ಆನೇಕಲ್: ಖಾಕಿ ಪಡೆ ಚುನಾವಣಾ ಕೆಲಸದಲ್ಲಿ ಬ್ಯುಸಿಯಾಗುತ್ತಿದ್ದಂತೆ, ಇತ್ತ ಕ್ರೈಂ ರೇಟು ಹೆಚ್ಚಾಗುತ್ತಿದೆ. ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಹೆಬ್ಬಗೋಡಿಯ ಮುತ್ಯಾಲಮ್ಮ ದೇವಾಲಯದ ಬಳಿ ತಡರಾತ್ರಿ ವ್ಯಕ್ತಿಯೊಬ್ಬನ ಬರ್ಬರ (Murder case) ಕೊಲೆಯಾಗಿದೆ. ಒರಿಸ್ಸಾ ಮೂಲದ ದೀಪ್ತಿ ರಂಜನ್ (30) ಹತ್ಯೆಯಾದವನು.
ಮಂಗಳವಾರ ರಾತ್ರಿ 1 ಗಂಟೆ ಸುಮಾರಿಗೆ ಕೆಲಸ ಮುಗಿಸಿ ದೀಪ್ತಿ ರಂಜನ್ ವಾಪಸ್ ಆಗುತ್ತಿದ್ದ. ಈ ವೇಳೆ ಎದುರಾದ ಕಿಡಿಗೇಡಿಗಳು ಏಕಾಏಕಿ ದಾಳಿ ಮಾಡಿದ್ದಾರೆ. ಮಾರಕಾಸ್ತ್ರಗಳಿಂದ ಹಲ್ಲೆಗೈದು ಬರ್ಬರವಾಗಿ ಕೊಲೆ ಮಾಡಿದ್ದಾರೆ. ಕೃತ್ಯವೆಸಗಿ ಆರೋಪಿಗಳು ಪರಾರಿ ಆಗಿದ್ದಾರೆ.
ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಆಕ್ಸ್‌ಫರ್ಡ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ. ಯುವಕನ ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯ ಹೆಬ್ಬಗೋಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿಗಳಿಗಾಗಿ ಶೋಧ ಕಾರ್ಯವನ್ನು ಮುಂದುವರಿಸಿದ್ದಾರೆ.
ಇದನ್ನೂ ಓದಿ: Murder Case: ಹೆಂಡತಿ ಮಕ್ಕಳನ್ನು ಕೊಂದು ಮೂರು ದಿನ ಶವಗಳೊಂದಿಗೇ ಇದ್ದ!
ನಡುರಸ್ತೆಯಲ್ಲಿ ಅಕ್ಕನನ್ನು ಅಟ್ಟಾಡಿಸಿ ಸುತ್ತಿಗೆಯಿಂದ ಹೊಡೆದು ಕೊಂದ
ಯಾದಗಿರಿ: ತಮ್ಮನಿಂದಲೇ ಅಕ್ಕನ ಬರ್ಬರ (Murder Case) ಕೊಲೆಯಾಗಿದೆ. ಯಾದಗಿರಿ (Yadagiri News) ತಾಲೂಕಿನ ಬೊಮ್ಮರಾಲದೊಡ್ಡಿಯಲ್ಲಿ ಘಟನೆ ನಡೆದಿದೆ. ನರಸಮ್ಮ(65) ಕೊಲೆಯಾದ ಸಹೋದರಿ.
ನರಸಮ್ಮಳ ಸಹೋದರ ಸೂಗುರಪ್ಪ ಕೊಲೆ ಆರೋಪಿ ಆಗಿದ್ದಾನೆ. ಮಾನಸಿಕ ಅಸ್ವಸ್ಥನಾಗಿದ್ದ ಸೂಗುರಪ್ಪನನ್ನು ನಸರಮ್ಮಳೇ ನೋಡಿಕೊಳ್ಳುತ್ತಿದ್ದರು. ಇನ್ನೂ ಮನೆಯಲ್ಲಿ ಕೈ-ಕಾಲು ಕಟ್ಟಿ ಕೂರಿಸುತ್ತಿದ್ದರು. ಕೋಪದಲ್ಲಿ ಸರಪಳಿ ಬಿಚ್ಚಿಕೊಂಡು ಕಬ್ಬಿಣ್ಣದ ಸುತ್ತಿಗೆಯಿಂದ ಹೆಂಡತಿಗೆ ಹಾಗೂ ಸಹೋದರಿಗೆ ನರಸಮ್ಮನಿಗೆ ಹೊಡೆದಿದ್ದಾನೆ.
ನರಸಮ್ಮ ಈತನಿಂದ ತಪ್ಪಿಸಿಕೊಂಡು ಹೊರಗೆ ಓಡಿ ಬಂದಿದ್ದಾರೆ. ಆದರೂ ಬಿಡದ ಸೂಗುರಪ್ಪ ನಡು ರಸ್ತೆಯಲ್ಲಿ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸೈದಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಆರೋಪಿಯನ್ನು ವಶಕ್ಕೆ ಪಡೆದಿದ್ದು, ಸೈದಾಪುರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಕೇಸ್ ದಾಖಲಾಗಿದೆ. ಇನ್ನೂ ರಸ್ತೆಯಲ್ಲಿ ಬಿದ್ದಿದ್ದ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಗಲಾಟೆ ಬಿಡಿಸಲು ಹೋದ ಮಹಿಳೆಯ ಎದೆಗೆ ಗುದ್ದಿ ಹೊಡೆದು ಕೊಂದರು
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಶುರುವಾದ ಜಗಳವು ಸಾವಿನಲ್ಲಿ (Murder case) ಅಂತ್ಯವಾಗಿದೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ನಿಂಗಪೂರದಲ್ಲಿ ಘಟನೆ ನಡೆದಿದೆ. ತಾಯವ್ವ ಸಾಲಮಂಟಪಿ (60) ಮೃತ ದುರ್ದೈವಿ.
ಸಾರಾಯಿ ಮಾರಾಟ ಮಾಡುತ್ತಾರೆ ಎಂಬ ವಿಚಾರವನ್ನು ಕೇಳಲು ತಾಯವ್ವ ಸಹೋದರ ವಿಠ್ಠಲ ಸಾಲಮಂಟಪಿ ಹೋಗಿದ್ದರು. ಸೋಮವಾರ ರಾತ್ರಿ1 ಗಂಟೆಗೆ ಆರೋಪಿಗಳ ಮನೆ ಬಳಿ ಹೋಗಿ ಗಲಾಟೆ ಮಾಡಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ವಿಠ್ಠಲ ಹಾಗೂ ಮಾದರ ಕುಟುಂಬಸ್ಥರ ನಡುವೆ ಮಾರಾಮಾರಿ ನಡೆದಿದೆ. ವಿಠ್ಠಲ ಸಹೋದರಿ ತಾಯವ್ವ ಜಗಳ ಬಿಡಿಸಲು ಮಧ್ಯ ಪ್ರವೇಶಿಸಿದ್ದಾರೆ.
ಈ ವೇಳೆ ತಾಯವ್ವಳಿಗೆ ಅವಾಚ್ಯ ಶಬ್ಧದಿಂದ ನಿಂದಿಸಿ, ಆಕೆಯ ಎದೆ ಭಾಗಕ್ಕೆ ಜೋರಾಗಿ ಗುದ್ದಿ ತಳ್ಳಿದ್ದಾರೆ. ಇದರಿಂದ ಗಂಭೀರ ಗಾಯಗೊಂಡ ತಾಯವ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಹಿಂದೆಯೂ ಸಾರಾಯಿ ಮಾರಾಟ ಮಾಡುವ ವಿಚಾರಕ್ಕೆ ವಿಠ್ಠಲ ಸಾಲಮಂಟಪಿ ಹಾಗೂ ಮಾದರ ಕುಟುಂಬಸ್ಥರ ನಡುವೆ ಜಗಳ ಆಗಿತ್ತು. ನಿನ್ನೆಯೂ ಇದೇ ವಿಚಾರವನ್ನು ಕೇಳಲು ಹೋದಾಗ ಗಲಾಟೆ ಶುರುವಾಗಿ, ವೃದ್ಧೆಯ ಸಾವಿನಲ್ಲಿ ಅಂತ್ಯವಾಗಿದೆ.
ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿತರಾದ ಪ್ರಕಾಶ್ ಮಾದರ, ಯಮನಪ್ಪ ಮಾದರ, ಭೀಮಪ್ಪ ಮಾದರ ಎಂಬುವವರನ್ನು ವಶಕ್ಕೆ ಪಡೆದಿದ್ದಾರೆ. ಸ್ಥಳಕ್ಕೆ ಮುಧೋಳ ಸಿಪಿಐ, ಲೋಕಾಪುರ ಪಿಎಸ್‌ಐ ಭೇಟಿ ಪರಿಶೀಲನೆ ನಡೆಸಿದ್ದಾರೆ. ಲೋಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ