Site icon Vistara News

Lok Sabha Election 2024 : ಲೋಕಸಭೆ ಎಲೆಕ್ಷನ್;‌ ಏಪ್ರಿಲ್‌ 26ರಂದು ಬನ್ನೇರುಘಟ್ಟ ಪಾರ್ಕ್‌ ಕ್ಲೋಸ್‌

Lok sabha Election Bannerghatta Park to be closed on April 26

ಬೆಂಗಳೂರು: ಲೋಕಸಭೆ ಚುನಾವಣೆ (Lok sabha Election 2024) ಹಿನ್ನೆಲೆಯಲ್ಲಿ ಶೇ 100ಕ್ಕೆ 100ರಷ್ಟು ಮತದಾನ (Voting) ಆಗಬೇಕೆಂದು, ಚುನಾವಣಾ ಆಯೋಗ ನಾನಾ ಕಸರತ್ತುಗಳನ್ನು ಮಾಡುತ್ತಿದೆ. ಚುನಾವಣಾ ಆಯೋಗಕ್ಕೆ ಸಾಥ್‌ ನೀಡಿರುವ ಬನ್ನೇರುಘಟ್ಟ ಜೈವಿಕ ಉದ್ಯಾನವನ (Bannerghatta National Park) ಆಡಳಿತ ಮಂಡಳಿ ಮತದಾನದ ದಿನದಂದು ರಜೆ ಘೋಷಣೆ ಮಾಡಿದೆ.

ಲೋಕಸಭಾ ಚುನಾವಣೆ (Lok Sabha Election 2024) ಸಂಬಂಧ ರಾಜಕೀಯ ಪಕ್ಷಗಳಂತೆ ಚುನಾವಣಾ ಆಯೋಗವೂ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಇನ್ನು ಕರ್ನಾಟಕದಲ್ಲಿ ಏಪ್ರಿಲ್ 26 ಹಾಗೂ ಮೇ 7 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯುತ್ತಿರುವುದರಿಂದ ಮತದಾನ ನಡೆಯುವ (Voting Day) ಆ ಎರಡು ದಿನವೂ ಸಾರ್ವತ್ರಿಕ ರಜೆಯನ್ನು (Government Holiday) ಘೋಷಿಸಲಾಗಿದೆ. ಸರ್ಕಾರಿ ನೌಕರರಿಗೆ ವೇತನ ಸಹಿತ ರಜೆಯನ್ನು (Paid leave) ಘೋಷಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶಿಸಿದ್ದಾರೆ.

ಏಪ್ರಿಲ್ 26 ರಂದು ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆದರೆ, 2ನೇ ಹಂತದ ಮತದಾನವು ಮೇ 7ರಂದು ನಡೆಯಲಿದೆ. ಈ ದಿನಗಳಂದು ಎಲ್ಲ ರಾಜ್ಯ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು, ಎಲ್ಲ ವ್ಯಾವಹಾರಿಕ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು ಹಾಗೂ ಇನ್ನಿತರ ಸಂಸ್ಥೆಗಳಲ್ಲಿ ಕಾಯಂ ಆಗಿ ಹಾಗೂ ದಿನಗೂಲಿ ಮೇಲೆ ಕೆಲಸ ನಿರ್ವಹಿಸುವ ನೌಕರರಿಗೆ ವೇತನ ಸಹಿತ ರಜೆ ಘೋಷಣೆ ಮಾಡಲಾಗಿದೆ.

ರಜೆ ಸಿಕ್ಕ ಖುಷಿಯಲ್ಲಿ ಮತದಾರರು ಮತದಾನ ಪ್ರಕ್ರಿಯೆಯಲ್ಲಿ ಭಾಗಿಯಾಗದೆ ಪ್ರವಾಸಕ್ಕೆ ತೆರಳುವ ಸಾಧ್ಯತೆ ಇದೆ. ಹೀಗಾಗಿ ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಝೂ, ಸಫಾರಿ ಮತ್ತು ಚಿಟ್ಟೆ ಪಾರ್ಕ್ ಪ್ರವಾಸಿಗರ ವೀಕ್ಷಣೆಗೆ ಲಭ್ಯವಿರುವುದಿಲ್ಲ. ಏಪ್ರಿಲ್‌ 26ರಂದು ಮತದಾನ ಹಿನ್ನೆಲೆಯಲ್ಲಿ ಬನ್ನೇರುಘಟ್ಟ ಜೈವಿಕ ಉದ್ಯಾನಕ್ಕೆ ರಜೆ ಘೋಷಿಸಲಾಗಿದೆ. ಲೋಕಸಭಾ ಚುನಾವಣೆಯ ಮತದಾನದಲ್ಲಿ ಜನರು ಸಕ್ರಿಯವಾಗಿ ಭಾಗಿಯಾಗಲೆಂದು ರಜೆ ಘೋಷಣೆ ಮಾಡಲಾಗಿದೆ.

ಮತದಾನದ ಪ್ರಮಾಣ ಹೆಚ್ಚಳ ಮಾಡುವ ದೃಷ್ಟಿಯಿಂದ ಏಪ್ರಿಲ್‌ 26ರಂದು ಬನ್ನೇರುಘಟ್ಟ ಪಾರ್ಕ್‌ ರಜೆ ಇರಲಿದೆ. 26 ಬದಲಾಗಿ ಏಪ್ರಿಲ್‌ 30ರಂದು ಪಾರ್ಕ್‌ ತೆರೆಯಲಿದೆ. ಬನ್ನೇರುಘಟ್ಟ ಪಾರ್ಕ್‌ ಪ್ರತಿ ಮಂಗಳವಾರ ರಜೆ ಇರುತ್ತಿತ್ತು. ಆದರೆ 26ರ ರಜೆಯನ್ನು ಸರಿದೂಗಿಸುವ ಸಲುವಾಗಿ ಏಪ್ರಿಲ್‌ 30ರಂದು ಪ್ರವಾಸಿಗರ ವೀಕ್ಷಣೆಗೆ ಲಭ್ಯ ಇರಲಿದೆ.

ಇದನ್ನೂ ಓದಿ: Namma Metro: ಮತ್ತೆ ಅವಮಾನ ಮಾಡಿದ ನಮ್ಮ ಮೆಟ್ರೋ; ಬಟನ್‌ ಇಲ್ಲದ್ದಕ್ಕೆ ಕಾರ್ಮಿಕನಿಗೆ ಪ್ರವೇಶ ನೀಡದ ಸಿಬ್ಬಂದಿ!

ಏಪ್ರಿಲ್‌ 26ರಂದು ಮತದಾನ ನಡೆಯುವ ಕ್ಷೇತ್ರಗಳು: ದಕ್ಷಿಣ ಕರ್ನಾಟಕ

1.ಉಡುಪಿ-ಚಿಕ್ಕಮಗಳೂರು (ಸಾಮಾನ್ಯ)
2.ಹಾಸನ (ಸಾಮಾನ್ಯ)
3.ದಕ್ಷಿಣ ಕನ್ನಡ (ಸಾಮಾನ್ಯ)
4.ಚಿತ್ರದುರ್ಗ (ಪರಿಶಿಷ್ಟ ಜಾತಿ ಮೀಸಲು)
5. ತುಮಕೂರು (ಸಾಮಾನ್ಯ)
6.ಮಂಡ್ಯ (ಸಾಮಾನ್ಯ)
7.ಮೈಸೂರು-ಕೊಡಗು (ಸಾಮಾನ್ಯ)
8.ಚಾಮರಾಜನಗರ (ಪರಿಶಿಷ್ಟ ಜಾತಿ ಮೀಸಲು)
9. ಬೆಂಗಳೂರು ಗ್ರಾಮಾಂತರ (ಸಾಮಾನ್ಯ)
10 ಬೆಂಗಳೂರು ಉತ್ತರ (ಸಾಮಾನ್ಯ)
11. ಬೆಂಗಳೂರು ಕೇಂದ್ರ (ಸಾಮಾನ್ಯ)
12. ಬೆಂಗಳೂರು ದಕ್ಷಿಣ (ಸಾಮಾನ್ಯ)
13.ಚಿಕ್ಕಬಳ್ಳಾಪುರ (ಸಾಮಾನ್ಯ)
14.ಕೋಲಾರ (ಪರಿಶಿಷ್ಟ ಜಾತಿ ಮೀಸಲು)

ಮೇ 7ರಂದು ಚುನಾವಣೆ ನಡೆಯಲಿರುವ ಕ್ಷೇತ್ರಗಳು: ಉತ್ತರ ಕರ್ನಾಟಕ

1.ಚಿಕ್ಕೋಡಿ (ಸಾಮಾನ್ಯ)
2.ಬೆಳಗಾವಿ (ಸಾಮಾನ್ಯ)
3.ಬಾಗಲಕೋಟೆ (ಸಾಮಾನ್ಯ)
4.ಬಿಜಾಪುರ (ಪರಿಶಿಷ್ಟ ಜಾತಿ ಮೀಸಲು)
5.ಕಲಬುರಗಿ (ಪರಿಶಿಷ್ಟ ಜಾತಿ ಮೀಸಲು)
6.ರಾಯಚೂರು(ಪರಿಶಿಷ್ಟ ಪಂಗಡ ಮೀಸಲು)
7.ಬೀದರ್ (ಸಾಮಾನ್ಯ)
8,ಕೊಪ್ಪಳ (ಸಾಮಾನ್ಯ)
9.ಬಳ್ಳಾರಿ (ಪರಿಶಿಷ್ಟ ಪಂಗಡ ಮೀಸಲು)
10. ಹಾವೇರಿ (ಸಾಮಾನ್ಯ)
11. ಧಾರವಾಡ (ಸಾಮಾನ್ಯ)
12.ಉತ್ತರ ಕನ್ನಡ (ಸಾಮಾನ್ಯ)
13.ದಾವಣಗೆರೆ (ಸಾಮಾನ್ಯ)
14.ಶಿವಮೊಗ್ಗ (ಸಾಮಾನ್ಯ)

ಇದನ್ನೂ ಓದಿ: Lok Sabha Election 2024: ಕರ್ನಾಟಕದಲ್ಲಿ ಮತದಾನ ನಡೆಯುವ 2 ದಿನವೂ ಸಾರ್ವತ್ರಿಕ ರಜೆ ಘೋಷಣೆ

ಗನ್‌ ಇಟ್ಟುಕೊಂಡು ಸಿಎಂಗೆ ಹಾರ ಹಾಕಿದ ಕೇಸ್‌; ಸರ್ಕಾರಕ್ಕೆ ಆರ್‌. ಅಶೋಕ್‌, ವಿಜಯೇಂದ್ರ ಕ್ಲಾಸ್‌

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ರೋಡ್‌ ಶೋ ನಡೆಸುವ ವೇಳೆ ಸೊಂಟದಲ್ಲಿ ಗನ್‌ ಇಟ್ಟುಕೊಂಡಿದ್ದ ವ್ಯಕ್ತಿ ಸಿಎಂಗೆ ಹಾರ ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ನಾಯಕರು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕಾಂಗ್ರೆಸ್‌ನದ್ದು ಗೂಂಡಾ ರಾಜ್ಯ, ಪೊಲೀಸ್‌ ಇಲಾಖೆ ಸತ್ತಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ (R Ashok) ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಸಹ ಆಕ್ರೋಶ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಎಂಥವರನ್ನು ಕಟ್ಟಿಕೊಂಡು ಚುನಾವಣೆ ನಡೆಸಲು ಹೊರಟಿದೆ ಎಂಬುದಕ್ಕೆ ಈ ಘಟನೆ ಸಾಕ್ಷಿ ಒದಗಿಸಿದೆ ಎಂದು ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಆರ್.‌ ಅಶೋಕ್‌, ಕಾಂಗ್ರೆಸ್‌ ಕಾರ್ಯಕರ್ತರು ಗನ್‌ ಇಟ್ಟುಕೊಂಡು ಓಡಾಡುವ ಮೂಲಕ ತಮ್ಮದು ಗೂಂಡಾ ರಾಜ್ಯ ಎಂದು ತೋರಿಸಿಕೊಂಡಿದ್ದಾರೆ. ಇಂತಹ ಘಟನೆಯಿಂದ ಪೊಲೀಸ್‌ ಇಲಾಖೆ ಬದುಕಿದ್ದೂ ಸತ್ತಂತಾಗಿದೆ ಎಂದು ಹೇಳಿದರು.

ಚುನಾವಣೆಯ ಸಂದರ್ಭದಲ್ಲಿ ಒಂದು ತಿಂಗಳು ಮುಂಚಿತವಾಗಿ ಗನ್‌ ವಾಪಸ್‌ ಕೊಡಬೇಕಾಗಿತ್ತು. ಕಾಂಗ್ರೆಸ್‌ ಸರ್ಕಾರ ಅಧಿಕಾರದಲ್ಲಿದೆ ಎಂಬ ಕಾರಣಕ್ಕೆ ಕಾಂಗ್ರೆಸ್‌ ಕಾರ್ಯಕರ್ತರು ಪೊಲೀಸರ ಮೇಲೆ ಒತ್ತಡ ಹಾಕಿ ಗನ್‌ ಅನ್ನು ಜೇಬಿನಲ್ಲಿ ಇಟ್ಟುಕೊಂಡು ಓಡಾಡುತ್ತಿದ್ದಾರೆ. ಇದು ಕಾಂಗ್ರೆಸ್‌ ಕಾರ್ಯಕರ್ತರೇ ಮಾಡುತ್ತಿರುವ ರೌಡಿಸಂ. ಅಂತಹವರು ಮುಖ್ಯಮಂತ್ರಿಗಳಿಗೆ ಹಾರ ಹಾಕುವ ಮೂಲಕ ನಾವು ಕಾನೂನು ಪಾಲನೆ ಮಾಡಲ್ಲ ಎಂಬ ಸಂದೇಶ ರವಾನಿಸಿದ್ದಾರೆ. ಇದೇ ಕಾಂಗ್ರೆಸ್ಸಿನ ಗೂಂಡಾ ರಾಜ್ಯ ಎಂದು ಆರ್.‌ ಅಶೋಕ್‌ ವಾಗ್ದಾಳಿ ನಡೆಸಿದರು.

ಇದು ಅತಿ ದೊಡ್ಡ ಭದ್ರತಾ ವೈಫಲ್ಯವಾಗಿದೆ. ಇನ್ನು ನಾಳೆಯ ದಿನಗಳಲ್ಲಿ ಯಾರಾದರೂ ಬಾಂಬ್‌ ಇಟ್ಟುಕೊಂಡು ಓಡಾಡಬಹುದು. ಇಂತಹ ಘಟನೆಯಿಂದ ಪೊಲೀಸ್‌ ಇಲಾಖೆ ಬದುಕಿದ್ದೂ ಸತ್ತಂತಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ನಾನು ಸದನದಲ್ಲೇ ಹೇಳಿದ್ದೆ. ಇದು ಕೂಡ ಒಂದು ನಿದರ್ಶನ. ಇದಕ್ಕೆ ಸರ್ಕಾರ ಏನು ಉತ್ತರ ಕೊಡಲಿದೆ ಎಂದು ಜನರು ನಿರೀಕ್ಷಿಸುತ್ತಿದ್ದಾರೆ. ಈ ಕುರಿತು ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಲಿದೆ ಎಂದು ಆರ್.‌ ಅಶೋಕ್‌ ತಿಳಿಸಿದರು.

ಕೇರಳ ಸರ್ಕಾರ ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡಿದ್ದಕ್ಕೆ ಸುಪ್ರೀಂ ಕೋರ್ಟ್‌ ಛೀಮಾರಿ ಹಾಕಿತ್ತು. ಕರ್ನಾಟಕ ಸರ್ಕಾರ ಈಗಾಗಲೇ ಬರ ಪರಿಹಾರ ಬಿಡುಗಡೆ ಮಾಡಬೇಕಿದ್ದರೂ, ಚುನಾವಣೆಯ ಸಮಯದಲ್ಲಿ ಕೇಂದ್ರದ ಮೇಲೆ ಆರೋಪ ಮಾಡಲಾಗಿದೆ. ರಾಜ್ಯ ಸರ್ಕಾರ ಉಚಿತಗಳನ್ನು ನೀಡಿ ಹಣ ಖಾಲಿ ಮಾಡಿಕೊಂಡಿರುವುದರಿಂದ ಪರಿಹಾರ ನೀಡಲು ಹಣವಿಲ್ಲ ಎಂದು ಆರ್.‌ ಅಶೋಕ್‌ ಹೇಳಿದರು.

ಬಿ.ವೈ. ವಿಜಯೇಂದ್ರ ವಾಗ್ದಾಳಿ

ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರುವ ಹೊತ್ತಿನಲ್ಲಿ ಕಾಂಗ್ರೆಸ್ ಪಕ್ಷದ ರೋಡ್ ಶೋ ವೇಳೆ ಗನ್ ಇಟ್ಟುಕೊಂಡ ವ್ಯಕ್ತಿಯೊಬ್ಬ ಮುಖ್ಯಮಂತ್ರಿಗಳಿಗೆ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಹಾರ ಹಾಕಿರುವ ಘಟನೆ ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಬಿ.ವೈ. ವಿಜಯೇಂದ್ರ ಆತಂಕ ವ್ಯಕ್ತಪಡಿಸಿದ್ದಾರೆ.

ನೀತಿ ಸಂಹಿತೆ ಜಾರಿಯಾದ ಬೆನ್ನಲೇ ಸ್ವರಕ್ಷಣೆಗಾಗಿ ಗನ್ ಲೈಸನ್ಸ್ ಪಡೆದು ತಮ್ಮ ಬಳಿ ಇಟ್ಟುಕೊಳ್ಳುವವರಿಂದ ಆಯುಧಗಳನ್ನು ಚುನಾವಣಾ ಪ್ರಕ್ರಿಯೆ ಮುಗಿಯುವವರೆಗೂ ಸ್ವಾಧೀನಕ್ಕೆ ತೆಗೆದು ಕೊಳ್ಳುವ ಪೋಲಿಸರು ಈ ವ್ಯಕ್ತಿಯಿಂದ ಗನ್ ಏಕೆ ವಶಕ್ಕೆ ಪಡೆದುಕೊಂಡಿಲ್ಲ ಎಂಬುದು ನಿಗೂಢ ಪ್ರಶ್ನೆಯಾಗಿದೆ. ಈ ವ್ಯಕ್ತಿಯಾರು? ಈತನ ಹಿನ್ನಲೆ ಏನು ಎಂಬ ಬಗ್ಗೆ ತನಿಖೆಯಾಗಬೇಕಿದೆ. ಕಾಂಗ್ರೆಸ್ ಎಂಥವರನ್ನು ಕಟ್ಟಿಕೊಂಡು ಚುನಾವಣೆ ನಡೆಸಲು ಹೊರಟಿದೆ ಎಂಬುದಕ್ಕೆ ಈ ಘಟನೆ ಸಾಕ್ಷಿ ಒದಗಿಸಿದೆ ಎಂದು ವಿಜಯೇಂದ್ರ ಕಿಡಿಕಾರಿದ್ದಾರೆ.

ಇದನ್ನೂ ಓದಿ: Lok Sabha Election 2024: ಕಾಂಗ್ರೆಸ್‌ ಸೇರಿದ ವಾಣಿ ಶಿವರಾಂ; ಕಾಂಗ್ರೆಸ್‌ ವಕ್ತಾರೆಯಾಗಿ ತೇಜಸ್ವಿನಿ ಗೌಡ ನೇಮಕ

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದಲೂ ವಿಧ್ವಂಸಕರ ಅಟ್ಟಹಾಸ ಮರುಕಳಿಸುತ್ತಲೇ ಇದ್ದು ಇಂದಿನ ಈ ಘಟನೆಯ ಕುರಿತು ಚುನಾವಣಾ ಆಯೋಗ ಗಂಭೀರ ಕ್ರಮಕ್ಕೆ ಮುಂದಾಗಬೇಕಿದೆ, ಇದರ ಜತೆಗೇ ಸಮಾಜಘಾತುಕ ಶಕ್ತಿಗಳ ಚಟುವಟಿಕೆಗಳ ಮೇಲೆ ಹದ್ದಿನ ಕಣ್ಣಿಟ್ಟು ಶಾಂತಿಯುತ ಮತದಾನಕ್ಕೆ ಸಕಲ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕೆಂದು ಒತ್ತಾಯಿಸುವೆ ಎಂದು ಗುಡುಗಿದ್ದಾರೆ.

ಸಿಎಂ ಸಭೆಯಲ್ಲಿ ಭದ್ರತಾ ಲೋಪ ಆಗಬಾರದು: ಎಚ್‌ಡಿಕೆ

ಚುನಾವಣೆಯ ಪ್ರಚಾರದ ರೋಡ್ ಶೋ ಕಾರ್ಯಕ್ರಮದಲ್ಲಿ ಪಿಸ್ತೂಲು ಹೊಂದಿದ್ದ ವ್ಯಕ್ತಿಯೊಬ್ಬ ಮುಖ್ಯಮಂತ್ರಿ ಅವರಿಗೆ ಸನ್ಮಾನ ಮಾಡಿರುವ ಘಟನೆ ಭದ್ರತಾ ಲೋಪ ಆಗಬಾರದು. ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version