ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದಲ್ಲಿ ಮತ್ತೆ ಭಿನ್ನಮತ ಸ್ಟೋಟಗೊಂಡಿದೆ.
ಶಾಸಕ ಶರತ್ ಬಚ್ಚೇಗೌಡ ವಿರುದ್ದ ಮೂಲ ಕಾಂಗ್ರೆಸಿಗರು ಸಿಟ್ಟಾಗಿದ್ದಾರೆ. ಗುರುವಾರ ಹೊಸಕೋಟೆ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮೂಲ ಕಾಂಗ್ರೆಸಿಗರು ಸಭೆ ನಡೆಸಿದರು. ಈ ಬಾರಿ ಶರತ್‌ಗೆ ಕಾಂಗ್ರೆಸ್ ಟಿಕೆಟ್ ಕೊಡದಂತೆ ಮುಖಂಡರು ಒತ್ತಾಯ ಮಾಡಿದ್ದಾರೆ.
ಸಭೆಯಲ್ಲಿ ಕಾರ್ಯಕರ್ತರು ಗದ್ದಲ ಮಾಡಿ ಪರಸ್ಪರ ಕಿತ್ತಾಡಿಕೊಂಡಿದ್ದಾರೆ. ಶಾಸಕ ಶರತ್ ಮೂಲ ಕಾಂಗ್ರೆಸ್ ನಾಯಕರನ್ನು ಕಡೆಗಣಿಸಿ ತನ್ನ ಬೆಂಬಲಿಗರಿಗೆ ಮನ್ನಣೆ ನೀಡುತ್ತಿರುವ ಆರೋಪ ಕೇಳಿ ಬಂದಿದೆ. ಕಾಂಗ್ರೆಸ್ ಪಕ್ಷದ ಕಛೇರಿಯಲ್ಲಿ ಇದೇ ವಿಚಾರವಾಗಿ ಗಲಾಟೆ ಗದ್ದಲವಾಗಿದೆ. ಜತೆಗೆ ಕಾಂಗ್ರೆಸಿನ ಕೆಲ ಕಾರ್ಯಕರ್ತರು ಕೆಪಿಸಿಸಿ ರಾಜ್ಯ ಕಾರ್ಯದರ್ಶಿ ಮುನಿಶಾಮಣ್ಣ ವಿರುದ್ದ ಆಕ್ರೋಶ ಹೋರಹಾಕಿದರು.
ಚೇರ್ ಮೆಲಕ್ಕೆತ್ತಿ ಪರಸ್ಪರ ಕೈ ಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ತಲುಪಿತ್ತು. ಈ ವೇಳೆ ಶಾಸಕ ಶರತ್ ಬಚ್ಚೇಗೌಡ ಬದಲಿಗೆ ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಪ್ರಸಾದ್ ಅಥವಾ ಮುನಿಶಾಮಣ್ಣಗೆ ಕಾಂಗ್ರೆಸ್ ಟಿಕೆಟ್ ನೀಡುವಂತೆ ಒತ್ತಾಯ ಮಾಡಲಾಯಿತು.
ಇತ್ತೀಚೆಗೆ ಮೂಲ ಕಾಂಗ್ರೆಸ್ ನಾಯಕರನ್ನು ಬಿಟ್ಟು ಅನುಗೊಂಡನಹಳ್ಳಿ ಹೋಬಳಿಯಲ್ಲಿ ಕಾಂಗ್ರೆಸ್ ಕಛೇರಿಯನ್ನು ಶಾಸಕ ಶರತ್ ಬಚ್ಚೇಗೌಡ ಉದ್ಘಾಟನೆ ಮಾಡಿದ್ದೆ ಈ ಸಭೆ ಹಾಗೂ ಕೋಪಕ್ಕೆ ಕಾರಣ ಎನ್ನಲಾಗಿದೆ. ಹೀಗಾಗಿ ಕ್ಷೇತ್ರದಲ್ಲಿ ಕಾಂಗ್ರೆಸ್ ಕಟ್ಟಿ ಬೆಳೆಸಿದವರನ್ನು ಗುರುತಿಸುವಂತೆ ಮೂಲ ಕಾಂಗ್ರೆಸಿಗರು ಒತ್ತಾಯ ಮಾಡಿದ್ದಾರೆ.
ಹೊಸಕೋಟೆ ಕಾಂಗ್ರೆಸ್ ನಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಬಹಿರಂಗವಾಗಿದೆ. ಇದೀಗ ಈ ಭಿನ್ನಮತ ಕಾಂಗ್ರೆಸ್ ನ ರಾಜ್ಯ ನಾಯಕರ ಅಂಗಳಕ್ಕೆ ತಲುಪಿದ್ದು, ಯಾವ ನಿರ್ಧಾರ ರಾಜ್ಯ ಕಾಂಗ್ರೆಸ್ ತೆಗೆದುಕೊಳ್ಳುತ್ತದೆ ಎಂಬುದನ್ನು ಕಾದುನೋಡಬೇಕಿದೆ.
ಇದನ್ನೂ ಓದಿ | MTB Nagaraj | ಕಾಂಗ್ರೆಸ್ ಬಿಟ್ಟು ತಪ್ಪು ಮಾಡಿದೆ ಎಂದ ಸಚಿವ ಎಂಟಿಬಿ, ಮತ್ತೆ ಕೈ ಪಾಳಯ ಪ್ರವೇಶದ ಮುನ್ಸೂಚನೆ?