ದೇವನಹಳ್ಳಿ: ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ (Dead Body Found) ಪತ್ತೆಯಾಗಿದೆ. ರೈಲ್ವೆ ನಿಲ್ದಾಣದ ಬಿಡ್ಜ್‌ಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಶವ ನೇತಾಡುತ್ತಿತ್ತು. ದೇವನಹಳ್ಳಿ ಹೊರ ವಲಯದ ರೈಲ್ವೆ ನಿಲ್ದಾಣದಲ್ಲಿ (Devanahalli Railway Station) ಘಟನೆ ನಡೆದಿದೆ.
ಕಳೆದ ರಾತ್ರಿ ಈ ಘಟನೆ ನಡೆದಿದ್ದು, ಮಂಗಳವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಸುಮಾರು 30 ವರ್ಷದ ವ್ಯಕ್ತಿ ಶವ ಪತ್ತೆಯಾಗಿದ್ದು, ಕೊಲೆಯೋ, ಆತ್ಮಹತ್ಯೆಯೋ ಎಂಬ ಅನುಮಾನ ಮೂಡಿದೆ. ಸ್ಥಳಕ್ಕೆ ಬೈಯ್ಯಪ್ಪನಹಳ್ಳಿ ರೈಲ್ವೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದ ಬೈಯಪ್ಪನಹಳ್ಳಿ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೊಲೀಸರು ಮೃತನ ಗುರುತು ಪತ್ತೆಗೆ ಮುಂದಾಗಿದ್ದಾರೆ.
ಇದನ್ನೂ ಓದಿ: Murder case : ಗಲಾಟೆ ಬಿಡಿಸಲು ಹೋದ ಮಹಿಳೆಯ ಎದೆಗೆ ಗುದ್ದಿ ಹೊಡೆದು ಕೊಂದರು
ಪಾರ್ಕ್‌ನ ಪೊದೆಯಲ್ಲಿತ್ತು ನಿವೃತ್ತ ಬ್ಯಾಂಕ್ ನೌಕರನ ಕೊಳೆತ ಶವ
ಹಾಸನ: ನಾಪತ್ತೆಯಾಗಿದ್ದ ನಿವೃತ್ತ ಬ್ಯಾಂಕ್ ನೌಕರ ಶವವಾಗಿ (Dead Body Found) ಪತ್ತೆಯಾಗಿದ್ದಾರೆ. ಮಂಜುನಾಥ್ (70) ಅನುಮಾನಾಸ್ಪದವಾಗಿ ಮೃತಪಟ್ಟವರು. ಹಾಸನ ಜಿಲ್ಲೆ ಅರಸೀಕೆರೆ ಪಟ್ಟಣದಲ್ಲಿ ಘಟನೆ ನಡೆದಿದೆ.
ಅರಸೀಕೆರೆ ನಗರದ ಲಕ್ಷ್ಮಿಪುರ ಬಡಾವಣೆಯ ನಿವಾಸಿಯಾದ ಮಂಜುನಾಥ್, ಕಳೆದ ಮಾ.27 ರಂದು ಸಂಜೆ ಸಮಯ ವಾಕಿಂಗ್‌ಗೆ ಎಂದು ಮನೆಯಿಂದ ತೆರಳಿದ್ದರು. ರಾತ್ರಿ ಕಳೆದರು ಮಂಜುನಾಥ್ ಮನೆಗೆ ವಾಪಸ್ ಬಾರದೇ ಇದ್ದಾಗ, ಮನೆ ಮಂದಿ ಎಲ್ಲ ಕಡೆ ಹುಡುಕಾಡಿದ್ದಾರೆ. ನಂತರ ಯಾವುದೇ ಸುಳಿವು ಸಿಗದೇ ಇದ್ದಾಗ ಮಂಜುನಾಥ್ ಪತ್ನಿ ಸರೋಜಾ ನಿಂಬಣ್ಣನವರ್ ಮರುದಿನ ಮಾ.28 ರಂದು ಅರಸೀಕೆರೆ ನಗರ ಪೊಲೀಸ್ ಠಾಣೆಗೆ ಮಿಸ್ಸಿಂಗ್ ಕಂಪ್ಲೆಂಟ್ ನೀಡಿದ್ದರು.
ಇದೀಗ ಏ.2ರಂದು ಕಂತೇನಹಳ್ಳಿ ಕೆರೆ ಪಕ್ಕದ ಪಾರ್ಕ್‌ನಲ್ಲಿ ಗಬ್ಬು ನಾರುವ ವಾಸನೆ ಬರುತ್ತಿತ್ತು. ಈ ವೇಳೆ ಪರಿಶೀಲನೆ ನಡೆಸಿದಾಗ ಪೊದೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಮಂಜುನಾಥ್ ಅವರ ಮೃತದೇಹ ಪತ್ತೆಯಾಗಿದೆ. ಕೂಡಲೇ ವಾಯು ವಿಹಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಂಜುನಾಥ್ ಅವರ ಸಾವಿನ ಬಗ್ಗೆ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಮರಣೋತ್ತರ ವರದಿ ಬಂದ ಮೇಲೆ ಇದು ಕೊಲೆನಾ ಅಥವಾ ಆಕಸ್ಮಿಕ ಸಾವಾ ಎಂಬುದುರ ಕುರಿತು ತಿಳಿಯಲಿದೆ. ಸದ್ಯ ಅರಸೀಕೆರೆ ಗ್ರಾಮಾಂತರ ಪೊಲೀಸ್ ಠಾಣೆ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ