Site icon Vistara News

Karnataka Election 2023: ನೆಲಮಂಗಲದಲ್ಲಿ 8.8 ಲಕ್ಷ ರೂ. ಮೌಲ್ಯದ ವೈನ್‌ ಜಪ್ತಿ

Karnataka Election 2023

Karnataka Election 2023

ನೆಲಮಂಗಲ (ಬೆಂಗಳೂರು ಗ್ರಾಮಾಂತರ): ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಚುನಾವಣೆ ಅಧಿಕಾರಿಗಳು (Karnataka Election 2023) 8.8 ಲಕ್ಷ ರೂ. ಮೌಲ್ಯದ ವೈನ್‌ ಹಾಗೂ 5 ಲಕ್ಷ ರೂ. ಮೌಲ್ಯದ ಕೂಲ್‌ ಡ್ರಿಂಕ್ಸ್‌ ವಶಪಡಿಸಿಕೊಂಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 75ರ ಕರೇಕಲ್‌ ಗ್ರಾಮದ ಲ್ಯಾಂಕೋ ಟೋಲ್‌ ಬಳಿ ವಾಹನದಲ್ಲಿ ಸಾಗಿಸುತ್ತಿದ್ದಾಗ ಚುನಾವಣೆ ಅಧಿಕಾರಿಗಳು ಹಾಗೂ ಪೊಲೀಸರು ತಡೆದು ಜಪ್ತಿ ಮಾಡಿದ್ದಾರೆ. ವಾಹನ ಚಾಲಕನನ್ನು ವಶಪಡಿಸಿಕೊಳ್ಳಲಾಗಿದ್ದು, ನೆಲಮಂಗಲ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದಾಖಲೆ ಇಲ್ಲದೆ ಸಾಗಿಸುತ್ತಿದ್ದ 10 ಲಕ್ಷ ರೂ. ವಶಕ್ಕೆ

ಬೆಂಗಳೂರಿನ ಆರ್‌ಟಿ ನಗರದಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 10 ಲಕ್ಷ ರೂಪಾಯಿಯನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಟಿವಿ ಟವರ್‌ ಸಮೀಪದ ಚೆಕ್‌ಪೋಸ್ಟ್‌ ಮೂಲಕ ಬೆಂಜ್‌ ಕಾರಿನಲ್ಲಿ ತೆರಳುವಾಗ ಅಧಿಕಾರಿಗಳು ಕಾರಿನಲ್ಲಿ ತಪಾಸಣೆ ನಡೆಸಿದ್ದಾರೆ. ಇದೇ ವೇಳೆ ದಾಖಲೆ ಇಲ್ಲದ 10 ಲಕ್ಷ ರೂಪಾಯಿಯನ್ನು ವಶಪಡಿಸಿಕೊಳ್ಳಲಾಗಿದೆ. ಕಾರಿನಲ್ಲಿದ್ದ ಮೊಹಮ್ಮದ್ ಷರೀಫ್ ಹಾಗೂ ಮೊಹಮ್ಮದ್‌ ಯುನುಸ್‌ ಎಂಬುವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಚುನಾವಣೆ ದಿನಾಂಕ ಘೋಷಣೆಯಾದಾಗಿನಿಂದ ಇದುವರೆಗೆ ವಿಚಕ್ಷಣ ದಳ, ಪೊಲೀಸ್‌ ಅಧಿಕಾರಿಗಳು, ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಸೇರಿ ಹಲವು ತಂಡಗಳು ಕಾರ್ಯಾಚರಣೆ ನಡೆಸಿ ಇದುವರೆಗೆ 265 ಕೋಟಿ ರೂ. ಮೌಲ್ಯದ ನಗದು, ಮದ್ಯ, ಆಭರಣ ಸೇರಿ ಹಲವು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ: Karnataka Election 2023: ಕುಣಿಯುತ್ತಿದೆ ಕುರುಡು ಕಾಂಚಾಣ; 265 ಕೋಟಿ ರೂ. ಮೌಲ್ಯದ ನಗದು, ಆಭರಣ ಜಪ್ತಿ

88 ಕೋಟಿ ರೂ. ನಗದು, 20.62 ಕೋಟಿ ರೂ. ಮೌಲ್ಯದ ಉಚಿತ ಉಡುಗೊರೆಗಳು (ಕುಕ್ಕರ್‌ ಸೇರಿ ಹಲವು ವಸ್ತುಗಳು), 59.92 ಕೋಟಿ ರೂ. ಮೌಲ್ಯದ ಮದ್ಯ, 17.14 ಕೋಟಿ ರೂ. ಮೌಲ್ಯದ ಮಾದಕದ್ರವ್ಯ ಹಾಗೂ 79.47 ಕೋಟಿ ರೂ. ಮೌಲ್ಯದ ಬಂಗಾರ ಹಾಗೂ ಬೆಳ್ಳಿಯ ಆಭರಣಗಳು ಸೇರಿ 265 ಕೋಟಿ ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.

Exit mobile version