Site icon Vistara News

Attempt To Murder : ಹಳೆ ವೈಷಮ್ಯ; ಹೊಸತೊಡಕು ರಾತ್ರಿ ಕಾದುಕುಳಿತು ರಕ್ತ ಹರಿಸಿದರು ದುಷ್ಟರು

Attempt to murder

ಆನೇಕಲ್: ಹೊಸತೊಡಕು ರಾತ್ರಿ ಆ ಏರಿಯಾದ ಗ್ಯಾಂಗ್‌ವೊಂದು ವ್ಯಕ್ತಿ ಜತೆ ಕಿರಿಕ್‌ ಮಾಡಿಕೊಂಡಿತ್ತು. ಆತನೊಟ್ಟಿಗೆ ಹಳೆ ದ್ವೇಷ ಹೊಂದಿದ್ದ ಕಿಡಿಗೇಡಿಗಳು ಮಾತನಾಡುವ ನೆಪದಲ್ಲಿ ಕರೆಸಿಕೊಂಡು ಮಾರಣಾಂತಿಕ ಹಲ್ಲೆ (Attempt To Murder) ನಡೆಸಿದ್ದಾರೆ. ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಸೂರ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗೋಪಸಂದ್ರದಲ್ಲಿ ಬುಧವಾರ ರಾತ್ರಿ 10:30ರ ಸುಮಾರಿಗೆ ಘಟನೆ ನಡೆದಿದೆ. ಮುತ್ತಾನಲ್ಲೂರು ವಾಸಿ ಸತೀಶ್ (30) ಹಲ್ಲೆಗೊಳಗಾದವರು.

ಮುತ್ತಾನಲ್ಲೂರು ವಾಸಿಗಳಾದ ಮುನಿಯಲ್ಲಪ್ಪ, ದರ್ಶನ್ ಪ್ರಶಾಂತ್, ಆನಂದ್ , ಅಶೋಕ್ ಮತ್ತು ವೈಟ್ ಫೀಲ್ಡ್ ಮೂರ್ತಿ ಗ್ಯಾಂಗ್‌ನಿಂದ ಕೃತ್ಯ ನಡೆದಿದೆ. ಬುಧವಾರ ಮಧ್ಯಾಹ್ನ ಸತೀಶ್ ಜತೆ ಮುನಿಯಲ್ಲಪ್ಪ ಕಿರಿಕ್ ತೆಗೆದಿದ್ದ. ಸಂಜೆ ಹೊತ್ತಿಗೆ ಆಗಿದ್ದು ಆಯಿತೆಂದು ರಾಜಿ ಮಾಡಿಕೊಂಡಿದ್ದರು. ಆದರೆ ರಾತ್ರಿ ಮಾತನಾಡಬೇಕು ಬಾ ಎಂದು ಸತೀಶ್‌ನನ್ನು ಕರೆದಿದ್ದ. ರಾತ್ರಿ ಬೇಡವೆಂದರೂ ಒತ್ತಾಯ ಮಾಡಿ ಸತೀಶ್‌ನನ್ನು ಮುನಿಯಲ್ಲಪ್ಪ ಕರೆದೊಯ್ದಿದ್ದ. ಆತಂಕಗೊಂಡ ಮನೆಯವರು ಸತೀಶ್ ಜತೆ ಮಗನನ್ನು ಕಳುಹಿಸಿದ್ದರು.

ಪ್ಲ್ಯಾನ್‌ನಂತೆ ಸತೀಶ್‌ಗಾಗಿ ಕಾದು ಕುಳಿತಿದ್ದ ಗ್ಯಾಂಗ್‌ ಏಕಾಏಕಿ ಡೆಡ್ಲಿ ಅಟ್ಯಾಕ್ ಮಾಡಿದ್ದಾರೆ. ತಲೆ, ಕಣ್ಣು, ಹೊಟ್ಟೆ, ಬೆನ್ನು ಸೇರಿ ಹತ್ತಾರು ಕಡೆ ಚಾಕುವಿನಿಂದ ಇರಿದಿದ್ದಾರೆ. ನೆರವಿಗೆ ಧಾವಿಸಿದ ಸತೀಶ್‌ ಅವರ ಮಗನನ್ನು ಹೊಡೆದು ಓಡಿಸಿದ್ದಾರೆ. ಬಳಿಕ ಸತೀಶ್ ಮೇಲೆ ಡ್ರಾಗರ್ ಮತ್ತು ಚಾಕುವಿನಿಂದ ಸಿಕ್ಕಸಿಕ್ಕಲ್ಲಿ ಚುಚ್ಚಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಸತೀಶ್‌ನನ್ನು ಸ್ಥಳೀಯರು ರಕ್ಷಿಸಿದ್ದಾರೆ. ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಸತೀಶ್‌ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಸೂರ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Sumalatha Ambareesh : ಬಿಜೆಪಿಗೆ ಸೇರ್ಪಡೆಗೊಂಡರೂ ಪ್ರಚಾರಕ್ಕೆ ಇಳಿಯದ ಸುಮಲತಾ!

Lok Sabha Election : ಬಿಜೆಪಿ ಕಾರ್ಯಕರ್ತನ ಮೇಲೆ ಮಾರಕಾಸ್ತ್ರಗಳಿಂದ ದಾಳಿ, ಟ್ವೀಟ್​ ಮೂಲಕ ಕಾಂಗ್ರೆಸ್​ ಮೇಲೆ ಬಿಜೆಪಿ ಅಟ್ಯಾಕ್​​

ಬೆಂಗಳೂರು: ರೇಷ್ಮೆ ಬೆಳೆಗಾರ ಹಾಗೂ ಬಿಜೆಪಿ (BJP) ಕಾರ್ಯಕರ್ತ‌ ನವೀನ್ ಅವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ವಿಚಾರದಲ್ಲಿ ಕರ್ನಾಟ ಬಿಜೆಪಿ ರಾಜ್ಯ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡಿದೆ. ಲೋಕ ಸಭಾ ಚುನಾವಣೆ (Lok Sabha Election) ಸಮಯದಲ್ಲಿ ಗೂಂಡಾಗಳನ್ನು ಬಿಟ್ಟು ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಲಾಗುತ್ತಿದೆ ಎಂದು ಆರೋಪಿಸಿದೆ. ಈ ಬಗ್ಗೆ ಟ್ವಿಟರ್ ಹ್ಯಾಂಡಲ್​ ಮೂಲಕ ಕಟು ಪದಗಳಿಂದ ಟೀಕೆ ಮಾಡಿದೆ.

ಚುನಾವಣೆ ಸಮಯದಲ್ಲಿ ಕಾಂಗ್ರೆಸ್​ ಗೂಂಡಾಗಳು ಸಕ್ರಿಯಗೊಂಡಿದ್ದಾರೆ. ಅವರನ್ನು ಮಜಾವಾದಿ ಸಿದ್ದರಾಮಯ್ಯ ಸರ್ಕಾರ ರಕ್ಷಣೆ ಮಾಡುತ್ತಿದೆ. ರೇಷ್ಮೆ ಬೆಳೆಗಾರ ಹಾಗೂ ಬಿಜೆಪಿ ಕಾರ್ಯಕರ್ತ‌ ನವೀನ್ ಮೇಲೆ ಕಾಂಗ್ರೆಸ್ಸಿನ ಗೂಂಡಾ ಮಾರಣಾಂತಿಕ ಹಲ್ಲೆ ಮಾಡಿದ್ದರೂ ಆತನನ್ನು ಬಂಧಿಸದೆ ಸಣ್ಣ ಕೇಸ್ ಹಾಕಿ ರಾಜಾರೋಷವಾಗಿ ಬೀದಿಗೆ ಬಿಟ್ಟಿದೆ.

ಚುನಾವಣೆ ಗೆಲ್ಲಲು ಗೂಂಡಾಗಿರಿ ಮಾಡುತ್ತಿರುವ ಅಣ್ಣ-ತಮ್ಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಅದರ ಮುಂದುವರಿದ ಭಾಗವೇ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ . ಅದೇ ರೀತಿ ಮತದಾರರನ್ನು ಬೆದರಿಸುವ ಕೆಲಸ ಮಾಡಲಾಗುತ್ತಿದೆ.

ಕೂಡಲೇ ಚುನಾವಣಾ ಆಯೋಗ ಕಾಂಗ್ರೆಸ್ ಪಕ್ಷದ ವಿರುದ್ಧ ಕ್ರಮಕೈಗೊಂಡು ನಿಷ್ಪಕ್ಷಪಾತವಾಗಿ ರಾಜ್ಯದಲ್ಲಿ ಚುನಾವಣೆ ನಡೆಯಲು ಅವಕಾಶ ಕಲ್ಪಿಸಿ, ಮತದಾರರಲ್ಲಿ ಧೈರ್ಯ ತುಂಬಬೇಕಿದೆ ಎಂದು ಬಿಜೆಪಿ ಟ್ವೀಟ್ ಮಾಡಿದೆ.

ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್​. ಅಶೋಕ್ ಅವರು ಈ ಬಗ್ಗೆ ತಮ್ಮ ಟ್ವಿಟರ್ ಹ್ಯಾಂಡಲ್​ನಲ್ಲಿ ಟ್ವೀಟ್ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರದಲ್ಲಿ ಸೋಲು ಖಚಿತವಾಗುತ್ತಿದ್ದಂತೆ ಶಾಶ್ವತವಾಗಿ CM-in-waiting ಆಗಿ ಉಳಿಯಬೇಕಾಗುತ್ತಲ್ಲಾ ಎನ್ನುವ ಹತಾಶೆಯಿಂದ ಕಂಗಾಲಾಗಿರುವ ಡಿಕೆ ಶಿವಕುಮಾರ್​ ಹಾಗೂ ಅವರ ಸಹೋದರ ಡಿಕೆ ಸುರೇಶ್​ ಮತದಾರರ ಮೇಲಿನ ಕೋಪಕ್ಕೆ ಗೂಂಡಾಗಿರಿಗೆ ಇಳಿದಿದ್ದಾರೆ.

ಇದನ್ನೂ ಓದಿ: Shivaram Hebbar : ಶಾಸಕ ಶಿವರಾಮ್ ಹೆಬ್ಬಾರ್ ಪುತ್ರ ಇಂದು ಕಾಂಗ್ರೆಸ್ ಸೇರ್ಪಡೆ

ಬಿಜೆಪಿ ಕಾರ್ಯಕರ್ತ‌ ನವೀನ್ ಮೇಲೆ ಕಾಂಗ್ರೆಸ್ಸಿನ ಗೂಂಡಾಗಳು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದರೂ ಆತನನ್ನು ಬಂಧಿಸದೆ ಕಾಟಾಚಾರಕ್ಕೆ ಕೇಸ್ ಹಾಕುವ ಮೂಲಕ ರಕ್ಷಣೆ ಮಾಡಲಾಗುತ್ತದೆ. ಸಿಎಂ ಸಿದ್ದರಾಮಯ್ಯನವರೇ ಸ್ಟ್ರಾಂಗ್ ಸಿಎಂ ಎಂದು ಹೇಳಿಕೊಳ್ಳುವ ನೀವು ಡಿಕೆ ಸಹೋದರದ ಮುಂದೆ ಅಷ್ಟೊಂದು ವೀಕ್ ಯಾಕಾಗಿದ್ದೀರಿ?

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರು ನಿರ್ಭೀತಿಯಿಂದ ಮತದಾನ ಮಾಡುವ ವಾತಾವರಣ ಕೆಡಿಸಿ ಮತದಾರರಲ್ಲಿ ಭಯದ ವಾತಾವರಣ ಸೃಷ್ಟಿ ಮಾಡುವ ಈ ದುಷ್ಕೃತ್ಯಕ್ಕೆ ಚುನಾವಣಾ ಆಯೋಗ ಕಡಿವಾಣ ಹಾಕಬೇಕು. ಕಾಂಗ್ರೆಸ್ ಪಕ್ಷದ ವಿರುದ್ಧ ಕ್ರಮಕೈಗೊಂಡು ನಿಷ್ಪಕ್ಷಪಾತವಾಗಿ ಅವಕಾಶ ಕಲ್ಪಿಸಿ, ಮತದಾರರಲ್ಲಿ ಧೈರ್ಯ, ವಿಶ್ವಾಸ ತುಂಬುವ ಕೆಲಸ ಮಾಡಬೇಕು ಎಂದು ಬರೆದುಕೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version