Disha Bharat: ಫೆ.24 ರಂದು ದಿಶಾ ಭಾರತ್‌ ಸಂಸ್ಥೆಯ 20ನೇ ವರ್ಷಾಚರಣೆಯ ʼಸಂಭ್ರಮʼ - Vistara News

ಬೆಂಗಳೂರು

Disha Bharat: ಫೆ.24 ರಂದು ದಿಶಾ ಭಾರತ್‌ ಸಂಸ್ಥೆಯ 20ನೇ ವರ್ಷಾಚರಣೆಯ ʼಸಂಭ್ರಮʼ

Disha Bharat: ಬೆಂಗಳೂರಿನ ಆರ್.ವಿ ಟೀಚರ್ಸ್ ಕಾಲೇಜಿನ ಸಭಾಂಗಣದಲ್ಲಿ ಫೆಬ್ರವರಿ 24ರಂದು ದಿಶಾ ಭಾರತ್ (Disha Bharat) ಸಂಸ್ಥೆಯ 20ನೇ ವಾರ್ಷಿಕೋತ್ಸವ ನಡೆಯಲಿದೆ.

VISTARANEWS.COM

on

Disha Bharat
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮೌಲ್ಯಾಧಾರಿತ ಶಿಕ್ಷಣ ನೀಡಲು ಮತ್ತು ಯುವಕರಲ್ಲಿ ಸಮಗ್ರ ಅಭಿವೃದ್ಧಿ ಉತ್ತೇಜಿಸಲು ಬದ್ಧವಾಗಿರುವ ದಿಶಾ ಭಾರತ್ (Disha Bharat) ಸಂಸ್ಥೆಯ 20ನೇ ವಾರ್ಷಿಕೋತ್ಸವವನ್ನು ಫೆಬ್ರವರಿ 24ರಂದು ʼಸಂಭ್ರಮ’ ಎಂಬ ಭವ್ಯವಾದ ಕಾರ್ಯಕ್ರಮದೊಂದಿಗೆ ಆಚರಿಸುತ್ತಿದ್ದು, ನಗರದ ಆರ್.ವಿ ಟೀಚರ್ಸ್ ಕಾಲೇಜಿನ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ದಿಶಾ ಭಾರತ್ ಸಂಸ್ಥಾಪಕಿ ರೇಖಾ ರಾಮಚಂದ್ರನ್‌ ತಿಳಿಸಿದ್ದಾರೆ.

ನಗರದ ಪ್ರೆಸ್‌ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಎರಡು ದಶಕಗಳಿಂದ, ದಿಶಾ ಭಾರತ್ ವಿದ್ಯಾರ್ಥಿಗಳಲ್ಲಿ ನೈತಿಕ ಮೌಲ್ಯಗಳು, ನಾಯಕತ್ವ ಗುಣಗಳು ಮತ್ತು ಜೀವನ ಕೌಶಲ್ಯ, ಸಮಾಜಕ್ಕೆ ಧನಾತ್ಮಕವಾಗಿ ಕೊಡುಗೆ ನೀಡುವ ಜವಾಬ್ದಾರಿಯುತ ನಾಗರಿಕರನ್ನು ಬೆಳೆಸುವ ಗುರಿಯನ್ನು ಹೊಂದಿದೆ. ಈ ದಿಕ್ಕಿನಲ್ಲಿ ಸಂಸ್ಥೆಯ ಪಯಣ 19 ವರ್ಷಗಳನ್ನು ತುಂಬಿರುವುದು ಒಂದು ಮಹತ್ವದ ಮೈಲಿಗಲ್ಲಾಗಿದೆ. 22ನೇ ವರ್ಷದ ಸಂದರ್ಭದಲ್ಲಿ ಅನೇಕ ಕಾರ್ಯಕ್ರಮಗಳನ್ನು ಸಂಸ್ಥೆಯು ಆಯೋಜಿಸಿದೆ ಎಂದು ಹೇಳಿದರು.

ಇದನ್ನೂ ಓದಿ | Book Release: ಫೆ.29ರಂದು ಎಚ್‌.ಡಿ.ದೇವೇಗೌಡರ ಕುರಿತ ʼಮಣ್ಣಿನ ಮಗʼ ಕೃತಿ ಲೋಕಾರ್ಪಣೆ

ಸುದ್ದಿಗೋಷ್ಠಿಯಲ್ಲಿ ಸಂಯೋಜಕಿಯರಾದ ಲಾವಣ್ಯ, ಸ್ನೇಹಾ ದಾಮ್ಲೆ, ಸಹ ಸಂಯೋಜಕಿ ಸ್ಮೃತಿ ಖರೆ, ಡಿಜಿಟಲ್‌ ಕೋ ಆರ್ಡಿನೇಟರ್‌ ಉಪಸ್ಥಿತರಿದ್ದರು.

ವಾರ್ಷಿಕೋತ್ಸವ ಹಿನ್ನೆಲೆ ವಿವಿಧ ಕಾರ್ಯಕ್ರಮಗಳ ಆಯೋಜನೆ

  • ಮಾಸಿಕ ಉಪನ್ಯಾಸ ಮಾಲಿಕೆ ಭಾರತೀಯ ಇತಿಹಾಸಗಳಿಂದ ನೈತಿಕತೆ ಮತ್ತು ಜೀವನಾದರ್ಶಗಳು
  • ಶಿಕ್ಷಣ ತಜ್ಞರ ವಿಚಾರಘೋಷ್ಠಿ
  • ಮೆಗಾ ಯುವ ಸಮಾವೇಶ
  • ಹ್ಯಾಶ್ ಟ್ಯಾಗ್ spreadinggoodness ಚಾಲೆಂಜ್ – ಆನ್‌ಲೈನ್‌ ಅಭಿಯಾನ
  • ಮೌಲ್ಯ ಶಿಕ್ಷಣದ ಕುರಿತಾಗಿ ರಾಷ್ಟ್ರಮಟ್ಟದ ಶಿಕ್ಷಣ ತಜ್ಞರ ಮತ್ತು ಶಿಕ್ಷಕರ ಸಮ್ಮೇಳನ
  • ಎನ್ ಎಸ್ ಎಸ್ ಸಂಯೋಜಕರ ಸಮಾಗಮ
  • ಸೇವಾ ಕುಂಭ – ಯುವಜನರ ಸಬಲೀಕರಣ ಮತ್ತು ಮೌಲ್ಯಾಧಾರಿತ ಶಿಕ್ಷಣಕ್ಕಾಗಿ ಸೇವೆ ಸಲ್ಲಿಸುತ್ತಿರುವ ಸಂಸ್ಥೆಗಳ ಒಕ್ಕೂಟ
  • ಕಾರ್ಯಕರ್ತರ ಕೌಶಲ್ಯ ಅಭಿವೃದ್ಧಿ ಕಾರ್ಯಾಗಾರಗಳು
  • ಮೇರಾ ಭಾರತ್ ಮಹಾನ್ – ರಾಜ್ಯ ಮಟ್ಟದ ರಸಪ್ರಶ್ನೆ
  • ಶಿಕ್ಷಕರಿಗೆ ಮತ್ತು ಪೋಷಕರಿಗೆ ಕಾರ್ಯಾಗಾರಗಳು
  • ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ, ಸಮರ್ಥ ನಾಯಕತ್ವ, ಭಾರತದ ಜ್ಞಾನಧಾರೆ ಮುಂತಾದ ವಿಷಯಗಳ ಬಗ್ಗೆ ಅನ್‌ಲೈನ್ ಮತ್ತು ಆಫ್ ಲೈನ್ ಕೋರ್ಸ್ ಪ್ರಾರಂಭ
  • ಮೌಲ್ಯಾಧಾರಿತ ಶಿಕ್ಷಣ ಕಲಿಸಲು ಆಸಕ್ತ ತರಬೇತುದಾರರಿಗೆ ತರಬೇತಿ ಕಾರ್ಯಾಗಾರ-Train the trainer
  • ದಿಶಾಭಾರತ್ – ರಾಜ್ಯಾದ್ಯಂತ / ರಾಷ್ಟ್ರಾದ್ಯಂತ ಘಟಕಗಳ ಪ್ರಾರಂಭ
  • ಯುವಜನ – ರಾಷ್ಟ್ರ ನಿರ್ಮಾಣದ ರೂವಾರಿಗಳು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Hassan Pen Drive Case: ಪೆನ್‌ಡ್ರೈವ್‌ನಲ್ಲಿ ಅಶ್ಲೀಲ ವಿಡಿಯೊ ಅಪ್‌ಲೋಡ್‌ ಆಗಿದ್ದು ವಿದೇಶದಲ್ಲಿ! ದುಬೈನಲ್ಲಿ ನಡೆದಿದ್ದೇನು?

Hassan Pen Drive Case: ಅಶ್ಲೀಲ ವಿಡಿಯೊ ಹಂಚಿಕೆ ಹಿಂದೆ ಮಹಾ ಸಂಚು ನಡೆದಿದೆ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರು ಸ್ಫೋಟಕ ಮಾಹಿತಿ ಹೊರಹಾಕಿದ್ದು, ವಿಡಿಯೊಗಳು ಅಪ್‌ಲೋಡ್‌ ಆಗಿದ್ದೆಲ್ಲಿ ಎಂಬ ಬಗ್ಗೆ ತಿಳಿಸಿದ್ದಾರೆ.

VISTARANEWS.COM

on

Hassan Pen drive Case
Koo

ಹುಬ್ಬಳ್ಳಿ: ಹಾಸನ ಅಶ್ಲೀಲ ವಿಡಿಯೊ ಪ್ರಕರಣದಲ್ಲಿ (Hassan Pen Drive Case) ಸಂಸದ ಪ್ರಜ್ವಲ್‌ ರೇವಣ್ಣಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿ ಹಲವೆಡೆ ಪ್ರತಿಭಟನೆಗಳು ನಡೆಯುತ್ತಿವೆ. ಈ ನಡುವೆ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರು ಹೊಸ ಬಾಂಬ್‌ ಸಿಡಿಸಿದ್ದು, ಅಶ್ಲೀಲ ವಿಡಿಯೊ ಹಂಚಿಕೆ ಹಿಂದೆ ಮಹಾ ಸಂಚು ನಡೆದಿದೆ ಎಂದು ಆರೋಪಿಸಿದ್ದಾರೆ. ಇನ್ನು ಪೆನ್‌ಡ್ರೈವ್‌ನಲ್ಲಿ ವಿಡಿಯೊಗಳು ಅಪ್‌ಲೋಡ್‌ ಆಗಿದ್ದೆಲ್ಲಿ ಎಂಬ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿದ ಮಾಜಿ ಸಿಎಂ ಕುಮಾರಸ್ವಾಮಿ ಅವರು, ಈ ಪ್ರಕರಣದಲ್ಲಿ ಏ.21ರಂದು ರಾತ್ರಿ ಪೆನ್‌ಡ್ರೈವ್‌ ಮೂಲಕ ಅಶ್ಲೀಲ ವಿಡಿಯೊಗಳನ್ನು ವಾಟ್ಸ್ಆ್ಯಪ್‌ ಸೇರಿ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಕೋಡ್‌ ಮಾಡಿದ್ದಾರೆ. ಸಿಕ್ಕಸಿಕ್ಕಲ್ಲಿ ವಿಡಿಯೊಗಳನ್ನು ಅಪ್‌ಲೋಡ್‌ ಮಾಡಲು ಸಾಮಾನ್ಯರಿಂದ ಸಾಧ್ಯವಿಲ್ಲ ಎಂದು ಕಿಡಿಕಾರಿದ್ದಾರೆ.

ನನಗೆ ಬಂದಿರುವ ಮಾಹಿತಿ ಪ್ರಕಾರ, ಜಗತ್ತಿನಾದ್ಯಂತ ಈ ವಿಡಿಯೊಗಳಲ್ಲಿ ಹರಿಬಿಡಲು ದುಬೈನಲ್ಲಿ ಪ್ರಯತ್ನಿಸಲಾಗಿದೆ. ಅಲ್ಲಿಂದ ನೇರವಾಗಿ ಇಡೀ ದೇಶ, ವಿದೇಶಗಳಿಗೆ ವಿಡಿಯೊ ಹರಿಬಿಡಲು ಹೋಗಿದ್ದಾರೆ. ಆದರೆ, ಅವರ ಪ್ಲ್ಯಾನ್‌ ವಿಫಲವಾಗಿದೆ. ಹೀಗಾಗಿ ರಾಜ್ಯಕ್ಕೆ ಬಂದು, ಇಲ್ಲಿ ಪೆನ್‌ಡ್ರೈವ್‌, ವಾಟ್ಸ್ಆ್ಯಪ್‌ ಮೂಲಕ ಹಂಚಿಕೊಂಡಿದ್ದಾರೆ. ಫೋಟೊ, ವಿಡಿಯೊಗಳಲ್ಲಿ ಹೆಣ್ಣು ಮಕ್ಕಳ ಫೋಟೊ, ಮುಖಗಳನ್ನು ಬ್ಲರ್‌ ಮಾಡಬಹುದಿತ್ತು. ಇದರಿಂದ ಆ ಕುಟುಂಬಗಳ ಪರಿಸ್ಥಿತಿ ಏನಾಗಬಹುದು. ಇದರಲ್ಲಿ ತಪ್ಪು ಮಾಡಿದ್ದವರ ಹಿನ್ನೆಲೆ ಬಹಿರಂಗಪಡಿಸಿಲ್ಲ. ಆದರೆ, ಮಹಿಳೆಯರ ಗೌರವ ಹಾಳು ಮಾಡಿದ್ದಾರೆ ಎಂದು ಕಾಂಗ್ರೆಸ್‌ ನಾಯಕರ ವಿರುದ್ಧ ಆರೋಪಿಸಿದ್ದಾರೆ.

ಇನ್ನು ಪ್ರಕರಣದ ಬಗ್ಗೆ ವಕೀಲ ದೇವರಾಜೇಗೌಡ ಬಗ್ಗೆ ಸಂದರ್ಶನ ನಡೆದಿದೆ. ಅವರ ಹಿನ್ನೆಲೆ ಏನು ಎಂದು ತಿಳಿಯಬೇಕು. 2019ರ ಚುನಾವಣೆಯಲ್ಲಿ ಪ್ರಜ್ವಲ್‌ ರೇವಣ್ಣ ಸ್ಪರ್ಧೆ ಮಾಡಿದಾಗ ಅಕ್ರಮ ಆಸ್ತಿ ಮಾಹಿತಿ ಮುಚ್ಚಿಟ್ಟಿದ್ದಾರೆ ಎಂದು ದೇವರಾಜೇಗೌಡ ನ್ಯಾಯಾಂಗ ಹೋರಾಟ ಮಾಡುತ್ತಿದ್ದಾರೆ. ಈಗ ಕಾರ್ತಿಕ್‌ ಎಂಬಾತನಿಂದ ಯಾರಿಗೂ ಕ್ಯಾಸೆಟ್‌ ಕೊಟ್ಟಿರಲಿಲ್ಲ ಎಂದು ಹೇಳಿಸಿದ್ದಾರೆ. ಆದರೆ, ಕಾರ್ತೀಕ್‌ ಎಂಬಾತನೇ ತನಗೆ ಕ್ಯಾಸೆಟ್‌ ನೀಡಿದ್ದ ಎಂದು ದೇವರಾಜೇಗೌಡ ಹೇಳಿದ್ದಾರೆ. ಇದರಿಂದಲೇ ಗೊತ್ತಾಗುತ್ತದೆ. ಈ ಪ್ರಕರಣದ ಹಿಂದೆ ಯಾರಿದ್ದಾರೆ ಎಂದು ಕಿಡಿಕಾರಿದ್ದಾರೆ.

ಪ್ರಜ್ವಲ್‌ಗೆ ಕಾಂಗ್ರೆಸ್‌ ಸರ್ಕಾರದಿಂದಲೇ ಖೆಡ್ಡಾ? ಏನಿದು ಹಕೀಕತ್ತು? ಮಾಜಿ ಸಿಎಂ ಗರಂ ಆಗಿದ್ದೇಕೆ?

ಹುಬ್ಬಳ್ಳಿ: ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ರಾಜ್ಯ ಸರ್ಕಾರದಿಂದಲೇ ಖೆಡ್ಡಾ ತೋಡಲಾಗಿದೆ. ಇದರ ಹಿಂದೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಇದ್ದಾರೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಈ ಸಂಬಂಧ ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಚ್.ಡಿ. ಕುಮಾರಸ್ವಾಮಿ, ಈ ಪ್ರಕರಣದಲ್ಲಿ ವಿಡಿಯೊದಲ್ಲಿದ್ದ ಯಾವೊಬ್ಬ ಸಂತ್ರಸ್ತೆ ಸಹ ಸರ್ಕಾರದ ಬಳಿ ಬಂದು ದೂರು ಕೊಟ್ಟಿಲ್ಲ. ಮಹಿಳಾ ಆಯೋಗವು ನೀಡಿದ ವಿಡಿಯೊ ಸಾಕ್ಷ್ಯವನ್ನು ಇಟ್ಟುಕೊಂಡು ಕ್ರಮ ಕೈಗೊಂಡಿದೆ. ಇದಕ್ಕಿಂತ ಮೊದಲು ಮಹಿಳಾ ಆಯೋಗದ ಅಧ್ಯಕ್ಷರು ಸಿಎಂ ಸಿದ್ದರಾಮಯ್ಯ ಅವರಿಗೆ ಏಪ್ರಿಲ್‌ 25ರಂದು ಪತ್ರ ಬರೆಯುತ್ತಾರೆ. ಕೊನೆಗೆ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಎಸ್‌ಐಟಿ ತನಿಖೆಗೆ ಪ್ರಕರಣವನ್ನು ಕೊಡಲಾಗುತ್ತದೆ ಎಂದು ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಏಪ್ರಿಲ್‌ 28ರಂದು ಬೆಂಗಳೂರಿನಲ್ಲಿ ಕುಳಿತುಕೊಂಡು ಮಹಿಳೆಯೊಬ್ಬಳಿಂದ ದೂರನ್ನು ಬರೆಸಿಕೊಂಡು ಟೈಪ್‌ ಮಾಡಿಸಿಕೊಂಡು ಆ ಪ್ರಕರಣವನ್ನು ಹೊಳೆನರಸೀಪುರ ಪೊಲೀಸ್‌ ಠಾಣೆಗೆ ವರ್ಗಾವಣೆ ಮಾಡಿದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪವನ್ನು ಮಾಡಿದರು.

ಆ ಸಂತ್ರಸ್ತೆಯನ್ನು ಯಾರು ಬೆಂಗಳೂರಿಗೆ ಕರೆದುಕೊಂಡು ಬಂದರು? ಇನ್ನು ದೂರಿನ ಅನ್ವಯ ನೋಡುವುದಾದರೆ ಆ ಹೆಣ್ಣು ಮಗಳು 2012-13 ರಲ್ಲಿ ರೇವಣ್ಣ ಮನೆಯಲ್ಲಿ ಕೆಲಸಕ್ಕೆ ಇದ್ದಳು. ಜತೆಗೆ ಆಕೆ ಸಂಬಂಧಿ ಸಹ ಆಗಿದ್ದಳು ಎಂದು ಎಫ್‌ಐಆರ್‌ನಲ್ಲಿ ಹೇಳಲಾಗಿದೆ. ಈ ಘಟನೆ ನಡೆದಿರುವುದು 5 – 6 ವರ್ಷಗಳ ಹಿಂದೆ ನಡೆದಿರುವುದು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಹಾಗಾದರೆ, ಈ ಐದಾರು ವರ್ಷ ಕಂಪ್ಲೇಂಟ್‌ ಕೊಡದೆ ದೂರುದಾರರು ಏನು ಮಾಡುತ್ತಿದ್ದರು? ಈಗ ಲೋಕಸಭಾ ಚುನಾವಣೆಯಲ್ಲಿ ಮತದಾನಕ್ಕೆ 5 ದಿನ ಬಾಕಿ ಇರುವಾಗ ಬಿಡುಗಡೆ ಮಾಡಿದ್ದರ ಹಿಂದಿನ ಉದ್ದೇಶ ಏನು? ಇದರ ಹಿಂದೆ ಯಾವ ಮಹಾನ್‌ ನಾಯಕರು ಇದ್ದಾರೆ? ಎಂದು ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ಹಾಗಂತ ಈ ಪೆನ್‌‌ ಡ್ರೈವ್ ಬಿಡುಗಡೆಯಾದ ಬಳಿಕ ಯಾರೂ ಎಲ್ಲಿಯೂ ಪ್ರತಿಭಟನೆಯನ್ನು ಮಾಡಿಸಲಿಲ್ಲ. ಬದಲಾಗಿ ನಮ್ಮ ಬಿಜೆಪಿ – ಜೆಡಿಎಸ್‌ ಮೈತ್ರಿಗೆ ಹಿನ್ನಡೆ ತರಲು ಕಸರತ್ತು ಮಾಡಿದ್ದಾರೆ. ಚುನಾವಣೆ ಮುಗಿದ ಮೇಲೆ ಅಂದರೆ ಏಪ್ರಿಲ್‌ 28ರ ಬಳಿಕ 2012-13ರ ಪ್ರಕರಣದ ಕಂಪ್ಲೇಂಟ್‌ ಪಡೆದು, ಎಫ್‌ಐಆರ್‌ ಮಾಡಿ, ಬಳಿಕ ಎಸ್‌ಐಟಿಗೆ ಈಗ ವರ್ಗಾವಣೆ ಮಾಡಿದ್ದಾರೆ. ವಿಪರ್ಯಾಸವೆಂದರೆ ಸಾರ್ವಜನಿಕರಿಂದ ಯಾವುದೇ ದೂರು ಬರದೇ ಎಸ್‌ಐಟಿಯನ್ನು ರಚನೆ ಮಾಡಿದ್ದಾಗಿ ಸಿಎಂ ಸಿದ್ದರಾಮಯ್ಯ ಅವರು ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದರು.

ನಮ್ಮ ಕುಟುಂಬದ ತೇಜೋವಧೆಯೇ ಇದರ ಉದ್ದೇಶ!

ಈ ಪ್ರಕರಣವನ್ನು ಗಮನಿಸಿದಾಗ ಸರ್ಕಾರಕ್ಕೆ ನಮ್ಮ ಕುಟುಂಬದ ವರ್ಚಸ್ಸನ್ನು ಸಂಪೂರ್ಣವಾಗಿ ನಾಶ ಮಾಡಬೇಕು ಎಂದಿದೆ ಎಂಬುದು ಗೊತ್ತಾಗುತ್ತದೆ. ಇಲ್ಲಿ ಇವರಿಗೆ ಮಹಿಳೆಯರನ್ನು ರಕ್ಷಣೆ ಮಾಡುವುದು ಬೇಕಾಗಿಲ್ಲ. ಈ ಪ್ರಕರಣವನ್ನು ಬಳಸಿಕೊಂಡು ದೇವೇಗೌಡರ ಹಾಗೂ ಕುಮಾರಸ್ವಾಮಿ ಅವರನ್ನು ತೇಜೋವಧೆ ಮಾಡುವ ಕೆಲಸವನ್ನು ಮಾಡಲಾಗುತ್ತಿದೆ. ಇನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಪ್ರಜ್ವಲ್‌ ರೇವಣ್ಣ ಅವರ ಫೋಟೊವನ್ನು ಸೇರಿಸಿ ಸೋಷಿಯಲ್‌ ಮೀಡಿಯಾದಲ್ಲಿ ಶೇರ್‌ ಮಾಡಲಾಗುತ್ತಿದೆ. ಈ ಪ್ರಕರಣ ಸಂಬಂಧ ಮೋದಿ ಅವರು ಉತ್ತರ ಕೊಡಬೇಕು ಎಂದು ಅಭಿಯಾನ ಮಾಡಲಾಗುತ್ತಿದೆ. ಮೋದಿಗೂ ಈ ಕೇಸ್‌ಗೂ ಏನು ಸಂಬಂಧ ಇದೆ? ಅವರ ಪಾತ್ರ ಇದರಲ್ಲೇನಿದೆ? ಎಂದು ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ರಾಜ್ಯ ಸರ್ಕಾರದ ವಿರುದ್ಧ ಎಚ್‌.ಡಿ. ಕುಮಾರಸ್ವಾಮಿ ವಾಗ್ದಾಳಿ; ಇಲ್ಲಿದೆ ಕಂಪ್ಲೀಟ್‌ ವಿಡಿಯೊ!

ಈ ಪ್ರಕರಣ ಹೊರಗೆ ಬಂದಾಗ ಸರ್ಕಾರದ ಭಾಗವಾಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ನನ್ನ ಮೇಲೆ ನಿರಂತರವಾಗಿ ವಾಗ್ದಾಳಿ ಮಾಡುತ್ತಲೇ ಬಂದಿದ್ದಾರೆ. ನಾನು ಈ ಹಿಂದೆ ಹೇಳಿದ್ದ ಪೆನ್‌ಡ್ರೈವ್‌ ಇದೇನಾ ಎಂದು ವ್ಯಂಗ್ಯವಾಗಿ ಕೇಳಿದ್ದಾರೆ. ಆ ಪೆನ್‌ಡ್ರೈವ್‌ ನನ್ನ ಬಳಿ ಇದೆ. ಅದನ್ನು ಯಾವಾಗ ಬಿಡುಗಡೆ ಮಾಡಬೇಕೋ ಆಗ ಮಾಡುತ್ತೇನೆ. ನಾನು ನನ್ನ ಜೀವನದಲ್ಲಿ ಇಂಥ ಪೆನ್‌ಡ್ರೈವ್‌ಗಳನ್ನು ಮಾಡಿಲ್ಲ. ಇಂಥ ಪೆನ್‌ಡ್ರೈವ್‌ಗಳನ್ನು ಮಾಡುವುದು ಅವರ ಸಂಪ್ರದಾಯ. ಅವರು ಈ ಹಿಂದೆ ಇದನ್ನೇ ಮಾಡಿಕೊಂಡು ಬಂದಿದ್ದಾರೆ. ಕಳೆದ ಒಂದು ವರ್ಷದ ಹಿಂದೆ ಹೆಣ್ಣು ಮಕ್ಕಳನ್ನು ಕೂಡಿ ಹಾಕಿಕೊಂಡು ಕೇಸ್‌ ಮಾಡಿದ್ದರಲ್ಲ ಎಂದು ಡಿ.ಕೆ. ಶಿವಕುಮಾರ್‌ ವಿರುದ್ಧ ಕಿಡಿಕಾರಿದರು.

ರಾಕೇಶ್‌ ಸಿದ್ದರಾಮಯ್ಯ ಸಾವಿನ ವೇಳೆ ಏನಾಗಿತ್ತು ಎಂದೂ ಹೇಳುತ್ತೇನೆ: ಎಚ್‌.ಡಿ. ಕುಮಾರಸ್ವಾಮಿ

ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ಧ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ (HD Kumaraswamy) ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅವರ ಮನೆಯಲ್ಲಿ ನಡೆದಿದ್ದ ವಿಚಾರವನ್ನು ಹೊರಗಡೆ ತರುತ್ತೇನೆ ಎಂದು ರಾಕೇಶ್ ಸಿದ್ದರಾಮಯ್ಯ (Rakesh Siddaramaiah) ಸಾವಿನ ಸಂದರ್ಭದಲ್ಲಿ ನಡೆದ ವಿಚಾರವನ್ನು ಎಚ್‌ಡಿಕೆ ಎಳೆದು ತಂದಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಎಚ್.ಡಿ. ಕುಮಾರಸ್ವಾಮಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬದಲ್ಲಿ ನಡೆದಿದ್ದ ಘಟನೆಗೆ ಸಂಬಂಧಪಟ್ಟಂತೆ ಪ್ರಧಾನಿ ನರೇಂದ್ರ ಮೋದಿ ಅವರು ಯಾವ ರೀತಿ ಸಹಾಯ ಮಾಡಿದ್ದಾರೆ ಎಂಬುದನ್ನು ಮರೆತಿದ್ದೀರಿ. ಎಲ್ಲ ದಾಖಲೆಗಳನ್ನು ನಾವು ಹೊರಗಡೆ ತರುತ್ತೇವೆ. ನಿಮ್ಮ ಕುಟುಂಬದಲ್ಲಿ ನಡೆದ ಘಟನೆ ಏನೇನಾಯಿತು ಎಲ್ಲವೂ ಹೊರಗೆ ಬರಲಿದೆ ಎಂದು ಎಚ್ಚರಿಕೆ ನೀಡಿದರು.

ನಮ್ಮ ಮನೆಯ ಎದುರು ಏಕೆ ಪ್ರತಿಭಟನೆ ಮಾಡುತ್ತೀರಿ. ಇದನ್ನು ಇಷ್ಟಕ್ಕೆ ಬಿಡಲ್ಲ. ಎಲ್ಲ ವಿಷಯವೂ ತನಿಖೆಯಾಗಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ‌ಎಚ್‌.ಡಿ. ಕುಮಾರಸ್ವಾಮಿ ಕೆಂಡಾಮಂಡಲರಾಗಿದ್ದಾರೆ. ಕಾಂಗ್ರೆಸ್‌ನವರು ನಮ್ಮ ಮನೆ ಬಳಿ ಬಂದು ಪ್ರತಿಭಟಿಸುತ್ತಿದ್ದಾರೆ. ಮಹಾನುಭಾವನ ಮನೆ ಮುಂದೆ ಹೋಗಿ ಪ್ರತಿಭಟನೆ ಮಾಡಿ. ಡಿಸಿಎಂ ಡಿ.ಕೆ. ಶಿವಕುಮಾರ್‌ ಮನೆ ಬಳಿ ಹೋಗಿ ಪ್ರತಿಭಟನೆ ಮಾಡಿ. ಎಚ್‌.ಡಿ. ರೇವಣ್ಣ ಕುಟುಂಬದ ಬಗ್ಗೆ ವಿಷಯವನ್ನು ಕೆದಕಿದ್ದಾರೆ. ನಾನು ಚರ್ಚೆ ಮಾಡಲು ಸಿದ್ಧ. ಪಲಾಯಾನ ಮಾಡುವುದಿಲ್ಲ. ಕಾಂಗ್ರೆಸ್‌ ನಾಯಕ ಮಹಾಪರಾಧ ಮಾಡಿದ್ದಾನೆ. ಎಷ್ಟು ತಿಂಗಳ ಹಿಂದೆ ಆ ಮಹಾನ್‌ ನಾಯಕನಿಗೆ ಗೊತ್ತಿತ್ತು. ಪೆನ್‌ಡ್ರೈವ್‌ ಯಾರು ಸರಬರಾಜು ಮಾಡಿದರು ಎಲ್ಲವೂ ಗೊತ್ತಿದೆ. ಈ ಮಹಾನ್‌ ನಾಯಕನ ನಡವಳಿಕೆಯ ಬಗ್ಗೆಯೂ ಚರ್ಚಿಸೋಣ. ನಿನ್ನೆ ಹಾಸನ ಜಿಲ್ಲಾಧಿಕಾರಿ ಹೇಳಿಕೆಯನ್ನು ನಾನು ಗಮನಿಸಿದ್ದೇನೆ. ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ಸರ್ಕಾರದ ಹುನ್ನಾರ ಅಡಗಿದೆ ಎಂದು ಕಿಡಿಕಾರಿದರು.

ಹಲವು ವಿಷಯಗಳಿವೆ, ಎಲ್ಲವನ್ನೂ ಹೇಳುವೆ

ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣದ ಸಂಬಂಧ ಹಲವು ವಿಷಯಗಳಿವೆ. ಅದನ್ನು ನಾನು ಹೇಳುತ್ತೇನೆ. ಮಹಾನ್‌ ನಾಯಕ ಮಹಿಳೆಯರ ಬದುಕನ್ನು ಬೀದಿಗೆ ತಂದಿದ್ದಾನೆ. ಇದರ ಬಗ್ಗೆಯೂ ನಾವು ಚರ್ಚೆ ಮಾಡಬೇಕಿದೆ ಎಂದು ಎಚ್.ಡಿ. ಕುಮಾರಸ್ವಾಮಿ ಗುಡುಗಿದರು.

ಮಾತೃ ಶಕ್ತಿ ಪರ ನಿಲ್ಲುವುದಾಗಿ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಅಮಿತ್‌ ಶಾ ಅವರು ಪ್ರಜ್ವಲ್‌ ರೇವಣ್ಣ ಬಗ್ಗೆ ಚರ್ಚೆ ಮಾಡಿಲ್ಲ. ಪ್ರಜ್ವಲ್‌ ವಿರುದ್ಧದ ಕ್ರಮ ತೆಗೆದುಕೊಳ್ಳುವ ವಿಷಯವನ್ನು ನಮಗೆ ಬಿಟ್ಟಿದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು.

ಇದನ್ನೂ ಓದಿ: Hassan Pen Drive Case: ಪ್ರಜ್ವಲ್ ಪ್ರಕರಣದಲ್ಲಿ ರೇವಣ್ಣ-ಸಿದ್ದರಾಮಯ್ಯ ಒಪ್ಪಂದ; ಪ್ರಲ್ಹಾದ್ ಜೋಶಿ ಹೇಳಿದ್ದೇನು?

ನಿಮ್ಮ ಜತೆ ನಾವಿದ್ದೇವೆ

ತಪ್ಪಾಗಿದ್ದರೆ ಶಿಕ್ಷೆಯಾಗಬೇಕೆಂದು ನಾನೇ ಹೇಳಿದ್ದೇನೆ. ಕಾನೂನು ವ್ಯಾಪ್ತಿಯಲ್ಲಿ ಏನಾಗಬೇಕೆಂದು ಚರ್ಚಿಸುತ್ತೇವೆ. ಈ ಬಗ್ಗೆ ಯಾರೂ ಗಾಬರಿಯಾಗಬೇಡಿ, ಆತಂಕ ಬೇಡ. ಯಾವುದೇ ಮಹಿಳೆಯರಿಗೆ ಅನ್ಯಾಯವಾದರೂ ಧ್ವನಿ ಎತ್ತುತ್ತೇವೆ. ನಿಮ್ಮ ಜತೆ ಎಚ್.ಡಿ. ದೇವೇಗೌಡ ಹಾಗೂ ನಾವು ಇದ್ದೇವೆ ಎಂದು ಎಚ್.ಡಿ. ಕುಮಾರಸ್ವಾಮಿ ಅಭಯ ನೀಡಿದರು.

Continue Reading

ಕ್ರೈಂ

Hassan Pen Drive Case: ಪ್ರಜ್ವಲ್‌ಗೆ ಕಾಂಗ್ರೆಸ್‌ ಸರ್ಕಾರದಿಂದಲೇ ಖೆಡ್ಡಾ? ಏನಿದು ಹಕೀಕತ್ತು? ಮಾಜಿ ಸಿಎಂ ಗರಂ ಆಗಿದ್ದೇಕೆ?

Hassan Pen Drive Case: ಈ ಪ್ರಕರಣದಲ್ಲಿ ವಿಡಿಯೊದಲ್ಲಿದ್ದ ಯಾವೊಬ್ಬ ಸಂತ್ರಸ್ತೆ ಸಹ ಸರ್ಕಾರದ ಬಳಿ ಬಂದು ದೂರು ಕೊಟ್ಟಿಲ್ಲ. ಮಹಿಳಾ ಆಯೋಗವು ನೀಡಿದ ವಿಡಿಯೊ ಸಾಕ್ಷ್ಯವನ್ನು ಇಟ್ಟುಕೊಂಡು ಕ್ರಮ ಕೈಗೊಂಡಿದೆ. ಇದಕ್ಕಿಂತ ಮೊದಲು ಮಹಿಳಾ ಆಯೋಗದ ಅಧ್ಯಕ್ಷರು ಸಿಎಂ ಸಿದ್ದರಾಮಯ್ಯ ಅವರಿಗೆ ಏಪ್ರಿಲ್‌ 25ರಂದು ಪತ್ರ ಬರೆಯುತ್ತಾರೆ. ಕೊನೆಗೆ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಎಸ್‌ಐಟಿ ತನಿಖೆಗೆ ಪ್ರಕರಣವನ್ನು ಕೊಡಲಾಗುತ್ತದೆ ಎಂದು ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಏಪ್ರಿಲ್‌ 28ರಂದು ಬೆಂಗಳೂರಿನಲ್ಲಿ ಕುಳಿತುಕೊಂಡು ಮಹಿಳೆಯೊಬ್ಬಳಿಂದ ದೂರನ್ನು ಬರೆಸಿಕೊಂಡು ಟೈಪ್‌ ಮಾಡಿಸಿಕೊಂಡು ಆ ಪ್ರಕರಣವನ್ನು ಹೊಳೆನರಸೀಪುರ ಪೊಲೀಸ್‌ ಠಾಣೆಗೆ ವರ್ಗಾವಣೆ ಮಾಡಿದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.

VISTARANEWS.COM

on

State government conspiracy behind Prajwal Hassan Pen Drive Case says HD Kumaraswamy
Koo

ಹುಬ್ಬಳ್ಳಿ: ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ರಾಜ್ಯ ಸರ್ಕಾರದಿಂದಲೇ ಖೆಡ್ಡಾ ತೋಡಲಾಗಿದೆ. ಇದರ ಹಿಂದೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಇದ್ದಾರೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಈ ಸಂಬಂಧ ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಚ್.ಡಿ. ಕುಮಾರಸ್ವಾಮಿ, ಈ ಪ್ರಕರಣದಲ್ಲಿ ವಿಡಿಯೊದಲ್ಲಿದ್ದ ಯಾವೊಬ್ಬ ಸಂತ್ರಸ್ತೆ ಸಹ ಸರ್ಕಾರದ ಬಳಿ ಬಂದು ದೂರು ಕೊಟ್ಟಿಲ್ಲ. ಮಹಿಳಾ ಆಯೋಗವು ನೀಡಿದ ವಿಡಿಯೊ ಸಾಕ್ಷ್ಯವನ್ನು ಇಟ್ಟುಕೊಂಡು ಕ್ರಮ ಕೈಗೊಂಡಿದೆ. ಇದಕ್ಕಿಂತ ಮೊದಲು ಮಹಿಳಾ ಆಯೋಗದ ಅಧ್ಯಕ್ಷರು ಸಿಎಂ ಸಿದ್ದರಾಮಯ್ಯ ಅವರಿಗೆ ಏಪ್ರಿಲ್‌ 25ರಂದು ಪತ್ರ ಬರೆಯುತ್ತಾರೆ. ಕೊನೆಗೆ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಎಸ್‌ಐಟಿ ತನಿಖೆಗೆ ಪ್ರಕರಣವನ್ನು ಕೊಡಲಾಗುತ್ತದೆ ಎಂದು ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಏಪ್ರಿಲ್‌ 28ರಂದು ಬೆಂಗಳೂರಿನಲ್ಲಿ ಕುಳಿತುಕೊಂಡು ಮಹಿಳೆಯೊಬ್ಬಳಿಂದ ದೂರನ್ನು ಬರೆಸಿಕೊಂಡು ಟೈಪ್‌ ಮಾಡಿಸಿಕೊಂಡು ಆ ಪ್ರಕರಣವನ್ನು ಹೊಳೆನರಸೀಪುರ ಪೊಲೀಸ್‌ ಠಾಣೆಗೆ ವರ್ಗಾವಣೆ ಮಾಡಿದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪವನ್ನು ಮಾಡಿದರು.

ಆ ಸಂತ್ರಸ್ತೆಯನ್ನು ಯಾರು ಬೆಂಗಳೂರಿಗೆ ಕರೆದುಕೊಂಡು ಬಂದರು? ಇನ್ನು ದೂರಿನ ಅನ್ವಯ ನೋಡುವುದಾದರೆ ಆ ಹೆಣ್ಣು ಮಗಳು 2012-13 ರಲ್ಲಿ ರೇವಣ್ಣ ಮನೆಯಲ್ಲಿ ಕೆಲಸಕ್ಕೆ ಇದ್ದಳು. ಜತೆಗೆ ಆಕೆ ಸಂಬಂಧಿ ಸಹ ಆಗಿದ್ದಳು ಎಂದು ಎಫ್‌ಐಆರ್‌ನಲ್ಲಿ ಹೇಳಲಾಗಿದೆ. ಈ ಘಟನೆ ನಡೆದಿರುವುದು 5 – 6 ವರ್ಷಗಳ ಹಿಂದೆ ನಡೆದಿರುವುದು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಹಾಗಾದರೆ, ಈ ಐದಾರು ವರ್ಷ ಕಂಪ್ಲೇಂಟ್‌ ಕೊಡದೆ ದೂರುದಾರರು ಏನು ಮಾಡುತ್ತಿದ್ದರು? ಈಗ ಲೋಕಸಭಾ ಚುನಾವಣೆಯಲ್ಲಿ ಮತದಾನಕ್ಕೆ 5 ದಿನ ಬಾಕಿ ಇರುವಾಗ ಬಿಡುಗಡೆ ಮಾಡಿದ್ದರ ಹಿಂದಿನ ಉದ್ದೇಶ ಏನು? ಇದರ ಹಿಂದೆ ಯಾವ ಮಹಾನ್‌ ನಾಯಕರು ಇದ್ದಾರೆ? ಎಂದು ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ಹಾಗಂತ ಈ ಪೆನ್‌‌ ಡ್ರೈವ್ ಬಿಡುಗಡೆಯಾದ ಬಳಿಕ ಯಾರೂ ಎಲ್ಲಿಯೂ ಪ್ರತಿಭಟನೆಯನ್ನು ಮಾಡಿಸಲಿಲ್ಲ. ಬದಲಾಗಿ ನಮ್ಮ ಬಿಜೆಪಿ – ಜೆಡಿಎಸ್‌ ಮೈತ್ರಿಗೆ ಹಿನ್ನಡೆ ತರಲು ಕಸರತ್ತು ಮಾಡಿದ್ದಾರೆ. ಚುನಾವಣೆ ಮುಗಿದ ಮೇಲೆ ಅಂದರೆ ಏಪ್ರಿಲ್‌ 28ರ ಬಳಿಕ 2012-13ರ ಪ್ರಕರಣದ ಕಂಪ್ಲೇಂಟ್‌ ಪಡೆದು, ಎಫ್‌ಐಆರ್‌ ಮಾಡಿ, ಬಳಿಕ ಎಸ್‌ಐಟಿಗೆ ಈಗ ವರ್ಗಾವಣೆ ಮಾಡಿದ್ದಾರೆ. ವಿಪರ್ಯಾಸವೆಂದರೆ ಸಾರ್ವಜನಿಕರಿಂದ ಯಾವುದೇ ದೂರು ಬರದೇ ಎಸ್‌ಐಟಿಯನ್ನು ರಚನೆ ಮಾಡಿದ್ದಾಗಿ ಸಿಎಂ ಸಿದ್ದರಾಮಯ್ಯ ಅವರು ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದರು.

ನಮ್ಮ ಕುಟುಂಬದ ತೇಜೋವಧೆಯೇ ಇದರ ಉದ್ದೇಶ!

ಈ ಪ್ರಕರಣವನ್ನು ಗಮನಿಸಿದಾಗ ಸರ್ಕಾರಕ್ಕೆ ನಮ್ಮ ಕುಟುಂಬದ ವರ್ಚಸ್ಸನ್ನು ಸಂಪೂರ್ಣವಾಗಿ ನಾಶ ಮಾಡಬೇಕು ಎಂದಿದೆ ಎಂಬುದು ಗೊತ್ತಾಗುತ್ತದೆ. ಇಲ್ಲಿ ಇವರಿಗೆ ಮಹಿಳೆಯರನ್ನು ರಕ್ಷಣೆ ಮಾಡುವುದು ಬೇಕಾಗಿಲ್ಲ. ಈ ಪ್ರಕರಣವನ್ನು ಬಳಸಿಕೊಂಡು ದೇವೇಗೌಡರ ಹಾಗೂ ಕುಮಾರಸ್ವಾಮಿ ಅವರನ್ನು ತೇಜೋವಧೆ ಮಾಡುವ ಕೆಲಸವನ್ನು ಮಾಡಲಾಗುತ್ತಿದೆ. ಇನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಪ್ರಜ್ವಲ್‌ ರೇವಣ್ಣ ಅವರ ಫೋಟೊವನ್ನು ಸೇರಿಸಿ ಸೋಷಿಯಲ್‌ ಮೀಡಿಯಾದಲ್ಲಿ ಶೇರ್‌ ಮಾಡಲಾಗುತ್ತಿದೆ. ಈ ಪ್ರಕರಣ ಸಂಬಂಧ ಮೋದಿ ಅವರು ಉತ್ತರ ಕೊಡಬೇಕು ಎಂದು ಅಭಿಯಾನ ಮಾಡಲಾಗುತ್ತಿದೆ. ಮೋದಿಗೂ ಈ ಕೇಸ್‌ಗೂ ಏನು ಸಂಬಂಧ ಇದೆ? ಅವರ ಪಾತ್ರ ಇದರಲ್ಲೇನಿದೆ? ಎಂದು ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ರಾಜ್ಯ ಸರ್ಕಾರದ ವಿರುದ್ಧ ಎಚ್‌.ಡಿ. ಕುಮಾರಸ್ವಾಮಿ ವಾಗ್ದಾಳಿ; ಇಲ್ಲಿದೆ ಕಂಪ್ಲೀಟ್‌ ವಿಡಿಯೊ!

ಈ ಪ್ರಕರಣ ಹೊರಗೆ ಬಂದಾಗ ಸರ್ಕಾರದ ಭಾಗವಾಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ನನ್ನ ಮೇಲೆ ನಿರಂತರವಾಗಿ ವಾಗ್ದಾಳಿ ಮಾಡುತ್ತಲೇ ಬಂದಿದ್ದಾರೆ. ನಾನು ಈ ಹಿಂದೆ ಹೇಳಿದ್ದ ಪೆನ್‌ಡ್ರೈವ್‌ ಇದೇನಾ ಎಂದು ವ್ಯಂಗ್ಯವಾಗಿ ಕೇಳಿದ್ದಾರೆ. ಆ ಪೆನ್‌ಡ್ರೈವ್‌ ನನ್ನ ಬಳಿ ಇದೆ. ಅದನ್ನು ಯಾವಾಗ ಬಿಡುಗಡೆ ಮಾಡಬೇಕೋ ಆಗ ಮಾಡುತ್ತೇನೆ. ನಾನು ನನ್ನ ಜೀವನದಲ್ಲಿ ಇಂಥ ಪೆನ್‌ಡ್ರೈವ್‌ಗಳನ್ನು ಮಾಡಿಲ್ಲ. ಇಂಥ ಪೆನ್‌ಡ್ರೈವ್‌ಗಳನ್ನು ಮಾಡುವುದು ಅವರ ಸಂಪ್ರದಾಯ. ಅವರು ಈ ಹಿಂದೆ ಇದನ್ನೇ ಮಾಡಿಕೊಂಡು ಬಂದಿದ್ದಾರೆ. ಕಳೆದ ಒಂದು ವರ್ಷದ ಹಿಂದೆ ಹೆಣ್ಣು ಮಕ್ಕಳನ್ನು ಕೂಡಿ ಹಾಕಿಕೊಂಡು ಕೇಸ್‌ ಮಾಡಿದ್ದರಲ್ಲ ಎಂದು ಡಿ.ಕೆ. ಶಿವಕುಮಾರ್‌ ವಿರುದ್ಧ ಕಿಡಿಕಾರಿದರು.

ರಾಕೇಶ್‌ ಸಿದ್ದರಾಮಯ್ಯ ಸಾವಿನ ವೇಳೆ ಏನಾಗಿತ್ತು ಎಂದೂ ಹೇಳುತ್ತೇನೆ: ಎಚ್‌.ಡಿ. ಕುಮಾರಸ್ವಾಮಿ

ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ಧ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ (HD Kumaraswamy) ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅವರ ಮನೆಯಲ್ಲಿ ನಡೆದಿದ್ದ ವಿಚಾರವನ್ನು ಹೊರಗಡೆ ತರುತ್ತೇನೆ ಎಂದು ರಾಕೇಶ್ ಸಿದ್ದರಾಮಯ್ಯ (Rakesh Siddaramaiah) ಸಾವಿನ ಸಂದರ್ಭದಲ್ಲಿ ನಡೆದ ವಿಚಾರವನ್ನು ಎಚ್‌ಡಿಕೆ ಎಳೆದು ತಂದಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಎಚ್.ಡಿ. ಕುಮಾರಸ್ವಾಮಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬದಲ್ಲಿ ನಡೆದಿದ್ದ ಘಟನೆಗೆ ಸಂಬಂಧಪಟ್ಟಂತೆ ಪ್ರಧಾನಿ ನರೇಂದ್ರ ಮೋದಿ ಅವರು ಯಾವ ರೀತಿ ಸಹಾಯ ಮಾಡಿದ್ದಾರೆ ಎಂಬುದನ್ನು ಮರೆತಿದ್ದೀರಿ. ಎಲ್ಲ ದಾಖಲೆಗಳನ್ನು ನಾವು ಹೊರಗಡೆ ತರುತ್ತೇವೆ. ನಿಮ್ಮ ಕುಟುಂಬದಲ್ಲಿ ನಡೆದ ಘಟನೆ ಏನೇನಾಯಿತು ಎಲ್ಲವೂ ಹೊರಗೆ ಬರಲಿದೆ ಎಂದು ಎಚ್ಚರಿಕೆ ನೀಡಿದರು.

ನಮ್ಮ ಮನೆಯ ಎದುರು ಏಕೆ ಪ್ರತಿಭಟನೆ ಮಾಡುತ್ತೀರಿ. ಇದನ್ನು ಇಷ್ಟಕ್ಕೆ ಬಿಡಲ್ಲ. ಎಲ್ಲ ವಿಷಯವೂ ತನಿಖೆಯಾಗಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ‌ಎಚ್‌.ಡಿ. ಕುಮಾರಸ್ವಾಮಿ ಕೆಂಡಾಮಂಡಲರಾಗಿದ್ದಾರೆ. ಕಾಂಗ್ರೆಸ್‌ನವರು ನಮ್ಮ ಮನೆ ಬಳಿ ಬಂದು ಪ್ರತಿಭಟಿಸುತ್ತಿದ್ದಾರೆ. ಮಹಾನುಭಾವನ ಮನೆ ಮುಂದೆ ಹೋಗಿ ಪ್ರತಿಭಟನೆ ಮಾಡಿ. ಡಿಸಿಎಂ ಡಿ.ಕೆ. ಶಿವಕುಮಾರ್‌ ಮನೆ ಬಳಿ ಹೋಗಿ ಪ್ರತಿಭಟನೆ ಮಾಡಿ. ಎಚ್‌.ಡಿ. ರೇವಣ್ಣ ಕುಟುಂಬದ ಬಗ್ಗೆ ವಿಷಯವನ್ನು ಕೆದಕಿದ್ದಾರೆ. ನಾನು ಚರ್ಚೆ ಮಾಡಲು ಸಿದ್ಧ. ಪಲಾಯಾನ ಮಾಡುವುದಿಲ್ಲ. ಕಾಂಗ್ರೆಸ್‌ ನಾಯಕ ಮಹಾಪರಾಧ ಮಾಡಿದ್ದಾನೆ. ಎಷ್ಟು ತಿಂಗಳ ಹಿಂದೆ ಆ ಮಹಾನ್‌ ನಾಯಕನಿಗೆ ಗೊತ್ತಿತ್ತು. ಪೆನ್‌ಡ್ರೈವ್‌ ಯಾರು ಸರಬರಾಜು ಮಾಡಿದರು ಎಲ್ಲವೂ ಗೊತ್ತಿದೆ. ಈ ಮಹಾನ್‌ ನಾಯಕನ ನಡವಳಿಕೆಯ ಬಗ್ಗೆಯೂ ಚರ್ಚಿಸೋಣ. ನಿನ್ನೆ ಹಾಸನ ಜಿಲ್ಲಾಧಿಕಾರಿ ಹೇಳಿಕೆಯನ್ನು ನಾನು ಗಮನಿಸಿದ್ದೇನೆ. ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ಸರ್ಕಾರದ ಹುನ್ನಾರ ಅಡಗಿದೆ ಎಂದು ಕಿಡಿಕಾರಿದರು.

ಹಲವು ವಿಷಯಗಳಿವೆ, ಎಲ್ಲವನ್ನೂ ಹೇಳುವೆ

ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣದ ಸಂಬಂಧ ಹಲವು ವಿಷಯಗಳಿವೆ. ಅದನ್ನು ನಾನು ಹೇಳುತ್ತೇನೆ. ಮಹಾನ್‌ ನಾಯಕ ಮಹಿಳೆಯರ ಬದುಕನ್ನು ಬೀದಿಗೆ ತಂದಿದ್ದಾನೆ. ಇದರ ಬಗ್ಗೆಯೂ ನಾವು ಚರ್ಚೆ ಮಾಡಬೇಕಿದೆ ಎಂದು ಎಚ್.ಡಿ. ಕುಮಾರಸ್ವಾಮಿ ಗುಡುಗಿದರು.

ಮಾತೃ ಶಕ್ತಿ ಪರ ನಿಲ್ಲುವುದಾಗಿ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಅಮಿತ್‌ ಶಾ ಅವರು ಪ್ರಜ್ವಲ್‌ ರೇವಣ್ಣ ಬಗ್ಗೆ ಚರ್ಚೆ ಮಾಡಿಲ್ಲ. ಪ್ರಜ್ವಲ್‌ ವಿರುದ್ಧದ ಕ್ರಮ ತೆಗೆದುಕೊಳ್ಳುವ ವಿಷಯವನ್ನು ನಮಗೆ ಬಿಟ್ಟಿದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು.

ಇದನ್ನೂ ಓದಿ: Hassan Pen Drive Case: ಪ್ರಜ್ವಲ್ ಪ್ರಕರಣದಲ್ಲಿ ರೇವಣ್ಣ-ಸಿದ್ದರಾಮಯ್ಯ ಒಪ್ಪಂದ; ಪ್ರಲ್ಹಾದ್ ಜೋಶಿ ಹೇಳಿದ್ದೇನು?

ನಿಮ್ಮ ಜತೆ ನಾವಿದ್ದೇವೆ

ತಪ್ಪಾಗಿದ್ದರೆ ಶಿಕ್ಷೆಯಾಗಬೇಕೆಂದು ನಾನೇ ಹೇಳಿದ್ದೇನೆ. ಕಾನೂನು ವ್ಯಾಪ್ತಿಯಲ್ಲಿ ಏನಾಗಬೇಕೆಂದು ಚರ್ಚಿಸುತ್ತೇವೆ. ಈ ಬಗ್ಗೆ ಯಾರೂ ಗಾಬರಿಯಾಗಬೇಡಿ, ಆತಂಕ ಬೇಡ. ಯಾವುದೇ ಮಹಿಳೆಯರಿಗೆ ಅನ್ಯಾಯವಾದರೂ ಧ್ವನಿ ಎತ್ತುತ್ತೇವೆ. ನಿಮ್ಮ ಜತೆ ಎಚ್.ಡಿ. ದೇವೇಗೌಡ ಹಾಗೂ ನಾವು ಇದ್ದೇವೆ ಎಂದು ಎಚ್.ಡಿ. ಕುಮಾರಸ್ವಾಮಿ ಅಭಯ ನೀಡಿದರು.

Continue Reading

ಕರ್ನಾಟಕ

Karnataka Weather: ರಾಜ್ಯದಲ್ಲಿ ಕಳೆದ 7 ವರ್ಷಗಳಲ್ಲೇ ಗರಿಷ್ಠ ತಾಪಮಾನ ದಾಖಲು!

Karnataka Weather: ರಾಜ್ಯದಲ್ಲಿ ಮೇ 5ರವರೆಗೆ ರಣ ಬಿಸಿಲು ಮುಂದುವರಿಯಲಿದ್ದು, ಎಲ್ಲ ಜಿಲ್ಲೆಗಳಲ್ಲೂ ಒಣ ಹವೆ ಇರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

VISTARANEWS.COM

on

Karnataka Weather
Koo

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಬೇಸಿಗೆಯಲ್ಲಿ ದಿನೇದಿನೆ ತಾಪಮಾನ (Temperature) ಏರಿಕೆಯಾಗುತ್ತಿದೆ. ಎಲ್ಲ ಜಿಲ್ಲೆಗಳಲ್ಲಿ 40 ಡಿಗ್ರಿ ಸೆಲ್ಸಿಯಸ್‌ಗೂ ಹೆಚ್ಚು ತಾಪಮಾನ (Karnataka Weather) ವರದಿಯಾಗುತ್ತಿದ್ದು, ರಾಯಚೂರಿನಲ್ಲಿ ಸೋಮವಾರ, ಕಳೆದ 7 ವರ್ಷಗಳಲ್ಲೇ ಗರಿಷ್ಠ ತಾಪಮಾನ 45.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿರುವುದು ಕಂಡುಬಂದಿದೆ.

ಏ.29ರ ಬೆಳಗ್ಗೆ 8.30 ರಿಂದ ಏ.30 ಬೆಳಗ್ಗೆ 8.30ರವರೆಗೆ ರಾಜ್ಯದ ಜಿಲ್ಲಾವಾರು ಗರಿಷ್ಠ ತಾಪಮಾನ ನೋಡುವುದಾದರೆ, ರಾಯಚೂರಿನಲ್ಲಿ 45.6 ಡಿಗ್ರಿ ಸೆ. ದಾಖಲಾಗಿದೆ. ಕೊಡಗಿನಲ್ಲಿ 38.6 ಡಿಗ್ರಿ ಸೆ. ತಾಪಮಾನ ದಾಖಲಾಗಿದ್ದು, ಇದು ಎಲ್ಲ ಜಿಲ್ಲೆಗಳಿಗಿಂತ ಕಡಿಮೆಯಾಗಿದೆ. ಇನ್ನುಳಿದಂತೆ ಬೆಂಗಳೂರು ಗ್ರಾಮಾಂತರ 39.8 ಡಿಗ್ರಿ ಸೆ. ಹೊರತುಪಡಿಸಿ, ಎಲ್ಲ ಜಿಲ್ಲೆಗಳಲ್ಲಿ ತಾಪಮಾನ 40 ಡಿಗ್ರಿ ಸೆ. ಮೀರಿದೆ.

ನಾಳೆ ಚಿಕ್ಕಮಗಳೂರು, ಕೊಡಗು, ಮೈಸೂರು ಸೇರಿ ವಿವಿಧೆಡೆ ಮಳೆ

ಇನ್ನು ಮೇ 1ರಂದು ರಾಜ್ಯದ ಚಿಕ್ಕಮಗಳೂರು, ಕೊಡಗು, ಮೈಸೂರು, ಮಂಡ್ಯ, ರಾಮನಗರ ಮತ್ತು ತುಮಕೂರು ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗುವ (Karnataka Weather) ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ರಾಜ್ಯದಾದ್ಯಂತ ಮೇ 5ರವರೆಗೆ ಒಣ ಹವೆ ಇರುವ ಸಾಧ್ಯತೆ ಇದೆ. ಮೇ 6ರಂದು ಕೊಡಗು, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಶಿವಮೊಗ್ಗ, ತುಮಕೂರು, ವಿಜಯನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

ಮೇ 7ರಂದು ಕೂಡ ಚಿಕ್ಕಮಗಳೂರು, ಹಾಸನ, ಕೊಡಗು, ಬೆಂಗಳೂರು ಗ್ರಾಮಾಂತರ, ರಾಮನಗರ ಮತ್ತು ತುಮಕೂರು ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಮುಂದಿನ ನಾಲ್ಕು ದಿನ ಶಾಖದ ಅಲೆಯ ಎಚ್ಚರಿಕೆ

ಮೇ 1 ರಿಂದ ಮೇ 4ರವರೆಗೆ ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಧಾರವಾಡ, ಹಾವೇರಿ, ಕೊಪ್ಪಳ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಮಂಡ್ಯ, ಬಳ್ಳಾರಿ, ಹಾಸನ (ಬಯಲು ಪ್ರದೇಶ), ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಚಿಕ್ಕಮಗಳೂರು (ಬಯಲು ಪ್ರದೇಶ) ಮತ್ತು ಚಿಕ್ಕ ಬಳ್ಳಾಪುರ ಜಿಲ್ಲೆಗಳು ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ.

ತಾಪಮಾನದ ಮುನ್ಸೂಚನೆ

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಮೇ 4 ರವರೆಗೆ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳವರೆಗೆ ಬಾಗಲಕೋಟೆ, ಕಲಬುರಗಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಬೆಚ್ಚನೆಯ ರಾತ್ರಿಯ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಇನ್ನು ಮುಂದಿನ 5 ದಿನಗಳವರೆಗೆ ರಾಜ್ಯದಾದ್ಯಂತ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಇಲ್ಲ.

ಇದನ್ನೂ ಓದಿ | Karnataka Weather: ರಾಯಚೂರಿನಲ್ಲಿ ರಾಜ್ಯದಲ್ಲೇ ಗರಿಷ್ಠ ಉಷ್ಣಾಂಶ ದಾಖಲು; ಇನ್ನೂ 4 ದಿನ ಶಾಖದ ಅಲೆ ಎಚ್ಚರಿಕೆ

ಇನ್ನು ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 38°C ಮತ್ತು 24°C ಇರುವ ಸಾಧ್ಯತೆ ಇದೆ.

Continue Reading

ಕರ್ನಾಟಕ

Fortis Hospital: ಪಾರ್ಕಿನ್ಸನ್‌ ಕಾಯಿಲೆ ಚಿಕಿತ್ಸೆಗೆ ಪ್ರತ್ಯೇಕ ಕ್ಲಿನಿಕ್‌ ಆರಂಭಿಸಿದ ಫೋರ್ಟಿಸ್‌ ಆಸ್ಪತ್ರೆ

Fortis Hospital: ಪಾರ್ಕಿನ್ಸನ್‌ನಿಂದ ಉಂಟಾಗುವ ನರಮಂಡಲದ ಸಮಸ್ಯೆಗಳಿಗೆ ಸೂಕ್ತ ಚಿಕಿತ್ಸೆ ಹಾಗೂ ಥೆರಪಿಗಾಗಿ ಬೆಂಗಳೂರಿನ ಬನ್ನೇರುಘಟ್ಟ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಪಾರ್ಕಿನ್ಸನ್‌ ಮತ್ತು ಡೀಪ್‌ ಬ್ರೇನ್‌ ಸ್ಟಿಮುಲೇಷನ್‌ (ಡಿಬಿಎಸ್) ಎನ್ನುವ ಪ್ರತ್ಯೇಕ ಕ್ಲಿನಿಕ್‌ನ ಉದ್ಘಾಟನೆ ನಡೆದಿದೆ. ಈ ಕುರಿತ ವರದಿ ಇಲ್ಲಿದೆ.

VISTARANEWS.COM

on

Fortis Hospital Launches Deep Brain Stimulation DBS Clinic to Treat Parkinson Disease
Koo

ಬೆಂಗಳೂರು: ಪಾರ್ಕಿನ್ಸನ್‌ನಿಂದ ಉಂಟಾಗುವ ನರಮಂಡಲದ ಸಮಸ್ಯೆಗಳಿಗೆ ಸೂಕ್ತ ಚಿಕಿತ್ಸೆ ಹಾಗೂ ಥೆರಪಿಗಾಗಿ ಬನ್ನೇರುಘಟ್ಟ ಫೋರ್ಟಿಸ್‌ ಆಸ್ಪತ್ರೆಯಲ್ಲಿ (Fortis Hospital) ಪಾರ್ಕಿನ್ಸನ್‌ ಮತ್ತು ಡೀಪ್‌ ಬ್ರೇನ್‌ ಸ್ಟಿಮುಲೇಷನ್‌ (ಡಿಬಿಎಸ್) ಎನ್ನುವ ಪ್ರತ್ಯೇಕ ಕ್ಲಿನಿಕ್‌ ಪ್ರಾರಂಭಿಸಲಾಗಿದೆ.

ಫೋರ್ಟಿಸ್‌ ಆಸ್ಪತ್ರೆಯ ನರಶಸ್ತ್ರಚಿಕಿತ್ಸಾ ವಿಭಾಗದ ನಿರ್ದೇಶಕ ಡಾ. ರಾಜಕುಮಾರ್ ದೇಶಪಾಂಡೆ, ನೂತನ ಕ್ಲಿನಿಕ್‌ ಅನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಇಂದು ಸಾಕಷ್ಟು ಜನರು ವಯಸ್ಸಾದ ಬಳಿಕ ಪಾರ್ಕಿನ್ಸನ್‌ ಕಾಯಿಲೆಗೆ ತುತ್ತಾಗುತ್ತಿದ್ದಾರೆ, ಇದಕ್ಕೆ ಸೂಕ್ತ ಚಿಕಿತ್ಸೆಯನ್ನು ಫೋರ್ಟಿಸ್‌ ಆಸ್ಪತ್ರೆ ಈಗಾಗಲೇ ಪರಿಚಯಿಸಿದೆ, ಆದರೆ ಕೆಲವರಿಗೆ ಚಿಕಿತ್ಸೆಗಿಂತ ಹೆಚ್ಚಾಗಿ ಕೆಲವು ದೈಹಿಕ ಅಭ್ಯಾಸಗಳ ಮೂಲಕವೂ ಪಾರ್ಕಿನ್ಸನ್‌ನ ಲಕ್ಷಣಗಳಾದ ಕೈ-ಕಾಲು ನಡುಕ ಇತರೆ ದೈಹಿಕ ಆರೋಗ್ಯವನ್ನು ಸುಧಾರಿಸಲು ಸಾಧ್ಯವಾಗಲಿದೆ. ಇದಕ್ಕಾಗಿಯೇ ಪ್ರತ್ಯೇಕ ಕ್ಲಿನಿಕ್‌ ತೆರೆದಿದ್ದೇವೆ. ಇದರ ಜತೆಗೆ, ಡೀಪ್‌ ಬ್ರೇನ್ ಸ್ಟಿಮ್ಯುಲೇಶನ್ (ಡಿಬಿಎಸ್‌) ಚಿಕಿತ್ಸೆಯೂ ದೊರೆಯಲಿದೆ. ಡೀಪ್‌ ಬ್ರೇನ್ ಸ್ಟಿಮ್ಯುಲೇಶನ್ ಪಾರ್ಕಿನ್ಸನ್‌ ಸಮಸ್ಯೆಗೆ ಚಿಕಿತ್ಸೆಯ ಭಾಗ ಎಂದು ವಿವರಿಸಿದರು.

ಇದನ್ನೂ ಓದಿ: Sharavathi Project: ಶರಾವತಿ ಜಲವಿದ್ಯುತ್ ಯೋಜನೆ; ಟೆಂಡರ್‌ ಪ್ರಶ್ನಿಸಿ ಎಲ್ & ಟಿ ಸಲ್ಲಿಸಿದ್ದ ಅರ್ಜಿ ಸುಪ್ರೀಂನಲ್ಲಿ ವಜಾ

ಫೋರ್ಟಿಸ್ ಆಸ್ಪತ್ರೆಯ ನರಶಸ್ತ್ರಚಿಕಿತ್ಸಾ ವಿಭಾಗದ ಹೆಚ್ಚುವರಿ ನಿರ್ದೇಶಕ ಡಾ. ರಘುರಾಮ್ ಜಿ. ಮಾತನಾಡಿ, ಪಾರ್ಕಿನ್ಸನ್‌ ಕಾಯಿಲೆಯಿಂದ ಕೈ-ಕಾಲುಗಳಲ್ಲಿ ನಡುಕ, ತಲೆಯಲ್ಲಿ ನಡುಕ, ಸ್ನಾಯುಗಳ ಬಿಗಿತ, ಚಲನೆಯ ನಿಧಾನತೆ, ಖಿನ್ನತೆ ಮತ್ತು ಭಾವನಾತ್ಮಕ ಬದಲಾವಣೆಗಳು ಸೇರಿದಂತೆ ಸಾಕಷ್ಟು ಸಮಸ್ಯೆಗಳು ಕಂಡು ಬರುತ್ತವೆ. ಇಂತಹ ಕಾಯಿಲೆಗೆ ಕೆಲವೊಮ್ಮೆ ಚಿಕಿತ್ಸೆಗಿಂತ ಥೆರಪಿ ಮುಖ್ಯವಾಗಲಿದೆ.

ಹೀಗಾಗಿ ಡೀಪ್‌ ಬ್ರೇನ್‌ ಸ್ಟಿಮುಲೇಷನ್‌ ಥೆರಪಿಗೆ ಇಲ್ಲಿ ಅವಕಾಶ ನೀಡಲಾಗಿದೆ. ವಯಸ್ಸಾದವರು ಈ ರೀತಿಯ ಕಾಯಿಲೆ ಹೊಂದಿದ್ದರೆ, ಈ ಥೆರಪಿ ತೆಗೆದುಕೊಳ್ಳಬಹುದು. ಈ ಕ್ಲಿನಿಕ್‌ ವಾರದ ದಿನಗಳಲ್ಲಿ ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 3:00 ರವರೆಗೆ ತೆರೆದಿರಲಿದೆ. ಇಂದು ಉದ್ಘಾಟನೆಗೊಂಡ ಕ್ಲಿನಿಕ್‌ನಲ್ಲಿ ಮಾನಸಿಕ ಆರೋಗ್ಯ ತಜ್ಞರು ಮತ್ತು ಯೋಗ ತರಬೇತುದಾರರು, ಮಾನಸಿಕ ಯೋಗಕ್ಷೇಮ ಮತ್ತು ಯೋಗ ಅಭ್ಯಾಸಗಳ ಕುರಿತು ಸೆಷನ್‌ಗಳನ್ನು ನಡೆಯಲಿದೆ ಎಂದರು.

ಇದನ್ನೂ ಓದಿ: Multivitamin Pill: ಮಲ್ಟಿವಿಟಮಿನ್‌ ಮಾತ್ರೆಗಳ ಮೊರೆ ಹೋಗದೆ, ನೈಸರ್ಗಿಕವಾಗಿ ಪೋಷಣೆ ಪಡೆಯುವುದು ಹೇಗೆ?

ಕಾರ್ಯಕ್ರಮದಲ್ಲಿ ಫೋರ್ಟಿಸ್ ಆಸ್ಪತ್ರೆಯ ನರವಿಜ್ಞಾನದ ಹೆಚ್ಚುವರಿ ನಿರ್ದೇಶಕ ಡಾ.ಗುರುಪ್ರಸಾದ್ ಹೊಸೂರ್ಕರ್, ಫೋರ್ಟಿಸ್ ಹಾಸ್ಪಿಟಲ್ಸ್ ಬೆಂಗಳೂರಿನ ಬಿಸಿನೆಸ್ ಹೆಡ್ ಅಕ್ಷಯ್ ಒಲೆಟಿ ಉಪಸ್ಥಿತರಿದ್ದರು.

Continue Reading
Advertisement
Hassan Pen drive Case
ಪ್ರಮುಖ ಸುದ್ದಿ4 mins ago

Hassan Pen Drive Case: ಪೆನ್‌ಡ್ರೈವ್‌ನಲ್ಲಿ ಅಶ್ಲೀಲ ವಿಡಿಯೊ ಅಪ್‌ಲೋಡ್‌ ಆಗಿದ್ದು ವಿದೇಶದಲ್ಲಿ! ದುಬೈನಲ್ಲಿ ನಡೆದಿದ್ದೇನು?

IPL 2024
ಪ್ರಮುಖ ಸುದ್ದಿ16 mins ago

IPL 2024 : ಅತಿ ವೇಗದ ಬೌಲರ್​ ಮಾಯಾಂಕ್​ ಯಾದವ್​ಗೆ ಮತ್ತೆ ಗಾಯ?

labour Day
ಪ್ರಮುಖ ಸುದ್ದಿ1 hour ago

Labour Day : ಮೇ 1ರಂದೇ ಕಾರ್ಮಿಕ ದಿನ ಆಚರಿಸುವುದು ಯಾಕೆ? ರಜೆ ಕೊಡಲು ಶುರು ಮಾಡಿದ್ದು ಯಾವಾಗ?

Parliament Flashback
Lok Sabha Election 20241 hour ago

Parliament Flashback: 1996ರಲ್ಲಿ ಬಿಜೆಪಿ ಮೊದಲ ಬಾರಿ ಕೇಂದ್ರದಲ್ಲಿ ಸರ್ಕಾರ ನಡೆಸಿದ್ದು ಹೇಗೆ?

Viral Video
ವೈರಲ್ ನ್ಯೂಸ್2 hours ago

Viral News: ಸೆಕೆಯಿಂದ ಬಳಲುತ್ತಿರುವ ವಿದ್ಯಾರ್ಥಿಗಳನ್ನು ಕಾಪಾಡಲು ಶಿಕ್ಷಕರ ಸೂಪರ್‌ ಐಡಿಯಾ; ಇಲ್ಲಿದೆ ವಿಡಿಯೊ

Prime Minister Narendra Modi wrote a letter to former CM Basavaraj Bommai
ಕರ್ನಾಟಕ2 hours ago

Lok Sabha Election 2024: ಬಸವರಾಜ ಬೊಮ್ಮಾಯಿಗೆ ಪತ್ರ ಬರೆದ ಪ್ರಧಾನಿ ಮೋದಿ; ಕೊಟ್ಟ ಟಾಸ್ಕ್‌ ಏನು?

Labour Day 2024
ದೇಶ2 hours ago

Labour Day 2024: ಕಾರ್ಮಿಕರಿಗಾಗಿ ಕೇಂದ್ರ ಸರ್ಕಾರ ರೂಪಿಸಿರುವ ಪ್ರಮುಖ ಯೋಜನೆಗಳಿವು

State government conspiracy behind Prajwal Hassan Pen Drive Case says HD Kumaraswamy
ಕ್ರೈಂ2 hours ago

Hassan Pen Drive Case: ಪ್ರಜ್ವಲ್‌ಗೆ ಕಾಂಗ್ರೆಸ್‌ ಸರ್ಕಾರದಿಂದಲೇ ಖೆಡ್ಡಾ? ಏನಿದು ಹಕೀಕತ್ತು? ಮಾಜಿ ಸಿಎಂ ಗರಂ ಆಗಿದ್ದೇಕೆ?

Karnataka Weather
ಕರ್ನಾಟಕ2 hours ago

Karnataka Weather: ರಾಜ್ಯದಲ್ಲಿ ಕಳೆದ 7 ವರ್ಷಗಳಲ್ಲೇ ಗರಿಷ್ಠ ತಾಪಮಾನ ದಾಖಲು!

IPL 2024
ಪ್ರಮುಖ ಸುದ್ದಿ2 hours ago

IPL 2024 : ಗುಜರಾತ್​ ಟೀಮ್​ನಲ್ಲಿ ಬುಮ್ರಾ 2.0; ಕನ್ನಡಿಗನ ಬೌಲಿಂಗ್​ ಶೈಲಿ ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ18 hours ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20241 day ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20241 day ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20242 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20242 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20242 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20242 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest3 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌