Site icon Vistara News

ಜಾಗತಿಕ ಮಟ್ಟದಲ್ಲಿ ಬೆಂಗಳೂರು ಟೆಕ್‌ ಸಮಿಟ್‌: ಥೀಮ್‌ ಬಿಡುಗಡೆ ಮಾಡಿದ CM

ಬೆಂಗಳೂರು: ಬೆಂಗಳೂರು ಟೆಕ್ ಸಮಿಟ್ 25 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿಯ ಕಾರ್ಯಕ್ರಮವನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೆಂಗಳೂರು ಟೆಕ್ ಸಮಿಟ್ ಕರ್ಟನ್ ರೈಸರ್ ಹಾಗೂ ಥೀಮ್‌ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು. ನವೆಂಬರ್‌ನಲ್ಲಿ ಬೆಂಗಳೂರು ಟೆಕ್ ಸಮಿಟ್ ಆಯೋಜಿಸಿರುವ ಪ್ರಯುಕ್ತ ವಿವಿಧ ವಲಯದ ಕೈಗಾರಿಕೋದ್ಯಮಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ಹಲವಾರು ಸಲಹೆಗಳನ್ನು ಪಡೆದುಕೊಳ್ಳಲಾಗಿದೆ. ಕೈಗಾರಿಕೆಗಳಿಗೆ ಪೂರಕವಾದ ನೀತಿಗಳು, ಮೂಲಸೌಕರ್ಯ, ತಾಂತ್ರಿಕತೆಗಳ ಬಗ್ಗೆ ಬಹಳಷ್ಟು ಸಲಹೆಗಳನ್ನು ಕೈಗಾರಿಕೋದ್ಯಮಿಗಳು ನೀಡಿದ್ದಾರೆ. ಅವುಗಳನ್ನು ಅನುಷ್ಟಾನಗೊಳಿಸಲಾಗುವುದು.

ಇದನ್ನೂ ಓದಿ | ಬೆಂಗಳೂರು ಮೇಲೆ KTR ಕಣ್ಣು: ಹೈದರಾಬಾದಿಗೆ ಬನ್ನಿ ಎಂದ ತೆಲಂಗಾಣ ಸಚಿವ

ಬೆಂಗಳೂರು ಸಮಿಟ್ ತಾಂತ್ರಿಕ ಕ್ಷೇತ್ರಕ್ಕೆ ಹೊಸ ಆಯಾಮ ನೀಡುವಲ್ಲಿ ಇಂದಿನ ಸಭೆ ಫಲಪ್ರದವಾಗಿದೆ. ಮುಂಬರುವ ದಿನಗಳಲ್ಲಿ ವಿವಿಧ ಕೈಗಾರಿಕಾ ವಲಯಗಳಿಗೂ ಸರ್ಕಾರ ಇಂಬು ನೀಡಲಿದೆ. ಬೆಂಗಳೂರನ್ನು ವಿಶ್ವದಲ್ಲಿಯೇ ನಂ.1 ಸಿಲಿಕಾನ್ ಸಿಟಿ ಮಾಡುವ ಚಿಂತನೆ ಸರ್ಕಾರಕ್ಕಿದೆ. ಬೆಂಗಳೂರಿನ ಹೊರವಲಯಗಳಲ್ಲಿಯೂ ಮೂಲಸೌಕರ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳುತ್ತಿರುವ ಬಗ್ಗೆ ಸಭೆಯಲ್ಲಿ ಮಾಹಿತಿ ನೀಡಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಐಟಿಬಿಟಿ ಸಚಿವ ಡಾ. ಸಿ.ಎನ್‌. ಅಶ್ವತ್ಥನಾರಾಯಣ, ಐಟಿಬಿಟಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ. ರಮಣ ರೆಡ್ಡಿ, ಐಟಿ ಕ್ಷೇತ್ರದ ಪ್ರಮುಖರಾದ ಕ್ರಿಸ್‌ ಗೋಪಾಲಕೃಷ್ಣನ್‌ ಸೇರಿ ಅನೇಕರು ಭಾಗವಹಿಸಿದ್ದರು.

ಇದನ್ನೂ ಓದಿ: ಮಲ್ಲೇಶ್ವರಕ್ಕೆ ಬರಲಿದೆ ʼವಿದ್ಯಾರ್ಥಿ ಭವನʼ

Exit mobile version