ದೊಡ್ಡಬಳ್ಳಾಪುರ: ಡೆತ್ನೋಟ್ (Death note) ಬರೆದಿಟ್ಟು ಯುವತಿ ನೇಣಿಗೆ ಶರಣಾಗಿದ್ದಾಳೆ. ಜಾನ್ಸಿ (17) ಆತ್ಮಹತ್ಯೆ ಮಾಡಿಕೊಂಡವಳು. ದೊಡ್ಡಬಳ್ಳಾಪುರದ ತ್ಯಾಗರಾಜನಗರದಲ್ಲಿ (Self harming)ಈ ಘಟನೆ ನಡೆದಿದೆ.
ಜಾನ್ಸಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆಗಿದ್ದು, ಕಾಲೇಜಿನಿಂದ ಮನೆಗೆ ಬಂದಿದ್ದಾಳೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಡೆತ್ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ನಾನು ಯಾರಿಗೂ ಮೋಸ ಮಾಡಿಲ್ಲ. ಬುಜ್ಜಿ, ಆಲ್ ಫ್ರೆಂಡ್ಸ್ ಮಿಸ್ ಯೂ ನಾನು ಈ ಲೋಕವನ್ನು ಬಿಟ್ಟು ತೆರಳುತ್ತದ್ದೆನೆ ಎಲ್ಲರೂ ಖುಷಿಯಾಗಿರಿ ಎಂದು ಡೆತ್ನೋಟ್ನಲ್ಲಿ ಬರೆಯಲಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೊಡ್ಡಬಳ್ಳಾಪುರ ನಗರ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆ ಕೇಸ್; ಉಪ ತಹಸೀಲ್ದಾರ್ ಸಸ್ಪೆಂಡ್
ನಾಡಕಚೇರಿಯ ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿರುಕುಳ ಆರೋಪ ಹೊತ್ತಿದ್ದ ಉಪ ತಹಸೀಲ್ದಾರ್ ಶಿವಕುಮಾರ್ ಅವರನ್ನು ಅಮಾನತ್ತು ಮಾಡಲಾಗಿದೆ. ಹುಲ್ಲಹಳ್ಳಿ ನಾಡ ಕಚೇರಿಯಲ್ಲಿ ಕಂಪ್ಯೂಟರ್ ಆಪರೇಟರ್ ಪರಮೇಶ್ ಆತ್ಮಹತ್ಯೆಗೆ ಶರಣಾಗಿದ್ದ. ನಿರಂತರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್ನೋಟ್ನಲ್ಲಿ ತಿಳಿಸಿದ್ದ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಎದುರಿಸುತ್ತಿರುವ ಉಪತಹಸೀಲ್ದಾರ್ ಶಿವಕುಮಾರ್ ಅಮಾನತಾಗಿದ್ದು, ಪ್ರಾದೇಶಿಕ ಆಯುಕ್ತ ಡಾ.ಜಿ.ಸಿ.ಪ್ರಕಾಶ್ ಆದೇಶ ಹೊರಡಿಸಿದ್ದಾರೆ.
ಏನಿದು ಪ್ರಕರಣ?
ಮೈಸೂರು: ನಾಡ ಕಚೇರಿಯ (nadakacheri) ಉಪ ತಹಸೀಲ್ದಾರ್ ಕಿರುಕುಳಕ್ಕೆ ಕಂಪ್ಯೂಟರ್ ಆಪರೇಟರ್ (Computer Operator) ಆತ್ಮಹತ್ಯೆ (Self Harming)ಮಾಡಿಕೊಂಡಿರುವ ಘಟನೆ ಮೈಸೂರಿನ (Mysuru News) ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಗ್ರಾಮದಲ್ಲಿ ನಡೆದಿತ್ತು. ಹರತಲೆ ಗ್ರಾಮದ ಎಚ್.ಎಸ್ ಪರಮೇಶ್ (36) ಆತ್ಮಹತ್ಯೆ ಮಾಡಿಕೊಂಡವರು.
ಪರಮೇಶ್ ಹುಲ್ಲಹಳ್ಳಿ ನಾಡಕಚೇರಿಯಲ್ಲಿ ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದರು. ಜ.7ರ ಭಾನುವಾರ ನಾಡ ಕಛೇರಿಗೆ ತೆರಳಿ ಡೆತ್ನೋಟ್ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದರು. ಕೂಡಲೇ ಸ್ಥಳೀಯರು ಹುಲ್ಲಹಳ್ಳಿ ಗ್ರಾಮದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್ ಆಸ್ಪತ್ರೆಗೆ ರವಾನೆ ಮಾಡುತ್ತಿದ್ದ ವೇಳೆ ಮಾರ್ಗ ಮಧ್ಯ ಸಾವನ್ನಪ್ಪಿದ್ದರು.
ಡೆತ್ನೋಟ್ನಲ್ಲಿ ಏನಿದೆ?
ಕಳೆದ ಏಪ್ರಿಲ್ ತಿಂಗಳಿನಿಂದ ಸಂಬಳ ಆಗದೆ ಇರುವುದು ಅತ್ಯಂತ ಬೇಸರವಾಗಿ ಜೀವನ ನಡೆಸುವುದು ಒಂದು ಸಮಸ್ಯೆಯಾಗಿದೆ. ಹುಲ್ಲಹಳ್ಳಿ ನಾಡಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಉಪ ತಹಸೀಲ್ದಾರ್ ಎನ್.ಪಿ ಶಿವಕುಮಾರ್ ಅವರು ನನಗೆ ಮಾನಸಿಕ ಹಿಂಸೆ ಹಾಗೂ ಕೆಲವು ಅವರ ವೈಯಕ್ತಿಕ ದ್ವೇಷದಿಂದ ಮನನೊಂದು ನಾನು ಆತ್ಮಹತ್ಯೆಗೆ ಶರಣಾಗುತ್ತಿದ್ದೇನೆ.
ನಾನು ಒಬ್ಬ ಅಂಗವಿಕಲ ಎಂದು ಗೊತ್ತಿದ್ದರೂ ಅವರು ನನ್ನ ಮೇಲೆ ದ್ವೇಷ ಸಾಧಿಸುತ್ತಾ ನನಗೆ ಮಾನಸಿಕ ಹಿಂಸೆ ಕೊಟ್ಟು, ನನ್ನನ್ನು ಆತ್ಮಹತ್ಯೆಗೆ ಶರಣಾಗುವಂತೆ ಮಾಡಿದ್ದಾರೆ. ನನ್ನ ಸಾವಿಗೆ ಹುಲ್ಲಹಳ್ಳಿ ನಾಡಕಚೇರಿಯ ಉಪ ತಹಸೀಲ್ದಾರ್ ಎನ್.ಪಿ ಶಿವಕುಮಾರ್ ಅವರೇ ನೇರ ಕಾರಣವಾಗಿದ್ದಾರೆ ಎಂದು ಡೆತ್ ನೋಟ್ ಬರೆದಿಟ್ಟು ಪರಮೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ