ಹಿಂದವೀ ಮೀಟ್‌ ಮಾರ್ಟ್‌ಗೆ ಬಿಬಿಎಂಪಿ "ಝಟ್ಕಾ": ಪರವಾನಗಿ ಪಡೆಯಲು ನೋಟಿಸ್‌ - Vistara News

ಬೆಂಗಳೂರು

ಹಿಂದವೀ ಮೀಟ್‌ ಮಾರ್ಟ್‌ಗೆ ಬಿಬಿಎಂಪಿ “ಝಟ್ಕಾ”: ಪರವಾನಗಿ ಪಡೆಯಲು ನೋಟಿಸ್‌

ಹಿಂದವಿ ಮೀಟ್‌ ಮಾರ್ಟ್‌ಗೆ ಬಿಬಿಎಂಪಿ ಪಶುಪಾಲನಾ ವಿಭಾಗ ನೋಟಿಸ್‌ ನೀಡಿದೆ. ಬಿಬಿಎಂಪಿ ಪರವಾನಗಿ ಪಡೆಯದೆ ಅಂಗಡಿಗಳನ್ನು ನಡೆಸಲಾಗುತ್ತಿದೆ. ಕೆಎಂಸಿ ಕಾಯ್ದೆ 1976ರ ಕಲಂ 353ರ ಪ್ರಕಾರ ಕಾನೂನು ಉಲ್ಲಂಘನೆ ಮಾಡಿರುವುದರಿಂದ ತಕ್ಷಣವೇ ತಮ್ಮ ವ್ಯಾಪಾರವನ್ನು ಸ್ಥಗಿತಗೊಳಿಸಬೇಕು ಎಂದು ಹೇಳಲಾಗಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಹಲಾಲ್‌(Halal) ಕಟ್‌ ಮಾಂಸವನ್ನು ವಿರೋಧಿಸಿ ಝಟ್ಕಾ (Jhatka) ಕಟ್‌ ಮಾಂಸದ ಉದ್ಯಮ ಆರಂಭಿಸಿರು ಹಿಂದವೀ ಮೀಟ್‌ ಮಾರ್ಟ್‌ಗೆ ಬಿಬಿಎಂಪಿ ನೋಟಿಸ್‌ ನೀಡಿದೆ. ಮಾಂಸದ ಅಂಗಡಿಗಳು ಬಿಬಿಎಂಪಿಯ ಕಾಯ್ದೆ ಪ್ರಕಾರ ನೋಂದಣಿಯೂ ಆಗಿಲ್ಲ ಹಾಗೂ ಇನ್ನಿತರೆ ಅನುಮತಿಗಳನ್ನೂ ಪಡೆದಿಲ್ಲ ಎಂದು ಪಶುಪಾಲನಾ ವಿಭಾಗ ನೋಟಿಸ್‌ನಲ್ಲಿ ತಿಳಿಸಿದೆ.

ಮುಸ್ಲಿಂ ಸಮುದಾಯದ ಧಾರ್ಮಿಕ ಆಚರಣೆಗಳ ಮೂಲಕ ಪ್ರಾಣಿಗಳನ್ನು ಕತ್ತರಿಸುವುದನ್ನು ಹಲಾಲ್‌ ಕಟ್‌ ಎನ್ನಲಾಗುತ್ತದೆ. ಈ ರೀತಿ ಹಲಾಲ್‌ ರೀತಿಯಲ್ಲೆ ಆಹಾರ ತಯಾರಿಸಲಾಗುತ್ತಿದೆ ಎಂಬುದನ್ನು ಪ್ರಮಾಣೀಕರಿಸಲು ಖಾಸಗಿ ಸಂಸ್ಥೆಯೊಂದು ದೇಶಾದ್ಯಂತ ಕಾರ್ಯಾಚರಣೆ ನಡೆಸುತ್ತಿದೆ. ಇದೇ ವೇಳೆ ಆಹಾರವಲ್ಲ ಇನ್ನಿತರೆ ವಸ್ತುಗಳಿಗೂ ಹಲಾಲ್‌ ಸರ್ಟಿಫಿಕೇಟ್‌ ನೀಡಲಾಗುತ್ತಿದೆ.

ಇದು ಹಿಂದುಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತಿದ್ದು, ಝಟ್ಕಾ ಕಟ್‌ ಮಾಂಸವನ್ನೇ ಸೇವಿಸಬೇಕು ಎಂದು ಅನೇಕರು ವಾದಿಸಿದ್ದರು. ಅನೇಕ ವರ್ಷಗಳಿಂದ ಈ ವಿವಾದ ಇತ್ತಾದರೂ ಇತ್ತೀಚೆಗೆ ಕರ್ನಾಟಕದಲ್ಲಿ ಹಿಜಾಬ್‌ ವಿವಾದದ ನಂತರ ಈ ವಿಚಾರವೂ ಬೆಳಕಿಗೆ ಬಂದಿತು. ಯುಗಾದಿ ನಂತರ ವರ್ಷತೊಡಕಿನ ಸಂದರ್ಭದಲ್ಲಿ ಮುಸ್ಲಿಮರು ಕತ್ತರಿಸಿದ ಹಲಾಲ್‌ ಮಾಂಸ ಸೇವಿಸದೆ, ಹಿಂದುಳು ಕತ್ತರಿಸಿದ ಝಟ್ಕಾ ಮಾಂಸವನ್ನೇ ಖರೀದಿಸಬೇಕು ಎಂದು ಪ್ರಶಾಂತ್‌ ಸಂಬರಗಿ, ಪುನೀತ್‌ ಕೆರೆಹಳ್ಳಿ ಸೇರಿ ಅನೇಕರು ಅಭಿಯಾನ ನಡೆಸಿದ್ದರು.

ಝಟ್ಕಾ ಕಟ್‌ ಮಾಡುವ ಸಲುವಾಗಿಯೇ ಮುನೇಗೌಡ ಎನ್ನುವವರು ಕೆಲ ವರ್ಷಗಳಿಂದ ಬೆಂಗಳೂರಿನ ಅನೇಕ ಕಡೆಗಳಲ್ಲಿ ಹಿಂದವೀ ಮೀಟ್‌ ಮಾರ್ಟ್‌ ಉದ್ಯಮ ಆರಂಭಿಸಿದ್ದಾರೆ. ಯುಗಾದಿ ಸಂದರ್ಭದಲ್ಲಿ ಈ ಉದ್ಯಮಕ್ಕೆ ಉತ್ತಮ ವ್ಯಾಪಾರವಾಗಿತ್ತು ಎಂಬ ವರದಿಗಳೂ ಇದ್ದವು. ಇದೀಗ ಏಪ್ರಿಲ್‌ 12ರಂದು ಹಿಂದವೀ ಮೀಟ್‌ ಮಾರ್ಟ್‌ಗೆ ಬಿಬಿಎಂಪಿ ನೋಟಿಸ್‌ ನೀಡಿದೆ.

ಪಾಲಿಸದಿದ್ದರೆ ಅಂಗಡಿ ಬಂದ್

‌ಹಿಂದವಿ ಮೀಟ್‌ ಮಾರ್ಟ್‌ಗೆ ಬಿಬಿಎಂಪಿ ಪಶುಪಾಲನಾ ವಿಭಾಗ ನೋಟಿಸ್‌ ನೀಡಿದೆ. ಬಿಬಿಎಂಪಿ ಪರವಾನಗಿ ಪಡೆಯದೆ ಅಂಗಡಿಗಳನ್ನು ನಡೆಸಲಾಗುತ್ತಿದೆ. ಕೆಎಂಸಿ ಕಾಯ್ದೆ 1976ರ ಕಲಂ 353ರ ಪ್ರಕಾರ ಕಾನೂನು ಉಲ್ಲಂಘನೆ ಮಾಡಿರುವುದರಿಂದ ತಕ್ಷಣವೇ ತಮ್ಮ ವ್ಯಾಪಾರವನ್ನು ಸ್ಥಗಿತಗೊಳಿಸಬೇಕು. ಈ ಪತ್ರ ತಲುಪಿದ ಏಳು ದಿನಗಳಲ್ಲಿ ಅಗತ್ಯ ದಾಖಲೆಗಳನ್ನು ಕಚೇರಿಗೆ ಸಲ್ಲಿಸಿ ಉದ್ಯಮವನ್ನು ಸಕ್ರಮಗೊಳಿಸಿಕೊಳ್ಳಬೇಕು ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ. ಮಹಾನಗರ ಪಾಲಿಕೆ ಪರವಾನಗಿ ಇಲ್ಲದಿರುವುದು ಹಾಗೂ ಪಾಲಿಕೆಯ ಅಧಿಕೃತ ಪ್ರಮಾಣಪತ್ರ ಇಲ್ಲದಿರುವುದನ್ನು ವಿಶ್ವೇಶ್ವರಯ್ಯ ಬಡಾವಣೆಯಲ್ಲಿರುವ ಹಿಂದವೀ ಮೀಟ್‌ ಮಾರ್ಟ್‌ ವಿಳಾಸಕ್ಕೆ ನೀಡಿರುವ ನೋಟಿಸ್‌ನಲ್ಲಿ ನಮೂದು ಮಾಡಲಾಗಿದೆ.

ಪ್ರತಿ ವರ್ಷ ಪರವಾನಗಿ ಶುಲ್ಕ ವಿವರ
  • ಚಿಕನ್ ಅಂಗಡಿ ₹2,500
  • ಕೋಳಿ, ಮಟನ್ ಮಾರಾಟ ₹10,500
ಎಲ್ಲ ಕಾನೂನು ಪಾಲಿಸುತ್ತೇವೆ

ನೋಟಿಸ್‌ ಕುರಿತು ಪ್ರತಿಕ್ರಿಯೆ ನೀಡಿರುವ ಹಿಂದವೀ ಮೀಟ್‌ ಮಾರ್ಟ್‌ ಮಾಲೀಕ ಮುನೇಗೌಡ, ನಾವು ಸಂವಿಧಾನಾತ್ಮಕವಾಗಿ ಕೆಲಸ ಮಾಡುತ್ತೇವೆ. ಬಿಬಿಎಂಪಿಯವರು ನೋಟಿಸ್‌ ನೀಡಿರುವುದರಲ್ಲಿ ಯಾವುದೇ ತಪ್ಪಿಲ್ಲ. ಕೆಲ ಪರವಾನಗಿಗಳನ್ನು ಪಡೆಯಲು ಈಗಾಗಲೆ ಅರ್ಜಿ ಸಲ್ಲಿಸಿದ್ದೇವೆ, ಸದ್ಯದಲ್ಲೆ ಎಲ್ಲವೂ ಲಭಿಸುತ್ತದೆ ಎಂದು ತಿಳಿಸಿದ್ದಾರೆ.

ಮುನೇಗೌಡಗೆ ಕೊಲೆ ಬೆದರಿಕೆ?

ಒಂದು ವಾರದಿಂದ ಗುಂಪೊಂದು ಮುನೇಗೌಡರನ್ನು ಹಿಂಬಾಲಿಸುತ್ತಿದ್ದು, ಹತ್ಯೆಗೆ ಸಂಚು ರೂಪಿಸುತ್ತಿರಬಹುದು ಎಂಬ ಅನುಮಾನವನ್ನು ವ್ಯಕ್ತಪಡಿಸಿದ್ದಾರೆ. ಈಗಾಗಲೇ ಬೆಂಗಳೂರಿನ ಏಳು ಕಡೆಗಳಲ್ಲಿ ಹಿಂದವೀ ಮೀಟ್ ಮಾರ್ಟ್ ಮಳಿಗೆಗಳನ್ನು ತೆರೆಯಲಾಗಿದೆ. ಭವಿಷ್ಯದಲ್ಲಿ ಬಿಬಿಎಂಫಿಯ ಎಲ್ಲ ವಾರ್ಡ್‌ಗಳಲ್ಲಿ, ಎಲ್ಲ ತಾಲೂಕುಗಳಲ್ಲೂ ತೆರೆಯುವ ಯೋಜನೆಯಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಮಳಿಗೆಗಳಿಗೆ ಸಿಸಿಟಿವಿ ಅಳವಡಿಸಿರುವ ಮುನೇಗೌಡ, ಭದ್ರತೆ ಕೋರಿ ಜ್ಞಾನಭಾರತಿ ಪೊಲೀಸ್‌ ಠಾಣೆಗೆ ಮನವಿ ಸಲ್ಲಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Bengaluru News: 10 ದಿನಗಳ ‘ಯೋಗೋತ್ಸವ’ಕ್ಕೆ ಸಚಿವ ದಿನೇಶ್ ಗುಂಡೂರಾವ್ ಚಾಲನೆ

Bengaluru News: ಆಯುಷ್ ಇಲಾಖೆಯ ವತಿಯಿಂದ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಇಂದಿನಿಂದ ಹಮ್ಮಿಕೊಂಡಿರುವ 10 ದಿನಗಳ ಯೋಗೋತ್ಸವ ಕಾರ್ಯಕ್ರಮಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು.

VISTARANEWS.COM


on

Minister Dinesh Gundurao drives 10 days Yogotsava programme in Bengaluru
Koo

ಬೆಂಗಳೂರು: ಯೋಗ ದಿನಾಚರಣೆ (Yoga Day) ಕೇವಲ ಒಂದು ದಿನಕ್ಕೆ ಸೀಮಿತವಾಗದೇ ಜನರು ಪ್ರತಿನಿತ್ಯ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಆಗಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Bengaluru News) ತಿಳಿಸಿದರು.

ಆಯುಷ್ ಇಲಾಖೆಯು 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಇಂದಿನಿಂದ ಹಮ್ಮಿಕೊಂಡಿರುವ 10 ದಿನಗಳ ಯೋಗೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದ ಅವರು, ಅಂಗನವಾಡಿ ಹಾಗೂ ಶಾಲಾ ಮಕ್ಕಳಿಗೆ 10 ದಿನಗಳಲ್ಲಿ ಯೋಗವನ್ನು ಹೇಳಿಕೊಡಲಾಗುತ್ತದೆ. ಅಲ್ಲದೇ ಆಯುರ್ವೇದ ಚಿಕಿತ್ಸಾ ಪದ್ದತಿಗಳ ಮಾಹಿತಿಯನ್ನು ಸಾರ್ವಜನಿಕರಿಗೆ ತಲುಪಿಸುವ ಕೆಲಸ ಆಗಲಿದೆ ಎಂದ ಅವರು, ಉತ್ತಮ ಆರೋಗ್ಯ ಕಾಪಾಡಿಕೊಳ್ಳುವಲ್ಲಿ ಯೋಗ ಹಾಗೂ ಆಯುರ್ವೇದದ ಮಹತ್ವ ನಮ್ಮ ಸಾಮಾನ್ಯ ಜನರಿಗೆ ತಲುಪಿಸುವುದು ಮುಖ್ಯವಾಗಿದೆ ಎಂದು ಹೇಳಿದರು.

ಇದನ್ನೂ ಓದಿ: Fortis Hospital: ನೈಜೀರಿಯನ್ ಯುವತಿಗೆ ಯಶಸ್ವಿ ‘ಡ್ಯುಯಲ್ ಕಾಕ್ಲಿಯರ್ ಇಂಪ್ಲಾಂಟ್ ಸರ್ಜರಿ’

ಯೋಗೋತ್ಸವದ ಅಂಗವಾಗಿ ವಿವಿಧ ಸಂಘ-ಸಂಸ್ಥೆಗಳು/ಇಲಾಖೆಗಳು ಆಯುಷ್ಇಲಾಖೆ ಸಹಕಾರದೊಂದಿಗೆ ಜೂನ್ 11 ರಿಂದ 20 ರವರೆಗೆ ಹತ್ತು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲು ನಿರ್ಧರಿಸಿವೆ. ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಸಂಸ್ಥೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮತ್ತು ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳು /ಸಂಘ ಸಂಸ್ಥೆ ಯೋಗೋತ್ಸವದಲ್ಲಿ ಭಾಗವಹಿಸುತ್ತಿದ್ದು, ಈ 04 ಸಂಸ್ಥೆಗಳಲ್ಲಿ ಸುಮಾರು 4 ಲಕ್ಷ ಮಂದಿ ರಾಜ್ಯಾದ್ಯಂತ ಯೋಗ ಪ್ರದರ್ಶನವನ್ನು ಮಾಡುವುದರ ಮೂಲಕ ಯೋಗೋತ್ಸವನ್ನು ಆಚರಿಸಲಿದ್ದಾರೆ. ಅಲ್ಲದೆ ಈ ಕಾರ್ಯಕ್ರಮದಲ್ಲಿ ಆಯುಷ್ ಇಲಾಖೆಯಿಂದ ಆರೋಗ್ಯಕರ ಜೀವನ ಶೈಲಿಯ ಕುರಿತು ಮಾಹಿತಿ ಹಾಗೂ ಆಯುಷ್ ಆರೋಗ್ಯ ತಪಾಸಣಾ ಶಿಬಿರಗಳನ್ನು ಏರ್ಪಡಿಸಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಬೆಂಗಳೂರಿನಲ್ಲಿನ ಬೆಂಗಳೂರು ಅಪಾರ್ಟ್‌ಮೆಂಟ್ ಅಸೋಸಿಯೇಷನ್, ಪ್ರಜಾಪಿತ ಬ್ರಹ್ಮಕುಮಾರಿ ಸಂಸ್ಥೆ, ಜೈನ್ ಯುನಿರ್ವಸಿಟಿ, ಲೂಲು ಮಾಲ್ ಹಾಗೂ ಮಾಲ್ ಆಫ್ ಏಷ್ಯಾ, ಸ್ಥಳಗಳಲ್ಲಿ ಯೋಗ ತರಬೇತಿ, ಆಯುಷ್ ವೈದ್ಯ ಪದ್ಧತಿಗಳ ಕುರಿತು ಅರಿವು ಹಾಗೂ ಆಯುಷ್ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯುಷ್ ಇಲಾಖಾ ವತಿಯಿಂದ ನಡೆಸಲಾಗುತ್ತಿದೆ.

ಈ ಕಾರ್ಯಕ್ರಮಗಳಿಗೆ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ಯೋಗ ಗಂಗೋತ್ರಿ ಟ್ರಸ್ಟ್, ಶ್ರೀ ಪತಂಜಲಿ ಯೋಗಾಶ್ರಮ ಟ್ರಸ್ಟ್, ಸಂಯಮ ಟ್ರಸ್ಟ್ ಹಾಗೂ ಇನ್ನಿತರ ಖಾಸಗಿ ಯೋಗ ಸಂಸ್ಥೆಗಳು ಅಗತ್ಯ ಸಹಕಾರವನ್ನು ನೀಡಲಿದ್ದು, ಮಾನಸಿಕ ಆರೋಗ್ಯ ಹಾಗೂ ದೈಹಿಕ ಆರೋಗ್ಯದ ಕುರಿತು ಸಾರ್ವಜನಿಕರಿಗೆ ಮಾಹಿತಿ ದೊರೆಯಲಿದೆ.‌

ಇದೇ ಸಂದರ್ಭದಲ್ಲಿ ಆಯುರ್ವೇದ ಶಬ್ದಕೋಶ, ಯೋಗೋತ್ಸವ ಪೋಸ್ಟರ್, ಯೋಗೋತ್ಸವ ವೆಬ್‌ಸೈಟ್‌ಗೆ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು.

ಇದನ್ನೂ ಓದಿ: Bengaluru News: ಬೆಂಗಳೂರಿನಲ್ಲಿ ಜೂ. 29ರಂದು ನಿವೃತ್ತ ನ್ಯಾ. ಚಂದ್ರಶೇಖರಯ್ಯಗೆ ಅಭಿನಂದನೆ

ಕಾರ್ಯಕ್ರಮದಲ್ಲಿ ಆಯುಷ್ ಇಲಾಖೆಯ ಆಯುಕ್ತ ಶ್ರೀನಿವಾಸುಲು, ಟ್ರಾನ್ಸ್‌ ಡಿಸಿಪ್ಲಿನರಿ ವಿಶ್ವವಿದ್ಯಾಲಯದ ಉಪಕುಲಪತಿ ದರ್ಶನ್ ಶಂಕರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Continue Reading

ಸ್ಯಾಂಡಲ್ ವುಡ್

Actor Darshan Arrested : ಲಾಕಪ್​ನಲ್ಲಿ ಸೊಳ್ಳೆ ಕಡಿತಕ್ಕೆ ಬೆಚ್ಚಿ ರಾತ್ರಿಯೆಲ್ಲ ಎದ್ದು ಕುಳಿತಿದ್ದ ನಟ ದರ್ಶನ್​!

Actor Darshan Arrested : ಸೊಳ್ಳೆ ಕಡಿತದ ಜತೆಗೆ ದರ್ಶನ್​ ಸಿಕ್ಕಾಪಟ್ಟೆ ಚಿಂತೆಯಲ್ಲಿ ಇದ್ದಂತೆ ಕಂಡು ಬಂತು. ಲಾಕ್​ಅಪ್​ನೊಳಗೆ ಆಗಾಗ ಎಚ್ಚರಗೊಂಡು ಕುಳಿತಿರುತ್ತಿದ್ದರು. ಆರಾಮವಾಗಿ ಎಸ್ಟೇಟ್​, ಬಂಗಲೆಯಲ್ಲಿ ಮಲಗುತ್ತಿದ್ದ ದರ್ಶನ್​ಗೆ ಜೈಲು ವಾಸ ಚಿಂತೆಯನ್ನು ಉಂಟು ಮಾಡಿತ್ತು.

VISTARANEWS.COM


on

Actor Darshan Arrested
Koo

ಬೆಂಗಳೂರು: ತನ್ನದೇ ಅಭಿಮಾನಿ ರೇಣುಕಾ ಸ್ವಾಮಿ ಎಂಬುವರನ್ನು ಕ್ರೂರವಾಗಿ ಕೊಲೆ ಮಾಡಿರುವ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ (Actor Darshan Arrested)​, ಸೊಳ್ಳೆ ಕಡಿತಕ್ಕೆ ಬೆಚ್ಚಿ ರಾತ್ರಿಯೆಲ್ಲ ಎಚ್ಚರವಿದ್ದರು. ಕೊಲೆಯಲ್ಲಿ ಭಾಗಿಯಾಗಿರುವ ಆರೋಪ ಹೊತ್ತಿರುವ ದರ್ಶನ್ ಮತ್ತು ಆತನ ಸಹಚರಿಗೆ ಕಾಮಾಕ್ಷಿಪಾಳ್ಯ ಪೊಲೀಸರು ಬೇರೆ ಬೇರೆ ಲಾಕಪ್​ನಲ್ಲಿ ಮಲಗಲು ವ್ಯವಸ್ಥೆ ಮಾಡಿದ್ದರು. ಆದರೆ, ಇದುವರೆಗೆ ಜೇಬುಗಳ್ಳರ, ಮನೆಗಳ್ಳರ ಮತ್ತು ಸಣ್ಣಪುಟ್ಟ ಹೊಡೆದಾಟಗಳಲ್ಲಿ ಜೈಲು ಸೇರುತ್ತಿದ್ದವರ ರಕ್ತ ಹೀರಿ ಅಭ್ಯಾಸವಿದ್ದ ಸೊಳ್ಳೆಗಳು ದರ್ಶನ್​ಗೂ ಕಾಟ ಕೊಟ್ಟವು. ಪೊಲೀಸರು ‘ಸೆಲೆಬ್ರಿಟಿ ದರ್ಶನ್​ಗೆ’ ಕಾರ್ಪೆಟ್​, ದಿಂಬು ಎಲ್ಲ ಕೊಟ್ಟು ಮಲಗಲು ವ್ಯವಸ್ಥೆ ಮಾಡಿದ್ದರೂ ಸೊಳ್ಳೆಗಳು ಅವೆಲ್ಲವನ್ನೂ ಲೆಕ್ಕಕ್ಕೆ ತೆಗೆದುಕೊಳ್ಳದೇ ಬೆಡ್​ಶೀಟ್​ ಒಳಗಿನಿಂದ ತೂರಿಕೊಂಡು ಹೋಗಿ ಕಚ್ಚಿದವು.

ಕೊಲೆ ಆರೋಪ ಎದುರಿಸುತ್ತಿರುವ ದರ್ಶನ್ ಹಾಗೂ ಉಳಿದ 11 ಜನ ಆರೋಪಿಗಳು ಲಾಕ್ ಅಪ್ ನಲ್ಲೇ ಉಳಿಯಬೇಕಾಯಿತು. ದರ್ಶನ್‌, ರಾಘವೇಂದ್ರ ಮತ್ತು ವಿನಯ್ ಗೆ ಒಂದು ಲಾಕ್ ಅಪ್ ನಲ್ಲಿ ಮಲಗಲು ವ್ಯವಸ್ಥೆ ಮಾಡಿದ್ದರೆ, ಇತರ ಆರೋಪಿಗಳಿಗೆ ಮತ್ತೊಂದು ಲಾಕ್ ಅಪ್​ನಲ್ಲಿ ಮಲಗಲು ಹೇಳಿದ್ದರು. ರಾತ್ರಿ ಆರೋಪಿಗಳಿಗೆ ಖಾಸಗಿ ಹೋಟೆಲ್ ನಿಂದ ದೊನ್ನೆ ಬಿರಿಯಾನಿ‌ ವ್ಯವಸ್ಥೆ ಮಾಡಲಾಗಿತ್ತು. ಚೆನ್ನಾಗಿ ತಿಂದಿದ್ದ ಅವರು ಪೊಲೀಸರೇ ಒದಗಿಸಿದ್ದ ಹಾಸಿಗೆ ಪರಿಕರಗಳು, ಬೆಡ್ ಶೀಟ್, ತಲೆ ದಿಂಬು ಬಳಸಿ ಮಲಗಿದ್ದರು. ಆದರೆ, ಸೊಳ್ಳೆಗಳು ಅವರ ರಕ್ಷಣಾ ಕೋಟೆಯನ್ನು ಭೇದಿಸಿ ಬಂದು ಕಚ್ಚಿದ್ದವು.

ಚಿಂತೆಗೆ ಬಿದ್ದಿರುವ ದರ್ಶನ್​

ಸೊಳ್ಳೆ ಕಡಿತದ ಜತೆಗೆ ದರ್ಶನ್​ ಸಿಕ್ಕಾಪಟ್ಟೆ ಚಿಂತೆಯಲ್ಲಿ ಇದ್ದಂತೆ ಕಂಡು ಬಂತು. ಲಾಕ್​ಅಪ್​ನೊಳಗೆ ಆಗಾಗ ಎಚ್ಚರಗೊಂಡು ಕುಳಿತಿರುತ್ತಿದ್ದರು. ಆರಾಮವಾಗಿ ಎಸ್ಟೇಟ್​, ಬಂಗಲೆಯಲ್ಲಿ ಮಲಗುತ್ತಿದ್ದ ದರ್ಶನ್​ಗೆ ಜೈಲು ವಾಸ ಚಿಂತೆಯನ್ನು ಉಂಟು ಮಾಡಿತ್ತು.

ಭಾರೀ ಭದ್ರತೆ

ದರ್ಶನ್​ ಹಾಗೂ ಆತನ ಗ್ಯಾಂಗ್​ನ ಸದಸ್ಯರು ಇದ್ದ ಪೊಲೀಸ್ ಠಾಣೆಗೆ ಭದ್ರತೆಯನ್ನು ಹೆಚ್ಚಿಸಲಾಗಿತ್ತು . ವಿಐಪಿ ಆರೋಪಿಗಳ ಮೇಲೆ ದಾಳಿಯಾಗುವ ಅಥವಾ ಇನ್ಯಾವುದೇ ಅನಾಹುತಗಳನ್ನು ತಪ್ಪಿಸುವ ಉದ್ದೇಶದಿಂದ ಠಾಣೆಯ ಹೊರಗಡೆ ಕೆಎಸ್​ಆರ್​​ಪಿ ಪೊಲೀಸ್​ ತಂಡವೊಂದನ್ನು ನಿಯೋಜಿಸಲಾಗಿತ್ತು. ದರ್ಶನ್​ಗೆ ದೊಡ್ಡ ಪ್ರಮಾಣದ ಅಭಿಮಾನಿ ಬಳಗವಿದೆ. ಹುಚ್ಚು ಅಭಿಮಾನ ದರ್ಶನ್ ಆರೋಪಿಯೇ ಅಲ್ಲ ಎಂದು ವಾದಿಸುವ ಮಟ್ಟಕ್ಕೆ ಬಂದಿದೆ. ಹೀಗಾಗಿ ಡಿ ಬಾಸ್ ನೋಡಲು ಪೊಲೀಸ್​ ಠಾಣೆಗೆ ಬರಬಹುದು ಎಂಬ ಊಹೆ ಮೇಲೆ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.

ಇಂದಿನಿಂದ ಆರು ದಿನಗಳ ಕಾಲ ತನಿಖೆ

ಬುಧವಾರದಿಂದ ಆರಂಭಗೊಂಡಂತೆ ದರ್ಶನ್ ಗ್ಯಾಂಗ್​​ಗೆ ಆರು ದಿನಗಳ ಕಾಲ ಪೊಲೀಸ್ ವಿಚಾರಣೆ ನಡೆಯಲಿದೆ. ಕೊಲೆ ಕೇಸ್ ಸಂಬಂಧ ಪೊಲೀಸರು ಸಾಕ್ಷ್ಯಗಳನ್ನು ಒಟ್ಟು ಮಾಡಲಿದ್ದಾರೆ. ಆರಂಭದಲ್ಲಿ ಆರೋಪಿಗಳ ಎಲೆಕ್ಟ್ರಾನಿಕ್ ಡಿವೈಸ್​​ಗಳ ತಲಾಷೆ ನಡೆಯಲಿದೆ. ಜತೆಗೆ ಅಪಹರಿಸಿಕೊಂಡು ಬಂದು ಕೂಡಿ ಹಾಕಿದ ಜಾಗ, ಕೊಲೆ ಮಾಡಿ ಎಸೆದ ಜಾಗವನ್ನು ಮಹಜರು ಮಾಡಲಿದ್ದಾರೆ.

ಇದನ್ನೂ ಓದಿ: Actor Darshan Arrested : ದರ್ಶನ್​ಗೆ ಪೊಲೀಸ್ ಠಾಣೆಯಲ್ಲಿ ರಾಜಾತಿಥ್ಯ; ಚಿಕ್ಕಪೇಟೆ ಬಿರಿಯಾನಿ, ಡೋಲೊ 650 ಮಾತ್ರೆ!

ರೇಣುಕಾಸ್ವಾಮಿಯನ್ನು ಹತ್ಯೆ ಮಾಡಿದ್ದು ಯಾರು, ಯಾರು ಅವರಿಗೆ ಹೊಡೆದಿದ್ದಾರೆ, ಅವರನ್ನು ಎತ್ತಿ ಹಾಕಿಕೊಂಡು ಬಂದು ಎಸೆದು ಹೋಗಿದ್ದು ಯಾರು ಎಂಬೆಲ್ಲ ಕೋನದಿಂದ ತನಿಖೆ ನಡೆಸಲಿದ್ದಾರೆ. ಅಮಾನುಷವಾಗಿ ಕೊಲೆ ಮಾಡಲು ಬಳಸಿರುವ ಪರಿಕರಗಳನ್ನು ಪೊಲೀಸರು ವಶಕ್ಕೆ ಪಡೆಯಲಿದ್ದಾರೆ. ಬಿಸಾಡಿರುವ ಆಯುಧಗಳನ್ನು ಹುಡುಕಿ ಪತ್ತೆ ಹಚ್ಚಲಿದ್ದಾರೆ.

ಪ್ರಮುಖವಾಗಿ ಹತ್ಯೆ ನಡೆದ ದಿನ ಆರೋಪಿಗಳ ಮೊಬೈಲ್​ ನೆಟ್​ವರ್ಕ್ ಇದ್ದ ಜಾಗವನ್ನು ಪತ್ತೆ ಹಚ್ಚಲಿದ್ದಾರೆ. ಈ ಮಾಹಿತಿಯು ಆರೋಪಿಗಳ ವಿರುದ್ಧ ಚಾರ್ಜ್​ ಶೀಟ್​ ಸಲ್ಲಿಕೆ ಮಾಡುವುದಕ್ಕೆ ಪ್ರಮುಖ ಸಾಕ್ಷಿಗಳಾಗಲಿವೆ. ಅದೇ ರೀತಿ ಆರೋಪಿಗಳನ್ನು ಚಿತ್ರದುರ್ಗಕ್ಕೆ ಕರೆದೊಯ್ದು ತನಿಖೆ ನಡೆಸಲು ಪೊಲೀಸರು ಮುಂದಾಗಲಿದ್ದಾರೆ.

Continue Reading

ಪ್ರಮುಖ ಸುದ್ದಿ

Actor Darshan Arrested : ದರ್ಶನ್​ಗೆ ಪೊಲೀಸ್ ಠಾಣೆಯಲ್ಲಿ ರಾಜಾತಿಥ್ಯ; ಚಿಕ್ಕಪೇಟೆ ಬಿರಿಯಾನಿ, ಡೋಲೊ 650 ಮಾತ್ರೆ!

VISTARANEWS.COM


on

Actor Darshan Arrested
Koo

ಬೆಂಗಳೂರು : ತನ್ನ ಅಭಿಮಾನಿ ರೇಣುಕಾ ಸ್ವಾಮಿ ಎಂಬುವರನ್ನು ಅಮಾನುಷವಾಗಿ ಕೊಲೆ ಮಾಡಿರುವ ಪ್ರಕರಣದಲ್ಲಿ ಪೊಲೀಸ್​​ ಕಸ್ಟಡಿಯಲ್ಲಿರುವ ನಟ ದರ್ಶನ್ (Actor Darshan Arrested) ಹಾಗೂ ಆತನ ಸಹಚರರಿಗೆ ಕಾಮಾಕ್ಷಿ ಪಾಳ್ಯ ಪೊಲೀಸರು ಮಂಗಳವಾರ ರಾತ್ರಿಯ ಊಟಕ್ಕೆ ಚಿಕ್ಕಪೇಟೆ ಬಿರಿಯಾನಿ ತಂದುಕೊಟ್ಟಿದ್ದಾರೆ. ಪ್ರಕರಣದಲ್ಲಿ ದರ್ಶನ್​ ಮತ್ತು ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಆರೋಪಿಗಳಿದ್ದಾರೆ. ಅವರೆಲ್ಲರನ್ನೂ ನ್ಯಾಯಾಲಯ ಪೊಲೀಸರ ಕಸ್ಟಡಿಗೆ ನೀಡಿದೆ. ಪವಿತ್ರಾ ಸಾಂತ್ವನ ಕೇಂದ್ರದಲ್ಲಿ ಇದ್ದರೆ ಉಳಿದವರು ಕಾಮಾಕ್ಷಿಪಾಳ್ಯ ಪೊಲೀಸರ ವಶದಲ್ಲಿದ್ದಾರೆ. ರಾತ್ರಿಯ ಊಟಕ್ಕೆ ಪೊಲೀಸರು ಅವರೆಲ್ಲರಿಗೂ ಚಿಕ್ಕಪೇಟೆ ಬಿರಿಯಾನಿ ಪ್ಯಾಕೇಟ್​ಗಳನ್ನು ತೆಗೆದುಕೊಂಡು ಹೋಗಿರುವ ದೃಶ್ಯಗಳು ಸೆರೆಯಾಗಿವೆ.

ದೊಡ್ಡ ಪ್ರಮಾಣದಲ್ಲಿ ಬಿರಿಯಾನಿ ಪ್ಯಾಕೆಟ್​ಗಳನ್ನು ಕ್ಯಾರಿ ಬ್ಯಾಗ್​ನಲ್ಲಿ ತುಂಬಿಸಿಕೊಂಡು ಹೋಗಿದ್ದು, ಜತೆಗೆ ಎಲ್ಲರಿಗೂ ಮಿನರಲ್ ವಾಟರ್​ ನೀಡಲಾಗಿದೆ. ಆರೋಪಿಗಳು ಕೆಲವರು ಬೆಳಗ್ಗಿನಿಂದ ಬಂಧನ ಹಾಗೂ ಇನ್ನಿತರ ಕಾನೂನು ಪ್ರಕ್ರಿಯೆಗಳ ಹಿನ್ನೆಲೆಯಲ್ಲಿ ಮೈಕೈ ನೋವು, ತಲೆ ನೋವು ಎಂದಿದ್ದು ಅವರೆಲ್ಲರಿಗೂ ಡೋಲೋ 650 ಮಾತ್ರೆಯನ್ನೂ ತಂದಕೊಟ್ಟಿದ್ದಾರೆ.

ಆರೋಪಿ ಚಿತ್ರನಟ ಹಾಗೂ ಇದು ರಾಜ್ಯಾದ್ಯಂತ ಸಂಚಲನ ಮೂಡಿಸಿರುವ ಪ್ರಕರಣವಾಗಿರುವ ಕಾರಣ ತಮ್ಮ ವಶದಲ್ಲಿರುವ ಆರೋಪಿಗಳನ್ನು ಸರಿಯಾಗಿ ನೋಡಿಕೊಳ್ಳುವುದು ಪೊಲೀಸರಿಗೆ ಅನಿವಾರ್ಯ. ಹೀಗಾಗಿ ಅವರ ಊಟ, ತಿಂಡಿ ಹಾಗೂ ಇನ್ನಿತರ ಉಪಚಾರಗಳನ್ನು ಮಾಡಲು ಪೊಲೀಸರ ತಂಡ ನಾನಾ ರೀತಿಯ ಶ್ರಮಗಳನ್ನು ಹಾಕುತ್ತಿದೆ.

ಹಾಸಿಗೆ, ತಲೆದಿಂಬು

ಆರೋಪಿ ನಂಬರ್ 1 ದರ್ಶನ್ ಹಾಗೂ ಉಳಿದ ಆರೋಪಿಗಳಿಗೆ ಪೊಲೀಸರು ರಾತ್ರಿ ವೇಳೆ ಮಲಗಲು ಹಾಸಿಗೆ ಹಾಗೂ ತಲೆ ದಿಂಬು ವ್ಯವಸ್ಥೆಯನ್ನೂ ಮಾಡಿದ್ದಾರೆ. 9 ಗಂಟೆ ವೇಳೆಗೆ ಪೊಲೀಸರು ನಾನಾ ಕಡೆಯಿಂದ ಆರೋಪಿಗಳೆಲ್ಲರಿಗೂ ಮಲಗಲು ಕಾರ್ಪೆಟ್​, ಬೆಡ್​ಶೀಟ್​ ಹಾಗೂ ತಲೆ ದಿಂಬಿನ ವ್ಯವಸ್ಥೆ ಮಾಡಿದ್ದಾರೆ. ಆರು ದಿನಗಳ ಕಾಲ ತಮ್ಮ ವಶಕ್ಕೆ ಪಡೆದಿರುವ ಪೊಲೀಸರಿಗೆ ಮುಂದಿನ ನ್ಯಾಯಾಲಯಕ್ಕೆ ಹಾಜರುಪಡಿಸುವ ಪ್ರಕ್ರಿಯೆ ನಡುವೆ ಇಷ್ಟೊಂದು ವ್ಯವಸ್ಥೆಗಳನ್ನು ಮಾಡಲೇಬೇಕಾಗುತ್ತದೆ.

ಇದನ್ನೂ ಓದಿ: Pavithra Gowda: ಬಂಧನದ ಭಯವಿಲ್ಲದೇ ನಗುತ್ತಾ ಸಾಂತ್ವನ ಕೇಂದ್ರಕ್ಕೆ ಹೋದ ಪವಿತ್ರಾ ಗೌಡ!

ಏತನ್ಮಧ್ಯೆ, ಆರೋಪಿ ನಂಬರ್​ 2 ಪವಿತ್ರಾಗೌಡ ಸಾಂತ್ವನ ಕೇಂದ್ರದಲ್ಲಿ ಉಳಿದುಕೊಂಡಿದ್ದಾರೆ. ಪೊಲೀಸರು ಅವರನ್ನು ಅಲ್ಲಿಗೆ ಜೀಪ್​ನಲ್ಲಿ ಕರೆದುಕೊಂಡು ಹೋಗಿ ಬಿಡುತ್ತಿದ್ದಂತೆ ನಗುನಗುತ್ತಾ ಅವರು ಸಾಂತ್ವನ ಕೇಂದ್ರ ಸೇರಿಕೊಂಡಿದ್ದಾರೆ. ನಡೆದ ಘಟನೆಗೂ ತಮಗೂ ಯಾವುದೇ ಸಂಬಂಧ ಇಲ್ಲ ಎನ್ನುವಂತೆ ಅವರು ಕೇಂದ್ರ ಸೇರಿಕೊಂಡಿದ್ದಾರೆ.

ಕೊಲೆಗೆ ಕಾರಣ

ರೇಣುಕಾಸ್ವಾಮಿ ಪವಿತ್ರಗೌಡಗೆ ಮೆಸೇಜ್ ಮಾಡುತ್ತಿದ್ದ. ಈ ವಿಷಯ ತಿಳಿದು ದರ್ಶನ್ ಆಪ್ತರು ನಕಲಿ ಅಕೌಂಟ್ ತೆರೆದಿದ್ದರು. ಬಳಿಕ ರೇಣುಕಾಸ್ವಾಮಿ ಜತೆ ಚಾಟಿಂಗ್ ನಡೆಸಲಾಗಿತ್ತು. ಬಳಿಕ ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಕಿಡ್ನಾಪ್ ಮಾಡಿಕೊಂಡು ಬಂದು ಹಲ್ಲೆ ನಡೆಸಲಾಗಿತ್ತು. ಈ ವೇಳೆ ಆತ ಸಾವನ್ನಪ್ಪಿದ್ದ. ಆತ ಮೃತಪಟ್ಟಿರುವುದು ಗೊತ್ತಾಗುತ್ತಿದ್ದಂತೆ ದರ್ಶನ್‌ ಆಪ್ತರು ಸ್ಕಾರ್ಪಿಯೋ ಕಾರಿನಲ್ಲಿ ಶವವನ್ನು ತಂದು ಬಿಸಾಡಿ ಹೋಗಿದ್ದರು. ಬಳಿಕ ಪೊಲೀಸರಿಗೆ ಕಾಲ್‌ ಮಾಡಿ ತಪ್ಪಾಗಿದೆ ಸರ್ ಅಂದಿದ್ದರು. ಬಳಿಕ ಬಂದು ಮೂವರು ಪೊಲೀಸರ ಮುಂದೆ ಶರಣಾಗಿದ್ದರು ಎನ್ನಲಾಗಿದೆ.

ದರ್ಶನ್‌ ಅವರನ್ನು ಪೊಲೀಸರು ಬಂಧಿಸಿದ ಬೆನ್ನಲ್ಲೇ ನಟ ದರ್ಶನ್‌ ಅವರ ಗೆಳತಿಯೂ ಆದ ನಟಿ (Pavithra Gowda) ಅವರನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ. ರೇಣುಕಾಸ್ವಾಮಿ ಹತ್ಯೆಯ ಹಿಂದೆ ಒಳಸಂಚು ರೂಪಿಸಿದ ಆರೋಪದಲ್ಲಿ ಬೆಂಗಳೂರಿನ ಅನ್ನಪೂರ್ಣೇಶ್ವರ ನಗರ ಠಾಣೆಯ ಪೊಲೀಸರು ವಶಪಡಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ರೇಣುಕಾಸ್ವಾಮಿ ಯಾರು?

ಚಿತ್ರದುರ್ಗ ಮೂಲದವನಾದ ರೇಣುಕಾಸ್ವಾಮಿ ಎಂಬ 28 ವರ್ಷದ ಯುವಕನು ಮೆಡಿಕಲ್‌ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಈತನು ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಕಳುಹಿಸಿದ್ದ ಎನ್ನಲಾಗಿದೆ. ಇದೇ ಕಾರಣಕ್ಕೆ ದರ್ಶನ್‌ ಹಾಗೂ ಅವರ ಆಪ್ತರು ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ದರ್ಶನ್‌ ಸೇರಿ 10 ಮಂದಿಯನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ರೇಣುಕಾಸ್ವಾಮಿಗೆ ಕಳೆದ ವರ್ಷವೇ ಸಹನಾ ಎಂಬ ಯುವತಿ ಜತೆ ಮದುವೆಯಾಗಿದೆ ಎಂದು ಹೇಳಲಾಗುತ್ತಿದೆ. ರೇಣುಕಾಸ್ವಾಮಿ ಕೂಡ ದರ್ಶನ್‌ ಅಭಿಮಾನಿಯಾಗಿದ್ದ ಎನ್ನಲಾಗಿದೆ.

Continue Reading

ಕರ್ನಾಟಕ

Pavithra Gowda: ಬಂಧನದ ಭಯವಿಲ್ಲದೇ ನಗುತ್ತಾ ಸಾಂತ್ವನ ಕೇಂದ್ರಕ್ಕೆ ಹೋದ ಪವಿತ್ರಾ ಗೌಡ!

Pavithra Gowda: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌, ಪವಿತ್ರಾ ಗೌಡ ಸೇರಿ 13 ಆರೋಪಿಗಳಿಗೆ 6 ದಿನಗಳ ಕಾಲ ಪೊಲೀಸ್‌ ಕಸ್ಟಡಿ ವಿಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಆರೋಪಿ ಪವಿತ್ರಾ ಗೌಡಳನ್ನು ಮಹಿಳಾ ಸಾಂತ್ವನ ಕೇಂದ್ರಕ್ಕೆ ರವಾನಿಸಲಾಗಿದೆ.

VISTARANEWS.COM


on

Pavithra Gowda
Koo

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌, ಪವಿತ್ರಾ ಗೌಡ (Pavithra Gowda) ಸೇರಿ 13 ಆರೋಪಿಗಳನ್ನು ಪೊಲೀಸ್‌ ಕಸ್ಟಡಿಗೆ ನೀಡಲು ನ್ಯಾಯಾಲಯ ಆದೇಶಿಸಿದೆ. ಹೀಗಾಗಿ ಎ1 ಪವಿತ್ರಾ ಗೌಡಳನ್ನು ಮಂಗಳವಾರ ರಾತ್ರಿ ಸಾಂತ್ವನ ಕೇಂದ್ರಕ್ಕೆ ಕರೆದೊಯ್ಯಲಾಯಿತು. ಈ ವೇಳೆ ಜೀಪ್‌ನಿಂದ ಇಳಿಯುವಾಗ ಯಾವುದೇ ರೀತಿಯ ಭಯವಿಲ್ಲದೇ ಪವಿತ್ರಾ ಗೌಡ ನಗುನಗುತ್ತಾ ಸಾಂತ್ವನ ಕೇಂದ್ರದ ಒಳ ಹೋಗಿದ್ದು ಕಂಡುಬಂದಿದೆ.

ಆರೋಪಿಗಳಿಗೆ 6 ದಿನಗಳ ಕಾಲ ಕಸ್ಟಡಿ ವಿಧಿಸಿದ ಹಿನ್ನೆಲೆಯಲ್ಲಿ ಆರೋಪಿಯನ್ನು ಮಹಿಳಾ ಸಾಂತ್ವನ ಕೇಂದ್ರಕ್ಕೆ ರವಾನಿಸಲಾಯಿತು. ಈ ವೇಳೆ ಕ್ಯಾಮೆರಾಗಳ ಕಣ್ಣಿಗೆ ಬೀಳದಂತೆ ಮುಖಕ್ಕೆ ಅಡ್ಡಲಾಗಿ ವಾಟರ್‌ ಬಾಟಲ್‌ ಹಿಡಿದು ಕಾರಿನಲ್ಲಿ ಪವಿತ್ರಾ ಗೌಡ ನಗುತ್ತಿದ್ದದ್ದು ಕಂಡುಬಂದಿದೆ. ನಂತರ ಯಾವುದೇ ಭಯವೇ ಇಲ್ಲದಂತೆ ನಗುತ್ತಾ ಸಾಂತ್ವನ ಕೇಂದ್ರದ ಒಳ ಹೋಗಿದ್ದಾಳೆ. ಸದ್ಯ ಈ ವಿಡಿಯೊ ವೈರಲ್‌ ಆಗಿದ್ದು, ಬಂಧನವಾದರೂ ಇವರಿಗೆ ಯಾವುದೇ ಆತಂಕ, ಭಯ ಇಲ್ಲ ಎಂದು ನೆಟ್ಟಿಗರು ಛೀಮಾರಿ ಹಾಕಿದ್ದಾರೆ.

ಇದನ್ನೂ ಓದಿ | Renuka Swamy Murder Case: ರೇಣುಕಾಸ್ವಾಮಿ ಕೊಲೆ ಕೇಸ್‌ ಖಂಡಿಸಿ ನಾಳೆ ಚಿತ್ರದುರ್ಗದಲ್ಲಿ ಬೃಹತ್‌ ಪ್ರತಿಭಟನೆ

ಪತಿ ಅರೆಸ್ಟ್​ ಆದರೂ ಪ್ರತಿಕ್ರಿಯೆ ನೀಡದ ದರ್ಶನ್​ ಪತ್ನಿ ವಿಜಯಲಕ್ಷ್ಮಿ!

Actor Darshan Arrested

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್​ ಅರೆಸ್ಟ್ (Actor Darshan Arrested) ಆಗಿದ್ದರೂ ಅವರ ಪತ್ನಿ ವಿಜಯಲಕ್ಷ್ಮಿ ಇದುವರೆಗೆ ಒಂದೇ ಒಂದು ಪ್ರತಿಕ್ರಿಯೆ ನೀಡಿಲ್ಲ. ಪವಿತ್ರಾ ಗೌಡ ವಿಚಾರದಲ್ಲಿ ಆಗಾಗ ಸೋಶಿಯಲ್ ಮೀಡಿಯಾಗಳ ಮೂಲಕ ಯುದ್ಧ ಸಾರುತ್ತಿದ್ದ ವಿಜಯಲಕ್ಷ್ಮಿ ಅವರು ಈ ಬಾರಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ಪ್ರಕರಣದಲ್ಲಿ ಬಗ್ಗೆ ಅವರ ಅಭಿಪ್ರಾಯ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಮಂಗಳವಾರ ಬೆಳಗ್ಗಿನಿಂದ ಪ್ರಕರಣ ರಾಜ್ಯಾದ್ಯಂತ ಹವಾ ಎಬ್ಬಿಸಿದ್ದು ಒಬ್ಬೊಬ್ಬರು ಒಂದೊಂದು ಪ್ರತಿಕ್ರಿಯೆ ನೀಡುತ್ತಿದ್ದಾರೆ. ದರ್ಶನ್​ ಅಭಿಮಾನಿಗಳಂತೂ ಈ ವಿಚಾರದಲ್ಲಿ ಭಾವುಕರಾಗಿದ್ದಾರೆ. ಆದರೆ ಪತಿ ಜೈಲಿಗೆ ಹೋಗುವ ಸ್ಥಿತಿ ತಂದುಕೊಂಡಿದ್ದರೂ ವಿಜಯಲಕ್ಷ್ಮೀ ಈ ಕುರಿತು ಏನೂ ಹೇಳಿಕೆಗಳನ್ನು ನೀಡಿಲ್ಲ.

ಪವಿತ್ರಾ ಗೌಡ ವಿಚಾರದಲ್ಲಿ ವಿಜಯಲಕ್ಷ್ಮೀ ಈ ಹಿಂದೆ ಸಾಕಷ್ಟು ಬಾರಿ ಸೋಶಿಯಲ್​ ಮೀಡಿಯಾ ವಾರ್ ನಡೆಸಿದ್ದರು. ಪವಿತ್ರಾ ವಿರುದ್ಧ ನಾನಾ ರೀತಿಯ ಹೇಳಿಕೆಗಳನ್ನು ನೀಡಿದ್ದರು. ದರ್ಶನ್​ ಕೊಲೆ ಅರೋಪದಲ್ಲಿ ಸಿಕ್ಕಿ ಹಾಕಿಕೊಂಡಿರುವುದ ಪವಿತ್ರಾ ಅವರ ವಿಚಾರದಲ್ಲಿ. ಹೀಗಾಗಿ ಅವರಿಗೆ ಸಹಜವಾಗಿಯೇ ಅಸಮಾಧಾನ ಉಂಟಾಗಿರುತ್ತದೆ. ಆದಾಗ್ಯೂ ಅವರು ಇನ್ನೂ ಪ್ರತಿಕ್ರಿಯೆ ಕೊಟ್ಟಿಲ್ಲ.

ದರ್ಶನ್​ಗೆ ಮರಣದಂಡನೆ ಶಿಕ್ಷೆಯಾಗಲಿ! ನಟಿ ರಮ್ಯಾ ಟ್ವೀಟ್‌

ಕೊಲೆ ಪ್ರಕರಣದಲ್ಲಿ ಪೊಲೀಸರ ವಶದಲ್ಲಿರುವ ನಟ ದರ್ಶನ್​ಗೆ (Actor Darshan) ಮರಣದಂಡನೆಯಾಗಲಿ ಎಂಬ ಆಶಯವನ್ನು ಸ್ಯಾಂಡಲ್​ವುಡ್​ ಕ್ವೀನ್​ ರಮ್ಯಾ ವ್ಯಕ್ತಪಡಿಸಿದ್ದಾರೆ! ಕೊಲೆ ಪ್ರಕರಣದ ಕುರಿತು ಎಕ್ಸ್​ನಲ್ಲಿ ಪೋಸ್ಟ್​​ ಮಾಡಿರುವ ರಮ್ಯಾ ಐಪಿಸಿ ಸೆಕ್ಷನ್​ 302ರನ್ನು ಉಲ್ಲೇಖಿಸಿ ಅದರ ಅನ್ವಯ ದರ್ಶನ್​ಗೆ ಕಠಿಣ ಶಿಕ್ಷೆಯಾಗಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ. ಕೊಲೆಯಾಗಿರುವ ವ್ಯಕ್ತಿಯ ಪರವಾಗಿ ನಿಂತಿರುವ ರಮ್ಯಾ, ದರ್ಶನ್​ಗೆ ಇಂಡಿಯನ್ ಪಿನಲ್​ ಕೋಡ್​ 302ರ ಪ್ರಕಾರ ಯಾವ ಪ್ರಕಾರಣದ ಶಿಕ್ಷೆಯಾಗುತ್ತದೆ ಎಂಬ ಬಗ್ಗೆ ಟ್ವೀಟ್ ಮಾಡಿದ್ದಾರೆ. ಈ ಸೆಕ್ಷನ್​ 302ರಲ್ಲಿ ಕೊಲೆ ಆರೋಪ ಸಾಬೀತಾದರೆ ಅವರಿಗೆ ಮರಣದಂಡನೆ ಅಥವಾ ಜೀವಾವಧಿ ಶಿಕ್ಷೆ ವಿಧಿಸಲಾಗುತ್ತದೆ ಎಂಬ ಮಾಹಿತಿ ಇರುವ ಪೋಸ್ಟ್‌ ಅನ್ನು ರಮ್ಯಾ ರೀಟ್ವೀಟ್‌ ಮಾಡಿದ್ದಾರೆ.

ಸೆಕ್ಷನ್ 302 ರ ಅಡಿಯಲ್ಲಿ ನಟ ದರ್ಶನ್​ಗೆ ಜೀವಾವಧಿ ಶಿಕ್ಷೆ ಅಥವಾ ಶಿಕ್ಷೆಯಾಗಬೇಕು. ಬೇರೆ ಯಾವುದೇ ಹಣದ ಪ್ರಭಾವ ಮತ್ತು ಭಾರತೀಯ ಕಾನೂನು ವ್ಯವಸ್ಥೆಯನ್ನು ಅಣಕಿಸುವಂತಾಗಬಾರದು. ಸಂತ್ರಸ್ತರ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂಬ ಟ್ವೀಟ್‌ ಅನ್ನು ರಮ್ಯಾ ಮರು ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ: Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

ರಮ್ಯಾ ಈ ಹಿಂದೆಯೂ ಸ್ಟಾರ್ ನಟರ ನಡವಳಿಕೆಯ ಬಗ್ಗೆ ಆಕ್ಷೇಪ ಎತ್ತಿದ್ದರು. ಹಿಂದೆ ದರ್ಶನ್​ಗೆ ಚಪ್ಪಲಿ ಎಸೆತ ಪ್ರಕರಣ ನಡೆದಾಗ ಸ್ಪಂದಿಸಿದ್ದ ಅವರು, ಅಭಿಮಾನಿಗಳು ಹಾಗೂ ನಟರಿಗೆ ಬುದ್ಧಿ ಹೇಳಬೇಕಾಗಿದೆ ಎಂದು ಹೇಳಿದ್ದರು.

Continue Reading
Advertisement
Fraud Case
ಕ್ರೈಂ3 mins ago

Fraud Case: 300 ರೂ. ಬೆಲೆಯ ನಕಲಿ ಆಭರಣವನ್ನು ವಿದೇಶಿ ಮಹಿಳೆಗೆ 6 ಕೋಟಿ ರೂ.ಗೆ ಮಾರಿದರು!

Vastu Tips
ಧಾರ್ಮಿಕ22 mins ago

Vastu Tips: ಈ ನಕಾರಾತ್ಮಕ ವಸ್ತುಗಳನ್ನು ಮನೆಯಲ್ಲಿ ಇಡಲೇಬೇಡಿ!

Altroz Racer launched by Tata Motors
ಕರ್ನಾಟಕ26 mins ago

Tata Motors: ಟಾಟಾ ಮೋಟಾರ್ಸ್‌ನಿಂದ ʼಆಲ್ಟ್ರೋಜ್ ರೇಸರ್ʼ ಬಿಡುಗಡೆ; ದರ ಎಷ್ಟು?

Pawan Kalyan
ದೇಶ27 mins ago

Pawan Kalyan: ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿಯಾಗಿ ಪವನ್‌ ಕಲ್ಯಾಣ್‌ ಆಯ್ಕೆ; ಇಂದು ಪ್ರಮಾಣ ವಚನ ಸ್ವೀಕಾರ

Minister Dinesh Gundurao drives 10 days Yogotsava programme in Bengaluru
ಕರ್ನಾಟಕ29 mins ago

Bengaluru News: 10 ದಿನಗಳ ‘ಯೋಗೋತ್ಸವ’ಕ್ಕೆ ಸಚಿವ ದಿನೇಶ್ ಗುಂಡೂರಾವ್ ಚಾಲನೆ

Rajiv Taranath
ಪ್ರಮುಖ ಸುದ್ದಿ32 mins ago

Rajeev Taranath : ಮಹೋನ್ನತ ಪ್ರತಿಭೆಯ ರಾಜೀವ್ ತಾರಾನಾಥ್ ಸರೋದ್ ಲೋಕದ ಅದ್ಭುತ!

Actor Darshan Arrested Vijayalakshmi Darshan Unfollow Darshan On Instagram
ಸ್ಯಾಂಡಲ್ ವುಡ್39 mins ago

Actor Darshan Arrested : ದರ್ಶನ್​ನ ಅನ್​ಫಾಲೋ ಮಾಡಿ ಡಿಪಿ ಡಿಲೀಟ್‌ ಮಾಡಿದ ದರ್ಶನ್‌ ಪತ್ನಿ ವಿಜಯಲಕ್ಷ್ಮಿ!

Murder News
ಪ್ರಮುಖ ಸುದ್ದಿ55 mins ago

Murder News : ಖಾಸಗಿ ಕ್ಷಣದ ಫೋಟೋಗಳನ್ನಿಟ್ಟು ಬೆದರಿಕೆ ಹಾಕುತ್ತಿದ್ದವನನ್ನು ಕೊಲೆ ಮಾಡಿದ ವಿವಾಹಿತ ಮಹಿಳೆ

Reasi Terror Attack
ದೇಶ2 hours ago

Reasi Terror Attack: ರಿಯಾಸಿ ಭಯೋತ್ಪಾದಕ ದಾಳಿಯ ಶಂಕಿತನ ರೇಖಾಚಿತ್ರ ಬಿಡುಗಡೆ; ಸುಳಿವು ಕೊಟ್ಟವರಿಗೆ 20 ಲಕ್ಷ ರೂ. ಘೋಷಣೆ

Actor Darshan Arrested
ಸ್ಯಾಂಡಲ್ ವುಡ್2 hours ago

Actor Darshan Arrested : ಲಾಕಪ್​ನಲ್ಲಿ ಸೊಳ್ಳೆ ಕಡಿತಕ್ಕೆ ಬೆಚ್ಚಿ ರಾತ್ರಿಯೆಲ್ಲ ಎದ್ದು ಕುಳಿತಿದ್ದ ನಟ ದರ್ಶನ್​!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ16 hours ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ17 hours ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ18 hours ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ20 hours ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ22 hours ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ5 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ5 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌