ಬೆಂಗಳೂರು: ಬಿಡಬ್ಲ್ಯುಎಸ್‌ಎಸ್‌ಬಿ (BWSSB) ಅರೆಬರೆ ಕಾಮಗಾರಿ ಮಾಡಿ ತೆರೆದಿಟ್ಟು ಹೋಗಿರುವ ಗುಂಡಿಗೆ ಎರಡೂವರೆ ವರ್ಷದ ಬಾಲಕನೊಬ್ಬ ಬಿದ್ದು (boy death) ಸಾವಿಗೀಡಾಗಿದ್ದಾನೆ.
ಮಾಗಡಿ ರಸ್ತೆಯ ಗೊಲ್ಲರಹಟ್ಟಿ ಫೈಪ್ ಲೈನ್‌ನಲ್ಲಿ ಈ ಘಟನೆ ನಡೆದಿದೆ. ಎರಡುವರೆ ವರ್ಷದ ಕಾರ್ತಿಕ್ ಗುಂಡಿಗೆ ಬಿದ್ದು ಸಾವಿಗೀಡಾದ ಬಾಲಕ. ಕಾಮಗಾರಿಗಾಗಿ ಹೊಂಡ ತೆಗೆದಿದ್ದ ಬಿಡಬ್ಲ್ಯುಎಸ್‌ಎಸ್‌ಬಿ ಅದನ್ನು ಮುಚ್ಚದೆ ಹಾಗೇ ಬಿಟ್ಟಿತ್ತು. ಆಟವಾಡುತ್ತಾ ಹೊಂಡದ ಬಳಿ ಹೋದ ಮಗು ಅದಕ್ಕೆ ಕಾಲು ಜಾರಿ ಬಿದ್ದು ಸಾವನ್ನಪ್ಪಿದೆ.
ಮೃತ ಬಾಲಕನನ್ನು ಉತ್ತರಪ್ರದೇಶ ಮೂಲದ ಹನುಮಾನ್ ದಂಪತಿಯ ಪುತ್ರ ಎಂದು ಗುರುತಿಸಲಾಗಿದೆ. ಕೂಲಿ ಕೆಲಸಕ್ಕಾಗಿ ಇವರ ಕುಟುಂಬ ಬೆಂಗಳೂರಿಗೆ ಬಂದಿತ್ತು. ಬಿಡಬ್ಲ್ಯುಎಸ್‌ಎಸ್‌ಬಿ ಎಂಜಿನಿಯರ್ ಹಾಗು ಕಾಂಟ್ರ್ಯಾಕ್ಟರ್ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ. ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಸಿಲಿಂಡರ್ ಸ್ಫೋಟ, ಅಂಗಡಿ ಧ್ವಂಸ, ಒಬ್ಬನಿಗೆ ಗಾಯ
ಆನೇಕಲ್: ಸ್ಟವ್ ರಿಪೇರಿ ಅಂಗಡಿಯಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ವ್ಯಕ್ತಿಯೊಬ್ಬರಿಗೆ ಗಂಭೀರ ಗಾಯಗಳಾಗಿವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಮತ್ಯಾನಲ್ಲೂರು ಗ್ರಾಮದಲ್ಲಿ ಘಟನೆ ನಡೆದಿದೆ. ಸೂರ್ಯಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸ್ಫೋಟ ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಸಿಲಿಂಡರ್ ಸ್ಫೋಟಕ್ಕೆ ಮುತ್ತಾನಲ್ಲೂರು ಸರ್ಕಲ್‌ನಲ್ಲಿರುವ ಇಡೀ ಅಂಗಡಿಯೇ ಧ್ವಂಸವಾಗಿದೆ. ಜತೆಗೆ ಸುತ್ತಮುತ್ತಲಿನ ಅಂಗಡಿ, ಮನೆಗಳಿಗೂ ಹಾನಿಯಾಗಿದೆ. ಸ್ಥಳಕ್ಕೆ ಸೂರ್ಯನಗರ ಪೋಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಇದನ್ನೂ ಓದಿ: Dancing On The Grave: ಬೆಂಗಳೂರಲ್ಲಿ ನಡೆದ 90ರ ದಶಕದ ಕೊಲೆ; ಸತ್ಯ ಘಟನೆ ಆಧಾರಿತ ಸಿರೀಸ್ ಅಮೆಜಾನ್ ಪ್ರೈಮ್‌ನಲ್ಲಿ