Site icon Vistara News

Food Poisoning : ಇಲಿ ಬಿದ್ದ ಪಲ್ಯ ಸೇವಿಸಿದ ಎಸ್‌ ವ್ಯಾಸ ಕಾಲೇಜು ವಿದ್ಯಾರ್ಥಿಗಳಿಗೆ ವಾಂತಿ

Food Poisoning

ಆನೇಕಲ್: ಇಲಿ ಬಿದ್ದ ಪಲ್ಯ ಸೇವಿಸಿದ ಕಾಲೇಜು ವಿದ್ಯಾರ್ಥಿಗಳು (Food Poisoning)ಅಸ್ವಸ್ಥಗೊಂಡಿದ್ದಾರೆ. ಬೆಂಗಳೂರು ಹೊರವಲಯ ಜಿಗಣಿ ಸಮೀಪದ ಎಸ್.ವ್ಯಾಸ ಯೂನಿವರ್ಸಿಟಿಯಲ್ಲಿ ಘಟನೆ ನಡೆದಿದೆ.

ರಾತ್ರಿ ಕಾಲೇಜು ಹಾಸ್ಟೆಲ್‌ನಲ್ಲಿ ಎಲ್ಲ ವಿದ್ಯಾರ್ಥಿಗಳು ಊಟ ತಿಂದಿದ್ದಾರೆ. ಪಲ್ಯ ತಿಂದ ಸ್ವಲ್ಪ ಸಮಯದಲ್ಲೇ ಕೆಲ ವಿದ್ಯಾರ್ಥಿಗಳಿಗೆ ವಾಂತಿಯಾಗಿದೆ. ಈ ವೇಳೆ ಅನುಮಾನಗೊಂಡು ಪರಿಶೀಲಿಸಿದಾಗ ಸತ್ತ ಇಲಿ ಪ್ರತ್ಯಕ್ಷವಾಗಿದೆ. ಪಲ್ಯದಲ್ಲಿ ಇಲಿ ಬಿದ್ದಿರುವುದು ಕಂಡು ವಿದ್ಯಾರ್ಥಿಗಳು ಬೆಚ್ಚಿಬಿದ್ದಿದ್ದಾರೆ.

ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ಗಮ‌ನ ನೀಡದೆ ಬೇಜವಾಬ್ದಾರಿತನದಿಂದ ವರ್ತಿಸಿದ್ದಕ್ಕೆ ಕಾಲೇಜು ಆಡಳಿತ ಮಂಡಳಿ ವಿರುದ್ಧ ಪ್ರತಿಭಟನೆ ನಡೆಸಿದರು. ಬಳಿಕ ವಿದ್ಯಾರ್ಥಿಗಳ ಮನವೊಲಿಸಿದ ಕಾಲೇಜು ಆಡಳಿತ ಮಂಡಳಿ ಇನ್ಮುಂದೆ ಈ ರೀತಿಯ ತಪ್ಪುಗಳ ಆಗದಂತೆ ನೋಡಿಕೊಳ್ಳುವುದಾಗಿ ಹೇಳಿತ್ತು. ಹೀಗಾಗಿ ಪ್ರತಿಭಟನೆ ಕೈಬಿಟ್ಟು ತರಗತಿಗೆ ಹಾಜರಾದರು.

ಇದನ್ನೂ ಓದಿ: Physical Abuse : ಕಾಂಪೌಂಡ್‌ ಹಾರಿ ಬಂದ ಪುರಸಭೆ ಅಧ್ಯಕ್ಷೆಯ ಗಂಡನಿಗೆ ಚಳಿ ಬಿಡಿಸಿದ ಮಹಿಳೆಯರು

ಮೈಸೂರಲ್ಲಿ ಗೃಹ ಪ್ರವೇಶದ ಊಟ ತಿಂದ ವೃದ್ಧೆ ಸಾವು; 20ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಮೈಸೂರು: ಗೃಹ ಪ್ರವೇಶದಲ್ಲಿ ಊಟ ತಿಂದ ವೃದ್ಧೆಯೊಬ್ಬರು ತೀವ್ರ ಅಸ್ವಸ್ಥಗೊಂಡು (Food Poisoning) ಮೃತಪಟ್ಟಿದ್ದಾರೆ. ಶಿವಮ್ಮ (65) ಮೃತ ದುರ್ದೈವಿ. ಮೈಸೂರಿನ ಮಾರ್ಬಳ್ಳಿಯಲ್ಲಿ ಘಟನೆ ನಡೆದಿದೆ.

ಮಾರ್ಬಳ್ಳಿಯಲ್ಲಿ ಕಳೆದ ಶುಕ್ರವಾರ ಮನೆಯೊಂದರ ಗೃಹ ಪ್ರವೇಶ ಕಾರ್ಯಕ್ರಮವಿತ್ತು. ಈ ಗೃಹ ಪ್ರವೇಶ ಕಾರ್ಯದಲ್ಲಿ ಗ್ರಾಮಸ್ಥರು ಊಟ ಸೇವಿಸಿದ್ದರು. ಊಟದ ಬಳಿಕ ಸುಮಾರು ಮಕ್ಕಳು ಸೇರಿ 20ಕ್ಕೂ ಹೆಚ್ಚು ಮಂದಿಗೆ ವಾಂತಿ, ಭೇದಿ ಶುರುವಾಗಿತ್ತು.

ಇತ್ತ ತೀವ್ರ ಅಸ್ವಸ್ಥಗೊಂಡವರನ್ನು ಮೈಸೂರು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹಲವರಿಗೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲೇ ಚಿಕಿತ್ಸೆ ಕೊಡಲಾಗಿದೆ. ಗ್ರಾಮಕ್ಕೆ ಆರೋಗ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಫುಡ್ ಪಾಯ್ಸನ್ ಪ್ರಕರಣಕ್ಕೆ ಟ್ವಿಸ್ಟ್

ಗೃಹ ಪ್ರವೇಶದಲ್ಲಿ ಊಟ ಮಾಡದವರಿಗೂ ವಾಂತಿ ಭೇದಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಮೈಸೂರು ತಾಲೂಕಿನ ಮಾರ್ಬಳ್ಳಿ ಗ್ರಾಮದ 50ಕ್ಕೂ ಹೆಚ್ಚು ಜನರಲ್ಲಿ ವಾಂತಿ ಭೇದಿ ಕಾಣಿಸಿಕೊಂಡಿದೆ. 30ಕ್ಕೂ ಹೆಚ್ಚು ಜನರು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ಶುಕ್ರವಾರ ಗ್ರಾಮದಲ್ಲಿ ನಡೆದಿರುವ ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಸುಮಾರು 300ಕ್ಕೂ ಹೆಚ್ಚು ಜನರಿಗೆ ಊಟ ಬಡಿಸಲಾಗಿತ್ತು. ಮಾರ್ಬಳ್ಳಿ ಹೊರತು ಪಡಿಸಿ ಬೇರೆ ಗ್ರಾಮದಿಂದಲ್ಲೂ ಜನರು ಬಂದಿದ್ದರು. ಬೇರೆ ಗ್ರಾಮದ ಯಾರಲ್ಲೂ ಅನಾರೋಗ್ಯ ಕಾಣಿಸಿಕೊಂಡಿಲ್ಲ. ಇದನ್ನು ಹೊರತು ಪಡಿಸಿ ಅದೇ ಗ್ರಾಮದ ಜನರು ಊಟ ಸೇವಿಸದವರಿಗೆ ವಾಂತಿ ಭೇದಿ ಕಾಣಿಸಿಕೊಂಡಿದೆ. ಮೈಸೂರಿನ ಕೆ.ಸಾಲುಂಡಿ, ತಗಡೂರಿನಲ್ಲಿ ಕಾಲರಾ ಪತ್ತೆಯಾಗಿತ್ತು. ಇದೀಗ ಮತ್ತೊಂದು ಗ್ರಾಮದಲ್ಲೂ ಕಾಲರಾ ಏನಾದರೂ ಆವರಿಸಿದ್ಯಾ ಎಂಬ ಆತಂಕ ಹೆಚ್ಚಾಗಿದೆ. ಇಷ್ಟೆಲ್ಲ ನಡೆದರೂ ಆರೋಗ್ಯ ಇಲಾಖೆ‌‌ ಎಚ್ಚೆತ್ತುಕೊಂಡಿಲ್ಲ ಎಂಬ ಆರೋಪ ಕೇಳಿ ಬಂದಿದೆ.

Exit mobile version