ಬೆಂಗಳೂರು: ಕಳೆದ ಭಾನುವಾರ (ಫೆ.26) ಹೈಗ್ರೌಂಡ್ಸ್ ಠಾಣಾ ವ್ಯಾಪ್ತಿಯ ಬಸವೇಶ್ವರ ಸರ್ಕಲ್ ಬಳಿ ಕರ್ತವ್ಯ ನಿರತ ಎಎಸ್ಐ ನಾಗರಾಜ್ (Bengaluru Road Accident) ಎಂಬುವರಿಗೆ ಆಟೋವೊಂದು ಡಿಕ್ಕಿ ಹೊಡೆದಿತ್ತು. ಗಂಭೀರವಾಗಿ ಗಾಯಗೊಂಡಿದ್ದ ನಾಗರಾಜ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಮಂಗಳವಾರ ಚಿಕಿತ್ಸೆ ಫಲಿಸದೇ ಎಎಸ್ಐ ನಾಗರಾಜ್ ಮೃತಪಟ್ಟಿದ್ದಾರೆ.
ಹೈಗ್ರೌಂಡ್ಸ್ ಸಂಚಾರಿ ಠಾಣೆಯ ಎಎಸ್ಐ ಆಗಿದ್ದ ನಾಗರಾಜು ಅವರಿಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಅಪಘಾತದಲ್ಲಿ ತಲೆಗೆ ತೀವ್ರ ಪೆಟ್ಟಾಗಿತ್ತು. ಎರಡು ದಿನ ಸತತ ಚಿಕಿತ್ಸೆ ಪಡೆಯುತ್ತಿದ್ದ ನಾಗರಾಜ್‌ರಿಗೆ ಬ್ರೈನ್ ಡೆಡ್ ಆಗಿದೆ ಎಂದು ವೈದ್ಯರು ಮಂಗಳವಾರ ಖಚಿತಪಡಿಸಿದ್ದಾರೆ.
ಹೀಗಾಗಿ ನಾಗರಾಜ್‌ರ ಅಗಲಿಕೆಯ ನೋವಿನಲ್ಲೂ ಕುಟುಂಬಸ್ಥರು ಅಂಗಾಂಗ ದಾನ ಮಾಡಲು ನಿರ್ಧರಿಸಿದ್ದಾರೆ. ಹೈಗ್ರೌಂಡ್ಸ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಸಹ ಸಿಬ್ಬಂದಿ ಎಎಸ್‌ಐ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಇದನ್ನೂ ಓದಿ: ಕಾಶ್ಮೀರಿ ಪಂಡಿತ ಸಂಜಯ್ ಶರ್ಮಾನನ್ನು ಕೊಂದ ಉಗ್ರನ ಹತ್ಯೆ; ಪುಲ್ವಾಮಾದಲ್ಲಿ ಮುಂದುವರಿದ ಭದ್ರತಾ ಸಿಬ್ಬಂದಿ ಕಾರ್ಯಾಚರಣೆ
ಬೈಕ್‌ಗಳ ಮುಖಾಮುಖಿ ಡಿಕ್ಕಿ
ಶಿವಮೊಗ್ಗದ ಅಬ್ಬಲಗೆರೆ ಸಮೀಪದ ಮುನೇಶ್ವರ ದೇವಸ್ಥಾನ ಬಳಿ ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಆಗಿದೆ. ಪರಿಣಾಮ ಬೈಕ್ ಸವಾರರಿಬ್ಬರೂ ಗಂಭೀರ ಗಾಯಗೊಂಡಿದ್ದಾರೆ. ಗಂಭೀರ ಗಾಯಾಗೊಂಡು ನರಳಾಡುತ್ತಿದ್ದವರನ್ನು ಶಾಸಕ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯರ ಎಸ್ಕಾರ್ಟ್ ವಾಹನದ ಚಾಲಕ ಸತೀಶ್, ಎಆರ್‌ಎಸ್ಐ ರವಿಕುಮಾರ್ ಸೇರಿ ಪೊಲೀಸ್ ಸಿಬ್ಬಂದಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಕ್ರೀಡಾ ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ