Site icon Vistara News

Fire accident | ಜಿಗಣಿ ಪ್ಲಾಸ್ಟಿಕ್‌ ಫ್ಯಾಕ್ಟರಿಯಲ್ಲಿ ಬೆಂಕಿ ಅನಾಹುತ

fire

ಆನೇಕಲ್‌: ಪ್ಲಾಸ್ಟಿಕ್ ಚೀಲ ಹಾಗೂ ಫರ್ನಿಚರ್‌ಗಳನ್ನು ತಯಾರು ಮಾಡುತ್ತಿದ್ದ ಕಾರ್ಖಾನೆಯಲ್ಲಿ ಬೆಳ್ಳಂ ಬೆಳಗ್ಗೆ ಭೀಕರ ಅಗ್ನಿ ದುರಂತ ಸಂಭವಿಸಿದೆ.

ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಜಿಗಣಿ ಕೈಗಾರಿಕಾ ಪ್ರದೇಶದಲ್ಲಿ ಘಟನೆ ನಡೆದಿದೆ. ಟ್ರೆವಿ ಫರ್ನಿಚರ್ ಪ್ರೈವೇಟ್ ಲಿಮಿಟೆಡ್ ಕಂಪನಿ ಹಾಗೂ ಸನ್ ಸೇನೆ ಕಾರ್ಖಾನೆಯಲ್ಲಿ ಬೆಂಕಿ ಹಬ್ಬಿದ್ದು, ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮುಂಜಾನೆ ಆಗಿದ್ದರಿಂದ ಕಾರ್ಮಿಕರು ಯಾರೂ ಕಾರ್ಖಾನೆಯಲ್ಲಿ ಇರಲಿಲ್ಲ. ರಾತ್ರಿ ಪಾಳಿ ಕೆಲಸ ಮುಗಿಸಿ ಕಾರ್ಮಿಕರು ಹೋಗಿದ್ದರು. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಧಾವಿಸಿದ್ದು, ಬೆಂಕಿಯನ್ನು ನಂದಿಸಲು ಹರಸಾಹಸ ಪಡುತ್ತಿದ್ದಾರೆ.

Exit mobile version