ಆನೇಕಲ್: ರಾಯಲ್ ಇನ್ಫೀಲ್ಡ್ ಬೈಕ್ ಮತ್ತು ಕಾರಿನ ನಡುವೆ ಅಪಘಾತ (road accident) ನಡೆದಿದೆ. ಪರಿಣಾಮ ಬೈಕ್‌ನ ಹಿಂಬದಿ ಕುಳಿತಿದ್ದ ಮಹಿಳೆ ದಾರುಣವಾಗಿ ಮೃತಪಟ್ಟಿದ್ದಾರೆ. ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿ ವೀರಸಂದ್ರ ಬಳಿ ಘಟನೆ ನಡೆದಿದೆ.
ಹೊಸೂರು ಮೂಲದ ಹಿಂದೂಮತಿ ಮೃತ ದುರ್ದೈವಿ. ಹಿಂದೂಮತಿ ಎಲೆಕ್ಟ್ರಾನಿಕ್ ಸಿಟಿಯ ಕಾವೇರಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು. ಸೋಮವಾರ ಬೆಳಗ್ಗೆ ಹೊಸೂರಿನಿಂದ ಎಲೆಕ್ಟ್ರಾನಿಕ್ ಸಿಟಿ ಕಡೆಗೆ ಬೈಕ್‌ನಲ್ಲಿ ಬರುವಾಗ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕೆಳಗೆ ಬಿದ್ದ ಹಿಂದೂಮತಿ ತಲೆಗೆ ಗಂಭೀರ ಗಾಯಗೊಂಡಿದ್ದಾರೆ.
ಕೂಡಲೇ ಸ್ಥಳೀಯರು ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಾರು ಹಾಗೂ ಬೈಕ್ ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Murder Case : ಸಾಲ ತೀರಿಸಲು ವೃದ್ಧೆ ಸುಶೀಲಮ್ಮಳ ಉಸಿರುಗಟ್ಟಿಸಿ ಕೊಂದ
ಸಾವಿನ ರಹದಾರಿಯಾದ ರಾಷ್ಟ್ರೀಯ ಹೆದ್ದಾರಿ
ಬೆಂಗಳೂರು- ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯು ಸ್ಥಳೀಯರ ಪಾಲಿಗೆ ಸಾವಿನ ರಹದಾರಿಯಾಗಿದೆ. ನಿತ್ಯ ಅಪಘಾತಗಳಿಂದ ಬೇಸತ್ತಿದ್ದಾರೆ. ದೇವನಹಳ್ಳಿ ತಾಲೂಕಿನ ವೆಂಕಟಗಿರಿ ಕೋಟೆ ಬಳಿ ಅಂಡರ್ ಪಾಸ್ ನಿರ್ಮಿಸಲು ಒತ್ತಾಯಿಸಿದ್ದಾರೆ. ಶಾಲಾ-ಕಾಲೇಜು ಮಕ್ಕಳು, ಬೈಕ್ ಸವಾರರು ಹೆದ್ದಾರಿ ಕ್ರಾಸ್ ಮಾಡಲು ಪರದಾಡುವಂತಾಗಿದೆ.
ವಾರಾಂತ್ಯದಲ್ಲಿ ಈಶಾ ಫೌಂಡೇಶನ್, ನಂದಿಬೆಟ್ಟಕ್ಕೆ ಹೆಚ್ಚು ವಾಹನಗಳು ಸಂಚರಿಸುತ್ತವೆ. ಕಳೆದ ಒಂದು ವರ್ಷದಲ್ಲಿ 76 ಅಪಘಾತಗಳಾಗಿದ್ದು, 36 ಜನ ಜೀವ ಕಳೆದುಕೊಂಡಿದ್ದಾರೆ. ವೆಂಕಟಗಿರಿ ಕೋಟೆ, ಮುದುಗುರ್ಕಿ,ಬುಳ್ಳಹಳ್ಳಿ ಸೇರಿದಂತೆ ಹತ್ತಾರು ಗ್ರಾಮಗಳ ಗ್ರಾಮಸ್ಥರ ಓಡಾಟಕ್ಕೆ ಸಂಕಷ್ಟ ಎದುರಾಗಿದೆ. ಅಂಡರ್ ಪಾಸ್ ಅಥವಾ ಸ್ಕೈ ವಾಕ್ ನಿರ್ಮಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಸ್ಥಳೀಯ ಜನ ಪ್ರತಿನಿಧಿಗಳಿಗೆ ಮನವಿ ಮಾಡಿದ್ದಾರೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ