ದೇವನಹಳ್ಳಿ: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ (Suspected Terrorist ) ಶಂಕಿತ ಉಗ್ರನ ಬಂಧನವಾಗಿದೆ. ನಿನ್ನೆ ಶುಕ್ರವಾರ ಬೆಳಗ್ಗೆ ಬಂಧಿಸಿ ಎನ್‌ಐಎ ಅಧಿಕಾರಿಗಳು ಕರೆದೊಗಿದ್ದಾರೆ. ಏರ್‌ಪೋರ್ಟ್‌ನಿಂದ ಸೌದಿಯ ಜಿದ್ದಾಗೆ ಎಸ್ಕೇಪ್ ಆಗುವ ವೇಳೆ ಬಂಧಿಸಿದ್ದಾರೆ. ಇಮಿಗ್ರೇಷನ್ ಅಧಿಕಾರಿಗಳು ನೀಡಿದ ಮಾಹಿತಿ ಮೇರೆಗೆ ಅಜೀಜ್ ಅಹ್ಮದ್ ಎಂಬ ಶಂಕಿತ ಉಗ್ರನನ್ನು ವಶಕ್ಕೆ ಪಡೆಯಲಾಗಿದೆ. ತಮಿಳುನಾಡಿನ ಹಿಜ್ಬುತ್ ಥರೀರ್ ಪ್ರಕರಣದ ಆರೋಪಿಯಾಗಿದ್ದಾನೆ.
ಲೇಡಿಸ್ ಪಿಜಿಗೆ ನುಗ್ಗಿ ಯುವತಿಯ ಹತ್ಯೆ ಪ್ರಕರಣ; 1205 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ
ಕಳೆದ ಜುಲೈ 24ರಂದು ಬೆಂಗಳೂರಿನ ಕೋರಮಂಗಲದಲ್ಲಿರುವ ಲೇಡಿಸ್ ಪಿಜಿಗೆ ನುಗ್ಗಿ ಯುವತಿಯ ಪ್ರಿಯಕರನೇ ಕೊಲೆ ಮಾಡಿದ್ದ. ಬಿಹಾರದ ಕೃತಿ ಕುಮಾರಿ (24) ಮೃತಳು.
ಪ್ರಕರಣ ಸಂಬಂಧ ಪೊಲೀಸರು ನ್ಯಾಯಾಲಯಕ್ಕೆ 1205 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಚಾರ್ಜ್ ಶೀಟ್‌ನಲ್ಲಿ 85 ಸಾಕ್ಷಿದಾರ ಹೇಳಿಕೆ ಉಲ್ಲೇಖ ಮಾಡಲಾಗಿದೆ. ಆರೋಪಿ ಅಭಿಷೇಕ್ ವಿರುದ್ಧ ಕೊಲೆ ನಡೆದ 39 ದಿನದಲ್ಲಿ ಪ್ರಕರಣದ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಬಿಎನ್‌ಎಸ್ ಜಾರಿಯಾದ ಬಳಿಕ ಬೆಂಗಳೂರು ಪೊಲೀಸರಿಂದ ಕೊಲೆ ಪ್ರಕರಣದಲ್ಲಿ ಮೊದಲ ಚಾರ್ಜ್ ಶೀಟ್ ಸಲ್ಲಿಕೆ ಇದಾಗಿದೆ.
ಏನಿದು ಪ್ರಕರಣ?
ಕೃತಿ ಕುಮಾರಿ ತಾನು ಪ್ರೀತಿಸುತ್ತಿದ್ದ ಯುವಕನಿಂದಲೇ ಕೊಲೆಯಾಗಿದ್ದಳು. ಕೃತ್ಯ ನಡೆದ ಆ ದಿನ ರಾತ್ರಿ 11:30ಕ್ಕೆ ಕೃತಿ ಕುಮಾರಿಯೇ ಯುವಕನನ್ನು ಕರೆದುಕೊಂಡು ಬಂದಿರುವ ಬಗ್ಗೆ ಮೇಲ್ನೋಟಕ್ಕೆ ಮಾಹಿತಿ ಸಿಕ್ಕಿತ್ತು. ಪಿಜಿಯಿಂದ ಹೊರ ಬಂದ ಕೃತಿ ತನ್ನ ಪ್ರಿಯತಮನ ಜತೆ ರಾತ್ರಿ ಊಟ ಮಾಡಿದ್ದಳು. ಊಟ ಮುಗಿಸಿದ ಕೃತಿ ತನ್ನೊಂದಿಗೆ ಯುವಕನ್ನು ಪಿಜಿಗೆ ಕರೆತಂದಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದರು.
ಕೃತಿಯ ರೂಂಗೆ ಆಗಮಿಸಿದ್ದ ವೇಳೆ ಇಬ್ಬರ ಮಧ್ಯೆ ಗಲಾಟೆಯಾಗಿ ಕೊಲೆಯಾಗಿರುವ ಶಂಕೆ ಇದೆ. ಕೃತ್ಯ ನಡೆದ ಎರಡು ದಿನದ ಹಿಂದೆಯಷ್ಟೇ ಕೃತಿ ಪಿಜಿಗೆ ಸೇರಿದ್ದರು. ಆಕೆ ಪಿಜಿಗೆ ಆಗಮಿಸುವ ವೇಳೆಯೂ ಈ ಯುವಕ ಲಗೇಜ್ ತೆಗದುಕೊಂಡು ಬಂದಿದ್ದ. ಆಗ ಯುವಕನನ್ನು ಒಳ ಬಿಡುವುದಿಲ್ಲ ಎಂದು ಪಿಜಿ ಸೆಕ್ಯೂರಿಟಿ ತಡೆದಿದ್ದರು. ಪಿಜಿ ಸೆಕ್ಯುರಿಟಿ ಬಳಿ, ಆತ ತನ್ನ ಸಹೋದರ ಎಂದು ಹೇಳಿ ಬೇಗ ಕಳುಹಿಸುತ್ತೇನೆ ಎಂದು ಕೃತಿ ಒಳ ಕರೆದುಕೊಂಡು ಹೋಗಿದ್ದರು ಎನ್ನಲಾಗಿದೆ. ಮಂಗಳವಾರ ರಾತ್ರಿ ಸುಮಾರು 11.10ಕ್ಕೆ ಆರೋಪಿ ಅಭಿಷೇಕ್ ಚಾಕು ಇಟ್ಟುಕೊಂಡು ಕೃತಿ ಇದ್ದ ಲೇಡಿಸ್ ಪಿಜಿಯೊಳಗೆ ನುಗ್ಗಿ ಆಕೆಯ ಕತ್ತು ಕೊಯ್ದು ಹತ್ಯೆ ಮಾಡಿ ಪರಾರಿಯಾಗಿದ್ದ. ಪರಿಚಯಸ್ಥ ಯುವಕನಿಂದಲೇ ಕೃತ್ಯ ನಡೆದಿರುವ ಬಗ್ಗೆ ಶಂಕೆ ವ್ಯಕ್ತವಾಗಿತ್ತು. ಸೂಕ್ತ ಭದ್ರತಾ ವ್ಯವಸ್ಥೆ ಕಲ್ಪಿಸದೆ ಪಿಜಿ ಮಾಲೀಕರು ನಿರ್ಲಕ್ಷ್ಯ ವಹಿಸಿದ್ದೇ ಘಟನೆಗೆ ಕಾರಣ ಎನ್ನುವ ಆರೋಪವೂ ಕೇಳಿ ಬಂದಿತ್ತು. ಇದೀಗ ಆರೋಪಿಯನ್ನು ಬಂಧಿಸಿ ಚಾರ್ಜ್ ಶೀಟ್ ಸಲ್ಲಿಕೆಯನ್ನು ಮಾಡಲಾಗಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ