Road Accident: 2 ಬಲಿ ಪಡೆದ ಲಾರಿ; ಹೃದಯದಲ್ಲಿ ರಂಧ್ರವಿದ್ದ ಮಗುವಿನ ಚಿಕಿತ್ಸೆಗೆ ಬಂದ ಗರ್ಭಿಣಿ ಸಾವು - Vistara News

ಬೆಂಗಳೂರು ಗ್ರಾಮಾಂತರ

Road Accident: 2 ಬಲಿ ಪಡೆದ ಲಾರಿ; ಹೃದಯದಲ್ಲಿ ರಂಧ್ರವಿದ್ದ ಮಗುವಿನ ಚಿಕಿತ್ಸೆಗೆ ಬಂದ ಗರ್ಭಿಣಿ ಸಾವು

ಹೊಟ್ಟೆಯಲ್ಲಿದ್ದ ಮಗುವಿನ ಹೃದಯದಲ್ಲಿ ರಂಧ್ರ ಇರುವುದು ಗೊತ್ತಾಗಿತ್ತು. ಇದೇ ಕಾರಣಕ್ಕೆ ಚಿಕಿತ್ಸೆಗಾಗಿ ರುಕಿಯ ತನ್ನ ಅಕ್ಕನ ಜೊತೆಗೆ ಆಂಧ್ರದಿಂದ ಬಂದಿದ್ದರು.

VISTARANEWS.COM


on

bommasandra accident deaths
ಮೃತರಾದ ರುಕಿಯಾ, ಲಕ್ಷ್ಮಮ್ಮ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಆನೇಕಲ್: ರಸ್ತೆ ದಾಟಿಬಿಟ್ಟಿದ್ದರೆ ಆಕೆ ಹಾಗೂ ಆಕೆಯ ಹೊಟ್ಟೆಯಲ್ಲಿದ್ದ ಮಗು ಸುರಕ್ಷಿತವಾಗಿರುತ್ತಿದ್ದರು. ಆಕೆ ಹೊಟ್ಟೆಯಲ್ಲಿದ್ದ ಮಗುವಿನ ಹೃದಯದಲ್ಲಿದ್ದ ರಂಧ್ರದ ಚಿಕಿತ್ಸೆಗಾಗಿ ಆಂಧ್ರದಿಂದ ಬೆಂಗಳೂರಿಗೆ ಬಂದಿದ್ದಳು. ಆದರೆ ಲಾರಿಯೊಂದು (Road accident) ಆಕೆಯನ್ನು ಬಲಿ ಪಡೆದಿದೆ.

ಭೀಕರ ಅಪಘಾತದಲ್ಲಿ (Road accident) ಲಾರಿ ಮೈಮೇಲೆ ಹರಿದು‌ 7 ತಿಂಗಳ ಗರ್ಭಿಣಿಯೊಬ್ಬರು ಸೇರಿದಂತೆ (pregnant death) ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರು ಹೊಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಬೊಮ್ಮಸಂದ್ರ ಬಳಿಯ ನಾರಾಯಣ ಹೃದಯಾಲಯ ಆಸ್ಪತ್ರೆ ಮುಂಭಾಗ ಅಪಘಾತ ನಡೆದಿದ್ದು, ಎರಡೂ ದೇಹಗಳೂ ಛಿದ್ರವಾಗಿವೆ. ಮೃತರನ್ನು ಗರ್ಭಿಣಿ ರುಕಿಯಾ (28) ಹಾಗೂ ಲಕ್ಷ್ಮಮ್ಮ (50) ಎಂದು ಗುರುತಿಸಲಾಗಿದೆ. ಇಬ್ಬರೂ ಆಚೆ ಕಡೆ ಇದ್ದ ಆಸ್ಪತ್ರೆಗೆ ಹೋಗಲು ಹೆದ್ದಾರಿ ದಾಟುತ್ತಿದ್ದರು.

ಇಲ್ಲಿ ನಾರಾಯಣ ಹೃದಯಾಲಯ ಮತ್ತು ಬಿಟಿಎಲ್ ಕಾಲೇಜಿದೆ. ಬೊಮ್ಮಸಂದ್ರ ಕೈಗಾರಿಕೆಗಳಿಗೆ ಬರುವ ಕಾರ್ಮಿಕರು ಇಲ್ಲಿ ಪ್ರತಿ ನಿತ್ಯ ಸಾವಿರಾರು ಸಂಖ್ಯೆಯಲ್ಲಿ ರಸ್ತೆ ದಾಟುತ್ತಾರೆ. ಇಲ್ಲಿ ಪಾದಚಾರಿಗಳಿಗೆ ಸ್ಕೈವಾಕ್ ಇದೆ, ಆದ್ರೆ ಎಕ್ಸಲೇಟರ್ ಇಲ್ಲದಿರುವುದರಿಂದ ವೃದ್ಧರು, ಮಕ್ಕಳು, ಗರ್ಭಿಣಿಯರು ಮೆಟ್ಟಿಲು ಹತ್ತಲು ಕಷ್ಟವೆನಿಸುತ್ತದೆ. ಹೀಗಾಗಿ 7 ತಿಂಗಳ ಗರ್ಭಿಣಿ ರುಕಿಯಾ ರಸ್ತೆ ದಾಟಲು ಮುಂದಾಗಿದ್ದರು. ಎನ್‌ಎಚ್‌ಎ ವತಿಯಿಂದ ಅವೈಜ್ಞಾನಿಕ ಸ್ಕೈ ವಾಕ್ ಮಾಡಿರುವುದೇ ಅಪಘಾತಗಳಿಗೆ ಕಾರಣ ಎಂದು ದೂರಲಾಗಿದೆ.

ರುಕಿಯಾ ಏಳು ತಿಂಗಳ ತುಂಬು ಗರ್ಭಿಣಿಯಾದ್ದರಿಂದ ಸ್ಕೈವಾಕ್ ಹತ್ತಲಾಗದೆ ರಸ್ತೆ ದಾಟುತ್ತಿದ್ದರು. ಆಂಧ್ರ ಮೂಲದ ಮದನಪಲ್ಲಿ ನಿವಾಸಿಯಾಗಿದ್ದ ಇವರು ನಿನ್ನೆ ಮದನಪಲ್ಲಿಯಿಂದ ಬಂದಿದ್ದರು. ಹೊಟ್ಟೆಯಲ್ಲಿದ್ದ ಮಗುವಿನ ಹೃದಯದಲ್ಲಿ ರಂಧ್ರ ಇರುವುದು ಗೊತ್ತಾಗಿತ್ತು. ಇದೇ ಕಾರಣಕ್ಕೆ ಚಿಕಿತ್ಸೆಗಾಗಿ ತನ್ನ ಅಕ್ಕ ರಬಿಯಾ ಜೊತೆಗೆ ಆಂಧ್ರದಿಂದ ಬಂದಿದ್ದರು. ವರ್ತೂರು ಸಮೀಪದ ಮದುರಾನಗರದ ಲಕ್ಷ್ಮಮ್ಮ (50) ಎಂಬ ಮಹಿಳೆ ಕೂಡ ಇವರಿಗೆ ಸಾಥ್‌ ನೀಡಿದ್ದರು. ಬಸ್ ಇಳಿದು ಹೆದ್ದಾರಿ ದಾಟಲು ಹೋದಾಗ ಅಪಘಾತ ಸಂಭವಿಸಿದೆ.

ಪ್ರಯಾಣಿಕರು ರಸ್ತೆ ದಾಟುವಲ್ಲಿ ನಿರ್ಲಕ್ಷ್ಯ ಹಾಗೂ ವೇಗದಿಂದ ಕಂಟೇನರ್‌ ಲಾರಿ ಚಾಲಕ ವಾಹನ ಚಲಾಯಿಸಿ ಇಬ್ಬರ ಬಲಿ ಪಡೆದಿದ್ದಾನೆ. ಇದಕ್ಕೂ ಮೊದಲು ಈತ ಟಾಟಾ ಏಸ್ ಒಂದಕ್ಕೆ ಗುದ್ದುವುದರಿಂದ ತಪ್ಪಿಸಿಕೊಂಡಿದ್ದ ಎಂದು ಗೊತ್ತಾಗಿದೆ. ಚಾಲಕನನ್ನು ಬಂಧಿಸಲಾಗಿದೆ.

ಡಿವೈಡರ್‌ಗೆ ಬೈಕ್‌ ಗುದ್ದಿ ಯುವಕ ಸಾವು, ಯುವತಿ ಗಂಭೀರ

ದೊಡ್ಡಬಳ್ಳಾಪುರ: ರಸ್ತೆ ಬದಿಯ ಡಿವೈಡರ್‌ಗೆ ದ್ವಿಚಕ್ರ ವಾಹನ ಗುದ್ದಿ ಒಬ್ಬ ಸವಾರ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ. ದೊಡ್ಡಬಳ್ಳಾಪುರದ ಕತ್ತಿಹೊಸಹಳ್ಳಿ ಬಳಿ ಘಟನೆ ನಡೆದಿದೆ.

ತುಮಕೂರಿನಿಂದ ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರಕ್ಕೆ ಬರುವ ವೇಳೆ ದುರ್ಘಟನೆ ನಡೆದಿದೆ. ರಸ್ತೆ ಬದಿಯ ಡಿವೈಡರ್‌ಗೆ ಗುದ್ದಿ, ಪಕ್ಕದ ರಸ್ತೆಗೆ ಬಿದ್ದು ಸಾವು ಸಂಭವಿಸಿದೆ. ಪೊಲೀಸರು ಮೃತನ ಮಾಹಿತಿ ಕಲೆ ಹಾಕುತ್ತಿದ್ದಾರೆ. ಬೈಕ್‌ನ ಹಿಂಬದಿ‌ ಕುಳಿತಿದ್ದ ಯುವತಿಗೆ ತೀವ್ರ ಗಾಯಗಳಾಗಿದ್ದು, ದೊಡ್ಡಬಳ್ಳಾಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ. ತುಮಕೂರು ಮೂಲದ ಯುವಕ ಯುವತಿ ಎನ್ನಲಾಗಿದ್ದು, ತಲೆಗೆ ತಲೆ ತೀವ್ರ ಪೆಟ್ಟಾದ ಹಿನ್ನಲೆ ಸ್ಥಳದಲ್ಲೇ ಯುವಕ ಸಾವಿಗೀಡಾಗಿದ್ದಾನೆ. ದೊಡ್ಡಬೆಳವಂಗಲ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Road Accident : ತುಮಕೂರು ಬಳಿ ಬಸ್‌ – ಕಾರು ನಡುವೆ ಅಪಘಾತ; ಇಬ್ಬರ ಸಾವು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ ಸೇರಿ ವಿವಿಧೆಡೆ ಮಳೆ ಅಬ್ಬರ; ಆರೆಂಜ್‌ ಅಲರ್ಟ್‌ ಘೋಷಣೆ

Karnataka Weather Forecast : ಕರಾವಳಿ, ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಜೂನ್‌ 27ರವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

VISTARANEWS.COM


on

By

karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Heavy Rain Alert) ಸಾಧ್ಯತೆಯಿದೆ. ಪ್ರತ್ಯೇಕ ಕಡೆಗಳಲ್ಲಿ ವ್ಯಾಪಕ (Rain News) ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಮಧ್ಯಮ ಮಳೆಯಾದರೆ, ಉತ್ತರ ಒಳನಾಡಿನ ಹಗುರದಿಂದ ಕೂಡಿದ ಮಳೆಯಾಗುವ ನಿರೀಕ್ಷೆ ಇದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ಭಾಗದಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗಲಿದೆ. ಊತ್ತರ ಒಳನಾಡಿನ ಕೆಲ ಪ್ರದೇಶದಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ. ಆದರೆ ಬೆಳಗಾವಿಯಲ್ಲಿ ಭಾರೀ ಮಳೆ ಎಚ್ಚರಿಕೆ ನೀಡಲಾಗಿದೆ.

ಮಲೆನಾಡಿನ ಜಿಲ್ಲೆಯಾದ್ಯಂತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ವ್ಯಾಪಕ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 21 ಡಿಗ್ರಿ ಸೆಲಿಯಸ್‌ ಇರಲಿದೆ.

ಆರೆಂಜ್‌ ಅಲರ್ಟ್‌

ಗುಡುಗು ಸಹಿತ ಭಾರೀ ಮಳೆಯೊಂದಿಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಐಎಂಡಿ ಆರೆಂಜ್ ಅಲರ್ಟ್ ಘೋಷಿಸಿದೆ.

ಜೂನ್‌ 27ರವರೆಗೆ ಮೀನುಗಾರರಿಗೆ ಎಚ್ಚರಿಕೆ

ಜೂನ್‌ 27 ರವರೆಗೆ ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರು ಕಡಲಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ

ಇದನ್ನೂ ಓದಿ: Tumkur Shoot out : ತುಮಕೂರಿನಲ್ಲಿ ಸದ್ದು ಮಾಡಿದ ಪೊಲೀಸ್ ತುಪಾಕಿ; ಸರಗಳ್ಳನ ಹೆಡೆಮುರಿ ಕಟ್ಟಿದ ಖಾಕಿ

ಮಾನ್ಸೂನ್‌ಗೂ ಕಾಲಿಟ್ಟ ಟ್ರೆಂಚ್‌ ಕೋಟ್‌ ಫ್ಯಾಷನ್‌!

ಮಳೆಗಾಲಕ್ಕೂ ಟ್ರೆಂಚ್‌ ಕೋಟ್‌ (Monsoon trench coat fashion) ಫ್ಯಾಷನ್‌ ಎಂಟ್ರಿ ನೀಡಿದೆ. ಹೌದು, ಕೇವಲ ಚಳಿಗಾಲದಲ್ಲಿ ಟ್ರೆಂಡಿಯಾಗುತ್ತಿದ್ದ, ಟ್ರೆಂಚ್‌ ಕೋಟ್‌ಗಳು ಇದೀಗ ಮಾನ್ಸೂನ್‌ ಸೀಸನ್‌ಗೂ ಕಾಲಿಟ್ಟಿದ್ದು, ಸೆಲೆಬ್ರೆಟಿಗಳನ್ನು ಮಾತ್ರವಲ್ಲ, ಸಾಮಾನ್ಯ ಹುಡುಗಿಯರನ್ನು ಸವಾರಿ ಮಾಡತೊಡಗಿವೆ. ಇದಕ್ಕೆ ಪೂರಕ ಎಂಬಂತೆ, ಕಿಂಗ್‌ ಖಾನ್‌ ಮಗಳು ಹಾಗೂ ನಟಿ ಸುಹಾನಾ ಖಾನ್‌ ಟ್ರೆಂಚ್‌ ಕೋಟ್‌ ಧರಿಸಿದ್ದು, ಈ ಫ್ಯಾಷನ್‌ ಜೆನ್‌ ಜಿ ಹುಡುಗಿಯರನ್ನು ಸೆಳೆದಿದೆ. ಮಾನ್ಸೂನ್‌ನಲ್ಲೂ ಟ್ರೆಂಚ್‌ ಕೋಟ್‌ ಕ್ಲಾಸಿಯಾಗಿ ಕಾಣಿಸುತ್ತದೆ ಎಂಬುದನ್ನು ಪ್ರೂವ್‌ ಮಾಡಿದೆ.

Monsoon Trench Coat Fashion

ಟ್ರೆಂಚ್‌ಕೋಟ್‌ ವೆರೈಟಿ ವಿನ್ಯಾಸ

ಟ್ರೆಂಚ್‌ ಕೋಟ್‌ಗಳು ನೋಡಲು ಒಂದೇ ಬಗೆಯದ್ದಾಗಿ ಕಾಣುತ್ತವಾದರೂ ಸ್ಟಿಚ್ಚಿಂಗ್‌ ನಾನಾ ಶೈಲಿಯಲ್ಲಿರುತ್ತವೆ. ಸ್ಲೀಕ್‌ ಲುಕ್‌, ಫಾರ್ಮಲ್‌ ಬ್ಲೇಜರ್‌ ಸ್ಟೈಲ್‌ನಲ್ಲೂದೊರಕುತ್ತವೆ. ಮೊದಲೆಲ್ಲಾ ಹಿಲ್‌ ಸ್ಟೇಷನ್‌ಗಳಲ್ಲಿ ಮಾತ್ರ ಇವುಗಳ ಬಳಕೆ ಹೆಚ್ಚಾಗಿತ್ತು. ಬರಬರುತ್ತಾ ಸಿನಿಮಾ ತಾರೆಯರ ವಾರ್ಡ್‌ರೋಬ್‌ ಸೇರಿದ ನಂತರ ಸಾಮಾನ್ಯ ಹುಡುಗಿಯರ ಮನಸ್ಸನ್ನು ಗೆಲ್ಲತೊಡಗಿದವು. ಸ್ವೆಟರ್‌ ಹಾಗೂ ಜಾಕೆಟ್‌ ಧರಿಸುವಂತೆ, ಟ್ರೆಂಚ್‌ ಕೋಟ್‌ಗಳನ್ನು ಧರಿಸುವುದು ಹೆಚ್ಚಾಯಿತು ಎನ್ನುತ್ತಾರೆ ಜಿಯಾ.

ಕ್ಲಾಸಿಕ್‌ ಲುಕ್‌ ಗ್ಯಾರಂಟಿ

ಅಂದಹಾಗೆ, ವೆಸ್ಟರ್ನ್‌ ಲುಕ್‌ ನೀಡುವಲ್ಲಿಈ ಟ್ರೆಂಚ್‌ ಕೋಟ್‌ಗಳು ಪ್ರಮುಖ ಪಾತ್ರ ವಹಿಸುತ್ತವೆ. ಡಿಸೈನರ್‌ ಋತು ಹೇಳುವಂತೆ, ಇದೀಗ ಇಂಡೋ – ವೆಸ್ಟರ್ನ್ ಸ್ಟೈಲ್‌ನಲ್ಲೂ ಈ ಕೋಟ್‌ಗಳನ್ನು ಬಳಸುವುದು ಹೆಚ್ಚಾಗತೊಡಗಿದೆ. ಹಾಗಾಗಿ ಫಾರ್ಮಲ್‌ , ಎಥ್ನಿಕ್‌ ಡ್ರೆಸ್‌ ಧರಿಸುವ ಮಾನಿನಿಯರಿಗೂ ಪ್ರಿಯವಾಗತೊಡಗಿವೆ ಎನ್ನುತ್ತಾರೆ ಅವರು.

ಹೀಗಿರಲಿ ಟ್ರೆಂಚ್‌ ಕೋಟ್‌ ಸ್ಟೈಲಿಂಗ್‌

  • ಟ್ರೆಂಚ್‌ ಕೋಟ್‌ ಬೆಚ್ಚಗಿಡುವುದರಿಂದ ಧರಿಸುವವರು ಸಿಂಪಲ್‌ ಇನ್ನರ್‌ ಡ್ರೆಸ್‌ ಧರಿಸುವುದು ಬೆಸ್ಟ್.
  • ಉದ್ದಗಿರುವವರಿಗೆ ಯಾವುದೇ ಬಗೆಯ ಟ್ರೆಂಚ್‌ ಕೋಟ್‌ ಆದರೂ ಸೂಟ್‌ ಆಗುತ್ತವೆ.
  • ಪ್ಲಂಪಿಯಾಗಿರುವವರು ಆದಷ್ಟು ಡಿಸೈನರ್‌ ಕೋಟ್‌ ಧರಿಸುವುದು ಉತ್ತಮ.
  • ವಿಂಟೆಂಜ್‌ ಹಾಗೂ ರಾಯಲ್‌ ಕಲರ್‌ಗಳ ಟ್ರೆಂಚ್‌ ಕೋಟ್‌ಗಳು ರಾಯಲ್‌ ಲುಕ್‌ ನೀಡುತ್ತವೆ.
  • ಪ್ರಿಂಟೆಡ್‌ ಕೋಟ್‌ಗಳು ಟ್ರೆಂಡ್‌ನಲ್ಲಿಲ್ಲ.
  • ಫಿಟ್ಟಿಂಗ್‌ ಇದ್ದರೇ ಮಾತ್ರ ಚೆನ್ನಾಗಿ ಕಾಣಿಸುತ್ತವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

Karnataka Weather Forecast : ರಾಜ್ಯಾದ್ಯಂತ ನೈರುತ್ಯ ಮುಂಗಾರು ದುರ್ಬಲವಾಗಿದ್ದರೂ, ಕರಾವಳಿ ಹಾಗೂ ಒಳನಾಡಿನ ವಿವಿಧೆಡೆ ಮಳೆಯು (Rain News) ಅಬ್ಬರಿಸುತ್ತಿದೆ. ಕಡಲ ತೀರದಲ್ಲಿ ಅಲೆಗಳು ಆಳೆತ್ತರದಲ್ಲಿ ಅಪ್ಪಳಿಸುತ್ತಿದ್ದು, ನಾಳೆಗೂ ಮಳೆ ಮುನ್ಸೂಚನೆಯನ್ನು ನೀಡಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ಕರಾವಳಿಯಲ್ಲಿ ವರುಣಾರ್ಭಟ (Rain News) ಮುಂದುವರೆದಿದೆ. ಕಳೆದ ಎರಡು ಮೂರು ದಿನಗಳಿಂದ ಕರಾವಳಿಯಲ್ಲಿ ಭಾರೀ ಗಾಳಿ ಸಹಿತ ಮಳೆಯಾಗುತ್ತಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿದ್ದು, ಭಾರೀ ಗಾಳಿ ಹಿನ್ನೆಲೆಯಲ್ಲಿ ದಡಕ್ಕೆ ಆಳೆತ್ತರದ ಅಲೆಗಳು ಅಪ್ಪಳಿಸುತ್ತಿದೆ. ರೆಡ್‌ ಅಲರ್ಟ್‌ ನೀಡಲಾಗಿದ್ದು, ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್ ಬಿದ್ದಿದೆ. ಮೀನುಗಾರಿಕೆಗೆ ತೆರಳದಂತೆ ಹವಾಮಾನ ಇಲಾಖೆ ಮುನ್ಸೂಚನೆ (Karnataka Weather Forecast) ನೀಡಿದೆ.

ಜೂನ್‌ 25ರವರೆಗೆ ಕರಾವಳಿ ಮತ್ತು ದಕ್ಷಿನ ಒಳನಾಡಿನಲ್ಲಿ ಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಜಿಲ್ಲೆಗಳಾದ ಬೀದರ್‌, ಕಲಬುರಗಿ,ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು, ಚಿಕ್ಕಬಳ್ಳಾಪುರ , ಚಿತ್ರದುರ್ಗ, ಕೋಲಾರ, ರಾಮನಗರ, ತುಮಕೂರು, ವಿಜಯನಗರದಲ್ಲಿ ಬಿರುಗಾಳಿ ಸಹಿತ ಗುಡುಗು, ಮಿಂಚಿನ ಮಳೆಯಾಗಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಕೆಲವೊಮ್ಮೆ ಮೇಲ್ಮೈ ಗಾಳಿಯು ಪ್ರಬಲವಾಗಿ ಬೀಸಲಿದೆ.

ರಾಜ್ಯಾದ್ಯಂತ ಮುಂಗಾರು ದುರ್ಬಲವಾಗಿದ್ದರೂ, ಕರಾವಳಿಯ ಬಹುತೇಕ ಕಡೆಗಳಲ್ಲಿ, ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಪಣಂಬೂರು, ಭಾಲ್ಕಿ 5 ಸೆಂ.ಮೀ, ಮಂಗಳೂರು ವಿಮಾನ ನಿಲ್ದಾಣ , ಕೊಟ್ಟಿಗೆಹಾರ ತಲಾ 4 ಸೆಂ.ಮೀ ಮಳೆಯಾಗಿದೆ. ಉಡುಪಿ, ಸುಳ್ಯ, ಬಾದಾಮಿ, ದೇವರಹಿಪ್ಪರಗಿಯಲ್ಲಿ 3 ಸೆಂ.ಮೀ ಮಳೆಯಾಗಿದೆ. ಧರ್ಮಸ್ಥಳ, ಮಂಕಿ, ಪುತ್ತೂರು , ಅಂಕೋಲಾ, ರೋನ್, ಭಾಗಮಂಡಲ, ಆಗುಂಬೆಯಲ್ಲಿ 2 ಸೆಂ.ಮೀ ಮಳೆಯಾಗಿದೆ. ಕಾರವಾರ, ಮೂಲ್ಕಿ, ಕುಂದಾಪುರ, ಬೆಳ್ತಂಗಡಿ, ಹೊನ್ನಾವರ, ಕಾರ್ಕಳ, ಉಪ್ಪಿನಂಗಡಿ, ನರಗುಂದ, ನಿಪ್ಪಾಣಿ, ಶಹಪುರ, ಕುಷ್ಟಗಿ, ಲಿಂಗನಮಕ್ಕಿ ಎಚ್‌ಎಂಎಸ್ , ಪೊನ್ನಂಪೇಟೆಯಲ್ಲಿ 1 ಸೆಂ.ಮೀ ಮಳೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Actor Darshan: ಪರಪ್ಪನ ಅಗ್ರಹಾರದಿಂದ‌ ದರ್ಶನ್ ಬೇರೆ ಜೈಲಿಗೆ ಶಿಫ್ಟ್? ಇಂದು ಜಾಮೀನು ಅರ್ಜಿ ಸಲ್ಲಿಕೆ

Actor Darshan: ಸಹ ಕೈದಿಗಳು ದರ್ಶನ್ ಮೇಲೆ ಅಟ್ಯಾಕ್ ಮಾಡಬಹುದು. ಪ್ರಕರಣದಲ್ಲಿರುವ ಹಲವು ಆರೋಪಿಗಳಿಗೆ ರೌಡಿ ಕಾಂಟ್ಯಾಕ್ಟ್ ಇರುವ ಹಿನ್ನೆಲೆಯಲ್ಲಿ, ರೌಡಿಗಳ ಮುಖಾಂತರ ಸಾಕ್ಷಿ ನಾಶ ಮಾಡುವಲ್ಲಿ ಯತ್ನಿಸುವ ಸಾಧ್ಯತೆ ಇದೆ.

VISTARANEWS.COM


on

actor Darshan Arrested
Koo

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ (Renuka Swamy murder) ಪ್ರಕರಣದಲ್ಲಿ ಪರಪ್ಪನ ಅಗ್ರಹಾರ (Parappana Agrahara) ಜೈಲು ಸೇರಿರುವ ನಟ ದರ್ಶನ್‌ನನ್ನು (Actor Darshan) ಭದ್ರತೆ ದೃಷ್ಟಿಯಿಂದ ಬೇರೆ ಜೈಲಿಗೆ ಶಿಫ್ಟ್ ಮಾಡುವ ಸಾಧ್ಯತೆಗಳಿವೆ.

ದರ್ಶನ್‌ನನ್ನು ಬೇರೆ ಜೈಲಿಗೆ ಶಿಫ್ಟ್‌ ಮಾಡಲು ಅವಕಾಶ ಕೊಡುವಂತೆ ಎಸ್‌ಪಿಪಿ ನ್ಯಾಯಾಲಯದಲ್ಲಿ ಮನವಿ ಮಾಡಿದ್ದರು. ಬೇರೆ ಜೈಲಿಗೆ ಶಿಫ್ಟ್‌ ಮಾಡಲು ಸಲ್ಲಿಸಿದ್ದ ಅರ್ಜಿ ವಿಚಾರಣೆ ಸೋಮವಾರ ನಡೆಯಲಿದೆ. ಒಂದು ವೇಳೆ ನ್ಯಾಯಾಲಯ ಅರ್ಜಿ ಪುರಸ್ಕರಿಸಿದರೆ ತುಮಕೂರು ಜೈಲಿಗೆ ಕಳಿಸಲಾಗುತ್ತದೆ. ಇಲ್ಲವಾದರೆ ಪರಪ್ಪನ ಅಗ್ರಹಾರದ ಭದ್ರತಾ ಸಿಬ್ಬಂದಿ ಕೊಠಡಿಯಲ್ಲೇ ನಟ ಕಾಲ ಕಳೆಯಬೇಕಾಗಿದೆ.

ಬೇರೆ ಜೈಲಿಗೆ ಶಿಫ್ಟ್‌ ಮಾಡಲು ಮನವಿ ಮಾಡಿರುವ ಕಾರಣಗಳೆಂದರೆ, ಜನಪ್ರಿಯ ನಟನಾಗಿರುವುದರಿಂದ ಹಲವರು ಪರಿಚಯವಿದ್ದು ಕೈದಿಗಳ ನಡುವೆ ಗಲಾಟೆಯಾಗುವ ಸಾಧ್ಯತೆ ಇದೆ. ಸಹ ಕೈದಿಗಳು ದರ್ಶನ್ ಮೇಲೆ ಅಟ್ಯಾಕ್ ಮಾಡಬಹುದು. ಪ್ರಕರಣದಲ್ಲಿರುವ ಹಲವು ಆರೋಪಿಗಳಿಗೆ ರೌಡಿ ಕಾಂಟ್ಯಾಕ್ಟ್ ಇರುವ ಹಿನ್ನೆಲೆಯಲ್ಲಿ, ರೌಡಿಗಳ ಮುಖಾಂತರ ಸಾಕ್ಷಿ ನಾಶ ಮಾಡುವಲ್ಲಿ ಯತ್ನಿಸುವ ಸಾಧ್ಯತೆ ಇದೆ. ಜೊತೆಗೆ ದರ್ಶನ್‌ನನ್ನು ನೋಡಲು ಕೈದಿಗಳಿಂದ ಜೈಲಿನೊಳಗೆ ಹಾಗೂ ಅಭಿಮಾನಿಗಳಿಂದ ಜೈಲಿನ ಹೊರಗೆ ದೊಂಬಿ ಆಗುವ ಸಾಧ್ಯತೆಯೂ ಇದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಬೇರೆ ಜೈಲಿಗೆ ಸ್ಥಳಾಂತರ ಮಾಡಲು ಎಸ್ಪಿಪಿ ಮನವಿ ಮಾಡಿದ್ದಾರೆ.

ಇಂದು ಜಾಮೀನು ಅರ್ಜಿ

ದರ್ಶನ್‌ ಸೇರಿದತೆ ರೇಣುಕಾ ಸ್ವಾಮಿ ಕೊಲೆ ಆರೋಪಿಗಳು ಜಾಮೀನು‌ ಕೋರಿ ಇಂದು ಎಸಿಎಂಎಂ ಕೋರ್ಟ್ ಮುಂದೆ ಅರ್ಜಿ ಸಲ್ಲಿಸಲಿದ್ದಾರೆ. ಜಾಮೀನು ಅರ್ಜಿ ಸಲ್ಲಿಕೆ ಮಾಡಿದರೆ ದರ್ಶನ್ ಪರ ವಾದ ಮಂಡನೆಯನ್ನು ಹಿರಿಯ ವಕೀಲ ಸಿ.ವಿ ನಾಗೇಶ್ ಮಾಡಲಿದ್ದಾರೆ.

ಜೈಲೂಟ ಸೇರದೆ ಪರದಾಟ

ಈ ನಡುವೆ ನಟ ದರ್ಶನ್‌. ಜೈಲೂಟ ಸೇರದೆ ಪರದಾಡುತ್ತಿದ್ದಾನೆ. ಎ1 ಆರೋಪಿ ಪವಿತ್ರಾ ಗೌಡ (Pavithra Gowda) ಸಹ ಜೈಲಿನ ಆಹಾರ ಇಷ್ಟವಾಗದೆ ಒದ್ದಾಡುತ್ತಿದ್ದಾರೆ. ಮೊದಲೇ ಫಿಟ್ನೆಸ್ ಮೇಂಟೇನ್ ಮಾಡಲು‌ ಚಿಕನ್, ಮಟನ್, ಪ್ರೂಟ್ಸ್, ಜೂಸ್ ಸೇವಿಸುತ್ತಿದ್ದ ದರ್ಶನ್, ಜೈಲಿನಲ್ಲಿ ಸರಿಯಾಗಿ ಉಪ್ಪು ಕಾರ ಇಲ್ಲದ ಸಾಂಬಾರ್, ಮುದ್ದೆ ಅನ್ನ ತಿನ್ನಲು ಕಷ್ಟಪಡುತ್ತಿದ್ದಾನೆ. ರಾತ್ರಿ ಸಹ ಜೈಲಿನ ಮೇನು ಪ್ರಕಾರ ಮುದ್ದೆ, ಅನ್ನ, ಚಪಾತಿ ತರಕಾರಿ ಸಾಂಬಾರ್ ಮತ್ತು ಮಜ್ಜಿಗೆಯನ್ನು ಜೈಲು ಸಿಬ್ಬಂದಿ ನೀಡಿದ್ದಾರೆ. ಜೈಲೂಟ ತಿನ್ನಲಾಗದೆ ದರ್ಶನ್ ಪರದಾಟ ಅನುಭವಿಸಿದ್ದಾನೆ.

ಸರಿಯಾಗಿ ಊಟ ಸೇರದೆ, ನಿದ್ದೆಯೂ ಬಾರದೆ ದರ್ಶನ್ ವಿಲವಿಲ ಒದ್ದಾಡಿದ್ದು ಕಂಡುಬಂತು. ರಾತ್ರಿ ಸಹ ತಡವಾಗಿ ನಿದ್ರೆಗೆ ಜಾರಿದ ದರ್ಶನ್ ಬೆಳಗ್ಗೆ 6 ಗಂಟೆ ಸುಮಾರಿಗೆ ಎಚ್ಚರಗೊಂಡಿದ್ದು, ಕಾಫಿ ಸೇವಿಸದೆ ಬಿಸಿ ನೀರು ಕೇಳಿ ಪಡೆದಿದ್ದಾನೆ. ಸಹಕೈದಿಗಳು ಮಾತನಾಡಲು ಯತ್ನಿಸಿದರೂ ಅಷ್ಟಾಗಿ ಅವರ ಜೊತೆ ಬೆರೆಯಲಿಲ್ಲ. ʼನಿಮ್ಮ ಸಹವಾಸ ಸಾಕಪ್ಪ. ದಯವಿಟ್ಟು ನನ್ನ ಪಾಡಿಗೆ ಬಿಟ್ಟು ಬಿಡಿʼ ಎಂದು ಕೊಠಡಿಯಲ್ಲಿ ಸುಮ್ಮನೆ ಕೂತಿದ್ದಾನೆ ಎಂದು ಗೊತ್ತಾಗಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ವಿಶೇಷ ಬ್ಯಾರಕ್‌ನಲ್ಲಿ ದರ್ಶನ್ ಇದ್ದಾನೆ. ಧನರಾಜ್, ವಿನಯ್, ಪ್ರದೂಶ್ ಜೊತೆ ಒಂದೇ ‌ಕೊಠಡಿಯಲ್ಲಿಡಲಾಗಿದೆ. ಸೆರೆವಾಸದಲ್ಲಿ ನಟ ಚಡಪಡಿಸುತ್ತಿದ್ದು, ಮೌನಕ್ಕೆ ಜಾರಿದ್ದಾನೆ. ಸಹ ಬಂದಿಗಳ ಜೊತೆ ಭದ್ರತಾ ವಿಭಾಗದ ಬ್ಯಾರಕ್‌ನಲ್ಲಿ ಸೆರೆವಾಸದಲ್ಲಿಡಲಾಗಿದೆ. ಸೊಳ್ಳೆಕಾಟದಿಂದ ದರ್ಶನ್‌ ಹಾಗೂ ಪವಿತ್ರಾ ಇಬ್ಬರೂ ನಲುಗಿದ್ದಾರೆ.

ನಿನ್ನೆ ಭಾನುವಾರ ಆಗಿದ್ದರಿಂದ ಕುಟುಂಬಸ್ಥರು ಮತ್ತು ಆಪ್ತರ ಭೇಟಿಗೆ ಅವಕಾಶ ನೀಡಿಲ್ಲ. ಇಂದು ದರ್ಶನ್ ಮತ್ತು ಪವಿತ್ರಾ ಕುಟುಂಬಸ್ಥರು ಹಾಗೂ ಆಪ್ತರ ಭೇಟಿ ಸಾಧ್ಯತೆ ಇದೆ. ಪವಿತ್ರಾ ಗೌಡ ಕೂಡ ಜೈಲು ಮೆನುವಿನಂತೆ ಚಪಾತಿ, ಅನ್ನ, ಸಾಂಬಾರ್ ಮತ್ತು ಮಜ್ಜಿಗೆ ಸೇವನೆ ಮಾಡಿದ್ದು, ಸಹಖೈದಿಗಳ ಜೊತೆ ಬೆರೆಯದೆ ಬೇಸರದಲ್ಲಿಯೇ ದಿನ ಕಳೆಯುತ್ತಿದ್ದಾರೆ. ರಾತ್ರಿ ಬೇಗ ಮಲಗಿದರೂ ಪದೇ ಪದೆ ಎಚ್ಚರಗೊಳ್ಳುತ್ತಿದ್ದರು ಎಂದು ಗೊತ್ತಾಗಿದೆ.

ಇದನ್ನೂ ಓದಿ: Actor Darshan: ದರ್ಶನ್ ಹಾಗೂ ನನ್ನ ಮಧ್ಯೆ ಮನಸ್ತಾಪ ತಂದಿದ್ದೇ ನಟಿ ನಿಖಿತಾ ಎಂದ ಓಂ ಪ್ರಕಾಶ್!

Continue Reading

ಕ್ರೈಂ

Actor Darshan: ಒಗ್ಗದ ಜೈಲೂಟ, ದರ್ಶನ್- ಪವಿತ್ರಾ ಗೌಡ ಪರದಾಟ

Actodr Darshan: ಮೊದಲೇ ಫಿಟ್ನೆಸ್ ಮೇಂಟೇನ್ ಮಾಡಲು‌ ಚಿಕನ್, ಮಟನ್, ಪ್ರೂಟ್ಸ್, ಜೂಸ್ ಸೇವಿಸುತ್ತಿದ್ದ ದರ್ಶನ್, ಜೈಲಿನಲ್ಲಿ ಸರಿಯಾಗಿ ಉಪ್ಪು ಕಾರ ಇಲ್ಲದ ಸಾಂಬಾರ್, ಮುದ್ದೆ ಅನ್ನ ತಿನ್ನಲು ಕಷ್ಟಪಡುತ್ತಿದ್ದಾನೆ. ರಾತ್ರಿ ಸಹ ಜೈಲಿನ ಮೇನು ಪ್ರಕಾರ ಮುದ್ದೆ, ಅನ್ನ, ಚಪಾತಿ ತರಕಾರಿ ಸಾಂಬಾರ್ ಮತ್ತು ಮಜ್ಜಿಗೆಯನ್ನು ಜೈಲು ಸಿಬ್ಬಂದಿ ನೀಡಿದ್ದಾರೆ. ಜೈಲೂಟ ತಿನ್ನಲಾಗದೆ ದರ್ಶನ್ ಪರದಾಟ ಅನುಭವಿಸಿದ್ದಾನೆ.

VISTARANEWS.COM


on

Actor Darshan Judicial Custody Jailer Gave UTP Number
Koo

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ (Renuka Swamy Murder) ಪ್ರಕರಣದಲ್ಲಿ ಪರಪ್ಪನ ಅಗ್ರಹಾರ (Parappana Agrahara) ಜೈಲು ಸೇರಿರುವ ನಟ ದರ್ಶನ್‌ (Actor Darshan), ಜೈಲೂಟ ಸೇರದೆ ಪರದಾಡುತ್ತಿದ್ದಾನೆ. ಎ1 ಆರೋಪಿ ಪವಿತ್ರಾ ಗೌಡ (Pavithra Gowda) ಸಹ ಜೈಲಿನ ಆಹಾರ ಇಷ್ಟವಾಗದೆ ಒದ್ದಾಡುತ್ತಿದ್ದಾರೆ.

ಮೊದಲೇ ಫಿಟ್ನೆಸ್ ಮೇಂಟೇನ್ ಮಾಡಲು‌ ಚಿಕನ್, ಮಟನ್, ಪ್ರೂಟ್ಸ್, ಜೂಸ್ ಸೇವಿಸುತ್ತಿದ್ದ ದರ್ಶನ್, ಜೈಲಿನಲ್ಲಿ ಸರಿಯಾಗಿ ಉಪ್ಪು ಕಾರ ಇಲ್ಲದ ಸಾಂಬಾರ್, ಮುದ್ದೆ ಅನ್ನ ತಿನ್ನಲು ಕಷ್ಟಪಡುತ್ತಿದ್ದಾನೆ. ರಾತ್ರಿ ಸಹ ಜೈಲಿನ ಮೇನು ಪ್ರಕಾರ ಮುದ್ದೆ, ಅನ್ನ, ಚಪಾತಿ ತರಕಾರಿ ಸಾಂಬಾರ್ ಮತ್ತು ಮಜ್ಜಿಗೆಯನ್ನು ಜೈಲು ಸಿಬ್ಬಂದಿ ನೀಡಿದ್ದಾರೆ. ಜೈಲೂಟ ತಿನ್ನಲಾಗದೆ ದರ್ಶನ್ ಪರದಾಟ ಅನುಭವಿಸಿದ್ದಾನೆ.

ಸರಿಯಾಗಿ ಊಟ ಸೇರದೆ, ನಿದ್ದೆಯೂ ಬಾರದೆ ದರ್ಶನ್ ವಿಲವಿಲ ಒದ್ದಾಡಿದ್ದು ಕಂಡುಬಂತು. ರಾತ್ರಿ ಸಹ ತಡವಾಗಿ ನಿದ್ರೆಗೆ ಜಾರಿದ ದರ್ಶನ್ ಬೆಳಗ್ಗೆ 6 ಗಂಟೆ ಸುಮಾರಿಗೆ ಎಚ್ಚರಗೊಂಡಿದ್ದು, ಕಾಫಿ ಸೇವಿಸದೆ ಬಿಸಿ ನೀರು ಕೇಳಿ ಪಡೆದಿದ್ದಾನೆ. ಸಹಕೈದಿಗಳು ಮಾತನಾಡಲು ಯತ್ನಿಸಿದರೂ ಅಷ್ಟಾಗಿ ಅವರ ಜೊತೆ ಬೆರೆಯಲಿಲ್ಲ. ʼನಿಮ್ಮ ಸಹವಾಸ ಸಾಕಪ್ಪ. ದಯವಿಟ್ಟು ನನ್ನ ಪಾಡಿಗೆ ಬಿಟ್ಟು ಬಿಡಿʼ ಎಂದು ಕೊಠಡಿಯಲ್ಲಿ ಸುಮ್ಮನೆ ಕೂತಿದ್ದಾನೆ ಎಂದು ಗೊತ್ತಾಗಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ವಿಶೇಷ ಬ್ಯಾರಕ್‌ನಲ್ಲಿ ದರ್ಶನ್ ಇದ್ದಾನೆ. ಧನರಾಜ್, ವಿನಯ್, ಪ್ರದೂಶ್ ಜೊತೆ ಒಂದೇ ‌ಕೊಠಡಿಯಲ್ಲಿಡಲಾಗಿದೆ. ಸೆರೆವಾಸದಲ್ಲಿ ನಟ ಚಡಪಡಿಸುತ್ತಿದ್ದು, ಮೌನಕ್ಕೆ ಜಾರಿದ್ದಾನೆ. ಸಹ ಬಂದಿಗಳ ಜೊತೆ ಭದ್ರತಾ ವಿಭಾಗದ ಬ್ಯಾರಕ್‌ನಲ್ಲಿ ಸೆರೆವಾಸದಲ್ಲಿಡಲಾಗಿದೆ. ಸೊಳ್ಳೆಕಾಟದಿಂದ ದರ್ಶನ್‌ ಹಾಗೂ ಪವಿತ್ರಾ ಇಬ್ಬರೂ ನಲುಗಿದ್ದಾರೆ.

ನಿನ್ನೆ ಭಾನುವಾರ ಆಗಿದ್ದರಿಂದ ಕುಟುಂಬಸ್ಥರು ಮತ್ತು ಆಪ್ತರ ಭೇಟಿಗೆ ಅವಕಾಶ ನೀಡಿಲ್ಲ. ಇಂದು ದರ್ಶನ್ ಮತ್ತು ಪವಿತ್ರಾ ಕುಟುಂಬಸ್ಥರು ಹಾಗೂ ಆಪ್ತರ ಭೇಟಿ ಸಾಧ್ಯತೆ ಇದೆ. ಪವಿತ್ರಾ ಗೌಡ ಕೂಡ ಜೈಲು ಮೆನುವಿನಂತೆ ಚಪಾತಿ, ಅನ್ನ, ಸಾಂಬಾರ್ ಮತ್ತು ಮಜ್ಜಿಗೆ ಸೇವನೆ ಮಾಡಿದ್ದು, ಸಹಖೈದಿಗಳ ಜೊತೆ ಬೆರೆಯದೆ ಬೇಸರದಲ್ಲಿಯೇ ದಿನ ಕಳೆಯುತ್ತಿದ್ದಾರೆ. ರಾತ್ರಿ ಬೇಗ ಮಲಗಿದರೂ ಪದೇ ಪದೆ ಎಚ್ಚರಗೊಳ್ಳುತ್ತಿದ್ದರು ಎಂದು ಗೊತ್ತಾಗಿದೆ.

ನಿನ್ನೆ ದರ್ಶನ್ ಭೇಟಿಗೆ ರಾಯಚೂರಿನ ಲಿಂಗಸಗೂರಿನಿಂದ ಆಗಮಿಸಿದ ಅಭಿಮಾನಿಗಳು ಭೇಟಿಗೆ ಅವಕಾಶ ಸಿಗದೆ ಜೈಲಿನ ಬಳಿ ಕಣ್ಣೀರು ಹಾಕಿದರು. ಎದೆಯ ಮೇಲೆ ದರ್ಶನ್ ಭಾವಚಿತ್ರದ ಟ್ಯಾಟೂ ಹಾಕಿಸಿಕೊಂಡಿದ್ದ ಅಭಿಮಾನಿ, ʼನಮ್ಮ ಬಾಸ್ ಕೆಟ್ಟದ್ದು ಮಾಡಿರಬಹುದು. ಆದರೆ ನಮ್ಮ ಬಾಸ್ ಸಾಕಷ್ಟು ಸಮಾಜ ಸೇವೆ ಮಾಡಿದ್ದಾರೆ. ಆದರೂ ಮಾಧ್ಯಮಗಳಲ್ಲಿ ಕೆಟ್ಟದಾಗಿ ತೋರಿಸಲಾಗುತ್ತಿದೆʼ ಎಂದಿದ್ದಾರೆ. ʼಇಂದು ರಜೆ ಹಿನ್ನೆಲೆ ಬಾಸ್ ಭೇಟಿಗೆ ಅವಕಾಶ ನೀಡುತ್ತಿಲ್ಲ. ನಾವು ನಾಳೆ ಬಾಸ್ ಭೇಟಿ ಮಾಡಿಯೇ ವಾಪಸ್ ಹೊರಡುವುದುʼ ಎಂದಿದ್ದಾರೆ.

ಹೇಗಿದೆ ಕೊಠಡಿ?

ಜೈಲಿನ ಮೂರನೇ ಸೆಕ್ಟರ್ ಭಾಗದಲ್ಲಿ ಇರುವ ಭದ್ರತಾ ವಿಭಾಗದಲ್ಲಿ ಒಂದು ಕೊಠಡಿ ದರ್ಶನ್‌ಗೆ ನೀಡಲಾಗಿದೆ. ಇಲ್ಲಿ ಹೊರಗಿನ ಕೈದಿಗಳಿಗೆ ಬರಲು ಅವಕಾಶ ಇಲ್ಲ. ಭದ್ರತಾ ವಿಭಾಗದ ಸಿಬ್ಬಂದಿ ಹಾಗೂ ಕೈದಿಗಳಿಗೆ ಅಷ್ಟೇ ಅವಕಾಶ ನೀಡಲಾಗಿದೆ. ದರ್ಶನ್ ಹಾಗೂ ವಿನಯ್ ಒಂದೇ ಕೊಠಡಿಯಲ್ಲಿ ಇದ್ದಾರೆ. ಪ್ರದೂಷ್ ಹಾಗೂ ಧನರಾಜ್ ಮತ್ತೊಂದು ಕೊಠಡಿಯಲ್ಲಿ ಸೆರೆವಾಸದಲ್ಲಿದ್ದಾರೆ. ಕೊಠಡಿಯ ಒಳಗೆ ಅಟ್ಯಾಚ್ ಬಾತ್ ರೂಮ್ ಕೂಡ ಇದೆ. ಮಲಗಲು ಚಾಪೆ ಹಾಗೂ ಬೆಡ್ ಶೀಟ್ ನೀಡಲಾಗಿದೆ. ದರ್ಶನ್ ಇರುವ ಕೊಠಡಿಯಲ್ಲಿ ಯಾವುದೇ ಟಿವಿ ವ್ಯವಸ್ಥೆ .ಇಲ್ಲ. ಕೊಠಡಿಯ ಒಳಗೆ ಬೇರೆ ಯಾವುದೇ ವ್ಯವಸ್ಥೆ ಇಲ್ಲ ಯಾರಾದರೂ ಭೇಟಿಗೆ ಬಂದರೆ ಅವರನ್ನು ಸಿಬ್ಬಂದಿ ಕರೆದೊಯ್ದು ಭೇಟಿ ಮಾಡಿಸುತ್ತಾರೆ. ಭದ್ರತಾ ವಿಭಾಗದ ಸುತ್ತಮುತ್ತ ಯಾವಾಗಲೂ ಪೊಲೀಸ್ ಕಣ್ಗಾವಲು ಇರುತ್ತದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ (Actor Darshan) ಸೇರಿ ನಾಲ್ವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಹನ್ನೆರಡು ದಿನಗಳ ಪೊಲೀಸ್‌ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ನಟ ದರ್ಶನ್, ವಿನಯ್, ಪ್ರದೋಶ್ ಮತ್ತು ಧನರಾಜ್‌ನನ್ನು 24ನೇ ಎಸಿಎಂಎಂ ಕೋರ್ಟ್‌ಗೆ ಪೊಲೀಸರು ಹಾಜರುಪಡಿಸಿದ್ದರು. ಪ್ರಕರಣ ವಿಚಾರಣೆ ನಡೆಸಿದ ನ್ಯಾಯಾಧೀಶರು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದ್ದಾರೆ. ಇದರಿಂದ 13 ವರ್ಷಗಳ ನಂತರ ನಟ ದರ್ಶನ್ ಮತ್ತೆ‌ ಜೈಲು ಸೇರುವಂತಾಗಿದೆ.

ಇದನ್ನೂ ಓದಿ: Actor Darshan: ದರ್ಶನ್ ಹಾಗೂ ನನ್ನ ಮಧ್ಯೆ ಮನಸ್ತಾಪ ತಂದಿದ್ದೇ ನಟಿ ನಿಖಿತಾ ಎಂದ ಓಂ ಪ್ರಕಾಶ್!

Continue Reading
Advertisement
Terrorists Killed
ಪ್ರಮುಖ ಸುದ್ದಿ5 mins ago

Terrorists Killed: ಆಪರೇಷನ್‌ ಆಲ್‌ಔಟ್ ಯಶಸ್ವಿ; ಕಾಶ್ಮೀರದಲ್ಲಿ ಮೂವರು ಉಗ್ರರ ಹತ್ಯೆ

DCM Dk shivakumar statement in bagilige bantu sarkara sevege irali sahakara programme in channapattana
ಕರ್ನಾಟಕ33 mins ago

DK Shivakumar: ಸರ್ಕಾರಿ ಅಧಿಕಾರಿಗಳು ಗುಲಾಮರೆಂದ ಮಾಜಿ ಶಾಸಕ; ಕ್ಷಮೆ ಕೇಳಿದ ಡಿ.ಕೆ. ಶಿವಕುಮಾರ್

MEIL got the opportunity to implement Kaiga nuclear power generation project
ಕರ್ನಾಟಕ39 mins ago

MEIL: ಕೈಗಾ ಪರಮಾಣು ವಿದ್ಯುತ್‌ ಉತ್ಪಾದನೆ ಯೋಜನೆ ಜಾರಿ ಅವಕಾಶ ಗಿಟ್ಟಿಸಿದ ಎಂ.ಇ.ಐ.ಎಲ್‌

DCM DK Shivakumar statement about milk price hike
ಕರ್ನಾಟಕ44 mins ago

DK Shivakumar: ಹಾಲಿನ ದರ ಕಡಿಮೆಯಾಯಿತು, ಇನ್ನೂ ಹೆಚ್ಚಿಸಬೇಕಿತ್ತು ಎಂದ ಡಿ.ಕೆ. ಶಿವಕುಮಾರ್

Union Minister HD Kumaraswamy latest statement in New Delhi
ಬೆಂಗಳೂರು48 mins ago

HD Kumaraswamy: ನನ್ನ ಹೃದಯದಲ್ಲಿ ಕೆಂಪೇಗೌಡರಿದ್ದಾರೆ, ಆಹ್ವಾನ ಬೇಕಿಲ್ಲ; ಕುಮಾರಸ್ವಾಮಿ

NEET UGC NET Exam irregularities protest demanding investigation
ರಾಯಚೂರು52 mins ago

Raichur News: ನೀಟ್, ಯುಜಿಸಿ ನೆಟ್ ಪರೀಕ್ಷೆಯಲ್ಲಿ ಅಕ್ರಮ; ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆ

kempegowda Jayanti
ಪ್ರಮುಖ ಸುದ್ದಿ58 mins ago

Kempegowda Jayanti: ಕೆಂಪೇಗೌಡ ಜಯಂತಿಗೆ ದೇವೇಗೌಡ, ಎಚ್‌ಡಿಕೆಗೆ ಸಿಗದ ಆಹ್ವಾನ; ಸರ್ಕಾರದ ವಿರುದ್ಧ ತಿರುಗಿಬಿದ್ದ ಒಕ್ಕಲಿಗರ ಸಂಘ

Sam Pitroda
ಪ್ರಮುಖ ಸುದ್ದಿ1 hour ago

Sam Pitroda: ಸಾಗರೋತ್ತರ ಕಾಂಗ್ರೆಸ್‌ ಅಧ್ಯಕ್ಷರಾಗಿ ಸ್ಯಾಮ್‌ ಪಿತ್ರೋಡಾ ಮತ್ತೆ ನೇಮಕ; ದಕ್ಷಿಣ ಭಾರತೀಯರನ್ನು ಆಫ್ರಿಕನ್ನರಿಗೆ ಹೋಲಿಸಿದ್ದ ನಾಯಕ

ECE V/S CSE
ಶಿಕ್ಷಣ1 hour ago

ECE v/s CSE: ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಾನಿಕ್ಸ್ ಅಂಡ್‌ ಕಮ್ಯುನಿಕೇಷನ್; ಯಾವುದು ಉತ್ತಮ ಆಯ್ಕೆ?

Vijayalakshmi Darshan
ಕರ್ನಾಟಕ2 hours ago

Vijayalakshmi Darshan: ಜೈಲಲ್ಲಿ ದರ್ಶನ್‌ ಭೇಟಿ ಬೆನ್ನಲ್ಲೇ ಫ್ಯಾನ್ಸ್‌ಗೆ ದೊಡ್ಡ ಸಂದೇಶ ಕೊಟ್ಟ ವಿಜಯಲಕ್ಷ್ಮೀ; ಇಲ್ಲಿದೆ ಪೋಸ್ಟ್!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌