Site icon Vistara News

Accident Case : ಚಲಿಸುತ್ತಿದ್ದ ರೈಲಿನಿಂದ ಆಯತಪ್ಪಿ ಬಿದ್ದ; ಎರಡು ಹೋಳಾಯ್ತು ತಲೆ ಬುರುಡೆ

Accident Case In Anekal

ಆನೇಕಲ್: ರೈಲ್ವೆ ಬ್ರಿಡ್ಜ್ ಮೇಲಿಂದ ಕೆಳಗೆ ಬಿದ್ದ ವ್ಯಕ್ತಿಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿಯ ಹಳೆ ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ (Accident Case) ನಡೆದಿದೆ.

ಏ.15ರ ಸೋಮವಾರ ಬೆಳಗ್ಗೆ 7.30 ರ ಸುಮಾರಿಗೆ ಚಲಿಸುತ್ತಿದ್ದ ರೈಲಿನಿಂದ ಆಯಾತಪ್ಪಿ ಕೆಳಗೆ ಬಿದ್ದಿರಬಹುದು ಎಂದು ಶಂಕಿಸಲಾಗಿದೆ. ರೈಲ್ವೆ ಬ್ರಿಡ್ಜ್ ಮೇಲಿಂದ ಹೆದ್ದಾರಿ ರಸ್ತೆಗೆ ಬಿದ್ದ ರಭಸಕ್ಕೆ ವ್ಯಕ್ತಿಯ ತಲೆಯು ಎರಡು ಸೀಳು ಬಿಟ್ಟಿತ್ತು. ಗಂಭೀರ ಗಾಯವಾಗಿ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಹೆದ್ದಾರಿಯಲ್ಲಿ ಸಂಭವಿಸಿದ ಈ ದುರಂತದಿಂದ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸೂರ್ಯನಗರ ಹಾಗೂ ಬೈಯ್ಯಪ್ಪನಹಳ್ಳಿ ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತನ ಗುರುತು ಪತ್ತೆ ಆಗಿಲ್ಲ.

ಇದು ಆಕಸ್ಮಿಕವೋ ಅಥವಾ ಆತ್ಮಹತ್ಯೆಯೋ ಎಂಬುದರ ಕುರಿತು ತನಿಖೆಯನ್ನು ನಡೆಸುತ್ತಿದ್ದಾರೆ. ಆಂಬ್ಯುಲೆನ್ಸ್‌ ಮೂಲಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: Fire Accident : ಶಾರ್ಟ್ ಸಕ್ಯೂರ್ಟ್‌ನಿಂದ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ; 4 ವರ್ಷದ ಮಗು ಉಸಿರುಗಟ್ಟಿ ಸಾವು

ಜಲಮಂಡಳಿ ತೋಡಿದ ಗುಂಡಿಗೆ ಬಿದ್ದು ಯುವಕ ಸಾವು, ಮತ್ತಿಬ್ಬರ ಸ್ಥಿತಿ ಗಂಭೀರ

ಬೆಂಗಳೂರು: ಜಲಮಂಡಳಿ ತೋಡಿದ ಗುಂಡಿಗೆ ಬಿದ್ದು ಒಬ್ಬ ಯುವಕ ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ (Bike Accident) ಕೆಂಗೇರಿ ಬಳಿಯ ಕೊಮ್ಮಘಟ್ಟ ಸರ್ಕಲ್‌ನಲ್ಲಿ ಭಾನುವಾರ ನಡೆದಿದೆ. ಬೈಕ್‌ನಲ್ಲಿ ಹೋಗುತ್ತಿದ್ದಾಗ ಪೈಪ್‌ಲೇನ್‌ಗಾಗಿ ತೋಡಿದ್ದ ಗುಂಡಿಗೆ ಬೈಕ್ ಸಮೇತ ಬಿದ್ದು ಯುವಕ ಕೊನೆಯುಸಿರೆಳೆದಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಯುವಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ವರ್ಷದ‌ ಹಿಂದೆ ಉಲ್ಲಾಳ ಕೆರೆ ಬಳಿ ಇದೇ ರೀತಿಯ ಪೈಪ್‌ಲೈನ್ ಅಳವಡಿಕೆ ಕಾಮಗಾರಿ ವೇಳೆ ಕಾರ್ಮಿಕನೊಬ್ಬ ಮೃತಪಟ್ಟಿದ್ದ. ಭಾನುವಾರ ಜಲಮಂಡಳಿ ನಿರ್ಲಕ್ಷ್ಯಕ್ಕೆ ಮತ್ತೊಬ್ಬ ಯುವಕ ಬಲಿಯಾಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಕೆಂಗೇರಿ ಪೊಲೀಸರು ಸ್ಥಳಕ್ಕೆ‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗುಂಡಿ ಪಕ್ಕ ಯಾವುದೇ ಬ್ಯಾರಿಕೇಡ್ ಅಳವಡಿಸದಿರುವುದು ಘಟನೆಗೆ ಕಾರಣ ಎನ್ನಲಾಗುತ್ತಿದೆ.

ಇದನ್ನೂ ಓದಿ | Chitradurga News: ಮನೆ ಮುಂದೆ ನಾಯಿ ಹೊಲಸು ಮಾಡಿದ್ದನ್ನು ಪ್ರಶ್ನಿಸಿದ ವ್ಯಕ್ತಿಗೆ ಚೂರಿ ಇರಿತ!

ಟಯರ್‌ ಬ್ಲಾಸ್ಟ್‌ ಆಗಿ ಟಿಪ್ಪರ್ ಪಲ್ಟಿ; ರಸ್ತೆ ಬದಿ ನಿಂತಿದ್ದ ಒಂದೇ ಕುಟುಂಬದ ಐವರ ದುರ್ಮರಣ

ಬಾಗಲಕೋಟೆ: ಟಯರ್‌ ಬ್ಲಾಸ್ಟ್‌ ಆಗಿ ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಪಲ್ಟಿಯಾಗಿ ಒಂದೇ ಕುಟುಂಬದ ಐವರು ದುರ್ಮರಣ ಹೊಂದಿದ ಘಟನೆ ಬೀಳಗಿ ತಾಲೂಕಿನ ಹೊನ್ಯಾಳ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಹೊಲದ ಕೆಲಸ ಮುಗಿಸಿ ರಸ್ತೆ ಪಕ್ಕ ನಿಂತಿದ್ದವರ ಮೇಲೆ ಟಿಪ್ಪರ್‌ ಪಲ್ಟಿಯಾಗಿದ್ದರಿಂದ ದುರಂತ ನಡೆದಿದೆ.

ಬಾದರದಿನ್ನಿ ಗ್ರಾಮದ ಯಂಕಪ್ಪ ಶಿವಪ್ಪ ತೋಳಮಟ್ಟಿ (70), ಪತ್ನಿ ಯಲ್ಲವ್ವ ಯಂಕಪ್ಪ ತೋಳಮಟ್ಟಿ (60), ಮಗ ಪುಂಡಲೀಕ ಯಂಕಪ್ಪ ತೋಳಮಟ್ಟಿ (35), ಮಗಳು ನಾಗವ್ವ ಅಶೋಕ ಬಮ್ಮಣ್ಣವರ (45), ಅಳಿಯ ಅಶೋಕ ನಿಂಗಪ್ಪ ಬಮ್ಮಣ್ಣವರ (50) ಮೃತರು. ಸ್ಥಳಕ್ಕೆ ಬೀಳಗಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನ ಬೀಳಗಿ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version