Site icon Vistara News

Exam Time Table : 5, 8, 9ನೇ ತರಗತಿ ಪಬ್ಲಿಕ್‌ ಪರೀಕ್ಷೆ ವೇಳಾಪಟ್ಟಿ ಪ್ರಕಟ; ಇದರಲ್ಲಿ ನಮಾಜ್‌ ವಿವಾದ ಇಲ್ಲ!

Exam time table

ಬೆಂಗಳೂರು: ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪೂರ್ವಸಿದ್ಧತಾ ಪರೀಕ್ಷೆಯ ಟೈಮ್‌ ಟೇಬಲ್‌ (Exam Time table) ವಿವಾದಕ್ಕೆ ಒಳಗಾಗಿರುವ ನಡುವೆಯೇ ಐದು‌, ಎಂಟು‌ ಮತ್ತು ಒಂಬತ್ತನೇ ತರಗತಿಯ ಪಬ್ಲಿಕ್‌ ಪರೀಕ್ಷೆ ವೇಳಾಪಟ್ಟಿ ಪ್ರಕಟಗೊಂಡಿದೆ. ಇದಕ್ಕೆ ವಿದ್ಯಾರ್ಥಿಗಳ ಸಂಕಲನಾತ್ಮಕ ಮೌಲ್ಯಾಂಕನ (Summative Assessment- SA-2) ಎಂದು ಕರೆಯಲಾಗುತ್ತದೆ. ಎಸ್ಸೆಸ್ಸೆಲ್ಸಿ ಪರೀಕ್ಷಾ ವೇಳಾಪಟ್ಟಿಯಲ್ಲಿ ಶುಕ್ರವಾರ ಒಂದು ದಿನ ಮಧ್ಯಾಹ್ನದ ನಂತರ ಪರೀಕ್ಷೆ ನಡೆಯಲಿದೆ. ಇದು ಮುಸ್ಲಿಮರ ನಮಾಜ್‌ಗೆ (Namaaz muslims) ಅವಕಾಶ ನೀಡಲು ಮಾಡಿದ ತುಷ್ಟೀಕರಣ ಎಂಬ ಆರೋಪ ಕೇಳಿಬಂದಿದೆ. ಆದರೆ, 5, 8, 9ನೇ ತರಗತಿ ಪರೀಕ್ಷೆಯಲ್ಲಿ ಇದಕ್ಕೆ ಯಾವುದಕ್ಕೂ ಅವಕಾಶವಿಲ್ಲ. ಯಾಕೆಂದರೆ ಎಲ್ಲ ಪರೀಕ್ಷೆಗಳು ಮಧ್ಯಾಹ್ನದ ನಂತರವೇ ಪರೀಕ್ಷೆಗಳು ನಡೆಯಲಿವೆ.

ಯಾವಾಗ ನಡೆಯಲಿದೆ ಪರೀಕ್ಷೆ?

2023-24ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ 5, 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಾಂಕನ (Summative Assessment-(SA-2) ಕಾರ್ಯವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯ ಕೆ.ಎಸ್.ಕ್ಯು.ಎ.ಎ.ಸಿ ವತಿಯಿಂದ ನಡೆಸಲಾಗುತ್ತಿದೆ. ಸದರಿ ಮೌಲ್ಯಾಂಕನಕ್ಕೆ ಸಂಬಂಧಿಸಿದಂತೆ – ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯ ವೆಬ್‌ಸೈಟ್‌ನಲ್ಲಿ (https://kseab.karnataka.gov.in/) ದಿನಾಂಕ:05.01.2024ರಂದು ಪ್ರಕಟಿಸಲಾಗಿದೆ.

ರಾಜ್ಯದ ಎಲ್ಲಾ ಜಿಲ್ಲಾ ಉಪನಿರ್ದೇಶಕರು (ಆಡಳಿತ ಮತ್ತು ಅಭಿವೃದ್ಧಿ ಹಾಗೂ ಎಲ್ಲಾ ಬ್ಲಾಕುಗಳ ಕ್ಷೇತ್ರಶಿಕ್ಷಣಾಧಿಕಾರಿಗಳು ಸಂಬಂಧಿಸಿದ ಶಾಲಾ ಮುಖ್ಯ ಶಿಕ್ಷಕರು/ ಪ್ರಾಂಶುಪಾಲರುಗಳಿಗೆ, ಪೋಷಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ತಿಳಿಸಲಾಗಿ‌ದೆ ಎಂದು ಪ್ರಕಟಣೆ ತಿಳಿಸಿದೆ.

ಈ ಎಲ್ಲ ಪರೀಕ್ಷೆಗಳು ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದೆ. ಹೀಗಾಗಿ ನಮಾಜ್‌ಗೆ ಅವಕಾಶ ನೀಡುವ ಪ್ರಶ್ನೆಗಳು ಉದ್ಭವಿಸುವುದಿಲ್ಲ?

ಐದನೇ ತರಗತಿಯ ಪರೀಕ್ಷೆಗಳು ನಡೆಯುವ ವೇಳಾಪಟ್ಟಿ

ಐದನೇ ತರಗತಿ ಪರೀಕ್ಷೆಗಳು ಮಾರ್ಚ್‌ 11ರಿಂದ 14ರವರೆಗೆ ನಡೆಯಲಿವೆ. ಪರೀಕ್ಷೆ 40 ಅಂಕಗಳಲ್ಲಿ ನಡೆಯಲಿದೆ.

ಎಂಟನೇ ತರಗತಿಯ ಪರೀಕ್ಷೆ ವೇಳಾಪಟ್ಟಿ ಹೀಗಿದೆ

ಒಂಬತ್ತನೇ ತರಗತಿ ಪರೀಕ್ಷೆಯ ವೇಳಾಪಟ್ಟಿ ಹೀಗಿದೆ..

ಇದನ್ನೂ ಓದಿ : Pramod Mutalik: ನಮಾಜ್‌ಗಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಮಯ ಬದಲು: ಪ್ರಮೋದ್‌ ಮುತಾಲಿಕ್‌ ಆಕ್ರೋಶ

ಹಾಗಿದ್ದರೆ ಎಸ್ಸೆಸ್ಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆ ಯಾವಾಗ?

26-02-2024 : ಪ್ರಥಮ ಭಾಷೆ- ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು , ಉರ್ದು, ಇಂಗ್ಲಿಷ್, ಇಂಗ್ಲಿಷ್ (NCERT), ಸಂಸ್ಕೃತ
27-02-2024 : ದ್ವಿತೀಯ ಭಾಷೆ -ಇಂಗ್ಲಿಷ್, ಕನ್ನಡ
28 -02-2024 : ತೃತೀಯ ಭಾಷೆ- ಹಿಂದಿ, (NCERT), ಹಿಂದಿ, ಕನ್ನಡ, ಇಂಗ್ಲಿಷ್, ತುಳು, ಕೊಂಕಣಿ, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ
29-02-2024 -ಗಣಿತ
01-03-2024 – ವಿಜ್ಞಾನ
02-03-2024 –ಸಮಾಜವಿಜ್ಞಾನ

ಇದರಲ್ಲಿ ಎಲ್ಲಾ ಪರೀಕ್ಷೆಗಳು ಬೆಳಗ್ಗೆನೇ ನಡೆಯಲಿವೆ. ಶುಕ್ರವಾರ ವಿಜ್ಞಾನ ಪರೀಕ್ಷೆ ಮಾತ್ರ ಮಧ್ಯಾಹ್ನದ ನಂತರ ನಡೆಯಲಿದೆ. ಇದು ಮುಸ್ಲಿಂ ವಿದ್ಯಾರ್ಥಿಗಳಿಗೆ ನಮಾಜ್‌ ಮಾಡಲು ಕಲ್ಪಿಸಿರುವ ಅವಕಾಶ ಎಂದು ಆರೋಪಿಸಲಾಗಿದೆ. ಆದರೆ, ಪರೀಕ್ಷಾ ಮಂಡಳಿ ಮಾತ್ರ ಇದನ್ನು ನಿರಾಕರಿಸಿದೆ. ಆವತ್ತು ಬೆಳಗ್ಗೆ ಪಿಯುಸಿ ಪರೀಕ್ಷೆ ಇರುವುದರಿಂದ ಸಮಯ ಹೊಂದಾಣಿಕೆಗೆ ಈ ವ್ಯವಸ್ಥೆ ಮಾಡಲಾಗಿದೆ ಎಂದು ಅದು ತಿಳಿಸಿದೆ.

Exit mobile version