Site icon Vistara News

ಪಟಾಕಿ ಗೋದಾಮು ಬೆಂಕಿಗಾಹುತಿ; 9 ಸಾವು, ನೂರಕ್ಕೂ ಹೆಚ್ಚು ಮಂದಿ ಗಂಭೀರ

firecracker godown in Krishnagiri

ತಮಿಳುನಾಡು: ಇಲ್ಲಿನ ಕೃಷ್ಣಗಿರಿಯಲ್ಲಿ ಪಟಾಕಿ ಗೋದಾಮಿನಲ್ಲಿ ಅಗ್ನಿ ಅವಘಡ (Fire Accident) ಸಂಭವಿಸಿದೆ. ಪಟಾಕಿಗಳೆಲ್ಲವೂ ಸ್ಫೋಟಗೊಂಡು‌ (Fireworks godown) 9 ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ನೂರಾಕ್ಕೂ ಅಧಿಕ ಮಂದಿಗೆ ಗಂಭೀರ ಗಾಯಗೊಂಡಿದ್ದಾರೆ.

ಗೋಡೌನ್‌ನಲ್ಲಿ ಪಟಾಕಿಗಳನ್ನು ಲೋಡ್ ಮಾಡಿ ಇಡಲಾಗಿತ್ತು. ಆದರೆ ಏಕಾಏಕಿ ಎಲ್ಲವೂ ಸ್ಫೋಟಗೊಂಡಿದೆ. ನೋಡನೋಡುತ್ತಲ್ಲೇ ಅಕ್ಕಪಕ್ಕದ ಏಳೆಂಟು ಮನೆಗಳು ಸಂಪೂರ್ಣ ಧ್ವಂಸವಾಗಿದೆ. ಘಟನೆಯಲ್ಲಿ ಒಂಬತ್ತು ಜನರು ಬೆಂಕಿಗಾಹುತಿ ಆಗಿದ್ದಾರೆ. ನೂರಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದು, ದೇಹದ ಭಾಗಗಳೆಲ್ಲವೂ ಛಿದ್ರ ಛಿದ್ರವಾಗಿ ಬಿದ್ದಿದೆ.

ಜು.29 ಬೆಳಗ್ಗೆ 9.30ರ ಸುಮಾರಿಗೆ ಈ ಸ್ಫೋಟ ನಡೆದಿದೆ. ಜನವಸತಿ ಪ್ರದೇಶದಲ್ಲಿದ್ದ ಗೋಡೌನ್‌ನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಪಟಾಕಿಯನ್ನು ಶೇಖರಣೆ ಮಾಡಿ ಇಡಲಾಗಿತ್ತು. ಏಕಾಏಕಿ ಪಟಾಕಿ ಗೋಡೌನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಒಮ್ಮೆಲೆಗೆ ಪಟಾಕಿ ಎಲ್ಲ ಸಿಡಿದಿದೆ. ಇದರಿಂದಾಗಿ ಸ್ಥಳದಲ್ಲಿಯೇ 9 ಮಂದಿ ಜೀವ ಬಿಟ್ಟಿದ್ದಾರೆ.

ಗಾಯಗೊಂಡವರನ್ನು ಕೃಷ್ಣಗಿರಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version