5 ದಿನಗಳ ಅಂತರದಲ್ಲಿ 70 ಕುರಿಗಳ ಸಾವು; ಸರಣಿ ಸಾವಿನಿಂದ ರೈತರಲ್ಲಿ ಹೆಚ್ಚಿದ ಆತಂಕ - Vistara News

ಕೃಷಿ

5 ದಿನಗಳ ಅಂತರದಲ್ಲಿ 70 ಕುರಿಗಳ ಸಾವು; ಸರಣಿ ಸಾವಿನಿಂದ ರೈತರಲ್ಲಿ ಹೆಚ್ಚಿದ ಆತಂಕ

ಜಾನುವಾರುಗಳಲ್ಲಿ ಚರ್ಮರೋಗ ಕಾಣಿಸಿಕೊಂಡು ಮೃತಪಡುತ್ತಿರುವ ಪ್ರಕರಣಗಳು ನಡೆಯುತ್ತಿರುವ ಹೊತ್ತಿನಲ್ಲಿ ಇದೀಗ ಕುರಿಗಳ ಸರಣಿ ಸಾವು ರೈತರಲ್ಲಿ ಆತಂಕ ಹೆಚ್ಚಿಸಿದೆ.

VISTARANEWS.COM


on

ಕುರಿಗಳ ಸಾವು
ಕುರಿಗಳ ಸರಣಿ ಸಾವು
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರದ ದೊಡ್ಡಬಳ್ಳಾಪುರದಲ್ಲಿ ಕಳೆದ ಐದು ದಿನಗಳಿಂದ ಕುರಿಗಳ ಆಕಸ್ಮಿಕ ಸರಣಿ ಸಾವು ರೈತರಲ್ಲಿ ಆತಂಕಕ್ಕೆ ಕಾರಣವಾಗಿದೆ. ದೊಡ್ಡಬಳ್ಳಾಪುರ ಶಾಸಕ ವೆಂಕಟರಮಣಯ್ಯ ಸ್ವಗ್ರಾಮದಲ್ಲೇ ಕುರಿಗಳ ಸರಣಿ ಸಾವಾಗಿದೆ. ತಾಲೂಕಿನ ಅಪ್ಪಕಾರನಹಳ್ಳಿ ಗ್ರಾಮದ ರೈತ ಗೋವಿಂದರಾಜ್ ಎಂಬುವರಿಗೆ ಸೇರಿದ ಕುರಿಗಳ‌ ಮಾರಣ ಹೋಮ ಆಗಿದೆ.

ಕಳೆದ ಐದು ದಿನಗಳಿಂದ ಸುಮಾರು 70 ಕುರಿಗಳ ಸರಣಿ ಸಾವಾಗಿದೆ. 5 ವರ್ಷಗಳಿಂದ ಕುರಿ ಸಾಕಾಣಿಕೆ ಮಾಡುತ್ತಿರುವ ರೈತ ಗೋವಿಂದರಾಜ್ ಅವರಿಗೆ ಸರಣಿ ಕುರಿಗಳ ಸಾವಿನಿಂದ ದಿಕ್ಕು ತೋಚದಂತಾಗಿದೆ. ಒಟ್ಟು 120 ಕುರಿಗಳನ್ನು ಸಾಕಿದ್ದ ರೈತನ ಕೊಟ್ಟಿಗೆಯಲ್ಲಿ 70 ಕುರಿಗಳು ಸತ್ತಿವೆ.

ಕುರಿಗಳ ಸಾವು
ಪಶು ವೈದ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದರು

ಸ್ಥಳಕ್ಕೆ ಪಶು ವೈದ್ಯರು ಭೇಟಿ ನೀಡಿ ಕುರಿಗಳ ಸಾವಿನ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಮೈಕೋ ಪ್ಲಾಸ್ಮಾ ಬ್ಯಾಕ್ಟೀರಿಯಾ ಕುರಿಗಳ ಮೃತ್ಯುವಿಗೆ ಕಾರಣ ಎಂದು ಶಂಕಿಸಲಾಗಿದೆ. ಶ್ವಾಸಕೋಶದಲ್ಲಿ ನೀರು ತುಂಬಿದ ಪರಿಣಾಮ ಉಸಿರುಗಟ್ಟಿ 70 ಕುರಿಗಳು ಸಾವನ್ನಪ್ಪಿವೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಜೀವಂತ ಇರುವ ಕುರಿಗಳಿಗೆ ಪ್ರತ್ಯೇಕ ಕೊಟ್ಟಿಗೆ ವ್ಯವಸ್ಥೆ ಮಾಡಲಾಗಿದ್ದು, ಮೈಕೋ ಪ್ಲಾಸ್ಮಾ ವ್ಯಾಕ್ಸಿನ್ ನೀಡಲಾಗಿದೆ.

ಕುರಿಗಳ ಸಾವು

70 ಕುರಿಗಳನ್ನು ಕಳೆದುಕೊಂಡಿದ್ದು, ಇದಕ್ಕೆ ಪರಿಹಾರ ನೀಡುವಂತೆ ರೈತ ಗೋವಿಂದ ರಾಜ್‌ ಮನವಿ ಮಾಡಿದ್ದಾರೆ. ತಾಲೂಕಿನಾದ್ಯಂತ ಕುರಿಗಳಿಗೆ ರೋಗ ಬಾರದಂತೆ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ | ಚರ್ಮ ಗಂಟು ರೋಗದಿಂದ ಜಾನುವಾರು ಮೃತಪಟ್ಟರೆ ಪರಿಹಾರ, ಆದೇಶ ಹೊರಡಿಸಿದ ರಾಜ್ಯ ಸರ್ಕಾರ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿಜಯನಗರ

Vijayanagara News: ಕೂಡ್ಲಿಗಿಯಲ್ಲಿ ಬೆಳೆ ವಿಮೆ ಜಾಗೃತಿ ಜಾಥಾಕ್ಕೆ ಶಾಸಕ ಶ್ರೀನಿವಾಸ್ ಚಾಲನೆ

Vijayanagara News: ಕೂಡ್ಲಿಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಏರ್ಪಡಿಸಿದ್ದ ಕೃಷಿ ಇಲಾಖೆಯ ಪ್ರಸಕ್ತ ಸಾಲಿನ ಬೆಳೆ ವಿಮೆ ಜಾಗೃತಿ ಜಾಥಾಕ್ಕೆ ಶಾಸಕ ಡಾ.ಎನ್.ಟಿ. ಶ್ರೀನಿವಾಸ್ ಚಾಲನೆ ನೀಡಿದರು. ರೈತರಿಂದ ಬೆಳೆ ವಿಮೆ ನೋಂದಣಿ ಮಾಡಿಕೊಳ್ಳಲು ಈಗಾಗಲೇ ವಿವಿಧ ಬೆಳೆಗಳಿಗೆ ದಿನಾಂಕ ನಿಗದಿ ಮಾಡಿದ್ದು, ಜೋಳ ಹಾಗೂ ಮೆಕ್ಕೆಜೋಳ ಬೆಳೆಗೆ ಇದೇ 31 ಕೊನೆಯ ದಿನವಾಗಿದೆ. ಅದರಂತೆ ಶೇಂಗಾ ಸೇರಿದಂತೆ ಇತರೆ ಬೆಳೆಗಳಿಗೂ ವಿಮೆ ಮಾಡಿಸಿದಲ್ಲಿ ರೈತರಿಗೆ ಬೆಳೆ ನಷ್ಟದಿಂದ ವಿಮೆ ಪರಿಹಾರ ಬರುತ್ತದೆ. ಇದರಿಂದ ಆರ್ಥಿಕ ನಷ್ಟ ಎದುರಾಗುವುದಿಲ್ಲ.

VISTARANEWS.COM


on

MLA Dr N T Srinivas drives for crop insurance Awareness jatha in Kudligi
Koo

ಕೂಡ್ಲಿಗಿ: ಕೃಷಿ ಇಲಾಖೆಯ ಪ್ರಸಕ್ತ ಸಾಲಿನ ಬೆಳೆ ವಿಮೆ ಜಾಗೃತಿ ಜಾಥಾಕ್ಕೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ಶಾಸಕ ಡಾ.ಎನ್.ಟಿ. ಶ್ರೀನಿವಾಸ್ ಚಾಲನೆ (Vijayanagara News) ನೀಡಿದರು.

ಈ ವೇಳೆ ಜಿಲ್ಲಾ ಕೃಷಿ ನಿರ್ದೇಶಕ ಶರಣಪ್ಪ ಮುದಗಲ್ ಮಾತನಾಡಿ, ಕೃಷಿ ಇಲಾಖೆಯಿಂದ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ (ವಿಮಾ) ಯೋಜನೆ ಅನುಷ್ಠಾನಗೊಳಿಸಲು ರೈತರು ಬೆಳೆ ವಿಮೆ ನೋಂದಣಿ ಮಾಡಿಸಲು ಈಗಾಗಲೇ ಸೂಚನೆ ನೀಡಲಾಗಿದೆ, ಆದ್ದರಿಂದ ಪ್ರತಿಯೊಬ್ಬ ರೈತರು ಕಡ್ಡಾಯವಾಗಿ ಬೆಳೆ ವಿಮೆ ಮಾಡಿಸುವಂತೆ ತಿಳಿಸಿದರು.

ರೈತರಿಂದ ಬೆಳೆ ವಿಮೆ ನೋಂದಣಿ ಮಾಡಿಕೊಳ್ಳಲು ಈಗಾಗಲೇ ವಿವಿಧ ಬೆಳೆಗಳಿಗೆ ದಿನಾಂಕ ನಿಗದಿ ಮಾಡಿದ್ದು, ಜೋಳ ಹಾಗೂ ಮೆಕ್ಕೆಜೋಳ ಬೆಳೆಗೆ ಇದೇ 31 ಕೊನೆಯ ದಿನವಾಗಿದೆ. ಅದರಂತೆ ಶೇಂಗಾ ಸೇರಿದಂತೆ ಇತರೆ ಬೆಳೆಗಳಿಗೂ ವಿಮೆ ಮಾಡಿಸಿದಲ್ಲಿ ರೈತರಿಗೆ ಬೆಳೆ ನಷ್ಟದಿಂದ ವಿಮೆ ಪರಿಹಾರ ಬರುತ್ತದೆ. ಇದರಿಂದ ಆರ್ಥಿಕ ನಷ್ಟ ಎದುರಾಗುವುದಿಲ್ಲ.

ಇದನ್ನೂ ಓದಿ: CM Siddaramaiah: ನಿತಿನ್‌ ಗಡ್ಕರಿ ಭೇಟಿಯಾದ ಸಿಎಂ ಸಿದ್ದರಾಮಯ್ಯ; ಪ್ರಮುಖ ಹೆದ್ದಾರಿ ಯೋಜನೆಗಳ ಬಗ್ಗೆ ಚರ್ಚೆ

ಶೇ.75 ಕ್ಕಿಂತ ಹೆಚ್ಚಿನ ಕ್ಷೇತ್ರದಲ್ಲಿ ಬಿತ್ತನೆ ವಿಫಲಗೊಂಡರೆ, ಬಿತ್ತನೆಯಾದ ನಂತರ ಕಟಾವಿಗೆ ಮೊದಲು ಸಕಾಲಕ್ಕೆ ಮಳೆ ಬಾರದೇ ನಿರೀಕ್ಷಿತ ಇಳುವರಿಗಿಂತ ಶೇ 50 ಕ್ಕಿಂತ ಹೆಚ್ಚು ಇಳುವರಿ ನಷ್ಟವಾದಲ್ಲಿ ಅಥವಾ ಅಕಾಲಿಕ ಮಳೆಯಾಗಿ ಬೆಳೆ ಮುಳುಗಡೆ ಅಥವಾ ಕಟಾವಿನ ನಂತರ 14 ದಿನದೊಳಗೆ ಅಕಾಲಿಕ ಮಳೆಯಿಂದ ಬೆಳೆ ನಾಶವಾದರೆ ವಿಮಾ ಸಂಸ್ಥೆ ವೈಯಕ್ತಿಕವಾಗಿ ನಷ್ಟವನ್ನು ನಿರ್ಧರಿಸಿ ಪರಿಹಾರ ನೀಡಲು ಅವಕಾಶವಿರುತ್ತದೆ. ಆದ್ದರಿಂದ ರೈತರು ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಮಾಹಿತಿ ಪಡೆದು ಬೆಳೆವಿಮೆ ಮಾಡಿಸಲು ಅವರು ಮನವಿ ಮಾಡಿದರು.

ಇದನ್ನೂ ಓದಿ: Paris Olympics 2024 : ಒಲಿಂಪಿಕ್ಸ್​​ ಸ್ಮರಣೆಗಾಗಿ ಜೆಎಸ್​ಡಬ್ಲ್ಯುನಿಂದ ಪ್ಯಾರಿಸ್​ನಲ್ಲಿ ವಿಶೇಷ ಪ್ರದರ್ಶನ

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್‌, ಸಿಇಒ ಸದಾಶಿವ ಪ್ರಭು, ತಾಪಂ ಇಒ ವೈ. ರವಿಕುಮಾರ್, ಸಹಾಯಕ ಕೃಷಿ ನಿರ್ದೇಶಕ ಸುನೀಲ್ ಕುಮಾರ್, ಬಣವಿಕಲ್ಲು ಯರಿಸ್ವಾಮಿ, ನರೇಂದ್ರ ಸ್ವಾಮಿ ಹಾಗೂ ಇತರರು ಉಪಸ್ಥಿತರಿದ್ದರು.

Continue Reading

ಬೆಂಗಳೂರು

Arecanut Insurance: ಅಡಿಕೆ ಮತ್ತು ಕಾಳು ಮೆಣಸಿಗೆ ಇನ್ಶೂರೆನ್ಸ್ ಪ್ರೀಮಿಯಮ್ ಯಾವಾಗ ಕಟ್ಟಬೇಕು?

Arecanut Insurance: ಮಲೆನಾಡು, ಕರಾವಳಿಯ ಬೆಳಗಾರರಿಗೆ ಅಡಿಕೆ ಮತ್ತು ಮೆಣಸು ಬೆಳೆಗಳಿಗೆ ಇನ್ಶೂರೆನ್ಸ್ ಪ್ರೀಮಿಯಮ್ ಕಟ್ಟಲು ಇನ್ನು ಮೂರು ದಿನ ಮಾತ್ರ ಬಾಕಿ ಇವೆ ಎಂಬ ಸುಳ್ಳು ಮಾಹಿತಿಗಳು ವಾಟ್ಸ್‌ ಆ್ಯಪ್‌ ಗ್ರೂಪ್‌ಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಹಾಗಾದರೆ ಪ್ರೀಮಿಯಂ ಕಟ್ಟಲು ಅಂತಿಮ ಗಡುವು ಯಾವಾಗ? ಅಡಿಕೆ ಮತ್ತು ಕಾಳು ಮೆಣಸು ಬೆಳೆಗಾರರಿಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

VISTARANEWS.COM


on

By

Arecanut Insurance
ಸಾಂದರ್ಭಿಕ ಚಿತ್ರ
Koo
  • ಅರವಿಂದ ಸಿಗದಾಳ್, ಮೇಲುಕೊಪ್ಪ

ಪ್ರಾರಂಭದಲ್ಲಿ ಕೇಂದ್ರ ವಲಯ (Arecanut Insurance) ಯೋಜನೆಯಾದ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ (PMFBY) ಅಡಿಯಲ್ಲಿ ಬಹುತೇಕ ಎಲ್ಲಾ ಬೆಳೆಗಳನ್ನು ವಿಮಾ ವ್ಯಾಪ್ತಿಗೆ ತರಲಾಗಿತ್ತು. ತದನಂತರ ಬೆಳೆ ವಿಮೆ PMFBYಯನ್ನು ಮರು ವಿನ್ಯಾಸಗೊಳಿಸಿ, ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ (PMFBY) ಮತ್ತು ನಿರ್ಬಂಧಿತ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ (RWBCIS) ಎಂದು ಎರಡು ವಿಭಾಗಗಳಲ್ಲಿ ಅನುಷ್ಠಾನ ಗೊಳಿಸಲಾಗುತ್ತಿದೆ. ಈಗ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯನ್ನು (PMFBY) ಕೃಷಿ ಇಲಾಖೆಯೂ, ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು (RWBCIS) ತೋಟಗಾರಿಕೆ ಇಲಾಖೆಯೂ ಅನುಷ್ಠಾನಗೊಳಿಸುತ್ತಿದೆ. PMFBY ಇಳುವರಿಯನ್ನು ಆಧರಿಸಿದ್ದರೆ, RWBCIS ಹವಾಮಾನದ (ಮಳೆ, ತಾಪಮಾನ, ಆರ್ದ್ರತೆ) ವನ್ನು ಆಧರಿಸಿದೆ. RWBCISನಲ್ಲಿ ರೈತರಿಗೆ ಹೆಚ್ಚಿನ ಮಳೆ, ತಾಪಮಾನ ಮತ್ತು ಆರ್ದ್ರತೆಯಂತಹ ಪ್ರತಿಕೂಲ ಹವಾಮಾನ ಪರಿಸ್ಥಿತಿಗಳ ವಿರುದ್ಧ ವಿಮೆ ರಕ್ಷಣೆಯನ್ನು ಒದಗಿಸಲಾಗಿದೆ. ಮಲೆನಾಡು ಮತ್ತು ಕರಾವಳಿಯ ಪ್ರಮುಖ ಬೆಳೆಯಾದ ಅಡಿಕೆ ಮತ್ತು ಕಾಳು ಮೆಣಸು ಬೆಳೆಗಳು ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ (RWBCIS) ಅಡಿಯಲ್ಲಿ ತೋಟಗಾರಿಕೆ ಇಲಾಖೆಯ ವ್ಯಾಪ್ತಿಗೆ ಬರುತ್ತದೆ.

ಅಡಿಕೆ ಮತ್ತು ಕಾಳು ಮೆಣಸಿಗೆ ಪ್ರೀಮಿಯಮ್ ಕಟ್ಟುವ ಅವಧಿ ಮುಗಿಯಿತೆ?

ಮಲೆನಾಡು, ಕರಾವಳಿಯ ಜಿಲ್ಲೆಗಳಿಗೆ ಅಡಿಕೆ ಮತ್ತು ಮೆಣಸು ಬೆಳೆಗಳಿಗೆ ಇನ್ಶೂರೆನ್ಸ್ ಪ್ರೀಮಿಯಮ್ ಕಟ್ಟಲು ಇನ್ನು ಮೂರು ದಿನ ಮಾತ್ರ ಬಾಕಿ ಇವೆ ಎಂಬ ತಪ್ಪು ಮಾಹಿತಿಗಳು ಹರಿದಾಡುತ್ತಿವೆ. ಅಡಿಕೆ ಮತ್ತು ಮೆಣಸು ಬೆಳೆಗಳಿಗೆ ಇನ್ಶೂರೆನ್ಸ್ ಪ್ರೀಮಿಯಮ್ ಕಟ್ಟಿಸಿಕೊಳ್ಳುವ ಬಗ್ಗೆ ಇಲಾಖೆಗಳಿಗೆ, ಬ್ಯಾಂಕ್‌ಗಳಿಗೆ, ಸಹಕಾರಿ ಸಂಘಗಳಿಗೆ ಇನ್ನೂ ಅಧಿಕೃತ ನೋಟಿಫಿಕೇಷನ್/ಆದೇಶಗಳ ಇನ್ನೂ ಬಂದಿಲ್ಲ, ಸದ್ಯದಲ್ಲೇ ಬರಲಿದೆ. ವಿಮಾ ಕಂತನ್ನು ಆದೇಶ ಬಂದ ಮೇಲೆ ಕಟ್ಟಿಸಿಕೊಳ್ಳವ ಪ್ರಕ್ರಿಯೆ ಆರಂಭವಾಗುತ್ತದೆ.

ಅದಲ್ಲದೆ, ಕಳೆದ ವರ್ಷ ಜುಲೈ 20ರಂದು (ಎಂಟು ಜಿಲ್ಲೆಗಳಿಗೆ ಕೊನೆಯಲ್ಲಿರುವ ಪಟ್ಟಿ ಗಮನಿಸಿ) ಆದೇಶ ಪ್ರಕಟವಾಗಿ, ಆಗಸ್ಟ್‌ ಮೊದಲ ವಾರದವರೆಗೂ ಪ್ರೀಮಿಯಮ್ ಕಟ್ಟಿಸಿಕೊಳ್ಳಲಾಗಿತ್ತು. ಆ ಪ್ರೀಮಿಯಮ್ ಕಟ್ಟಿದ ಇನ್ಶೂರೆನ್ಸ್ ಪಾಲಿಸಿ ಆಗಸ್ಟ್‌ 1, 2023 ರಿಂದ ಜುಲೈ 31 2024ರವರೆಗೂ ಅಸ್ತಿತ್ವದಲ್ಲಿರುತ್ತದೆ. ಅಂದರೆ, ಈಗಾಗಲೆ ಅಡಿಕೆ ಮತ್ತು ಕಾಳು ಮೆಣಸು ಬೆಳೆಗೆ ಕಟ್ಟಿರುವ ಪಾಲಿಸಿ ಅವಧಿ 1 ಆಗಸ್ಟ್‌ 2023 ರಿಂದ 31 ಜುಲೈ 2024ರವರೆಗೆ ಚಾಲ್ತಿಯಲ್ಲಿರುತ್ತದೆ. ಹೊಸ ಪಾಲಿಸಿ 1 ಆಗಸ್ಟ್‌ 2024ಕ್ಕೆ ಪ್ರಾರಂಭವಾಗಬೇಕು ಮತ್ತು ಈ ದಿನಾಂಕದೊಳಗೆ ಪ್ರೀಮಿಯಮ್ ಕಟ್ಟುವ ಅವಕಾಶ ಆಗಬೇಕು. ಹಾಗಾಗಿ, ಪ್ರೀಮಿಯಮ್ ಕಟ್ಟಿಸಿ ಕೊಳ್ಳುವ ದಿನಾಂಕ ಜುಲೈ‌ನಲ್ಲೇ ಪ್ರಾರಂಭವಾಗಬಹುದು ಮತ್ತು ಜುಲೈ ಕೊನೆಯವರೆಗೂ ಪ್ರೀಮಿಯಮ್ ಕಟ್ಟಲು ಅವಕಾಶ ಇರಬಹುದು.
ಈಗ ಹರಿದಾಡುತ್ತಿರುವ, ಪ್ರೀಮಿಯಮ್ ಕಟ್ಟಲು ಕೇವಲ ಮೂರ್ನಾಲ್ಕು ದಿನಗಳು ಮಾತ್ರ ಇವೆ ಎಂಬ ಮಾಹಿತಿಯು ಸತ್ಯಕ್ಕೆ ದೂರವಾಗಿದೆ.

Arecanut Insurance

ಈ ಜಿಲ್ಲೆಗಳ ಅಡಿಕೆ ಮತ್ತು ಕಾಳು ಮೆಣಸು ಬೆಳೆಗಾರರಿಗೆ ಅನ್ವಯ: (ಕಳೆದ ವರ್ಷದ ಅನುಬಂಧ 1 ಆಧಾರದಲ್ಲಿ):

೧) ಉತ್ತರ ಕನ್ನಡ (ಅಡಿಕೆ, ಕಾಳುಮೆಣಸು)
೨) ವಿಜಯನಗರ (ಅಡಿಕೆ)
೩) ದಕ್ಷಿಣ ಕನ್ನಡ (ಅಡಿಕೆ, ಕಾಳುಮೆಣಸು)
೪) ಚಿಕ್ಕಮಗಳೂರು (ಅಡಿಕೆ, ಕಾಳುಮೆಣಸು)
೫) ಬೆಳಗಾವಿ (ಅಡಿಕೆ)
೬) ಕೊಡಗು (ಅಡಿಕೆ, ಕಾಳುಮೆಣಸು)
೭) ಹಾವೇರಿ (ಅಡಿಕೆ)
೮) ಶಿವಮೊಗ್ಗ (ಅಡಿಕೆ, ಕಾಳುಮೆಣಸು)
ಕಳೆದ 2022-23 ನೇ ಸಾಲಿನಲ್ಲಿ ಅಧಿಕ ಮಳೆಯಾಗಿ, ಅತೀವ ಸಂಕಷ್ಟಕ್ಕೆ ಒಳಗಾಗಿದ್ದ ಮಲೆನಾಡು ಮತ್ತು ಕರಾವಳಿಯ ಬಹುತೇಕ ರೈತರಿಗೆ ಉತ್ತಮ ರೀತಿಯಲ್ಲಿ ಬೆಳೆ ವಿಮೆ ಪರಿಹಾರ ಬಂದಿದ್ದನ್ನು ಇಲ್ಲಿ ಸ್ಮರಿಸಬಹುದು.
2023-24ರ ಪರಿಹಾರ 2024ರ ಅಕ್ಟೋಬರ್/ನವಂಬರ್‌ನಲ್ಲಿ ಪ್ರತಿ ಹೋಬಳಿ ಮತ್ತು ಗ್ರಾಮ ಪಂಚಾಯತಿಗಳಲ್ಲಿನ ದಾಖಲಿತ ಮಳೆ, ತಾಪಮಾನ ಮತ್ತು ಆರ್ದ್ರತೆಯ ಆಧಾರದ ಮೇಲೆ ಬರಬಹುದು.

ಆದೇಶ ಬಂದ ಮೇಲೆ ಪ್ರಕ್ರಿಯೆ ಆರಂಭ:

2024-25ರ ಅಡಿಕೆ ಮತ್ತು ಕಾಳುಮೆಣಸು ಬೆಳೆಗಳಿಗೆ RWBCISನ ಪ್ರೀಮಿಯಮ್‌ನ್ನು ಆದೇಶ ಬಂದ ಮೇಲೆ ಕಟ್ಟಿಸಿಕೊಳ್ಳುವ ಪ್ರಕ್ರಿಯೆ ಆರಂಭವಾಗಲಿದೆ. ಮಲೆನಾಡು ಮತ್ತು ಕರಾವಳಿಯ ವ್ಯಾಪ್ತಿಯಲ್ಲಿ ಅನಿಶ್ಚಿತತೆಯ ಹವಾಮಾನ ಇರುವುದರಿಂದ ಅಡಿಕೆ ಬೆಳೆಗಾರರು RWBCIS ನಲ್ಲಿ ವಿಮೆ ಮಾಡಿಸಿಕೊಳ್ಳುವುದು ಕ್ಷೇಮ.
ಅಡಿಕೆ ತೋಟದಲ್ಲೇ ಕಾಳು ಮೆಣಸು ಇದ್ದವರು, ಎರಡಕ್ಕೂ ಬೇರೆ ಬೇರೆಯಾಗಿ ಪ್ರೀಮಿಯಮ್ ಕಟ್ಟಬೇಕಾಗುತ್ತದೆ. ತೋಟಗಾರಿಕೆ, ಇನ್ಶೂರೆನ್ಸ್ ಕಂಪನಿ ಮತ್ತು ರೈತರ ಸಹಯೋಗದಲ್ಲಿ ರಚಿಸಿದ ಟರ್ಮ್‌ಶೀಟ್ ಪ್ರಕಾರ ಹವಾಮಾನ ವೈಪರೀತ್ಯ ಉಂಟಾದಲ್ಲಿ ಎರಡೂ ಬೆಳೆಗಳಿಗೆ ಬೇರೆ ಬೇರೆಯಾಗಿ ವಿಮಾ ಪರಿಹಾರ ಸಿಗುತ್ತದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Kalaburagi News: ರಸಗೊಬ್ಬರ, ಬೀಜ ಕೊರತೆಯಾಗದಂತೆ ಎಚ್ಚರ ವಹಿಸಲು ಪ್ರಿಯಾಂಕ್ ಖರ್ಗೆ ಸೂಚನೆ

Kalaburagi News: ಕಲಬುರಗಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಪ್ರಸಕ್ತ ಸಾಲಿನ ಮುಂಗಾರು ಬಿತ್ತನೆ ಸಿದ್ಧತೆ ಮತ್ತು ಪ್ರವಾಹ ನಿಯಂತ್ರಣಕ್ಕೆ ತೆಗೆದುಕೊಳ್ಳಬಹುದಾದ ಮುಂಜಾಗ್ರತಾ ಕ್ರಮಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

VISTARANEWS.COM


on

Minister Priyank Kharge held a meeting on Monsoon Sowing Preparation and Precautionary Measures for Flood Control
Koo

ಕಲಬುರಗಿ: ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ವಾಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿದ್ದ ಕಾರಣ ಎಲ್ಲೆಡೆ ಒಮ್ಮೆಲೆ ಬಿತ್ತನೆ ಶುರುವಾಗಿದ್ದು, ಬೀಜ ಮತ್ತು ರಸಗೊಬ್ಬರ ಕೊರತೆಯಾಗದಂತೆ ಕೃಷಿ ಅಧಿಕಾರಿಗಳು ಎಚ್ಚರ ವಹಿಸಬೇಕು ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಪ್ರಸಕ್ತ ಸಾಲಿನ ಮುಂಗಾರು ಬಿತ್ತನೆ ಸಿದ್ಧತೆ ಮತ್ತು ಪ್ರವಾಹ ನಿಯಂತ್ರಣಕ್ಕೆ ತೆಗೆದುಕೊಳ್ಳಬಹುದಾದ ಮುಂಜಾಗ್ರತಾ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಕಳೆದ ವರ್ಷ ಕಲಬುರಗಿ, ಚಿತ್ತಾಪುರ, ಕಾಳಗಿ ತಾಲೂಕಿನಲ್ಲಿ ಕಳಪೆ ಬೀಜ ವಿತರಣೆಯಾಗಿದ್ದರಿಂದ ರೈತರು ತಮ್ಮ ಬೆಳೆ ಹಾನಿ ಮಾಡಿಕೊಂಡಿದ್ದಾರೆ ಇದು ಪುನರಾವರ್ತನೆಯಾಗಬಾರದು ಎಂದು ತಿಳಿಸಿದರು.

ಈ ಸಲ ಅತಿವೃಷ್ಠಿಯಿಂದ ಬೆಳೆ ಹಾನಿಯಾಗುವ ಸಾಧ್ಯತೆ ಇದ್ದು, ಹಾನಿ ತಡೆಗೆ ಈ ಕೂಡಲೇ ಅಗತ್ಯ ಹಾಗೂ ಸೂಕ್ತ ಕ್ರಮ ಕೈಗೊಳ್ಳುವಂತೆ ಕೃಷಿ ಅಧಿಕಾರಿಗಳಿಗೆ ಸೂಚಿಸಿದ ಸಚಿವ‌ ಪ್ರಿಯಾಂಕ್ ಖರ್ಗೆ, ಹೆಚ್ಚು ಮಳೆಗೆ ಆಗಬಹುದಾದ ಹಾನಿ ತಪ್ಪಿಸಲು ಬಸಿಗಾಲುವೆ ನಿರ್ಮಾಣ ಹಾಗೂ ಬೆಳೆ ವಿಮೆ ಮಾಡಿಸಲು ಗ್ರಾಮೀಣ ಮಟ್ಟದಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು. ಕಳೆದ ವರ್ಷ ಬೆಳೆ‌ ವಿಮೆ ಮಾಡಿಸಿದ್ದರಿಂದ ಹೆಚ್ಚಿನ ಪರಿಹಾರ ಸಿಗಲು ಕಾರಣವಾಗಿದೆ. ಈ ಬಾರಿಯೂ ನೊಂದಣಿ ಹೆಚ್ಚಿಸಿ, ಮೈ ಮರೆಯದಿರಿ ಎಂದು ಕೃಷಿ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

ಇದನ್ನೂ ಓದಿ: Kalki 2898 AD: ‘ಕಲ್ಕಿ 2898 AD’ ಚಿತ್ರದ ಫೈನಲ್‌ ಟ್ರೇಲರ್‌ ಹೀಗಿದೆ ನೋಡಿ! ಜೂ.27ರಂದು ಚಿತ್ರ ರಿಲೀಸ್

ಪ್ರತಿ ತಾಲೂಕಿನಲ್ಲಿ ಪರವಾನಿಗೆ ಇಲ್ಲದೆ ಬೀಜ, ರಸಗೊಬ್ಬರ, ಕೀಟನಾಶಕ ಮಾರಾಟ ಮಾಡಿದಲ್ಲಿ, ನಿಗದಿತ ದರಕ್ಕಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡಿದಲ್ಲಿ ಅಂತಹ ಕೃಷಿ ಮಳಿಗೆಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕು. ಸಂಬಂಧಪಟ್ಟ ತಾಲೂಕಿನ ಸಹಾಯಕ ನಿರ್ದೇಶಕರನ್ನೇ ಇದಕ್ಕೆ ಹೊಣೆಗಾರರನ್ನಾಗಿಸಬೇಕು. ಈ ಸಂಬಂಧ ತಾಲೂಕಾ ಅಧಿಕಾರಿಗಳಿಗೆ ಲಿಖಿತ ಸೂಚನೆ ನೀಡಿ ಎಂದು ಡಿ.ಸಿ ಬಿ. ಫೌಜಿಯಾ ತರನ್ನುಮ್ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ನಿರ್ದೇಶನ ನೀಡಿದರು.

ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್ ಮಾತನಾಡಿ, ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ 8.65 ಲಕ್ಷ‌ ಹೆಕ್ಟೇರ್ ಬಿತ್ತನೆ ಗುರಿ ಹೊಂದಲಾಗಿದೆ. ಈ ವರ್ಷ ಉತ್ತಮ ಮಳೆಯಾದ ಕಾರಣ ಜಿಲ್ಲೆಯ ಎಲ್ಲೆಡೆ ಇದೂವರೆಗೆ ಶೇ.30 ಬಿತ್ತನೆಯಾಗಿದೆ. ಉಳಿದೆಡೆ ಬಿತ್ತನೆ ಚಟುವಟಿಕೆ ಗರಿಗೆದರಿವೆ. ಕಳೆದ ವರ್ಷದಲ್ಲಿ ಬೆಳೆ‌ ವಿಮೆ, ಸ್ಥಳೀಯ ಪ್ರಕೃತಿ ವಿಕೋಪ ಹಾಗೂ ತೊಗರಿ ನೆಟೆ ರೋಗ ಪ್ರಕರಣದಲ್ಲಿ ಒಟ್ಟಾರೆ 697.34 ಕೋಟಿ ರೂ. ಪರಿಹಾರ ರೈತರಿಗೆ ಸಿಕ್ಕಿದೆ. ಕಳೆದ‌ ಬಾರಿ 1.62 ಲಕ್ಷ ರೈತರು ಬೆಳೆ ವಿಮೆ‌ ಮಾಡಿಸಿದ್ದರು, ಈ ಸಲ 2.50 ಲಕ್ಷಕ್ಕೆ ಹೆಚ್ಚಿಸಲು ಗುರಿ ಹೊಂದಿದ್ದು, ಇದೂವರೆಗೆ 15 ಸಾವಿರಕ್ಕೂ ಹೆಚ್ಚು ರೈತರು ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದರು.

ರೈತರಿಗೆ ಸಬ್ಸಿಡಿ ಹಾಗೂ ಪರಿಹಾರ ಕೊಡಿಸುವಲ್ಲಿ ಕೃಷಿ, ಕಂದಾಯ, ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಶ್ರಮವಹಿಸಿದ್ದೀರಿ. ಸರ್ಕಾರದ‌ ಮಟ್ಟದಲ್ಲಿ ಈ ಬಗ್ಗೆ ಪ್ರಶಂಸೆ ವ್ಯಕ್ತವಾಗಿದೆ. ನಿಮಗೆ ಅಭಿನಂದನೆಗಳು ಎಂದು ಪ್ರಿಯಾಂಕ್ ಖರ್ಗೆ ಹೇಳಿದರು. ಮುಂದುವರೆದು, ಎಫ್.ಐ.ಡಿ. ನೊಂದಣಿ ತೀವ್ರಗೊಳಿಸಬೇಕು. ಇದರಿಂದ ಡಿ.ಬಿ.ಟಿ. ಪರಿಹಾರ ಪಡೆಯಲು ಸಹಕಾರಿಯಾಗಲಿದೆ. ಇದು ಸ್ಪಂದಿಸುವ ಸರ್ಕಾರ ಎಂಬುದನ್ನು ಅರಿತಿರುವ ರೈತರು ನಮ್ಮಿಂದ ಹೆಚ್ಚಿನ ಅಪೇಕ್ಷೆ ಹೊಂದಿದ್ದಾರೆ. ಇದನ್ನರಿತು ನೀವು ಕೆಲಸ ಮಾಡಿ ಎಂದು ತಿಳಿಸಿದರು‌.

ಇದನ್ನೂ ಓದಿ: DK Shivakumar: ವಾರದೊಳಗೆ ಹೊಸ ಜಾಹೀರಾತು ನೀತಿಯ ಕರಡು ಪ್ರತಿ ಬಿಡುಗಡೆ

ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಖಾತೆ ಸಚಿವ ಡಾ. ಶರಣಪ್ರಕಾಶ ಪಾಟೀಲ ಮಾತನಾಡಿ, ಜಿಲ್ಲೆಯಲ್ಲಿ ವಿಶೇಷವಾಗಿ ಡಿ.ಎ.ಪಿ.ರಸಗೊಬ್ಬರ ಕೊರತೆ ಎದ್ದು ಕಾಣುತ್ತಿದೆ. ಇದು ಹೀಗೆ ಮುಂದುವರೆದರೆ ರೈತರು ಪಕ್ಕದ ರಾಜ್ಯ ಅಥವಾ ಬ್ಲ್ಯಾಕ್ ಮಾರ್ಕೆಟ್‌ನಲ್ಲಿ ಹೆಚ್ಚಿನ ಹಣ ನೀಡಿ ಖರೀದಿಸಬೇಕಾಗುತ್ತದೆ. ರೈತರನ್ನು ಇದರಿಂದ ತಪ್ಪಿಸಲು ಸಾಕಷ್ಟು ಪ್ರಮಾಣದಲ್ಲಿ ಆರ್.ಎಸ್.ಕೆ. ಕೇಂದ್ರದಲ್ಲಿ ಡಿ.ಎ.ಪಿ. ದಾಸ್ತಾನಿಕರಿಸಬೇಕು. ಕಳಪೆ, ನಕಲಿ ಬೀಜ ಮಾರಾಟಕ್ಕೆ ಕಡಿವಾಣ ಹಾಕಬೇಕು ಎಂದರು.

ಬೆಳೆ ವಿಮೆ‌ ಮಾಡಿದ ರೈತರಿಗೆ ಬೆಳೆ ಹಾನಿ‌ ಸಂದರ್ಭದಲ್ಲಿ ಸಮರ್ಪಕ ಪರಿಹಾರ ಪಡೆಯುವ ನಿಟ್ಟಿನಲ್ಲಿ ಕ್ರಾಪ್ ಕಟ್ಟಿಂಗ್ ಎಕ್ಸ್ ಪೆರಿಮೆಂಟ್ ನಡೆಯುವ ಸಮಯದಲ್ಲಿ ಕಡ್ಡಾಯವಾಗಿ ಇರಬೇಕಾದ ಅಧಿಕಾರಿಗಳು ಇರಲೇಬೇಕು ಹಾಗೂ ಸಂಪೂರ್ಣ ಪ್ರಕ್ರಿಯೆಯನ್ನು ವಿಡಿಯೋಗ್ರಾಫಿ ಮಾಡಲೇಬೇಕು ಎಂದು ಸಚಿವ ಡಾ.ಶರಣಪ್ರಕಾಶ ಪಾಟೀಲ್ ಕಟ್ಟುನಿಟ್ಟಾಗಿ ಸೂಚಿಸಿದರು.

ತೋಟಗಾರಿಕೆ ಇಲಾಖೆ ಚರ್ಚೆ ವೇಳೆಯಲ್ಲಿ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ತೋಟಗಾರಿಕೆ ಬೆಳೆ ಪ್ರಮಾಣ ವರ್ಷದಿಂದ ವರ್ಷಕ್ಕೆ ವಿಸ್ತರಣೆಯಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿ, ತೋಟಗಾರಿಕೆ ಬೆಳೆ ವಿಸ್ತಿರ್ಣ ಹೆಚ್ಚಿಸಬೇಕು. ಇಲ್ಲಿನ ಕೆಂಬಾಳೆ, ಕಲ್ಲಂಗಡಿ ಅಂತಹ ಹಣ್ಣುಗಳನ್ನು ಸೂಪರ್ ಫುಡ್ ಬ್ರ್ಯಾಂಡ್ ನಡಿ ಮಾರಾಟ ಮಾಡಬೇಕು. ರೈತರಿಗೆ ಉತ್ತಮ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಬೇಕೆಂದ ಅವರು, ಅತಿವೃಷ್ಠಿ ಹಾನಿಯಾದಲ್ಲಿ ಮೇವು ದಾಸ್ತಾನು, ಜಾನುವಾರುಗಳಿಗೆ ಲಸಿಕಾಕರಣ ಮಾಡಬೇಕು ಎಂದು ಪಶುಸಂಗೋಪನಾ ಉಪನಿರ್ದೇಶಕ ಡಾ.ಎಸ್.ಡಿ. ಆವಂಟಿ ಅವರಿಗೆ ಸೂಚಿಸಿದರು.

ರೈತರ ಆತ್ಮಹತ್ಯೆಗೆ ಕಳವಳ, ಪರಿಹಾರ ವಿಳಂಬ ಸಲ್ಲದು

ಸಭೆಯಲ್ಲಿ ರೈತರ ಆತ್ಮಹತ್ಯೆ ಚರ್ಚೆ ಸಂದರ್ಭದಲ್ಲಿ ಇನ್ನು 5 ಪ್ರಕರಣ ಪರಿಹಾರ ನೀಡಲು ಬಾಕಿ ಎಂದು ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್‌ ಹೇಳಿದಾಗ, ಸಚಿವ ಪ್ರಿಯಾಂಕ್ ಖರ್ಗೆ ಅವರು ಆತ್ಮಹತ್ಯೆಗೆ ತೀವ್ರ ಕಳವಳ ವ್ಯಕ್ತಪಡಿಸುತ್ತಾ, ಇಂತಹ ಪ್ರಕರಣದಲ್ಲಿ ಪರಿಹಾರ ವಿಳಂಬ ಸಲ್ಲದು. ಇತ್ತೀಚೆಗೆ ಚಿತ್ತಾಪೂರ ತಾಲೂಕಿನ ಅಳ್ಳೊಳ್ಳಿಯಲ್ಲಿ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪ್ರಕರಣ ಉಲ್ಲೇಖಿಸಿ ಪಿ.ಎಚ್.ಸಿ ಯಲ್ಲಿ ಎಂಟಿ ಸ್ನೇಕ್ ವೆನೋಮ್ ಇಲ್ಲದಕ್ಕೆ ಯಾದಗಿರಿ ಆಸ್ಪತ್ರೆಗೆ ಹೋಗಬೇಕಾಯಿತು. ಪ್ರತಿ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ಎಂಟಿ ಸ್ನೇಕ್ ವೆನೋಮ್ ಶೇಖರಿಸಿಡುವಂತೆ ಸೂಚಿಸಿದರು. ಇದಕ್ಕೆ ದನಿಗೂಡಿಸಿದ ಸಚಿವ ಡಾ. ಶರಣಪ್ರಕಾಶ ಪಾಟೀಲ್, ಹಾವು ಕಚ್ಚಿದ ಪ್ರಕರಣದಲ್ಲಿ ಜನರು ತಪ್ಪು ನಂಬಿಕೆಯಲ್ಲಿ ಮಂತ್ರ-ತಂತ್ರ ಎಂದು ಆ ಕಡೆ ಹೋಗಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಈ ಬಗ್ಗೆ ಆರೋಗ್ಯ ಇಲಾಖೆ ಸೇರಿದಂತೆ ಸಂಬಂಧಿಸಿದ ಇಲಾಖೆಗಳು ಸಾರ್ವಜನಿಕರಿಗೆ ಅರಿವು ಮೂಡಿಸಲು ಅಭಿಯಾನ ಕೈಗೊಳ್ಳಬೇಕು ಎಂದು ಕಟ್ಟುನಿಟ್ಟಾಗಿ ಸೂಚಿಸಿದರು.

ಇದನ್ನೂ ಓದಿ: PGCET 2024 : ಪಿಜಿಸಿಇಟಿ ಅಪ್‌ಡೇಟ್ಸ್‌ ; ಶುಲ್ಕ ಪಾವತಿ, ತಿದ್ದುಪಡಿ, ಪರೀಕ್ಷಾ ಕೇಂದ್ರ ಆಯ್ಕೆಗೆ ಜೂ.24 ಕೊನೆ ದಿನ

ಸಭೆಯಲ್ಲಿ ಅಫಜಲಪುರ ಶಾಸಕ ಎಂ.ವೈ. ಪಾಟೀಲ, ವಿಧಾನ ಪರಿಷತ್ ಶಾಸಕರುಗಳಾದ ತಿಪ್ಪಣ್ಣಪ್ಪ ಕಮಕನೂರ, ಜಗದೇವ ಗುತ್ತೇದಾರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್, ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷೆ ಚಂದ್ರಿಕಾ ಪರಮೇಶ್ವರಿ, ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರಸಿಂಗ್ ಮೀನಾ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಮಹಾನಗರ ಪಾಲಿಕೆ ಉಪ ಆಯುಕ್ತ ಮಾಧವ ಗಿತ್ತೆ, ಪ್ರೊಬೇಷನರ್ ಐ.ಎ.ಎಸ್. ಅಧಿಕಾರಿ ಮೀನಾಕ್ಷಿ ಆರ್ಯ ಸೇರಿದಂತೆ ಜಿಲ್ಲಾ ಮಟ್ಟದ ಅನೇಕ ಅಧಿಕಾರಿಗಳು ಇದ್ದರು.

Continue Reading

ವಿಜಯನಗರ

Vijayanagara News: ವಿಜಯನಗರ ಜಿಲ್ಲೆಗೆ 85.76 ಕೋಟಿ ರೂ. ಬೆಳೆವಿಮೆ ಬಿಡುಗಡೆ

Vijayanagara News: 2023-24ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ನೋಂದಾಯಿಸಿದ ರೈತರಿಗೆ ಮೆಕ್ಕೆಜೋಳ, ಜೋಳ, ಸಜ್ಜೆ, ಸೂರ್ಯಕಾಂತಿ, ಶೇಂಗಾ, ನವಣೆ, ರಾಗಿ ಈರುಳ್ಳಿ, ಟೊಮೊಟೊ ಬೆಳೆಗಳಿಗೆ ಬೆಳೆ ವಿಮೆ ಬಿಡುಗಡೆಯಾಗಿದೆ. 2023-24ನೇ ಸಾಲಿನ ಮುಂಗಾರು ಹಂಗಾಮಿಗೆ ವಿಜಯನಗರ ಜಿಲ್ಲೆಗೆ ಒಟ್ಟು 85.76 ಕೋಟಿ ರೂ. ಬೆಳೆ ವಿಮೆ ಬಿಡುಗಡೆಯಾಗಿದೆ.

VISTARANEWS.COM


on

85.76 crore rupees crop insurance released for Vijayanagara district says Vijayanagara District Joint Agriculture Director Sharanappa Mudgal
ವಿಜಯನಗರ ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಶರಣಪ್ಪ ಮುದಗಲ್.
Koo

ಹೊಸಪೇಟೆ: 2023-24ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ನೋಂದಾಯಿಸಿದ ರೈತರಿಗೆ ಮೆಕ್ಕೆಜೋಳ, ಜೋಳ, ಸಜ್ಜೆ, ಸೂರ್ಯಕಾಂತಿ, ಶೇಂಗಾ, ನವಣೆ, ರಾಗಿ ಈರುಳ್ಳಿ, ಟೊಮೊಟೊ ಬೆಳೆಗಳಿಗೆ ಬೆಳೆ ವಿಮೆ ಬಿಡುಗಡೆಯಾಗಿದೆ. 2023-24ನೇ ಸಾಲಿನ ಮುಂಗಾರು ಹಂಗಾಮಿಗೆ ಒಟ್ಟು 85.76 ಕೋಟಿ ರೂ. ಬೆಳೆ ವಿಮೆ (Vijayanagara News) ಬಿಡುಗಡೆಯಾಗಿದೆ.

ಹಡಗಲಿ ತಾಲೂಕಿಗೆ 1071.72 ಲಕ್ಷ ರೂ., ಹಗರಿಬೊಮ್ಮನಹಳ್ಳಿ ತಾಲೂಕಿಗೆ 256.62 ಲಕ್ಷ ರೂ., ಹರಪನಹಳ್ಳಿ ತಾಲೂಕಿಗೆ 6101.63 ಲಕ್ಷ ರೂ., ಹೊಸಪೇಟೆ ತಾಲೂಕಿಗೆ 38.05 ಲಕ್ಷ ರೂ., ಕೊಟ್ಟೂರು ತಾಲೂಕಿಗೆ 491.81 ಲಕ್ಷ ರೂ., ಕೂಡ್ಲಿಗಿ ತಾಲೂಕಿಗೆ 616.85 ಲಕ್ಷ ರೂ. ಬಿಡುಗಡೆಯಾಗಿದೆ.

ಇದನ್ನೂ ಓದಿ: Job News: ಗ್ರಾಮೀಣ ಬ್ಯಾಂಕ್‌ಗಳಲ್ಲಿ 586 ಹುದ್ದೆ; ಆಯ್ಕೆ ಹೇಗಿರುತ್ತದೆ? ಪರೀಕ್ಷೆ ಸ್ವರೂಪವೇನು? Complete Details

ಹಡಗಲಿ ತಾಲೂಕಿನಲ್ಲಿ 3382, ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲಿ 708, ಹರಪನಹಳ್ಳಿ ತಾಲೂಕಿನಲ್ಲಿ 20394, ಹೊಸಪೇಟೆ ತಾಲೂಕಿನಲ್ಲಿ 212, ಕೊಟ್ಟೂರು ತಾಲೂಕಿನಲ್ಲಿ 2402, ಕೂಡ್ಲಿಗಿ ತಾಲೂಕಿನಲ್ಲಿ 2412 ರೈತರು ಈ ಬೆಳೆ ವಿಮೆ ಪಡೆಯುತ್ತಿದ್ದಾರೆ.

ಬೆಳೆ ವಿಮೆಗೆ ನೋಂದಾಯಿಸಿದ ರೈತರು ಬೆಳೆ ವಿಮಾ ಕಂತು ತುಂಬಿದ ಬ್ಯಾಂಕ್‌ ಖಾತೆಯನ್ನು ಪರಿಶೀಲಿಸಿಕೊಳ್ಳಲು ಕೋರಿದೆ. ಬೆಳೆ ವಿಮಾ ಜಮೆ ಆಗದಿದ್ದಲ್ಲಿ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಹಾಗೂ ತಮ್ಮ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗಳಿಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು.

ಇದನ್ನೂ ಓದಿ:Kannada New Movie: ಜೂ.21ಕ್ಕೆ ‘ಸಂಭವಾಮಿ ಯುಗೇ ಯುಗೇ’ ಚಿತ್ರ ರಿಲೀಸ್‌

ಪ್ರಸಕ್ತ ಸಾಲಿನಲ್ಲಿಯೂ ಸಹ ಉತ್ತಮ ಮಳೆ ಆಗುವುದೆಂಬ ಅಂದಾಜಿರುವುದರಿಂದ ಎಲ್ಲಾ ರೈತ ಬಾಂಧವರು ಕಡ್ಡಾಯವಾಗಿ ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಲು ಮನವಿ ಮಾಡಲಾಗಿದೆ ಎಂದು ವಿಜಯನಗರ ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಶರಣಪ್ಪ ಮುದಗಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading
Advertisement
US Presidential Election
ವಿದೇಶ15 mins ago

US Presidential Election: ಬಹಿರಂಗ ಚರ್ಚೆ ಬಳಿಕ ಅಭ್ಯರ್ಥಿಯ ಬದಲಾವಣೆ? ಬೈಡೆನ್‌ ಬದಲಿಗೆ ಮಿಶೆಲ್‌ ಒಬಾಮಾ ಕಣಕ್ಕೆ?

IND vs SA Final
ಕ್ರೀಡೆ18 mins ago

IND vs SA Final: ಇಂದು ಫೈನಲ್​ ಪಂದ್ಯ ನಡೆಯುವುದೇ ಅನುಮಾನ; ಕಾರಣವೇನು?

Sadhguru Jaggi Vasudev
ಆರೋಗ್ಯ18 mins ago

Sadhguru Jaggi Vasudev: ಮಕ್ಕಳಲ್ಲಿ ಅಲರ್ಜಿ ಸಮಸ್ಯೆಗೆ ಏನು ಪರಿಹಾರ? ಸದ್ಗುರು ಸಲಹೆ ಇಲ್ಲಿದೆ ಕೇಳಿ

Kannada New Movie niveditha Shivarajkumar frefly cinema sudharani join
ಸಿನಿಮಾ29 mins ago

Kannada New Movie: ನಿವೇದಿತಾ ಶಿವರಾಜಕುಮಾರ್ ನಿರ್ಮಾಣದ ‘ಫೈರ್‌ಫ್ಲೈ’ ತಂಡ ಸೇರಿದ ಸುಧಾರಾಣಿ!

Actor Darshan
ಕರ್ನಾಟಕ48 mins ago

Actor Darshan: ಜೈಲಲ್ಲಿ ಮುದ್ದೆ-ಚಿಕನ್‌ ಸಾಂಬಾರ್‌ ಸವಿದ ದರ್ಶನ್;‌ ನಟನ ನೋಡಲು ಮುಗಿಬಿದ್ದ ಕೈದಿಗಳು!

Amarnath Yatra
ದೇಶ56 mins ago

Amarnath Yatra: ವ್ಯಾಪಕ ಬಿಗಿ ಭದ್ರತೆಯೊಂದಿಗೆ ಈ ಬಾರಿಯ ಅಮರನಾಥ ಯಾತ್ರೆ ಆರಂಭ; ಪವಿತ್ರ ಗುಹೆಯತ್ತ ಹೊರಟ ಮೊದಲ ತಂಡ

BBMP Scam
ಬೆಂಗಳೂರು1 hour ago

BBMP Scam: ನಕಲಿ ಸೊಸೈಟಿಗಳಿಗೆ ಬಿಬಿಎಂಪಿ 102 ಕೋಟಿ ರೂ. ವರ್ಗಾವಣೆ; ಬಯಲಾಯ್ತು ಮತ್ತೊಂದು ಹಗರಣ!

Assam Tour
ಪ್ರವಾಸ2 hours ago

Assam Tour: ಅಸ್ಸಾಂನ ಪೆಲ್ಲಿಂಗ್‌ನಲ್ಲಿ ಮೋಡಿ ಮಾಡುವ 8 ಆಕರ್ಷಕ ಸಂಗತಿಗಳಿವು

Ashada Month
ಧಾರ್ಮಿಕ2 hours ago

Ashada Month: ಆಷಾಢವನ್ನು ಅಶುಭ ತಿಂಗಳು ಅನ್ನುವುದೇಕೆ? ಇದಕ್ಕಿದೆ ವೈಜ್ಞಾನಿಕ ಕಾರಣ!

Mango Storage
ಆಹಾರ/ಅಡುಗೆ2 hours ago

Mango Storage: ಮಾವಿನ ಹಣ್ಣಿನ ಸೀಸನ್‌ ಮುಗಿದರೇನಂತೆ? ತಿಂಗಳ ಕಾಲ ಇದನ್ನು ಶೇಖರಿಸಿ ಇಡುವ ವಿಧಾನ ಇಲ್ಲಿದೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ14 hours ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ21 hours ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು2 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ2 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ5 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

ಟ್ರೆಂಡಿಂಗ್‌