Site icon Vistara News

Road Accident: ಹೊಸಕೋಟೆಯಲ್ಲಿ ಸರಣಿ ಅಪಘಾತ, ಹಲವರಿಗೆ ಗಾಯ

Road Accident

Road Accident

ಹೊಸಕೋಟೆ: ಹೊಸಕೋಟೆ- ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಮುಂಜಾನೆ ಸರಣಿ ಅಪಘಾತ ಸಂಭವಿಸಿದೆ. ಹಲವು ಮಂದಿ ಗಂಭೀರ ಗಾಯಗಳಾಗಿವೆ.

ರಾಷ್ಟ್ರೀಯ ಹೆದ್ದಾರಿಯ ಹೊಸಕೋಟೆ ಎಂವಿಜೆ ಮೆಡಿಕಲ್ ಕಾಲೇಜು ಬಳಿ ಭೀಕರ ರಸ್ತೆ ಸರಣಿ ಅಪಘಾತ ಸಂಭವಿಸಿದ್ದು, ಕ್ಯಾಂಟರ್ ಚಾಲಕನ ಬೇಜವಾಬ್ದಾರಿ ಚಾಲನೆಯೇ ಅಪಘಾತಕ್ಕೆ ಕಾರಣವಾಗಿದೆ.

ಅತಿವೇಗ ಹಾಗೂ ನಿರ್ಲಕ್ಷ್ಯದಿಂದ ಬಂದ ಕ್ಯಾಂಟರ್‌ ಡಿಕ್ಕಿಯಾದ ರಭಸಕ್ಕೆ ಟಿಟಿ ಹಾಗೂ ಬೈಕ್ ನುಜ್ಜುಗುಜ್ಜಾಗಿವೆ. ಬೈಕ್ ಸವಾರರಿಗೆ ಹಾಗೂ ಕ್ಯಾಂಟರ್ ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಹೊಸಕೋಟೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಹೊಸಕೋಟೆ ಸಂಚಾರಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : Road Accident: ಅತಿ ವೇಗ ತಂದ ಆಪತ್ತು; ಸುಮ್ಮನಹಳ್ಳಿ ಬಳಿ ನಾಲ್ಕು ಕಾರುಗಳ ನಡುವೆ ಸರಣಿ ಅಪಘಾತ

Exit mobile version