ಆನೇಕಲ್: ಗಂಧದ ಮರ ಕದಿಯಲು (sandalwood theft) ಬಂದವನಿಗೆ ಅರಣ್ಯ ಇಲಾಖೆ ಸಿಬ್ಬಂದಿ (forest department) ಗುಂಡು (firing) ಹಾರಿಸಿದ್ದು, ಸ್ಥಳದಲ್ಲಿಯೇ ಪ್ರಾಣ ಬಿಟ್ಟಿದ್ದಾನೆ. ಮತ್ತೊಬ್ಬ ಪರಾರಿಯಾಗಿದ್ದಾನೆ.
ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಅರಣ್ಯ (Bannerughatta forest) ಪ್ರದೇಶದ ಕಲ್ಕೆರೆ ಎಂಬಲ್ಲಿ ಬೀಟ್‌ನಲ್ಲಿ ಈ ಘಟನೆ ನಡೆದಿದೆ. ಬೀಟ್ ಫಾರೆಸ್ಟ್ ಗಾರ್ಡ್ ವಿನಯ್ ಎಂಬವರು ಫೈರಿಂಗ್ ಮಾಡಿದ್ದಾರೆ. ಕಳೆದ ಕೆಲ ದಿನಗಳಿಂದ ಇಲ್ಲಿ ಗಂಧದ ಮರಗಳ ಕಳ್ಳತನವಾಗುತ್ತಿತ್ತು. ಇದನ್ನು ತಡೆಯಲು ಫಾರೆಸ್ಟ್ ಬೀಟ್ ಸಿಬ್ಬಂದಿಯನ್ನ ನಿಯೋಜನೆ ಮಾಡಲಾಗಿತ್ತು.
ರಾತ್ರಿ ಎರಡು ಗಂಟೆಯ ಸುಮಾರಿಗೆ ಗಂಧದ ಮರ ಕಳ್ಳತನಕ್ಕೆ ಬಂದಿದ್ದವರನ್ನು ಕಂಡು ಗಸ್ತಿನಲ್ಲಿದ್ದ ಫಾರೆಸ್ಟ್ ಗಾರ್ಡ್ ಶರಣಾಗುವಂತೆ ಎಚ್ಚರಿಕೆ ನೀಡಿದ್ದಾರೆ. ಪರಾರಿಯಾಗಲು ಯತ್ನಿಸಿದಾಗ ಫೈರಿಂಗ್ ಮಾಡಿದ್ದಾರೆ. ಗಂಧಚೋರನೊಬ್ಬ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಇನ್ನೊಬ್ಬ ಪರಾರಿಯಾಗಿದ್ದಾನೆ. ಸತ್ತವನ ವಿವರಗಳು ತಿಳಿದುಬರಬೇಕಿವೆ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿದ್ದಾರೆ.
ಈಜಲು ಹೋಗಿ ಯುವಕ ಸಾವು
ಮಂಡ್ಯ: ಈಜಲು ಹೋಗಿ ನೀರಿನಲ್ಲಿ ಮುಳುಗಿ ಯುವಕ ಸಾವಿಗೀಡಾಗಿದ್ದಾರೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಹಲಗೂರಿನ ಗಾಣಾಳು ಫಾಲ್ಸ್‌ನಲ್ಲಿ ಘಟನೆ ನಡೆದಿದೆ. ಮನುಕುಮಾರ್(27) ಮೃತ ಯುವಕ.
ಮಂಡ್ಯ ತಾಲ್ಲೂಕಿನ ಸಬ್ಬನಹಳ್ಳಿ ಗ್ರಾಮದ ಯುವಕ ಖಾಸಗಿ ಬಸ್ಸಿನ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ. ಸ್ನೇಹಿತರೊಂದಿಗೆ ಫಾಲ್ಸ್ ನೋಡಲು ಹೋಗಿದ್ದ ವೇಳೆ ಈಜಲು ಹೋಗಿ ನೀರಿನಲ್ಲಿ ಮುಳುಗಿದ್ದಾರೆ. ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಎರಡು ದಿನಗಳಿಂದ ಯುವಕನ ಶವಕ್ಕಾಗಿ ಹುಡುಕಾಟ ನಡೆಸಿ ನಿನ್ನೆ ಶವ ಹೊರತೆಗೆದಿದ್ದಾರೆ. ಹಲಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Road accident : ಬೈಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಐಷರ್ ವಾಹನ; ದಂಪತಿ ಸ್ಥಳದಲ್ಲೇ ಸಾವು