Cow Smugglers: ಗೋವುಗಳ ರಕ್ಷಣೆಗೆ ಚೇಸಿಂಗ್‌ ಮಾಡಿದ ಹಿಂದು ಕಾರ್ಯಕರ್ತರು - Vistara News

ಬೆಂಗಳೂರು ಗ್ರಾಮಾಂತರ

Cow Smugglers: ಗೋವುಗಳ ರಕ್ಷಣೆಗೆ ಚೇಸಿಂಗ್‌ ಮಾಡಿದ ಹಿಂದು ಕಾರ್ಯಕರ್ತರು

Cow Smugglers: ಅಕ್ರಮವಾಗಿ ಕಸಾಯಿಖಾನೆಗೆ ಗೋವುಗಳ ಸಾಗಣೆ ಮಾಡುತ್ತಿದ್ದ ಕ್ಯಾಂಟರ್‌ ವಾಹನವನ್ನು ಅಡ್ಡಗಟ್ಟಿ ಗೋ ರಕ್ಷಣೆ ಮಾಡಲಾಗಿದೆ. ಚಾಲಕನನ್ನು ಪೊಲೀಸರಿಗೆ ಒಪ್ಪಿಸಲಾಗಿದೆ.

VISTARANEWS.COM


on

Protection of cows being illegally transported to slaughter houses
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಆನೇಕಲ್: ಕ್ಯಾಂಟರ್‌ ವಾಹನದಲ್ಲಿ ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಗೋವುಗಳ ರಕ್ಷಣೆ (Cow Smugglers) ಮಾಡಲಾಗಿದೆ. ರಾಷ್ಟ ರಕ್ಷಣಾ ಪಡೆಯ ಪುನೀತ್ ಕೆರೆಹಳ್ಳಿ (Puneeth Kerehalli) ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಗೋವುಗಳನ್ನು ರಕ್ಷಿಸಲಾಗಿದೆ.

ಅಮೃತಮಹಲ್ ಜಾತಿಯ ಗೋವುಗಳನ್ನು ಹುಬ್ಬಳ್ಳಿಯಿಂದ ಕೇರಳ ಕಡೆಗೆ ಕ್ಯಾಂಟರ್ ವಾಹನದ ಮೂಲಕ ಸಾಗಿಸಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಪುನೀತ್‌ ಕೆರೆಹಳ್ಳಿ ತಂಡ ಹಿಂಬಾಲಿಸಿದೆ. ಆನೇಕಲ್‌ನ ಹೆಬ್ಬಗೋಡಿ ಬಳಿ ಕ್ಯಾಂಟರ್‌ಗೆ ಅಡ್ಡಗಟ್ಟಿ ಪರಿಶೀಲನೆ ನಡೆಸಿದಾಗ ಗೋವುಗಳು ಪತ್ತೆಯಾಗಿವೆ.

Protection of cows being illegally transported to slaughter houses

ಕೂಡಲೇ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದಾಗ ಅಕ್ರಮವಾಗಿ ಗೋವುಗಳ ಸಾಗಾಟ ಬಯಲಿಗೆ ಬಂದಿದೆ. ಚಾಲಕನನ್ನು ವಶಕ್ಕೆ ‌ಪಡೆದು ವಿಚಾರಣೆ ನಡೆಸಲಾಗುತ್ತಿದೆ. ರಕ್ಷಣೆ ಮಾಡಿದ ಸುಮಾರು 20ಕ್ಕೂ ಅಧಿಕ ಗೋವುಗಳನ್ನು ಹೆಬ್ಬಗೋಡಿ ಪೊಲೀಸರು ಗೋ ಶಾಲೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣವನ್ನು ದಾಖಲಿಸಿಕೊಂಡು ಚಾಲಕನನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

Puneeth kerehalli and anekal police

ಇನ್ನು ಈ ಸಂಬಂಧ ಪ್ರತಿಕ್ರಿಯಿಸಿರುವ ಪುನೀತ್‌ ಕೆರೆಹಳ್ಳಿ, ಪದೇಪದೆ ಕಾಂಗ್ರೆಸ್ ಸರ್ಕಾರದಲ್ಲಿ ಅಕ್ರಮವಾಗಿ ಗೋವುಗಳ ಸಾಗಾಟ ಮಾಡಲಾಗುತ್ತಿದೆ. ಕ್ಯಾಂಟರ್ ವಾಹನಗಳಲ್ಲಿ ಅತ್ಯಂತ ಕೆಟ್ಟ ರೀತಿಯಲ್ಲಿ ಗೋವುಗಳ ಸಾಗಾಟ ಮಾಡಲಾಗುತ್ತಿದೆ. ಗೋವುಗಳನ್ನು ಕೊಲ್ಲುವುದನ್ನು ಹಿಂದೂ ಕಾರ್ಯಕರ್ತರು ಎಂದೂ ಸಹಿಸುವುದಿಲ್ಲ. ಯಾವುದೇ ಸರ್ಕಾರವಿದ್ದರೂ ಗೋ ರಕ್ಷಣೆ ಮಾಡುತ್ತೆವೆ. ಕೇಂದ್ರ ಸರ್ಕಾರದವರು ಗೋವುಗಳನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಬೇಕೆಂದು ಆಗ್ರಹಿಸಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಹುಷಾರ್‌.. ನಾಲ್ಕೈದು ದಿನ ಮತ್ತಷ್ಟು ಏರಲಿದೆ ಉರಿ ಬಿಸಿಲು; ಎಚ್ಚರ ತಪ್ಪಿದ್ರೆ ಅಪಾಯ ಗ್ಯಾರಂಟಿ

Karnataka Weather Forecast : ರಾಜ್ಯಾದ್ಯಂತ ತಾಪಮಾನ ಏರಿಕೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದ್ದು, ಜನ-ಸಾಮಾನ್ಯರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ. ಸಾಮಾನ್ಯಕ್ಕಿಂತ 2-3 ಡಿ.ಸೆ ಹೆಚ್ಚಾಗುವ ಮುನ್ಸೂಚನೆಯನ್ನು ನೀಡಲಾಗಿದೆ.

VISTARANEWS.COM


on

By

karnataka weather forecast
Koo

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ರಾಜ್ಯಾದ್ಯಂತ ಒಣ ಹವೆ (Dry Weather) ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ಏಪ್ರಿಲ್‌ 30ರವರೆಗೆ ಹೀಟ್‌ ವೇವ್‌ (heat Wave) ಪ್ರಭಾವ ಇರಲಿದೆ.

ಪ್ರಮುಖವಾಗಿ ಉತ್ತರ ಒಳನಾಡಿ ಬೀದರ್, ಕಲಬುರಗಿ, ವಿಯಜಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಬಳ್ಳಾರಿ, ವಿಜಯನಗರ ಹಾಗೂ ದಕ್ಷಿಣ ಒಳನಾಡಿನ ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ತಾಪಮಾನ ಏರಿಕೆ ಜತೆಗೆ ಹೀಟ್‌ ವೇವ್‌ ಹೆಚ್ಚಾಗುವ ಸಾಧ್ಯತೆ ಇದೆ.

ಬಿಸಿ ಗಾಳಿ ಎಚ್ಚರಿಕೆ

ಏಪ್ರಿಲ್ 27 ರಿಂದ ಮೇ 1ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್‌ ಏರಿಕೆಯಾಗುವ ಸಾಧ್ಯತೆ ಇದೆ.

ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 37 ಮತ್ತು 23 ಡಿ.ಸೆ ಇರುವ ಸಾಧ್ಯತೆ ಇದೆ.

ಇದನ್ನೂ ಓದಿ: Murder Case : ದೊಡ್ಡವರ ಹಣಕಾಸು ವಿಷ್ಯಕ್ಕೆ 3 ವರ್ಷದ ಮಗು ಬಲಿ; ಎದೆ ಮೇಲೆ ಕಾಲಿಟ್ಟು ಕೊಂದ ಪಾಪಿ

ಸೂರ್ಯನ ತಾಪವು ಜನರನ್ನು ಹಿಂಡಿ ಹಿಪ್ಪೆ ಮಾಡುತ್ತಿದೆ. ಬೇವರಿಸುವ ಸೂರ್ಯನ ಶಾಖವು ಜನರು ಆರೋಗ್ಯದ ಮೇಲೂ ಪರಿಣಾಮ (Health Tips) ಬೀರುತ್ತಿದೆ. ಸಾರ್ವಜನಿಕರು ಏನು ಮಾಡಬೇಕು ಏನು ಮಾಡಬಾರದು ಎಂಬ ಮಾಹಿತಿ ಇಲ್ಲದೆ.

ತಾಪಮಾನದಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳೇನು?

ಸಾಮಾನ್ಯವಾಗಿ ದೇಹದ ಉಷ್ಣತೆಯು 36.4 ಡಿ.ಸೆ ನಿಂದ 37.2 ಡಿ.ಸೆ ಇರಲಿದೆ. ಒಳಾಂಗಣ ಹಾಗೂ ಹೊರಾಂಗಣ ಪ್ರದೇಶಗಳಲ್ಲಿ ಹೆಚ್ಚಿನ ಉಷ್ಣತೆಯಿಂದಾಗಿ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ. ಸಾಧಾರಣದಿಂದ ತೀವ್ರ ಜ್ವರ, ಗಂಧೆಗಳು (prickly heat), ಊತಗಳು ( ಕೈ-ಕಾಲುಗಳು ಹಾಗೂ ಮೊಣಕಾಲು), ಉಷ್ಣತೆಯಿಂದ ಸೆಳೆತ (ಸ್ನಾಯುಗಳ ಸೆಳೆತ), ಪ್ರಜ್ಞೆ ತಪ್ಪುವುದು, ಸುಸ್ತಾಗುವುದು ಹಾಗೂ ಪಾಶ್ವವಾಯು ಉಂಟಾಗಲಿದೆ. ಕೆಲವೊಮ್ಮೆ ಅತಿಯಾದ ಉಷ್ಣತೆಯಿಂದಾಗಿ ಹೃದ್ರೋಗ, ಉಸಿರಾಟದ ಸಮಸ್ಯೆಗಳು ಹಾಗೂ ಕಿಡ್ನಿ ಸಮಸ್ಯೆಗಳು ಹೆಚ್ಚಾಗುತ್ತದೆ. ಅತಿಯಾದ ಬಾಯಾರಿಕೆ, ವಾಕರಿಕೆ ಅಥವಾ ವಾಂತಿಯಾಗುವುದು, ತಲೆನೋವು ಹಾಗೂ ಮೂತ್ರ ವಿಸರ್ಜನೆ ಪ್ರಮಾಣದಲ್ಲಿ ಕಡಿಮೆಯಾಗುವುದು ಹಾಗೂ ಹಳದಿ ಬಣ್ಣದ ಮೂತ್ರ, ಏರು ಗತಿಯ ಉಸಿರಾಟ ಹಾಗೂ ಹೃದಯದ ಬಡಿತ ಹೆಚ್ಚಾಗಲಿದೆ.

ಏನು ಮಾಡಬೇಕು?
-ತಕ್ಷಣವೇ ತಂಪಾದ ಸ್ಥಳಕ್ಕೆ ತೆರಳಿ ಮತ್ತು ದ್ರವಾಹಾರವನ್ನು ಸೇವಿಸಿ. ನೀರಿನ ಸೇವನೆ ಅತ್ಯುತ್ತಮ.
-ಹೆಚ್ಚು ನೀರು ಕುಡಿಯುವುದು. ಬಾಯಾರಿಕೆ ಇಲ್ಲದಿದ್ದರೂ ಆಗಾಗ ನೀರು ಸೇವಿಸಿ. ಜತೆಗೆ ನಿಂಬೆ ಹಣ್ಣಿನ ಶರಬತ್ತು, ಮಜ್ಜಿಗೆ, ಲಸ್ಸಿ ಹಾಗು ಹಣ್ಣಿನ ಜ್ಯೂಸ್‌ಗಳನ್ನು ಒಂದು ಚಿಟಿಕೆ ಉಪ್ಪಿನೊಂದಿಗೆ ಸೇವಿಸುವುದು ಉತ್ತಮ.
-ಈ ಋತುಮಾನದಲ್ಲಿ ಲಭ್ಯವಿರುವ ಹಾಗೂ ಹೆಚ್ಚು ನೀರಿನ ಅಂಶವನ್ನು ಹೊಂದಿರುವ ಹಣ್ಣು ಹಾಗೂ ತರಕಾರಿಗಳಾದ ಕಲ್ಲಂಗಡಿ, ಕರಬೂಜ, ಕಿತ್ತಳೆ, ದ್ರಾಕ್ಷಿ, ಅನಾನಸ್, ಸೌತೆಕಾಯಿ, ಲೆಟೂಸ್, ಎಳನೀರುಗಳನ್ನು ಹೆಚ್ಚಾಗಿ ಸೇವಿಸಬೇಕು.
-ತಿಳಿ ಬಣ್ಣದ, ಅಳಕವಾದ (loose fitting) ಹತ್ತಿಯ ಬಟ್ಟೆಯನ್ನು ಧರಿಸುವುದು ಉತ್ತಮ.
-ಬಿಸಿಲಿನಲ್ಲಿ ಹೊರ ಹೋಗುವ ಸಂದರ್ಭಗಳಲ್ಲಿ ಛತ್ರಿ, ಟೋಪಿ/ಹ್ಯಾಟ್, ಟವೆಲ್ ಅಥವಾ ಇನ್ನಾವುದೇ ಸಾಂಪ್ರದಾಯಿಕ ಪದ್ಧತಿಯನ್ನು ಅನುಸರಿಸಿ ಬಿಸಿಲಿನಿಂದ ರಕ್ಷಣೆ ಪಡೆಯಿರಿ.
-ಬಿಸಿಲಿನಲ್ಲಿ ನಡೆಯುವ ಸಂದರ್ಭದಲ್ಲಿ ಪಾದರಕ್ಷೆ / ಚಪ್ಪಲಿ ಅಥವಾ ಶೂಸ್‌ಗಳನ್ನು ಧರಿಸಬೇಕು.
-ಸಾಧ್ಯವಾದಷ್ಟು ಒಳಾಂಗಣದಲ್ಲಿದ್ದು, ಉತ್ತಮ ಗಾಳಿ ಬೀಸುವ ಹಾಗೂ ತಣ್ಣಗಿರುವ ಪ್ರದೇಶದಲ್ಲಿರಿ. ನೇರವಾಗಿ ಸೂರ್ಯನ ಬೆಳಕು ಹಾಗೂ ಬಿಸಿ ಗಾಳಿಯು ಮನೆಯ ಒಳಗೆ ಬರದಂತೆ ತಡೆಯಲು ಹಗಲು ಹೊತ್ತಿನಲ್ಲಿ ಕಿಟಕಿಗಳನ್ನು ಪರದೆಗಳಿಂದ ಮುಚ್ಚಿ.

ಈ ಕೆಲಸವನ್ನು ಮಾಡಬಾರದು

-ಬಿಸಿಲಿನಲ್ಲಿ ಅಂದರೆ ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ಹೊರಹೋಗುವುದನ್ನು ತಪ್ಪಿಸಿ.
-ಮಧ್ಯಾಹ್ನದ ಸಮಯದಲ್ಲಿ ಶ್ರಮದಾಯಕ ಹೊರಾಂಗಣ ಚಟುವಟಿಕೆಗಳನ್ನು ಕೈಗೊಳ್ಳಬಾರದು. ಚಪ್ಪಲಿ ಧರಿಸದೆ ಹೊರಹೋಗುವ ಅಭ್ಯಾಸವನ್ನು ತಪ್ಪಿಸಿ.
-ಮಧ್ಯಾಹ್ನ ಅಡುಗೆ ಮಾಡುವುದು ತಪ್ಪಿಸಿ. ಅಡುಗೆ ಸಿದ್ಧಪಡಿಸುವ ಪ್ರದೇಶದಲ್ಲಿ ಕಿಟಕಿ ಹಾಗೂ ಬಾಗಿಲುಗಳನ್ನು ತೆರೆದಿಡಿ.
-ಮಧ್ಯಪಾನ, ಟೀ, ಕಾಫಿ ಮತ್ತು ಕಾರ್ಬೋನೇಟೆಡ್ ಪಾನೀಯಗಳು ಅಥವಾ ಹೆಚ್ಚು ಸಕ್ಕರೆ ಅಂಶವನ್ನು ಹೊಂದಿದ ಪಾನೀಯಗಳಿಂದ ದೂರವಿರಿ. ಇಂತಹ ಪಾನೀಯಗಳು ದೇಹವನ್ನು ನಿರ್ಜಲೀಕರಣಗೊಳಿಸುತ್ತವೆ ಅಥವಾ ಹೊಟ್ಟೆ ನೋವನ್ನು ಉಂಟುಮಾಡುತ್ತವೆ.
-ಹೆಚ್ಚು ಪ್ರೊಟೀನ್ ಭರಿತವಾದ ಹಾಗೂ ಹಳೆಯದಾದ ಆಹಾರ ಪದಾರ್ಥಗಳನ್ನು ಸೇವಿಸಬೇಡಿ.
-ಮಕ್ಕಳು ಅಥವಾ ಸಾಕು ಪ್ರಾಣಿಗಳನ್ನು ನಿಲುಗಡೆ ಮಾಡಿರುವ ವಾಹನಗಳಲ್ಲಿ ಬಿಡಬೇಡಿ. ವಾಹನಗಳ ಒಳಾಂಗಣದಲ್ಲಿನ ಹೆಚ್ಚಿನಾಪಮಾನವು ಅಪಾಯಕಾರಿಯಾಗಬಹುದು.
-ಕೆಲಸದ ಸ್ಥಳದಲ್ಲಿ ಕೆಲಸಗಾರರಿಗೆ ಕುಡಿಯಲು ತಣ್ಣನೆಯ ನೀರಿನ ವ್ಯವಸ್ಥೆ ಮಾಡಬೇಕು. 20 ನಿಮಿಷಗಳಿಗೊಮ್ಮೆ ಒಂದು ಗ್ಲಾಸ್‌ ಅಥವಾ ಅದಕ್ಕಿಂತ ಹೆಚ್ಚಿನ ನೀರು ಕುಡಿಬೇಕು

Heat wave

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

karnataka Weather : ದೂರ ಸರಿದ ಮಳೆ; ಬೆಂಗಳೂರಲ್ಲಿ 39ರ ಗಡಿದಾಟಲಿದೆ ಗರಿಷ್ಠ ಉಷ್ಣಾಂಶ! 15 ಜಿಲ್ಲೆಗಳಿಗೆ ಅಲರ್ಟ್‌

Temperature Warning: ಈ ವರ್ಷ ಬೆಂಗಳೂರು ತನ್ನೆಲ್ಲ ಹಳೆಯ ದಾಖಲೆಗಳನ್ನು ಮುರಿಯುತ್ತಾ ಬಂದಿದ್ದು, ಗರಿಷ್ಠ ತಾಪಮಾನವು ಮತ್ತಷ್ಟು ದುಪ್ಪಟ್ಟು ಆಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ಈ ನಡುವೆ 15 ಜಿಲ್ಲೆಗಳಿಗೆ ಹೀಟ್‌ ವೇವ್‌ ಅಲರ್ಟ್‌ (Heat Wave alert) ನೀಡಲಾಗಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯಾದ್ಯಂತ ಮಳೆಯು ದೂರ ಸರಿದಿದ್ದು, ಒಣಹವೆ (Karnataka Weather forecast) ಆವರಿಸಿದೆ. ರಾಜಧಾನಿ ಬೆಂಗಳೂರಲ್ಲಿ (temperature rising) ದಾಖಲೆಯ ಪ್ರಮಾಣದಲ್ಲಿ ಗರಿಷ್ಠ ಉಷ್ಣಾಂಶ ಏರಿಕೆ ಆಗುತ್ತಿದೆ. ಮಾರ್ಚ್‌ನಲ್ಲಿ ಹಳೆಯ ಎಲ್ಲ ದಾಖಲೆ ಮುರಿದಿದ್ದ ಬೆಂಗಳೂರಲ್ಲಿ ಇದೀಗ ಏಪ್ರಿಲ್‌ 28ರಂದು ಗರಿಷ್ಠ ಉಷ್ಣಾಂಶವು 39 ಡಿ.ಸೆಗೆ ಏರಿಕೆ ಆಗಲಿದೆ ಎಂದು ಹವಾಮಾನ ಇಲಾಖೆ (Bengaluru weather) ಮಾಹಿತಿ ನೀಡಿದೆ. ತಾಪಮಾನ (Bengaluru temperature) ಏರಿಕೆಯಿಂದ ಜನರು ಪರಿತಪಿಸುವಂತಾಗಿದೆ

ಕೂಲ್‌ ಸಿಟಿ (Cool city Bengaluru) ಎಂದು ಕರೆಸಿಕೊಳ್ಳುವ ಬೆಂಗಳೂರು ಹಾಟ್‌ ಸಿಟಿಯಾಗಿ (Bengaluru temperature) ಬದಲಾಗುತ್ತಿದೆ. ಬೆಂಗಳೂರಿನಲ್ಲೀಗ ದಾಖಲೆಯಲ್ಲಿ ಹೆಚ್ಚುತ್ತಿರುವ ತಾಪಮಾನದಿಂದ (Temperature Warning) ಸಿಟಿ ಜನರು ತತ್ತರಿಸಿ ಹೋಗಿದ್ದಾರೆ. ಬಿಸಿಲನಾಡು ಎಂದು ಕರೆಸಿಕೊಳ್ಳುವ ಉತ್ತರ ಒಳನಾಡಿನ ಜಿಲ್ಲೆಗಳಿಗೂ ರಾಜಧಾನಿ ಬೆಂಗಳೂರು ಅಕ್ಷರಶಃ ಸೆಡ್ಡು ಹೊಡೆಯುತ್ತಿದೆ.

ಮಾರ್ಚ್‌ ಬಳಿಕ ಏಪ್ರಿಲ್‌ ಮೊದಲ ವಾರದಲ್ಲೇ ಬೆಂಗಳೂರಿನಲ್ಲಿ ದಾಖಲೆಯ ಮಟ್ಟದಲ್ಲಿ ಗರಿಷ್ಠ ತಾಪಮಾನವು (Bengaluru heatwave) ದಾಖಲಾಗಿತ್ತು. ಇದೀಗ ಏಪ್ರಿಲ್‌ ಅಂತ್ಯದಲ್ಲೂ ಕಳೆದ ಕೆಲವು ದಿನಗಳಿಂದ ಬೆಂಗಳೂರಿನಲ್ಲಿ ಹಗಲಿನಲ್ಲಿ ತಾಪಮಾನ 38 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆ ಕಂಡಿದೆ. ಇದರಿಂದಾಗಿ ಬಿಸಿಲ ಬೇಗೆಗೆ ತೇವಾಂಶದ ಕೊರತೆಯಿಂದಾಗಿ ಒಣ ಹವೆ (Bengaluru heat) ಮುಂದುವರಿದಿದೆ. ಇಷ್ಟೊಂದು ತಾಪಮಾನದಲ್ಲಿ ಜನರು ತಿರುಗಾಡಿದರೆ ಖಂಡಿತವಾಗಿಯೂ ಅನಾರೋಗ್ಯಕ್ಕೆ ತುತ್ತಾಗಲಿದ್ದಾರೆ.

ಇದನ್ನೂ ಓದಿ: Home Remedy For Cracked Heels: ಒಡೆದ ಹಿಮ್ಮಡಿಗಳಿಗೆ ಕರ್ಪೂರದ ಎಣ್ಣೆ ಪರಿಣಾಮಕಾರಿ

ಹೀಟ್‌ ವೇವ್‌ ಶಾಕ್‌

ರಾಜ್ಯದಲ್ಲಿ ಏ.28ರಂದು ಒಣಹವೆ ಮುಂದುವರಿಯಲಿದೆ. ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಹೀಟ್‌ ವೇವ್‌ ಹೆಚ್ಚಾಗಲಿದೆ. ಹೀಗಾಗಿ ಈ 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ಮುನ್ನೆಚ್ಚರಿಕೆಯನ್ನು ವಹಿಸುವಂತೆ ಸೂಚಿಸಲಾಗಿದೆ. ಜತೆಗೆ ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್‌ ಏರಿಕೆಯಾಗುವ ಸಾಧ್ಯತೆ ಇದೆ.

ಇನ್ನೂ ಶುಕ್ರವಾರದಂದು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣಹವೆ ಇತ್ತು. ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 42.2 ಡಿ.ಸೆ ದಾಖಲಾಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು ಗ್ರಾಮಾಂತರ

Assault Case : ಕುಡಿದ ನಶೆಯಲ್ಲಿ ಸ್ನೇಹಿತನಿಗೆ ಬೆಂಕಿ ಹಚ್ಚಿದ ಮಿತ್ರ ದ್ರೋಹಿಗಳು ಅರೆಸ್ಟ್‌

Assault Case : ಬಾರ್‌ನಲ್ಲಿ ಕುಡಿಯಲು ಹೋದ ಗೆಳೆಯರು ಕ್ಷುಲ್ಲಕ ಕಾರಣಕ್ಕೆ ಕ್ಯಾತೆ ತೆಗೆದು ಸ್ನೇಹಿತನಿಗೆ ಬೆಂಕಿ ಹಚ್ಚಿ ಪರಾರಿ ಆಗಿದ್ದರು. ಇದೀಗ ಆನೇಕಲ್‌ ಪೊಲೀಸರು ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ.

VISTARANEWS.COM


on

By

assault case in anekla
Koo

ಆನೇಕಲ್: ಬಾರ್‌ನಲ್ಲಿ ಕುಡಿಯಲು ಹೋದವರು ಮತ್ತಿನಲ್ಲಿ ಗಲಾಟೆ (Assault Case) ಮಾಡಿಕೊಂಡಿದ್ದರು. ನಶೆಯ ಗುಂಗಿನಲ್ಲಿ ಸ್ನೇಹಿತನಿಗೆ ಬೆಂಕಿ ಹಚ್ಚಿದ್ದ ಆರೋಪಿಗಳು ಅರೆಸ್ಟ್ ಆಗಿದ್ದಾರೆ. ನಾಗೇಶ್ ಎಂಬಾತ ತನ್ನ ಸ್ನೇಹಿತರಾದ ವೆಂಕಟಸ್ವಾಮಿ ಮತ್ತು ಮುನಿರಾಜು ಎಂಬುವವರಿಂದ ದಾಳಿಗೆ ಒಳಗಾಗಿದ್ದ.

ಕಳೆದ 22ರಂದು ನಾಗೇಶ್, ವೆಂಕಟಸ್ವಾಮಿ ಮತ್ತು ಮುನಿರಾಜು ಒಟ್ಟಾಗಿ ಮದ್ಯ ಸೇವಿಸಲು ಆನೇಕಲ್ ಪಟ್ಟಣದಲ್ಲಿರುವ ಸಂಜಯ್ ಬಾರ್‌ಗೆ ಹೋಗಿದ್ದರು. ಒಂದೇ ಟೇಬಲ್‌ನಲ್ಲಿ ಕುಳಿತು ಮದ್ಯ ಸೇವಿಸುವಾಗ ಕ್ಷುಲ್ಲಕ ಕಾರಣಕ್ಕೆ ಕಿರಿಕ್ ಶುರುವಾಗಿತ್ತು.

ಈ ವೇಳೆ ನಾಗೇಶ್ ಮೇಲೆ ಮದ್ಯವನ್ನು ಸುರಿದು ಬೆಂಕಿ ಹಚ್ಚಿದ್ದ ಪರಾರಿ ಆಗಿದ್ದರು. ಇತ್ತ ಸ್ನೇಹಿತರ ಹಚ್ಚಿದ ಬೆಂಕಿಗೆ ನಾಗೇಶ್‌ಗೆ ಶೇ. 30ರಷ್ಟು ಸುಟ್ಟ ಗಾಯವಾಗಿತ್ತು. ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಘಟನೆ ಸಂಬಂಧ ಪ್ರಕರಣ ದಾಖಲು ಮಾಡಿಕೊಂಡಿದ್ದ ಆನೇಕಲ್ ಪೊಲೀಸರು, ತಲೆಮರೆಸಿಕೊಂಡಿದ್ದ ವೆಂಕಟಸ್ವಾಮಿ ಮತ್ತು ಮುನಿರಾಜುರನ್ನು ಬಂಧಿಸಿದ್ದಾರೆ.

ಇದನ್ನೂ ಓದಿ:Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

ಹೆಂಡ್ತಿ ಮೇಲೆ ಸಂಶಯ; ಕುಡಿದು ಬಂದು ಕೊಡಲಿಯಿಂದ ಕೊಚ್ಚಿ ಕೊಂದ

ಧಾರವಾಡ: ಪತ್ನಿ ಮೇಲೆ ಸಂಶಯ ಪಟ್ಟ ಪಾಪಿ ಪತಿಯೊಬ್ಬ ಕೊಂದೆ (Murder Case) ಬಿಟ್ಟಿದ್ದಾನೆ. ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಆಯಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ಮಲ್ಲವ್ವ ಬಳ್ಳೂರ ಮೃತ ದುರ್ದೈವಿ. ಶಿವಪ್ಪ ಬಳ್ಳೂರ ಎಂಬಾತ ಪತ್ನಿ ಕೊಂದವನು.

ಶುಕ್ರವಾರ ರಾತ್ರಿ ಕುಡಿದು ಬಂದ ಶಿವಪ್ಪ ಪತ್ನಿ ಮಲ್ಲವ್ವಳ ಜತೆಗೆ ಜಗಳ ಮಾಡಿದ್ದಾನೆ. ನಂತರ ಶನಿವಾರ ಬೆಳಗಿನ ಜಾವ ಕೊಡಲಿಯಿಂದ ಪತ್ನಿಯನ್ನು ಕೊಚ್ಚಿ ಕೊಂದಿದ್ದಾನೆ. ಮದುವೆ ಆಗಿ 15 ವರ್ಷವಾದರೂ ಶಿವಪ್ಪ ನಿತ್ಯ ಪತ್ನಿ ಮೇಲೆ ಸಂಶಯ ಪಡುತ್ತಿದ್ದ. ಶುಕ್ರವಾರ ರಾತ್ರಿಯಿಡೀ ಜಗಳ ಮಾಡಿ ಬೆಳಗ್ಗೆ ಸಿಟ್ಟಿನಲ್ಲಿ ಪತ್ನಿಯನ್ನು ಕೊಂದು ಮನೆಯಲ್ಲಿಯೇ ಇದ್ದ.

ಅಕ್ಕ-ಪಕ್ಕದ ಮನೆಯವರು ಬಂದು ನೋಡಿದಾಗ ರಕ್ತಸಿಕ್ತವಾಗಿ ಬಿದ್ದಿದ್ದ ಮಲ್ಲವ್ವಳನ್ನು ಕಂಡು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ನವಲಗುಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಹಿಳೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಕೊಲೆಯಾದ ಜಾಗದಲ್ಲೇ ಕುಳಿತಿದ್ದ ಶಿವಪ್ಪನನ್ನು ಪೊಲೀಸರು ವಶಕ್ಕೆ ಪಡೆದು ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ: Snake Bite: ತೋಟದ ಮನೆಯಲ್ಲಿ ಆಟವಾಡುತ್ತಿದ್ದ ಬಾಲಕಿಯ ಕಚ್ಚಿದ ಹಾವು; ಕ್ಷಣಾರ್ಧದಲ್ಲೆ ಹಾರಿಹೋಯ್ತು ಪ್ರಾಣ

ತುಮಕೂರಿನಲ್ಲಿ ಮಹಿಳೆ ಶವ ಪತ್ತೆ

ತಲೆ ಜಜ್ಜಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಕಮಲಮ್ಮ (35) ಕೊಲೆಯಾದವರು. ತುಮಕೂರು ಜಿಲ್ಲೆ ಶಿರಾ ತಾಲೂಕಿನ ಬುಕ್ಕಾಪಟ್ಟಣ ಹೋಬಳಿಯ ಕರೆಮಾದೇನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಕರೆಮಾದೇನಹಳ್ಳಿ ಗ್ರಾಮದ ಚಂದ್ರಣ್ಣನ ಪತ್ನಿ ಕಮಲಮ್ಮ ತಡರಾತ್ರಿ ಹೊರಗೆ ಹೋಗಿದ್ದರು. ಈ ವೇಳೆ ಯಾರೋ ಹಂತಕರು ಕಲ್ಲಿನಿಂದಲ್ಲೋ ಅಥವಾ ಮಾರಾಕಸ್ತ್ರದಿಂದಲ್ಲೋ ತಲೆ ಜಜ್ಜಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ಶಿರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ಸಂಬಂಧ ಶಿರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಕೈ ಕೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು ಗ್ರಾಮಾಂತರ

Snake Bite: ತೋಟದ ಮನೆಯಲ್ಲಿ ಆಟವಾಡುತ್ತಿದ್ದ ಬಾಲಕಿಯ ಕಚ್ಚಿದ ಹಾವು; ಕ್ಷಣಾರ್ಧದಲ್ಲೆ ಹಾರಿಹೋಯ್ತು ಪ್ರಾಣ

Snake Bite: ತೋಟದ ಮನೆಯಲ್ಲಿ ಆಟವಾಡುತ್ತಿದ್ದಾಗ ಬಾಲಕಿಗೆ ಹಾವು ಕಚ್ಚಿದೆ. ಇದರಿಂದ ಅಸ್ವಸ್ಥಳಾಗಿದ್ದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಕೊನೆಯುಸಿರೆಳೆದಿದ್ದಾಳೆ.

VISTARANEWS.COM


on

By

snake bite
Koo

ದೊಡ್ಡಬಳ್ಳಾಪುರ: ಹಾವು ಕಚ್ಚಿ 7 ವರ್ಷದ ಬಾಲಕಿ (Snake Bite) ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರದ ದೊಡ್ಡಬಳ್ಳಾಪುರ ತಾಲೂಕಿನ ‌ಕೋಳೂರು ಗ್ರಾಮದಲ್ಲಿ ಘಟನೆ ನಡೆದಿದೆ. ಟಿ ಹೊಸಹಳ್ಳಿ ಗ್ರಾಮದ ರಾಮಾಂಜಿ ಎನ್ನುವವರ ಮಗಳು ಅನುಷಾ (7) ಮೃತ ದುರ್ದೈವಿ.

ವಿನೋದಮ್ಮ ಮತ್ತು ರಾಮಾಂಜಿನಪ್ಪ ದಂಪತಿ ಕೋಳೂರು ಗ್ರಾಮದ ತೋಟದ ಮನೆಯೊಂದರಲ್ಲಿ ಕೂಲಿ ಕೆಲಸ ಮಾಡಿಕೊಂಡು ವಾಸವಿದ್ದರು. ನಿನ್ನೆ ಶುಕ್ರವಾರ ಸಂಜೆ ಅನುಷಾಳ ತಂದೆ-ತಾಯಿ‌ ತೋಟದ ಕೆಲಸದಲ್ಲಿ ನಿರಂತರಾಗಿದ್ದರು. ಈ ವೇಳೆ ಮನೆ ಹೊರಗೆ ಆಟ ಆಡುತ್ತಿದ್ದಾಗ ಬಾಲಕಿ ಅನುಷಾಗೆ ಹಾವು ಕಚ್ಚಿದೆ.

ಕೂಡಲೆ ಮಗಳು ಅಸ್ವಸ್ಥಗೊಂಡಿದ್ದನ್ನು ಗಮನಿಸಿದ ಪೋಷಕರು ದೊಡ್ಡಬಳ್ಳಾಪುರದ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅನುಷಾ ಮೃತಪಟ್ಟಿದ್ದಾಳೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: Neha Murder case : ನ್ಯಾಯಾಧೀಶರ ಎದುರೆ ನೇಹಾ ಕೊಲೆ ಆರೋಪಿ ಫಯಾಜ್‌ನ DNA ಮಾದರಿ ಸಂಗ್ರಹ!

ಹೆಣ್ಣುಮಕ್ಕಳೇ ಎಚ್ಚರ; ಫೇಶಿಯಲ್‌ ಮಾಡಿಸಿಕೊಂಡ ಮೂವರಿಗೆ ಎಚ್‌ಐವಿ!

ನವದೆಹಲಿ: ಹೆಣ್ಣುಮಕ್ಕಳಿಗೆ ಸೌಂದರ್ಯದ (Beauty) ಬಗ್ಗೆ ಹೆಚ್ಚು ಕಾಳಜಿ ಇರುತ್ತದೆ. ಹೆಚ್ಚು ವಯಸ್ಸಾದರೂ 18ರ ಯುವತಿಯಂತೆ ಕಾಣಲು ಹಲವು ಕಸರತ್ತು ಮಾಡುತ್ತಾರೆ. ಇನ್ನು ನಗರ ಹಾಗೂ ಮಹಾನಗರಗಳಲ್ಲಂತೂ ಬ್ಯೂಟಿ ಪಾರ್ಲರ್‌ಗಳಿಗೆ ನಿಯಮಿತವಾಗಿ ತೆರಳಿ ಮೇಕಪ್‌, ಫೇಶಿಯಲ್‌ (Facial) ಮಾಡಿಸಿಕೊಳ್ಳುತ್ತಾರೆ. ಆದರೆ, ಅಮೆರಿಕದಲ್ಲಿ ಸ್ಪಾಗಳಲ್ಲಿ ಫೇಶಿಯಲ್‌ ಮಾಡಿಸಿಕೊಂಡ ಮೂವರು ಮಹಿಳೆಯರಿಗೆ ಎಚ್‌ಐವಿ ಸೋಂಕು (HIV) ತಗುಲಿದೆ ಎಂಬ ಸ್ಫೋಟಕ ಮಾಹಿತಿ ಲಭ್ಯವಾಗಿದೆ. ವ್ಯಾಂಪೈರ್‌ ಫೇಶಿಯಲ್‌ (Vampire Facial) ಮಾಡಿಸಿಕೊಂಡ ಕಾರಣ ಇವರಿಗೆ ಎಚ್‌ಐವಿ ತಗುಲಿದೆ ಎಂಬ ಮಾಹಿತಿಯು ಅಧ್ಯಯನ ವರದಿಯಿಂದ ಲಭ್ಯವಾಗಿದೆ.

ಅಮೆರಿಕದ ನ್ಯೂ ಮೆಕ್ಸಿಕೋ ಸ್ಪಾದಲ್ಲಿ ಕಾಸ್ಮೆಟಿಕ್‌ ಇಂಜೆಕ್ಷನ್‌ ಪ್ರೊಸೀಜರ್‌ ಮೂಲಕ ನಡೆಸುವ ವ್ಯಾಂಪೈರ್‌ ಫೇಶಿಯಲ್‌ ಮಾಡಿಸಿಕೊಂಡ ಮೂವರಿಗೆ ಎಚ್‌ಐವಿ ತಗುಲಿದೆ ಎಂದು ಅಮೆರಿಕದ ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರವು ಮಾಹಿತಿ ನೀಡಿದೆ. ವ್ಯಾಂಪೈರ್‌ ಫೇಶಿಯಲ್‌ಅನ್ನು ಕಡಿಮೆ ಬೆಲೆಗೆ ಮಾಡುವುದರಿಂದ ಹೆಚ್ಚಿನ ಮಹಿಳೆಯರು, ಅದರಲ್ಲೂ 40 ವರ್ಷ ದಾಟಿದವರು ಹೆಚ್ಚು ಮಾಡಿಸಿಕೊಳ್ಳುತ್ತಾರೆ. ಆದರೆ, ಇದು ಈಗ ಮಾರಣಾಂತಿಕ ಕಾಯಿಲೆಗಳಿಗೆ ಕಾರಣವಾಗುತ್ತಿದೆ.

ಏನಿದು ವ್ಯಾಂಪೈರ್‌ ಫೇಶಿಯಲ್?‌

ವ್ಯಾಂಪೈರ್‌ ಫೇಶಿಯಲ್‌ಅನ್ನು ರಕ್ತಪಿಶಾಚಿ ಫೇಶಿಯಲ್‌ ಎಂದೂ ಕರೆಯಲಾಗುತ್ತದೆ. ಸ್ಪಾಗಳಲ್ಲಿ ಸೂಜಿ ಅಥವಾ ಇಂಜೆಕ್ಷನ್‌ ಮೂಲಕ ಮಹಿಳೆಯರ ಮುಖದ ಮೇಲಿನ ಸುಕ್ಕು ಮಾಯಮಾಡುವುದು, ಅವರು ಯುವತಿಯರಂತೆ ಮಾಡುವ ಸೌಂದರ್ಯ ವರ್ಧಕ ವಿಧಾನ ಇದಾಗಿದೆ. ಇದನ್ನು ಪ್ಲೇಟ್‌ಲೆಟ್‌ ರಿಚ್‌ ಪ್ಲಾಸ್ಮಾ (PRP) ಅಥವಾ ಪ್ಲೇಟ್‌ಲೆಟ್‌ ರಿಚ್‌ ಫೈಬ್ರಿನ್‌ (PRF) ಎಂದು ಕೂಡ ಕರೆಯಲಾಗುತ್ತದೆ.

ವಯಸ್ಸಾದ ಮಹಿಳೆಯರು, ಸುಕ್ಕು ಗಟ್ಟಿದ ಚರ್ಮದ ಕಾಂತೀಯತೆಯನ್ನು ಸೂಜಿಯ ಮೂಲಕವೇ ಹೆಚ್ಚಿಸುವುದು ಇದರ ಪ್ರಮುಖ ವಿಧಾನವಾಗಿದೆ. ಚರ್ಮದಲ್ಲಿ ಕಾಲಜಿನ್‌ ಉತ್ಪಾದನೆ ಹೆಚ್ಚಿಸಿ, ಚರ್ಮವು ಹೊಳೆಯುವಂತೆ ಮಾಡುವುದೇ ರಕ್ತಪಿಶಾಚಿ ಫೇಶಿಯಲ್‌ ಆಗಿದೆ. ಇದನ್ನು ಭಾರತದ ಪ್ರಮುಖ ನಗರಗಳು ಸೇರಿ ಜಗತ್ತಿನಾದ್ಯಂತ ಸ್ಪಾಗಳಲ್ಲಿ ಮಾಡುತ್ತಾರೆ. ಆದರೆ, ಈ ಫೇಶಿಯಲ್‌ ಈಗ ಮಹಿಳೆಯರ ಪ್ರಾಣಕ್ಕೇ ಕುತ್ತು ತರುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.

ಹೆಣ್ಣುಮಕ್ಕಳ ಕೈಗಳಿಂದ ರಕ್ತವನ್ನು ತೆಗೆದು, ಅದರಿಂದ ಪ್ಲೇಟ್‌ಲೆಟ್‌ಗಳನ್ನು ವಿಗಂಡಣೆ ಮಾಡಿ, ಆ ರಕ್ತವನ್ನು ಸಣ್ಣ ಸೂಜಿಯ ಮೂಲಕ ಮುಖಕ್ಕೆ ಅಳವಡಿಸುತ್ತಾರೆ. ಇದರಿಂದ ಚರ್ಮವು ಹೊಳೆಯುತ್ತದೆ. ಸುಕ್ಕುಗಳು ಮಾಯವಾಗುತ್ತಿವೆ. ಇದು ಸುಲಭ ಹಾಗೂ ಅಷ್ಟೇನೂ ಹೆಚ್ಚಿನ ಹಣ ಖರ್ಚಾಗದ ಕಾರಣ ಜಾಸ್ತಿ ಮಹಿಳೆಯರು ಈ ಫೇಶಿಯಲ್‌ ಮೊರೆಹೋಗುತ್ತಿದ್ದಾರೆ ಎನ್ನಲಾಗಿದೆ. ಇಂತಹ ಫೇಶಿಯಲ್‌ ಮಾಡಿಸಿಕೊಳ್ಳುವ ಮೊದಲು ಹೆಣ್ಣುಮಕ್ಕಳು ಎಚ್ಚರಿಕೆಯಿಂದ ಇರಬೇಕು ಎಂದು ಅಮೆರಿಕದ ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರ ಎಚ್ಚರಿಕೆ ನೀಡಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Priyanka Gandhi Rahul Gandhi
ದೇಶ25 mins ago

Lok Sabha Election 2024: ಅಮೇಥಿ, ರಾಯ್‌ಬರೇಲಿಗೆ ರಾಹುಲ್‌, ಪ್ರಿಯಾಂಕಾ ಫಿಕ್ಸ್‌? ಖರ್ಗೆ ನಿರ್ಧಾರ ಫೈನಲ್‌

Ranbir Kapoor stunned as photographer abuses in front of him
ಬಾಲಿವುಡ್32 mins ago

Ranbir Kapoor: ರಣಬೀರ್​ ಕಪೂರ್‌ಗೆ​ ಅಶ್ಲೀಲವಾಗಿ ಬೈಯ್ದ್ರಾ ಫೋಟೋಗ್ರಾಫರ್‌? ವಿಡಿಯೊದಲ್ಲಿ ಏನಿದೆ?

pralhad Joshi
ಪ್ರಮುಖ ಸುದ್ದಿ33 mins ago

Pralhad Joshi : ಬರ ಪರಿಹಾರ ವಿಚಾರದಲ್ಲಿ ಕಾಂಗ್ರೆಸ್​ನಿಂದ ನಾಟಕ; ಪ್ರಲ್ಹಾದ್ ಜೋಶಿ ಲೇವಡಿ

If Congress comes to power all your assets will belong to Government says PM Narendra Modi
Lok Sabha Election 202434 mins ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20241 hour ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Gold Rate
ಪ್ರಮುಖ ಸುದ್ದಿ1 hour ago

Gold Rate : ಏರುಗತಿಯಲ್ಲಿದೆ ಬಂಗಾರದ ಬೆಲೆ; ಇನ್ನೂ ಏರುವ ಮೊದಲು ಖರೀದಿ ಸೂಕ್ತ

ದೇಶ1 hour ago

School Teacher: ಕಾರಿನ ಮೇಲೆ ಕಲ್ಲು ಎತ್ತಿ ಹಾಕಿ ಶಿಕ್ಷಕಿ ಪುಂಡಾಟ; ನೆರೆಮನೆಯವರ ಮೇಲೂ ಹಲ್ಲೆ

Varalaxmi Sarathkumar negative comments on fiance
ಕಾಲಿವುಡ್1 hour ago

Varalaxmi Sarathkumar: ನನ್ನ ತಂದೆ ಎರಡು ಮದುವೆಯಾದರು, ಹಾಗೇ ನಾನೂ ಕೂಡ ಎಂದ ನಟ ಶರತ್‌ಕುಮಾರ್ ಪುತ್ರಿ!

Viral Video
ವೈರಲ್ ನ್ಯೂಸ್2 hours ago

Viral Video: ವಧುವಿಗೆ ಹೂಮಾಲೆ ಹಾಕಲು ವರ ಮಾಡಿರುವ ಕಿತಾಪತಿ ಏನು ನೋಡಿ!

Outdoor Exercise
ಆರೋಗ್ಯ2 hours ago

Outdoor Exercise: ಹೊರಾಂಗಣ ವ್ಯಾಯಾಮ ಖಿನ್ನತೆಯನ್ನು ದೂರ ಮಾಡುವುದೇ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

If Congress comes to power all your assets will belong to Government says PM Narendra Modi
Lok Sabha Election 202434 mins ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20241 hour ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ4 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ8 hours ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 202421 hours ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ1 day ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ1 day ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ2 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20242 days ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20242 days ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

ಟ್ರೆಂಡಿಂಗ್‌