Encounter | ಕುಖ್ಯಾತ ದರೋಡೆಕೋರನ ಕಾಲಿಗೆ ಪೊಲೀಸರಿಂದ ಗುಂಡೇಟು - Vistara News

ಕ್ರೈಂ

Encounter | ಕುಖ್ಯಾತ ದರೋಡೆಕೋರನ ಕಾಲಿಗೆ ಪೊಲೀಸರಿಂದ ಗುಂಡೇಟು

ಬೆಳ್ಳಂಬೆಳಗ್ಗೆ ತಪ್ಪಿಸಿಕೊಳ್ಳಲು ಯತ್ನಿಸಿದ ದರೋಡೆಕೋರನೊಬ್ಬನ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

robber
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನೆಲಮಂಗಲ: ಬೆಳ್ಳಂಬೆಳಗ್ಗೆ ತಪ್ಪಿಸಿಕೊಳ್ಳಲು ಯತ್ನಿಸಿದ ದರೋಡೆಕೋರನೊಬ್ಬನ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಬಂಧಿಸಿದ್ದಾರೆ.

ಕುತ್ಯಾತ ದರೋಡೆಕೋರ ಯೋಗಾನಂದ ಎಂಬಾತನನ್ನು ಗುಂಡು ಹಾರಿಸಿ ನೆಲಮಂಗಲ ಪೊಲೀಸರು ಬಂಧಿಸಿದ್ದಾರೆ. ನೆಲಮಂಗಲ ಟೌನ್ ಪೊಲೀಸ್ ಇನ್‌ಸ್ಪೆಕ್ಟರ್ ಶಶಿಧರ್‌ ಫೈರಿಂಗ್ ಮಾಡಿದ್ದಾರೆ.

encounter shashidhar
ಪೊಲೀಸ್‌ ಇನ್‌ಸ್ಪೆಕ್ಟರ್‌ ಶಶಿಧರ್

encounter
ಗಾಯಗೊಂಡು ಕಾನ್‌ಸ್ಟೇಬಲ್‌ ಹನುಮಂತ ಹಿಪ್ಪರಗಿ

ಪ್ರಕರಣವೊಂದರಲ್ಲಿ ಬಂಧಿಸಿದ ಯೋಗಾನಂದನನ್ನು ಸ್ಥಳ ಮಹಜರಿಗಾಗಿ ಕೃತ್ಯದ ಸ್ಥಳಕ್ಕೆ ಕರೆದೊಯ್ಯಲಾಗಿತ್ತು. ಸ್ಥಳದಲ್ಲಿ ಆತ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದಾನೆ. ಹಾಲೋ ಬ್ರಿಕ್‌ ತೆಗೆದುಕೊಂಡು ಕಾನ್‌ಸ್ಟೇಬಲ್ ಹನುಮಂತ ಹಿಪ್ಪರಗಿ ಕೈ ಮೇಲೆ ಎತ್ತಿಹಾಕಿದ್ದಾನೆ. ಆತ್ಮರಕ್ಷಣೆಗಾಗಿ ಪಿಐ ಶಶಿಧರ್‌ ಯೋಗಾನಂದ್ ಕಾಲಿಗೆ ಗುಂಡು ಹಾರಿಸಿದ್ದಾರೆ.

ಇದನ್ನೂ ಓದಿ | ಶೋಪಿಯಾನ್​ನಲ್ಲಿ ಮುಂಜಾನೆಯಿಂದಲೂ ಎನ್​ಕೌಂಟರ್​; ಜೈಷ್​ ಎ ಮೊಹಮ್ಮದ್​ ಸಂಘಟನೆಯ ಉಗ್ರನ ಹತ್ಯೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Road Accident: ಹೊಳಲ್ಕೆರೆ ಬಳಿ ಕಾರು ಪಲ್ಟಿ; ಶಿವಮೊಗ್ಗ ಮೂಲದ ವ್ಯಕ್ತಿ ಸಾವು, ಇನ್ನಿಬ್ಬರಿಗೆ ಗಾಯ

Road Accident: ಮೃತ ಮಂಜುನಾಥ್ ಬೆಂಗಳೂರಿನಲ್ಲಿ ಎಂಜಿನಿಯರ್ ಆಗಿದ್ದರು. ವೀಕೆಂಡ್‌ ಹಿನ್ನೆಲೆಯಲ್ಲಿ ಊರಿನತ್ತ ಹೊರಟಿದ್ದರು ಎನ್ನಲಾಗಿದೆ. ಕಾರು ವೇಗವಾಗಿದ್ದ ಕಾರಣ ಹೊಳಲ್ಕೆರೆ ಹೊರವಲಯದ ಕಣಿವೆ ತಿರುವಿನಲ್ಲಿ ಕಾರು ನಿಯಂತ್ರಣಕ್ಕೆ ಸಿಗಲಿಲ್ಲ. ಹೀಗಾಗಿ ಪಲ್ಟಿ ಹೊಡೆದಿದೆ. ಈ ವೇಳೆ ತೀವ್ರ ರಕ್ತಸ್ರಾವವಾಗಿ ಮಂಜುನಾಥ್‌ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇನ್ನಿಬ್ಬರಿಗೆ ಭಾರಿ ಗಾಯಗಳಾಗಿವೆ.

VISTARANEWS.COM


on

Road accident Car overturns near Holalkere Shivamogga man killed and two others injured
Koo

ಚಿತ್ರದುರ್ಗ: ಜಿಲ್ಲೆಯ ಹೊಳಲ್ಕೆರೆ ಹೊರವಲಯದ ಕಣಿವೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಣಿವೆಯಲ್ಲಿ (Road Accident) ಪಲ್ಟಿ ಹೊಡೆದಿದ್ದು, ಸ್ಥಳದಲ್ಲೇ ಒಬ್ಬರು ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಇನ್ನಿಬ್ಬರಿಗೆ ಗಂಭೀರವಾದ ಗಾಯಗಳಾಗಿವೆ.

ಮಂಜುನಾಥ (36) ಸ್ಥಳದಲ್ಲೇ ಮೃತಪಟ್ಟವರು. ಸತೀಶ್ ಹಾಗೂ ಸುಚೇತ ಎಂಬುವವರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಹೊಳಲ್ಕೆರೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಮೂವರೂ ಶಿವಮೊಗ್ಗ ಮೂಲದವರು ಎಂಬ ಮಾಹಿತಿ ಲಭ್ಯವಾಗಿದೆ.

ಇವರು ಬೆಂಗಳೂರಿನಿಂದ‌ ಶಿವಮೊಗ್ಗಕ್ಕೆ ಕಾರಲ್ಲಿ ಹೊರಟಿದ್ದರು. ಮೃತ ಮಂಜುನಾಥ್ ಬೆಂಗಳೂರಿನಲ್ಲಿ ಎಂಜಿನಿಯರ್ ಆಗಿದ್ದರು. ವೀಕೆಂಡ್‌ ಹಿನ್ನೆಲೆಯಲ್ಲಿ ಊರಿನತ್ತ ಹೊರಟಿದ್ದರು ಎನ್ನಲಾಗಿದೆ. ಕಾರು ವೇಗವಾಗಿದ್ದ ಕಾರಣ ಹೊಳಲ್ಕೆರೆ ಹೊರವಲಯದ ಕಣಿವೆ ತಿರುವಿನಲ್ಲಿ ಕಾರು ನಿಯಂತ್ರಣಕ್ಕೆ ಸಿಗಲಿಲ್ಲ. ಹೀಗಾಗಿ ಪಲ್ಟಿ ಹೊಡೆದಿದೆ. ಈ ವೇಳೆ ತೀವ್ರ ರಕ್ತಸ್ರಾವವಾಗಿ ಮಂಜುನಾಥ್‌ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇನ್ನಿಬ್ಬರಿಗೆ ಭಾರಿ ಗಾಯಗಳಾಗಿವೆ. ಹೊಳಲ್ಕೆರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಾಗಿದೆ.

Rowdy Sheeters: ಬೆಂಗಳೂರಲ್ಲಿ ಮತ್ತೆ ಝಳಪಿಸಿದ ಮಚ್ಚು ಲಾಂಗ್, ಬೀದಿಯಲ್ಲೇ ಅಟ್ಟಾಡಿಸಿದರು!

ಬೆಂಗಳೂರು: ರಾಜಧಾನಿ ನಗರದಲ್ಲಿ ಬೀದಿ ರೌಡಿಗಳಿಗೆ (Rowdy sheeters) ಯಾವ ಕಾನೂನಿನ ಕಟ್ಟುಪಾಡೂ ಇಲ್ಲದಾಗಿದೆ ಎಂಬುದಕ್ಕೆ ಇನ್ನೊಂದು ನಿದರ್ಶನ ಲಭ್ಯವಾಗಿದೆ. ನಗರದಲ್ಲಿ ಮತ್ತೆ ಮಚ್ಚು ಲಾಂಗುಗಳು ಝಳಪಿಸಿವೆ. ನಡು ರಸ್ತೆಯಲ್ಲೇ ರೌಡಿಗಳ ಗುಂಪು ಇನ್ನೊಬ್ಬ ರೌಡಿಯನ್ನು ಕೊಲೆ ಮಾಡಲೆಂದು ಅಟ್ಯಾಕ್ (Assault Case) ಮಾಡಿದೆ.

ತಿಪ್ಪಸಂದ್ರದದ ಬಳಿ ಯುವಕರ ಗುಂಪಿನಿಂದ ಅಟ್ಯಾಕ್ ನಡೆದಿದ್ದು, ದಾಳಿ ಮಾಡುವ ಸಿಸಿಟಿವಿ ದೃಶ್ಯ ಲಭ್ಯವಾಗಿದೆ. ಜೀವನ್ ಭೀಮಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬೈಯ್ಯಪ್ಪನಹಳ್ಳಿ ರೌಡಿಶೀಟರ್ ಶಿವ & ಟೀಂನಿಂದ ಅಟ್ಯಾಕ್ ನಡೆದಿದ್ದು, ಜೀವನ್ ಭೀಮಾನಗರ ರೌಡಿಶೀಟರ್ ಜೋಶ್ವಾ ಮೇಲೆ ಡೆಡ್ಲಿ ಅಟ್ಯಾಕ್ ಎಸಗಲಾಗಿದೆ.

ಆದರೆ ಜೋಶ್ವಾ ಇವರ ಕೈಗೆ ಸಿಗದಂತೆ ಪರಾರಿಯಾಗಿದ್ದಾನೆ. ಹಳೇ ದ್ವೇಷ ಹಿನ್ನೆಲೆಯಲ್ಲಿ ಬೈಯ್ಯಪ್ಪನಹಳ್ಳಿ ರೌಡಿಶೀಟರ್ ಶಿವ ಟೀಂನಿಂದ ಪ್ಲಾನ್‌ ಮಾಡಿ ಅಟ್ಯಾಕ್ ಮಾಡಲಾಗಿದೆ. ಅಟ್ಯಾಕ್ ಆಗುತ್ತಿದ್ದಂತೆ ಯಾರ ಕೈಗೂ ಸಿಗದೇ ತಿಪ್ಪಸಂದ್ರ ಮಾರ್ಕೆಟ್‌ಗೆ ನುಗ್ಗಿ ಜೋಶ್ವಾ ಎಸ್ಕೇಪ್ ಆಗಿದ್ದಾನೆ. ಸದ್ಯ ಘಟನೆ ಸಂಬಂಧ ಜೀವನ್ ಭೀಮಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಸಿಟಿವಿ ದೃಶ್ಯಾವಳಿ ಆಧರಿಸಿ ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆಬೀಸಿದ್ದಾರೆ.

Continue Reading

ಬೆಂಗಳೂರು

Murder case : ಬೆಂಗಳೂರಲ್ಲಿ ಮಹಿಳೆಯ ಬರ್ಬರ ಹತ್ಯೆ; ಹಂತಕರಿಗಾಗಿ ಪೊಲೀಸರ ಹುಡುಕಾಟ

Murder Case : ಬೆಂಗಳೂರಲ್ಲಿ ಮತ್ತೆ ರಕ್ತದೋಕುಳಿ ಹರಿದಿದೆ. ಜೋಡಿ ಕೊಲೆ ಕೇಸ್‌ ಮಾಸುವ ಮುನ್ನವೇ ಇದೀಗ ಮಹಿಳೆಯೊಬ್ಬರು ಬರ್ಬರವಾಗಿ ಕೊಲೆಯಾಗಿದ್ದಾರೆ. ಪೊಲೀಸರು ಘಟನಾ ಸ್ಥಳಕ್ಕೆ ದೌಡಾಯಿಸಿದ್ದು, ತನಿಖೆಯನ್ನು ಕೈಗೊಂಡಿದ್ದಾರೆ.

VISTARANEWS.COM


on

By

Murder Case
Koo

ಬೆಂಗಳೂರು: ರಾಜಧಾನಿ ಬೆಂಗಳೂರಲ್ಲಿ ದಿನಕ್ಕೊಂದು ಕೊಲೆ ಪ್ರಕರಣ (Murder Case) ದಾಖಲಾಗುತ್ತಿದೆ. ಬೆಂಗಳೂರಿನ ಕೊಡಿಗೇಹಳ್ಳಿಯ ಭದ್ರಪ್ಪ ಲೇಔಟನಲ್ಲಿ ಮಹಿಳೆಯೊಬ್ಬರ ಹತ್ಯೆಯಾಗಿದೆ. ಶೋಭಾ (48) ಎಂಬುವವರು ಕೊಲೆಯಾದವರು.

ಶೋಭಾ ಅವರಿಗೆ ಇಬ್ಬರು ಹೆಣ್ಣು ಮಕ್ಕಳಿಂದು ಅವರನ್ನು ಮದುವೆ ಮಾಡಿಕೊಟ್ಟಿದ್ದಾರೆ. ಮಗಳು ತಾಯಿಗೆ ಎಷ್ಟು ಬಾರಿ ಫೋನ್‌ ಮಾಡಿದರೂ ಶೋಭಾ ಸ್ವೀಕರಿಸಿರಲಿಲ್ಲ. ಇದರಿಂದ ಆತಂಕಗೊಂಡು, ಮನೆಗೆ ಬಂದು ನೋಡಿದಾಗ ತಾಯಿ ರಕ್ತಸಿಕ್ತವಾಗಿ ಬಿದ್ದಿದ್ದು ಕಣ್ಣಿಗೆ ಬಿದ್ದಿದೆ.

ಕೂಡಲೇ ಪೊಲೀಸರಿಗೆ ವಿಷಯವನ್ನು ಮುಟ್ಟಿಸಿದ್ದಾರೆ. ಸ್ಥಳಕ್ಕೆ ಕೊಡಿಗೇಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಹಿಳೆಯ ಮೃತದೇಹ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ಕೊಲೆ ಪ್ರಕರಣವನ್ನು ದಾಖಲು ಮಾಡಿಕೊಂಡಿರುವ ಪೊಲೀಸರು, ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.

ಇದನ್ನೂ ಓದಿ: Road Accident : ಯಮ ರೂಪಿ ಕೆಎಸ್‌ಆರ್‌ಟಿಸಿ ಬಸ್‌ಗೆ ಸ್ಕೂಟರ್‌ ಸವಾರ ಸಾವು, ಬಾಲಕ ಗಂಭೀರ

ಮಹಿಳೆಯರನ್ನು ಉಸಿರುಗಟ್ಟಿಸಿ ಪರಿಚಯಸ್ಥರೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಪೊಲೀಸರು, ಸುತ್ತಮುತ್ತಲಿನ ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದಾರೆ. ಪರಿಶೀಲನೆ ವೇಳೆ ಅನುಮಾನಾಸ್ಪದವಾಗಿ ಯುವಕನೊಬ್ಬ ಮನೆಗೆ ಹೋಗಿರುವ ಮಾಹಿತಿ ಸಿಕ್ಕಿದೆ. ಹೀಗಾಗಿ ಆ ಯುವಕನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಮಹಿಳೆ ಶವ ನಗ್ನವಾಗಿ ಪತ್ತೆಯಾಗಿರುವ ಹಿನ್ನೆಲೆ ಕೊಲೆ ಪ್ರಕರಣದಲ್ಲಿ ಹಲವು ಅನುಮಾನಗಳು ಮೂಡಿವೆ.

ಸಿಎಂ ಸಿದ್ದರಾಮಯ್ಯ ಬಳಿ ಗನ್‌ ತಂದಿದ್ದ ಕೇಸ್;‌ ನಾಲ್ವರು ಪೊಲೀಸರು ಸಸ್ಪೆಂಡ್

ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM Siddaramaiah) ಬೆಂಗಳೂರಿನಲ್ಲಿ ಲೋಕಸಭೆ ಚುನಾವಣೆ (Lok Sabha Election 2024) ಪ್ರಚಾರದಲ್ಲಿ ನಿರತರಾಗಿದ್ದ ವೇಳೆ ವ್ಯಕ್ತಿಯೊಬ್ಬ ಪಿಸ್ತೂಲ್‌ (Gun) ಸೊಂಟಕ್ಕೆ ಸಿಕ್ಕಿಸಿಕೊಂಡು ಹೋಗಿ, ಸಿಎಂ ಸೇರಿದಂತೆ ಮುಖಂಡರಿಗೆ ಹಾರ ಹಾಕಿದ ಪ್ರಕರಣದಲ್ಲಿ ಭದ್ರತಾ ವೈಫಲ್ಯ ಕಂಡುಬಂದಿದ್ದರಿಂದ ನಾಲ್ವರು ಪೊಲೀಸರನ್ನು ಅಮಾನತು ಮಾಡಲಾಗಿದೆ.

ಮುಖ್ಯಮಂತ್ರಿ ಬಳಿ ಹಾರ ಹಾಕಲು ಬಂದ ವ್ಯಕ್ತಿಯು ಗನ್ ಶೋ ಮಾಡಿದ ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ಭದ್ರತಾ ವೈಫಲ್ಯ ಹಿನ್ನೆಲೆಯಲ್ಲಿ ನಾಲ್ವರು ಪೊಲೀಸರನ್ನು ಅಮಾನತು ಮಾಡಿ ಆದೇಶಿಸಲಾಗಿದೆ. ಇನ್ಸ್‌ಪೆಕ್ಟರ್‌ ಅವರನ್ನು ಬಿಟ್ಟು ಕೆಳ ಹಂತದ ಅಧಿಕಾರಿಗಳು, ಸಿಬ್ಬಂದಿಯನ್ನು ಸಸ್ಪೆಂಡ್ ಮಾಡಲಾಗಿದೆ. ಪಿಎಸೈ ಮೆಹಬೂಬ್ ಹುಡ್ಡದಲ್ಲಿ, ಪೊಲೀಸ್ ಕಾನ್ಸ್‌ಟೇಬಲ್ ಮಂಜು ನಾಯಕ್, ಪೊಲೀಸ್ ಕಾನ್ಸ್‌ಟೇಬಲ್ ಸಚಿನ್ ಹಾಗೂ ಒಬ್ಬರು ಎಎಸ್‌ಐ ಅಮಾನತುಗೊಂಡಿದ್ದಾರೆ.

ಏನಿದು ಕೇಸ್‌?

ಏಪ್ರಿಲ್‌ 8ರಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಅಭ್ಯರ್ಥಿ ಸೌಮ್ಯಾ ರೆಡ್ಡಿ ಪರ ಸಿಎಂ ಸಿದ್ದರಾಮಯ್ಯ ರೋಡ್‌ ಶೋ ನಡೆಸುತ್ತಿದ್ದರು. ಈ ವೇಳೆ ಸಿದ್ದಾಪುರದ ಕಾಂಗ್ರೆಸ್ ಕಾರ್ಯಕರ್ತ ರಿಯಾಜ್ ಎಂಬಾತ ಸಿಎಂ ಬಳಿ ಬಂದು ಬೃಹತ್‌ ಹಾವನ್ನು ಹಾಕಿದ್ದಾಗ. ಆ ವೇಳೆ ರಿಯಾಜ್‌ ತನ್ನ ಸೊಂಟದಲ್ಲಿ ಇಟ್ಟುಕೊಂಡಿದ್ದ ರಿವಾಲ್ವರ್‌ ಸಾರ್ವಜನಿಕವಾಗಿ ಪ್ರದರ್ಶನಗೊಂಡಿತು. ಇದು ಮಾಧ್ಯಮಗಳಲ್ಲೂ ಬಿತ್ತರವಾಯಿತು. ಈ ಸಂಬಂಧ ಈಗ ತನಿಖೆ ನಡೆದಿದೆ. 5 ವರ್ಷದ ಹಿಂದೆ ರಿಯಾಜ್ ಮೇಲೆ ಕೊಲೆ ಯತ್ನ ಆಗಿತ್ತು. ಹೀಗಾಗಿ ಆತ ಲೈಸೆನ್ಸ್‌ ಪಡೆದುಕೊಂಡಿದ್ದರು.

ರಿಯಾಜ್‌ ಗನ್‌ ಮುಟ್ಟುಗೋಲು

ಎಲೆಕ್ಷನ್ ಸಮಯದಲ್ಲಿ ಗನ್ ಸರೆಂಡರ್‌ ಮಾಡಿರದ ರಿಯಾಜ್‌, ತಮಗೆ ಜೀವಭಯವಿದೆ ಎಂದು ಅರ್ಜಿ ನೀಡಿ ಅನುಮತಿಯನ್ನು ಪಡೆದುಕೊಂಡಿದ್ದರು. ಆದರೆ, ಸಿಎಂ ಸಿದ್ದರಾಮಯ್ಯ ಅವರ ಬಳಿ ಹೋಗುವಾಗ ಗನ್ ತೆಗೆದುಕೊಂಡು ಹೋಗಬಾರದಿತ್ತು. Z ಸೆಕ್ಯುರಿಟಿ ಭದ್ರತೆ ಸಿಎಂಗೆ ಇದೆ. ಹೀಗಾಗಿ ಸಿಎಂ ಬಳಿ ಬರುವವರನ್ನು ತಪಾಸಣೆ ನಡೆಸಿ ಹತ್ತಿರ ಬಿಡಬೇಕಿತ್ತು. ಗನ್ ಅನ್ನು ರಿಯಾಜ್‌ ಸಾರ್ವಜನಿಕವಾಗಿ ಪ್ರದರ್ಶನ ಮಾಡಿದ್ದಾರೆ. ಹೀಗಾಗಿ ರಿಯಾಜ್ ಗನ್ ಮುಟ್ಟುಗೋಲು ಹಾಕಿಕೊಳ್ಳುವಂತೆ ದಕ್ಷಿಣ ವಿಭಾಗ ಡಿಸಿಪಿಗೆ ಸೂಚನೆ ನೀಡಿದ್ದರು.

2019ರಲ್ಲಿ ರಿಯಾಜ್‌ ಮೇಲೆ ಹಲ್ಲೆ ನಡೆದಿತ್ತು

2019ರಲ್ಲಿ ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈತನ ಮೇಲೆ ಎಸ್‌ಡಿಪಿಐ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ಹೀಗಾಗಿ ಜೀವ ಬೆದರಿಕೆ ಇದೆ ಎಂಬ ಕಾರಣ ನೀಡಿ, ಗನ್ ಇಟ್ಟುಕೊಳ್ಳಲು ಲೈಸೆನ್ಸ್‌ಗೆ ಅರ್ಜಿ ಹಾಕಿದ್ದ.‌ ದಕ್ಷಿಣ ವಿಭಾಗ ಡಿಸಿಪಿ ಅರ್ಜಿ ಪರಿಶೀಲಿಸಿ ಗನ್ ಇಟ್ಟುಕೊಳ್ಳಲು ಅನುಮತಿ ನೀಡಿದ್ದರು. ರಿಯಲ್ ಎಸ್ಟೇಟ್ ಬ್ಯುಸಿನೆಸ್ ಮಾಡುತ್ತಿದ್ದ ಸೈಯದ್ ರಿಯಾಜ್‌ ಮೇಲೆ ಅಟ್ಯಾಕ್ ನಡೆದಿತ್ತು. ಈ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಹೀಗಾಗಿ ರಿಯಾಜ್‌ ಗನ್‌ ಪಡೆದುಕೊಂಡಿದ್ದ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ವೈರಲ್ ನ್ಯೂಸ್

Viral Video: ಅಂಗಡಿಯಲ್ಲಿ ಮೊಟ್ಟೆ ಕದ್ದು ಸಿಕ್ಕಿಬಿದ್ದ ಕಳ್ಳಿ, ವೈರಲ್ ಆದ ವಿಡಿಯೊ

Viral Video ಕೋಳಿ ಅಂಗಡಿಗೆ ಹೋದ ಮಹಿಳೆಯರಿಬ್ಬರು ಮಾಲೀಕನ ಕಣ್ತಪ್ಪಿಸಿ ಮೊಟ್ಟೆ ಕದ್ದು ಸಿಕ್ಕಿಬಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಈಗ ಎಲ್ಲೆಡೆ ವೈರಲ್ ಆಗಿದೆ.

VISTARANEWS.COM


on

Viral Video
Koo

ಮುಂಬೈ: ಇತ್ತೀಚಿನ ದಿನಗಳಲ್ಲಿ ಗೃಹಬಳಕೆಯ ವಸ್ತುಗಳ ಬೆಲೆ ಗಗನಕ್ಕೇರುತ್ತಿದೆ. ಅದರಲ್ಲಿ ಕೋಳಿ ಮೊಟ್ಟೆ ಕೂಡ ಒಂದು. ಈ ಹಿಂದೆ 5 ರೂಪಾಯಿಗಳಿಗೆ ಸಿಗುತ್ತಿದ್ದ ಕೋಳಿ ಮೊಟ್ಟೆಯ ಬೆಲೆ ಈಗ 7 ರೂಪಾಯಿ ಆಗಿದೆ. ಹಾಗಾಗಿ ಕೋಳಿ ಮೊಟ್ಟೆ ಪ್ರಿಯರು ಮೊಟ್ಟೆಗಳಿಗಾಗಿ ಪರದಾಡುವಂತಾಗಿದೆ. ದುಡ್ಡು ಕೊಟ್ಟು ಮೊಟ್ಟೆ (Egg) ತೆಗೆದುಕೊಳ್ಳುವುದಕ್ಕೆ ಆಗದವರು ಈಗ ಮೊಟ್ಟೆಯನ್ನು ಕದಿಯುವ ಪರಿಸ್ಥಿತಿ ಬಂದಿರುವುದು ಮಾತ್ರ ಖೇದಕರ ಸಂಗತಿ. ಇಂತಹದೊಂದು ಘಟನೆ ಮುಂಬೈನ ಕೋಳಿ ಅಂಗಡಿಯೊಂದರಲ್ಲಿ ನಡೆದಿದೆ. ಮಹಿಳೆಯೊಬ್ಬಳು ಕೋಳಿ ಅಂಗಡಿಯಲ್ಲಿ ಮೊಟ್ಟೆ ಕದಿಯುತ್ತಿರುವ ದೃಶ್ಯ ಸಿಸಿಟಿವಿ (CCTV) ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗಿದೆ.

ವಿಡಿಯೊದಲ್ಲಿ ಇಬ್ಬರು ಮಹಿಳೆಯರು ಕೋಳಿ ಅಂಗಡಿಯೊಳಗೆ ನಿಂತಿರುವುದನ್ನು ಕಾಣಬಹುದು. ಅಂಗಡಿ ಮಾಲೀಕನು ಇನ್ನೊಂದು ಕಡೆ ಮುಖ ಮಾಡಿ ಕೋಳಿ ಕತ್ತರಿಸುವುದರಲ್ಲಿ ನಿರತರಾಗಿದ್ದಾಗ ಆತನಿಗೆ ತಿಳಿಯದಂತೆ ಆತನ ಬೆನ್ನ ಹಿಂದೆ ಮಹಿಳೆ ಮೊಟ್ಟೆಗೆ ಕನ್ನ ಹಾಕಿದ್ದಾಳೆ.

ಮಹಿಳೆಯ ವರ್ತನೆ ಅನುಮಾನಾಸ್ಪಾದವಾಗಿ ಕಂಡುಬಂದ ಹಿನ್ನಲೆಯಲ್ಲಿ ಮಾಲೀಕ ಅವಳ ಬ್ಯಾಗ್ ಅನ್ನು ಪರಿಶಿಲಿಸಿದ್ದಾನೆ. ಆಗ ಆಕೆಯ ಬ್ಯಾಗ್ ನಲ್ಲಿ ಮೊಟ್ಟೆಗಳು ಕಂಡುಬಂದಿವೆ. ಆದರೆ ಮಹಿಳೆಯರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದರೂ ಕೂಡ ತಾವು ಮೊಟ್ಟೆ ಕದ್ದಿಲ್ಲ ಎಂದೇ ವಾದಿಸುತ್ತಿದ್ದರು. ಇದರಿಂದ ರೊಚ್ಚಿಗೆದ್ದ ವ್ಯಕ್ತಿ ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯವನ್ನು ನೋಡಿ ನಂತರ ಅಂಗಡಿಯ ಬಳಿ ನಿಂತಿದ್ದವರನ್ನು ಕರೆದಿದ್ದಾನೆ.

ಈ ವಿಡಿಯೊ ಕಂಡು ಸೋಷಿಯಲ್ ಮೀಡಿಯಾದಲ್ಲಿ ನೆಟಿಜನ್ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಅವಳು ಮೊಟ್ಟೆಗಳನ್ನು ಕದ್ದರು ನಂತರ ಕದ್ದಿಲ್ಲ ಎಂದು ಸುಳ್ಳು ಹೇಳುತ್ತಿದ್ದಾಳೆ. ಇದು ನಾಚಿಕೆಗೇಡಿನ ಸಂಗತಿ ಎಂದು ಒಬ್ಬರು ತಿಳಿಸಿದರೆ, ಇನ್ನೊಬ್ಬರು ಕ್ಯಾಮರಾ ಇಲ್ಲದಿದ್ದರೆ ಅಂಗಡಿಯವನಿಗೆ ಹೊಡೆತ ಬೀಳುತ್ತಿತ್ತು ಎಂದು ಬರೆದಿದ್ದಾರೆ.

ಇದನ್ನೂ ಓದಿ: Gut Health: ನಿಮ್ಮ ಕರುಳಿನ ಆರೋಗ್ಯಕ್ಕಾಗಿ ಬೇಸಿಗೆಯಲ್ಲಿ ಈ ಡ್ರಿಂಕ್ಸ್ ಸೇವಿಸಿ

ಇತ್ತೀಚಿನ ದಿನಗಳಲ್ಲಿ ಎಲ್ಲಾ ಕಡೆ ಸಿಸಿಟಿವಿಗಳನ್ನು ಅಳವಡಿಸಲಾಗುತ್ತಿದೆ. ಅಂಗಡಿ, ಶಾಪಿಂಗ್ ಮಾಲ್ ಗಳಲ್ಲಿ ಅಳವಡಿಸಲಾದ ಸಿಸಿಟಿವಿಗಳು ಬಹಳ ಪ್ರಯೋಜನಕಾರಿಯಾಗಿದೆ. ಇದರಿಂದ ಯಾವುದೇ ಘಟನೆಗಳನ್ನು ಮರುಪರಿಶೀಲನೆ ಮಾಡಬಹುದು. ಈ ಸಿಸಿಟಿವಿಗಳಿಂದ ಹಲವು ಪ್ರಕರಣಗಳನ್ನು ಪತ್ತೆ ಮಾಡಲಾಗುತ್ತಿದೆ.

Continue Reading

Lok Sabha Election 2024

‌CM Siddaramaiah : ಸಿಎಂ ಸಿದ್ದರಾಮಯ್ಯ ಬಳಿ ಗನ್‌ ತಂದಿದ್ದ ಕೇಸ್;‌ ನಾಲ್ವರು ಪೊಲೀಸರು ಸಸ್ಪೆಂಡ್

‌CM Siddaramaiah: ಮುಖ್ಯಮಂತ್ರಿ ಬಳಿ ಹಾರ ಹಾಕಲು ಬಂದ ವ್ಯಕ್ತಿಯು ಗನ್ ಶೋ ಮಾಡಿದ ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ಭದ್ರತಾ ವೈಫಲ್ಯ ಹಿನ್ನೆಲೆಯಲ್ಲಿ ನಾಲ್ವರು ಪೊಲೀಸರನ್ನು ಅಮಾನತು ಮಾಡಿ ಆದೇಶಿಸಲಾಗಿದೆ. ಇನ್ಸ್‌ಪೆಕ್ಟರ್‌ ಅವರನ್ನು ಬಿಟ್ಟು ಕೆಳ ಹಂತದ ಅಧಿಕಾರಿಗಳು, ಸಿಬ್ಬಂದಿಯನ್ನು ಸಸ್ಪೆಂಡ್ ಮಾಡಲಾಗಿದೆ. ಪಿಎಸೈ ಮೆಹಬೂಬ್ ಹುಡ್ಡದಲ್ಲಿ, ಪೊಲೀಸ್ ಕಾನ್ಸ್‌ಟೇಬಲ್ ಮಂಜು ನಾಯಕ್, ಪೊಲೀಸ್ ಕಾನ್ಸ್‌ಟೇಬಲ್ ಸಚಿನ್ ಹಾಗೂ ಒಬ್ಬರು ಎಎಸ್‌ಐ ಅಮಾನತುಗೊಂಡಿದ್ದಾರೆ.

VISTARANEWS.COM


on

Case of bringing gun to CM Siddaramaiah Four policemen suspended
Koo

ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM Siddaramaiah) ಬೆಂಗಳೂರಿನಲ್ಲಿ ಲೋಕಸಭೆ ಚುನಾವಣೆ (Lok Sabha Election 2024) ಪ್ರಚಾರದಲ್ಲಿ ನಿರತರಾಗಿದ್ದ ವೇಳೆ ವ್ಯಕ್ತಿಯೊಬ್ಬ ಪಿಸ್ತೂಲ್‌ (Gun) ಸೊಂಟಕ್ಕೆ ಸಿಕ್ಕಿಸಿಕೊಂಡು ಹೋಗಿ, ಸಿಎಂ ಸೇರಿದಂತೆ ಮುಖಂಡರಿಗೆ ಹಾರ ಹಾಕಿದ ಪ್ರಕರಣದಲ್ಲಿ ಭದ್ರತಾ ವೈಫಲ್ಯ ಕಂಡುಬಂದಿದ್ದರಿಂದ ನಾಲ್ವರು ಪೊಲೀಸರನ್ನು ಅಮಾನತು ಮಾಡಲಾಗಿದೆ.

ಮುಖ್ಯಮಂತ್ರಿ ಬಳಿ ಹಾರ ಹಾಕಲು ಬಂದ ವ್ಯಕ್ತಿಯು ಗನ್ ಶೋ ಮಾಡಿದ ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ಭದ್ರತಾ ವೈಫಲ್ಯ ಹಿನ್ನೆಲೆಯಲ್ಲಿ ನಾಲ್ವರು ಪೊಲೀಸರನ್ನು ಅಮಾನತು ಮಾಡಿ ಆದೇಶಿಸಲಾಗಿದೆ. ಇನ್ಸ್‌ಪೆಕ್ಟರ್‌ ಅವರನ್ನು ಬಿಟ್ಟು ಕೆಳ ಹಂತದ ಅಧಿಕಾರಿಗಳು, ಸಿಬ್ಬಂದಿಯನ್ನು ಸಸ್ಪೆಂಡ್ ಮಾಡಲಾಗಿದೆ. ಪಿಎಸೈ ಮೆಹಬೂಬ್ ಹುಡ್ಡದಲ್ಲಿ, ಪೊಲೀಸ್ ಕಾನ್ಸ್‌ಟೇಬಲ್ ಮಂಜು ನಾಯಕ್, ಪೊಲೀಸ್ ಕಾನ್ಸ್‌ಟೇಬಲ್ ಸಚಿನ್ ಹಾಗೂ ಒಬ್ಬರು ಎಎಸ್‌ಐ ಅಮಾನತುಗೊಂಡಿದ್ದಾರೆ.

ಏನಿದು ಕೇಸ್‌?

ಏಪ್ರಿಲ್‌ 8ರಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಅಭ್ಯರ್ಥಿ ಸೌಮ್ಯಾ ರೆಡ್ಡಿ ಪರ ಸಿಎಂ ಸಿದ್ದರಾಮಯ್ಯ ರೋಡ್‌ ಶೋ ನಡೆಸುತ್ತಿದ್ದರು. ಈ ವೇಳೆ ಸಿದ್ದಾಪುರದ ಕಾಂಗ್ರೆಸ್ ಕಾರ್ಯಕರ್ತ ರಿಯಾಜ್ ಎಂಬಾತ ಸಿಎಂ ಬಳಿ ಬಂದು ಬೃಹತ್‌ ಹಾವನ್ನು ಹಾಕಿದ್ದಾಗ. ಆ ವೇಳೆ ರಿಯಾಜ್‌ ತನ್ನ ಸೊಂಟದಲ್ಲಿ ಇಟ್ಟುಕೊಂಡಿದ್ದ ರಿವಾಲ್ವರ್‌ ಸಾರ್ವಜನಿಕವಾಗಿ ಪ್ರದರ್ಶನಗೊಂಡಿತು. ಇದು ಮಾಧ್ಯಮಗಳಲ್ಲೂ ಬಿತ್ತರವಾಯಿತು. ಈ ಸಂಬಂಧ ಈಗ ತನಿಖೆ ನಡೆದಿದೆ. 5 ವರ್ಷದ ಹಿಂದೆ ರಿಯಾಜ್ ಮೇಲೆ ಕೊಲೆ ಯತ್ನ ಆಗಿತ್ತು. ಹೀಗಾಗಿ ಆತ ಲೈಸೆನ್ಸ್‌ ಪಡೆದುಕೊಂಡಿದ್ದರು.

ರಿಯಾಜ್‌ ಗನ್‌ ಮುಟ್ಟುಗೋಲು

ಎಲೆಕ್ಷನ್ ಸಮಯದಲ್ಲಿ ಗನ್ ಸರೆಂಡರ್‌ ಮಾಡಿರದ ರಿಯಾಜ್‌, ತಮಗೆ ಜೀವಭಯವಿದೆ ಎಂದು ಅರ್ಜಿ ನೀಡಿ ಅನುಮತಿಯನ್ನು ಪಡೆದುಕೊಂಡಿದ್ದರು. ಆದರೆ, ಸಿಎಂ ಸಿದ್ದರಾಮಯ್ಯ ಅವರ ಬಳಿ ಹೋಗುವಾಗ ಗನ್ ತೆಗೆದುಕೊಂಡು ಹೋಗಬಾರದಿತ್ತು. Z ಸೆಕ್ಯುರಿಟಿ ಭದ್ರತೆ ಸಿಎಂಗೆ ಇದೆ. ಹೀಗಾಗಿ ಸಿಎಂ ಬಳಿ ಬರುವವರನ್ನು ತಪಾಸಣೆ ನಡೆಸಿ ಹತ್ತಿರ ಬಿಡಬೇಕಿತ್ತು. ಗನ್ ಅನ್ನು ರಿಯಾಜ್‌ ಸಾರ್ವಜನಿಕವಾಗಿ ಪ್ರದರ್ಶನ ಮಾಡಿದ್ದಾರೆ. ಹೀಗಾಗಿ ರಿಯಾಜ್ ಗನ್ ಮುಟ್ಟುಗೋಲು ಹಾಕಿಕೊಳ್ಳುವಂತೆ ದಕ್ಷಿಣ ವಿಭಾಗ ಡಿಸಿಪಿಗೆ ಸೂಚನೆ ನೀಡಿದ್ದರು.

ಇದನ್ನೂ ಓದಿ: Road Accident : ಯಮ ರೂಪಿ ಕೆಎಸ್‌ಆರ್‌ಟಿಸಿ ಬಸ್‌ಗೆ ಸ್ಕೂಟರ್‌ ಸವಾರ ಸಾವು, ಬಾಲಕ ಗಂಭೀರ

2019ರಲ್ಲಿ ರಿಯಾಜ್‌ ಮೇಲೆ ಹಲ್ಲೆ ನಡೆದಿತ್ತು

2019ರಲ್ಲಿ ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈತನ ಮೇಲೆ ಎಸ್‌ಡಿಪಿಐ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ಹೀಗಾಗಿ ಜೀವ ಬೆದರಿಕೆ ಇದೆ ಎಂಬ ಕಾರಣ ನೀಡಿ, ಗನ್ ಇಟ್ಟುಕೊಳ್ಳಲು ಲೈಸೆನ್ಸ್‌ಗೆ ಅರ್ಜಿ ಹಾಕಿದ್ದ.‌ ದಕ್ಷಿಣ ವಿಭಾಗ ಡಿಸಿಪಿ ಅರ್ಜಿ ಪರಿಶೀಲಿಸಿ ಗನ್ ಇಟ್ಟುಕೊಳ್ಳಲು ಅನುಮತಿ ನೀಡಿದ್ದರು. ರಿಯಲ್ ಎಸ್ಟೇಟ್ ಬ್ಯುಸಿನೆಸ್ ಮಾಡುತ್ತಿದ್ದ ಸೈಯದ್ ರಿಯಾಜ್‌ ಮೇಲೆ ಅಟ್ಯಾಕ್ ನಡೆದಿತ್ತು. ಈ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಹೀಗಾಗಿ ರಿಯಾಜ್‌ ಗನ್‌ ಪಡೆದುಕೊಂಡಿದ್ದ.

Continue Reading
Advertisement
Prajadhwani 2 Lok Sabha election campaign meeting at KR Nagar
ಮಂಡ್ಯ3 mins ago

Lok Sabha Election 2024: ನನ್ನನ್ನು ಗೆಲ್ಲಿಸಿ, ಕಾಂಗ್ರೆಸ್‌ಗೆ ಶಕ್ತಿ ತುಂಬಿ: ವೆಂಕಟರಮಣೇಗೌಡ ಮನವಿ

Uttara Kannada Lok Sabha Constituency BJP Candidate Vishweshwara Hegde Kageri latest Statement
ಉತ್ತರ ಕನ್ನಡ5 mins ago

Sirsi News: ಕಾಂಗ್ರೆಸ್ ಸರ್ಕಾರದ ಮತಾಂಧರ ಓಲೈಕೆಯೇ ನೇಹಾ ಹತ್ಯೆಗೆ ಕಾರಣ: ಕಾಗೇರಿ ಖಂಡನೆ

Narendra Modi
ಪ್ರಮುಖ ಸುದ್ದಿ6 mins ago

ಚಾಯ್‌ವಾಲಾ ಮೋದಿ ಐಐಟಿ ಬಗ್ಗೆ ಹೇಗೆ ಮಾತನಾಡುತ್ತಾರೆ ಎಂದ ಕಾಂಗ್ರೆಸ್ ನಾಯಕ; ಭುಗಿಲೆದ್ದ ವಿವಾದ

House roof collapsed due to heavy rain at ripponpet
ಶಿವಮೊಗ್ಗ6 mins ago

Karnataka Weather: ಭಾರಿ ಮಳೆಗೆ ಕುಸಿದು ಬಿದ್ದ ಮನೆ ಚಾವಣಿ; ಅಪಾರ ಹಾನಿ

Protest against Neha murder case in Yadgiri
ಯಾದಗಿರಿ8 mins ago

Yadgiri News: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹತ್ಯೆ ಖಂಡಿಸಿ ಯಾದಗಿರಿಯಲ್ಲಿ ಪ್ರತಿಭಟನೆ

Ballari Lok Sabha Congress candidate e Tukaram election campaign in Hagaribommanahalli
ರಾಜಕೀಯ8 mins ago

Lok Sabha Election 2024: ದೇಶದಲ್ಲಿ ಕ್ರಾಂತಿ ಮಾಡಿದ್ದು ಕಾಂಗ್ರೆಸ್‌ ಪಕ್ಷ: ಈ. ತುಕಾರಾಂ

Loka sabha election-2024
Lok Sabha Election 202410 mins ago

Loka sabha election-2024: ಮೋದಿ ಗೆದ್ದಿದ್ದ ವಡೋದರ ಕ್ಷೇತ್ರದಲ್ಲಿ ಬಿಜೆಪಿಯಿಂದ ಅಚ್ಚರಿಯ ಅಭ್ಯರ್ಥಿ!

Job News
ಉದ್ಯೋಗ13 mins ago

Job News: ಕೆಪಿಎಸ್‌ಸಿಯ 1 ಹುದ್ದೆಗೆ ಸರಾಸರಿ 508 ಅರ್ಜಿ ಸಲ್ಲಿಕೆ; ಒಟ್ಟು 1.95 ಲಕ್ಷ ಅಭ್ಯರ್ಥಿಗಳಿಂದ ಅಪ್ಲಿಕೇಷನ್‌

Road accident Car overturns near Holalkere Shivamogga man killed and two others injured
ಕರ್ನಾಟಕ13 mins ago

Road Accident: ಹೊಳಲ್ಕೆರೆ ಬಳಿ ಕಾರು ಪಲ್ಟಿ; ಶಿವಮೊಗ್ಗ ಮೂಲದ ವ್ಯಕ್ತಿ ಸಾವು, ಇನ್ನಿಬ್ಬರಿಗೆ ಗಾಯ

ಕರ್ನಾಟಕ23 mins ago

Neha Murder Case: ನೇಹಾ ಕೇಸ್ ತನಿಖೆಗೂ ಮೊದಲೇ ಪ್ರೀ ಜಡ್ಜ್ ಮೆಂಟ್: ಗೃಹಸಚಿವರ ವಿರುದ್ಧ ಜೋಶಿ ಆಕ್ರೋಶ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ4 hours ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20244 hours ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Modi in Karnataka Here live video of Modi rally in Chikkaballapur
Lok Sabha Election 20246 hours ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

Rain News
ಮಳೆ8 hours ago

Rain News : ಸಿಡಿಲಿಗೆ ವ್ಯಕ್ತಿ ಸೇರಿ ಜಾನುವಾರುಗಳು ಮೃತ್ಯು; ವ್ಯಾಪಕ ಮಳೆಗೆ ಜನರು ಕಂಗಾಲು

Neha Murder Case
ಹುಬ್ಬಳ್ಳಿ9 hours ago

Neha Murder Case : ನನ್ನ ಮಗನಿಗೆ ಶಿಕ್ಷೆ ಆಗಲಿ; ಇಬ್ಬರೂ ಲವ್‌ ಮಾಡ್ತಿದ್ದರು ಅನ್ನೋದು ಸತ್ಯ ಎಂದ ಫಯಾಜ್‌ ತಾಯಿ

Dina Bhavishya
ಭವಿಷ್ಯ15 hours ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಕೂಡಿಬರಲಿದೆ ಶುಭ ಘಳಿಗೆ

Neha Murder Case
ಹುಬ್ಬಳ್ಳಿ1 day ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ2 days ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ4 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ5 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

ಟ್ರೆಂಡಿಂಗ್‌