ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ನ ಮಾಜಿ ಶಾಸಕ ಹಾಗೂ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದ ವೆಂಕಟಸ್ವಾಮಿ ಅವರು ತೀವ್ರ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ.
ದೇವನಹಳ್ಳಿಯ ಕಾಂಗ್ರೆಸ್ ಮುಖಂಡರಾಗಿದ್ದ ವೆಂಕಟಸ್ವಾಮಿ ಹೃದಯಾಘಾತ ಮರುಕಳಿಸಿ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕಳೆದ ಒಂದು ತಿಂಗಳಲ್ಲಿ ಮೂರು ಬಾರಿ ಅವರಿಗೆ ಎದೆ ನೋವು ಬಂದಿತ್ತು. ಕಳೆದ ಎರಡು ಬಾರಿ ಕುಟುಂಬಸ್ಥರು ಆಸ್ವತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿದ್ದರು. ವೆಂಕಟಸ್ವಾಮಿ ಅವರಿಗೆ ಇಬ್ಬರು ಮಕ್ಕಳು ಮತ್ತು ಪತ್ನಿ ಇದ್ದಾರೆ.
ಈ ಬಾರಿಯು ಬೆಂಗಳೂರು ಗ್ರಾಮಾಂತರದಲ್ಲಿ ಕಾಂಗ್ರೆಸ್ ಟಿಕೆಟ್ ಸಿಗುತ್ತದೆ ಎಂದು ಕ್ಷೇತ್ರದಲ್ಲಿ ಭರ್ಜರಿ ಪ್ರಮಾಣದಲ್ಲಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದರು. ಆದರೆ ಟಿಕೆಟ್ ಕೈ ತಪ್ಪಿದ ಕಾರಣ ಬೇಸರಗೊಂಡಿದ್ದರು. ಆದರೂ ಪಕ್ಷದ ಪರವಾಗಿ ದುಡಿಯುತ್ತಿದ್ದರು.
ಮೃತರ ಸಾದಹಳ್ಳಿಯ ಮನೆ ಬಳಿ ಪಾರ್ಥಿವ ಶರೀರ ದರ್ಶನಕ್ಕೆ ಸಾರ್ವಜನಿಕರಿಗೆ ವ್ಯವಸ್ಥೆ ಮಾಡಲಾಗಿದೆ. ಸಾದಹಳ್ಳಿ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಹಲವು ಕೈ ನಾಯಕರು ಮೃತರ ಅಂತಿಮ ದರ್ಶನಕ್ಕೆ ಆಗಮಿಸುವ ಸಾಧ್ಯತೆ ಇದೆ.
ಇದನ್ನೂ ಓದಿ: Road Accident: ಕಾರು ಅಪಘಾತ, ಬಾಬುರಾವ್ ಚಿಂಚನಸೂರ್ಗೆ ಗಾಯ