Site icon Vistara News

Hit and Run | ನೆಲಮಂಗಲದಲ್ಲಿ ಕಾರು ಡಿಕ್ಕಿ, ವ್ಯಕ್ತಿ ಸಾವು

hit and run

ನೆಲಮಂಗಲ: ರಸ್ತೆ ದಾಟುತ್ತಿದ್ದ ಪಾದಚಾರಿಗೆ ಕಾರು ಡಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವಿಗೀಡಾದ ಘಟನೆ ನಡೆದಿದೆ. ಕಾರು ನಿಲ್ಲಿಸದೆ ಪರಾರಿಯಾಗಿದೆ.

ನೆಲಮಂಗಲ ತಾಲ್ಲೂಕಿನ ಬಿಲ್ಲಿನಕೋಟೆ ಬಳಿ ನಡೆದ ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಬಿಲ್ಲಿನಕೋಟೆ ನಿವಾಸಿ ಸಾಬು ಲಾಲ್ (26) ಮೃತ ದುರ್ದೈವಿ. ಬೆಂಗಳೂರು ಕಡೆಯಿಂದ ತುಮಕೂರಿನ ಕಡೆಗೆ ಅತೀ ವೇಗವಾಗಿ ತೆರಳುತ್ತಿದ್ದ ಕಾರು, ರಸ್ತೆ ದಾಟುತ್ತಿದ್ದ ಸಾಬುಲಾಲ್‌ಗೆ ಡಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಗಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.‌

ಇದನ್ನೂ ಓದಿ | Hit and Run Case | ಐಷರ್ ವಾಹನ‌ ಡಿಕ್ಕಿಯಾಗಿ ಮೂವರು ಕೂಲಿ ಕಾರ್ಮಿಕರ ಸಾವು

Exit mobile version