Site icon Vistara News

2nd PUC Result : ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟ; ಫಲಿತಾಂಶವನ್ನು ಮೊಬೈಲ್‌ನಲ್ಲೇ ನೋಡಿ

2nd Puc Result

ಬೆಂಗಳೂರು: 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಮೇ 21ರ ಮಧ್ಯಾಹ್ನ 3ಗಂಟೆಗೆ ಪ್ರಕಟಗೊಂಡಿದೆ. ರಾಜ್ಯಾದ್ಯಂತ ಒಟ್ಟು 301 ಪರೀಕ್ಷಾ ಕೇಂದ್ರಗಳಲ್ಲಿ ಏಪ್ರಿಲ್ 29 ರಿಂದ ಮೇ 16ರವರೆಗೆ 2ನೇ ಪರೀಕ್ಷೆ ನಡೆದಿತ್ತು. 7,875 ಮೌಲ್ಯಮಾಪಕರಿಂದ 28 ಕೇಂದ್ರಗಳಲ್ಲಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆದಿತ್ತು. ಪರೀಕ್ಷೆ 2ಕ್ಕೆ 1,49,824 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಅದರಲ್ಲಿ 1,48,942 ವಿದ್ಯಾರ್ಥಿಗಳು ಹಾಜರಾಗಿದ್ದು, 52,505 ವಿದ್ಯಾರ್ಥಿಗಳು ಪಾಸಾಗಿದ್ದಾರೆ. 35.25ರಷ್ಟು ಶೇಕಡವಾರು ಫಲಿತಾಂಶ ಬಂದಿದೆ. 26,496 ಬಾಲಕರು, 26,009 ಬಾಲಕಿಯರು ಉತ್ತೀರ್ಣರಾಗಿದ್ದಾರೆ. ಇನ್ನೂ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಲಾಖೆಯ ವೆಬ್‌ಸೈಟ್‌ karresults.nic.in ನಲ್ಲಿ ನೋಡಬಹುದಾಗಿದೆ.

ಇನ್ನೂ ಪರೀಕ್ಷೆ 1 ಮತ್ತು ಪರೀಕ್ಷೆ 2ರಲ್ಲಿ ವಿಷಯವಾರು ಗಳಿಸಿದ ಅತಿಹೆಚ್ಚು ಅಂಕಗಳನ್ನು ಪರಿಗಣಿಸಿ ಅಂತಿಮ ಫಲಿತಾಂಶವನ್ನು ಪ್ರಕಟಿಸಲಾಗುತ್ತಿದೆ. ಪಿಯುಸಿ ಪರೀಕ್ಷೆಗಳನ್ನು ಎದುರಿಸಿದ ಎಲ್ಲಾ ವಿದ್ಯಾರ್ಥಿಗಳು ರೋಲ್ ನಂಬರ್ ಆಧರಿಸಿ ತಮ್ಮ ಫಲಿತಾಂಶಗಳನ್ನು ಈ ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದು. ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ವಿಷಯ ಸಂಯೋಜನೆ/ಸ್ಟ್ರೀಮ್ ಅನ್ನು ಬಳಸಿಕೊಂಡು ಅದನ್ನು ಪರಿಶೀಲಿಸಬಹುದು. ವಿದ್ಯಾರ್ಥಿಗಳು ಈ ಕೆಳಗಿನ ಹಂತಗಳನ್ನು ಅನುಸರಿಸುವ ಮೂಲಕ ಫಲಿತಾಂಶವನ್ನು ಪರಿಶೀಲಿಸಬಹುದು..

ಹಂತಗಳು ಏನು?

-karresults.nic.in ನಲ್ಲಿ ಕರ್ನಾಟಕ ಫಲಿತಾಂಶ ಪೋರ್ಟಲ್‌ಗೆ ಭೇಟಿ ನೀಡಿ.
-ಮುಖಪುಟದಲ್ಲಿ ನೀಡಲಾದ ಪಿಯುಸಿ 2 ಪರೀಕ್ಷೆಯ ಫಲಿತಾಂಶದ ಲಿಂಕ್ ಅನ್ನು ತೆರೆಯಿರಿ.
-ಲಾಗಿನ್ ಪುಟದಲ್ಲಿ, ನಿಮ್ಮ KSEAB ನೋಂದಣಿ ಸಂಖ್ಯೆಯನ್ನು ಒದಗಿಸಿ; ವಿಷಯ ಸಂಯೋಜನೆ ಅಥವಾ ಸ್ಟ್ರೀಮ್ ಅನ್ನು ಆಯ್ಕೆ ಮಾಡಿ (ವಿಜ್ಞಾನ/ಕಲೆ/ವಾಣಿಜ್ಯ)
-ನಿಮ್ಮ 2ನೇ ಪಿಯುಸಿ ಫಲಿತಾಂಶವನ್ನು ಮುಂದಿನ ಪುಟದಲ್ಲಿ ಪರಿಶೀಲಿಸಿ.

ಇದನ್ನೂ ಓದಿ: CET Result: ದ್ವಿತೀಯ ಪಿಯು 2ನೇ ಪರೀಕ್ಷೆ ಬಳಿಕವೇ ಸಿಇಟಿ ಫಲಿತಾಂಶ; ಮೇ 30 ಅಥವಾ 31ಕ್ಕೆ ಪ್ರಕಟ?

ಸಂಯೋಜನೆವಾರು ಫಲಿತಾಂಶ

ಸಂಯೋಜನೆಹಾಜರಾದವರುಉತ್ತೀರ್ಣರಾದವರುಶೇಕಡವಾರು
ಕಲಾ52,12011,58922.24
ವಾಣಿಜ್ಯ39,4748,70922.06
ವಿಜ್ಞಾನ57,34832,20756.16
ಒಟ್ಟು1,48,94252,50535.25

ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ -1ರಲ್ಲಿ ಕೆಲವರು ಅನುತ್ತೀರ್ಣರಾಗಿದ್ದರೆ, ಮತ್ತೆ ಕೆಲವರಿಗೆ ಅಂಕ ಕಡಿಮೆ ಬಂದಿದೆ ಎಂಬ ಅಸಮಾಧಾನ ಇದ್ದವರಿಗಾಗಿ ಈ ಅವಕಾಶ ಕಲ್ಪಿಸಲಾಗಿತ್ತು. 2024ರ ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಪುನರಾವರ್ತಿತ ಅಭ್ಯರ್ಥಿಗಳು ಹಾಗೂ ಫಲಿತಾಂಶ ಉತ್ತಮಪಡಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದರು. ಫಲಿತಾಂಶ ಉತ್ತಮಪಡಿಸಿಕೊಳ್ಳಲು 32,940 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದರು.

ಉತ್ತರ ಪತ್ರಿಕೆಯ ಸ್ಕ್ಯಾನಿಂಗ್‌ ಪ್ರತಿಗಾಗಿ ಮೇ 21ರಿಂದ 23ರವರೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕಡ್ಡಾಯವಾಗಿ ಸ್ಕ್ಯಾನಿಂಗ್‌ ಪ್ರತಿ ತೆಗೆದುಕೊಂಡವರಿಗೆ ಮಾತ್ರ ಮರುಮೌಲ್ಯಮಾಪನ ಹಾಗೂ ಮರುಎಣಿಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಮೇ 22ರಿಂದ 25ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಸ್ಕ್ಯಾನಿಂಗ್‌ ಪ್ರತಿ ಪಡೆಯಲು ಪ್ರತಿ ವಿಷಯಕ್ಕೆ 530ರೂ .ಶುಲ್ಕ ನಿಗದಿ ಮಾಡಲಾಗಿದೆ. ಮರುಮೌಲ್ಯಮಾಪನದ ಶುಲ್ಕದ ಪ್ರತಿ ವಿಷಯಕ್ಕೆ 1,670 ರೂ. ಇದೆ. ಇನ್ನೂ ಯಾವುದೇ ಅಭ್ಯರ್ಥಿಗಳು ಪರೀಕ್ಷೆ 3ಕ್ಕೆ ಅರ್ಜಿ ಸಲ್ಲಿಸಲು ಮರುಮೌಲ್ಯಮಾಪನ ಫಲಿತಾಂಶಕ್ಕಾಗಿ ಕಾಯಬೇಕಾಗಿಲ್ಲ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version