ಬೆಂಗಳೂರು: 12 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮಲತಂದೆ ವಿರುದ್ಧ ನಗರದ ರಾಜಗೋಪಾಲನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ರಾಜಗೋಪಾಲನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಾಲಕಿಯ ಮೇಲೆ ಮಲತಂದೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಮೊದಲ ಗಂಡ ಮರಣದ ನಂತರ ಬಾಲಕಿ ತಾಯಿ ಮತ್ತೊಂದು ಮದುವೆಯಾಗಿದ್ದರು. ತಾಯಿ ಮನೆಯಲ್ಲಿ ಇಲ್ಲದಿದ್ದಾಗ ಮಲತಂದೆ ಮೃಗೀಯ ವರ್ತನೆ ತೋರಿದ್ದಾನೆ. ನಂತರ ತಾಯಿ ಮನೆಗೆ ಬಂದ ಬಳಿಕ ಮಲತಂದೆಯ ಕೃತ್ಯದ ಬಗ್ಗೆ ಬಾಲಕಿ ಹೇಳಿದ್ದಾಳೆ.
ಈ ಕುರಿತು ರಾಜಗೋಪಲನಗರ ಠಾಣೆಯಲ್ಲಿ ದೂರು ನೀಡಿದ ಹಿನ್ನೆಲೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ | ಮಳವಳ್ಳಿಯಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ; ಬಾಲಕಿ ಮೇಲೆ ವೃದ್ಧನಿಂದ ಅತ್ಯಾಚಾರ