Site icon Vistara News

ದೊಡ್ಡಬಳ್ಳಾಪುರ ಆಸ್ಪತ್ರೆಯ ಆಡಳಿತಾಧಿಕಾರಿ ವಜಾ

ಆಸ್ಪತ್ರೆ

ಬೆಂಗಳೂರು: ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ವಚ್ಛತೆಯ ಕೊರತೆ ಕಂಡುಬಂದಿದ್ದು ರಾಜ್ಯ ಅರೋಗ್ಯ ಸಚಿವ ಡಾ. ಸುಧಾಕರ್‌ ಈ ಬಗ್ಗೆ ಕೂಡಲೇ ಕ್ರಮ ಕೈಗೊಂಡಿದ್ದಾರೆ. ಆಸ್ಪತ್ರೆಯ ಆಡಳಿತದ ಪ್ರಭಾರವನ್ನು ತಕ್ಷಣ ಜಾರಿಗೆ ಬರುವಂತೆ ಬದಲಾಯಿಸಿದ್ದಾರೆ. ಈ ಆಸ್ಪತ್ರೆಯ ಆಡಳಿತ ಜವಾಭ್ಧಾರಿಯನ್ನು ಈಗ ಡಾ. ಚೆನ್ನಕೇಶವ ಎಸ್.ಪಿ ಅವರಿಗೆ ನೀಡಲಾಗಿದೆ. ಈ ವಿಷಯದ ಬಗ್ಗೆ ಡಾ. ಸುದಾಕರ್‌ ಟ್ವೀಟ್‌ ಮಾಡಿದ್ದಾರೆ.

ಪ್ರಕರಣದ ಹಿನ್ನೆಲೆ:‌

ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯೊಂದರಲ್ಲಿ ಸುಮಾರು 6 ಗಂಟೆಗಳ ಕಾಲ ವಿದ್ಯುಚ್ಛಕ್ತಿ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿತ್ತು. ಇದರಿಂದ ಅಸ್ಪತ್ರೆಯಲ್ಲಿದ್ದ ರೋಗಿಗಳು ಹಾಗೂ ಸಾರ್ವಜನಿಕರು ಬಳಲುವಂತಾಗಿತ್ತು. ಈ ಹಿಂದೆಯೂ ಈ ರೀತಿಯ ತೊಡಕುಗಳು ಆಸ್ಪತ್ರೆಯಲ್ಲಿ ಕಂಡುಬಂದಿದ್ದು, ಆಸ್ಪತ್ರಯ ಆಡಳಿತವನ್ನು ಸೂಕ್ತ ರೀತಿಯಲ್ಲಿ ನಡೆಸುವಂತೆ ಅಧಿಕಾರಿ ಡಾ. ರಮೇಶ್‌ ಪಿ.ಎಸ್.‌ ಅವರಿಗೆ ಸೂಚಿಸಿತ್ತು. ಆದರೆ ಡಾ. ರಾಮೇಶ್‌ ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿದ್ದು ಕಂಡುಬಂದಿಲ್ಲ.

ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಸ್ಥಳೀಯರು ಈ ಆಸ್ಪತ್ರೆಯ ಅವ್ಯವಸ್ಥೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಇದನ್ನು ಗಮನಿಸಿದ ರಾಜ್ಯ ಆರೋಗ್ಯ ಸಚಿವ ಡಾ. ಸುಧಾಕರ್‌ ಕೂಡಲೇ ಕ್ರಮ ಕೈಗೊಂಡಿದ್ದಾರೆ. ಡಾ. ರಮೇಶ್‌ ಉತ್ತಮ ರೀತಿಯಲ್ಲಿ ಆಡಳಿತವನ್ನು ನಿರ್ವಹಿಸುವಲ್ಲಿ ವಿಫಲರಾದ ಕಾರಣಕ್ಕೆ ಅವರನ್ನು ಆಸ್ಪತ್ರೆಯ ಆಡಳಿತಾಧಿಕಾರಿ ಸ್ಥಾನದಿಂದ ಕೆಳಗಿಳಿಸಲಾಗಿದೆ. ಆಸ್ಪತ್ರೆಯ ಆಡಳಿತದ ಜವಾಬ್ಧಾರಿಯನ್ನು ಡಾ. ಚೆನ್ನಕೇಶವ ಅವರು ನಡೆಸುವಂತೆ ಸಚಿವ ಸುಧಾಕರ್ ಸೂಚಿಸಿದ್ದಾರೆ ಹಾಗೂ ಡಾ. ಅರುಣ್‌ ಕುಮಾರ್‌ ಎಂ.ಹೆಚ್.‌ ಅವರನ್ನು ನಿವಾಸಿ ವೈದ್ಯಾಧಿಕಾರಿಯಾಗಿ ನೇಮಕಮಾಡಿದ್ದಾರೆ.

ಈ ಪ್ರಕರಣದ ಕುರಿತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಗಳು ಹಾಗೂ ಆರೋಗ್ಯಾಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ ಎಂದು ಸಚಿವ ಸುಧಾಕರ್‌ ತಿಳಿಸಿದ್ದಾರೆ.

ಇದನ್ನೂ ಓದಿ:

Exit mobile version