ಆನೇಕಲ್: ಸರ್ಕಾರಿ ಆಸ್ಪತ್ರೆಯ ಮಹಡಿ ಮೇಲಿಂದ ಜಿಗಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾರೆ. ಬೆಂಗಳೂರು ಹೊರವಲಯದ ಆನೇಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಘಟನೆ ನಡೆದಿದೆ. ಜಿಗಣಿ ನಿವಾಸಿ ಮುನಿಯಲ್ಲಪ್ಪ (46) ಮೃತ ದುರ್ದೈವಿ,.
ಮುನಿಯಲ್ಲಪ್ಪ ಅಸ್ತಮಾ, ಹೊಟ್ಟೆನೋವು, ಜ್ವರದಿಂದ ಬಳಲುತ್ತಿದ್ದರು. ಹೀಗಾಗಿ ಕಳೆದ ಜು. 16ರಂದು ಸರ್ಕಾರಿ ಆಸ್ಪತ್ರೆಗೆ ಹೋದವರು ದಾಖಲಾಗದ್ದರು. ಆದರೆ ಅಡ್ಮಿಟ್ ಆದ ಒಂದೇ ದಿನಕ್ಕೆ ವೈದ್ಯರು ಡಿಸ್ಚಾರ್ಜ್ ಮಾಡಿದ್ದರು. ಇದಾದ ಬಳಿಕ ಅನಾರೋಗ್ಯ ಮತ್ತಷ್ಟು ಬಿಗಾಡಯಿಸಿದ ಹಿನ್ನೆಲೆಯಲ್ಲಿ ಶುಕ್ರವಾರ ಮತ್ತೆ ಆಸ್ಪತ್ರೆಗೆ ಮುನಿಯಲ್ಲಪ್ಪ ಬಂದಿದ್ದರು.
ಈ ವೇಳೆ ಆಸ್ಪತ್ರೆಯ ಎರಡನೇ ಮಹಡಿಗೆ ಬಂದು ಏಕಾಏಕಿ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಆನೇಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಆನೇಕಲ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: BMTC staff : ಬೆಂಗಳೂರಿನಲ್ಲಿ ನೇಣು ಬಿಗಿದುಕೊಂಡು ಬಿಎಂಟಿಸಿ ಸಿಬ್ಬಂದಿ ಆತ್ಮಹತ್ಯೆ
ಪರ ಪುರುಷನೊಂದಿಗೆ ಓಡಿ ಹೋದ ಪತ್ನಿ; ಮರ್ಯಾದೆಗೆ ಅಂಜಿ ಪತಿ ಆತ್ಮಹತ್ಯೆ
ತುಮಕೂರು: ಗಂಡ ಮಕ್ಕಳನ್ನು ಬಿಟ್ಟು ಮಹಿಳೆಯೊಬ್ಬಳು ಪರ ಪುರುಷನೊಂದಿಗೆ (Illicit relationship) ಓಡಿ ಹೋಗಿದ್ದಾಳೆ. ಮರ್ಯಾದೆಗೆ ಅಂಜಿದ ಪತಿ ವಿಷ ಕುಡಿದು ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾರೆ. ದೇವರಾಜ್ ಮೃತ ದುರ್ದೈವಿ. ತುಮಕೂರು ತಾಲೂಕಿನ ಹೊಸಹಳ್ಳಿಯಲ್ಲಿ ಘಟನೆ ನಡೆದಿದೆ.
ದೇವರಾಜ್ ಹಾಗೂ ಮಾಧವಿ ಇಬ್ಬರು ಪ್ರೀತಿಸಿ 18 ವರ್ಷಗಳ ಹಿಂದೆ ಮದುವೆಯಾಗಿದ್ದರು. ಆದರೆ ಪರ ಪುರುಷನ ಮೇಲೆ ವ್ಯಾಮೋಹಕ್ಕೆ ಸಿಲುಕಿದ ಮಾಧವಿ, ಹೊಸಹಳ್ಳಿ ಗ್ರಾಮದ ಆನಂದ್ ಕುಮಾರ್ ಎಂಬಾತನೊಟ್ಟಿಗೆ ಪರಾರಿ ಆಗಿದ್ದಾಳೆ.
ಪರ ಪುರುಷನೊಂದಿಗೆ ಪತ್ನಿ ಓಡಿ ಹೋದ ಸುದ್ದಿ ತಿಳಿದ ದೇವರಾಜ್ ಮನನೊಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಡೆತ್ ನೋಟ್‌ನಲ್ಲಿ ಪ್ರಧಾನಿ ಮೋದಿ, ಕುಮಾರಸ್ವಾಮಿ, ಡಿಸಿ-ಎಸ್ಪಿಗೆ ನನ್ನ ಸಾವಿಗೆ ನ್ಯಾಯಕೊಡಿಸಿ ಎಂದು ದೇವರಾಜ್ ಮನವಿ ಮಾಡಿದ್ದಾರೆ.
ಇದನ್ನೂ ಓದಿ: Road Accident : ಪಾದಚಾರಿ ಬಲಿ ಪಡೆದು ಎಸ್ಕೇಪ್ ಆದ ಬಸ್ ಚಾಲಕ; ಬಾಲಕಿಗೆ ಗುದ್ದಿ ಪ್ರಾಣ ಕಸಿದ ಲಾರಿ
ಮಾಧವಿಯನ್ನು 17 ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದೆ. ಹೊಸಹಳ್ಳಿಯಲ್ಲಿ ಅಂಗಡಿ ನಡೆಸಿಕೊಂಡು ಜೀವನ ಸಾಗಿಸುತ್ತಿದ್ದೆ. ನಮಗೆ 16 ಹಾಗೂ 12 ವರ್ಷದ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಹೀಗಿರುವಾಗ ಪ್ರತಿ ನಿತ್ಯ ಅಂಗಡಿಯ ಬಳಿ ಬರುತ್ತಿದ್ದ ಆನಂದ್ ಕುಮಾರ್, ಈ ವೇಳೆ ಮಾಧವಿಯೊಂದಿಗೆ ಸಲುಗೆ ಬೆಳೆಸಿ ಪ್ರೀತಿಯ ಬಲೆಗೆ ಬೀಳಿಸಿಕೊಂಡು ಪರಾರಿ ಆಗಿದ್ದಾನೆ ಎಂದು ಬರೆದಿದ್ದಾರೆ.
ಪತ್ನಿ ಓಡಿ ಹೋಗಿದ್ದಕ್ಕೆ ಮನನೊಂದು ವಿಷ ಸೇವಿಸಿದ್ದ ದೇವರಾಜ್, ಚಿಕಿತ್ಸೆ ಫಲಕಾರಿಯಾಗದೆ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಆತ್ಮಹತ್ಯೆಗೂ ಮೊದಲು ಡೆತ್ ನೋಟ್ ಬರೆದಿಟ್ಟು, ತನಗೆ ಆನಂದ್‌ನಿಂದ ಜೀವ ಬೆದರಿಕೆ ಹಾಕಿದ್ದ ಎಂದು ಉಲ್ಲೇಖಿಸಿದ್ದಾರೆ. ಇಬ್ಬರಿಗೂ ತಕ್ಕ ಶಿಕ್ಷೆ ಕೊಡಿಸುವಂತೆ ಮನವಿ ಮಾಡಿದ್ದಾರೆ.
ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಮಾಧವಿ, ಆನಂದ್ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಮಾಡಿದ ಆರೋಪ ಮೇಲೆ ದೂರು ದಾಖಲಾಗಿದೆ. ಎಫ್ಐಆರ್ ದಾಖಲಾಗುತ್ತಿದ್ದಂತೆ ಮಾಧವಿ, ಆನಂದ್ ತಲೆಮರೆಸಿಕೊಂಡಿದ್ದಾರೆ. ಇತ್ತ ತಾಯಿ ಇಲ್ಲದೇ ತಂದೆಯನ್ನು ಕೆಳದುಕೊಂಡ ಇಬ್ಬರು ಹೆಣ್ಮಕ್ಕಳು ತಬ್ಬಲಿಗಳಾಗಿದ್ದಾರೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ