Site icon Vistara News

Electric Shock: ಪಲ್ಲಕ್ಕಿ ಹೊತ್ತಿದ್ದ ಟ್ರ್ಯಾಕ್ಟರ್‌ಗೆ ಪ್ರವಹಿಸಿದ ವಿದ್ಯುತ್‌; ಕ್ಷಣಾರ್ಧದಲ್ಲೇ ಇಬ್ಬರು ಸುಟ್ಟು ಕರಕಲು

Electric shock Electronic City

ಬೆಂಗಳೂರು: ಪಲ್ಲಕ್ಕಿ ಟ್ರಾಕ್ಟರ್‌ಗೆ ವಿದ್ಯುತ್ ತಂತಿ ಸ್ಪರ್ಶಿಸಿ (Electric Shock) ಇಬ್ಬರು ದುರ್ಮರಣ ಹೊಂದಿದ್ದಾರೆ . ಈ ದಾರುಣ ಘಟನೆ ಬೆಂಗಳೂರು ಹೊರವಲಯದ ಎಲೆಕ್ಟ್ರಾನಿಕ್ ಸಿಟಿ (Electronic City) ಸಮೀಪದ ಗೊಲ್ಲಹಳ್ಳಿಯಲ್ಲಿ (Gollahalli) ನಡೆದಿದೆ. ವೀರಸಂದ್ರ ವಾಸಿ ರಂಗನಾಥ(33), ಯಾರಂಡಹಳ್ಳಿ ವಾಸಿ ಹರಿಬಾಬು(25) ಮೃತ ದುರ್ದೈವಿಗಳು.

ಗೊಲ್ಲಹಳ್ಳಿ ಗ್ರಾಮದ ಜಾತ್ರೆಯಲ್ಲಿ ಪಲ್ಲಕಿ ಉತ್ಸವದ ವೇಳೆ ಅವಘಡ ಸಂಭವಿಸಿದೆ. ಪಲ್ಲಕ್ಕಿ ಉತ್ಸವ ಮುಗಿಸಿ ವಾಪಸ್ ಬರುವಾಗ ಪಲ್ಲಕ್ಕಿಗೆ ವಿದ್ಯುತ್ ತಂತಿ ತಗುಲಿದೆ. ಈ ವೇಳೆ ಟ್ರ್ಯಾಕ್ಟರ್ ಚಲಾಯಿಸುವಾಗ ಚಾಲಕನಿಗೆ ಕರೆಂಟ್‌ ಶಾಕ್‌ ಹೊಡೆದಿದೆ. ಚಾಲಕನನ್ನು ರಕ್ಷಣೆ ಮಾಡಲು ಹೋಗಿ ಮತ್ತೊಬ್ಬನಿಗೂ ವಿದ್ಯುತ್‌ ಶಾಕ್‌ ಆಗಿದೆ.

ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಠಾಣೆ ಸಿಬ್ಬಂದಿಯಿಂದ ರಕ್ಷಣೆಗೆ ಧಾವಿಸಿದೆ. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಇಬ್ಬರು ಮೃತಪಟ್ಟಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆಯ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ.

ಇದನ್ನೂ ಓದಿ: Traffic Advisory : ಲೋಕಸಭೆ ಎಲೆಕ್ಷನ್‌ ಕೌಂಟಿಂಗ್‌; ಬೆಂಗಳೂರಲ್ಲಿ ಎಲ್ಲೆಲ್ಲಿ ವಾಹನ ನಿರ್ಬಂಧ, ಮಾರ್ಗ ಬದಲು?

ಮೈಸೂರಿನಲ್ಲಿ ಕಣ್ಣಿದ್ದು ಕುರುಡಾದ ಸೆಸ್ಕ್ ಸಿಬ್ಬಂದಿ

ಮೈಸೂರಿನಲ್ಲಿ ಸೆಸ್ಕ್ ಸಿಬ್ಬಂದಿ ಕಣ್ಣಿದ್ದು ಕುರುಡಾಗಿದ್ದಾರೆ. ವಿದ್ಯುತ್ ವೈಯರ್ ಮೇಲೆ ಒಣ ಮರ ಬಿದ್ದಿದ್ದರೂ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ. ಕಳೆದ 15 ದಿನಗಳ ಹಿಂದೆ ಬಿರುಗಾಳಿ ಸಹಿತ ಸುರಿದ ಮಳೆಗೆ ಮರ ಬಿದ್ದಿದ್ದು, ತೆರವು ಮಾಡುವಲ್ಲಿ ಸೆಸ್ಕ್ ಸಿಬ್ಬಂದಿ ಮೀನಾಮೇಷ ಎಣಿಸುತ್ತಿದ್ದಾರೆ.

ವಾಹನ ಸವಾರರ ಮೇಲೆ ಬಿದ್ದು ಅನಾಹುತ ಸಂಭವಿಸವುದಕ್ಕೂ ಮುನ್ನ ತೆರವು ಮಾಡುತ್ತಾರಾ? ಅಥವಾ ಅನಾಹುತ ಆದಮೇಲೆ ತೆರವು ಮಾಡುತ್ತಾರಾ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ. ಮೈಸೂರಿನ ಮಾನಸ ಗಂಗೋತ್ರಿ ಟೋಲ್ ಗೇಟ್‌ನಿಂದ ಪಡುವಾರಹಳ್ಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಘಟನೆ ನಡೆದಿದೆ. ಬಿರುಗಾಳಿಗೆ ಒಣ ಮರ ಸಂಪೂರ್ಣ ವಿದ್ಯುತ್ ತಂತಿ ಮೇಲೆ ಬಿದ್ದಿದ್ದರೂ ಯಾರೊಬ್ಬರು ತಲೆ ಕೆಡಿಸಿಕೊಂಡಿಲ್ಲ.

ಇದನ್ನೂ ಓದಿ: Drowned in Water : ನೀರಿನಲ್ಲಿ ಮುಳುಗಿ ಮುಂಬೈ ಮೂಲದ ಇಬ್ಬರು ಬಾಲಕಿಯರು ಸಾವು

Exit mobile version