ಜೈಲಿನ ಜಾಮರ್‌ ಪರಿಣಾಮ ಇಡೀ ಏರಿಯಾ ನೆಟ್‌ವರ್ಕ್‌ ಢಮಾರ್, ಪರಪ್ಪನ ಅಗ್ರಹಾರ ಜನರ ಪರದಾಟ - Vistara News

ಬೆಂಗಳೂರು ಗ್ರಾಮಾಂತರ

ಜೈಲಿನ ಜಾಮರ್‌ ಪರಿಣಾಮ ಇಡೀ ಏರಿಯಾ ನೆಟ್‌ವರ್ಕ್‌ ಢಮಾರ್, ಪರಪ್ಪನ ಅಗ್ರಹಾರ ಜನರ ಪರದಾಟ

ಕೈದಿಗಳ ಕಳ್ಳಾಟಕ್ಕೆ ಬ್ರೇಕ್ ಹಾಕಲು ಹಾಕಿದ ಜಾಮರ್‌ನಿಂದಾಗಿ ಪರಪ್ಪನ ಅಗ್ರಹಾರ (Parappana Agrahara) ಜೈಲಿನ 1 ಕಿಲೋಮೀಟರ್‌ ವ್ಯಾಪ್ತಿಯಲ್ಲಿ ಯಾವುದೇ ನೆಟ್‌ವರ್ಕ್ ಲಭ್ಯವಾಗುತ್ತಿಲ್ಲ.

VISTARANEWS.COM


on

parappana Agrahara Jail in Bangalore
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಆನೇಕಲ್: ಜೈಲು ಕೈದಿಗಳು (Jail Inmates) ಅಕ್ರಮವಾಗಿ ಮೊಬೈಲ್‌ ಬಳಸಬಾರದು ಎಂಬ ಕಾರಣದಿಂದ ಪರಪ್ಪನ ಅಗ್ರಹಾರ (Parappana Agrahara) ಜೈಲಿನಲ್ಲಿ ಹಾಕಿಸಲಾದ ಮೊಬೈಲ್‌ ಜಾಮರ್‌ (mobile jammer) ಈಗ ಇಡೀ ಏರಿಯಾಗೆ ಸಂಕಷ್ಟ ತಂದಿಟ್ಟಿದೆ. ಇಡೀ ಬಡಾವಣೆಯೇ ಈ ಜಾಮರ್‌ನಿಂದಾಗಿ ನೆಟ್‌ವರ್ಕ್‌ (mobile Network) ವಂಚಿತವಾಗಿದೆ.

ಕೈದಿಗಳ ಕಳ್ಳಾಟಕ್ಕೆ ಬ್ರೇಕ್ ಹಾಕಲು ಹಾಕಿದ ಜಾಮರ್‌ನಿಂದಾಗಿ ಜೈಲಿನ 1 ಕಿಲೋಮೀಟರ್‌ ವ್ಯಾಪ್ತಿಯಲ್ಲಿ ಯಾವುದೇ ನೆಟ್‌ವರ್ಕ್ ಲಭ್ಯವಾಗುತ್ತಿಲ್ಲ. ಇದರಿಂದಾಗಿ ಸ್ಥಳೀಯರಿಗೆ ಸಂಕಷ್ಟ ಉಂಟಾಗಿದ್ದು, ಜೈಲಿನ ಜೈಲಿನ ಸುತ್ತಮುತ್ತಲಿನ ವಾಸಿಗಳಿಗೆ ಜಾಮರ್ ಟೆನ್ಷನ್ ತಂದೊಡ್ಡಿದೆ.

ಸ್ಥಳೀಯರು ಎಮರ್ಜೆನ್ಸಿ ಕಾಲ್ ಮಾಡಬೇಕಾದರೂ ನೆಟ್‌ವರ್ಕ್‌ ಹುಡುಕುತ್ತಾ ಅರ್ಧ ಕಿ.ಮೀ ದೂರ ಸಾಗಬೇಕು. ಶಾಲಾ ಕಾಲೇಜು ವಿದ್ಯಾರ್ಥಿಗಳಿಗೂ ನೆಟ್ವರ್ಕ್ ಸಮಸ್ಯೆ ತಪ್ಪಿದ್ದಲ್ಲ. ಆನ್ಲೈನ್ ಕ್ಲಾಸ್ ಇದ್ದರೆ ವಿದ್ಯಾರ್ಥಿಗಳು ಸ್ನೇಹಿತರು, ಸಂಬಂಧಿಕರ ಮನೆಗೆ ಅಲೆದಾಡುತ್ತಿದ್ದಾರೆ.

ಸ್ಥಳೀಯ ನಿವಾಸಿಗಳ ಜೊತೆ ಪರಪ್ಪನ ಅಗ್ರಹಾರ ಪೊಲೀಸರಿಗೂ ಜಾಮರ್ ಸಮಸ್ಯೆ ಉಂಟಾಗಿದೆ. ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ ಅಧಿಕಾರಿಗಳು ಮತ್ತು ಸಿಬ್ಬಂದಿಗೂ ನೆಟ್ವರ್ಕ್ ಸಮಸ್ಯೆ ಇದೆ. ಹೀಗಾಗಿ ಮೊಬೈಲ್ ಪೋನ್ ವರ್ಕ್ ಆಗದೆ ಲ್ಯಾಂಡ್ ಲೈನ್ ಬಳಕೆ ಮಾಡುತ್ತಿದ್ದಾರೆ.

ಜೈಲು ಅಧಿಕಾರಿಗಳಿಗೆ ಮನವಿ ಮಾಡಿದರೂ ಏನೂ ಪರಿಣಾಮವಾಗಿಲ್ಲ. ಜೈಲಿನಲ್ಲಿ ಪ್ರಭಾವಿ ಕೈದಿಗಳು ಮೊಬೈಲ್ ಅಕ್ರಮವಾಗಿ ಬಳಸಿ ಕೆಲಸ ಮಾಡಿಸಿಕೊಳ್ಳುವುದಕ್ಕೆ ಕಡಿವಾಣ ಹಾಕಲು ಜಾಮರ್ ಅಳವಡಿಕೆ ಮಾಡಲಾಗಿದೆ ಎಂದು ಜೈಲು ಅಧಿಕಾರಿಗಳು ಹೇಳುತ್ತಾರೆ. ಆದರೆ ಸಮಸ್ಯೆ ಅನುಭವಿಸುತ್ತಿರುವುದು ಮಾತ್ರ ಸ್ಥಳೀಯ ನಿವಾಸಿಗಳು. ಕಳೆದ ಒಂದು ವರ್ಷದಿಂದ ಮೊಬೈಲ್ ಜಾಮರ್ ಸಮಸ್ಯೆ ಇದೆ. ಮೊಬೈಲ್ ಜಾಮರ್ ಅನ್ನು ಜೈಲು ಆವರಣಕ್ಕೆ ಸೀಮಿತಗೊಳಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

ವರ್ಕ್‌ ಫ್ರಂ ಹೋಮ್‌ ಆಮಿಷ, ಐಟಿ ಉದ್ಯೋಗಿಗೆ 4.33 ಲಕ್ಷ ರೂ. ವಂಚನೆ

ಬಳ್ಳಾರಿ: ವರ್ಕ್ ಪ್ರಮ್ ಹೋಂ ಜಾಬ್ ಹೆಸರಲ್ಲಿ ಬಳ್ಳಾರಿಯ ಐಟಿ ಉದ್ಯೋಗಿಯೊಬ್ಬರಿಗೆ 4.33 ಲಕ್ಷ ರೂ. ವಂಚಿಸಲಾಗಿದೆ. ಹೋಟೆಲ್‌ ಕಂಪನಿಯೊಂದರ ಹೆಸರಿನಲ್ಲಿ ಹೀಗೆ ವಂಚನೆ (Fraud Case) ಮಾಡಲಾಗಿದೆ.

ಬಳ್ಳಾರಿಯ ರವಿ ಎಂಬ ಯುವಕನಿಗೆ ಹೀಗೆ 4.33 ಲಕ್ಷ ದೋಖಾ ನಡೆದಿದೆ. ಮನೆಯಲ್ಲೇ ಕುಳಿತು ಹೋಟೆಲ್ ಬ್ಯುಸಿನೆಸ್ ಮಾಡಿ ಹಣ ಸಂಪಾದಿಸಿ ಎಂದು ಯುವಕನಿಗೆ ವಾಟ್ಸ್‌ಅ್ಯಪ್ ಮೆಸೇಜ್ ಬಂದಿತ್ತು. ಇದನ್ನು ನಂಬಿ ಮುಂದುವರಿದ ಯುವಕ, ಹಣ ಕಳೆದುಕೊಂಡಿದ್ದಾನೆ.

ಟೆಲಿಗ್ರಾಂ ಆಪ್‌ ಮೂಲಕ ವಂಚಕರು ಕಾರ್ಯಾಚರಿಸಿದ್ದಾರೆ. ರೋಹಿಣಿ ಸಿಯಾ ಎಂಬ ಹೆಸರಿನಿಂದ ಮಹಿಳೆಯೊಬ್ಬಳು ಮೋಸ ಎಸಗಿದ್ದಾಳೆ. ಹೋಟೆಲ್ ಕಂಪನಿ ಹೆಸರಿನಲ್ಲಿ ಟಾಸ್ಕ್‌ ಕೊಟ್ಟು ಹ‌ಂತ ಹಂತವಾಗಿ ಲಕ್ಷ ಲಕ್ಷ ಹಣ ಪೀಕಲಾಗಿದೆ. ದುರದೃಷ್ಟವಂತ ಯುವಕ ಒಂದೇ ದಿನದಲ್ಲಿ 4,33,000 ರೂ. ಹಣ ಕಳೆದುಕೊಂಡಿದ್ದಾನೆ.

ವಾಟ್ಸ್‌ಆಪ್‌ನಿಂದ ಬಂದ ಮೆಸೇಜ್‌ ಮೂಲಕ ಟೆಲಿಗ್ರಾಂ‌ಂನಲ್ಲಿದ್ದ ಬಿಸಿನೆಸ್ ಗ್ರೂಪ್‌ಗೆ ಯುವಕ ಸೇರಿದ್ದಾನೆ. ಟಿಲಿಗ್ರಾಂ‌ಂನಲ್ಲಿ ಟಾಸ್ಕ್ ಕೊಟ್ಟ ವಂಚಕರು, ಮನೆಯಿಂದಲೇ ಕೆಲಸ ಮಾಡಿ ಎಂದು ಪ್ರಚೋದಿಸಿದ್ದಾರೆ. ತಮ್ಮ ಕಂಪನಿಗೆ ರೇಟಿಂಗ್ ಮತ್ತು ರಿವ್ಯೂ ಕೊಟ್ರೆ ನಿತ್ಯ 6000 ರೂ. ನೀಡುವುದಾಗಿ ಲಾಭದ ಭರವಸೆ ನೀಡಿದ್ದಾರೆ. ಟಾಸ್ಕ್‌ ಕಂಪ್ಲೀಟ್‌ ಮಾಡಲು, ತೆರಿಗೆ ವೆಚ್ಚ ಇತ್ಯಾದಿ ಎಂದು ಯುಪಿಐ ಮೂಲಕ ಮೂರು ಬ್ಯಾಂಕ್ ಖಾತೆಗಳಿಗೆ 4.33 ಲಕ್ಷ ಪಡೆದುಕೊಂಡಿದ್ದಾರೆ.

ಲಾಭಾಂಶ ಪಡೆಯಬೇಕಾದರೆ ಮತ್ತೆ 1.80 ಲಕ್ಷ ʼತೆರಿಗೆʼ ನೀಡುವಂತೆ ರವಿಗೆ‌ ಸೂಚನೆ ನೀಡಿದ್ದಾರೆ. ಉದ್ಯೋಗವೂ ಇಲ್ಲದೆ, ಹಣವೂ ಇಲ್ಲದೆ ಕಂಗಾಲಾದ IT ಉದ್ಯೋಗಿ ರವಿ, ಇದೀಗ ಮೋಸದ ಕುರಿತು ಬಳ್ಳಾರಿ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದಾರೆ.

ಸೈಬರ್ ಖದೀಮರು ಕಳೆದ ಒಂದು ವರ್ಷದಲ್ಲಿ ಬಳ್ಳಾರಿ ಜಿಲ್ಲೆಯಲ್ಲಿಯೇ 3 ಕೋಟಿ ರೂ. ಹಣ ಗುಳುಂ ಮಾಡಿದ್ದಾರೆ ಎನ್ನಲಾಗಿದೆ. ಮನೆಯಿಂದಲೇ ಕೆಲಸ ಮಾಡಿ ಹಣ ಗಳಿಸುವ ಆಕರ್ಷಕ ಆಫರ್‌ ಅನ್ನು ನಂಬಿ ಆನ್‌ಲೈನ್‌ನಲ್ಲಿ ಮುಂದುವರಿಯಬಾರದು ಎಂದು ಸೈಬರ್‌ ಪೊಲೀಸರು ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: Central Jail: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೊಲೆಗಾರನ ಭರ್ಜರಿ ಬರ್ತ್‌ಡೇ ಸೆಲೆಬ್ರೇಶನ್!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಉತ್ತರ ಕರ್ನಾಟಕದಲ್ಲಿ ಸುರಿದ ಭಾರಿ ವರ್ಷಧಾರೆ; ನಾಳೆ ರಭಸವಾಗಿ ‌ಬೀಸಲಿದೆ ಗಾಳಿ- ಮಳೆ

Heavy Rain : ಉತ್ತರ ಒಳನಾಡಿನಲ್ಲಿ ತಾಪಮಾನ ಏರಿಕೆ ನಡುವೆಯೂ ಅಲ್ಲಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಇತ್ತ ಕೊಡಗಿನಲ್ಲಿ ದಿಢೀರ್‌ ಮಳೆಗೆ (Rain News) ಖುಷಿಯಾದ ಜನರು ಕುಣಿದು ಕುಪ್ಪಳಿಸಿದ್ದಾರೆ. ರಾಜ್ಯಾದ್ಯಂತ ಇನ್ನೊಂದು ವಾರ ಭರ್ಜರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ರಾಜ್ಯದ ಹಲವೆಡೆ ಏ.12ರ ಶುಕ್ರವಾರದಂದು ಗುಡುಗು, ಸಿಡಿಲು ಸಹಿತ ಭಾರಿ (Heavy Rain) ಮಳೆಯಾಗಿದೆ. ಬೆಳಗಾವಿ ನಗರದಲ್ಲಿಂದು ಒಂದು ಗಂಟೆಗೂ ಹೆಚ್ಚು ಕಾಲ ಗುಡುಗು ಸಹಿತ ಮಳೆಯು (Rain News) ಅಬ್ಬರಿಸುತ್ತಿದೆ. ಬಿಸಿಲು, ಧಗೆಯಿಂದ ಕಂಗೆಟ್ಟ ಜನರಿಗೆ ವರುಣ ತಂಪೆರೆದಿದ್ದಾನೆ. ನಗರದ ಚನ್ನಮ್ಮ ವೃತ್ತ, ಸದಾಶಿವ ನಗರ, ಕ್ಯಾಂಪ್, ಮಾರುಕಟ್ಟೆ ಪ್ರದೇಶದಲ್ಲಿ ವಿಪರೀತ ಮಳೆಯಾಗುತ್ತಿದೆ. ದಿಢೀರ್‌ ಮಳೆಯಿಂದಾಗಿ (Karnataka Weather Forecast) ಜನ-ಜೀವನ ಅಸ್ತವ್ಯಸ್ತವಾಗಿ, ವಾಹನ ಸವಾರರು ಪರದಾಡಿದರು. ಬೋವಿ ಗಲ್ಲಿಯಲ್ಲಿ ಮಳಿಗೆಗಳಿಗೆ ನೀರು ನುಗ್ಗಿತ್ತು. ಮಳೆ ನೀರು ಒಳಬಾರದಂತೆ ತಡೆಯಲು ಸಿಬ್ಬಂದಿ ಹರಸಾಹಸ ಪಡುತ್ತಿದ್ದರು.

ವಿಜಯಪುರ ನಗರದಲ್ಲೂ ಗುಡುಗು, ಸಿಡಿಲಿನ ಭಾರಿ ಮಳೆ ಸುರಿದಿದ್ದು, ತಗ್ಗು ಪ್ರದೇಶಗಳಿಗೆ ನೀರು ಹರಿದಿದೆ. ಸಿಡಿಲಿನ ಆರ್ಭಟಕ್ಕೆ ನಿನ್ನೆ ವಿಜಯಪುರ ಜಿಲ್ಲೆಯಲ್ಲಿ ಇಬ್ಬರ ಮೃತಪಟ್ಟಿದ್ದರು. ಶುಕ್ರವಾರವೂ ಸುರಿದ ಮಳೆಗೆ ನಗರ ಪ್ರದೇಶದ ಜನತೆ ಕೂಲ್‌ ಆಗಿದ್ದಾರೆ. ದಾವಣಗೆರೆಯಲ್ಲಿ ಬಿಸಿಲ ಬೇಗೆಯಿಂದ ಬೆಂದಿದ್ದ ಜನರಿಗೆ ಅರ್ಧ ಗಂಟೆಗೂ ಹೆಚ್ಚು ಕಾಲ‌ ಸುರಿದ ಮಳೆಯು ನಿಟ್ಟುಸಿರು ಬಿಡುವಂತಾಗಿದೆ. ದಾವಣಗೆರೆ ಸೇರಿದಂತೆ ಹಲವೆಡೆ ಮಳೆಯಾಗಿದ್ದು, ಒಣಗುತ್ತಿದ್ದ ತೋಟಗಳಿಗೆ ಮಳೆ ಆಸರೆ ಆಯಿತು.

ಮಳೆಯಲ್ಲೆ ಭಕ್ತಾಧಿಗಳ ಭರ್ಜರಿ ಡ್ಯಾನ್ಸ್‌

ಕೊಡಗು ಜಿಲ್ಲೆಯ ಮೂರ್ನಾಡು, ನೆಲಜಿ, ಮರಂದೋಡ ಹಾಗೂ ಬಿಳಿಗೇರಿ ಸೇರಿ ಹಲವೆಡೆ ವರ್ಷಧಾರೆ ಆಗಿದೆ. ಮಳೆಗಾಗಿ ಕಾದುಕುಳಿತ್ತಿದ್ದ ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಇತ್ತ ಶ್ರೀಮಾರಿಯಮ್ಮ ಹಾಗೂ ಕೊರಗಜ್ಜದೇವರ ವಾರ್ಷಿಕ ಉತ್ಸವದ ವೇಳೆ ಮಳೆ ಬಂದ ಕಾರಣಕ್ಕೆ ಭಕ್ತಾಧಿಗಳು ಕುಣಿದು ಕುಪ್ಪಳಿಸಿದರು. ನಾಪೋಕ್ಲು ಸಮೀಪದ ಹೊದ್ದೂರು ಗ್ರಾಮದ ಭಗವತಿ ಕಾಲೋನಿಯಲ್ಲಿ ಜನರು ಮಳೆಯಲ್ಲಿ ನೆನೆದರು.

ಇದನ್ನೂ ಓದಿ: Beggary Rescue : ರಂಜಾನ್ ಹಬ್ಬದಂದು 40ಕ್ಕೂ ಹೆಚ್ಚು ಮಕ್ಕಳಿಂದ ಭಿಕ್ಷಾಟನೆ; ಸಿಕ್ಕಿಬಿದ್ದರು ಲೇಡಿ ಗ್ಯಾಂಗ್‌

ವೀಕೆಂಡ್‌ನಲ್ಲೂ ಭರ್ಜರಿ ಮಳೆ

ಮುಂದಿನ 24 ಗಂಟೆಯಲ್ಲಿ (ಏ.13) ಕರಾವಳಿಯ ದಕ್ಷಿಣ ಕನ್ನಡ, ಉಡುಪಿಯಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಹಾಗೆ ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್‌, ಗದಗ, ಕಲಬುರಗಿ ಸೇರಿದಂತೆ ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿಯಲ್ಲೂ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ.

ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಹಾಸನ, ಕೊಡಗು, ಮಂಡ್ಯ, ರಾಮನಗರ, ವಿಜಯನಗರ, ಮೈಸೂರಿನಲ್ಲೂ ಮಳೆಯಾಗಲಿದೆ.

ಉತ್ತರ ಒಳನಾಡಲ್ಲಿ ರಭಸವಾಗಿ ಬೀಸಲಿದೆ ಗಾಳಿ

ಇನ್ನೂ ಏಪ್ರಿಲ್‌ 12, 13 ಮತ್ತು 14ರಂದು ಗಂಟೆಗೆ 40-50 ಕಿ.ಮೀ ಮತ್ತು 30-40 ಕಿ.ಮೀ ವೇಗದಲ್ಲಿ ಗಾಳಿಯ ವೇಗವು ರಭಸವಾಗಿ ಇರಲಿದೆ. ಮುಂದಿನ 3 ದಿನಗಳು ದಕ್ಷಿಣ ಒಳನಾಡಿನಲ್ಲಿ ಗಾಳಿ ವೇಗವು 30-40 ಕಿ.ಮೀ ತಲುಪುವ ಸಾಧ್ಯತೆ ಇದೆ. ಏ.14ರವರೆಗೆ ರಾಜ್ಯದ ಒಂದೆರಡು ಕಡೆಗಳಲ್ಲಿ ಸಿಡಿಲು, ಗುಡುಗು ಕೂಡಿದ ಮಳೆಯಾಗಲಿದೆ.

ಅಂತೂ ಬೆಂಗಳೂರಿಗೆ ಎಂಟ್ರಿ ಆಗಲಿರುವ ವರುಣ

ರಾಜಧಾನಿ ಬೆಂಗಳೂರಿಗರು ಮಳೆಯಿಲ್ಲದೆ ಬಿಸಿಲಿನಿಂದ ಕಂಗೆಟ್ಟಿದ್ದಾರೆ. ಶುಕ್ರವಾರ ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಇನ್ನೂ ಶುಕ್ರವಾರ ಬಾಗಲಕೋಟೆ ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಬೆಂಗಳೂರು ನಗರ ವ್ಯಾಪ್ತಿಯಲ್ಲಿ 35.8 ಡಿ.ಸೆ ಹಾಗೂ ಬೆಂಗಳೂರು ಗ್ರಾಮಾಂತರದಲ್ಲಿ 36.4 ಡಿಗ್ರಿ ಸೆಲ್ಸಿಯಸ್ ತಾಪಮಾನ ಏರಿಕೆ ಆಗಿತ್ತು.

ಇದನ್ನೂ ಓದಿ: Physical Abuse : ಬಹಿರ್ದೆಸೆಗೆ ತೆರಳಿದ ಮಹಿಳೆ ಮೇಲೆ ಎರಗಿ ಬಲತ್ಕಾರ ಮಾಡಿದ ರಾಕ್ಷಸ

ಯಾವ್ಯಾವ ಜಿಲ್ಲೆಯಲ್ಲಿ ಎಷ್ಟಿದೆ ಗರಿಷ್ಠ ತಾಪಮಾನ

ಕಲಬುರ್ಗಿ- 38.6 ಡಿ.ಸೆ
ಬೆಳಗಾವಿ- 36.8 ಡಿ.ಸೆ
ಬಳ್ಳಾರಿ- 39.7 ಡಿ.ಸೆ
ದಕ್ಷಿಣ ಕನ್ನಡ- 35.6 ಡಿ.ಸೆ
ದಾವಣಗೆರೆ- 38 ಡಿ.ಸೆ
ಚಿತ್ರದುರ್ಗ- 37.6 ಡಿ.ಸೆ
ಮೈಸೂರು – 37.3 ಡಿ.ಸೆ
ಕೊಡಗು- 36.1 ಡಿ.ಸೆ
ಉತ್ತರ ಕನ್ನಡ- 36.6 ಡಿ.ಸೆ
ಕೋಲಾರ- 36.9 ಡಿ.ಸೆ
ಕೊಪ್ಪಳ- 39.7 ಡಿ.ಸೆ
ಶಿವಮೊಗ್ಗ- 37.6 ಡಿ.ಸೆ
ಧಾರವಾಡ- 36.8 ಡಿ.ಸೆ

( 11/04/2024 ಬೆಳಗ್ಗೆ 8.30ರಿಂದ 12/04/2024 ಬೆಳಗ್ಗೆ 8.30ರವರೆಗಿನ ತಾಪಮಾನದ ಆಧಾರದ ಮೇಲೆ ಈ ವರದಿಯನ್ನು ನೀಡಲಾಗಿದೆ)

ಇನ್ನೂ ಗುರುವಾರ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗಿದೆ. ಕರಾವಳಿಯಲ್ಲಿ ಒಣ ಹವೆ ಇತ್ತು. ಮಂಠಾಳ 3, ನಿಂಬರ್ಗಾ ತಾಂಡಾ 3, ಖಜೂರಿ 2, ಇಂಡಿ 2 ಸೆಂ.ಮೀ ಮಳೆಯಾಗಿದೆ. ಆಳಂದ, ಇಳಕಲ್, ನಾರಾಯಣಪುರ ಎಚ್‌ಎಂಎಸ್ , ಬಾಳೆಹೊನ್ನೂರಿನಲ್ಲೂ ತಲಾ 2 ಸೆಂ.ಮೀ ಮಳೆಯಾಗಿದೆ. ಭಾಲ್ಕಿ , ಯಡ್ರಾಮಿ, ಯಡ್ವಾಡ, ಮುದ್ದೇಬಿಹಾಳ, ಕಳಸ 1 ಸೆಂ.ಮೀ ಮಳೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

Lok Sabha Election 2024

Lok Sabha Election 2024: ನಿಮ್ಮ ರಾಜಕೀಯಕ್ಕೆ ನನ್ನ, ಮಠದ ಹೆಸರು ಬಳಸಬೇಡಿ: ಒಕ್ಕಲಿಗ ನಾಯಕರಿಗೆ ನಿರ್ಮಲಾನಂದನಾಥ ಶ್ರೀ ಸೂಚನೆ

Lok Sabha Election 2024: ಕಳೆದ 2 ದಿನಗಳಿಂದ ನಡೆಯುತ್ತಿರುವ ರಾಜಕೀಯ ಬೆಳವಣಿಗೆಯನ್ನು ಗಮನಿಸುತ್ತಿರುವ ನಿರ್ಮಲಾನಂದನಾಥ ಶ್ರೀಗಳು, ಒಕ್ಕಲಿಗ ಹಿರಿಯ ನಾಯಕರಿಗೆ ಸ್ಪಷ್ಟ ಸಂದೇಶವನ್ನು ರವಾನೆ ಮಾಡಿದ್ದಾರೆ. ನಿಮ್ಮ ರಾಜಕೀಯಕ್ಕೆ ಮಠವನ್ನು ಬಳಸಿಕೊಳ್ಳಬೇಡಿ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಎನ್‌. ಚಲುವರಾಯಸ್ವಾಮಿಗೆ ಖಡಕ್ ಸಂದೇಶವನ್ನು ರವಾನೆ ಮಾಡಿದ್ದಾರೆ.

VISTARANEWS.COM


on

Lok Sabha Election 2024 Dont use mutt name for your politics Nirmalanandanatha Sri to Vokkaliga leaders are DK Shivakumar HD Kumaraswamy N Chaluvarayaswamy
Koo

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ (Lok Sabha Election 2024) ರಾಜ್ಯ ರಾಜಕೀಯದಲ್ಲಿ ಈಗ ಒಕ್ಕಲಿಗ ಪಾಲಿಟಿಕ್ಸ್‌ ಜೋರಾಗಿದೆ. ಒಕ್ಕಲಿಗ ಸಮುದಾಯದ ಸಿಎಂ ಆಗಿದ್ದ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಅವರನ್ನು ಕೆಳಗೆ ಇಳಿಸಿದ್ದು ಯಾರು? ಇದನ್ನು ಕೇಳುವ ಶಕ್ತಿ ಆದಿಚುಂಚನಗಿರಿ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿ (Nirmalanandanatha Swamiji) ಅವರಿಗೆ ಇದೆಯಾ? ಎಂಬ ಡಿ.ಕೆ. ಶಿವಕುಮಾರ್‌ (DK Shivakumar) ಹೇಳಿಕೆಗೆ ಈಗ ನಿರ್ಮಲಾನಂದನಾಥ ಶ್ರೀಗಳು ಗರಂ ಆಗಿದ್ದಾರೆ. ನಿಮ್ಮ ರಾಜಕೀಯಕ್ಕೆ ಮಠ ಹಾಗೂ ತಮ್ಮ ಹೆಸರನ್ನು ಬಳಕೆ ಮಾಡಿಕೊಳ್ಳಬೇಡಿ ಎಂದು ಖಡಕ್‌ ಸೂಚನೆಯನ್ನು ನೀಡಿದ್ದಾರೆ.

ಕಳೆದ 2 ದಿನಗಳಿಂದ ನಡೆಯುತ್ತಿರುವ ರಾಜಕೀಯ ಬೆಳವಣಿಗೆಯನ್ನು ಗಮನಿಸುತ್ತಿರುವ ನಿರ್ಮಲಾನಂದನಾಥ ಶ್ರೀಗಳು, ಒಕ್ಕಲಿಗ ಹಿರಿಯ ನಾಯಕರಿಗೆ ಸ್ಪಷ್ಟ ಸಂದೇಶವನ್ನು ರವಾನೆ ಮಾಡಿದ್ದಾರೆ. ನಿಮ್ಮ ರಾಜಕೀಯಕ್ಕೆ ಮಠವನ್ನು ಬಳಸಿಕೊಳ್ಳಬೇಡಿ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಎನ್‌. ಚಲುವರಾಯಸ್ವಾಮಿಗೆ ಖಡಕ್ ಸಂದೇಶವನ್ನು ರವಾನೆ ಮಾಡಿದ್ದಾರೆ.

ನಿಮ್ಮ ವೈಯುಕ್ತಿಕ ಆರೋಪಗಳ ನಡುವೆ ಮಠವನ್ನು ಹಾಗೂ ತಮ್ಮ ಹೆಸರನ್ನು ಎಳೆದು ತರಬೇಡಿ. ನಿಮ್ಮ ಮಾತುಗಳಿಗೆ ಮಠದ ಹೆಸರನ್ನು ಏಕೆ ಬಳಕೆ ಮಾಡುತ್ತೀರಿ? ಮಠಕ್ಕೆ ಅದರದ್ದೇ ಆದ ಗೌರವ, ಘನತೆ ಇದೆ. ಹೀಗಾಗಿ ಇನ್ನು ಮುಂದೆ ಮಾತನಾಡುವಾಗ ಎಚ್ಚರಿಕೆ ವಹಿಸಿ ಎಂದು ತಾಕೀತು ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಜಕೀಯ ತಿರುವು ಪಡೆದಿರುವ “ಒಕ್ಕಲಿಗ” ಪಾಲಿಟಿಕ್ಸ್‌

ಡಿ.ಕೆ. ಶಿವಕುಮಾರ್‌ ಹೇಳಿಕೆ ಬಳಿಕ ಎಚ್‌.ಡಿ. ಕುಮಾರಸ್ವಾಮಿ ವಿರುದ್ಧ ಸಚಿವ ಎನ್. ಚಲುವರಾಯಸ್ವಾಮಿ‌ (N Chaluvarayaswamy) ಗಂಭೀರ ಆರೋಪವನ್ನು ಮಾಡಿದ್ದರು. ಹಳೇ ವಿಷಯವನ್ನು ಮತ್ತೆ ಕೆದಕಿ, ಎಚ್‌ಡಿಕೆ ಅಧಿಕಾರದಲ್ಲಿದ್ದಾಗ ನಿರ್ಮಲಾನಂದನಾಥ ಶ್ರೀಗಳ ಫೋನ್‌ ಟ್ಯಾಪ್‌ (Tap phone) ಮಾಡಿಸಿದ್ದರು ಎಂದು ಆರೋಪ ಮಾಡಿದ್ದರು.

ಎಚ್.ಡಿ. ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗ ಆದಿಚುಂಚನಗಿರಿ ಪೀಠದ ನಿರ್ಮಲಾನಂದನಾಥ ಸ್ವಾಮೀಜಿ ಅವರ ಫೋನ್‌ ಟ್ಯಾಪ್‌ ಮಾಡಿಸಿದ್ದರು. ಈಗ ಅವರ ಬಳಿಗೇ ಹೋಗಿ ಹೇಗೆ ಆಶೀರ್ವಾದವನ್ನು ಕೇಳುತ್ತಿದ್ದಾರೆ ಎಂದು ಸಚಿವ ಚಲುವರಾಯಸ್ವಾಮಿ ಅವರು ಎಚ್‌ಡಿಕೆ ವಿರುದ್ಧ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಂಭೀರ ಆರೋಪ ಮಾಡಿದ್ದರು.

ಸ್ವಾಮೀಜಿಯಾದವರು ಯಾರ ಪರ ಅಥವಾ ಯಾವ ಪಕ್ಷದ ಪರವೂ ಪ್ರಚಾರವನ್ನು ಮಾಡಲು ಆಗುವುದಿಲ್ಲ. ಚುಂಚನಗಿರಿ ಮಠವು ಒಕ್ಕಲಿಗ ಸಮುದಾಯದ ಮಠವಾಗಿದ್ದರೂ ಎಲ್ಲ ಜಾತಿಯವರನ್ನೂ ಒಳಗೂಡಿಸಿಕೊಂಡು ಹೋಗುತ್ತಿರುವ ಮಠವಾಗಿದೆ. ಇದು ಜಾತ್ಯತೀತ ಮಠ ಎಂಬ ಹೆಸರನ್ನು ಗಳಿಸಿದೆ. ಬಾಲಗಂಗಾಧರನಾಥ ಶ್ರೀಗಳು ಎಲ್ಲ ಜಾತಿಯವರನ್ನು ಬೆಳೆಸಿದ್ದಾರೆ. ಜೆಡಿಎಸ್‌ನವರು ಬಾಲಗಂಗಾಧರ ಶ್ರೀಗಳಿಗೆ ಎಷ್ಟು ಕಿರುಕುಳ‌ ಕೊಟ್ಟಿದ್ದರು ಎಂಬುದು ಗೊತ್ತಿರುವ ಸಂಗತಿಯಾಗಿದೆ. ನಾವು ಸಹ ಜೆಎಸ್‌ಎಸ್, ಸಿದ್ದಗಂಗಾ, ಚುಂಚನಗಿರಿ ಮಠಗಳಿಗೆ ಭೇಟಿ ನೀಡಿ ಶ್ರೀಗಳ ಆಶೀರ್ವಾದವನ್ನು ಪಡೆದುಕೊಂಡಿದ್ದೇವೆ. ಚುನಾವಣೆ ಸಮಯದಲ್ಲಿ ಇಂತಹ ಭೇಟಿ ಮಾಮೂಲಿ ಎಂದು ಹೇಳಿದ್ದರು.

ತಿರುಗೇಟು ನೀಡಿದ್ದ ಎಚ್‌ಡಿಕೆ

ಇದಕ್ಕೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ತಿರುಗೇಟು ನೀಡಿದ್ದು, ನಾನು ಫೋನ್ ಟ್ಯಾಪಿಂಗ್ ಮಾಡುತ್ತಿದ್ದರೆ ನನ್ನ ಸರ್ಕಾರವನ್ನು ಏಕೆ ಬೀಳಿಸಿಕೊಳ್ಳುತ್ತಿದ್ದೆ ಎಂದು ಪ್ರಶ್ನೆ ಹಾಕಿದ್ದಾರೆ. ಅಲ್ಲದೆ, ಬೇಕಿದ್ದರೆ ಮತ್ತೆ ತನಿಖೆ ಮಾಡಿಸಿಕೊಳ್ಳಲಿ ಎಂದು ಸವಾಲನ್ನು ಸಹ ಹಾಕಿದ್ದರು.

ಹಾಸನ ಜಿಲ್ಲೆಯ ಅರಕಲಗೂಡಿನ ರಾಮನಾಥಪುರದಲ್ಲಿ ಚುನಾವಣಾ ಪ್ರಚಾರದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ್ದ ಎಚ್.ಡಿ. ಕುಮಾರಸ್ವಾಮಿ, ನಾನು ಫೋನ್ ಟ್ಯಾಪಿಂಗ್ ಮಾಡಿಕೊಳ್ಳುತ್ತಿದ್ದರೆ ನನ್ನ ಸರ್ಕಾರವನ್ನು ಯಾಕೆ ಬೀಳಿಸಿಕೊಳ್ಳುತ್ತಿದ್ದೆ? ಅವರು ತನಿಖೆ ಮಾಡಿಕೊಳ್ಳಲಿ, ಈವರೆಗೆ ತನಿಖೆ ಮಾಡಿದರಲ್ಲ, ಅದು ಏನಾಯಿತು? ಎಂದು ತರಾಟೆಗೆ ತೆಗೆದುಕೊಂಡಿದ್ದರು.

ಆದಿಚುಂಚನಗಿರಿ ಮಠಕ್ಕೆ ಪರ್ಯಾಯವಾಗಿ ಮಠ ಮಾಡಿದರು ಎನ್ನುವ ಬಗ್ಗೆ ಕೇಳಲಾದ ಪ್ರಶ್ನೆಗೆ ಖಾರವಾಗಿ ಉತ್ತರಿಸಿದ್ದ ಎಚ್‌ಡಿಕೆ, ಬೇರೆ ಸಮುದಾಯಗಳಲ್ಲೂ ಎಷ್ಟು ಮಠಗಳಿಲ್ಲ? ನಮ್ಮ ಸಮುದಾಯದಲ್ಲೂ ಅಂಥ ಬೆಳವಣಿಗೆ ಆಗಲಿ ಎಂದು ಇನ್ನೊಬ್ಬರಿಗೂ ಸಹಾಯ ಮಾಡಿದ್ದೇವೆ. ಅದರಲ್ಲಿ ಏನಿದೆ? ಅದನ್ನು ರಾಜಕೀಯಕ್ಕೆ ಬಳಸಿಕೊಳ್ಳಬೇಕಾ? ಎಂದು ಕೇಳಿದ್ದರು.

ಸ್ವಾಮೀಜಿ ಭೇಟಿ ರಾಜಕೀಯವೇ?

ಸ್ವಾಮೀಜಿ ಅವರನ್ನು ಭೇಟಿ ಮಾಡುವುದಕ್ಕೆ ಕಾಂಗ್ರೆಸ್‌ನವರು ಎಷ್ಟು ಜನ ಹೋಗಿದ್ದರು? ಎಲ್ಲ ಟಿವಿಗಳಲ್ಲಿ ಈ ಬಗ್ಗೆ ವಿಡಿಯೊ ಬಂದಿದೆಯಲ್ಲ. ಇವರು ಏನು ಬೇಕಾದರೂ ಮಾಡಬಹುದು, ನಾವು ಮಾಡುವ ಹಾಗಿಲ್ಲವೇ? ಅದು ಕೂಡ ಒಂದು ದೊಡ್ಡ ರಾಜಕೀಯನಾ? ವರ್ಷದ ಮೊದಲ ದಿನ ನಮ್ಮ ಸಮುದಾಯದ ಗುರು ಹಿರಿಯರ ಆಶೀರ್ವಾದ ಪಡೆಯುತ್ತೇವೆ. ಅದೇನು ಮಹಾ ಅಪರಾಧವಾ? ಜ್ವರ ಬಂದಾಗ ಆಸ್ಪತ್ರೆಗೆ ಹೋಗದೆ ಇನ್ನೆಲ್ಲಿಗೆ ಹೋಗಲು ಸಾಧ್ಯ? ನಾನು 140 ಮಠಗಳಿಗೆ ಅನುದಾನ ನೀಡಿದ್ದೆ. ಮಠಗಳು ಮಾಡುತ್ತಿರುವ ಒಳ್ಳೆಯ ಕೆಲಸಗಳಿಗೆ ಸಹಕಾರ ನೀಡಿದ್ದೆ. ಇದೇನು ಹೊಸದಲ್ಲ ಎಂದು ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದರು.

ಇದನ್ನೂ ಓದಿ: Lok Sabha Election 2024: ಸೋಲಿಸಿದರೆ ಸಮಸ್ಯೆಗಳಿಗೆ ನೀವೇ ಕಾರಣರಾಗುತ್ತೀರಿ; ಅಪಾರ್ಟ್‌ಮೆಂಟ್‌ನಲ್ಲಿ ಡಿಕೆಶಿ ಮತಯಾಚನೆ

ಒಂದು ವರ್ಷದೊಳಗೆ ರಾಜ್ಯದಲ್ಲಿ ರಾಜಕೀಯ ಬದಲಾವಣೆ ಆಗಲಿದೆಯೇ ಎನ್ನುವ ಪ್ರಶ್ನೆಗೆ ಉತ್ತರಿಸಿದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಕಾದು ನೋಡಿ. ರಾಜಕೀಯ ಎಂದರೆ ಅದು ಹರಿಯುವ ನೀರು. ಯಾವಾಗ ಏನೇನಾಗುತ್ತದೆಯೋ ನಮಗೂ ಗೊತ್ತಾಗಲ್ಲ. ಅವರಿಗೂ ಗೊತ್ತಾಗೋದಿಲ್ಲ. ಸಚಿವರೇ ಹೇಳುತ್ತಿದ್ದಾರೆ, ಕಾಂಗ್ರೆಸ್ ನಾಯಕರೇ ದಿನ ಬೆಳಗಾದರೆ ಹೇಳುತ್ತಿದ್ದಾರಲ್ಲ, ನೀವು ಅವರನ್ನೇ ಕೇಳಿ ಎಂದು ಮಾಧ್ಯಮಗಳಿಗೆ ಹೇಳಿದ್ದರು.

ಡಿಕೆಶಿ ವಿರುದ್ಧ ಕಿಡಿ

ಜೆಡಿಎಸ್ ಎಲ್ಲಿದೆ ಎನ್ನುವ ದುರಹಂಕಾರದ ಮಾತುಗಳನ್ನು ‌ಡಿಸಿಎಂ ಡಿ.ಕೆ. ಶಿವಕುಮಾರ್ ಆಡುತ್ತಿದ್ದಾರೆ. ಇವರ ಸಹವಾಸ ಮಾಡಿದ್ದಕ್ಕೆ ಈಗ ಜೆಡಿಎಸ್ ಈ ಹಂತಕ್ಕೆ ಬಂದಿದೆ. ಐದು ವರ್ಷ ಅಧಿಕಾರ ಮಾಡಿ ಅಂತ ಕೊಟ್ಟು ಬುಡ ಸಮೇತ ತೆಗೆಯೋಕೆ ಹೊರಟರಲ್ಲ, ಅದಕ್ಕೆ‌ ಮರು ಜೀವ ಕೊಡುವುದಕ್ಕೆ ಪ್ರಯತ್ನ ಮಾಡುತ್ತಿದ್ದೇನೆ. ಪಕ್ಕದಲ್ಲಿಯೇ ಕುಳಿತು ಹಳ್ಳ ತೋಡಿದರಲ್ಲ, ಎಲ್ಲವೂ ನೆನಪಿದೆ ನನಗೆ ಎಂದು ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದರು.

Continue Reading

Lok Sabha Election 2024

Lok Sabha Election 2024: ಜೆಡಿಎಸ್‌ ನಾಯಕನೆಂದು ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷನನ್ನೇ ಪಕ್ಷಕ್ಕೆ ಸೇರಿಸಿಕೊಂಡರೇ ಡಿಕೆಶಿ?

Lok Sabha Election 2024: “ಕಾಂಗ್ರೆಸಿಗರಿಗೆ, ಅದರಲ್ಲೂ ಡೂಪ್ಲಿಕೇಟ್ ಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಸೋಲಿನ ಭೀತಿ ಎಷ್ಟರಮಟ್ಟಿಗೆ ಕಾಡುತ್ತಿದೆ ಎಂದರೆ, ಯುವ ಕಾಂಗ್ರೆಸ್ ಕಾರ್ಯಕರ್ತರಿಗೇ ಕಾಂಗ್ರೆಸ್ ಶಾಲು ಹಾಕಿ, ಅವರನ್ನು ಜೆಡಿಎಸ್ ಕಾರ್ಯಕರ್ತರು ಎಂದು ಬಿಂಬಿಸಿ, ಅವರೆಲ್ಲ ಕಾಂಗ್ರೆಸ್ ಸೇರಿದ್ದಾರೆ ಎಂದು ಪ್ರಚಾರ ಪಡೆಯುತ್ತಿದ್ದಾರೆ.ಸೋಲಿನ ಭೀತಿ, ಹತಾಶೆ ಎಂತೆಂತಹ ಗಿಮಿಕ್‌ಗಳನ್ನು ಮಾಡಿಸುತ್ತದೆ ಎನ್ನುವುದಕ್ಕೆ ಇದು ಜೀವಂತ ಸಾಕ್ಷಿ” ಎಂದು ಜೆಡಿಎಸ್‌ ದಾಖಲೆ ಸಹಿತ ಪೋಸ್ಟ್‌ ಮಾಡಿದೆ.

VISTARANEWS.COM


on

Lok Sabha Election 2024 DK Shivakumar inducts District Youth Congress President as JDS leader
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಮತದಾರರನ್ನು ಸೆಳೆಯಲು ನಾನಾ ಕಸರತ್ತುಗಳನ್ನು ಮಾಡುತ್ತಿವೆ. ಅಲ್ಲದೆ, ಪಕ್ಷಾಂತರ ಪರ್ವ ಸಹ ನಡೆಯುತ್ತಿವೆ. ವಿವಿಧ ಪಕ್ಷಗಳ ಮುಖಂಡರನ್ನು, ಯುವ ನಾಯಕರನ್ನು ಸೆಳೆದು ಎದುರಾಳಿ ಸ್ಪರ್ಧಿಗಳಿಗೆ ಟಕ್ಕರ್‌ ಕೊಡಲು ಪ್ಲ್ಯಾನ್‌ಗಳನ್ನು ರೂಪಿಸಿಕೊಳ್ಳಲಾಗುತ್ತಿದೆ. ಈಗ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ (Bangalore Rural Lok Sabha constituency) ಜಿದ್ದಾಜಿದ್ದಿನ ಹೋರಾಟ ನಡೆಯುತ್ತಿದೆ. ಇದರ ಭಾಗವಾಗಿ ಡಿಸಿಎಂ ಡಿ.ಕೆ. ಶಿವಕುಮಾರ್‌ ನೇತೃತ್ವದಲ್ಲಿ ಆಪರೇಷನ್‌ ಹಸ್ತ ನಡೆಯುತ್ತಿದೆ. ಈ ಹೊತ್ತಿನಲ್ಲಿ ಗುರುವಾರ ಜೆಡಿಎಸ್‌ನಿಂದ ಯುವ ಮುಖಂಡರನ್ನು ಕಾಂಗ್ರೆಸ್‌ಗೆ ಸೇರಿಸಿಕೊಳ್ಳಾಗಿದೆ ಎಂದು ಹೇಳಲಾಗಿತ್ತು. ಆದರೆ, ಇದಕ್ಕೆ ಜೆಡಿಎಸ್‌ (JDS Karnataka) ತಿರುಗೇಟು ನೀಡಿದ್ದು, ತನ್ನ ಪಕ್ಷದವರನ್ನೇ ಜೆಡಿಎಸ್‌ ಕಾರ್ಯಕರ್ತನೆಂದು ಸೇರಿಸಿಕೊಳ್ಳಲಾಗಿದೆ ಎಂದು ಕಾಲೆಳೆದಿದೆ. ಈಗ ಕಾಂಗ್ರೆಸ್‌ ಈ ಬಗ್ಗೆ ಸ್ಪಷ್ಟನೆ ಕೊಡಬೇಕಿದೆ.

ಈ ಬಗ್ಗೆ ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಜೆಡಿಎಸ್‌, ಸಾಕ್ಷಿಗಾಗಿ ಕೆಲವೊಂದಿಷ್ಟು ಫೋಟೊಗಳನ್ನು ಹಾಕಿ ಕಾಂಗ್ರೆಸ್‌ಗೆ ಪ್ರಶ್ನೆಗಳನ್ನು ಕೇಳಿದೆ. ತಮ್ಮ ಪಕ್ಷದ ಕಾರ್ಯಕರ್ತರಿಗೇ ಕಾಂಗ್ರೆಸ್‌ ಶಾಲು ಹಾಕಿ ಜೆಡಿಎಸ್‌ ಕಾರ್ಯಕರ್ತರು ಎಂದು ಬಿಂಬಿಸಲು ಹೊರಟಿದೆ ಎಂದು ವ್ಯಂಗ್ಯವಾಡಿದೆ.

ಇದನ್ನೂ ಓದಿ: Lok Sabha Election 2024: ಸೋಲಿಸಿದರೆ ಸಮಸ್ಯೆಗಳಿಗೆ ನೀವೇ ಕಾರಣರಾಗುತ್ತೀರಿ; ಅಪಾರ್ಟ್‌ಮೆಂಟ್‌ನಲ್ಲಿ ಡಿಕೆಶಿ ಮತಯಾಚನೆ

ಜೆಡಿಎಸ್‌ ಪೋಸ್ಟ್‌ನಲ್ಲೇನಿದೆ?

“ಕಾಂಗ್ರೆಸಿಗರಿಗೆ, ಅದರಲ್ಲೂ ಡೂಪ್ಲಿಕೇಟ್ ಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಸೋಲಿನ ಭೀತಿ ಎಷ್ಟರಮಟ್ಟಿಗೆ ಕಾಡುತ್ತಿದೆ ಎಂದರೆ, ಯುವ ಕಾಂಗ್ರೆಸ್ ಕಾರ್ಯಕರ್ತರಿಗೇ ಕಾಂಗ್ರೆಸ್ ಶಾಲು ಹಾಕಿ, ಅವರನ್ನು ಜೆಡಿಎಸ್ ಕಾರ್ಯಕರ್ತರು ಎಂದು ಬಿಂಬಿಸಿ, ಅವರೆಲ್ಲ ಕಾಂಗ್ರೆಸ್ ಸೇರಿದ್ದಾರೆ ಎಂದು ಪ್ರಚಾರ ಪಡೆಯುತ್ತಿದ್ದಾರೆ.ಸೋಲಿನ ಭೀತಿ, ಹತಾಶೆ ಎಂತೆಂತಹ ಗಿಮಿಕ್‌ಗಳನ್ನು ಮಾಡಿಸುತ್ತದೆ ಎನ್ನುವುದಕ್ಕೆ ಇದು ಜೀವಂತ ಸಾಕ್ಷಿ” ಎಂದು ಜೆಡಿಎಸ್‌ ದಾಖಲೆ ಸಹಿತ ಪೋಸ್ಟ್‌ ಮಾಡಿದೆ.

ಏನಿದು ಮಿಡ್‌ನೈಟ್‌ ಆಪರೇಷನ್?

ಬೆಂಗಳೂರು ಗ್ರಾಮಾಂತರದಲ್ಲಿ ಕಾಂಗ್ರೆಸ್ ‌ಮಿಡ್ ನೈಟ್ ಆಪರೇಷನ್ ಮಾಡಲು ಹೋಗಿ ಎಡವಟ್ಟು ಮಾಡಿಕೊಂಡಿದೆ ಎನ್ನಲಾಗಿದೆ. ತನ್ನ ಪಕ್ಷದ ಕಾರ್ಯಕರ್ತರಿಗೇ ಪಕ್ಷದ ಶಾಲು ಹಾಕಿ ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಬಂದಿದ್ದಾರೆ. ಇನ್ನು ರಾಜ್ಯದಲ್ಲಿ ಜೆಡಿಎಸ್‌ ಕಥೆ ಮುಗಿಯಿತು. ಹೀಗಾಗಿ ಸಾಲು ಸಾಲಾಗಿ ಆ ಪಕ್ಷದ ಮುಖಂಡರು, ಯುವ ನಾಯಕರು ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ ಎಂದು ಬಿಂಬಿಸಲಾಗಿತ್ತು. ಆದರೆ, ಇದರ ಸತ್ಯಾನ್ವೇಷಣೆಗೆ ಇಳಿದ ಜೆಡಿಎಸ್‌, ಕಾಂಗ್ರೆಸ್‌ ಸೇರ್ಪಡೆಯಾದ ಆ ಯುವ ನಾಯಕನ ಫೋಟೊವನ್ನು ಹುಡುಕಾಡಿದೆ. ಅವರು ರಾಮನಗರ ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ಸಚಿನ್‌ ಗೌಡ ಎಂಬುದು ತಿಳಿದುಬಂದಿದೆ. ಅಲ್ಲದೆ, ಸಚಿನ್‌ ಗೌಡ ಅವರು ಈ ಹಿಂದೆ ಡಿ.ಕೆ ಸುರೇಶ್‌ ಹಾಗೂ ಡಿ.ಕೆ. ಶಿವಕುಮಾರ್‌ ಜತೆ ನಿಂತುಕೊಂಡಿರುವ ಫೋಟೊವನ್ನು ಸಹ ಹಾಕಿ ಜೆಡಿಎಸ್‌ ಪೋಸ್ಟ್‌ ಮಾಡಿದೆ. ಹೀಗಾಗಿ ಇದೊಂದು ಸೋಲಿನ ಹತಾಶೆ ಎಂದು ಜೆಡಿಎಸ್‌ ಕುಟುಕಿದೆ. ಆದರೆ, ಕಾಂಗ್ರೆಸ್‌ ಆಗಲೀ, ಡಿಕೆ ಬ್ರದರ್ಸ್‌ ಆಗಲಿ ಇದುವರೆಗೆ ಇದರ ಬಗ್ಗೆ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ.

Continue Reading

ಮಳೆ

Karnataka Weather : ಬೆಂಗಳೂರಿಗರಿಗೆ ಗುಡ್‌ ನ್ಯೂಸ್‌ ಕೊಟ್ಟ ಹವಾಮಾನ ಇಲಾಖೆ; ಎಲ್ಲೆಲ್ಲಿ ಆಗುತ್ತೆ ಮಳೆ

Karnataka Weather Forecast : ರಾಜ್ಯಾದ್ಯಂತ ಬಿಸಿಲ ತಾಪಮಾನದ ನಡುವೆಯೂ ಅಲ್ಲಲ್ಲಿ ಮಳೆಯಾಗುತ್ತಿದ್ದು, ಶುಕ್ರವಾರ ಹಲವೆಡೆ ಗುಡುಗು, ಸಿಡಿಲು ಸಹಿತ (Rain News) ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಮುಂದಿನ 6 ದಿನಗಳ ಕಾಲ ವಿವಿಧೆಡೆ ಮಳೆ ಮುನ್ಸೂಚೆನೆ ಇದ್ದು, ಯಾವ್ಯಾವ ಜಿಲ್ಲೆಗೆ ಅಲರ್ಟ್‌ ನೀಡಲಾಗಿದೆ ಎಂಬುದರ ಮಾಹಿತಿ ಇಲ್ಲಿದೆ.

VISTARANEWS.COM


on

By

Karnataka rain
Koo

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಒಂದು ವಾರ ಗುಡುಗು, ಸಿಡಿಲು ಸಹಿತ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ಕಾದ ಕೆಂಡವಾಗಿದ್ದ ಬೆಂಗಳೂರಿನಲ್ಲೂ ಸಂಜೆ ಅಥವಾ ರಾತ್ರಿ ಸಮಯದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಏಪ್ರಿಲ್ 12ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ‌ ಹಾಗೂ ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್‌, ಗದಗ, ಕಲಬುರಗಿ ಸೇರಿದಂತೆ ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿಯಲ್ಲಿ ಮಳೆಯ ಸಿಂಚನವಾಗಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ವಿಜಯನಗರ, ಮೈಸೂರಿನಲ್ಲೂ ಮಳೆಯಾಗಲಿದೆ. ಮಲೆನಾಡಿನ ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರಿನ ಒಂದೆರಡು ಕಡೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ. ಉಳಿದೆಡೆ ಒಣ ಹವೆ ಇರಲಿದೆ.

ಏಪ್ರಿಲ್‌ 13ರಂದು ದಕ್ಷಿಣ ಕನ್ನಡ, ಉಡುಪಿ‌ ಹಾಗೂ ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್‌, ಗದಗ, ಕಲಬುರಗಿ ಸೇರಿದಂತೆ ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಹಾಸನ, ಕೊಡಗು, ಮಂಡ್ಯ, ರಾಮನಗರ, ವಿಜಯನಗರ, ಮೈಸೂರಿನಲ್ಲೂ ಮಳೆಯಾಗಲಿದೆ.

ಏಪ್ರಿಲ್‌ 14ರಂದು ದಕ್ಷಿಣ ಕನ್ನಡ, ಉಡುಪಿ‌, ಬಾಗಲಕೋಟೆ, ಬೆಳಗಾವಿ, ಕಲಬುರಗಿ, ವಿಜಯಪುರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಕೊಡಗು, ಶಿವಮೊಗ್ಗ, ಮೈಸೂರಿನ ಒಂದೆರಡುಗಳಲ್ಲಿ ಹಗುರ ಮಳೆಯಾಗಲಿದೆ.

ಏಪ್ರಿಲ್‌ 15ರಂದು ದಕ್ಷಿನ ಕನ್ನಡ, ಉಡುಪಿ, ಉತ್ತರ ಕನ್ನಡ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

ಇದನ್ನೂ ಓದಿ: Money Guide: ಹೋಮ್‌ ಲೋನ್‌ ಇಎಂಐ ಕಡಿಮೆ ಮಾಡಬೇಕೆ? ಚಿಂತೆ ಬಿಟ್ಟು ಈ ಟಿಪ್ಸ್‌ ಫಾಲೋ ಮಾಡಿ

ಏಪ್ರಿಲ್ 16 ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಗದಗ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಕೊಡಗು, ಮಂಡ್ಯ, ಮೈಸೂರು, ವಿಜಯನಗರ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

ಏಪ್ರಿಲ್ 17ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗ, ತುಮಕೂರು, ವಿಜಯನಗರದ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

ತಾಪಮಾನದ ಮುನ್ಸೂಚನೆ

ಮುಂದಿನ 2 ದಿನಗಳಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Rishabh Pant
ಕ್ರಿಕೆಟ್19 mins ago

Rishabh Pant: ಐಪಿಎಲ್​ನಲ್ಲಿ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದ ರಿಷಭ್ ಪಂತ್​

IPL 2024
ಪ್ರಮುಖ ಸುದ್ದಿ49 mins ago

IPL 2024 : ಲಕ್ನೊ ಸೂಪರ್​ ಜೈಂಟ್ಸ್ ವಿರುದ್ಧ ಡೆಲ್ಲಿ ತಂಡಕ್ಕೆ 6 ವಿಕೆಟ್​ ವಿಜಯ

NIA Raid
ಕರ್ನಾಟಕ1 hour ago

NIA Raid: ಹುಬ್ಬಳ್ಳಿಯಲ್ಲಿ ಶಂಕಿತ ವ್ಯಕ್ತಿಯನ್ನು ವಶಕ್ಕೆ ಪಡೆದ ಎನ್‌ಐಎ

Khalistan Terrorist
ಪ್ರಮುಖ ಸುದ್ದಿ1 hour ago

Khalistani Terrorist : ದೆಹಲಿ ವಿಮಾನ ನಿಲ್ದಾಣದಲ್ಲಿ ಖಲಿಸ್ತಾನಿ ಉಗ್ರ ಪ್ರಭ್​ಪ್ರೀತ್ ಸಿಂಗ್ ಸೆರೆ

Lok Sabha Election 2024
ಕರ್ನಾಟಕ1 hour ago

Lok Sabha Election 2024: ಉತ್ತರ ಕನ್ನಡ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ನಾಮಪತ್ರ ಸಲ್ಲಿಕೆ; ಇವರ ಆಸ್ತಿ ಎಷ್ಟು?

Pakistan
ಪ್ರಮುಖ ಸುದ್ದಿ2 hours ago

United Kingdom: ‘ಪ್ರಯಾಣಕ್ಕೆಅಪಾಯಕಾರಿ’ ದೇಶಗಳ ಪಟ್ಟಿಗೆ ಪಾಕಿಸ್ತಾನವನ್ನು ಸೇರಿಸಿದ ಬ್ರಿಟನ್​!

Chikkaballapur Lok Sabha Constituency BJP Candidate Dr K Sudhakar is campaigning in various places today
ಚಿಕ್ಕಬಳ್ಳಾಪುರ2 hours ago

Lok Sabha Election 2024: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವಿವಿಧೆಡೆ ಬಿಜೆಪಿ ಅಭ್ಯರ್ಥಿ ಡಾ. ಕೆ. ಸುಧಾಕರ್ ರಿಂದ ಏ.13ರಂದು ಪ್ರಚಾರ

Union Minister Pralhad Joshi statement
ಹುಬ್ಬಳ್ಳಿ2 hours ago

Lok Sabha Election 2024: ದೇಶದ್ರೋಹಿ ಕೃತ್ಯ ನಿಗ್ರಹಕ್ಕೆ ಮೋದಿ ಸರ್ಕಾರವೇ ಬೇಕು: ಪ್ರಲ್ಹಾದ್‌ ಜೋಶಿ

Union Minister Pralhad Joshi latest statement in hubli
ಕರ್ನಾಟಕ2 hours ago

Lok Sabha Election 2024: ರಾಜ್ಯದಲ್ಲಿ ಕಾಂಗ್ರೆಸ್ 3ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲಲ್ಲ: ಪ್ರಲ್ಹಾದ್‌ ಜೋಶಿ ಸವಾಲು

Rashtrotthana Hospital adopts Dozi technology to provide greater safety to patients
ಕರ್ನಾಟಕ2 hours ago

Rashtrotthana Parishat: ಡೋಝಿ ತಂತ್ರಜ್ಞಾನ ಅಳವಡಿಸಿಕೊಂಡ ಜಯದೇವ ಸ್ಮಾರಕ ರಾಷ್ಟ್ರೋತ್ಥಾನ ಆಸ್ಪತ್ರೆ

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Rameshwaram Cafe Blast Fake IDs created and captured bombers hiding in Kolkata
ಕ್ರೈಂ12 hours ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ19 hours ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

Lok Sabha Election 2024 Vokkaliga support us says DK Shivakumar
ಕರ್ನಾಟಕ1 day ago

Lok Sabha Election 2024: ಒಕ್ಕಲಿಗರ ಬೆಂಬಲ ನಮಗೇ; ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

Lok Sabha Election 2024 Rahul Gandhi should apologise for lying demand BS Yediyurappa
Lok Sabha Election 20241 day ago

Lok Sabha Election 2024: ಸುಳ್ಳು ಹೇಳಿದ ರಾಹುಲ್‌ ಗಾಂಧಿ ಕ್ಷಮೆ ಕೋರಲಿ: ಬಿ.ಎಸ್.‌ ಯಡಿಯೂರಪ್ಪ ಆಗ್ರಹ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಹೂಡಿಕೆ ವ್ಯವಹಾರದಲ್ಲಿ ಅಧಿಕ ಲಾಭ

Ugadi 2024
ಬಾಗಲಕೋಟೆ3 days ago

Ugadi 2024 : ಬೀಳಗಿಯ ಎಕ್ಕೆ ಎಲೆ ಭವಿಷ್ಯ; ಈಶಾನ್ಯ, ಪಶ್ಚಿಮ ಭಾಗದಲ್ಲಿ ಭಾರಿ ಕಂಟಕ!

ugadi 2024
ಧಾರವಾಡ3 days ago

Ugadi 2024 : ಹನುಮನಕೊಪ್ಪದಲ್ಲಿ ಭವಿಷ್ಯ ನುಡಿದ ಬೊಂಬೆ! ಮುಂದಿನ ಪ್ರಧಾನಿ ಯಾರಾಗ್ತಾರೆ?

Dina Bhavishya
ಭವಿಷ್ಯ4 days ago

Dina Bhavishya : ನೂತನ ಸಂವತ್ಸರದಲ್ಲಿ ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ

Dina Bhavishya
ಭವಿಷ್ಯ5 days ago

Dina Bhavishya : ಅತಿರೇಕದ ಮಾತು ಈ ರಾಶಿಯವರಿಗೆ ಒಳ್ಳೆಯದಲ್ಲ

Rockstar Bull of bull festival king fame passes away
ಹಾವೇರಿ5 days ago

Rockstar Bull: ಹೋರಿ ಹಬ್ಬದ ಕಿಂಗ್ ಖ್ಯಾತಿಯ ರಾಕ್‌ ಸ್ಟಾರ್‌ ಬುಲ್‌ ಇನ್ನಿಲ್ಲ; ಬೊಮ್ಮಾಯಿ ಕಂಬನಿ

ಟ್ರೆಂಡಿಂಗ್‌