Bengaluru Rain: ಬೆಂಗಳೂರಿನಲ್ಲಿ ಮುಂದುವರಿದ ಮಳೆ ಆರ್ಭಟ; ರಸ್ತೆಗಳು ಜಲಾವೃತ, ಹಲವೆಡೆ ಸಂಚಾರ ಅಸ್ತವ್ಯಸ್ತ - Vistara News

ಕರ್ನಾಟಕ

Bengaluru Rain: ಬೆಂಗಳೂರಿನಲ್ಲಿ ಮುಂದುವರಿದ ಮಳೆ ಆರ್ಭಟ; ರಸ್ತೆಗಳು ಜಲಾವೃತ, ಹಲವೆಡೆ ಸಂಚಾರ ಅಸ್ತವ್ಯಸ್ತ

Bengaluru Rain: ಧಾರಾಕಾರ ಮಳೆಯಿಂದ ಬೆಂಗಳೂರಿನ ಪ್ರಮುಖ ರಸ್ತೆಗಳು ಜಲಾವೃತವಾಗಿದ್ದರಿಂದ ಸಂಚಾರ ಅಸ್ತವ್ಯಸ್ತವಾಯಿತು.

VISTARANEWS.COM


on

Bengaluru Rain
ಭಾರಿ ಮಳೆಯಿಂದ ದೇವನಹಳ್ಳಿ ಹೊರವಲಯದ ಬೈಪಾಸ್‌ನ ಕೆಂಪೇಗೌಡ ಸರ್ಕಲ್‌ ಕೆರೆಯಂತೆ ಬದಲಾಗಿತ್ತು
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜಧಾನಿಯಲ್ಲಿ ಭಾನುವಾರವೂ ಮಳೆ ಆರ್ಭಟ (Bengaluru Rain) ಮುಂದುವರಿಯಿತು. ನಗರದ ಹಲವೆಡೆ ಸುರಿದ ಧಾರಾಕಾರ ಮಳೆಯಿಂದ ಪ್ರಮುಖ ರಸ್ತೆಗಳು ಜಲಾವೃತವಾಗಿದ್ದರಿಂದ ಸಂಚಾರ ಅಸ್ತವ್ಯಸ್ತವಾಯಿತು. ಇದರಿಂದ ವಾಹನ ಸವಾರರು ಪರದಾಡಿದರು.

ಚಿಕ್ಕಪೇಟೆ, ಮೆಜೆಸ್ಟಿಕ್, ಯಲಹಂಕ, ಯಶವಂತಪುರ, ಲಗ್ಗೆರೆ, ರಾಜಾಜಿನಗರದಲ್ಲಿ ಭಾರಿ ಮಳೆಯಾಯಿತು. ಕಸ್ತೂರಿ ನಗರ ಕಡೆಯಿಂದ ಎಂಎಂಟಿ ಜಂಕ್ಷನ್ (ಕೆ.ಆರ್.ಪುರ) ಕಡೆಗೆ ಹೋಗುವ ಮಾರ್ಗದಲ್ಲಿ ಭಾರಿ ಪ್ರಮಾಣದ ನೀರು ನಿಂತಿದ್ದರಿಂದ ವೈಟ್‌ಫೀಲ್ಡ್‌, ಮಹದೇವಪುರ ಮತ್ತು ಕೆ.ಆರ್.ಪುರ ಕಡೆಗೆ ನಿಧಾನಗತಿಯ ವಾಹನ ಸಂಚಾರ ಕಂಡುಬಂದಿತು.

ಇನ್ನು ಪೈಪ್‌ಲೈನ್ ಮುಖ್ಯ ರಸ್ತೆಯ ಕಮಲಾ ನಗರದಲ್ಲಿ ರಸ್ತೆಯಲ್ಲಿ ನೀರು ನಿಂತಿದ್ದರಿಂದ ಪಾದಾಚಾರಿಗಳು ಮತ್ತು ವಾಹನ ಸವಾರರು ರಸ್ತೆ ದಾಟಲು ಪರದಾಡಬೇಕಾಯಿತು. ರಸ್ತೆಗಳು ಜಲಾವೃತವಾಗಿದ್ದರಿಂದ ರಾಮಮೂರ್ತಿ ನಗರ – ಟಿನ್ ಫ್ಯಾಕ್ಟರಿ ರಸ್ತೆ, ಸಂಜಯನಗರ ಕ್ರಾಸ್ – ವಿಮಾನ ನಿಲ್ದಾಣ ರಸ್ತೆ, ಹುಣಸಮಾರನಹಳ್ಳಿ ಸರ್ವಿಸ್ ರಸ್ತೆ, ಬಿಇಎಲ್‌ನಿಂದ ಹೆಬ್ಬಾಳ ಮಾರ್ಗ, ಅನಿಲ್ ಕುಂಬ್ಳೆ ಜಂಕ್ಷನ್-ಬಿಆರ್ವಿ ಜಂಕ್ಷನ್ ರಸ್ತೆಯಲ್ಲಿ ಭಾರಿ ಸಂಚಾರ ದಟ್ಟಣೆ ಉಂಟಾಯಿತು.

ಕೆರೆಯಂತಾದ ದೇವನಹಳ್ಳಿಯ ಸರ್ಕಲ್

ದೇವನಹಳ್ಳಿ: ಪಟ್ಟಣದ ಸುತ್ತಮುತ್ತಲ ಪ್ರದೇಶದಲ್ಲಿ ಧಾರಕಾರ ಮಳೆ ಸುರಿದಿದೆ. ನಿರಂತರ ಒಂದು ಗಂಟೆ ಸುರಿದ ಮಳೆಗೆ ಪಟ್ಟಣದ ಹೊರವಲಯದ ಬೈಪಾಸ್‌ನ ಕೆಂಪೇಗೌಡ ಸರ್ಕಲ್‌ ಕೆರೆಯಂತೆ ಬದಲಾಗಿತ್ತು. ಸುಮಾರು ಮೂರು ಅಡಿಗಿಂತ ಹೆಚ್ಚು ನೀರು ನಿಂತಿದ್ದರಿಂದ ವಾಹನ ಸವಾರರು ಮುಂದೆ ಹೋಗಲು ಹೈರಾಣಾದರು.

ಆನೇಕಲ್ ಭಾಗದಲ್ಲಿ ಮಳೆರಾಯನ ಸಿಂಚನ

ಆನೇಕಲ್: ಬೆಂಗಳೂರು ನಗರ ಹೊರವಲಯದ ಆನೇಕಲ್ ಭಾಗದಲ್ಲಿ ಮಳೆರಾಯನ ಸಿಂಚನ ಕಂಡುಬಂತು. ಆನೇಕಲ್, ಅತ್ತಿಬೆಲೆ, ಸರ್ಜಾಪುರ ಭಾಗದಲ್ಲಿ ಕಳೆದೊಂದು ವಾರದಿಂದ ನಿರಂತರ ಮಳೆಯಾಗುತ್ತಿದೆ. ಇದರಿಂದ ಕೃಷಿ ಚಟುವಟಿಕೆ ಚುರುಕುಗೊಂಡಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ಇದನ್ನೂ ಓದಿ | Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

ರಾಜ್ಯದ 17 ಜಿಲ್ಲೆಗಳಿಗೆ ಆರೆಂಜ್, ಯೆಲ್ಲೋ ಅಲರ್ಟ್

ರಾಜ್ಯದಲ್ಲಿ ಪೂರ್ವ ಮುಂಗಾರು ಚುರುಕುಗೊಂಡಿದ್ದು, 17 ಜಿಲ್ಲೆಗಳಿಗೆ ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ‌ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಭಾರಿ ಮಳೆ ಸಾಧ್ಯತೆ ಇದೆ. ಹೀಗಾಗಿ ಮೀನುಗಾರರಿಗೆ ಸಮುದ್ರದಲ್ಲಿ ಇಳಿಯದಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.

ಕುಷ್ಟಗಿಯಲ್ಲಿ ಸಿಡಿಲು ಬಡಿದು ರೈತ ಸಾವು

ಕೊಪ್ಪಳ: ಸಿಡಿಲು ಬಡಿದು (Lightning strike) ರೈತ ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಬಚನಾಳ ಗ್ರಾಮದಲ್ಲಿ ನಡೆದಿದೆ. ಉತ್ತಮ ಮಳೆ (Rain News) ಹಿನ್ನೆಲೆಯಲ್ಲಿ ಜಮೀನಿನಲ್ಲಿ ಬಿತ್ತನೆ ಸಲುವಾಗಿ ಕೃಷಿ ಚಟುವಟಿಕೆ ಮಾಡುತ್ತಿದ್ದಾಗ ಅವಘಡ ನಡೆದಿದ್ದು, ಈಶಪ್ಪ ಕಳಮಳ್ಳಿ (40) ಮೃತ ರೈತ.

ಮಳೆ ಬಂದ ಖುಷಿಯಲ್ಲಿ ಎತ್ತುಗಳೊಂದಿಗೆ ರೈತ ಭೂಮಿ ಹದ ಮಾಡುತ್ತಿದ್ದ. ಈ ವೇಳೆ ಸಿಡಿಲು ಬಡಿದು ರೈತ ಈಶಪ್ಪ ಕಳಮಳ್ಳಿ ಮೃತಪಟ್ಟಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ರೈತನ ಸಹೋದರ ಪಾರಾಗಿದ್ದಾನೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಸಿಡಿಲು ಬಡಿದು ಯುವಕನಿಗೆ ಗಂಭೀರ ಗಾಯ

ಧಾರವಾಡ: ಸಿಡಿಲು ಬಡಿದು ಯುವಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಧಾರವಾಡದ ಮುಗದ ಗ್ರಾಮದ ಕೆರೆ ಬಳಿ ನಡೆದಿದೆ. ಇಂದು ಮಧ್ಯಾಹ್ನ ಸುರಿದ ಸಿಡಿಲು ಸಹಿತ ಮಳೆ ವೇಳೆ ಅವಘಡ ನಡೆದಿದೆ. ದಡ್ಡಿಕಮಲಾಪುರ ಗ್ರಾಮದ ನಿವಾಸಿ ರವಿ ಕೊರಮಡ್ಡಿ ಗಾಯಾಳು. ಇದೆ ವೇಳೆ ಸಿಡಿಲಿಗೆ ಎಮ್ಮೆ ಕರು ಬಲಿಯಾಗಿದೆ. ಗಂಭೀರ ಗಾಯಗೊಂಡ ಯುವಕನನ್ನು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

DK Shivakumar: `ಲೋಕಾಯುಕ್ತಕ್ಕೆ ಕೊಟ್ಟ ಮೇಲೆ ಸಿಬಿಐಗೇನು ಕೆಲಸ?’ ಅಕ್ರಮ ಆಸ್ತಿ ಕೇಸ್‌ ಬಗ್ಗೆ ಡಿಕೆ ಶಿವಕುಮಾರ್‌ ಪ್ರಶ್ನೆ

DK Shivakumar: ಸಿಬಿಐ ಎಫ್‌ಐಆರ್‌ ವಜಾ ಮಾಡಬೇಕು ಅಂತ ಕೇಳಿದ್ದೆವು. ಹೈಕೋರ್ಟ್‌ನಲ್ಲಿ ಮಾಡಲು ಆಗುವುದಿಲ್ಲ ಎಂದಿದ್ದರು. ಹೀಗಾಗಿ ಅಪೀಲ್ ಹಾಕಿದ್ದೆ. ಅಲ್ಲೂ ಏನೂ ಮಾಡಲು ಆಗುವುದಿಲ್ಲ ಎಂದು ನಿರ್ಣಯ ಬಂದಿದೆ. ಕೋರ್ಟ್ ಏನು ಹೇಳುತ್ತದೋ ಕೇಳೋಣ. ತನಿಖೆ ನಡೆಯಲಿ ಎಂದು ಡಿಕೆ ಶಿವಕುಮಾರ್‌ ಪ್ರತಿಕ್ರಿಯಿಸಿದರು.

VISTARANEWS.COM


on

dcm dk shivakumar
Koo

ಬೆಂಗಳೂರು: ಒಂದು ಸಲ ನಮ್ಮ ಸರಕಾರ ಪ್ರಕರಣವನ್ನು ಲೋಕಾಯುಕ್ತಕ್ಕೆ (Lokayukta) ಕೊಟ್ಟ ಮೇಲೆ ಸಿಬಿಐಯವರು ತನಿಖೆ (CBI Probe) ಮಾಡಲು ಸಾಧ್ಯವಿಲ್ಲ. ಸುಪ್ರೀಂ ಕೋರ್ಟ್‌ (Supreme Court) ತೀರ್ಮಾನವನ್ನು ಒಪ್ಪಿಕೊಳ್ಳುತ್ತೇನೆ ಎಂದು ಕರ್ನಾಟಕದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ (DCM DK Shivakumar) ಹೇಳಿದ್ದಾರೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮ್ಮ ವಿರುದ್ಧ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ಆರಂಭಿಸಿರುವ ತನಿಖೆಯನ್ನು ಕೈಬಿಡುವಂತೆ ಸೂಚಿಸಬೇಕು ಎಂದು ಡಿಕೆ ಶಿವಕುಮಾರ್ (DK Shivakumar) ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ ಹಿನ್ನೆಲೆಯಲ್ಲಿ ಅವರು ಪ್ರತಿಕ್ರಿಯೆ ನೀಡಿದರು.

ಸಿಬಿಐ ಎಫ್‌ಐಆರ್‌ ವಜಾ ಮಾಡಬೇಕು ಅಂತ ಕೇಳಿದ್ದೆವು. ಹೈಕೋರ್ಟ್‌ನಲ್ಲಿ ಮಾಡಲು ಆಗುವುದಿಲ್ಲ ಎಂದಿದ್ದರು. ಹೀಗಾಗಿ ಅಪೀಲ್ ಹಾಕಿದ್ದೆ. ಅಲ್ಲೂ ಏನೂ ಮಾಡಲು ಆಗುವುದಿಲ್ಲ ಎಂದು ನಿರ್ಣಯ ಬಂದಿದೆ. ಕೋರ್ಟ್ ಏನು ಹೇಳುತ್ತದೋ ಕೇಳೋಣ. ತನಿಖೆ ನಡೆಯಲಿ ಎಂದು ಡಿಕೆ ಶಿವಕುಮಾರ್‌ ಪ್ರತಿಕ್ರಿಯಿಸಿದರು.

ಲೋಕಾಯುಕ್ತದವರು ಇನ್ವೆಸ್ಟಿಗೇಶನ್ ಮಾಡುತ್ತಿದ್ದಾರೆ. CBIನವರಿಗೆ ಮಾಡಬೇಡಿ ಅಂತ ಹೇಳಿದರೂ ಮಾಡುತ್ತಿದ್ದಾರೆ. ಏನು ಬೇಕಾದರೂ ಮಾಡಲಿ, ನನ್ನದೇನೂ ತಪ್ಪಿಲ್ಲ. ನಮ್ಮ‌ ಸರ್ಕಾರ ಒಂದು ಸಲ ವಿತ್‌ಡ್ರಾ ಮಾಡಿದ ಮೇಲೆ ಮುಗಿಯಿತು. ನನ್ನ ಆಸ್ತಿ ದಾಖಲೆ ಏನಿದೆ ಕೊಡ್ತೀನಿ ಎಂದು ಡಿಕೆಶಿ ತಿಳಿಸಿದರು. ಕೇಂದ್ರ ಸರ್ಕಾರ ಇದನ್ನು ಉದ್ದೇಶಪೂರ್ವಕ ಮಾಡುತ್ತಿದೆಯಾ ಎಂಬ ಪ್ರಶ್ನೆಗೆ ʼಕೋರ್ಟ್ ಬಗ್ಗೆ ಏನು ಮಾತನಾಡಲೂ ಆಗುವುದಿಲ್ಲ. ಕೋರ್ಟ್ ಹೇಳಿದಂತೆ ಕೇಳಬೇಕುʼ ಎಂದು ಡಿಕೆಶಿ ಉತ್ತರಿಸಿದರು.

ಸಿಬಿಐ ತನಿಖೆ ಕೈಬಿಡಲು ಸುಪ್ರೀಂ ಕೋರ್ಟ್‌ ನಕಾರ

2013ರಿಂದ 2017ರವರೆಗಿನ ಅವಧಿಯಲ್ಲಿ ಡಿಕೆಶಿಯವರು ತಮ್ಮ ಆದಾಯಕ್ಕಿಂತ ಹೆಚ್ಚಿನ ಆದಾಯವನ್ನು ಗಳಿಸಿದ್ದಾರೆಂದು ಸಿಬಿಐ ಆರೋಪಿಸಿದ್ದು, ಆ ಕುರಿತಂತೆ ಎಫ್ಐಆರ್ ದಾಖಲಿಸಿತ್ತು. ಆ ಪ್ರಕರಣವನ್ನು ಕೈಬಿಡುವಂತೆ ಸಿಬಿಐಗೆ ನಿರ್ದೇಶನ ನೀಡಬೇಕೆಂದು ಕೋರಿ ಡಿಕೆಶಿ ಮನವಿ ಸಲ್ಲಿಸಿದ್ದರು. ಆ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಬಾಲಾ ತ್ರಿವೇದಿ ನೇತೃತ್ವದ ಪೀಠ, ಡಿಕೆ ಶಿವಕುಮಾರ್ ಅವರ ಅರ್ಜಿಯನ್ನು ವಜಾಗಳಿಸಿತು.

ಈ ಹಿಂದಿನ ಸಿದ್ದರಾಮಯ್ಯನವರ ರಾಜ್ಯ ಸರ್ಕಾರದಲ್ಲಿ ಡಿಕೆಶಿಯವರು ಇಂಧನ ಸಚಿವರಾಗಿದ್ದರು. ಆ ಸರ್ಕಾರದ ಅವಧಿಯಲ್ಲಿ 74 ಕೋಟಿ ರೂ.ಗಳಷ್ಟು ದಾಖಲೆರಹಿತ ಆದಾಯವನ್ನು ಡಿಕೆ ಶಿವಕುಮಾರ್ ಅವರು ಗಳಿಸಿದ್ದಾರೆಂದು ಹೇಳಲಾಗಿದೆ. ಅದರಂತೆ, 74.93 ಕೋಟಿ ರೂಪಾಯಿಗಳನ್ನು ಹೆಚ್ಚುವರಿಯಾಗಿ ಗಳಿಸಿದ್ದಾರೆಂದು ಸಿಬಿಐ ಆರೋಪಿಸಿತ್ತು. ಆ ಹಿನ್ನೆಲೆಯಲ್ಲಿ ಅವರ ವಿರುದ್ಧ ತನಿಖೆ ನಡೆಸಲು ಅನುಮತಿ ಕೋರಿ 2019ರಲ್ಲಿ ರಾಜ್ಯ ಸರ್ಕಾರಕ್ಕೆ ಸಿಬಿಐ ಅರ್ಜಿ ಸಲ್ಲಿಸಿತ್ತು.

2019ರಲ್ಲಿ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ, ಸಿಬಿಐ ಮನವಿಗೆ ಸ್ಪಂದಿಸಿ ತನಿಖೆಗೆ ಅನುಮತಿ ನೀಡಿತ್ತು. ಆನಂತರ ಸಿಬಿಐ, ಡಿಕೆ ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಿತ್ತು. ಅದೇ ತನಿಖೆಯನ್ನು ಕೈಬಿಡುವಂತೆ ಡಿಕೆ ಶಿವಕುಮಾರ್ ಅವರು ಹೈಕೋರ್ಟಿನಲ್ಲಿ ಮನವಿ ಸಲ್ಲಿಸಿದ್ದು ಮೊದಲಿಗೆ ಅದು ವಿಭಾಗೀಯ ಪೀಠದಲ್ಲಿ ವಿಚಾರಣೆಯಾಗಿ ಆನಂತರ ಅದೀಗ ವಿಸ್ತ್ರೃತ ಪೀಠಕ್ಕೆ ವರ್ಗಾವಣೆಯಾಗಿದೆ.

ಇದನ್ನೂ ಓದಿ: DK Shivakumar : ಡಿಕೆ ಶಿವಕುಮಾರ್‌ ಟಿಪ್ಪಣಿ ಆಧರಿಸಿ ಮಾಡಿದ ಬಿಬಿಎಂಪಿ ಅಧಿಕಾರಿಗಳ ವರ್ಗಾವಣೆಗೆ ಹೈಕೋರ್ಟ್‌ ತಡೆ

Continue Reading

ಪ್ರಮುಖ ಸುದ್ದಿ

DK Shivakumar: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಕೆಶಿಗೆ ಶಾಕ್‌, ಸಿಬಿಐ ತನಿಖೆ ಕೈಬಿಡಲು ಸುಪ್ರೀಂ ಕೋರ್ಟ್‌ ನಕಾರ

DK Shivakumar: 2013ರಿಂದ 2017ರವರೆಗಿನ ಅವಧಿಯಲ್ಲಿ ಡಿಕೆಶಿಯವರು ತಮ್ಮ ಆದಾಯಕ್ಕಿಂತ ಹೆಚ್ಚಿನ ಆದಾಯವನ್ನು ಗಳಿಸಿದ್ದಾರೆಂದು ಸಿಬಿಐ ಆರೋಪಿಸಿದ್ದು, ಆ ಕುರಿತಂತೆ ಎಫ್ಐಆರ್ ದಾಖಲಿಸಿತ್ತು. ಆ ಪ್ರಕರಣವನ್ನು ಕೈಬಿಡುವಂತೆ ಸಿಬಿಐಗೆ ನಿರ್ದೇಶನ ನೀಡಬೇಕೆಂದು ಕೋರಿ ಡಿಕೆಶಿ ಮನವಿ ಸಲ್ಲಿಸಿದ್ದರು.

VISTARANEWS.COM


on

DK Shivakumar cbi supreme court
Koo

ಬೆಂಗಳೂರು: ಅಕ್ರಮ ಆಸ್ತಿ (Disproportionate assets) ಗಳಿಕೆ ಆರೋಪದಡಿ ತಮ್ಮ ವಿರುದ್ಧ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ, CBI) ಆರಂಭಿಸಿರುವ ತನಿಖೆಯನ್ನು (CBI probe) ಕೈಬಿಡುವಂತೆ ಸೂಚಿಸಬೇಕು ಎಂದು ಕರ್ನಾಟಕದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DCM DK Shivakumar) ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ (Supreme Court) ವಜಾಗೊಳಿಸಿದೆ.

2013ರಿಂದ 2017ರವರೆಗಿನ ಅವಧಿಯಲ್ಲಿ ಡಿಕೆಶಿಯವರು ತಮ್ಮ ಆದಾಯಕ್ಕಿಂತ ಹೆಚ್ಚಿನ ಆದಾಯವನ್ನು ಗಳಿಸಿದ್ದಾರೆಂದು ಸಿಬಿಐ ಆರೋಪಿಸಿದ್ದು, ಆ ಕುರಿತಂತೆ ಎಫ್ಐಆರ್ ದಾಖಲಿಸಿತ್ತು. ಆ ಪ್ರಕರಣವನ್ನು ಕೈಬಿಡುವಂತೆ ಸಿಬಿಐಗೆ ನಿರ್ದೇಶನ ನೀಡಬೇಕೆಂದು ಕೋರಿ ಡಿಕೆಶಿ ಮನವಿ ಸಲ್ಲಿಸಿದ್ದರು. ಆ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಬಾಲಾ ತ್ರಿವೇದಿ ನೇತೃತ್ವದ ಪೀಠ, ಡಿಕೆ ಶಿವಕುಮಾರ್ ಅವರ ಅರ್ಜಿಯನ್ನು ವಜಾಗಳಿಸಿತು.

ಶಿವಕುಮಾರ್ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹಟಗಿ, ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 17ಎ ಅಡಿಯಲ್ಲಿ ಅನುಮತಿ ಪಡೆಯದೆ ತನಿಖೆ ಆರಂಭಿಸಲಾಗಿದೆ. 2018 ರ ತಿದ್ದುಪಡಿಯ ದಿನಾಂಕದ ಮೊದಲು ಸೆಕ್ಷನ್ 17 ಎ ಸೇರಿಸಲಾದ ಅಪರಾಧಗಳಿಗೆ ಸೆಕ್ಷನ್ 17 ಎ ಅನ್ವಯಿಸುತ್ತದೆಯೇ ಎಂಬ ವಿಷಯವನ್ನು ಘನ ಪೀಠಕ್ಕೆ ಉಲ್ಲೇಖಿಸಲಾಗಿದೆ ಎಂದು ಅವರು ಚಂದ್ರಬಾಬು ನಾಯ್ಡು ಪ್ರಕರಣದ ತೀರ್ಪನ್ನು ಉಲ್ಲೇಖಿಸಿದರು.

ವಾದ ವಿವಾದಗಳನ್ನು ಆಲಿಸಿದ ನ್ಯಾಯಮೂರ್ತಿ ತ್ರಿವೇದಿ ಅವರು, ವಿಭಜಿತ ತೀರ್ಪಿನ ಆಧಾರದ ಮೇಲೆ ಪ್ರಕ್ರಿಯೆಗಳನ್ನು ರದ್ದುಗೊಳಿಸಲಾಗುವುದಿಲ್ಲ ಎಂದು ಉತ್ತರಿಸಿದರು. ಡಿಕೆಶಿ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹಟಗಿ ಅವರು ಅರ್ಜಿಯ ಕುರಿತು ನೋಟಿಸ್ ಜಾರಿ ಮಾಡುವಂತೆ ಮನವಿ ಮಾಡುತ್ತಿರುವುದಾಗಿ ತಿಳಿಸಿದರು. ಆದರೆ, ಪೀಠ ಇದಕ್ಕೆ ನಿರಾಸಕ್ತಿ ವ್ಯಕ್ತಪಡಿಸಿತು.

ಯಾವುದಿದು ಪ್ರಕರಣ?

ಈ ಹಿಂದಿನ ಸಿದ್ದರಾಮಯ್ಯನವರ ರಾಜ್ಯ ಸರ್ಕಾರದಲ್ಲಿ ಡಿಕೆಶಿಯವರು ಇಂಧನ ಸಚಿವರಾಗಿದ್ದರು. ಆ ಸರ್ಕಾರದ ಅವಧಿಯಲ್ಲಿ 74 ಕೋಟಿ ರೂ.ಗಳಷ್ಟು ದಾಖಲೆರಹಿತ ಆದಾಯವನ್ನು ಡಿಕೆ ಶಿವಕುಮಾರ್ ಅವರು ಗಳಿಸಿದ್ದಾರೆಂದು ಹೇಳಲಾಗಿದೆ. ಅದರಂತೆ, 74.93 ಕೋಟಿ ರೂಪಾಯಿಗಳನ್ನು ಹೆಚ್ಚುವರಿಯಾಗಿ ಗಳಿಸಿದ್ದಾರೆಂದು ಸಿಬಿಐ ಆರೋಪಿಸಿತ್ತು. ಆ ಹಿನ್ನೆಲೆಯಲ್ಲಿ ಅವರ ವಿರುದ್ಧ ತನಿಖೆ ನಡೆಸಲು ಅನುಮತಿ ಕೋರಿ 2019ರಲ್ಲಿ ರಾಜ್ಯ ಸರ್ಕಾರಕ್ಕೆ ಸಿಬಿಐ ಅರ್ಜಿ ಸಲ್ಲಿಸಿತ್ತು.

2019ರಲ್ಲಿ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ, ಸಿಬಿಐ ಮನವಿಗೆ ಸ್ಪಂದಿಸಿ ತನಿಖೆಗೆ ಅನುಮತಿ ನೀಡಿತ್ತು. ಆನಂತರ ಸಿಬಿಐ, ಡಿಕೆ ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಿತ್ತು. ಅದೇ ತನಿಖೆಯನ್ನು ಕೈಬಿಡುವಂತೆ ಡಿಕೆ ಶಿವಕುಮಾರ್ ಅವರು ಹೈಕೋರ್ಟಿನಲ್ಲಿ ಮನವಿ ಸಲ್ಲಿಸಿದ್ದು ಮೊದಲಿಗೆ ಅದು ವಿಭಾಗೀಯ ಪೀಠದಲ್ಲಿ ವಿಚಾರಣೆಯಾಗಿ ಆನಂತರ ಅದೀಗ ವಿಸ್ತ್ರೃತ ಪೀಠಕ್ಕೆ ವರ್ಗಾವಣೆಯಾಗಿದೆ.

ಈ ಪ್ರಕರಣವನ್ನು ಸಿಬಿಐಗೆ ವಹಿಸಿದ್ದ ಹಿಂದಿನ ಸರ್ಕಾರದ ನಿರ್ಧಾರವನ್ನು ಹಾಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ರದ್ದು ಮಾಡಲು ನಿರ್ಧರಿಸಿದೆ. ಅದರ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಇತರರು ಹೈಕೋರ್ಟ್ ಮೊರೆ ಹೋಗಿದ್ದಾರೆ. ಮತ್ತೆ ಹೈಕೋರ್ಟ್ ಮೊರೆ ಹೋಗಿರುವ ಸಿಬಿಐ, ಒಮ್ಮೆ ತನಿಖೆಗೊಳಪಡಿಸಲಾಗಿರುವ ಪ್ರಕರಣವನ್ನು ಪುನಃ ಹಿಂಪಡೆಯುವುದು ಸಲ್ಲದು ಎಂದು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದೆ. ಅತ್ತ, ಸುಪ್ರೀಂ ಕೋರ್ಟ್‌ಗೂ ಸಿಬಿಐ ಮೇಲ್ಮನವಿ ಸಲ್ಲಿಸಿದೆ.

ಕರ್ನಾಟಕ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿರುವ ವಾಲ್ಮೀಕಿ ನಿಗಮದ ಹಗರಣ ಹಾಗೂ ಮುಡಾ ಅಕ್ರಮಗಳು ಬಿಜೆಪಿ ಆಡಳಿತಾವಧಿಯಲ್ಲೇ ಶುರುವಾಗಿರುವಂಥವು. ಈಗ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾದ ನಂತರ ಅವು ಮೇಲೆದ್ದಿವೆ. ಬಿಜೆಪಿಯು ಆ ಎಲ್ಲಾ ಹಗರಣಗಳನ್ನು ನಮ್ಮ ತಲೆಗೆ ಕಟ್ಟಲು ನೋಡುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ: DK Shivakumar: ಸಿಎಂ- ಡಿಸಿಎಂ ದಂಗಲ್‌ ವಿಷಯ ಎತ್ತುವ ಶಾಸಕರಿಗೆ ನೊಟೀಸ್: ಡಿಕೆ ಶಿವಕುಮಾರ್

Continue Reading

ಸಿನಿಮಾ

Actor Chetan: ವಿಧಾನಸೌಧದ ಮುಂದೆ ಭುವನೇಶ್ವರಿ ಪ್ರತಿಮೆ ಬೇಡ: ನಟ ಚೇತನ್‌

ಎಲ್ಲಾ ಬ್ರಾಹ್ಮಣ್ಯಗಳ ನಡುವೆ ಈ ಸರ್ಕಾರ ವಿಧಾನಸೌಧದಲ್ಲಿ ಭುವನೇಶ್ವರಿ ಪ್ರತಿಮೆ ಸ್ಥಾಪನೆ ಮಾಡಿದ್ದಾರೆ. ಕನ್ನಡ ಶಾಲೆಗಳಲ್ಲಿ ಕನ್ನಡದ ಪ್ರಾಬಲ್ಯ ಹೆಚ್ಚಿಸಲು ಕಾನೂನು ತರಬೇಕು. ಕನ್ನಡ ಮಾಧ್ಯಮದಲ್ಲಿ ಓದಿರೋರಿಗೆ ಉದ್ಯೋಗ ಕಲ್ಪಿಸಿಕೊಡಿ ಎಂದು ಚೇತನ್‌ (Actor Chetan) ಹೇಳಿದ್ದಾರೆ.

VISTARANEWS.COM


on

actor Chetan
Koo

ಚಿಕ್ಕಬಳ್ಳಾಪುರ: ವಿಧಾನಸೌಧದ (Vidhana Soudha) ಆವರಣದಲ್ಲಿ ಕನ್ನಡ ತಾಯಿ ಭುವನೇಶ್ವರಿ (Goddess Buvanehswari) ಪ್ರತಿಮೆ ಸ್ಥಾಪನೆಗೆ ನಟ ಚೇತನ್ (Actor Chetan) ವಿರೋಧ ವ್ಯಕ್ತಪಡಿಸಿದ್ದಾರೆ. ʼಸರ್ಕಾರ 25 ಅಡಿಯ ಭುವನೇಶ್ವರಿ ಪ್ರತಿಮೆ (Bhuvaneshwari Statue) ಸ್ಥಾಪನೆ ಮಾಡಿರುವುದು ಕನ್ನಡ ಪರ ಅಲ್ಲ, ಮೌಢ್ಯದ ಪರʼ ಎಂದಿದ್ದಾರೆ.

ಎಲ್ಲಾ ಬ್ರಾಹ್ಮಣ್ಯಗಳ ನಡುವೆ ಈ ಸರ್ಕಾರ ವಿಧಾನಸೌಧದಲ್ಲಿ ಭುವನೇಶ್ವರಿ ಪ್ರತಿಮೆ ಸ್ಥಾಪನೆ ಮಾಡಿದ್ದಾರೆ. ಕನ್ನಡ ಶಾಲೆಗಳಲ್ಲಿ ಕನ್ನಡದ ಪ್ರಾಬಲ್ಯ ಹೆಚ್ಚಿಸಲು ಕಾನೂನು ತರಬೇಕು. ಕನ್ನಡ ಮಾಧ್ಯಮದಲ್ಲಿ ಓದಿರೋರಿಗೆ ಉದ್ಯೋಗ ಕಲ್ಪಿಸಿಕೊಡಿ. ಖಾಸಗಿ ವಲಯದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ಕಲ್ಪಿಸಿಕೊಡಿ. ಅದು ನಿಜವಾದ ಕನ್ನಡ ಅಭಿಮಾನ. ಹೊರತು ಭುವನೇಶ್ವರಿ ಪ್ರತಿಮೆ ಸ್ಥಾಪನೆ ಮಾಡುವುದಲ್ಲ ಎಂದು ಚೇತನ್‌ ನುಡಿದಿದ್ದಾರೆ.

ಮುಂದಿನ ದಿನಗಳಲ್ಲಿ ಭುವನೇಶ್ವರಿ ಪ್ರತಿಮೆ ಸ್ಥಾಪನೆ ಪಾಲಿಟಿಕ್ಸ್ ಆಗುತ್ತೆ. ಭುವನೇಶ್ವರಿ ಪ್ರತಿಮೆಗೆ ಒಬ್ಬ ಅರ್ಚಕ ಬರ್ತಾರೆ. ಮುಂದೆ ಅದು ಮಂದಿರ ಆಗುತ್ತೆ. ಮುಂದಿನ ದಿನಗಳಲ್ಲಿ ವಿಧಾನಸೌಧ ಒಂದು ಧಾರ್ಮಿಕ ಕೇಂದ್ರವಾಗಿಬಿಡುತ್ತೆ ಎಂದು ಚಿಕ್ಕಬಳ್ಳಾಪುರದ ಪತ್ರಕರ್ತರ ಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ನಟ ಚೇತನ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ವಾಲ್ಮೀಕಿ ನಿಗಮ ಹಗರಣಕ್ಕೆ ಆಕ್ರೋಶ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ (Valmiki Corporation Scam) ವಿಚಾರದಲ್ಲಿ ಸರ್ಕಾರದ ವಿರುದ್ಧ ಚಿಕ್ಕಬಳ್ಳಾಪುರದಲ್ಲಿ ನಟ ಚೇತನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. 187 ಕೋಟಿ ರೂಪಾಯಿ ವಾಲ್ಮೀಕಿ ನಿಗಮದ ಹಣ ದುರ್ಬಳಕೆ ಆಗಿದೆ. ವಾಲ್ಮೀಕಿ ಹಗರಣವನ್ನು ಮುಚ್ಚಿಹಾಕಲು ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಹಗರಣದ ಬಗ್ಗೆ ಎಸ್.ಐ.ಟಿ. ಒಂದೂವರೆ ತಿಂಗಳಿಂದ ಕ್ರಮ ತೆಗೆದುಕೊಳ್ಳುತ್ತಿಲ್ಲ. ಬಿ.ನಾಗೇಂದ್ರ ಬಳ್ಳಾರಿಯ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಭಾಗಿಯಾಗಿ ಜೈಲಿಗೆ ಹೋಗಿದ್ದ ವ್ಯಕ್ತಿ. ಮಂತ್ರಿ ಆಗಲು ಅರ್ಹತೆ ಇಲ್ಲದ ವ್ಯಕ್ತಿ. ಅಂತಹವರು ಸಚಿವರಾದರು. ಎಸ್.ಐ.ಟಿ. ಸರ್ಕಾರದ ತಾಳಕ್ಕೆ ತಕ್ಕಂತೆ ಕುಣಿಯುತ್ತಿದೆ. ಇಡಿ ಪ್ರವೇಶ ಮಾಡಿದ ನಂತರ ತನಿಖೆ ಚುರುಕುಗೊಂಡಿದೆ. ತೆಲಂಗಾಣ-ಆಂಧ್ರಕ್ಕೆ ಆ ಹಣ ಹೋಗಿದೆ ಅನ್ನೋದು ಬೆಳಕಿಗೆ ಬಂದಿದೆ. ಇದರ ಬಗ್ಗೆ ಸೂಕ್ತ ತನಿಖೆ ಆಗಬೇಕು ಎಂದು ಅವರು ಹೇಳಿದ್ದಾರೆ.

ನ್ಯಾಯಾಂಗ ತನಿಖೆಗೆ ಒಪ್ಪಲ್ಲ: ವಿಜಯೇಂದ್ರ

ಮುಡಾ ಹಗರಣದಲ್ಲಿ ನ್ಯಾಯಾಂಗ ತನಿಖೆಗೆ ನಾವು ಒಪ್ಪುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ. ಮುಡಾ ಹಗರಣ ನ್ಯಾಯಾಂಗ ತನಿಖೆಗೆ ನೀಡಿರುವುದು ಸರಿಯಲ್ಲ. ಸರ್ಕಾರ CBI ತನಿಖೆಗೆ ನೀಡಬೇಕು. ಯಾವುದೇ ಕಾರಣಕ್ಕೂ ನ್ಯಾಯಾಂಗ ತನಿಖೆಯನ್ನು ಒಪ್ಪಲ್ಲ. ಸಿಎಂಗೆ ತಾಕತ್‌ ಇದ್ದರೆ ಇದನ್ನು ಸಿಬಿಐ ತನಿಖೆಗೆ ಕೊಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ನ್ಯಾಯಾಂಗ ತನಿಖೆ ಅಂತ ನಾಟಕ‌ಮಾಡುತ್ತಿದ್ದಾರೆ. ಇದೊಂದು ದೊಡ್ಡ ಹಗರಣ. ಸದನದ ಒಳಗೆ ಹೊರಗೆ ನಾವು ಹೋರಾಟ ಮಾಡುತ್ತೇವೆ. ಸಿಎಂ ರಾಜೀನಾಮೆ ಕೋಡಬೇಕು. ದಲಿತರ ಹೆಸರಲ್ಲಿ ಅಧಿಕಾರಕ್ಕೆ ಬಂದು ದಲಿತರ ಹಣ ದೋಚಿದ್ದಾರೆ. ಕಾಂಗ್ರೆಸ್ ಸರ್ಕಾರದ ಬಂಡವಾಳ ಬಯಲಾಗಿದೆ. ಸಿಎಂ ನೈತಿಕತೆ ‌ಕಳೆದುಕೊಂಡಿದ್ದಾರೆ. ವಾಲ್ಮೀಕಿ ನಿಗಮ ಹಗರಣದಲ್ಲಿ ನಾಗೇಂದ್ರ ಈಗಾಗಲೇ ಇಡಿ‌ ಕಸ್ಟಡಿಯಲ್ಲಿದ್ದಾರೆ. ಸಿಎಂ ಇದಕ್ಕೆ ಉತ್ತರ ಕೊಡಬೇಕು ಎಂದು ವಿಜಯೇಂದ್ರ ಆಗ್ರಹಿಸಿದರು.

ಡಿಸಿಎಂ ಆರೋಪಿಗಳಿಗೆ ಕ್ಲೀನ್ ಚಿಟ್ ಕೊಡ್ತಾ ಇದ್ದಾರೆ. ಮುಡಾ ಹಗರಣ ಸಿಬಿಐಗೆ ವಹಿಸಬೇಕು. ವಾಲ್ಮೀಕಿ ನಿಗಮದ ಹಗರಣಕ್ಕೆ ಸದನದಲ್ಲಿ ಸಿಎಂ ಉತ್ತರ ಕೋಡಬೇಕು. ವಾಲ್ಮೀಕಿ ನಿಗಮ ಹಗರಣದ ಬಗ್ಗೆ ನಿಲುವಳಿ‌ ಸೂಚನೆ ಕೊಟ್ಟಿದ್ದೇವೆ. ಇವತ್ತು ಚರ್ಚೆಗೆ ಅವಕಾಶ ಕೊಡುತ್ತೇವೆ. ಮುಡಾದಲ್ಲಿ ಯಾರದೇ ಮೇಲೆ ಆರೋಪ ಇರಲಿ, ಸಿಬಿಐ ತನಿಖೆಗೆ ನೀಡಿ ಎಂದು ಸರ್ಕಾರಕ್ಕೆ ವಿಜಯೇಂದ್ರ ಒತ್ತಾಯಿಸಿದರು.

ಇದನ್ನೂ ಓದಿ: CM Siddaramaiah: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಖಾಸಗಿ ದೂರು ನೀಡಲು ಮುಂದಾದ ಬಿಜೆಪಿ

Continue Reading

ಕರ್ನಾಟಕ

DK Shivakumar: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಕೆಶಿಗೆ ಹಿನ್ನಡೆ; ಕೇಸ್‌ ರದ್ದು ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ!

DK Shivakumar: ಬಿಐ ಪ್ರಕರಣ ರದ್ದು ಕೋರಿ‌ ಡಿ.ಕೆ.ಶಿವಕುಮಾರ್‌ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾ ಮಾಡಿದೆ. ಅಲ್ಲದೆ ಮೂರು ತಿಂಗಳೊಳಗೆ ತನಿಖೆ ಮುಗಿಸಿ ವರದಿ ಸಲ್ಲಿಸುವಂತೆ ಸಿಬಿಐಗೆ ನಿರ್ದೇಶನ ನೀಡಿದೆ.

VISTARANEWS.COM


on

DK Shivakumar
Koo

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್‌ (DK Shivakumar) ಅವರಿಗೆ ಹಿನ್ನಡೆಯಾಗಿದೆ. ಸಿಬಿಐ ಪ್ರಕರಣ ರದ್ದು ಕೋರಿ‌ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾ ಮಾಡಿದೆ. ಪ್ರಕರಣ ರದ್ದು ಕೋರಿ‌ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್‌ನ ನ್ಯಾ. ಬೇಲಾ ತ್ರಿವೇದಿ ಪೀಠ ವಿಚಾರಣೆ ನಡೆಸಿದ್ದು, ಕರ್ನಾಟಕ ಹೈಕೋರ್ಟ್ ಆದೇಶದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ತಿಳಿಸಿದೆ.

ಪ್ರಕರಣ ರದ್ದುಗೊಳಿಸಲು ಕೋರಿ ಡಿಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು 2023ರ ಅ. 19ರಂದು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿತ್ತು. ಈ ಆದೇಶದ ವಿರುದ್ಧ ಶಿವಕುಮಾರ್ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌, ಪ್ರಕರಣವನ್ನು ರದ್ದುಪಡಿಸಲು ನಿರಾಕರಿಸಿದ್ದು ಮಾತ್ರವಲ್ಲದೆ ಮೂರು ತಿಂಗಳೊಳಗೆ ತನಿಖೆ ಮುಗಿಸಿ ವರದಿ ಸಲ್ಲಿಸುವಂತೆ ಸಿಬಿಐಗೆ ನಿರ್ದೇಶನ ನೀಡಿದೆ.

ಇದನ್ನೂ ಓದಿ | Midday meal workers: ಅಕ್ಷರ ದಾಸೋಹ ನೌಕರರ ಅನಿರ್ದಿಷ್ಟಾವಧಿ ಹೋರಾಟ ಆರಂಭ; ಗೌರವಧನ ಹೆಚ್ಚಳ ಸೇರಿ ವಿವಿಧ ಬೇಡಿಕೆ

ಏನಿದು ಪ್ರಕರಣ?

2013ರಿಂದ 2018ರ ಅವಧಿಯಲ್ಲಿ ಆದಾಯಕ್ಕಿಂತಲೂ ಅಧಿಕ ಆಸ್ತಿ ಗಳಿಸಿದ ಆರೋಪ ಡಿ.ಕೆ. ಶಿವಕುಮಾರ್‌ ಮೇಲೆ ಇತ್ತು. ಈ ಪ್ರಕರಣವನ್ನು ಆಗಿನ ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪ (BS Yediyurappa) ನೇತೃತ್ವದ ಸರ್ಕಾರ ಸಚಿವ ಸಂಪುಟದಲ್ಲಿ ಚರ್ಚೆ ನಡೆಸಿ 2019ರಲ್ಲಿ ಸಿಬಿಐಗೆ ನೀಡಿತ್ತು. ಸಿಬಿಐಗೆ ಪ್ರಕರಣವನ್ನು ವಹಿಸಿದ್ದನ್ನು ಪ್ರಶ್ನೆ ಮಾಡಿದ್ದ ಡಿ.ಕೆ. ಶಿವಕುಮಾರ್‌ ಕೋರ್ಟ್‌ ಮೊರೆ ಹೋಗಿದ್ದರು. ಎಫ್ಐಆರ್ ಹಾಕದೇ ಕೇಂದ್ರೀಯ ತನಿಖಾ ತಂಡಕ್ಕೆ ನೀಡಿದ್ದು ಸರಿಯಲ್ಲ ಎಂದು ಕೋರ್ಟ್‌ನಲ್ಲಿ ಡಿಕೆಶಿ ಪ್ರಶ್ನೆ ಮಾಡಿದ್ದರು.

ಅಲ್ಲದೆ ಇದೇ ಪ್ರಕರಣದಲ್ಲಿ ಸುಮಾರು 48 ದಿನಕಾಲ ಡಿ.ಕೆ. ಶಿವಕುಮಾರ್‌ ಜೈಲು ಪಾಲಾಗಿದ್ದರು. ಬಳಿಕ ಚಾರ್ಜ್‌ಶೀಟ್ ಸಲ್ಲಿಕೆ ಮಾಡಲಾಗಿತ್ತು. ಕೊನೆಗೆ ಕೋರ್ಟ್‌ನಿಂದ ಷರತ್ತುಬದ್ಧ ಜಾಮೀನು ಪಡೆಯಲಾಗಿತ್ತು. ಈ ನಡುವೆ ಹೈಕೋರ್ಟ್‌ನಲ್ಲಿ ಪ್ರಕರಣವನ್ನು ಇತ್ಯರ್ಥಪಡಿಸಿಕೊಳ್ಳಿ ಎಂದು ಸುಪ್ರೀಂ ಕೋರ್ಟ್ ಆದೇಶವನ್ನು ಹೊರಡಿಸಿತ್ತು. ಇಲ್ಲಿ ವಿಚಾರಣೆ ನಡೆಸಿದ್ದ ಕರ್ನಾಟಕ ಹೈಕೋರ್ಟ್‌ನ ಏಕ ಸದಸ್ಯ ಪೀಠ ಸಿಬಿಐ ವಿಚಾರಣೆಯನ್ನು ಎತ್ತಿ ಹಿಡಿದು, ಪ್ರಕರಣ ರದ್ದುಗೊಳಿಸಲು ಡಿಕೆಶಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿತ್ತು.

Continue Reading
Advertisement
dcm dk shivakumar
ಪ್ರಮುಖ ಸುದ್ದಿ23 mins ago

DK Shivakumar: `ಲೋಕಾಯುಕ್ತಕ್ಕೆ ಕೊಟ್ಟ ಮೇಲೆ ಸಿಬಿಐಗೇನು ಕೆಲಸ?’ ಅಕ್ರಮ ಆಸ್ತಿ ಕೇಸ್‌ ಬಗ್ಗೆ ಡಿಕೆ ಶಿವಕುಮಾರ್‌ ಪ್ರಶ್ನೆ

DK Shivakumar cbi supreme court
ಪ್ರಮುಖ ಸುದ್ದಿ1 hour ago

DK Shivakumar: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಕೆಶಿಗೆ ಶಾಕ್‌, ಸಿಬಿಐ ತನಿಖೆ ಕೈಬಿಡಲು ಸುಪ್ರೀಂ ಕೋರ್ಟ್‌ ನಕಾರ

Healthy Heart Tips
ಆರೋಗ್ಯ2 hours ago

Healthy Heart Tips: ನಿಮ್ಮ ಹೃದಯ ಆರೋಗ್ಯವಾಗಿರಬೇಕೆ? ಮಳೆಗಾಲದಲ್ಲಿ ಈ ಏಳು ಆಹಾರಗಳಿಂದ ದೂರವಿರಿ!

actor Chetan
ಸಿನಿಮಾ2 hours ago

Actor Chetan: ವಿಧಾನಸೌಧದ ಮುಂದೆ ಭುವನೇಶ್ವರಿ ಪ್ರತಿಮೆ ಬೇಡ: ನಟ ಚೇತನ್‌

Ragini Prajwal shanabhogara magalu will release
ಸ್ಯಾಂಡಲ್ ವುಡ್2 hours ago

Ragini Prajwal: ರಾಗಿಣಿ ಪ್ರಜ್ವಲ್ ಅಭಿನಯದ `ಶಾನುಭೋಗರ ಮಗಳು’ ಚಿತ್ರ ಸದ್ಯದಲ್ಲೇ ತೆರೆಗೆ!

BSNL New Plan
ಗ್ಯಾಜೆಟ್ಸ್2 hours ago

BSNL New Plan: 395 ದಿನಗಳ ವ್ಯಾಲಿಡಿಟಿಯ ಬಿಎಸ್‌ಎನ್‌ಎಲ್ ಹೊಸ ಪ್ಲ್ಯಾನ್‌; ಜಿಯೊ, ಏರ್‌ಟೆಲ್‌ಗೆ ಸೆಡ್ಡು

Viral Video
Latest2 hours ago

Viral Video: ರಸ್ತೆಯಲ್ಲಿ ಬಾಲಕನನ್ನು ಅಟ್ಟಾಟಿಸಿ ದಾಳಿ ಮಾಡಿದ ಕೋತಿಗಳು; ಆತಂಕ ಮೂಡಿಸುವ ವಿಡಿಯೊ

Anant Ambani Marriage
Latest2 hours ago

Anant Ambani Marriage: ಅಂಬಾನಿ ಮದುವೆ ಸಮಾರಂಭದೊಳಗೆ ನುಸುಳಿದ್ದ ಇಬ್ಬರು ʼನಕಲಿ ಅತಿಥಿʼಗಳ ಬಂಧನ!

One Nation One Rate
ವಾಣಿಜ್ಯ2 hours ago

One Nation One Rate: ಚಿನ್ನಕ್ಕೆ ದೇಶಾದ್ಯಂತ ಒಂದೇ ದರ! ಹೊಸ ನಿಯಮ ಶೀಘ್ರ ಜಾರಿ ಸಾಧ್ಯತೆ

Arvind Kejriwal
ದೇಶ3 hours ago

Arvind Kejriwal: “ಜೈಲಿನಲ್ಲಿ ಕೇಜ್ರಿವಾಲ್‌ ಹತ್ಯೆಗೆ ಸಂಚು”- ಸಂಚಲನ ಮೂಡಿಸ್ತಿದೆ ಆಪ್‌ ಆರೋಪ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ5 hours ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ10 hours ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ22 hours ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ24 hours ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ1 day ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ1 day ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ2 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಕಳಚಿ ಬಿದ್ದ ಚಾವಣೆ; ರಸ್ತೆಗೆ ಅಡ್ಡಲಾಗಿ ಉರುಳಿದ ಬೃಹತ್‌ ಮರ

Wild Animal Attack
ಹಾಸನ2 days ago

Wild Animal Attack : ಬೇಲೂರಿನಲ್ಲಿ ಒಂಟಿ ಸಲಗ ಡೆಡ್ಲಿ ಅಟ್ಯಾಕ್; ಮನೆ ಅಂಗಳದಲ್ಲಿ ಓಡಾಡಿದ ಚಿರತೆ

karnataka Rain Effect
ಮಳೆ4 days ago

Karnataka Rain : ಭಾರಿ ಮಳೆಗೆ ಕರೆಯಂತಾದ ರಸ್ತೆಯಲ್ಲಿ ಬೈಕ್‌ ಚಲಾಯಿಸಿ ಮುಗ್ಗರಿಸಿ ಬಿದ್ದ ಸವಾರರು; ನಾಳೆಗೂ ರೈನ್‌ ಅಲರ್ಟ್‌

ಟ್ರೆಂಡಿಂಗ್‌