Site icon Vistara News

Murder Case: ಆನೇಕಲ್‌ನಲ್ಲಿ ಅಣ್ಣನಿಂದಲೇ ತಮ್ಮನ ಬರ್ಬರ ಹತ್ಯೆ

Murder Case

ಆನೇಕಲ್: ಅಣ್ಣನಿಂದಲೇ ತಮ್ಮನ ಬರ್ಬರ ಹತ್ಯೆ (Murder Case) ನಡೆದಿದೆ. ದೊಣ್ಣೆಯಿಂದ ತಲೆಗೆ ಹೊಡೆದು ಕೊಲೆ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರದ ಆನೇಕಲ್ ತಾಲೂಕಿನ ಸರ್ಜಾಪುರ ಸಮೀಪದ ಪಂಡಿತನ ಅಗ್ರಹಾರದಲ್ಲಿ ಘಟನೆ ನಡೆದಿದೆ. ಆನಂದ (27) ಕೊಲೆಯಾದವರು.

ಮಣಿಕಂಠ(32) ಕೊಲೆ ಮಾಡಿದ ಆರೋಪಿ ಆಗಿದ್ದಾನೆ. ತಮಿಳುನಾಡು ಮೂಲದ ಈ ಅಣ್ಣ-ತಮ್ಮಂದಿರು ಪಂಡಿತನ ಅಗ್ರಹಾರದಲ್ಲಿ ಗಾರೆ ಕೆಲಸಕ್ಕಾಗಿ ಬಂದಿದ್ದರು. ನಿರ್ಮಾಣ ಹಂತದ ಕಟ್ಟಡದಲ್ಲಿ ಆನಂದ್ ತಂದೆ-ತಾಯಿ ಜತೆಗೆ ವಾಸವಿದ್ದರೆ, ಇತ್ತ ಮಣಿಕಂಠ ಮಂಡ್ಯದಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದ.

ನಿನ್ನೆ ತಂದೆ-ತಾಯಿಯನ್ನು ನೋಡಿಕೊಂಡು ಹೋಗಲು ಮಣಿಕಂಠ ಬಂದಿದ್ದ. ಆನಂದ ಕುಡಿದು ಬಂದು ನಿತ್ಯ ಗಲಾಟೆ ಮಾಡುತ್ತಿದ್ದ. ಸುಖಾ ಸುಮ್ಮನೆ ತಂದೆ, ತಾಯಿ, ಅಣ್ಣನ ಜತೆಗೆ ಕಿರಿಕ್ ತೆಗೆಯುತ್ತಿದ್ದ. ಕಳೆದ ರಾತ್ರಿ ಹನ್ನೊಂದು ಗಂಟೆ ಸುಮಾರಿಗೆ ಕುಡಿದು ಬಂದು ಆನಂದ ಗಲಾಟೆ ಮಾಡಿದ್ದ. ಗಲಾಟೆ ವಿಕೋಪಕ್ಕೆ ತಿರುಗಿ ದೊಣ್ಣೆಯಿಂದ ಮಣಿಕಂಠ ಆನಂದ್‌ಗೆ ಹೊಡೆದಿದ್ದಾನೆ. ತೀವ್ರ ರಕ್ತಸ್ರಾವವಾಗಿ ಆನಂದ್‌ ಸ್ಥಳದಲ್ಲೆ ಮೃತಪಟ್ಟಿದ್ದಾನೆ.

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಸರ್ಜಾಪುರ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹವನ್ನು ಆಕ್ಸ್‌ಫರ್ಡ್ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಆರೋಪಿ ಮಣಿಕಂಠನನ್ನು ಸರ್ಜಾಪುರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

Exit mobile version