ಆನೇಕಲ್: ಕಾಡಾನೆ ದಾಳಿಗೆ (Elephant attack) ರೈತ ಬಲಿಯಾಗಿದ್ದಾರೆ. ರಾಜ್ಯ ಗಡಿಭಾಗ ತಮಿಳುನಾಡಿನ ಡೆಂಕಣಿಕೋಟೆ ಸಮೀಪದ ಮೆದುಮುತ್ತುಕೊಟ್ಟೈ ಗ್ರಾಮದಲ್ಲಿ ಘಟನೆ ನಡೆದಿದೆ. ಅಪ್ಪಯ್ಯ (54) ಕಾಡಾನೆ ದಾಳಿಗೆ ಮೃತಪಟ್ಟವರು.
ಬೆಳಗ್ಗೆ ಜಮೀನಿಗೆ ತೆರಳುತ್ತಿದ್ದಾಗ ಒಂಟಿ ಸಲಗ ದಾಳಿ ಮಾಡಿದೆ. ಗಂಭೀರವಾಗಿ ಗಾಯಗೊಂಡಿದ್ದ ರೈತ ಅಪ್ಪಯ್ಯ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕೂಡಲೇ ಗ್ರಾಮಸ್ಥರು ಜವಳಗೆರೆ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಮೃತದೇಹವನ್ನು ಡೆಂಕಣಿಕೋಟೆ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಕಾಡಾನೆ ದಾಳಿಗೆ ಗ್ರಾಮಸ್ಥರು ಕಂಗೆಟ್ಟು ಹೋಗಿದ್ದಾರೆ. ಕಳೆದ ಕೆಲ ತಿಂಗಳಿನಿಂದ ಒಂಟಿ ಸಲಗ ಉಪಟಳ ನೀಡುತ್ತಿದ್ದು, ಈ ಹಿಂದೆ ಇಬ್ಬರನ್ನು ಬಲಿ ಪಡೆದಿತ್ತು. ಇದೀಗ ಮತ್ತೊಬ್ಬ ರೈತ ಕಾಡಾನೆ ದಾಳಿಗೆ ಮೃತಪಟ್ಟಿದ್ದಾರೆ. ಕಾಡಾನೆಯ ಉಪಟಳಕ್ಕೆ ಬ್ರೇಕ್ ಹಾಕುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಗ್ರಾಮಸ್ಥರು ಮನವಿ ಮಾಡಿದ್ದಾರೆ.
ಇದನ್ನೂ ಓದಿ: CoWIN Certificates: ಕೋವಿಡ್ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಔಟ್; ಕೇಂದ್ರ ಹೇಳೋದೇನು?
ಶೂಟೌಟ್‌ನಲ್ಲಿ ಸತ್ತಿದ್ದು ಗ್ಯಾಂಗ್‌ಸ್ಟರ್ ಗೋಲ್ಡಿ ಬ್ರಾರ್ ಅಲ್ಲ”…ವದಂತಿಗೆ ತೆರೆ
ವಾಷಿಂಗ್ಟನ್: ಪಂಜಾಬ್ ಗಾಯಕ ಸಿಧು ಮೂಸೆವಾಲಾ (Sidhu Moosewala) ಹತ್ಯೆಯ ರೂವಾರಿ, ಕೆನಡಾ ಮೂಲದ ಗ್ಯಾಂಗ್‌ಸ್ಟರ್ ಗೋಲ್ಡಿ ಬ್ರಾರ್ (Gangster Goldy Brar) ಅಮೆರಿಕದಲ್ಲಿ ಹತ್ಯೆ ಸುದ್ದಿಗೆ ಟ್ವಿಸ್ಟ್ ಸಿಕ್ಕಿದ್ದು, ಇದು ಸುಳ್ಳು ಸುದ್ದಿ ಎಂದು ಅಮೆರಿಕ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ ಫ್ರೆಸನೋ ಪೊಲೀಸರು ಈ ಬಗ್ಗೆ ಸಾಮಾಜಿಕ ಜಾಲತಾಣ(Social Media) ದಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕ್ಯಾಲಿಫೋರ್ನಿಯಾದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಗೋಲ್ಡಿ ಬಾರ್ ಸಾವನ್ನಪ್ಪಿದ್ದಾನೆ ಎನ್ನಲಾದ ಸುದ್ದಿ ಸಂಪೂರ್ಣವಾಗಿ ಸುಳ್ಳು. ಘಟನೆಯಲ್ಲಿ ಫೇರ್‌ಮಾಂಟ್ ಮತ್ತು ಹಾಲ್ಟ್ ಅವೆನ್ಯೂ ಎಂಬಲ್ಲಿ ನಡೆದ ಶೂಟೌಟ್‌ನಲ್ಲಿ ಇಬ್ಬರು ಬಲಿಯಾದ್ದಾರೆ.
ಘಟನೆ ಬೆನ್ನಲ್ಲೇ ಮೃತರಲ್ಲಿ ಒಬ್ಬ ಗೋಲ್ಡಿ ಬ್ರಾರ್ ಎಂದು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಈ ಸ್ಪಷ್ಟನೆ ನೀಡಿರುವ ಪೊಲೀಸರು, ಮೃತರ ಫೊಟೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ. ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಗಳು ಹರಡಿರುವ ಬೆನ್ನಲ್ಲೇ ಬಗ್ಗೆ ಪ್ರಪಂಚದ ಮೂಲೆ ಮೂಲೆಗಳಿಂದ ಅಧಿಕೃತ ಮಾಹಿತಿಗಾಗಿ ಮನವಿ ಬಂದಿತ್ತು. ಈ ಸುಳ್ಳು ಸುದ್ದಿಯನ್ನು ಹರಡಿದವರು ಯಾರು ಎಂಬ ಬಗ್ಗೆ ನಮಗೆ ಸ್ಪಷ್ಟ ಮಾಹಿತಿ ಇಲ್ಲ. ಈ ವಿಚಾರ ಪ್ರಪಂಚಾದ್ಯಂತ ಕಾಡ್ಗಿಚ್ಚಿನಂತೆ ಹರಡಿತ್ತು. ಆದರೆ ಇದು ಸುಳ್ಳು ಸುದ್ದಿ. ಮೃತ ಖಂಡಿತವಾಗಿಯೂ ಗೋಲ್ಡಿ ಬ್ರಾರ್ ಅಲ್ಲ ಎಂದು ಪೊಲೀಸ್ ಅಧಿಕಾರಿ ಲೆಫ್ಟಿನೆಂಟ್ ವಿಯಮ್ ಡೂಲೆ ಹೇಳಿದ್ದಾರೆ.
ಇನ್ನು ಮೃತ ವ್ಯಕ್ತಿಯನ್ನು 37 ವರ್ಷದ ಗ್ಸೇವಿಯರ್ ಗಾಲ್ಡ್‌ನೇ ಎಂದು ಗುರುತಿಸಲಾಗಿದ್ದು, ಗುಂಡಿನ ದಾಳಿಯಲ್ಲಿ ಈತ ಗಂಭೀರವಾಗಿ ಗಾಯಗೊಂಡಿದ್ದ. ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಆತ ಕೊನೆಯುಸಿರೆಳೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕ್ಯಾಲಿಫೋರ್ನಿಯಾದಲ್ಲಿರುವ ಹೋಟೆಲ್ ಫೇರ್‌ಮೌಂಟ್‌ನಲ್ಲಿ ಲಖಬೀರ್ ಗ್ಯಾಂಗ್‌ನ ಸದಸ್ಯರು ಗುಂಡಿನ ದಾಳಿ ನಡೆಸಿದ್ದ ಗಂಭೀರವಾಗಿ ಗಾಯಗೊಂಡಿದ್ದ ಗೋಲ್ಡಿ ಬ್ರಾರ್ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ ಎಂದು ನಿನ್ನೆ ವರದಿಯಾಗಿತ್ತು.
ಗೋಲ್ಡಿ ಬ್ರಾರ್ ಎಂದೇ ಕುಖ್ಯಾತನಾಗಿರುವ ಸತೀಂದರ್ಜಿತ್ ಸಿಂಗ್, ವಿದ್ಯಾರ್ಥಿ ವೀಸಾ ಮೂಲಕ 2007ರಲ್ಲಿ ಕೆನಾಡಗೆ ಹೋಗಿದ್ದ. ಕೊಲೆ, ಸುಲಿಗೆ ಸೇರಿದಂತೆ ತನ್ನ ಕ್ರಿಮಿನಲ್ ಚಟುವಟಿಕೆಗಳನ್ನು ಕೆನಡಾದಲ್ಲಿದ್ದುಕೊಂಡೇ ನಡೆಸುತ್ತಿದ್ದ. ಗಡಿಯಾಚೆಗಿನ ಏಜೆನ್ಸಿಯ ಬೆಂಬಲದೊಂದಿಗೆ ಬ್ರಾರ್ ಅನೇಕ ಹತ್ಯೆಗಳಲ್ಲಿ ತೊಡಗಿಸಿಕೊಂಡಿದ್ದ ಮತ್ತು ರಾಷ್ಟ್ರೀಯವಾದಿ ಪರ ನಾಯಕರಿಗೆ ಬೆದರಿಕೆ ಕರೆಗಳನ್ನು ಮಾಡುವಲ್ಲಿ ಮುಂಚೂಣಿಯಲ್ಲಿದ್ದ ಎಂದು ತಿಳಿದುಬಂದಿದೆ.
ಗೋಲ್ಡಿ ಬ್ರಾರ್ ಗಡಿಯಾಚೆಯಿಂದ ಡ್ರೋನ್‌ಗಳ ಮೂಲಕ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಸ್ಫೋಟಕ ವಸ್ತುಗಳನ್ನು ಕಳ್ಳಸಾಗಣೆಯಲ್ಲಿ ತೊಡಗಿಸಿಕೊಂಡಿದ್ದ. ಭಾರತದಲ್ಲಿ ಹಿಂಸಾತ್ಮಕ ಚಟುವಟಿಕೆಗಳಲ್ಲಿ ಈತನ ಪಾಲಿದೆ. ಬ್ರಾರ್ ಪಂಜಾಬ್‌ನ ಶಾಂತಿ, ಕೋಮು ಸೌಹಾರ್ದತೆ ಮತ್ತು ಕಾನೂನು ಮತ್ತು ಸುವ್ಯವಸ್ಥೆಯನ್ನು ಹಾಳು ಮಾಡುತ್ತಿದ್ದ. ವಿಧ್ವಂಸಕ ಕೃತ್ಯಗಳು, ಭಯೋತ್ಪಾದನಾ ಘಟಕಗಳನ್ನು ಹೆಚ್ಚಿಸುವುದು, ಉದ್ದೇಶಿತ ಹತ್ಯೆಗಳು ಮತ್ತು ಇತರ ದೇಶವಿರೋಧಿ ಚಟುವಟಿಕೆಗಳಿಗೆ ಈತ ಉತ್ತೇಜನ ನೀಡುತ್ತಿದ್ದ ಎಂದು ಕೇಂದ್ರ ಸರ್ಕಾರ ತಿಳಿಸಿದೆ. 2022ರ ಮೇ 29ರಂದು ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರನ್ನು ಹತ್ಯೆ ಮಾಡಲಾಗಿದ್ದು, ಈತನೇ ಮಾಸ್ಟರ್‌ಮೈಂಡ್ ಎಂದು ತಿಳಿದುಬಂದಿದೆ. ವರ್ಷಾರಂಭದಲ್ಲಿಯೇ ಈತನನ್ನು ಭಯೋತ್ಪಾದಕ ಎಂದು ಭಾರತ ಸರ್ಕಾರ ಘೋಷಿಸಿತ್ತು. ಸಿಧು ಹತ್ಯೆಯ ಮಾಸ್ಟರ್ ಮೈಂಡ್ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯಿ ಎಂಬುದು ಸ್ಪಷ್ಟವಾಗಿದೆ. ಬಿಷ್ಣೋಯಿಯನ್ನು ಈಗಾಗಲೇ ಎನ್ಐಎ ಕಸ್ಟಡಿಗೆ ತೆಗೆದುಕೊಂಡಿದೆ. ಈ ಬ್ರಾರ್ ಕೂಡ ಅದೇ ಬಿಷ್ಣೋಯಿ ಗ್ಯಾಂಗ್ನವನು.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ