Bengaluru Rains: ಅಂಡರ್‌ಪಾಸ್‌ನಲ್ಲಿ ಯುವತಿ ಸಾವು ಪ್ರಕರಣ, ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಕೇಸ್‌ - Vistara News

ಕರ್ನಾಟಕ

Bengaluru Rains: ಅಂಡರ್‌ಪಾಸ್‌ನಲ್ಲಿ ಯುವತಿ ಸಾವು ಪ್ರಕರಣ, ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಕೇಸ್‌

ಅಂಡರ್‌ಪಾಸ್‌ನಲ್ಲಿ ನಿಂತ ನೀರಿನಲ್ಲಿ ಮುಳುಗಿ ಯುವತಿ ಮೃತಪಟ್ಟ ಪ್ರಕರಣದಲ್ಲಿ ಬಿಬಿಎಂಪಿ ಅಧಿಕಾರಿಗಳ ಮೇಲೆ ಪ್ರಕರಣ ದಾಖಲಿಸಲಾಗಿದೆ.

VISTARANEWS.COM


on

bhanurekha infosis employee dead
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜಧಾನಿಯಲ್ಲಿ ಭಾನುವಾರ ಸಂಜೆ ಅಬ್ಬರಿಸಿದ ಮಳೆಯ ಪರಿಣಾಮವಾಗಿ ಅಂಡರ್‌ಪಾಸ್‌ನಲ್ಲಿ ತುಂಬಿಕೊಂಡ ನೀರಿನಲ್ಲಿ ಮುಳುಗಿ ಇನ್ಫೋಸಿಸ್‌ ಉದ್ಯೋಗಿಯೊಬ್ಬರು ಮೃತಪಟ್ಟಿದ್ದರು. ಕೆ.ಆರ್ ಸರ್ಕಲ್ ಅಂಡರ್‌ಪಾಸ್‌ನಲ್ಲಿ ಈ ದುರ್ಘಟನೆ ನಡೆದಿತ್ತು. ಇದೀಗ ಈ ಪ್ರಕರಣದ ಕುರಿತು ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.

ಮೃತ ಯುವತಿ ಇನ್ಫೋಸಿಸ್‌ ಉದ್ಯೋಗಿ ಭಾನುರೇಖಾ (22). ಈ ಸಂಬಂಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆ ಹೇಗೆ ನಡೆದಿತ್ತು?

ಆಂಧ್ರ ಮೂಲದ ಭಾನುರೇಖಾ ಕುಟುಂಬಸ್ಥರು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಒಂದೇ ಕುಟುಂಬದ ಒಟ್ಟು ಆರು ಜನ ಕಾರಿನಲ್ಲಿದ್ದರು. ಡ್ರೈವರ್ ಸೇರಿ ಏಳು ಜನರಿದ್ದರು. ಸಮಿತಾ (13), ಸೋಹಿತಾ (15), ಸಂಭ್ರಾಜ್ಯಂ (65), ಭಾನುರೇಖಾ (22) ಹರೀಶ್ ಸ್ವರೂಪ (47), ಸಂದೀಪ್‌ (35) ಕಾರಿನಲ್ಲಿದ್ದರು.

ಅಂಡರ್‌ಪಾಸ್‌ನಲ್ಲಿ ಕಾರು ಇಳಿಯುತ್ತಿದ್ದಂತೆ, ನೀರು ಹೆಚ್ಚಾಗುತ್ತಿದೆ, ಕಾರು ಮುಂದೆ ಹೋಗುವುದಿಲ್ಲ, ಹೀಗಾಗಿ ಎಲ್ಲರೂ ಕೆಳಗಿಳಿಯಿರಿ ಎಂದು ಚಾಲಕ ಹೇಳಿದ್ದ. ಆದರೆ ಕಾರು ಮೂವ್ ಮಾಡಿ, ಹೋಗಬಹುದು ಎಂದು ಡ್ರೈವರ್‌ಗೆ ಇವರು ಒತ್ತಾಯಿಸಿದರು. ಈ ವೇಳೆ‌ ಚಾಲಕ ಕಾರು ಮುಂದೆ ಬಿಡುತ್ತಿದ್ದಂತೆ ಕ್ಷಣ ಕ್ಷಣಕ್ಕೂ ಅಂಡರ್‌ಪಾಸ್‌ ಒಳಗೆ ನೀರು ಹೆಚ್ಚಾಗುತ್ತ ಹೋಯಿತು. ಇಂಜಿನ್‌ಗೆ ನೀರು ತುಂಬಿಕೊಂಡು ಬ್ಲಾಕ್ ಆಯಿತು. ನಂತರ ಕಾರು ರೀಸ್ಟಾರ್ಟ್ ಮಾಡಲು ಸಾಧ್ಯವಾಗಿರಲಿಲ್ಲ.

ಅಷ್ಟರಲ್ಲೇ ನೀರು ಕಾರಿನ ಡೋರ್‌ನ ಮಟ್ಟಕ್ಕೆ ಬಂದಿದ್ದು, ನಂತರ ಡೋರ್ ಬ್ಲಾಕ್ ಆಗಿ ತೆಗೆಯಲು ಕಷ್ಟವಾಯಿತು. ಈ ವೇಳೆ ಡ್ರೈವರ್ ಡೋರ್ ತೆಗೆದು ಒಬ್ಬೊಬ್ಬರನ್ನೇ ಕೆಳಗೆ ಇಳಿಸಲು ಪ್ರಯತ್ನಿಸಿದ್ದಾನೆ. ಅಷ್ಟರಲ್ಲಾಗಲೇ ಒಳಗಡೆ ಇದ್ದ ಭಾನುರೇಖಾ ಸಾಕಷ್ಟು ನೀರು ಕುಡಿದಿದ್ದರು. ನೀರು ಕುಡಿದು ಪ್ರಜ್ಞೆ ಕಳೆದುಕೊಂಡಿದ್ದರು. ನಂತರ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಒಬ್ಬೊಬ್ಬರನ್ನೇ ರಕ್ಷಣೆ ಮಾಡಿದ್ದರು. ನಂತರ ಎಲ್ಲರನ್ನೂ ಸೆಂಟ್ ಮಾರ್ಥಾಸ್ ಆಸ್ಪತ್ರೆಗೆ ಕರೆ ತಂದಿದ್ದರು. ಬಂದ ಕೂಡಲೇ ಭಾನುರೇಖಾ ಅವರನ್ನು ಪರೀಕ್ಷಿಸಿದ ಆಸ್ಪತ್ರೆ ವೈದ್ಯರು, ಅವರು ಮೃತಪಟ್ಟಿದ್ದನ್ನು ಖಚಿತಪಡಿಸಿದ್ದರು.

ಬಿಬಿಎಂಪಿ ಅಧಿಕಾರಿಗಳ ವಿರುದ್ಧ‌ ಕೇಸ್‌

ಯುವತಿ ಸಹೋದರ ಸಂದೀಪ್ ಈ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಂಡರ್‌ಪಾಸ್‌ನಲ್ಲಿ ನೀರು ತುಂಬಿದ್ದು, ನೀರು ಹೊರ ಹೋಗಲು ಸೂಕ್ತ ಕ್ರಮ ಕೈಗೊಳ್ಳದ ಬಗ್ಗೆ ದೂರು ನೀಡಲಾಗಿದೆ. ಹೀಗಾಗಿ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಹಲಸೂರು ಗೇಟ್ ಪೊಲೀಸರು ಐಪಿಸಿ ಸೆಕ್ಷನ್ 304ಎ ಅಡಿಯಲ್ಲಿ ಎಫ್ಐಆರ್ ದಾಖಲು ಮಾಡಿದ್ದಾರೆ. ಅಸಹಜ ಸಾವು ಪ್ರಕರಣ ದಾಖಲಿಸಿದ್ದಾರೆ.

ಘಟನೆ ಸ್ಥಳಕ್ಕೆ ಡಿಸಿಎಂ ಡಿಕೆಶಿ ಭೇಟಿ

ದುರ್ಘಟನೆ ನಡೆದ ಸ್ಥಳಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರು ಭಾನುವಾರ ರಾತ್ರಿ ಭೇಟಿ ನೀಡಿದ್ದಾರೆ. ಜತೆಗೆ ಸಚಿವ ರಾಮಲಿಂಗಾ ರೆಡ್ಡಿ ಸಹ ಉಪಸ್ಥಿತರಿದ್ದರು. ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಅವರು ಅಂಡರ್‌ಪಾಸ್‌ನ ಸ್ಥಿತಿಗತಿ ಬಗ್ಗೆ ಡಿಕೆಶಿ ಅವರಿಗೆ ವಿವರಣೆ ನೀಡಿದರು.

ಇಂಥ ಘಟನೆಗಳ ನಿವಾರಣೆಗೆ ಒಂದು ವಿವರವಾದ ಆಕ್ಷನ್ ಪ್ಲಾನ್ ಮಾಡಬೇಕಿದೆ. ನೀವು ಮಾಧ್ಯಮ ಸಹ ಉತ್ತಮ ಕೆಲಸ ಮಾಡಿದ್ದೀರಿ, ಅದನ್ನು ನಾನು ಅಭಿನಂದಿಸುತ್ತೇನೆ. ಈ ರೀತಿ ಮುಂದೆ ಆಗದಂತೆ ನೋಡಿಕೊಳ್ಳುತ್ತೇವೆ. ಅಂಡರ್‌ಪಾಸ್‌ಗಳಿಗೆ ಕ್ಯಾಮೆರಾ ಅಳವಡಿಕೆಗೆ ಸೂಚನೆ ನೀಡಿದ್ದೇನೆ. ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸುತ್ತದೆ ಎಂದು ಘಟನಾ ಸ್ಥಳದಲ್ಲಿ ಪರಿಶೀಲನೆ ಬಳಿಕ ಡಿಕೆಶಿ ಹೇಳಿದರು.

ಇದನ್ನೂ ಓದಿ: Karnataka Rain: ಸಿಡಿಲು ಬಡಿದು ರೈತ ಮಹಿಳೆ ಸಾವು; ಭಾನುವಾರದ ಮಳೆಯಿಂದಾದ ಸಾವಿನ ಸಂಖ್ಯೆ 4ಕ್ಕೇರಿಕೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Self Harming : ಬೆಂಗಳೂರಲ್ಲಿ ರೈಲಿಗೆ ಸಿಲುಕಿ ಮೂವರು ಸಾವು; ಚೆಲ್ಲಾಪಿಲ್ಲಿಯಾಗಿ ಬಿದ್ದ ಮೃತದೇಹಗಳು

Self Harming : ಬೆಂಗಳೂರಲ್ಲಿ ರೈಲಿಗೆ ಸಿಲುಕಿ ಮೂವರು ದಾರುಣವಾಗಿ ಮೃತಪಟ್ಟಿದ್ದಾರೆ. ಇದು ಆಕಸ್ಮಿಕವೋ ಅಥವಾ ಆತ್ಮಹತ್ಯೆಯೋ ಎಂಬುದು ತಿಳಿದುಬಂದಿಲ್ಲ. ಮೂವರ ಮೃತದೇಹಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.

VISTARANEWS.COM


on

By

Self Harming in Bengaluru
Koo

ಬೆಂಗಳೂರು: ಆಂಧ್ರಪ್ರದೇಶದ ಮೂವರು ಯುವಕರು ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ. ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ನಿನ್ನೆ ಬುಧವಾರ (ಏ.25) ಮಾರತ್ತಹಳ್ಳಿ ರೈಲ್ವೇ ನಿಲ್ದಾಣದ ಬಳಿ ಘಟನೆ ನಡೆದಿದೆ.

ಗುರುವಾರ ಬೆಳಗ್ಗೆ ಸ್ಥಳೀಯರು ಆಗಮನಿಸಿ ರೈಲ್ವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬೈಯಪ್ಪನಹಳ್ಳಿ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಯುವಕರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಮೃತರನ್ನು ಆಂಧ್ರಪ್ರದೇಶದ ಚಿತ್ತೂರು ಮೂಲದವರೆಂದು ತಿಳಿದು ಬಂದಿದೆ. ಶಶಿಕುಮಾರ್ (23), ಲೋಕೇಶ್ (25) ಮೃತ ದುರ್ದೈವಿಗಳು. ಮತ್ತೋರ್ವನ ಗುರುತು ಪತ್ತೆಯಾಗಿಲ್ಲ. ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ತಿಳಿದುಬಂದಿಲ್ಲ.

ರೈಲ್ವೆ ಟ್ರ್ಯಾಕ್‌ ಇರುವ ಕಾರಣ ರಾತ್ರಿಯಲ್ಲಿ ಯುವಕರು ಮೊಬೈಲ್ ಹಾಗೂ ಹೆಡ್‌ಫೋನ್‌ ಹಾಕಿಕೊಂಡು ಟ್ರ್ಯಾಕ್ ಮೇಲೆ ಕುಳಿತುಕೊಳ್ಳುತ್ತಾರೆ. ಪೊಲೀಸರು ಬಂದಾಗ ಇಲ್ಲಿಂದ ತೆರಳುತ್ತಾರೆ, ನಂತರ ಮತ್ತೆ ವಾಪಸ್ ಬಂದು ಇಲ್ಲೇ ಕೂರುತ್ತಾರೆ ಎಂದು ಸ್ಥಳೀಯ ನಿವಾಸಿ ಮಲ್ಲೇಶ್ ಆರೋಪಿಸಿದ್ದಾರೆ. ನಿನ್ನೆ ರಾತ್ರಿ 8:30ಕ್ಕೆ ಈ ಘಟನೆ ನಡೆದಿರಬಹುದು. ಕೆಲಸಕ್ಕೆ ಹೋಗಿ ಬರುವವರು ಈ ಹಳಿಯನ್ನು ದಾಟಿ ಓಡಾಡುತ್ತಾರೆ.

ಇದನ್ನೂ ಓದಿ: Murder Case : ಮನೆ ಹಾಳು ಮಾಡಿದ ಕುಡಿತ; ತಾಯಿ ಸಾವಿಗೆ, ತಂದೆಯ ಕೊಂದ ಮಗ!

Road Accident : ಶಾಸಕ ಎಆರ್ ಕೃಷ್ಣಮೂರ್ತಿ ಕಾರು ಅಪಘಾತ; ಚಲಿಸುತ್ತಿದ್ದಾಗಲೇ ಕಾರ್‌ ಟೈರ್‌ ಸ್ಫೋಟ

ಚಾಮರಾಜನಗರ/ತುಮಕೂರು: ಪ್ರತ್ಯೇಕ ಕಡೆಗಳಲ್ಲಿ ರಸ್ತೆ ಅಪಘಾತಗಳು (Road Accident) ಸಂಭವಿಸಿವೆ. ಮೈಸೂರಿನ ಹೊರವಲಯದ ನಾಡನಹಳ್ಳಿಯಲ್ಲಿ ಶಾಸಕ ಎಆರ್ ಕೃಷ್ಣಮೂರ್ತಿ (MLA A R Krishnamurthy) ಅವರ ಕಾರು ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್‌ ಕಾರಿನಲ್ಲಿದ್ದ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Road Accident

ಕೊಳ್ಳೆಗಾಲದ ಕಾಂಗ್ರೆಸ್ ಶಾಸಕ ಎಆರ್ ಕೃಷ್ಣಮೂರ್ತಿ ಬುಧವಾರ ತಡರಾತ್ರಿ ಚಾಮರಾಜನಗರದಿಂದ ಮೈಸೂರಿನ ಮನೆಗೆ ಹೋಗುವ ಅಪಘಾತ ಸಂಭವಿಸಿದೆ. ಚಲಿಸುತ್ತಿದ್ದಾಗಲೇ ಕಾರಿನ ಟೈರ್ ಸ್ಫೋಟಗೊಂಡಿದೆ. ಪರಿಣಾಮ ಚಾಲಕನ ನಿಯಂತ್ರಣಕ್ಕೆ ಸಿಗದೇ ಕಾರು ರಸ್ತೆ ಬಿಟ್ಟು ಪಕ್ಕಕ್ಕೆ ಇಳಿದಿದೆ.

Road Accident in Chamarajnagar

ಇದನ್ನೂ ಓದಿ: IPL 2024: ಸಿಕ್ಸರ್​ನಿಂದ ಗಾಯಗೊಂಡ ಕ್ಯಾಮೆರಮನ್​ಗೆ ವಿಡಿಯೊ ಮೂಲಕ ಕ್ಷಮೆ ಕೇಳಿದ ರಿಷಭ್​ ಪಂತ್​​

ಲಾರಿಯ ಹಿಂಬದಿಗೆ ಬುಲೆರೋ ವಾಹನ ಡಿಕ್ಕಿ, ಇಬ್ಬರು ಸಾವು

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ಅಪಘಾತ ಸಂಭವಿಸಿದೆ. ಲಾರಿಯ ಹಿಂಬದಿಗೆ ಬುಲೆರೋ ವಾಹನ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮುಂದೆ ಸಾಗುತ್ತಿದ್ದ ಅಶೋಕ ಲೇಲ್ಯಾಂಡ್ ಲಾರಿಗೆ ಹಿಂಬದಿಯಿಂದ ಬೊಲೆರೋ ವಾಹನ ಡಿಕ್ಕಿಯಾಗಿದೆ. ಪರಿಣಾಮ ಬೊಲೆರೋ ವಾಹನದಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ. ಉಮೇಶ್ ನಾಗಪ್ಪ ಹಾಗೂ ಸಂತೋಷ್ ಸುರೇಶ್ ಮೃತ ದುರ್ದೈವಿ. ಮೃತರು ಮೂಲತಃ ಬೆಳಗಾವಿ ಜಿಲ್ಲೆಯ ಅಥಣಿಯವರು ಎನ್ನಲಾಗಿದೆ.

Road Accident in Tumkur

ದ್ರಾಕ್ಷಿ ತುಂಬಿಸಿಕೊಂಡು ಬೆಂಗಳೂರು ಕಡೆ ಬರುವಾಗ ಈ ಭೀಕರ ಅಪಘಾತ ಸಂಭವಿಸಿದೆ. ಬೊಲೆರೋ ವಾಹನ ಚಾಲಕನಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯರು ಶಿರಾ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಳ್ಳಂಬೆಳ್ಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Lok Sabha Election 2024: ಆರತಕ್ಷತೆಯಲ್ಲಿ ವಧು-ವರರಿಂದ ಮತದಾನ ಜಾಗೃತಿ

Lok Sabha Election 2024: ಗಂಗಾವತಿ ನಗರದ ಗ್ರಾಮ ದೇವತೆ ದುರ್ಗಾದೇವಿ ದೇವಸ್ಥಾನದ ಸಮುದಾಯ ಭವನದಲ್ಲಿ ಬುಧವಾರ ನಡೆದ ಮದುವೆ ಆರತಕ್ಷತೆಯಲ್ಲಿ ನೂತನ ದಾಂಪತ್ಯ ಜೀವನಕ್ಕೆ ಕಾಲಿಟ್ಟ ವಧು-ವರರು ಮತದಾನದ ಬಗ್ಗೆ ಜಾಗೃತಿ ಮೂಡಿಸಿ ಗಮನ ಸೆಳೆದರು.

VISTARANEWS.COM


on

Voting awareness by the newly married couple at the reception
Koo

ಗಂಗಾವತಿ: ನಗರದ ಗ್ರಾಮ ದೇವತೆ ದುರ್ಗಾದೇವಿ ದೇವಸ್ಥಾನದ ಸಮುದಾಯ ಭವನದಲ್ಲಿ ಬುಧವಾರ ನಡೆದ ಮದುವೆ ಆರತಕ್ಷತೆಯಲ್ಲಿ ನೂತನ ದಾಂಪತ್ಯ ಜೀವನಕ್ಕೆ ಕಾಲಿಟ್ಟ ವಧು-ವರರು, ಲೋಕಸಭಾ ಚುನಾವಣೆ 2024ರ ಹಿನ್ನೆಲೆಯಲ್ಲಿ (Lok Sabha Election 2024) ಮತದಾನದ ಬಗ್ಗೆ ಜಾಗೃತಿ (Voting Awareness) ಮೂಡಿಸಿ ಗಮನ ಸೆಳೆದರು.

ನಗರಸಭೆ ಮಾಜಿ ಸದಸ್ಯ ಬಿ. ಅಶೋಕ್ ಟೈಗರ್ ಅವರ ಪುತ್ರಿ ಐಶ್ವರ್ಯ ಅವರ ವಿವಾಹವು ಆದೋನಿಯ ವೀರಾಂಜನೇಯ ಜತೆ ನಡೆದಿದ್ದು, ಇಲ್ಲಿನ ಸಮುದಾಯ ಭವನದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಆರತಕ್ಷತೆಯಲ್ಲಿ ನೂತನ ವಧು-ವರರು ಮತದಾನದ ಬಗ್ಗೆ ಜಾಗೃತಿ ಮೂಡಿಸಿದರು.

ಇದನ್ನೂ ಓದಿ: Samsung: ಸ್ಯಾಮ್‌ಸಂಗ್ ಇನ್ನೋವೇಶನ್ ಕ್ಯಾಂಪಸ್‌ನ 2ನೇ ಆವೃತ್ತಿ ಪ್ರಾರಂಭಿಸಿದ ಸ್ಯಾಮ್‌ಸಂಗ್ ಇಂಡಿಯಾ

ನಮ್ಮ ದೇಶದ ಭವಿಷ್ಯವು ಮತದಾನದಲ್ಲಿ ಅಡಗಿದೆ, ದೇಶದ ನಿಜವಾದ ಪ್ರಜೆಯಾಗಿ ಮತಚಲಾಯಿಸಿ, ನಿಮ್ಮ ಮತ, ನಿಮ್ಮ ಧ್ವನಿ ಎಂಬಿತ್ಯಾದಿ ಫಲಕಗಳನ್ನು ಹಿಡಿದು ಮದುವೆ ಆರತಕ್ಷತೆಗೆ ಬಂದಿದ್ದ ಆಪ್ತರು, ಹಿತೈಷಿಗಳು, ಬಂಧು-ಬಳಗ, ಸ್ನೇಹಿತರಿಗೆ ಜಾಗೃತಿ ಮೂಡಿಸಲಾಯಿತು.

ಇದನ್ನೂ ಓದಿ: DC vs GT: ಕೊಹ್ಲಿಯಂತೆ ಅದ್ಭುತ ಫೀಲ್ಡಿಂಗ್​ ನಡೆಸಿ ಡೆಲ್ಲಿಗೆ ಗೆಲುವು ತಂದ ಟ್ರಿಸ್ಟಾನ್ ಸ್ಟಬ್ಸ್

ಕೊಪ್ಪಳ ಜಿಲ್ಲಾ ಮತದಾನ ಜಾಗೃತಿ ರಾಯಭಾರಿ ಡಾ. ಶಿವಕುಮಾರ್ ಮಾಲಿಪಾಟೀಲ್ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯ ದೊಡ್ಡಹಬ್ಬ ಚುನಾವಣೆ. ಹಬ್ಬದಲ್ಲಿ ಮತದಾನ ಮಾಡುವ ಮೂಲಕ ನಮ್ಮ ಕರ್ತವ್ಯ, ಜವಾಬ್ದಾರಿಗಳನ್ನು ನಿಭಾಯಿಸಬೇಕು. ಪ್ರತಿಯೊಬ್ಬ ಅರ್ಹ ಮತದಾರರರು ತಪ್ಪದೇ ಮತ ಚಲಾಯಿಸಬೇಕು ಎಂದು ತಿಳಿಸಿದರು.

Continue Reading

Lok Sabha Election 2024

Lok Sabha Election 2024: ಕಾಂಗ್ರೆಸ್‌ಗೆ ಅಧಿಕಾರ ಸಿಕ್ಕರೆ ಪಿತ್ರಾರ್ಜಿತ ಆಸ್ತಿಯಲ್ಲಿ ಸರ್ಕಾರಕ್ಕೆ ಪಾಲು; ‘ಕೈ’ಗೆ ಇಕ್ಕಟ್ಟು, ಬಿಜೆಪಿಗೆ ಅಸ್ತ್ರ

Lok Sabha Election 2024: ಪ್ರಧಾನಿ ನರೇಂದ್ರ ಮೋದಿ ಅವರಿಂದ ಹಿಡಿದು ಸಾಮಾನ್ಯ ಕಾರ್ಯಕರ್ತನವರೆಗೂ ಈ ವಿಚಾರವನ್ನು ಪ್ರಸ್ತಾಪ ಮಾಡಲು ತಂತ್ರಗಾರಿಕೆ ಹೆಣೆಯಲಾಗಿದೆ. ಮಾಸ್ ಮತದಾರರನ್ನು ಟಾರ್ಗೆಟ್ ಮಾಡಿ ಈ ವಿಚಾರವನ್ನು ಬಿಜೆಪಿ ಪ್ರಸ್ತಾಪ ಮಾಡುತ್ತಿದೆ. ದಿನೇ ದಿನೇ ಬಿಜೆಪಿ ಈ ವಿಚಾರವನ್ನು ಪ್ರಸ್ತಾಪ ಮಾಡುತ್ತಿದ್ದಂತೆ ಕಾಂಗ್ರೆಸ್‌ಗೆ ಇದರ ಡ್ಯಾಮೇಜ್‌ನ ಅರಿವಾಗಿದೆ. ಚುನಾವಣೆಯಲ್ಲಿ ಇದು ದೊಡ್ಡ ಹೊಡೆತವನ್ನು ಕೊಡಬಹುದು ಎಂದು ಅಂದಾಜಿಸಿದೆ. ಈ ಕಾರಣಕ್ಕೆ ಎಚ್ಚೆತ್ತುಕೊಂಡ ಕೈಪಡೆ ಈಗ ಸ್ಯಾಮ್‌ ಪಿತ್ರೋಡ ಹೇಳಿಕೆಯಿಂದ ಅಂತರ ಕಾಯ್ದುಕೊಳ್ಳಲು ಮುಂದಾಗಿದೆ.

VISTARANEWS.COM


on

Lok Sabha Election 2024 BJP rejects Sam Pitroda statement
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಆಡುವ ಒಂದೊಂದು ಮಾತುಗಳೂ ಪ್ರಾಮುಖ್ಯತೆಯನ್ನು ಪಡೆಯುತ್ತವೆ. ಕೆಲವು ಮಾತುಗಳು ಪ್ಲಸ್‌ ಮಾಡಿದರೆ, ಮತ್ತೆ ಕೆಲವು ಭಾರಿ ಡ್ಯಾಮೇಜ್‌ ಮಾಡುತ್ತವೆ. ಈಗ ಉದ್ಯಮಿ ಸ್ಯಾಮ್‌ ಪಿತ್ರೋಡ (Sam Pitroda) ಕಾಂಗ್ರೆಸ್‌ ಪರವಾಗಿ ಆಡಿದ ಮಾತುಗಳು ಕೈಪಡೆಯನ್ನು ಇಕ್ಕಟ್ಟಿಗೆ ಸಿಲುಕಿಸಿದೆ. “ಪಿತ್ರಾರ್ಜಿತ ಆಸ್ತಿಗಳನ್ನು (Ancestral property) ಮಕ್ಕಳಿಗೆ ಹಸ್ತಾಂತರಿಸುವ ಸಂದರ್ಭದಲ್ಲಿ ಅಮೆರಿಕದಲ್ಲಿ ಜಾರಿಯಲ್ಲಿರುವ ಕಾನೂನನ್ನು ಭಾರತದಲ್ಲಿಯೂ ಅನುಷ್ಠಾನಕ್ಕೆ ತರಬೇಕು. ಪಿತ್ರಾರ್ಜಿತ ಆಸ್ತಿಗೂ ತೆರಿಗೆ ವಿಧಿಸಬೇಕು. ಇದರಲ್ಲಿ ಶೇಕಡಾ 55ರಷ್ಟು ಪಾಲನ್ನು ಸರ್ಕಾರಕ್ಕೆ ಕೊಡಬೇಕು” ಎಂಬ ಸ್ಯಾಮ್ ‌ಪಿತ್ರೋಡ ಹೇಳಿಕೆಯು ಈಗ ಭಾರಿ ವಿವಾದವನ್ನು ಸೃಷ್ಟಿಸಿದೆ. ಇದನ್ನು ಬಿಜೆಪಿ ಚುನಾವಣಾ ಅಸ್ತ್ರ ಮಾಡಿಕೊಂಡಿದ್ದು, ಕಾಂಗ್ರೆಸ್‌ ಇಕ್ಕಟ್ಟಿಗೆ ಸಿಲುಕಿದೆ. ಈ ಹೇಳಿಕೆಗೂ ನಮಗೂ ಸಂಬಂಧವೇ ಇಲ್ಲವೆಂದು ಸ್ಪಷ್ಟೀಕರಣ ಕೊಡುತ್ತಿದೆ. ಅಲ್ಲದೆ, ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ (DK Shivakumar) ಸಹ ಈ ಹೇಳಿಕೆಯಿಂದ ಅಂತರ ಕಾಯ್ದುಕೊಂಡಿದ್ದಾರೆ. ಡಿಕೆಶಿ ಇನ್ನೂ ಒಂದು ಹೆಜ್ಜೆ ಮುಂದಕ್ಕೆ ಹೋಗಿ, ಈ ರೀತಿ ಮಾಡಲು ಕಾನೂನಿನಲ್ಲಿ ಅವಕಾಶವೇ ಇಲ್ಲ ಎಂದು ಹೇಳಿದ್ದಾರೆ.

ದೇಶದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆ ಶುರುವಾಗುವ ಮುನ್ನ ಕಾಂಗ್ರೆಸ್‌ಗೆ ಸ್ಯಾಮ್‌ ಪಿತ್ರೋಡ ಹೇಳಿಕೆ ನುಂಗಲಾರದ ತುತ್ತಾಗಿದೆ. ಕಾರಣ, ಈ ಹೇಳಿಕೆಯನ್ನು ಸರಿಯಾಗಿ ಬಳಸಿಕೊಳ್ಳಲು ಬಿಜೆಪಿ ಮುಂದಾಗಿದೆ. ಇದನ್ನೇ ಚುನಾವಣಾ ಅಸ್ತ್ರವನ್ನಾಗಿ ಮಾಡಿಕೊಂಡಿದೆ. “ಪಿತ್ರಾರ್ಜಿತ ಆಸ್ತಿಗೆ ಕಾಂಗ್ರೆಸ್ ಕೊಕ್ಕೆ” ಎಂಬ ಅಭಿಯಾನವನ್ನೂ ಬಿಜೆಪಿ ಶುರು ಮಾಡಿದೆ.

ಪ್ರಧಾನಿ ನರೇಂದ್ರ ಮೋದಿ ಅವರಿಂದ ಹಿಡಿದು ಸಾಮಾನ್ಯ ಕಾರ್ಯಕರ್ತನವರೆಗೂ ಈ ವಿಚಾರವನ್ನು ಪ್ರಸ್ತಾಪ ಮಾಡಲು ತಂತ್ರಗಾರಿಕೆ ಹೆಣೆಯಲಾಗಿದೆ. ಮಾಸ್ ಮತದಾರರನ್ನು ಟಾರ್ಗೆಟ್ ಮಾಡಿ ಈ ವಿಚಾರವನ್ನು ಬಿಜೆಪಿ ಪ್ರಸ್ತಾಪ ಮಾಡುತ್ತಿದೆ. ದಿನೇ ದಿನೇ ಬಿಜೆಪಿ ಈ ವಿಚಾರವನ್ನು ಪ್ರಸ್ತಾಪ ಮಾಡುತ್ತಿದ್ದಂತೆ ಕಾಂಗ್ರೆಸ್‌ಗೆ ಇದರ ಡ್ಯಾಮೇಜ್‌ನ ಅರಿವಾಗಿದೆ. ಚುನಾವಣೆಯಲ್ಲಿ ಇದು ದೊಡ್ಡ ಹೊಡೆತವನ್ನು ಕೊಡಬಹುದು ಎಂದು ಅಂದಾಜಿಸಿದೆ. ಈ ಕಾರಣಕ್ಕೆ ಎಚ್ಚೆತ್ತುಕೊಂಡ ಕೈಪಡೆ ಈಗ ಸ್ಯಾಮ್‌ ಪಿತ್ರೋಡ ಹೇಳಿಕೆಯಿಂದ ಅಂತರ ಕಾಯ್ದುಕೊಳ್ಳಲು ಮುಂದಾಗಿದೆ. ಈ ಬಗ್ಗೆ ಕೇಂದ್ರ ಮಟ್ಟದಲ್ಲಿಯೂ ಸ್ಪಷ್ಟೀಕರಣವನ್ನು ನೀಡಲಾಗಿದೆ. ಆದರೆ, ಬಿಜೆಪಿ ಮಾತ್ರ ಇದನ್ನೂ ಹಳ್ಳಿ ಹಳ್ಳಿಗೂ ಕೊಂಡೊಯ್ಯಲು ಪ್ಲ್ಯಾನ್‌ ಮಾಡಿಕೊಂಡಿದೆ.

ಇದನ್ನೂ ಓದಿ: Bank fraud: ಗುರು ರಾಘವೇಂದ್ರ, ವಸಿಷ್ಠ ಸಹಕಾರ ಬ್ಯಾಂಕ್‌ಗಳ ಹಗರಣ ಎಸ್‌ಐಟಿ ಹೆಗಲಿಗೆ; ಶೀಘ್ರ ಕ್ರಮವೆಂದ ಡಿಕೆಶಿ

ಡಿ.ಕೆ. ಶಿವಕುಮಾರ್‌ ಹೇಳಿದ್ದೇನು?

ಈ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದು, ಇಂತಹ ಕಾನೂನನ್ನು ತರಲು ಸಾಧ್ಯವೇ ಇಲ್ಲ. ನಮ್ಮದು ಕೂಡಾ ಆಸ್ತಿ ಇದೆ. ಸ್ಯಾಮ್‌ ಪಿತ್ರೋಡ ಅವರ ಹೇಳಿಕೆಯನ್ನು ತಿರುಚುವ ಕೆಲಸ ಆಗುತ್ತಿದೆ ಎಂದು ಹೇಳಿದ್ದಾರೆ. ಇತ್ತ ಸಿಎಂ ಸಿದ್ದರಾಮಯ್ಯ ಸಹ ಈ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಣೆ ಮಾಡಿದ್ದಾರೆ.

Continue Reading

ಬಳ್ಳಾರಿ

Lok Sabha Election 2024: ತಾಯಿ ನಾನು ನಿಮ್ಮ ಮಗನಂತೆ, ಮತ ನೀಡಿ ಗೆಲ್ಲಿಸಿ ಎಂದ ಈ. ತುಕಾರಾಂ

Lok Sabha Election 2024: ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಈ. ತುಕಾರಾಂ ಬಳ್ಳಾರಿ ನಗರದ ಎಪಿಎಂಸಿ ತರಕಾರಿ ಮಾರುಕಟ್ಟೆಯಲ್ಲಿ ಗುರುವಾರ ಬೆಳಿಗ್ಗೆ ಮತಯಾಚನೆ ನಡೆಸಿದರು.

VISTARANEWS.COM


on

Ballari Lok Sabha constituency Congress candidate e Tukaram election campaign at apmc market
Koo

ಬಳ್ಳಾರಿ: ತಾಯಿ ನಾನು ನಿಮ್ಮ ಮಗನಂತೆ. ಮತ ನೀಡಿ, ಈ ಬಾರಿ ಗೆಲ್ಲಿಸಿ, ನಿಮಗಾಗಿ ಕೆಲಸ ಮಾಡುತ್ತೇನೆ. ನಿಮ್ಮ ಆಶೀರ್ವಾದ ಇರಲಿ ಎಂದು ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಈ. ತುಕಾರಾಂ ಮನವಿ (Lok Sabha Election 2024) ಮಾಡಿದರು.

ನಗರದ ಎಪಿಎಂಸಿ ತರಕಾರಿ ಮಾರುಕಟ್ಟೆಯಲ್ಲಿ ಗುರುವಾರ ಬೆಳಿಗ್ಗೆ ಕಾಂಗ್ರೆಸ್‌ ಅಭ್ಯರ್ಥಿ ಈ. ತುಕಾರಾಂ, ಮತಯಾಚನೆ ನಡೆಸಿ, ಮನವಿ ಮಾಡಿದರು.

ಈ ವೇಳೆ ಎಪಿಎಂಸಿ ತರಕಾರಿ ಮಾರುಕಟ್ಟೆಯಲ್ಲಿ ಗ್ರಾಹಕರನ್ನು ಮಾತನಾಡಿಸಿ, ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮತ ನೀಡಿ, ಬೆಂಬಲಿಸಿ, ತಮ್ಮನ್ನು ಗೆಲ್ಲಿಸುವಂತೆ ಅವರು ಮನವಿ ಮಾಡಿದರು.

ಇದನ್ನೂ ಓದಿ: Samsung: ಸ್ಯಾಮ್‌ಸಂಗ್ ಇನ್ನೋವೇಶನ್ ಕ್ಯಾಂಪಸ್‌ನ 2ನೇ ಆವೃತ್ತಿ ಪ್ರಾರಂಭಿಸಿದ ಸ್ಯಾಮ್‌ಸಂಗ್ ಇಂಡಿಯಾ

ಈ ಸಂದರ್ಭದಲ್ಲಿ ಬಳ್ಳಾರಿ ನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಮಾಜಿ ವಿಧಾನ ಪರಿಷತ್ ಸದಸ್ಯ ಕೆ.ಎಸ್.ಎಲ್. ಸ್ವಾಮಿ, ಮುಖಂಡರಾದ ಪದ್ಮಾವತಿ, ಬಿ.ಎಂ.ಪಾಟೀಲ್ ಹಾಗೂ ಕಾರ್ಯಕರ್ತರು, ಇತರರು ಉಪಸ್ಥಿತರಿದ್ದರು.

Continue Reading
Advertisement
Ethnic Collection
ಫ್ಯಾಷನ್18 mins ago

Ethnic Collection: ‘ಹೀರಾಮಂಡಿ’ ವೆಬ್ ಸೀರಿಸ್‌ ಪ್ರೇರಿತ ಸಾಂಪ್ರದಾಯಿಕ ಫ್ಯಾಷನ್ ಕಲೆಕ್ಷನ್‌ ಬಿಡುಗಡೆ ಮಾಡಿದ ಅಜಿಯೋ

Self Harming in Bengaluru
ಬೆಂಗಳೂರು20 mins ago

Self Harming : ಬೆಂಗಳೂರಲ್ಲಿ ರೈಲಿಗೆ ಸಿಲುಕಿ ಮೂವರು ಸಾವು; ಚೆಲ್ಲಾಪಿಲ್ಲಿಯಾಗಿ ಬಿದ್ದ ಮೃತದೇಹಗಳು

Voting awareness by the newly married couple at the reception
ಕರ್ನಾಟಕ25 mins ago

Lok Sabha Election 2024: ಆರತಕ್ಷತೆಯಲ್ಲಿ ವಧು-ವರರಿಂದ ಮತದಾನ ಜಾಗೃತಿ

Tamannaah Bhatia and Sanjay Dutt
ಕ್ರೀಡೆ31 mins ago

IPL Streaming Case: ಏನಿದು ಐಪಿಎಲ್​ ಲೈವ್ ಸ್ಟ್ರೀಮಿಂಗ್ ಕೇಸ್​; ತಮನ್ನಾ,ಜಾಕ್ವೆಲಿನ್, ಸಂಜಯ್​ ದತ್​ಗೆ ಪೊಲೀಸರು ಸಮನ್ಸ್ ಜಾರಿ ಮಾಡಿದ್ದೇಕೆ?

World Malaria Day
ಆರೋಗ್ಯ1 hour ago

World Malaria Day: ಮಲೇರಿಯಾ ಮತ್ತು ಡೆಂಗ್ಯು ನಡುವಿನ ವ್ಯತ್ಯಾಸ ಏನು? ಗುರುತಿಸುವುದು ಹೇಗೆ?

supreme court wealth redistribution
ಪ್ರಮುಖ ಸುದ್ದಿ1 hour ago

ವಿಸ್ತಾರ Explainer: Wealth redistribution: ನಿಮ್ಮ ಆಸ್ತಿಯನ್ನು ಸರ್ಕಾರ ವಶಪಡಿಸಿಕೊಳ್ಳಬಹುದಾ? ಸುಪ್ರೀಂ ಕೋರ್ಟ್ ಮುಂದಿದೆ ಕೇಸ್‌

Lok Sabha Election 2024 BJP rejects Sam Pitroda statement
Lok Sabha Election 20241 hour ago

Lok Sabha Election 2024: ಕಾಂಗ್ರೆಸ್‌ಗೆ ಅಧಿಕಾರ ಸಿಕ್ಕರೆ ಪಿತ್ರಾರ್ಜಿತ ಆಸ್ತಿಯಲ್ಲಿ ಸರ್ಕಾರಕ್ಕೆ ಪಾಲು; ‘ಕೈ’ಗೆ ಇಕ್ಕಟ್ಟು, ಬಿಜೆಪಿಗೆ ಅಸ್ತ್ರ

Anant-Radhika wedding
ವಾಣಿಜ್ಯ2 hours ago

Anant- Radhika  wedding: 1,500 ಕೋಟಿ ರೂ. ದಾಟಲಿದೆ ಅಂಬಾನಿ ಮಗನ ಮದುವೆ ಖರ್ಚು!

Ballari Lok Sabha constituency Congress candidate e Tukaram election campaign at apmc market
ಬಳ್ಳಾರಿ2 hours ago

Lok Sabha Election 2024: ತಾಯಿ ನಾನು ನಿಮ್ಮ ಮಗನಂತೆ, ಮತ ನೀಡಿ ಗೆಲ್ಲಿಸಿ ಎಂದ ಈ. ತುಕಾರಾಂ

Rahul Gandhi
ದೇಶ2 hours ago

Rahul Gandhi: ಅಮೇಥಿಯಲ್ಲಿ ರಾಹುಲ್‌ ಗಾಂಧಿ ಸ್ಪರ್ಧೆ ಖಚಿತ; ಸ್ಮೃತಿ ಇರಾನಿಗೆ ಕೈ ನಾಯಕ ಸವಾಲು!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder case CID Officer
ಹುಬ್ಬಳ್ಳಿ3 hours ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20245 hours ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ1 day ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು3 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ3 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು3 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು3 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ3 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ4 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

ಟ್ರೆಂಡಿಂಗ್‌