷಣೆ

ಇಂದು ಸಿಎಂ ಸಿದ್ದರಾಮಯ್ಯ ಅವರು ಜಲಾಶಯಕ್ಕೆ ಭೇಟಿ ನೀಡಿ ಚೈನ್ ಲಿಂಕ್ ಕಟ್ ಆಗಿ ಹಾನಿಗೊಳಗಾದ ಗೇಟ್ ಮತ್ತು ಜಲಾಶಯ ಪರಿಶೀಲಿಸಲಿದ್ದಾರೆ. ಬೆಳಗ್ಗೆ 11.00ಕ್ಕೆ HAL ವಿಮಾನ ನಿಲ್ದಾಣದಿಂದ ಟೇಕಾಫ್‌ ಆಗಲಿರುವ ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್‌, 12.15ಕ್ಕೆ ಕೊಪ್ಪಳ ತಾಲೂಕಿನ ಗಿಣಗೇರಾ ಹೆಲಿಪ್ಯಾಡ್‌ಗೆ ತಲುಪಲಿದೆ. ಬಳಿಕ ರಸ್ತೆ ಮಾರ್ಗವಾಗಿ 12.30ಕ್ಕೆ ಹೊಸಪೇಟೆ ಬಳಿಯಿರುವ ತುಂಗಭದ್ರಾ ಜಲಾಶಯಕ್ಕೆ ಬರಲಿದ್ದಾರೆ.

ಜಲಾಶಯ ವೀಕ್ಷಣೆ ಬಳಿಕ ಹೊಸಪೇಟೆಯ ವೈಕುಂಠ ಅತಿಥಿ ಗೃಹದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಗೇಟ್ ಯಾಕೆ ಸಮಸ್ಯೆ ಆಯ್ತು, ದುರಸ್ತಿ ಮಾಡುವುದು ಹೇಗೆ ಇತ್ಯಾದಿ ಮಾಹಿತಿ ಪಡೆಯಲಿದ್ದಾರೆ. ನಂತರ ಮಾಜಿ ಸಂಸದ ಸಂಗಣ್ಣ ಕರಡಿ ಮನೆಗೆ ಊಟಕ್ಕೆ ತೆರಳಲಿದ್ದಾರೆ. ಸಂಜೆ 4ಕ್ಕೆ ಬೆಂಗಳೂರಿಗೆ ಮರಳಲಿದ್ದಾರೆ.

ಸಿಎಂ ಬಾಗಿನ ಇಲ್ಲ

ಆಡಂಬರದಿಂದ ಇರಬೇಕಾದ ಜಲಾಶಯದಲ್ಲೀಗ ನೀರವ ಮೌನ ಕವಿದಿದ್ದು, ಇಂದು ನಡೆಯಬೇಕಿದ್ದ ಸಿಎಂ ಬಾಗಿನ ಕಾರ್ಯಕ್ರಮ ರದ್ದಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಮದುವಣಗಿತ್ತಿಯಂತೆ ಜಲಾಶಯ ಸಿಂಗಾರಗೊಳ್ಳಬೇಕಿತ್ತು. ವರ್ಷದಲ್ಲಿ ಎರಡನೇ ಬಾರಿ ತುಂಗಭದ್ರಾ ಜಲಾಶಯ ಸಂಪೂರ್ಣ ಭರ್ತಿ ಆಗಿತ್ತು. ಮೂರು ದಿನದ ಮೊದಲೇ ಸಿಎಂ ಸಿದ್ದರಾಮಯ್ಯರಿಂದ ಬಾಗಿನ ಅರ್ಪಣೆ ಕಾರ್ಯಕ್ರಮ ನಿಗದಿ ಆಗಿತ್ತು. ಬಾಗಿನ ಅರ್ಪಣೆಗೆ ಅಧಿಕಾರಿಗಳು ಭಾರಿ ಸಿದ್ಧತೆ ಮಾಡಿಕೊಂಡಿದ್ದರು.

ಆದರೆ ಜಲಾಶಯದ ಕ್ರೆಸ್ಟ್‌ ಗೇಟ್ ಕಿತ್ತುಹೋಗಿದ್ದರಿಂದ ಬಾಗಿನ ಅರ್ಪಣೆಗೆ ಬ್ರೇಕ್‌ ಬಿದ್ದಿದೆ. ಅಳವಡಿಸಿದ್ದ ಬ್ಯಾನರ್, ಫ್ಲೆಕ್ಸ್‌ಗಳ ತೆರವು ಮಾಡಲಾಗಿದೆ. ಡೆಕೋರೇಷನ್‌ಗೆ ತಂದ ವಸ್ತುಗಳನ್ನು ಟಿಬಿ ಬೋರ್ಡ್, ಜಿಲ್ಲಾಡಳಿತ ರಾಶಿ ಹಾಕಿದೆ. ಡ್ಯಾಂ ಸಿಂಗಾರಗೊಳಿಸಲು ತಂದಿದ್ದ ಪ್ಲಾಸ್ಟಿಕ್ ಶಾಮಿಯಾನ, ಆನೆ ಮೂರ್ತಿಗಳು, ಶಿಲ್ಪಕಲಾ ರೀತಿಯ ಕಂಬಗಳು ಹಾಗೆಯೇ ಬಿದ್ದಿವೆ. ಡ್ಯಾಂನಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಇದನ್ನೂ ಓದಿ: Tungabhadra Dam: ತುಂಗಭದ್ರಾ ಜಲಾಶಯಕ್ಕೆ ಸಮಾನಾಂತರ ಜಲಾಶಯ ನಿರ್ಮಿಸಲು ಬೊಮ್ಮಾಯಿ ಆಗ್ರಹ

Continue Reading

ಪ್ರಮುಖ ಸುದ್ದಿ

Namma Metro: ಹಸಿರು ಮಾರ್ಗದಲ್ಲಿ ಇಂದಿನಿಂದ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯ

Namma Metro: ನಾಗಸಂದ್ರದಿಂದ ಮಾದಾವರ (BIEC)ವರೆಗಿನ ರೀಚ್-3ರ ವಿಸ್ತೃತ ಮಾರ್ಗದಲ್ಲಿ ಸಿಗ್ನಲಿಂಗ್ ಪರೀಕ್ಷೆಗಳನ್ನು ನಡೆಸಬೇಕಾಗಿರುವುದರಿಂದ, ಪೀಣ್ಯ ಇಂಡಸ್ಟ್ರಿ ಹಾಗೂ ನಾಗಸಂದ್ರ ಮೆಟ್ರೋ ನಿಲ್ದಾಣಗಳ ನಡುವೆ ರೈಲು ಸಮಯದಲ್ಲಿ ವ್ಯತ್ಯಯ ವಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ತಿಳಿಸಿದೆ.

VISTARANEWS.COM


on

Namma Metro
Koo

ಬೆಂಗಳೂರು: ನಮ್ಮ ಮೆಟ್ರೋ (Namma Metro) ಹಸಿರು ಮಾರ್ಗದ ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ ನಡುವೆ ಆ. 13ರಿಂದ 15ರವರೆಗೆ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್‌) ತಿಳಿಸಿದೆ.

ನಾಗಸಂದ್ರದಿಂದ ಮಾದಾವರ (BIEC)ವರೆಗಿನ ರೀಚ್-3ರ ವಿಸ್ತೃತ ಮಾರ್ಗದಲ್ಲಿ ಸಿಗ್ನಲಿಂಗ್ ಪರೀಕ್ಷೆಗಳನ್ನು ನಡೆಸಬೇಕಾಗಿರುವುದರಿಂದ, ಪೀಣ್ಯ ಇಂಡಸ್ಟ್ರಿ ಹಾಗೂ ನಾಗಸಂದ್ರ ಮೆಟ್ರೋ ನಿಲ್ದಾಣಗಳ ನಡುವೆ ರೈಲು ಸಮಯದಲ್ಲಿ ವ್ಯತ್ಯಯ ವಾಗಲಿದ್ದು, ಇದರ ವಿವರ ಈ ಕೆಳಕಂಡಂತಿವೆ.

  1. ಆ. 13ರಂದು ಕೊನೆಯ ರೈಲು ಸೇವೆ ರಾತ್ರಿ 11ಕ್ಕೆ ಬದಲಾಗಿ 10 ಗಂಟೆಯವರೆಗೆ.
  2. ಆ. 14ರಂದು ಬೆಳಗ್ಗೆ 5ಕ್ಕೆ ಬದಲಾಗಿ 6ಕ್ಕೆ ಪ್ರಾರಂಭ ಮತ್ತು ಕೊನೆಯ ರೈಲು ಸೇವೆ ರಾತ್ರಿ 11ಕ್ಕೆ ಬದಲಾಗಿ 10 ಗಂಟೆಯವರೆಗೆ.
  3. ಆ. 15ರಂದು ಬೆಳಗ್ಗೆ 5ಕ್ಕೆ ಬದಲಾಗಿ 6ಕ್ಕೆ ಪ್ರಾರಂಭ

ನಾಗಸಂದ್ರ ನಿಲ್ದಾಣದಿಂದ ಆ.13 ಮತ್ತು 14 ರಂದು ಕೊನೆಯ ರೈಲು ಸೇವೆಯು ರಾತ್ರಿ 11.05 ಗಂಟೆಯ ಬದಲಾಗಿ 10.00 ಗಂಟೆಗೆ ಕೊನೆಗೊಳ್ಳುತ್ತದೆ. ಆ.14 ಮತ್ತು 15ರಂದು ನಾಗಸಂದ್ರದಿಂದ ಮೊದಲ ರೈಲು ಸೇವೆಯು ಬೆಳಗ್ಗೆ 5ಕ್ಕೆ ಬದಲಾಗಿ 6ಕ್ಕೆ ಪ್ರಾರಂಭವಾಗುತ್ತದೆ.

ಆದಾಗ್ಯೂ ಪೀಣ್ಯ ಇಂಡಸ್ಟ್ರಿಯಿಂದ ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣಗಳ ನಡುವೆ ಆ.13 ಮತ್ತು 14ರಂದು ರಾತ್ರಿ 11.12 ಗಂಟೆಯವರೆಗೆ ಕೊನೆಯ ರೈಲು ಸೇವೆ ಲಭ್ಯವಿರುತ್ತದೆ. ಪೀಣ್ಯ ಇಂಡಸ್ಟ್ರಿಯಿಂದ ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣಗಳ ನಡುವೆ ಮೊದಲ ರೈಲು ಸೇವೆಯು ಆ.14 ಮತ್ತು 15ರಂದು ಬೆಳಗ್ಗೆ 5ಕ್ಕೆ ಪ್ರಾರಂಭವಾಗುತ್ತದೆ. ನೇರಳೆ ಮಾರ್ಗದ ಮೆಟ್ರೋ ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಬಿಎಂಆರ್‌ಸಿಎಲ್‌ ತಿಳಿಸಿದೆ.

ಸ್ವಾತಂತ್ರ್ಯೋತ್ಸವದ ಫಲಪುಷ್ಪ ಪ್ರದರ್ಶನಕ್ಕೆ ನಮ್ಮ ಮೆಟ್ರೋ ಸಾಥ್

ಬೆಂಗಳೂರು: ಸ್ವಾತಂತ್ರ್ಯೋತ್ಸವದ ಫಲಪುಷ್ಪ ಪ್ರದರ್ಶನಕ್ಕೆ ನಮ್ಮ ಮೆಟ್ರೋ ಸಾಥ್ ನೀಡಿದೆ. ಆಗಸ್ಟ್ 15,17 ಹಾಗೂ 18ರಂದು ಟೋಕನ್ ಬದಲು ರಿಟರ್ನ್ ಜರ್ನಿ ಪೇಪರ್ ಟಿಕೆಟ್ ನೀಡಲು ಬಿಎಂಆರ್‌ಸಿಎಲ್‌ ನಿರ್ಧರಿಸಿದೆ. 30 ರೂ. ರಿಟರ್ನ್ ಟಿಕೆಟ್ ಮೂಲಕ ಯಾವುದೇ ನಿಲ್ದಾಣಕ್ಕೂ ಪ್ರಯಾಣದ ಅನುಕೂಲವಾಗಲಿದೆ. ಪ್ರಯಾಣಿಕರು ಟೋಕನ್ ಬದಲಿಗೆ ಪರ್ಯಾಯ ವ್ಯವಸ್ಥೆ ಬಳಸಲು ಬಿಎಂಆರ್‌ಸಿಎಲ್‌ ಮನವಿ ಮಾಡಿದೆ.

ಲಾಲ್‌ಬಾಗ್ ನಲ್ಲಿ ಆಯೋಜಿಸಲಾಗಿರುವ ತೋಟಗಾರಿಕಾ ಫಲಪುಷ್ಪ ಪ್ರದರ್ಶನದ ಹಿನ್ನಲೆಯಲ್ಲಿ, ನಮ್ಮ ಮೆಟ್ರೋದಿಂದ ಆ. 15, 17 ಮತ್ತು 18ರಂದು ಲಾಲ್‌ಬಾಗ್ ಮೆಟ್ರೋ ನಿಲ್ದಾಣದಲ್ಲಿ ಪ್ರಯಾಣಿಕರ ತ್ವರಿತ ಪ್ರಯಾಣಕ್ಕಾಗಿ ಬೆಳಗ್ಗೆ 10 ರಿಂದ ರಾತ್ರಿ 8ರವರೆಗೆ ಟೋಕನ್‌ಗಳ ಬದಲಿಗೆ ರಿಟರ್ನ್ ಜರ್ನಿ ಪೇಪರ್ ಟಿಕೆಟ್‌ಗಳನ್ನು 30 ರೂ.ಗೆ ವಿತರಿಸಲಾಗುತ್ತದೆ.

ರಿಟರ್ನ್ ಜರ್ನಿ ಪೇಪರ್ ಟಿಕೆಟ್‌ಗಳು ಖರೀದಿಸಿದ ದಿನದಂದು ಲಾಲ್‌ಬಾಗ್ ಮೆಟ್ರೋ ನಿಲ್ದಾಣದಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸಲು ಮಾನ್ಯವಾಗಿರುತ್ತದೆ. ಸಾರ್ವಜನಿಕರು ಟೋಕನ್, ಕಾರ್ಡ್, ಕ್ಯೂಆರ್ ಟಿಕೆಟ್‌ಗಳ ಮೂಲಕ ಲಾಲ್‌ಬಾಗ್ ನಿಲ್ದಾಣಕ್ಕೆ ಪ್ರಯಾಣಿಸಬಹುದು ಹಾಗೂ ಲಾಲ್‌ಬಾಗ್ ಮೆಟ್ರೋ ನಿಲ್ದಾಣದಿಂದ ಹಿಂತಿರುಗಲು ಟೋಕನ್‌ಗಳ ಬದಲಿಗೆ ಪೇಪರ್ ಟಿಕೆಟ್, ಕಾರ್ಡ್, ಮತ್ತು ಕ್ಯೂಆರ್ ಟಿಕೆಟ್ ಮೂಲಕ ಮಾತ್ರ ಪ್ರಯಾಣಿಸಬಹುದು. ಮೇಲಿನ ದಿನಾಂಕಗಳಲ್ಲಿ ಮತ್ತು ಅವಧಿಯಲ್ಲಿ ಲಾಲ್‌ಬಾಗ್ ಮೆಟ್ರೋ ನಿಲ್ದಾಣದಲ್ಲಿ ಟೋಕನ್‌ಗಳನ್ನು ನೀಡಲಾಗುವುದಿಲ್ಲ. ಟಿಕೆಟ್‌ಗಳನ್ನು ಖರೀದಿಸಲು ಕಾಯುವ ಸಮಯವನ್ನು ತಪ್ಪಿಸಲು ಪ್ರಯಾಣಿಕರು ತಮ್ಮ ಪ್ರಯಾಣಕ್ಕೆ ಮುಂಚಿತವಾಗಿ ಕ್ಯೂಆರ್ ಟಿಕೆಟ್‌ಗಳನ್ನು ಖರೀದಿಸಬೇಕು ಎಂದು ಬಿಎಂಆರ್‌ಸಿಎಲ್‌ ಮನವಿ ಮಾಡಿದೆ.

Continue Reading
Advertisement
Viral Video
Latest36 mins ago

Viral Video: ಚೀನಾದಲ್ಲಿ ಬಹಿರಂಗವಾಗಿ ಮಾರಾಟವಾಗುತ್ತದೆ ನಾಯಿ ಮಾಂಸದ ಖಾದ್ಯ; ಭಾರತೀಯ ಹುಡುಗಿ ಮಾಡಿದ ವಿಡಿಯೊ ವೈರಲ್

fraud case tumkur
ಕ್ರೈಂ46 mins ago

Fraud Case: ಅಸಲಿ ಮದುವೆ, ನಕಲಿ ಹೆಣ್ಣು! 3 ವರ್ಷದಲ್ಲಿ 5 ಮದುವೆಯಾಗಿ ವಂಚನೆ; ಮದುಮಗಳು ಮತ್ತು ಗ್ಯಾಂಗ್‌ ಆರೆಸ್ಟ್

70th National Film Awards
ಸಿನಿಮಾ54 mins ago

70th National Film Awards: ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ರೇಸ್‌ನಲ್ಲಿ ರಿಷಬ್‌ ಶೆಟ್ಟಿ; ʼಕಾಂತಾರʼಕ್ಕೆ ಸಿಗುತ್ತಾ ಇನ್ನೊಂದು ಪ್ರತಿಷ್ಠಿತ ಗರಿ?

Viral News
ಕ್ರೀಡೆ58 mins ago

Viral News: ಒಲಿಂಪಿಕ್ಸ್​ ಚಿನ್ನ ಗೆದ್ದ ಸಾಧಕನಿಗೆ ಎಮ್ಮೆ ಉಡುಗೊರೆ ಕೊಟ್ಟ ಮಾವ!

raichur news misbehave
ಕ್ರೈಂ1 hour ago

Raichur News: ಶಿಕ್ಷಕಿಗೆ ಅಶ್ಲೀಲ ಮೆಸೇಜ್‌ ಕಳಿಸಿದ ಪ್ರಭಾರಿ ಪ್ರಾಚಾರ್ಯನಿಗೆ ಧರ್ಮದೇಟು

Neeraj Chopra
ಕ್ರೀಡೆ2 hours ago

Neeraj Chopra: ಪ್ಯಾರಿಸ್‌ನಿಂದ ಜರ್ಮನಿಗೆ ತೆರಳಿದ ಚೋಪ್ರಾ; ಭಾರತಕ್ಕೆ ಮರಳುವುದು ವಿಳಂಬ

Intermittent Fasting
ಆರೋಗ್ಯ2 hours ago

Intermittent Fasting: ಇಂಟರ್‌ ಮಿಟೆಂಟ್‌ ಫಾಸ್ಟಿಂಗ್‌ ಡಯಟ್‌ ಮಾಡುವವರೇ ಹುಷಾರ್! ಈ ಸಂಗತಿ ಗೊತ್ತಿರಲಿ

Kolkata Doctor Murder Case
ದೇಶ2 hours ago

Kolkata Doctor Murder Case: ಕೋಲ್ಕತ್ತಾ ವೈದ್ಯೆಯ ಮರಣೋತ್ತರ ಪರೀಕ್ಷೆ ವರದಿ ಬಹಿರಂಗ; ಶಾಕಿಂಗ್‌ ಸಂಗತಿ ಬಯಲು

tungabhadra dam 19 crest gate
ಪ್ರಮುಖ ಸುದ್ದಿ2 hours ago

Tungabhadra Dam: ತುಂಗಭದ್ರಾ ಜಲಾಶಯದಿಂದ 15 ಟಿಎಂಸಿ ನೀರು ವ್ಯರ್ಥ; ಇಂದು ಸಿಎಂ ಸಿದ್ದರಾಮಯ್ಯ ಭೇಟಿ

Namma Metro
ಪ್ರಮುಖ ಸುದ್ದಿ2 hours ago

Namma Metro: ಹಸಿರು ಮಾರ್ಗದಲ್ಲಿ ಇಂದಿನಿಂದ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ5 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ5 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ5 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು7 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ7 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌