Site icon Vistara News

Karnataka Election: ಮಹದೇವಪುರ ಕ್ಷೇತ್ರದಲ್ಲಿ ಮಾದಿಗ ಸಮುದಾಯಕ್ಕೆ ಟಿಕೆಟ್ ನೀಡಲು ಒತ್ತಾಯ

adijambava

ಕೆ.ಆರ್ ಪುರ: ರಾಜಕೀಯವಾಗಿ ಹಿಂದುಳಿದಿರುವ ಮಾದಿಗ ಸಮುದಾಯದ ಮುಖಂಡರಿಗೆ ಮಹದೇವಪುರ ಮೀಸಲು ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ರಾಷ್ಟ್ರೀಯ ಪಕ್ಷಗಳು ಮತ್ತು ಪ್ರಾದೇಶಿಕ ಪಕ್ಷಗಳು ಟಿಕೆಟ್ ನೀಡಬೇಕೆಂದು ಬೆಂಗಳೂರು ಪೂರ್ವ ತಾಲೂಕು ಆದಿಜಾಂಬವ ಜನ ಸಂಘ, ಕರ್ನಾಟಕ ದಲಿತ ಸಂಘರ್ಷ ಸಮಿತಿ ಒತ್ತಾಯಿಸಿದೆ.

ಕೆಆರ್ ಪುರದಲ್ಲಿರುವ ಬೆಂಗಳೂರು ಪೂರ್ವ ತಾಲೂಕು ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ಪೂರ್ವ ತಾಲೂಕು ಅಧ್ಯಕ್ಷ ವಿ.ಕೃಷ್ಣಮೂರ್ತಿ, ಮಹದೇವಪುರ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಮಾದಿಗ ಸಮುದಾಯದ ಮುಖಂಡರಿಗೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷದಲ್ಲಿ ಟಿಕೆಟ್ ನೀಡುವ ಮೂಲಕ ನಮ್ಮ ಸಮುದಾಯಕ್ಕೆ ಸಾಮಾಜಿಕ ನ್ಯಾಯ ದೊರಕಿಸಿಕೊಡಬೇಕು ಎಂದರು.

2008ರಲ್ಲಿ ವರ್ತೂರು ವಿಧಾನಸಭಾ ಕ್ಷೇತ್ರದಿಂದ ಪುನರ್ ವಿಂಗಡನೆ ನಂತರ ರಚನೆಯಾದ ಮಹದೇವಪುರ ಮೀಸಲು ಕ್ಷೇತ್ರದಲ್ಲಿ ರಾಜಕೀಯ ಪಕ್ಷಗಳು ಅತಿ ಕಡಿಮೆ ಜನಸಂಖ್ಯೆ ಹೊಂದಿರುವ ಭೋವಿ ಜನಾಂಗದವರಿಗೆ ಸತತವಾಗಿ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿದ್ದಾರೆ. ಕ್ಷೇತ್ರದಲ್ಲಿ 70 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಇರುವ ಮಾದಿಗ ಸಮುದಾಯಕ್ಕೆ ಅನ್ಯಾಯ ಮಾಡಲಾಗುತ್ತಿದೆ. ಆದರೆ ಬಹುಸಂಖ್ಯಾತರಾಗಿರುವ ನಮ್ಮ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡುತ್ತಿಲ್ಲ. 15 ವರ್ಷದಿಂದ ನಮ್ಮ ಸಮುದಾಯದ ಯಾವೊಬ್ಬ ಮುಖಂಡರಿಗೂ ಟಿಕೆಟ್ ನೀಡದೆ ವಂಚಿಸಲಾಗುತ್ತಿದೆ. ಹೆಚ್ಚಿನ ಜನಸಂಖ್ಯೆ ಹೊಂದಿರುವ ಮಾದಿಗ ಸಮುದಾಯಕ್ಕೆ ಪ್ರಾತಿನಿಧ್ಯ ದೊರಕಿಸಿಕೊಡಬೇಕು. ಆದ್ದರಿಂದ ಪಕ್ಷಗಳ ಹೈಕಾಮಾಂಡ್ ಈ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ: Karnataka Election 2023 : ನಾಮಪತ್ರ ಸಲ್ಲಿಕೆಗೆ ಇಂದು ಶುಭ ದಿನ; ನೂರಾರು ಅಭ್ಯರ್ಥಿಗಳಿಂದ ನಾಮಿನೇಷನ್‌ ಸಾಧ್ಯತೆ

Exit mobile version