BJP ಜನಸ್ಪಂದನ | ವಲಸಿಗ ಶಾಸಕರನ್ನು ವೀರರು ಎಂದ ಸಿಎಂ ಬೊಮ್ಮಾಯಿ - Vistara News

ಬಿಜೆಪಿ ಜನ ಸ್ಪಂದನ

BJP ಜನಸ್ಪಂದನ | ವಲಸಿಗ ಶಾಸಕರನ್ನು ವೀರರು ಎಂದ ಸಿಎಂ ಬೊಮ್ಮಾಯಿ

ಪಕ್ಷವನ್ನು ಹಾಳುಮಾಡಲು ಬಂದಿದ್ದಾರೆ ಎಂದು ವಲಸಿಗ ಶಾಸಕ ವಿರುದ್ಧ ಬಿಜೆಪಿಯಲ್ಲೇ ಅಸಮಾಧಾನ ಇರುವ ಸಂದರ್ಭದಲ್ಲಿ ಸ್ವತಃ ಸಿಎಂ ಬೊಮ್ಮಾಯಿ ಅವರೇ ವಲಸಿಗ ಶಾಸಕರನ್ನು ಮೆಚ್ಚಿಕೊಂಡಿದ್ದಾರೆ. ಇದರಿಂದ ವಲಸಿಗ ಶಾಸಕರಿಗೆ ಪಕ್ಷದಲ್ಲಿ ಹೆಚ್ಚಿನ ಉತ್ಸಾಹ ಬರುವಂತಾಗಿದೆ.

VISTARANEWS.COM


on

ಬೊಮ್ಮಾಯಿ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದೊಡ್ಡಬಳ್ಳಾಪುರ: ಕಾಂಗ್ರೆಸ್‌- ಜೆಡಿಎಸ್‌ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಕಾರಣವಾಗಿದ್ದ 17 ವಲಸಿಗ ಶಾಸಕರನ್ನು ವೀರರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂಭೋದಿಸಿದ್ದಾರೆ.

ಪಟ್ಟಣದಲ್ಲಿ ಶನಿವಾರ ಏರ್ಪಡಿಸಿದ್ದ ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಜತೆಗಿದ್ದು ರಾಜ್ಯವನ್ನು ಹಾಳು ಮಾಡಬಾರದು ಎಂದು 17 ಜನರು ರಾಜೀನಾಮೆ ನೀಡಿ ಹೊರ ಬಂದರು. ಜನರ ಬಳಿಗೆ ತೆರಳಿ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂಬ ಧೈರ್ಯ ಈ ಹದಿನೇಳು ಜನ ವೀರರಿಗಿತ್ತು. ಅವರೆಲ್ಲರೂ ಯಡಿಯೂರಪ್ಪ ಅವರಿಗೆ ಬಲ ನೀಡಿದ್ದರಿಂದ ಬಿಜೆಪಿ ಸರ್ಕಾರ ರಚನೆಯಾಯಿತು ಎಂದರು.

ಯಡಿಯೂರಪ್ಪ ಅವರ ಆಡಳಿತದಲ್ಲಿ ಕೋವಿಡ್‌ ಸಮಸ್ಯೆಯನ್ನು ಸಮರ್ಥವಾಗಿ ಎದುರಿಸಿದ್ದೇವೆ. ಕೆಲಸ ಇಲ್ಲದ ಸಂದರ್ಭದಲ್ಲಿ ಬಡವರಿಗೆ ಸಹಾಯ ಮಾಡಿದ್ದೇವೆ. ದೇಶದಲ್ಲಿ 130 ಕೋಟಿ ಜನಸಂಖ್ಯೆಗೆ ಉಚಿತವಾಗಿ ಎರಡು ಡೋಸ್‌ ಲಸಿಕೆಯನ್ನು ಭಾರತದಲ್ಲಿ ಮಾತ್ರ ನೀಡಲಾಗಿದೆ. ಕೇಂದ್ರದಲ್ಲಿ ಮೋದಿ, ಇಲ್ಲಿ ಯಡಿಯೂರಪ್ಪ ಅಲ್ಲದೆ ಕಾಂಗ್ರೆಸ್‌ ಅಧಿಕಾರದಲ್ಲಿ ಇದ್ದಿದ್ದರೆ ನರಕಕ್ಕೆ ತಳ್ಳುತ್ತಿದ್ದರು ಎಂದು ಬೊಮ್ಮಾಯಿ ಬಣ್ಣಿಸಿದರು.

ಮತ್ತೆ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಮುಂದುವರಿಸಿದ ಬೊಮ್ಮಾಯಿ, ಅನ್ನಭಾಗ್ಯವನ್ನು ನೀವು ಕೊಟ್ಟಿರಿ ಎಂದು ಹೇಳಿಕೊಂಡಿರಿ. ಏಳು ಕೆ.ಜಿ ಅಕ್ಕಿ ಕೊಡುತ್ತೇವೆ ಎಂದು ಅದನ್ನು ಮೂರು ಕೆ.ಜಿಗೆ ಇಳಿಸಿ ಆಮೇಲೆ ಚುನಾವಣೆ ಸಂದರ್ಭದಲ್ಲಿ ಏಳು ಕೆ.ಜಿಗೆ ಹೆಚ್ಚಿಸಿದಿರಿ. ಇದರಲ್ಲಿ ಅಕ್ಕಿಯನ್ನು ಮೋದಿ ಸರ್ಕಾರ ನೀಡಿದರೆ ಅದರ ಚೀಲ ಮಾತ್ರ ನೀಡಿದಿರಿ ಎಂದು ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಹಗರಣ ಆರೋಪಗಳ ಪಟ್ಟಿ

ಸಿದ್ದರಾಮಯ್ಯ ಸರ್ಕಾರದಲ್ಲಿ ಹಗರಣಗಳು ನಡೆದಿದ್ದವು ಎಂದು ದೊಡ್ಡ ಪಟ್ಟಿ ಮಾಡಿದ ಸಿಎಂ ಬೊಮ್ಮಾಯಿ, ಅನ್ನಭಾಗ್ಯ ಹಗರಣವನ್ನು ತನಿಖೆ ಮಾಡುತ್ತಿದ್ದ ಅನುರಾಗ್‌ ತಿವಾರಿಯ ಸಾವು ಅನುಮಾನಾಸ್ಪದವಾಗಿ ಉತ್ತರ ಪ್ರದೇಶದಲ್ಲಿ ನಡೆಯಿತು. ಮರಳು ದಂಧೆಯಲ್ಲಿ ಸಚಿವ ಸಂಪುಟದ ಸದಸ್ಯರ ಮಗನ ಮೇಲೆ ಪ್ರಕರಣ ದಾಖಲಾಯಿತು. ರೈತರಿಗೆ ಬೋರ್‌ವೆಲ್‌ ಕೊರೆಯಿಸುವ ಯೋಜನೆಯಲ್ಲಿ ಒಂದೇ ದಿನದಲ್ಲಿ ಮೂವತ್ತಾರು ಸಾವಿರ ಬೋರ್‌ವೆಲ್‌ ಕೊರೆಸುವ ಹಗರಣ ಮಾಡಿದಿರಿ. ಎಸ್‌ಸಿ,ಎಸ್‌ಟಿ ಹಾಸ್ಟೆಲ್‌ಗಳ ಹಾಸಿಗೆ ದಿಂಬಿನಲ್ಲಿ, ಬಿಡಿಎ ಅರ್ಕಾವತಿಯಲ್ಲಿ, ಲ್ಯಾಪ್‌ಟಾಪ್‌ ನೀಡುವುದರಲ್ಲಿ ಹಗರಣ ಮಾಡಿದಿರಿ ಎಂದರು. ಸಣ್ಣ ನೀರಾವರಿಯಲ್ಲಿ ಕೆಲಸವನ್ನೇ ಮಾಡದೆ 40 ಸಾವಿರ ಕೋಟಿ ರೂಪಾಯಿ ಬಿಲ್‌ ಮಾಡಿದಿರಿ ಎಂದ ಸಿಎಂ ಬೊಮ್ಮಾಯಿ, ನಮ್ಮ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡುತ್ತಿದ್ದೀರಿ. ನಿಮ್ಮದು 100% ಸರ್ಕಾರ. ಕೆಲಸವನ್ನೇ ಮಾಡದೆ ಬಿಲ್‌ ಮಾಡುವ ಸರ್ಕಾರ ನಿಮ್ಮದು ಎಂದರು.

ಸಿದ್ದರಾಮಯ್ಯ ಅವರ ಅವಧಿಯಲ್ಲಿ ಪೊಲೀಸ್‌ ನೇಮಕಾತಿ ಹಗರಣದಲ್ಲಿ ದೂರು ದಾಖಲಾಯಿತಾದರೂ ಯಾರ ಮೇಲೆಯೂ ಏನೂ ಕ್ರಮ ಆಗಲಿಲ್ಲ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಅನುಮತಿ ನೀಡಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದರು. ನಿಮ್ಮ ಅವಧಿಯಲ್ಲಿ ಪಿಯುಸಿ ಪರೀಕ್ಷೆಯಲ್ಲಿ ಮೂರು ಬಾರಿ ಪರೀಕ್ಷೆ ಮುಂದೂಡಲ್ಪಟ್ಟಿತು. ಪರೀಕ್ಷೆಯನ್ನೇ ತೆಗೆದುಕೊಳ್ಳದವರಿಗೆ ನೇಮಕಾತಿ ಮಾಡಿದ್ದೀರ ಎಂದರು.

ಹಗರಣಗಳನ್ನು ಬಯಲಿಗೆಳೆಯುತ್ತೇವೆ

ಇಂತಹ ನಾಟಕ, ದುಷ್ಟ ನಾಟಕ ಕರ್ನಾಟಕದಲ್ಲಿ ನಡೆಯುವುದಿಲ್ಲ ಎನ್ನುವುದನ್ನು ತೋರಿಸಲು ಈ ಕಾರ್ಯಕ್ರಮ ನಡೆಯುತ್ತಿದೆ ಎಂದ ಬೊಮ್ಮಾಯಿ, ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಹಗರಣಗಳನ್ನು ಬಯಲಿಗೆಳೆಯುವುದಾಗಿ ಘೋಷಿಸಿದರು.

ಕರ್ನಾಟಕದ ಜನ ನಿಮ್ಮ ಭ್ರಷ್ಟಾಚಾರವನ್ನು ನೋಡಿದ್ದಾರೆ. ದೊಡ್ಡಬಳ್ಳಾಪುರದಿಂದ ಆರಂಭವಾದ ಜನಸ್ಪಂದವನ್ನು ದಮ್‌ ಇದ್ದರೆ, ತಾಕತ್ತಿದ್ದರೆ ನಿಲ್ಲಿಸುವ ಪ್ರಯತ್ನ ಮಾಡಿ. ಕರ್ನಾಟಕದ ಹಳ್ಳಿ ಹಳ್ಳಿಗೂ ಇದು ಹಬ್ಬಲಿದೆ. ಭ್ರಷ್ಟಾಚಾರದಿಂದ ಕೂಡಿಟ್ಟ ನಿಮ್ಮ ಹಣ ಪ್ರಯೋಜನಕ್ಕೆ ಬರುವುದಿಲ್ಲ. ನಿಮ್ಮ ಬಂಡವಾಳ, ನಿಮ್ಮ ಹಣದ ಬಂಡವಾಳ ಬಯಲಾಗುತ್ತದೆ. ಎಲ್ಲ ಹಗರಣಗಳೂ ಸ್ವಲ್ಪ ದಿನದಲ್ಲೇ ಬಯಲಾಗುತ್ತವೆ. ನಿಮ್ಮ ನಿಜ ಸ್ವರೂಪವನ್ನು ಜನರ ಮುಂದೆ ಇಡುತ್ತೇವೆ. ಆಗ ಜನರು ನಿಮ್ಮನ್ನು ಛೀ ಥೂ ಎನ್ನುತ್ತಾರೆ ಎಂದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

BJP Janasankalpa Yatre | ಒಂದೇ ನಿಮಿಷದಲ್ಲಿ 300 ಕೆ.ಜಿ. ಸೇಬಿನ ಹಾರ ಮಂಗಮಾಯ !

ಚಿಕ್ಕಮಗಳೂರಿನ ಕಡೂರು, ತರೀಕೆರೆ ಹಾಗೂ ಶಿವಮೊಗ್ಗದಲ್ಲಿ ಮಂಗಳವಾರ ಜನಸಂಕಲ್ಪ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ.

VISTARANEWS.COM


on

Apple garland
Koo

ಚಿಕ್ಕಮಗಳೂರು: ಮುಂಬರುವ ಚುನಾವಣೆಯನ್ನು ಗಮನದಲ್ಲಿರಿಸಿಕೊಂಡು ರಾಜ್ಯ ಬಿಜೆಪಿ ವತಿಯಿಂದ ಜನಸಂಕಲ್ಪ ಯಾತ್ರೆಯನ್ನು ಆಯೋಜಿಸಲಾಗುತ್ತಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಂಗಳವಾರ ಯಾತ್ರೆ ನಡೆಯುತ್ತಿದ್ದು, ಬೆಳಗ್ಗೆ ಕಡೂರಿನಲ್ಲಿ ಹಾಗೂ ಮದ್ಯಾಹ್ನ ತರೀಕೆರೆಯಲ್ಲಿ ಕಾರ್ಯಕ್ರಮ ನಡೆಯಿತು.

ಸಿಎಂ ಬಸವರಾಜ ಬೊಮ್ಮಾಯಿ, ರಾಷ್ಟ್ರೀಯ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌. ಯಡಿಯೂರಪ್ಪ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಸೇರಿ ಅನೇಕರು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ನಾಯಕರನ್ನು ಗೌರವಿಸಲು ಸುಮಾರು 300 ಕೆ.ಜಿ. ತೂಕದ ಸೇಬಿನ ಹಾರವನ್ನು ತರಲಾಗಿತ್ತು. ನಾಯಕರನ್ನು ಗೌರವಿಸಲಾಯಿತು. ಕಾರ್ಯಕ್ರಮ ಮುಗಿಯುತ್ತಿದ್ದಂತೆಯೇ, ಕ್ರೇನ್‌ನಲ್ಲಿದ್ದ ಸೇಬಿನ ಹಾರದ ಕಡೆಗೆ ಜನರು ಮುಗಿಬಿದ್ದರು.

ನಾ ಮುಂದು ತಾ ಮುಂದು ಎನ್ನುತ್ತಾ ಸೇಬಿನ ಹಾರಕ್ಕೆ ಕಾರ್ಯಕರ್ತರು ಕೈಹಾಕಿದರು. ನೋಡನೋಡುತ್ತಿದ್ದಂತೆ ಕೇವಲ ಒಂದೇ ನಿಮಿಷದಲ್ಲಿ 300 ಕೆಜಿ ಸೇಬಿನ ಹಾರ ಮಂಗಮಾಯವಾಯಿತು. ಶಕ್ತಿ ಹೆಚ್ಚಾಗಿದ್ದವರು ಹೆಚ್ಚು ಹಣ್ಣು ಪಡೆಯಲು ಸಫಲರಾದರೆ ಉಳಿದವರು ದೂರದಲ್ಲಿ ನಿಂತು ನೋಡುತ್ತ, ವಿಡಿಯೋ ಮಾಡಿಕೊಳ್ಳುತ್ತ ಸಂತಸಪಟ್ಟರು.

ನವೆಂಬರ್‌ 11ರಂದು 108 ಅಡಿ ಎತ್ತರದ ನಾಡ ಪ್ರಭು ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಕಡಲೆಮಿಠಾಯಿಗಾಗಿ ಜನರು ಕಿತ್ತಾಡಿದ ದೃಶ್ಯಗಳು ಹರಿದಾಡಿದ್ದವು.

ಐದು ವರ್ಷ ಜನರು ನೆನಪಾಗಲಿಲ್ಲ: ಸಿಎಂ

ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಸಿದ್ರಾಮಣ್ಣ ಐದು ವರ್ಷ ಇದ್ದರೂ ಕುರಿ, ಕುರಿಗಾಯಿ ಯಾರೂ ನೆನಪಾಗಲಿಲ್ಲ. ಇನ್ನೂ ಎರಡು ಬಾರಿ ಇಲ್ಲಿಗೆ ಬರುತ್ತೇನೆ. ಭದ್ರಾ ಯೋಜನೆ ಚಾಲನೆಗೆ ಮತ್ತೆ ಬರುತ್ತೇನೆ. ಯಾರೇ ಅಡ್ಡಿ ಮಾಡಿದರೂ ಸರಿ, ಒಂದು ಕೈ ನೋಡೇ ಬಿಡೋಣ. ಈ ಯೋಜನೆ ನಿಲ್ಲಿಸೋದಕ್ಕೆ ಸಾಧ್ಯವೇ ಇಲ್ಲ ಎಂದರು.

ತುಂಬಾ ಜನ ಸೇರಿದ್ದೀರ. ನಿಮ್ಮನ್ನ ನೋಡಿ ನಮ್ಮ ಆತ್ಮವಿಶ್ವಾಸ ಹೆಚ್ಚಾಗಿದೆ. ಮತ್ತೊಮ್ಮೆ ಬಿಜೆಪಿ, ನಿಮ್ಮ ಸಂಕಲ್ಪ-ನಮ್ಮ ಸಂಕಲ್ಪ ಅದೇ. ವಿವೇಕಾನಂದರು ಶ್ರೇಷ್ಠ ಜ್ಞಾನಿ, ಅದಕ್ಕೇ ವಿವೇಕ ಎಂದು ಹೆಸರಿಟ್ಟಿದ್ದೇವೆ. ಆದರೆ, ಅದನ್ನು ಅವಿವೇಕ ಎಂದು ಕರೆದಿದ್ದಾರೆ ಕಾಂಗ್ರೆಸಿಗರು. ನಾಚಿಕೆ ಆಗಬೇಕು ನಿಮಗೆ, ನಿಮ್ಮ ಕಾಲದಲ್ಲಿ ಶಾಲೆ ಅಲ್ಲ, ಹೆಣ್ಣು ಮಕ್ಕಳಿಗೆ ಶೌಚಾಲಯದ ಕಟ್ಟಲು ಆಗಲಿಲ್ಲ. ನೀವು ಅಜ್ಞಾನಿಗಳು, ಅವಿವೇಕಿಗಳು ಎಂದು ಹರಿಹಾಯ್ದರು.

ಬಿ.ಎಸ್‌. ಯಡಿಯೂರಪ್ಪ ಮಾತನಾಡಿ, ಕಾಂಗ್ರೆಸ್ಸಿಗರು ಅಂಬೇಡ್ಕರ್ ವಿರೋಧಿಗಳು. ಎಸ್‌ಸಿಎಸ್‌ಟಿ ವಿರೋಧಿಗಳು ಕಾಂಗ್ರೆಸ್ಸಿಗರು. ಈಗ ಸೋಗು ಹಾಕಿಕೊಂಡು ಬರುತ್ತಾರೆ. ಕಾಂಗ್ರೆಸ್ಸಿಗರನ್ನು ಯಾರೂ ನಂಬಬೇಡಿ. ಶಾಸಕ ಸುರೇಶ್ ಬಗ್ಗೆ ಹೇಳೋದು ಬೇಡ. ಅವರನ್ನು ಮತ್ತೆ ಗೆಲ್ಲಿಸಿ, ಅದೇ ನನ್ನ ಮನವಿ, ಬೇಡಿಕೆ. ಜಗತ್ತೇ ಮೆಚ್ಚಿರುವ ಮೋದಿ ನೇತೃತ್ವದ ಪಕ್ಷ ಬಿಜೆಪಿ. ಕಾಂಗ್ರೆಸ್ ಪಕ್ಷಕ್ಕೆ ನಾಯಕರಿಲ್ಲ, ತಬ್ಬಲಿಗಳಂತೆ ಅಲೆಯುತ್ತಿದ್ದಾರೆ. ಎರಡು ರಾಜ್ಯದಲ್ಲಿ ಮಾತ್ರ ಅಧಿಕಾರದಲ್ಲಿದ್ದಾರೆ. ಮುಂದೆ ಅಲ್ಲಿಯೂ ಮನೆಗೆ ಹೋಗೋದು ನಿಶ್ಚಿತ ಎಂದರು.

ಶೋಭಾ ಕರಂದ್ಲಾಜೆ ಮಾತನಾಡಿ, ಕೊರೋನಾ ಸಂದರ್ಭದಲ್ಲಿ ಮೋದಿ ಇಲ್ಲದಿದ್ದರೆ ಈ ದೇಶ ಏನಾಗುತ್ತಿತ್ತು, ಯೋಚಿಸಿ. ಎಲ್ಲರಿಗೂ ಔಷಧಿ, ಮಾಸ್ಕ್ ಎಲ್ಲವೂ ಸಿಕ್ಕಿತು. ಹಿಂದಿನ ಕಾಂಗ್ರೆಸ್, ಇಂದಿನ ಬಿಜೆಪಿ ಸರ್ಕಾರಕ್ಕೆ ತುಲನೆ ಮಾಡಿ. 10 ವರ್ಷದ ಮನಮೋಹನ್‌ ಸಿಂಗ್‌ ಆಡಳಿತದ ಒಂದೇ ಒಂದು ಯೋಜನೆ ನೆನಪು ಮಾಡಿ ಹೇಳಿ. ಸಿದ್ದು ಜಾತಿ-ಜಾತಿ ಒಡೆಯುವ ಕೆಲಸ ಮಾಡಿದ್ದರು. ಲಿಂಗಾಯಿತರು-ವೀರಶೈವರ ಒಗ್ಗಟ್ಟನ್ನು ಒಡೆಯಲು ಮುಂದಾಗಿದ್ದರು. ಶಾದಿಭಾಗ್ಯ ಕೆಲವು ಜನರಿಗೆ ಮಾತ್ರ ಕೊಟ್ಟರು, ಮಕ್ಕಳ ಪ್ರವಾಸದಲ್ಲೂ ಮೋಸ ಮಾಡಿದರು. ಚುನಾವಣೆ ಬಂತೆಂದರೆ ಜಾತಿ-ಧರ್ಮದ ಮೇಲೆ ರಾಜಕಾರಣ ಮಾಡಬೇಕು ಎನ್ನುವುದು ಕಾಂಗ್ರೆಸ್ ಮಾನಸಿಕತೆ ಎಂದರು.

ಇದನ್ನೂ ಓದಿ | Live | BJP Janasankalpa Yatre | ಸಿದ್ದರಾಮಯ್ಯ ಮಾಡಿದ್ದು ಭಾಷಣ; ಸಾಮಾಜಿಕ ನ್ಯಾಯ ನೀಡಿದ್ದು ಬಿಜೆಪಿ: ಸಿಎಂ ಬೊಮ್ಮಾಯಿ

Continue Reading

ಕರ್ನಾಟಕ

Live | BJP Janasankalpa Yatre | ಸಿದ್ದರಾಮಯ್ಯ ಮಾಡಿದ್ದು ಭಾಷಣ; ಸಾಮಾಜಿಕ ನ್ಯಾಯ ನೀಡಿದ್ದು ಬಿಜೆಪಿ: ಸಿಎಂ ಬೊಮ್ಮಾಯಿ

ಜನಸಂಕಲ್ಪ ಯಾತ್ರೆಯ ಮೂಲಕ ರಾಜ್ಯದ ನೂರಾರು ಕ್ಷೇತ್ರಗಳನ್ನು ತಲುಪುವ ಗುರಿಯನ್ನು ಬಿಜೆಪಿ ಹೊಂದಿದೆ.

VISTARANEWS.COM


on

ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಶಾಸಕ ಬೆಳ್ಳಿ ಪ್ರಕಾಶ್‌ ಬೆಳ್ಳಿ ಗದೆಯನ್ನು ಉಡುಗೊರೆಯಾಗಿ ನೀಡಿದರು. ನಂತರ ಈ ಗದೆಯನ್ನು ಹನುಮಾನ್‌ ದೇವಾಲಯಕ್ಕೆ ನೀಡಲು ಬೊಮ್ಮಾಯಿ ತಿಳಿಸಿದರು.
Koo

ಕಡೂರು: ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ಸಾಮಾಜಿಕ ನ್ಯಾಯದ ಕುರಿತು ಭಾಷಣ ಮಾಡಿದರೇ ಹೊರತು, ನಿಜವಾಗಿ ಸಾಮಾಜಿಕ ನ್ಯಾಯ ನೀಡಿದ್ದು ಬಿಜೆಪಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಬಿಜೆಪಿ ಜನಸಂಕಲ್ಪ ಯಾತ್ರೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ಬೃಹತ್‌ ಜನಸಂಕಲ್ಪ ಯಾತ್ರೆಯಲ್ಲಿ ಬೊಮ್ಮಾಯಿ ಮಾತನಾಡಿದರು. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌. ಯಡಿಯೂರಪ್ಪ, ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಚಿಕ್ಕಮಗಳೂರು ಶಾಸಕ ಸಿ.ಟಿ. ರವಿ, ಮಾಜಿ ಶಾಸಕರಾದ ಜೀವರಾಜ್‌, ಕೇಂದ್ರ ಸಚಿವೆ ಹಾಗೂ ಸಂಸದೆ ಶೋಭಾ ಕರಂದ್ಲಾಜೆ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್‌. ರವಿಕುಮಾರ್‌, ಕಡೂರು ಶಾಸಕ ಬೆಳ್ಳಿ ಪ್ರಕಾಶ್‌ ಮುಂತಾದವರು ಉಪಸ್ಥಿತರಿದ್ದರು.

Continue Reading

ಕರ್ನಾಟಕ

ಕಾಂಗ್ರೆಸ್ ಭ್ರಷ್ಟಾಚಾರದ ಸಮಗ್ರ ದಾಖಲೆ ರಾಹುಲ್ ಗಾಂಧಿಗೆ ರವಾನೆ: ಸಿಎಂ ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಅರ್ಜಿಯನ್ನೇ ಹಾಕದವರನ್ನೂ ನೇಮಕಾತಿ ಮಾಡಲಾಗಿದೆ. ಪ್ರಾಸಿಕ್ಯೂಟರ್ ನೇಮಕಾತಿ, ಪೊಲೀಸ್ ನೇಮಕಾತಿಯಲ್ಲೂ ಹೀಗೇ ಆಗಿತ್ತು ಎಂದು ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

VISTARANEWS.COM


on

vistara-special--karnataka-govt-may-implement-ews-reservation-shortly
Koo

ಔರಾದ್‌: ಕಾಂಗ್ರೆಸ್ ಭ್ರಷ್ಟಾಚಾರ, ಅವ್ಯವಹಾರ ಸಂಬಂಧ ಎಲ್ಲ ಮಾಹಿತಿ-ದಾಖಲೆಗಳನ್ನು ರಾಹುಲ್ ಗಾಂಧಿಯವರಿಗೆ ರವಾನಿಸುತ್ತೇನೆ. ಅವರು ಏನು ಮಾಡುತ್ತಾರೆಂದು ಕಾದು ನೋಡೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸವಾಲೆಸೆದರು.

ಬೀದರ್ ಜಿಲ್ಲೆಯ ಔರಾದ್ ನಲ್ಲಿ ‘ಜನಸಂಕಲ್ಪ’ ಯಾತ್ರೆಯ ಕಾರ್ಯಕ್ರಮದಲ್ಲಿ ಬೊಮ್ಮಾಯಿ ಮಾತನಾಡಿದರು. ಸಿದ್ದರಾಮಯ್ಯ ಅವಧಿಯ ಹಗರಣಗಳ ವಿವರವನ್ನು ರಾಹುಲ್ ಗಾಂಧಿಗೆ ಕಳಿಸಿಕೊಡಲಿದ್ದೇವೆ. 2016ರ ಶಿಕ್ಷಕರ ನೇಮಕಾತಿ ಹಗರಣ ಸೇರಿ ಎಲ್ಲ ವಿವರ ಕೊಡಲಿದ್ದೇವೆ ಎಂದು ತಿಳಿಸಿದರು.

ಅರ್ಜಿಯನ್ನೇ ಹಾಕದವರನ್ನೂ ನೇಮಕಾತಿ ಮಾಡಲಾಗಿದೆ. ಪ್ರಾಸಿಕ್ಯೂಟರ್ ನೇಮಕಾತಿ, ಪೊಲೀಸ್ ನೇಮಕಾತಿಯಲ್ಲೂ ಹೀಗೇ ಆಗಿತ್ತು. ಎಲ್ಲ ಹಗರಣಗಳನ್ನೂ ಮುಚ್ಚಿ ಹಾಕಿದ್ದರು, ಇದು ಕಾಂಗ್ರೆಸ್ ಸರ್ಕಾರ. ನಮ್ಮಲ್ಲಿ ಪಿಎಸ್‍ಐ ನೇಮಕಾತಿ ಆದಾಗ ತಪ್ಪು ಮಾಡಿದ್ದವರನ್ನು ಬಂಧಿಸಿದ್ದೇವೆ. ಸಿದ್ದರಾಮಯ್ಯ ದೊಡ್ಡ ದೊಡ್ಡ ಮಾತನಾಡುತ್ತಾರೆ. ಅಬ್ಬರಿಸಿ ಬೊಬ್ಬಿರಿದರೆ ಕೇಳುವವರು ಯಾರೂ ಇಲ್ಲ. ಬರಿಯ ಮಾತನಾಡುವುದಲ್ಲ, ಇವರಿಗೆ ಕ್ರಮ ಕೈಗೊಳ್ಳುವ ಧಮ್ಮಿದೆಯೇ ಎಂದು ಕೇಳಿದರು.

ಇದನ್ನೂ ಓದಿ | ರಸ್ತೆ ಗುಂಡಿ ಕಾರಣಕ್ಕೆ ಮಹಿಳೆ ಸಾವಿನ ತನಿಖೆಗೆ ಆದೇಶ ನೀಡಿದ ಸಿಎಂ ಬೊಮ್ಮಾಯಿ: ಬಿಬಿಎಂಪಿ ಅಧಿಕಾರಿಗಳಲ್ಲಿ ನಡುಕ

ಜನರ ಮೂಲಕ ನಾವೆಲ್ಲರೂ ಆಯ್ಕೆಯಾಗಿದ್ದೇವೆ. ನಿಮ್ಮೆಲ್ಲರ ಆಶೀರ್ವಾದದಿಂದ ನಾವು ಆಡಳಿತ ನಡೆಸುತ್ತಿದ್ದೇವೆ. ಕಾಂಗ್ರೆಸ್ ಪಕ್ಷವನ್ನು ಅಧಿಕಾರದಿಂದ ಕೆಳಕ್ಕಿಳಿಸಿ ಬಿಜೆಪಿಯನ್ನು ಆಯ್ಕೆ ಮಾಡಿದ್ದೀರಿ. 3 ವರ್ಷಗಳಿಂದ ಬಿಜೆಪಿ ಸರ್ಕಾರವಿದೆ. ಜನಪರ ಆಡಳಿತ ಮತ್ತು ಹತ್ತು ಹಲವಾರು ಅಭಿವೃದ್ಧಿಗೆ ಪೂರಕ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದೇವೆ. ಕೋವಿಡ್ ನಡುವೆಯೂ ಸತತ ಅಭಿವೃದ್ಧಿಗೆ ಶ್ರಮಿಸಿದ್ದೇವೆ. ಅತಿವೃಷ್ಟಿ ಸಂಬಂಧ ಪರಿಹಾರವನ್ನು ನಾವು ಹೆಚ್ಚಿಸಿದ್ದೇವೆ. ಮನೆಗಳ ಸಂಬಂಧ ಪರಿಹಾರ ಮೊತ್ತವನ್ನೂ ಹೆಚ್ಚಿಸಿದ್ದು, ಕಾಂಗ್ರೆಸ್ ಸರ್ಕಾರದಲ್ಲಿ ಒಂದರಿಂದ ಒಂದೂವರೆ ವರ್ಷದಲ್ಲಿ ಪರಿಹಾರ ಕೊಡುತ್ತಿತ್ತು. ಈಗ ಕೇವಲ ಒಂದು ತಿಂಗಳಿನಲ್ಲಿ ಪರಿಹಾರ ನೀಡುತ್ತಿದ್ದೇವೆ ಎಂದರು.

ತಾಂಡಾಗಳ ಅಭಿವೃದ್ಧಿ, ಬಡವರಿಗೆ ನೆರವಾಗಿದ್ದೇವೆ. 23 ಸಾವಿರ ತಾಂಡಾಗಳನ್ನು ಗ್ರಾಮಗಳನ್ನಾಗಿ ಆದೇಶ ಮಾಡಲಾಗಿದೆ. ಮನೆಗಳಿಗೆ ಹಕ್ಕಪತ್ರ ನೀಡಲಾಗುತ್ತಿದೆ ಎಂದು ವಿವರಿಸಿದರು. ಇದು ಹಲವು ದಶಕಗಳ ಬೇಡಿಕೆ ಎಂದರು. ಕಾಂಗ್ರೆಸ್ ಪಕ್ಷವು, ದೀನದಲಿತರ ಹೆಸರಿನಲ್ಲಿ ಅಧಿಕಾರ ಮಾಡಿದರೂ ಈ ಸಮುದಾಯಗಳ ಅಭಿವೃದ್ಧಿ ಆಗಲಿಲ್ಲ ಎಂದು ಟೀಕಿಸಿದರು.

ದೀನ ದಲಿತರಿಗೆ ಕಾಂಗ್ರೆಸ್‌ ಕೊಡುಗೆ ಶೂನ್ಯ

ಮೀಸಲಾತಿ ಹೆಚ್ಚಳ ಕಾಂಗ್ರೆಸ್ ಪಕ್ಷದ ಕೊಡುಗೆ ಎನ್ನಲು ಆತ್ಮಸಾಕ್ಷಿ ಬೇಕಲ್ಲವೇ ಎಂದ ಬೊಮ್ಮಾಯಿ, ನಿರ್ಣಯ ತೆಗೆದುಕೊಂಡವರು ಯಾರು ಎಂದು ಪ್ರಶ್ನಿಸಿದರು. ದೀನದಲಿತರಿಗೆ ಕಾಂಗ್ರೆಸ್ ಕೊಡುಗೆ ಶೂನ್ಯ. ಉಚಿತವಾಗಿ ಕೋವಿಡ್ ಲಸಿಕೆ ನೀಡಿದ್ದು, ಉಚಿತ ಪಡಿತರ ವಿತರಣೆ ಮಾಡಿದ್ದಲ್ಲದೆ ಕೋವಿಡ್ ನಡುವೆಯೂ ದೇಶ ಸರ್ವತೋಮುಖ ಅಭಿವೃದ್ಧಿ ಸಾಧಿಸಿದೆ. ರೈತ ಉಳಿದರೆ ದೇಶ ಉಳಿದೀತು ಎಂಬಂತೆ ನಮ್ಮದು ನುಡಿದಂತೆ ನಡೆದ ಸರ್ಕಾರ ಎಂದು ಹೇಳಿದರು.

ಕಲ್ಯಾಣ ಕರ್ನಾಟಕಕ್ಕೆ 3 ಸಾವಿರ ಕೋಟಿ ಅನುದಾನ ನೀಡಿದ್ದು, ಕಾಮಗಾರಿ ಆರಂಭವಾಗುತ್ತಿದೆ. ಮುಂದಿನ ಬಜೆಟ್‍ನಲ್ಲಿ 5 ಸಾವಿರ ಕೋಟಿ ನೀಡಲಿದ್ದೇವೆ. ಅದಕ್ಕಾಗಿ ಕ್ರಿಯಾ ಯೋಜನೆಯನ್ನೂ ಮಾಡಿದ್ದೇವೆ. 14 ಸಾವಿರ ನೇಮಕಾತಿಗೆ ಅನುಮತಿ ಕೊಟ್ಟಿದ್ದೇವೆ ಎಂದು ವಿವರಿಸಿದರು. ನೀರಾವರಿ ಯೋಜನೆಗೆ ವಿಶೇಷ ಅನುದಾನ ಕೊಟ್ಟಿದ್ದೇವೆ. ಪ್ರಭು ಚವ್ಹಾಣ್‌, ಭಗವಂತ ಖೂಬಾ ಅವರು ಬದ್ಧತೆಯಿಂದ ಕೆಲಸ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕೇಂದ್ರ ಸಚಿವ ಭಗವಂತ್ ಖೂಬಾ ಮಾತನಾಡಿ, ಒಂದು ವರ್ಷ ಮೂರು ತಿಂಗಳ ಅವಧಿಯಲ್ಲಿ ಬಸವರಾಜ ಬೊಮ್ಮಾಯಿ ಅವರು ಅನೇಕ ಕಾರ್ಯಕ್ರಮಗಳನ್ನು ಜಾರಿ ಮಾಡಿದ್ದಾರೆ. ಈ ಭಾಗದ ನನೆಗುದಿಗೆ ಬಿದ್ದಿದ್ದ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತಂದಿದ್ದಾರೆ. ಇದಕ್ಕಾಗಿ ಬೊಮ್ಮಾಯಿ ಅವರಿಗೆ ಧನ್ಯವಾದ ಎಂದರು.

ಸಚಿವ ಗೋವಿಂದ ಕಾರಜೋಳ ಅವರು ಮಾತನಾಡಿ, ಈ ಭಾಗದ ನೀರಾವರಿಗೆ ಬಿಜೆಪಿ ಸರ್ಕಾರ ಆದ್ಯತೆ ಕೊಟ್ಟಿದೆ. ನರೇಂದ್ರ ಮೋದಿ, ಬೊಮ್ಮಾಯಿಯವರ ಸರ್ಕಾರ ಜನೋಪಯೋಗಿ ಕಾರ್ಯಗಳನ್ನು ಮಾಡಿದೆ. ಕಾಂಗ್ರೆಸ್ ಪಕ್ಷದ ಜೋಡೋ ಯಾತ್ರೆ ಕೇವಲ ನಾಟಕವಷ್ಟೇ. ಇದು ಕೇವಲ ಹಾಸ್ಯಾಸ್ಪದ. ಜನರು ಕಾಂಗ್ರೆಸನ್ನು ಸಂಪೂರ್ಣವಾಗಿ ತಿರಸ್ಕರಿಸಲು ಮುಂದಾಗಿದ್ದಾರೆ ಎಂದರು.

ಸಚಿವರಾದ ಪ್ರಭು ಚವ್ಹಾಣ್‌, ಬೈರತಿ ಬಸವರಾಜ್, ಶ್ರೀರಾಮುಲು, ಶಂಕರ ಪಾಟೀಲ ಮುನೇನಕೊಪ್ಪ, ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಮತ್ತಿತರರಿದ್ದರು.

ಇದನ್ನೂ ಓದಿ | ಜನಸಂಕಲ್ಪ ಯಾತ್ರೆ | ಕಾಂಗ್ರೆಸ್‌ನದ್ದು 85% ಸರಕಾರ: ರಾಜೀವ್ ಗಾಂಧಿಯನ್ನು ಉದಾಹರಿಸಿದ ಬೊಮ್ಮಾಯಿ

Continue Reading

ಕರ್ನಾಟಕ ಎಲೆಕ್ಷನ್

ಅಲ್ಪಸಂಖ್ಯಾತರ ಪರ ಕಾಂಗ್ರೆಸ್‌; ರೈತರು, ಬಡವರ ಪರ ಬಿಜೆಪಿ: ರಾಜ್ಯ ಬಿಜೆಪಿ ಪ್ರಭಾರಿ ಅರುಣ್ ಸಿಂಗ್

ಬಡವರು, ರೈತರು, ಮಹಿಳೆಯರು ಬಿಜೆಪಿ ಮತ್ತು ಮೋದಿ ಅವರ ಪರವಾಗಿದ್ದಾರೆ. ಜನಧನ್, ಕಿಸಾನ್ ಸಮ್ಮಾನ್ ಪರಿಣಾಮವಾಗಿ ರೈತರು ಮತ್ತು ಮಹಿಳೆಯರು ಬಿಜೆಪಿ ಪರವಿದ್ದಾರೆ ಎಂದು ಅರುಣ್‌ ಸಿಂಗ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

VISTARANEWS.COM


on

arun singh bjp
Koo

ಹಾವೇರಿ: ದೇಶದೆಲ್ಲೆಡೆ ಪ್ರಧಾನಿ ನರೇಂದ್ರ ಮೋದಿ ಅವರ ಪರವಾದ ಅಲೆ ಇದೆ. ಪಂಚ ರಾಜ್ಯ ಚುನಾವಣೆಯಲ್ಲಿ ಇದು ಸಾಬೀತಾಗಿದೆ. ಅದೇ ರೀತಿ ರಾಜ್ಯದಲ್ಲೂ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಏರಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಬಿಜೆಪಿ ಪ್ರಭಾರಿ ಅರುಣ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಹಾವೇರಿ ಜಿಲ್ಲೆಯ ಮಾಸೂರಿನಲ್ಲಿ ಕಾರ್ಯಕರ್ತರ ಸಂಕಲ್ಪ ಸಭೆಯಲ್ಲಿ ಅರುಣ್‌ ಸಿಂಗ್‌ ಮಾತನಾಡಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನಪರ ಕಾರ್ಯಗಳಿಂದಾಗಿ ಬಿಜೆಪಿ ಮತ್ತೆ 150ಕ್ಕೂ ಹೆಚ್ಚು ಸ್ಥಾನ ಗಳಿಸಿ ಅಧಿಕಾರ ಪಡೆಯಲಿದೆ. ಪಂಚ ರಾಜ್ಯ ಚುನಾವಣೆಯಲ್ಲಿ ಗೋವಾ, ಮಣಿಪುರ, ಉತ್ತರಾಖಂಡ, ಉತ್ತರ ಪ್ರದೇಶಗಳಲ್ಲಿ ಬಿಜೆಪಿ ಅಧಿಕಾರ ಗಳಿಸಿದೆ. ಕರ್ನಾಟಕದಲ್ಲೂ ಅದೇ ಮಾದರಿಯಲ್ಲಿ ಜನರು ಬಿಜೆಪಿಗೆ ಮತ ಕೊಟ್ಟು ಗೆಲ್ಲಿಸಲಿದ್ದಾರೆ ಎಂದು ಹೇಳಿದರು.

ಬಡವರು, ರೈತರು, ಮಹಿಳೆಯರು ಬಿಜೆಪಿ ಮತ್ತು ಮೋದಿ ಅವರ ಪರವಾಗಿದ್ದಾರೆ. ಜನಧನ್, ಕಿಸಾನ್ ಸಮ್ಮಾನ್ ಪರಿಣಾಮವಾಗಿ ರೈತರು ಮತ್ತು ಮಹಿಳೆಯರು ಬಿಜೆಪಿ ಪರವಿದ್ದಾರೆ. ಮನೆಮನೆಗೆ ನಲ್ಲಿ ನೀರು ಅಭಿಯಾನ ಯಶಸ್ವಿಯಾಗಿದೆ. ಉಜ್ವಲ ಯೋಜನೆ, ಶೌಚಾಲಯ ನಿರ್ಮಾಣದಂಥ ಪ್ರಮುಖ ಯೋಜನೆಗಳು ಜಾರಿಯಾಗಿವೆ ಎಂದರು.
ಕಾಂಗ್ರೆಸ್ ಅಲ್ಪಸಂಖ್ಯಾತರ ಪರವಾಗಿತ್ತು. ಆದರೆ, ಮೋದಿ ಅವರ ಸರ್ಕಾರವು ರೈತರು ಮತ್ತು ಬಡವರ ಪರವಾಗಿದೆ. ಈ ಜಿಲ್ಲೆ ಮಾತ್ರವಲ್ಲದೆ ಕರ್ನಾಟಕದ ಸರ್ವತೋಮುಖ ಅಭಿವೃದ್ಧಿ ಕಾರ್ಯ ನಿರಂತರವಾಗಿ ನಡೆದಿದೆ ಎಂದು ಮೆಚ್ಚುಗೆ ಸೂಚಿಸಿದರು.

ಕಾಂಗ್ರೆಸ್ 2 ರಾಜ್ಯಗಳಲ್ಲಿ ಮಾತ್ರ ಅಧಿಕಾರ ಉಳಿಸಿಕೊಂಡಿದೆ. ಮುಂದೆ ಅಲ್ಲಿಯೂ ಅಧಿಕಾರ ಕಳೆಕೊಳ್ಳಲಿದೆ. ಭಾರತ್ ಜೋಡೋ ಯಾತ್ರೆ ನಡುವೆ ಅನೇಕ ಕಾಂಗ್ರೆಸಿಗರು ಆ ಪಕ್ಷ ತೊರೆಯುತ್ತಿದ್ದಾರೆ. ರಾಜ್ಯ ಮತ್ತು ಕೇಂದ್ರ ಬಿಜೆಪಿ ಸರ್ಕಾರಗಳ ಜನಪರ ಕಾರ್ಯಗಳ ಕುರಿತು ಮಾಹಿತಿ ನೀಡಿ, ಬಿಜೆಪಿ ಪರವಾಗಿ ಜನರು ನಿಲ್ಲಲಿದ್ದಾರೆ ಎಂದು ವಿಶ್ವಾಸದಿಂದ ನುಡಿದರು. ಅತಿ ಹೆಚ್ಚು ಮತದೊಂದಿಗೆ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿ ಎಂದು ಜನರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಸಚಿವರಾದ ಬಿ.ಸಿ ಪಾಟೀಲ್, ಶಿವರಾಮ್ ಹೆಬ್ಬಾರ್, ವಿಭಾಗ ಪ್ರಭಾರಿ ಲಿಂಗರಾಜ ಪಾಟೀಲ್, ಜಿಲ್ಲಾಧ್ಯಕ್ಷ ಸಿದ್ದರಾಜು ಕಲಕೋಟಿ, ಮಾಜಿ ಸಚಿವರು, ಮಾಜಿ ಶಾಸಕರು, ವಿಧಾನ ಪರಿಷತ್ ಸದಸ್ಯರು, ಜಿಲ್ಲಾ ಪ್ರಭಾರಿಗಳು, ಜಿಲ್ಲಾ ಪದಾಧಿಕಾರಿಗಳು, ಮಂಡಲ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು. ಅರುಣ್ ಸಿಂಗ್ ಅವರೊಂದಿಗೆ ಕವಿ ಸರ್ವಜ್ಞ ಮೂರ್ತಿಗೆ ಮಾಲಾರ್ಪಣೆ ಮಾಡಲಾಯಿತು.

ಇದನ್ನೂ ಓದಿ | BJP ಜನಸ್ಪಂದನ | ಅದ್ಧೂರಿ ಸಮಾವೇಶಕ್ಕೆ 6 ರಾಜ್ಯ ಸಚಿವರೇ ಗೈರು, ‌ ನಡ್ಡಾ, ಪ್ರಹ್ಲಾದ್‌ ಜೋಶಿ, ಅರುಣ್‌ ಸಿಂಗ್‌ ಕೂಡಾ ಇಲ್ಲ

Continue Reading
Advertisement
Narendra Modi
ದೇಶ11 mins ago

Narendra Modi: ಪ್ರಧಾನಿ ಮೋದಿಗೆ ಜಿ 7 ಶೃಂಗಸಭೆಯ ಆಹ್ವಾನ ನೀಡಿದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ

khalistan movement
ಪ್ರಮುಖ ಸುದ್ದಿ18 mins ago

khalistan Movement : ಲಂಡನ್​ ಭಾರತ ಹೈಕಮಿಷನ್​ ಮೇಲೆ ದಾಳಿ ಮಾಡಿದ್ದ ಖಲಿಸ್ತಾನಿ ಉಗ್ರ ಎನ್​ಐಎ ವಶಕ್ಕೆ

Minister Dinesh Gundurao latest statement
ಕರ್ನಾಟಕ51 mins ago

Lok Sabha Election 2024: ಮುಸ್ಲಿಂ ಮೀಸಲಾತಿ ಬಗ್ಗೆ ಮೋದಿ ಹೇಳಿದ್ದು ಸುಳ್ಳು: ದಿನೇಶ್ ಗುಂಡೂರಾವ್

Namma metro
ಕ್ರೀಡೆ1 hour ago

TCS World 10K Run : ಈ ದಿನದಂದು ಮೆಟ್ರೊ ರೈಲು ಸೇವೆ ಬೆಳಗ್ಗೆ 4.10ಕ್ಕೆ ಆರಂಭ

Job Alert
ಉದ್ಯೋಗ1 hour ago

Job Alert: ಹಟ್ಟಿ ಚಿನ್ನದ ಗಣಿ ಕಂಪೆನಿಯಲ್ಲಿದೆ ಸುವರ್ಣಾವಕಾಶ; 168 ಹುದ್ದೆಗಳಿಗೆ ಐಟಿಐ, ಡಿಪ್ಲೋಮಾ ಪಾಸಾದವರು ಅಪ್ಲೈ ಮಾಡಿ

Viral Video
ವೈರಲ್ ನ್ಯೂಸ್2 hours ago

Viral Video: ಮಕ್ಕಳ ಮುಗ್ಧ ನಗುವನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿಯಲು ಶಿಕ್ಷಕಿ ಏನು ಮಾಡಿದ್ದಾರೆ ನೋಡಿ…

world record
ಕ್ರೀಡೆ2 hours ago

World Record : ಒಂದೇ ಒಂದು ರನ್​ ನೀಡದೇ 7 ವಿಕೆಟ್​ ಉರುಳಿಸಿದ ಬೌಲರ್​​; ಕ್ರಿಕೆಟ್​ ಕ್ಷೇತ್ರದಲ್ಲಿ ವಿಶ್ವ ದಾಖಲೆ

Viral Video
ವೈರಲ್ ನ್ಯೂಸ್2 hours ago

Viral Video: ಸ್ಕೂಟರ್‌ನಲ್ಲೇ ಆನ್‌ಲೈನ್‌ ಮೀಟಿಂಗ್‌ ನಡೆಸಿದ ಮಹಿಳೆ; ಇದು ವರ್ಕ್‌ ಫ್ರಮ್‌ ಟ್ರಾಫಿಕ್‌ ಬ್ರೋ!

driver lost control and the jeep hit a tree driver died on the spot
ಕ್ರೈಂ2 hours ago

Road Accident: ಚಾಲಕನ ನಿಯಂತ್ರಣ ತಪ್ಪಿ ಜೀಪ್ ಮರಕ್ಕೆ ಡಿಕ್ಕಿ; ಚಾಲಕ ಸ್ಥಳದಲ್ಲೇ ಸಾವು

2nd PUC Exam 2 KSRTC BMTC bus travel free for students in exam timing
Lok Sabha Election 20243 hours ago

2nd PUC Exam: ದ್ವಿತೀಯ ಪಿಯುಸಿ ಪರೀಕ್ಷೆ-2 ಬರೆಯುತ್ತೀರಾ? ಹಾಗಿದ್ರೆ ನಿಮ್ಗೆ ಬಸ್‌ ಪ್ರಯಾಣ ಫ್ರೀ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder Case in hubblli
ಹುಬ್ಬಳ್ಳಿ7 hours ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ7 hours ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ10 hours ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 202412 hours ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ2 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು3 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ3 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು3 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET 2024 Exam
ಬೆಂಗಳೂರು3 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

ಟ್ರೆಂಡಿಂಗ್‌